ಲೇಖಕ: admin

ಮಡಿಕೇರಿ ಮಾ.31 :  ಭವಿಷ್ಯದಲ್ಲಿ ಕೊಡಗು ಜಿಲ್ಲೆಯ ಫುಟ್ಬಾಲ್ ಆಟಗಾರರು ಕರ್ನಾಟಕ ಹಾಗೂ ಭಾರತ ಫುಟ್ಬಾಲ್ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು  ಕಿಕ್ಕ್ ಸ್ಟಾರ್ಟ್ ಫುಟ್ಬಾಲ್ ಕ್ಲಬ್ ಸಂಸ್ಥಾಪಕ ಹಾಗೂ ಸಿ.ಇ.ಓ ಲಕ್ಷ್ಮಣ್ ಭಟ್ರೈ ಅಭಿಪ್ರಾಯಪಟ್ಟರು. ಅಮ್ಮತ್ತಿಯ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು‌ ಜಿಲ್ಲೆಯಲ್ಲಿ ಫುಟ್ಬಾಲ್ ವೇಗವಾಗಿ ಬೆಳೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಜಿಲ್ಲೆಯ ಯುವ ಫುಟ್ಬಾಲ್ ಆಟಗಾರರಿಗೆ ಸೂಕ್ತ ಮಾರ್ಗದರ್ಶನ ಹಾಗೂ ತರಬೇತಿ ನೀಡುವ ಅವಶ್ಯಕತೆ ಇದ್ದು, ಆ ನಿಟ್ಟಿನಲ್ಲಿ ಕಿಕ್ಕ್ ಸ್ಟಾರ್ಟ್ ಫುಟ್ಬಾಲ್ ಕ್ಲಬ್ ಇದೇ ಮೊದಲ ಬಾರಿಗೆ ಆಯ್ಕೆ ಶಿಬಿರ  ನಡೆಸಿದ್ದು, ನಿರೀಕ್ಷೆಗೂ ಮೀರಿ ಯುವ ಆಟಗಾರರು ಭಾಗವಹಿಸಿದ್ದಾರೆ ಎಂದರು. ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಜಿಲ್ಲೆಯ ಫುಟ್ಬಾಲ್ ಬೆಳವಣಿಗೆಗೆ ಸತತವಾದ ಪ್ರಯತ್ನ ನಡೆಸುತ್ತಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದು ಲಕ್ಷ್ಮಣ್ ಭಟ್ರೈ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಮಹಾಪೋಷಕ ಮೋಹನ್ ಅಯ್ಯಪ್ಪ ಮಾತನಾಡಿ, ಕೊಡಗು‌ ಜಿಲ್ಲೆಯಲ್ಲಿ ಫುಟ್ಬಾಲ್ ಬೆಳವಣಿಗೆಗೆ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ವಿಶೇಷ…

Read More

ನಾಪೋಕ್ಲು ಮಾ.31 : ರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಶ್ರೀ ರಾಮ ಬಳಗದ ವತಿಯಿಂದ ನಾಪೋಕ್ಲುವಿನ ರಾಮಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು. ಸುಳ್ಯದ ಭಜನಾ ತಂಡದವರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಕಳೆದ 45 ವರ್ಷಗಳಿಂದ ರಾಮ ಬಳಗದ ಸದಸ್ಯರು, ಸ್ಥಳೀಯರು ಸೇರಿ ರಾಮನವಮಿಯನ್ನು ವೈಶಿಷ್ಟ್ಯಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಗಣಪತಿ ಆರಾಧನೆಯ ಬಳಿಕ ಮಧ್ಯಾಹ್ನ ಸತ್ಯನಾರಾಯಣ ಪೂಜೆ, ಭಜನಾ ಕಾರ್ಯಕ್ರಮ ನಂತರ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ಅರ್ಚಕ ರವಿ ಉಡುಪ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಅಧಿಕ ಸಂಖ್ಯೆಯ ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮೂರ್ನಾಡು ವಿವೇಕ ಜಾಗೃತ ಬಳಗದಿಂದ ಪುಸ್ತಕ ಮಾರಾಟ ವ್ಯವಸ್ಥೆ ಮಾಡಲಾಗಿತ್ತು. ವರದಿ : ದುಗ್ಗಳ ಸದಾನಂದ 

