ಸುಂಟಿಕೊಪ್ಪ ಫೆ.25: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಂಡಿರುವ ಹಿನ್ನಲೆ ಶಿಕ್ಷಕರ ಸಂಘ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗಳು ಭಿತ್ತಿ ಪತ್ರ ಹಿಡಿದು ಬೆಂಬಲ ಸೂಚಿಸಿದರು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿಸೋಮಶೇಖರ್, ತಾಲೂಕು ಪ್ರಾಥಮಿಕ ಶಾಲಾ ಉಪಾಧ್ಯಕ್ಷೆ ಸೌಭಾಗ್ಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಎನ್‍ಪಿಎಸ್ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಭಿತ್ತಿ ಪತ್ರವನ್ನು ಪ್ರದರ್ಶಿಸಿದರು. ಕರ್ನಾಟಕ ರಾಜ್ಯದ ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಾದ ವೇತನ ಭತ್ಯೆಗಳ ಪರಿಷ್ಕರಣೆ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿದರು.
ಲೇಖಕ: admin
ಮಡಿಕೇರಿ ಫೆ.25 : ದೇಶಪ್ರೇಮ ಎಂಬುದು ಪ್ರತೀಯೋವ೯ ಭಾರತೀಯನ ಮನಸ್ಸಿನಲ್ಲಿಯೂ ಹಾಸುಹೊಕ್ಕಾಗಬೇಕು. ಭಾರತ ದೇಶದ ಹಿರಿಮೆಯನ್ನು ಪ್ರತೀಯೋವ೯ರೂ ಗೌರವಿಸುವಂತಾಗಬೇಕು ಎಂದು ರೋಟರಿ ಜಿಲ್ಲೆ 3181 ನ ಗವನ೯ರ್ ಪ್ರಕಾಶ್ ಕಾರಂತ್ ಹೇಳಿದ್ದಾರೆ. ಮಡಿಕೇರಿಯ ಜನರಲ್ ತಿಮ್ಮಯ್ಯ ಮ್ಯೂಸಿಯಂನಲ್ಲಿರುವ ಅಮರ್ ಜವಾನ್ ಸ್ಮಾರಕದಲ್ಲಿ ಆಯೋಜಿತ ದೇಶಪ್ರೇಮ ಕುರಿತ ರೋಟರಿ ಜಿಲ್ಲಾ ಕಾಯ೯ಕ್ರಮದಲ್ಲಿ ನಿವೃತ್ತ ಸೇನಾಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿದ ಪ್ರಕಾಶ್ ಕಾರಂತ್, ಯುವಪೀಳಿಗೆಯಲ್ಲಿ ದೇಶಪ್ರೇಮ ಮೂಡಿಸುವಂತ ಕಾಯ೯ಕ್ರಮಗಳು ಹೆಚ್ಚು ಹೆಚ್ಚು ಆಯೋಜಿತವಾಗಬೇಕು. ಭಾರತದ ಅಪ್ರತಿಮ ಸೇನಾಧಿಕಾರಿಗಳನ್ನು ಯುವಪೀಳಿಗೆಗೆ ಪರಿಚಯಿಸುವ ಯೋಜನೆಗಳು ನಡೆಯಬೇಕು ಎಂದರಲ್ಲದೇ, ಈ ನಿಟ್ಟಿನಲ್ಲಿ ರೋಟರಿ ಜಿಲ್ಲೆ 3181 ಮಂಗಳೂರಿನಿಂದ ಮೈಸೂರಿನವರೆಗೆ ದೇಶಪ್ರೇಮ ಬಿಂಬಿಸುವ ಸಂದೇಶ ಸಾರುವ ವಾಹನ ಜಾಥಾ ಆಯೋಜಿಸಿದ್ದು, 30 ರೋಟರಿ ಸದಸ್ಯರು ಪಾಲ್ಗೊಂಡಿದ್ದಾರೆ ಎಂದರು. ಭಾರತದ ಅಪ್ರತಿಮ ಸೇನಾ ನಾಯಕ ಜನರಲ್ ತಿಮ್ಮಯ್ಯ ನೆನಪುಗಳನ್ನು ಹೊಂದಿರುವ ಭವನವಾದ ತಿಮ್ಮಯ್ಯ ಮ್ಯೂಸಿಯಂಗೆ ರೋಟರಿ ಸದಸ್ಯರ ಭೇಟಿ ಸಾಥ೯ಕತೆ ಮೂಡಿಸಿದೆ. ಪ್ರತೀಯೋವ೯ ದೇಶಪ್ರೇಮಿಯೂ ಈ ಸ್ಮಾರಕ ಭವನಕ್ಕೆ ಭೇಟಿ ನೀಡಿದಾಗ ಖಂಡಿತಾ…
