ಲೇಖಕ: admin

ನಾಪೋಕ್ಲು ಫೆ.22 :   ಹಳೇ ತಾಲೂಕಿನ ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ವಾರ್ಷಿಕ ಮಹಾಸಭೆಯು ಫೆ.25 ರಂದು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎ.ಕೆ ಚಂದ್ರನ್ ಅವರ ಅಧ್ಯಕ್ಷತೆಯಲ್ಲಿ  ನಡೆಯಲಿದೆ. ಪೂರ್ವಾಹ್ನ 9ಗಂಟೆಗೆ  ದೇವಾಲಯದ ಆವರಣದಲ್ಲಿ ನಡೆಯಲಿರುವ ವಾರ್ಷಿಕ ಮಹಾಸಭೆಗೆ ಸದಸ್ಯರು ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಮಧ್ಯಾಹ್ನ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದ್ದು, ಸಂಜೆ 6 ಗಂಟೆಗೆ ಮುತ್ತಪ್ಪ ದೇವರ ವಿಶೇಷ ವೆಲ್ಲಾಟಂ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಡಳಿತ ಮಂಡಳಿಯ ಪ್ರಕಟಣೆಯಲ್ಲಿ ಕೋರಿದೆ. ವರದಿ :ಝಕರಿಯ ನಾಪೋಕ್ಲು  

Read More

ಮಡಿಕೇರಿ ಫೆ.22 : ಕೊಡಗು ಜಿಲ್ಲೆಯ ಹಲವು ತೋಟಗಳಲ್ಲಿ ಕನಿಷ್ಟ ವೇತನಕ್ಕಿಂತ ಕಡಿಮೆ ವೇತನ ನೀಡುತ್ತಿರುವ ಬಗ್ಗೆ ಪದೇ ಪದೇ ವಿವಿಧ ಕಾರ್ಮಿಕ ಸಂಘಟನೆಗಳಿಂದ ದೂರು ಕೇಳಿಬರುತ್ತಿದೆ. ಈ ಸಂಬಂಧ ಜಿಲ್ಲಾಧಿಕಾರಿ ಅವರಿಗೆ ಹಾಗೂ ಕಾರ್ಮಿಕ ಇಲಾಖೆ ಕಚೇರಿಗೂ ದೂರುಗಳು ಬರುತ್ತಿರುವ ಹಿನ್ನೆಲೆ ತೋಟದ ಮಾಲೀಕರು ತಮ್ಮ ಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನವನ್ನು ಪಾವತಿ ಮಾಡಬೇಕಿದೆ. 2022-23 ರ ಸಾಲಿಗೆ ತೋಟ ಕಾರ್ಮಿಕರಿಗೆ ದಿನದ ಎಂಟು ಗಂಟೆಯ ಕೆಲಸಕ್ಕೆ ರೂ.376.77 ವೇತನವನ್ನು ನಿಗಧಿಪಡಿಸಲಾಗಿದೆ. ಕನಿಷ್ಠ ವೇತನಕ್ಕಿಂತ ಕಡಿಮೆ ವೇತನ ನೀಡುತ್ತಿರುವ ಮಾಲೀಕರ ವಿರುದ್ಧ ಕ್ಲೇಮ್ ಅರ್ಜಿಯನ್ನು ಕಾರ್ಮಿಕರು ನೇರವಾಗಿ ಅಥವಾ ತಮ್ಮ ಪ್ರತಿನಿಧಿಗಳ ಮೂಲಕ ತಾಲ್ಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ ಅಥವಾ ಕಾರ್ಮಿಕ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿಗೆ ಸಲ್ಲಿಸಬಹುದು ಎಂದು ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ ವಿಲ್ಮ ಎಲಿಜಬೆತ್ ತಾವ್ರೋ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.22 : ರಾಜ್ಯ ರಾಜಕೀಯಕ್ಕೆ ಮಹತ್ತರವಾದ ಮತ್ತೊಂದು ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಈ ಹಂತದಲ್ಲಿ, ಕೊಡಗು ಜಿಲ್ಲಾ ಕಾಂಗ್ರೆಸ್ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಸಂಘಟಿಸುವ ಮೂಲಕ ತನ್ನ ಬಲ ಪ್ರದರ್ಶನ ನಡೆಸಿದೆ. ನಗರದ ಸೆರಿನಿಟಿ ಸಭಾಂಗಣದಲ್ಲಿ ಆಯೋಜಿತ ಕಾಂಗ್ರೆಸ್ ಕಾರ್ಯಕರ್ತರ ಜನಸ್ಪಂದನ ಸಭೆಯಲ್ಲಿ ಸಹಸ್ರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳುವ ಮೂಲಕ ಮುಂದಿನ ಚುನಾವಣೆಯನ್ನು ಎದುರಿಸಲು ನಾಯಕರುಗಳಿಗೆ ಶಕ್ತಿ ತುಂಬಿದರು. ಇದೇ ಹಂತದಲ್ಲಿ ಜಿಲ್ಲಾ ಜೆಡಿಎಸ್‍ನ ಮಾಜಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಮೇರಿಯಂಡ ಸಂಕೇತ್ ಪೂವಯ್ಯ ಅವರು, ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ಮುಂಬರುವ ಚುನಾವಣೆ ಮತ್ತಷ್ಟು ರಂಗೇರುವುದನ್ನು ಖಚಿತಪಡಿಸಿದರು. ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ ಕೇರಳದ ಶಾಸಕ ರೋಸಿ ಜಾನ್ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ್ನು ಜನತೆ ಆಶೀರ್ವದಿಸಿ ಅಧಿಕಾರಕ್ಕೆ ತಂದಲ್ಲಿ ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ಗೌರವ ಧನವನ್ನು ನೀಡಲಾಗುತ್ತದೆ. ವಿರಾಜಪೇಟೆ, ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಎಲ್ಲಾ…