Read More

ನಾಪೋಕ್ಲು ಮಾ.31 : ಬಲ್ಲಮಾವಟಿ ಗ್ರಾಮದ ಶ್ರೀ ಭಗವತಿ ದೇವಾಲಯದ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಅಂದಿಬೆಳಕು, ಪಟ್ಟಣಿ, ದೇವಿಜಳಕ ನಾಗಪೂಜೆ, ಶುದ್ದಕಲಶ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳು ಜರುಗಿತು. ಉತ್ಸವದ ಅಂಗವಾಗಿ ಗ್ರಾಮದ ಮಾದೇಯಂಡ ಚೋಂದಕ್ಕಿ ಭೀಮಯ್ಯ ಮತ್ತು ಮಕ್ಕಳಿಂದ ಅನ್ನಸಂತರ್ಪಣೆ ನೆರವೇರಿತು. ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ನೆರವಂಡ ಸಿ.ಭೀಮಯ್ಯ, ತಕ್ಕಮುಖ್ಯಸ್ಥರು ಹಾಗೂ ಆಡಳಿತಮಂಡಳಿ ಸದಸ್ಯರು ಪಾಲ್ಗೊಂಡಿದ್ದ. ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ   

Read More

ಮಡಿಕೇರಿ ಮಾ.31 : ಹಾಲೇರಿ ನಾಡಿನ ಕಡಂದಾಳು, ಕಾಂಡನಕೊಲ್ಲಿ, ಕೊಪ್ಪತ್ತೂರು, ಹಾಲೇರಿ ಹಾಗೂ ಹೆಮ್ಮತ್ತಾಳು ಗ್ರಾಮಸ್ಥರು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುವ ಹಾಲೇರಿ ಶ್ರೀ ಭದ್ರಕಾಳೇಶ್ವರಿ ದೇವಿಯ ಉತ್ಸವು ಅಂಗವಾಗಿ ಏ.1 ರಿಂದ ಇರ್‌ಬೊಳಕ್ ಕೊಂಬಾಟ್ ನಡೆಯಲಿದೆ. ಏ.1 ರಂದು ಮಧ್ಯಾಹ್ನ 2.30 ಗಂಟೆಗೆ ಕಾಳೆ ಓಡಿಸುವುದು, ಏ.2 ರಂದು ಹಾಲೇರಿ ಶ್ರೀ ಭದ್ರಕಾಳೇಶ್ವರಿ ದೇವಿಯ ದೊಡ್ಡ ಹಬ್ಬ ನಡೆಯಲಿದ್ದು, ಬೆಳಿಗ್ಗೆ 10 ಗಂಟೆಗೆ ಆಂಗೋಲದೊಂದಿಗೆ ನಾಡುಹತ್ತುವುದರಿಂದ ಪ್ರಾರಂಭಗೊಂಡು ಬೆಳಿಗ್ಗೆ 11.30ಕ್ಕೆ ಕೊಂಬಾಟ್, ಎತ್ತಾಟ್, ಬಿಲ್ಲಾಟ್ ಕುಣಿತಗಳು ಜರುಗಲಿದೆ. ನಂತರ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 1.30 ಗಂಟೆಗೆ ಭಂಡಾರ ಹಾಕುವುದು, ನಂತರ ಬೊಳಕಾಟ್ ದೇವರು ಹೊರಗೆ ಬರುವುದು, ಬಾಳೆಸೊರೆ ಎಸೆಯುವುದು, ಕಾಯಿಗೆ ಗುಂಡು ಹೊಡೆಯುವುದು, ಕಾಳೆ ಸುತ್ತು ಬರಲಿದೆ. ಏ.3 ರಂದು ಮಧ್ಯಾಹ್ನ 2 ಗಂಟೆಗೆ ಪ್ರಾರಂಭಗೊಂಡು ಮೂರು ತರಹದ ಕುಣಿತ ನೆರವೇರಲಿದೆ. ನಂತರ ಭಂಡಾರ ಹಾಕುವುದು, ಬಾಳೆಸೂರೆ, ಕೊಂಬು ಒಪ್ಪಿಸುವುದು ಇತ್ಯಾದಿ ಕಾರ್ಯಕ್ರಮಗಳು ಜರುಗಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ…