ಚೆಟ್ಟಳ್ಳಿ ಫೆ.25 : ಚೆಟ್ಟಳ್ಳಿ ಶ್ರೀ ಅಯ್ಯಪ್ಪ ದೇವಾಲಯದಲ್ಲಿ ಫೆ.28 ರಂದು 48ನೇ ದಿನದ ಮಂಡಳ ಪೂಜೆ ಜರುಗಲಿದೆ ಎಂದು ದೇವಾಲಯ ಸಮಿತಿ ತಿಳಿಸಿದೆ. ಬೆಳಿಗ್ಗೆ 7 ಗಂಟೆ ಯಿಂದ ಗಣಪತಿ ಹೋಮ, ನವಕಕಲಶ ಪೂಜೆ, ಸಂಜೆ 7.30ಕ್ಕೆ ದೀಪರಾಧನೆ, ಮಹಾಪೂಜೆ, ಮಂಗಳಾರತಿ ನಂತರ ಅನ್ನಸಂತರ್ಪಣೆ ನಡೆಯಲಿದೆ.
ನಾಪೋಕ್ಲು ಫೆ.25 : ನಾಪೋಕ್ಲು ಗ್ರಾ.ಪಂ ಗೆ ಒಳಪಟ್ಟ ಕೋಟೇರಿ-ಬೊಮ್ಮಂಜಿಕೇರಿ ಗ್ರಾಮಕ್ಕೆ ರೂ.12.70 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಈಗಾಗಲೇ ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ರಸ್ತೆಗಳ ಅಭಿವೃದ್ಧಿಗೆ ವಿವಿಧ ಯೋಜನೆ ಅಡಿಯಲ್ಲಿ ಸುಮಾರು 1.30 ಕೋಟಿ ರೂ ಗಳು ಬಿಡುಗಡೆಯಾಗಿದೆ. ಇದರಲ್ಲಿ ಕೆಲವು ರಸ್ತೆಗಳ ಕಾಮಗಾರಿ ನಡೆಯುತ್ತಿದ್ದು, ಬಾಕಿ ಉಳಿದಿರುವ ರಸ್ತೆಗಳ ಕಾಮಗಾರಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಬೋಪಯ್ಯ ತಿಳಿಸಿದರು. ಈ ಸಂದರ್ಭ ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಬಿಜೆಪಿ ಮಡಿಕೇರಿ ತಾಲೂಕು ಪ್ರಧಾನ ಕಾರ್ಯದರ್ಶಿ ಕೋಡಿರ ಪ್ರಸನ್ನ, ತಾಲ್ಲೂಕು ಕಾರ್ಯದರ್ಶಿ ಪಾಡಿಯಮ್ಮಂಡ ಮನು ಮಹೇಶ್, ತಾಲೂಕು ಕೃಷಿ ಮೋರ್ಚಾದ ಅಧ್ಯಕ್ಷ ಶಿವಚಾಳಿಯಂಡ ಜಗದೀಶ್, ಗ್ರಾ.ಪಂ ಸದಸ್ಯೆ ಕೋಟೆರ ನೀಲಮ್ಮ, ಪ್ರಮುಖರಾದ ಅಪ್ಪಾರಂಡ ಅಪ್ಪಯ್ಯ, ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಬಿದ್ದಾಟಂಡ ಜಿನ್ನು ನಾಣಯ್ಯ,…
ವಿರಾಜಪೇಟೆ ಫೆ.25 : ವಿರಾಜಪೇಟೆ ತಾಲೂಕಿನ ಬೇಟೋಳಿ ಗ್ರಾಮದ ರಾಮನಗರದ ಬಿ.ಬಿ. ರಾಮಕೃಷ್ಣ ಬೋರ್ಕರ್ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 22ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಮಕೃಷ್ಣ ಬೋರ್ಕರ್ ಪ್ರಸ್ತುತ ಪೊನ್ನಂಪೇಟೆಯ ಸಿಐಟಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರು ಹಾಗೂ ಕಾಲೇಜಿನ ನ್ಯಾಕ್ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಬೇಟೋಳಿ ಶ್ರೀ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೇಟೋಳಿಯ ಬಿ.ವಿ. ಭವಾನಿ ಶಂಕರ್ ಬೋರ್ಕರ್ ಅವರ ಪುತ್ರರಾಗಿದ್ದಾರೆ.