Read More

ಮಡಿಕೇರಿ ಮಾ.31 : ಕೊಡಗಿನ ಪುರಾತನ ದೇವಾಲಯಗಳಲ್ಲೊಂದಾದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ 14 ದೇವಾನು ದೇವತೆಗಳ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರೆಯು ಏ.5 ರಿಂದ ಏ.8ರ ವರೆಗೆ ನಡೆಯಲಿದೆ. ದೇವಾಲಯದ ತಂತ್ರಿಗಳಾದ ಕೇರಳದ ಪಯ್ಯನ್ನೂರಿನ ಬ್ರಹ್ಮಶ್ರೀ ಕುನ್ನತ್ತಿಲ್ಲತ್ತ್ ಮುರಳಿಕೃಷ್ಣನ್ ನಂಬೂದರಿ ಹಾಗೂ ಪರಿಶಿನಿಕಡವು ಶ್ರೀ ಮುತ್ತಪ್ಪ ಕ್ಷೇತ್ರದ ಆಚಾರಪಟ್ಟ ಮಡೆಯಚ್ಚನ್ ಬ್ಲಾತೂರ್ ಚಂದ್ರನ್ ಮಡೆಯಚ್ಚನ್ ನಾಲ್ಕುದಿನಗಳ ಕಾಲ ವಿವಿಧ ಪೂಜಾ ವಿಧಿವಿಧಾನಗಳು ಜರುಗಲಿದೆ. ಏ.5 ರಂದು ಸಂಜೆ 6.30 ರಿಂದ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಕಲಶ ಪೂಜೆ, ವಾಸ್ತು ಪೂಜೆ, ವಾಸ್ತು ಕಲಶಾಭಿಷೇಕ, ವಾಸ್ತು ಬಲಿ, ವಾಸ್ತು ಪುಣ್ಯಾಹ, ಮಹಾ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಏ.6 ರಂದು ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಹೋಮ, 9 ಗಂಟೆಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಅಷ್ಟಾಭಿಷೇಕ, 10 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಗೆ ತುಪ್ಪಾಭಿಷೇಕ, 11…

Read More

ಮಡಿಕೇರಿ ಮಾ.31 : ಅಂತರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್) ವತಿಯಿಂದ ರಾಮನವಮಿ ಪ್ರಯುಕ್ತ ಶ್ರೀ ರಾಮಚಂದ್ರ ವಿಜಯೋತ್ಸವ ರಥಯಾತ್ರೆ ಶ್ರದ್ಧಾಭಕ್ತಿಯಿಂದ ನಡೆಯಿತು. ಉತ್ಸವ ಮೂರ್ತಿಗಳನ್ನು ಭವ್ಯ ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಬಳಿಕ ರಥಯಾತ್ರೆ ಆರಂಭವಾಯಿತು. ಸಂಕೀರ್ತನೆಯೊಂದಿಗೆ ರಾಮಕೃಷ್ಣನನ್ನು ಜಪಿಸುತ್ತಾ ಭಕ್ತರು ರಥವನ್ನು ಎಳೆದರು. ಇಸ್ಕಾನ್ ಮಂದಿರದ ಬಳಿಯಿಂದ ಆರಂಭವಾದ ರಥಯಾತ್ರೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ದಾರಿಯುದ್ದಕ್ಕೂ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು. ರಥಯಾತ್ರೆಯ ನಂತರ ನಗರದ ಗಾಂಧಿ ಮೈದಾನದಲ್ಲಿ ರಾತ್ರಿ ಶ್ರೀ ರಾಮಚಂದ್ರ ಕಥೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Read More

ಸುಂಟಿಕೊಪ್ಪ, ಮಾ.30: ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಕೋದಂಡ ರಾಮ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ರಾಮನವಮಿಯನ್ನು ಆಚರಿಸಲಾಯಿತು. ಕೊದಂಡ ರಾಮ ಮಂದಿರದಲ್ಲಿ ಬೆಳಿಗ್ಗೆ ರಾಮ, ಸೀತೆ, ಲಕ್ಷ್ಮಣ, ಆಂಜನೇಯ ಸ್ವಾಮಿಗೆ ಬೆಳ್ಳಿಯ ಕವಚವನ್ನು ಅಳವಡಿಸಿ ವಿವಿಧ ರೀತಿಯ ಹೂವುಗಳಿಂದ ಅಲಂಕರಿಸಿ ಪೂಜಾ ಕೈಂಕಾರ್ಯವನ್ನು ದೇವಾಲಯದ ಮುಖ್ಯ ಅರ್ಚಕ ದರ್ಶನ್ ಭಾರಿತ್ತಾಯ ಅವರ ನೇತೃತ್ವದಲ್ಲಿ ನೆರವೇರಿಸಿದರು. ನಂತರ ರಾಮನಿಗೆ ಪಂಚಾಮೃತ ಅಭಿಷೇಕ, ರಾಮತಾರಕ ಹೋಮ ನಡೆದು ಮದ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿತರಿಸಲಾಯಿತು. ನಂತರ ನೆರೆದಿದ್ದ ಭಕ್ತರಿಗೆ ಪಾನಕ, ಕೋಸಂಬರಿ, ಪಾಯಸ ವಿತರಿಸಲಾಯಿತು. ದಿನದ ಪೂಜಾ ವಿಧಿ ವಿಧಾನಗಳನ್ನು ಅರ್ಚಕರುಗಳಾದ ಹರಿಪ್ರಸಾದ್ ಕೆದ್ಲಾಯ, ಗಣೇಶ್ ಉಪಾಧ್ಯಯ, ಮಂಜುನಾಥ್ ಭಟ್, ಮನೋಜ್ ಭಟ್, ನಿಖಿಲ್ ಭಟ್ ನೆರವೇರಿಸಿದರು. ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ರಮೇಶ್ ಪಿಳ್ಳೆ, ಉಪಾಧ್ಯಕ್ಷ ಈಶ್ವರ, ಗೌರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಘ್ನೇಶ್, ಪ್ರಧಾನ ಕಾರ್ಯದರ್ಶಿ ವಾಸುದೇವ್, ಗೌರಿ ಗಣೇಶೋತ್ಸವ ಸಮಿತಿ ನಿಕಟ ಪೂರ್ವ…

Read More

ಸೋಮವಾರಪೇಟೆ ಮಾ.30 : ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮದ್ಯವ್ಯಸನಿ ಪುಂಡರ ಹಾವಳಿ ಮಿತಿಮೀರಿದ್ದು, ಪೊಲೀಸರು ತಕ್ಷಣ ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಜೂನಿಯರ್ ಕಾಲೇಜು ಆವರಣದಲ್ಲಿ ಸಿಂಥೆಟಿಕ್ ಟರ್ಫ್ ಮೈದಾನ, ಪ್ರಾಥಮಿಕ ಶಾಲಾ ಮೈದಾನ, ವಿಶಾಲವಾದ ಕಾಲೇಜು ಇದೆ. ರಾತ್ರಿಯಾಗುತ್ತಿದ್ದಂತೆ ಈ ಪ್ರದೇಶ ಪುಂಡರ ಗಾಂಜಾ ಮತ್ತು ಮದ್ಯ ವ್ಯಸನದÀ ಆವಾಸ ಸ್ಥಾನವಾಗುತ್ತಿದೆ, ಯಾವುದಕ್ಕೂ ಭದ್ರತೆ ಇಲ್ಲದಾಗಿದೆ. ಜೂನಿಯರ್ ಕಾಲೇಜು ಸುತ್ತಮುತ್ತ ಗಾಂಜಾ ವ್ಯಸನಿಗಳ ಹಾವಳಿ ಜಾಸ್ತಿಯಾಗಿದೆ. ಮುಗ್ಧ ಯುವಕರು ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ ಕೂಡಲೇ ಪೊಲೀಸರು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಈ ಹಿಂದೆ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರು ಆಗ್ರಹಿಸಿದ್ದರು. ಆ ವ್ಯಾಪ್ತಿಯ ವಾರ್ಡ್ ಸದಸ್ಯೆ ಶೀಲಾ ಡಿಸೋಜ ಅವರು ಕೂಡ, ಗಾಂಜಾ ಮಾರಾಟದ ಬಗ್ಗೆ ಪೊಲೀಸರ ಗಮನಕ್ಕೆ ತಂದಿದ್ದರು. ಪ್ರಾರಂಭದಲ್ಲಿ ಪೊಲೀಸರ ರೌಂಡ್ಸ್ ಇರುತ್ತಿತ್ತು. ಈಗ ಪುಂಡರು ರಾತ್ರಿ ಕಾಲೇಜು ಆವರಣದಲ್ಲೇ ಮದ್ಯ ಸೇವನೆ ಮಾಡಿ, ಬಾಟಲ್‌ಗಳನ್ನು ಅಲ್ಲಿಯೇ ಎಸೆದು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆೆ.…