ವಿರಾಜಪೇಟೆ ಫೆ.25 : ವಿಶೇಷ ಅನುದಾನದ ರೂ.1 ಕೋಟಿ ಪ್ಯಾಕೇಜ್‍ನಡಿಯಲ್ಲಿ ವಿರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾ.ಪಂ ವ್ಯಾಪ್ತಿಯ ಕಾವಾಡಿ ಗ್ರಾಮದ ಕಾವಾಡಿಚಂಡ ಐನ್‍ಮನೆ ರಸ್ತೆ ಮತ್ತು ಕಾವಾಡಿ ಭಗವತಿ ದೇವಸ್ಥಾನದ ಕಾವಾಡಿಚಂಡ ಕುಟುಂಬದ ರಸ್ತೆ ಅಭಿವೃದ್ಧಿಗೆ ವಿಧಾನ ಪರಿಷತ್ತಿನ ಸದಸ್ಯರ ವಿಶೇಷ ಅನುದಾನ ರೂ.5ಲಕ್ಷ ವೆಚ್ಚದ ಕಾಮಗಾರಿಗೆ ಎಂಎಲ್‍ಸಿ ಮಂಡೇಪಂಡ ಸುಜಾ ಕುಶಾಲಪ್ಪ ಭೂಮಿ ನೆರವೇರಿಸಿದರು. ನಂತರ ಮಾತನಾಡಿದ ಅವರು ಕೆಲವೆ ದಿನಗಳಲ್ಲಿ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುವುದು. ರಸ್ತೆ ಕಾಮಗಾರಿಗಳು ನಡೆಯುವ ಸಂದರ್ಭ ಸ್ಥಳಿಯರು ಸಹಕಾರ ನೀಡಬೇಕು. ಮೂಲಭೂತ ಸೌಲಭ್ಯಗಳನ್ನು ಸರಕಾರದಿಂದ ಒದಗಿಸಿ ಕೊಡಲಾಗುತ್ತದೆ. ಹಾಗೆಯೇ ರಾಜ್ಯ ಸರಕಾರ ಕೊಡಗಿನ ಅಭಿವೃದ್ಧಿ ದೃಷ್ಟಿಯಿಂದ ಬಹಳಷ್ಟು ಅನುದಾನಗಳನ್ನು ಒದಗಿಸಿಕೊಟ್ಟು ಸಹಕರಿಸಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವುದಾಗಿ ತಿಳಿಸಿದರು. ಬಿಜೆಪಿ ಪ್ರಮುಖರಾದ ಮಾಚಿಮಂಡ ಸುವಿನ್ ಗಣಪತಿ ಮಾತನಾಡಿ, ಗ್ರಾಮೀಣ ಭಾಗದ ರಸ್ತೆಗಳಿಗೆ ವಿಧಾನ ಪರಿಷತ್ತಿನ ಸದಸ್ಯರಾದ ಸುಜಾ ಕುಶಾಲಪ್ಪ ಅವರು ತಮ್ಮ ಜನಪರ ಕಾಳಜಿಯಿಂದ ವಿಶೇಷ ಮುತುವರ್ಜಿ ವಹಿಸಿ…
ಮೂರ್ನಾಡು ಫೆ.25 : ಮೂರ್ನಾಡು ಹೋಬಳಿ ಬಂಟರ ಸಂಘದ ವತಿಯಿಂದ ಎರಡು ದಿನ ಕಾಲ ಹಮ್ಮಿಕೊಂಡಿರುವ ‘ಸ್ವಜಾತಿ ಬಂಧುಲೆನ ಸಮ್ಮಿಲನ-2023’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮೂರ್ನಾಡು ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಬಂಟರ ಸಂಘದ ಗೌರವಾಧ್ಯಕ್ಷ ಬಿ.ಬಿ. ಐತಪ್ಪ ರೈ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸಮುದಾಯದ ಎಲ್ಲರು ಒಟ್ಟು ಸೇರಲು ಮೂರ್ನಾಡು ಹೋಬಳಿ ಘಟಕ ವೇದಿಕೆ ಒದಗಿಸಿರುವುದು ಖುಷಿಯ ವಿಚಾರ ಎಂದರು. ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ರವೀಂದ್ರ ರೈ ಮಾತನಾಡಿ, ಮೂರ್ನಾಡು ಹೋಬಳಿ ಘಟಕ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಜಿಲ್ಲೆಯ ಎಲ್ಲಾ ಹೋಬಳಿಯೂ ಈ ರೀತಿ ಚಟುವಟಿಕೆಯಿಂದ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಆಗಬೇಕು ಎಂದು ಆಶಯ ವ್ಯಕ್ತಪಡಿಸಿದರು. ಮಡಿಕೇರಿ ತಾಲೂಕು ಘಟಕ ಅಧ್ಯಕ್ಷ ರಮೇಶ್ ರೈ ಮಾತನಾಡಿ, ಜಿಲ್ಲೆಯಲ್ಲಿ ಬಂಟರ ಸಂಘಟನೆ ಆರಂಭವಾದಾಗ ಜನ ಕಡಿಮೆ ಸಂಖ್ಯೆಯಲ್ಲಿ ಸೇರುತ್ತಿದ್ದರು. ಮೂರ್ನಾಡು ಹೋಬಳಿ ಘಟಕದವರು ಬಂಟರ ಸಂಘಟನೆಯನ್ನು ಜೀವಂತವಾಗಿರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮೂರ್ನಾಡು ಹೋಬಳಿ ಘಟಕ ಅಧ್ಯಕ್ಷ…
ಮಡಿಕೇರಿ ಫೆ.25 : ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಕೊಡಗನ್ನು ಕಡೆಗಣಿಸಲಾಗಿದ್ದು, ಜಿಲ್ಲೆಯ ಜ್ವಲಂತ ಸಮಸ್ಯೆಗಳು ಬಗೆಹರಿಯದೆ ಉಳಿದುಕೊಂಡಿದೆ ಎಂದು ಆರೋಪಿಸಿ ಭಾರತ ಕಮ್ಯುನಿಸ್ಟ್ ಪಕ್ಷ ಕೊಡಗು ಜಿಲ್ಲಾ ಘಟಕದಿಂದ ಮಡಿಕೇರಿಯಲ್ಲಿ ಜನಾಂದೋಲಕ್ಕೆ ಚಾಲನೆ ನೀಡಲಾಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು, ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಪಕ್ಷದ ರಾಜ್ಯ ಸಮಿತಿ ಸದಸ್ಯ ಗುರುಶಾಂತ್ ಮಾತನಾಡಿ, ಜಿಲ್ಲೆಯ ವಿವಿಧೆಡೆ ಸಂಚರಿಸಿ ಸಭೆ ನಡೆಸುವ ಜೊತೆಗೆ ಮನೆ ಮನೆಗೆ ತೆರಳಿ ಬಿಜೆಪಿ ಸರ್ಕಾರ ವೈಫಲ್ಯಗಳ ಕುರಿತು ಜನರಿಗೆ ಅರಿವು ಮೂಡಿಸುವುದಾಗಿ ತಿಳಿಸಿದರು. ಬಜೆಟ್‍ನಲ್ಲಿ ಕೊಡಗಿಗೆ ಪ್ರತ್ಯೇಕ ಯೋಜನೆಗಳನ್ನು ಘೋಷಿಸಿಲ್ಲ. ಕಾರ್ಮಿಕರು, ರೈತರ ನಿರೀಕ್ಷೆಗಳೆಲ್ಲಾ ಹುಸಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಉದ್ಯೋಗ ಸೃಷ್ಠಿ, ಸಾಲ ಮನ್ನಾ ಸೇರಿದಂತೆ ಜನರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು, ಕೊಡಗಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು, ಸಂರಚನಾ ಯೋಜನೆಗಳಲ್ಲಿ…
ಮಡಿಕೇರಿ ಫೆ.25 : ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿ ವತಿಯಿಂದ ಫೆ.26 ರಂದು ಜಿಲ್ಲಾಮಟ್ಟದ ವಕ್ಫ್ ಸಮ್ಮಿಟ್ ಕಾರ್ಯಾಗಾರ ನಡೆಯಲಿದೆ. ನಗರದ ಕೆಎಸ್‍ಆರ್‍ಟಿಸಿ ಬಸ್‍ನಿಲ್ದಾಣದ ಹಿಂಭಾಗದ ಹೊಟೇಲ್ ದೋಹಕಿಂಗ್ ಸಭಾಂಗಣದಲ್ಲಿ ಅಪರಾಹ್ನ 2.30 ಗಂಟೆಗೆ ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಪಿ.ಎಂ.ಹಕೀಂ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಾಗಾರದಲ್ಲಿ ಜಿಲ್ಲೆಯ ನೋಂದಾಯಿತ ವಕ್ಫ್ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಧರ್ಮ ಗುರುಗಳಿಗೆ ವಕ್ಫ್ ಕಾಯ್ದೆ ಮತ್ತು ವಕ್ಫ್ ಸಂಸ್ಥೆಯಿಂದ ಲಭಿಸುವ ಯೋಜನೆಗಳ ಕುರಿತು ಮಾಹಿತಿ ನೀಡಲಾಗುವುದು. ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ತು ಸದಸ್ಯ ಎಂ.ಪಿ.ಸುಜಾಕುಶಾಲಪ್ಪ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಸಹಾಯಕ ಖಾಝಿಗಳಾದ ಅಬ್ದುಲ್ಲಾ ಫೈಝಿ ಎಡಪಾಲ ಹಾಗೂ ಶಾದುಲಿ ಫೈಝಿ ಕೊಂಡಂಗೇರಿ ಪ್ರಾರ್ಥನೆ ಹಾಗೂ…
ರಂಗೋಲಿ ಹಾಕುವುದು ಒಂದು ಕಲೆ ಮತ್ತು ಇದನ್ನು ಹವ್ಯಾಸವಾಗಿಯೂ ರೂಪಿಸಿಕೊಂಡವರಿದ್ದಾರೆ. ರಂಗೋಲಿಯನ್ನು ಹಾಕುವಾಗ ಮನಸ್ಸಿನಲ್ಲಿ ಧನಾತ್ಮಕ ಭಾವನೆ ಮೂಡುತ್ತದೆ. ಮತ್ತು ಇದು ನಮ್ಮ ಒತ್ತಡವನ್ನು ಕಡಿಮೆಯಾಗಿಸುತ್ತದೆ. ರಂಗೋಲಿ ಹಾಕುವಾಗ, ಬೆರಳು ಮತ್ತು ಹೆಬ್ಬೆರಳು ಒಟ್ಟಾಗಿ ಜ್ಞಾನಮುದ್ರೆಯನ್ನು ರೂಪಿಸುತ್ತದೆ, ಇದು ಮೆದುಳನ್ನು ಶಕ್ತಿಯುತವಾಗಿಸುವಲ್ಲಿ, ಸಕ್ರಿಯಗೊಳಿಸುವಲ್ಲಿ ಮತ್ತು ಬೌದ್ಧಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಧನಾತ್ಮಕ ಶಕ್ತಿಯ ಸಂಕೇತ: ವಿವಿಧ ಬಣ್ಣಗಳು ಮತ್ತು ಹೂವುಗಳಿಂದ ಮಾಡಿದ ರಂಗೋಲಿಯು ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಧನಾತ್ಮಕ ಶಕ್ತಿಯನ್ನು ತುಂಬುತ್ತದೆ, ಇದು ಮನಸ್ಸನ್ನು ಸಂತೋಷಪಡಿಸುತ್ತದೆ ಮತ್ತು ವಾತಾವರಣವು ತುಂಬಾ ಧನಾತ್ಮಕವಾಗಿರುತ್ತದೆ. ಇದು ನಿಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಸಿರಿ, ಸಮೃದ್ಧಿಯ ಸಂಕೇತ: ಭಾರತದಲ್ಲಿ ರಂಗೋಲಿಯನ್ನು ವಿಶೇಷವಾಗಿ ಹೋಳಿ, ದೀಪಾವಳಿ, ನವದುರ್ಗಾ ಹಬ್ಬ, ಮಹಾಶಿವರಾತ್ರಿ ಹಾಗೂ ಇನ್ನಿತರ ಹಬ್ಬದ ದಿನದಂದು ಹಾಕಲಾಗುತ್ತದೆ. ರಂಗೋಲಿಯನ್ನು ಸಿರಿ ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿಯ ಆಗಮನದ ಸಂಕೇತ: ಪ್ರತಿದಿನ ಮನೆಯ ಮುಂದೆ ಬಣ್ಣ ಬಣ್ಣದ ಸುಂದರವಾದ ರಂಗೋಲಿಯನ್ನು ಹಾಕುವುದರಿಂದ…