Read More

ಮಡಿಕೇರಿ ಮಾ.30 : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತಿದ್ದ ಮೂವರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಕುಶಾಲನಗರ ನಿವಾಸಿ ಅಕ್ಟರ್.ಹೆಚ್ (29) ಕೇರಳ ಮೂಲದವರಾದ ಮಹಮ್ಮದ್ ರಾಫಿ (28) ಹಾಗೂ ರಿಷಿಕುಮಾರ್.ಟಿ.ಕೆ (34) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳ ಬಳಿಯಿಂದ 13 ಗ್ರಾಂ ಗಾಂಜಾ ಹಾಗೂ 41 ಗ್ರಾಂ MDMA ನಿಷೇಧಿತ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡಿಗೆ ಸೇತುವೆ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ತನಿಖಾ ತಂಡ ದಾಳಿ ನಡೆಸಿತು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಂದರ್ ರಾಜ್.ಕೆ.ಎಸ್, ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಗಂಗಾಧರಪ್ಪ.ಆರ್.ವಿ, ಕುಶಾಲನಗರ ವೃತ್ತದ ಸಿಪಿಐ ಮಹೇಶ್.ಬಿ.ಜಿ, ಪಿಎಸ್‌ಐ ಪುನೀತ್.ಡಿ.ಎಸ್, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ದಿನೇಶ್ ಕುಮಾರ್.ಎಂ, ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು. ಪೊಲೀಸ್ ಅಧಿಕಾರಿ ಹಾಗೂ…

Read More

ಮಡಿಕೇರಿ ಮಾ.30 : ವಿಧಾನಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಜಿಲ್ಲೆಯಲ್ಲಿನ ಹೋಂ ಸ್ಟೇ, ರೆಸಾರ್ಟ್‍ಗಳಲ್ಲಿ ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸುವ ನಿಟ್ಟಿನಲ್ಲಿ ಅನುಸರಿಸರಿಸಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕು ಎಂದರು. ಮತದಾನದ 48 ಗಂಟೆ ಮುಂಚಿತವಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅವರು ಹಲವು ಸಲಹೆ ನೀಡಿದರು. ನಿಶ್ಚಿತಾರ್ಥ, ಮದುವೆ, ನಾಮಕರಣ ಮತ್ತಿತರ ಖಾಸಗಿ ಸಮಾರಂಭಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದರೆ ರಾಜಕೀಯ ಪ್ರೇರಿತವಾಗಿರಬಾರದು. ಯಾವುದೇ ಪಕ್ಷದ ಪ್ರಚಾರಕ್ಕೆ ವೇದಿಕೆಯಾಗಬಾರದು ಎಂದರು. ಹೋಟೆಲ್ ಅಸೋಷಿಯೇಷನ್ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸಲಾಗುವುದು ಎಂದು ತಿಳಿಸಿದರು. ಉಪಾಧ್ಯಕ್ಷರಾದ ಜಾಹೀರ್ ಅಹಮ್ಮದ್, ಕಾರ್ಯದರ್ಶಿ ನಾಜೀರ್ ಅಹಮ್ಮದ್, ಖಜಾಂಜಿ ಕೆ.ಕೆ.ಭಾಸ್ಕರ್, ಹೋಂ ಸ್ಟೇ ಅಸೋಷಿಯೇಷನ್ ಕಾರ್ಯದರ್ಶಿ…

Read More