Read More

ಮಡಿಕೇರಿ ಫೆ.22 : ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್ಟಿನಲ್ಲಿ ಕೊಡಗನ್ನು ಕಡೆಗಣಿಸಿದೆ ಎಂದು ಆರೋಪಿಸಿರುವ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕೊಡಗು ಘಟಕದ ಪ್ರಧಾನ ಕಾರ್ಯದರ್ಶಿ ಎಚ್.ಬಿ.ರಮೇಶ್ ಫೆ.28ರ ವರೆಗೆ ಜನಾಂದೋಲನ ನಡೆಯಲಿದೆ ಎಂದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಮಡಿಕೇರಿ ಹಾಗೂ ವಿರಾಜಪೇಟೆಯಲ್ಲಿ ಜನಾಂದೋಲನ ಆರಂಭವಾಗಿದ್ದು, ಸರ್ಕಾರದ ವೈಫಲ್ಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುವುದೆಂದರು. 2018-19ನೇ ಸಾಲಿನಲ್ಲಿ ಕೊಡಗಿನಲ್ಲಿ ಪ್ರಳಯ ಸಂದರ್ಭದಲ್ಲಿ ಬಹಳಷ್ಟು ಮಂದಿ ಮನೆ, ಆಸ್ತಿ ಕಳೆದುಕೊಂಡರು. ಇವರಿಗೆ ನಿವೇಶನ ಕೊಡಲು ಸರಕಾರಕ್ಕೆ ಇಲ್ಲಿಯವರೆಗೆ ಸಾಧ್ಯವಾಗಿಲ್ಲ ಎಂದು ಆರೋಪಿಸಿದ ರಮೇಶ್, ಕೊಡಗಿಗೆ ರೈಲುತರುವುದೆಂದು ಭಾರತೀಯ ಜನತಾ ಪಕ್ಷದವರೇ ಆದ ಜನಪ್ರತಿನಿಧಿಗಳು ಆಗಾಗ ಘೋಷಿಸುತ್ತಿರುವುದಾದರೂ ಇಂದಿಗೂ ಅದು ನನಸಾಗಲಿಲ್ಲ. ಕೊಡಗಿನ ರೈತರು ಬೆಳೆಯುತ್ತಿರುವ ಕಾಫಿ, ಭತ್ತ, ಕರಿಮೆಣಸು ಮೊದಲಾದ ಬೆಳೆಗಳಿಗೆ ನ್ಯಾಯವಾದ ಬೆಲೆ ಸಿಗವಂತೆ ಮಾಡಲು ಸರಕಾರಗಳಿಗೆ ಸಾಧ್ಯವಾಗಲಿಲ್ಲ, ಕಾಡಾನೆ ಹಾಗೂ ಕಾಡು ಪ್ರಾಣಿಗಳಿಂದ ಮನುಷ್ಯ ಮತ್ತು ಬೆಳೆ ನಾಶವಾಗುತ್ತಿದ್ದರೂ ಸರಕಾರಗಳಿಗೆ ಸೂಕ್ತ ಪರಿಹಾರ…

Read More

ಮಡಿಕೇರಿ ಫೆ.22 : ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮವನ್ನು ಸಮರ್ಪಕವಾಗಿ ಅರ್ಹರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮ ಸಂಬಂದಿಸಿದಂತೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ, ಜಿಲ್ಲಾ ಪಂಚಾಯಿತಿ, ಕೈಗಾರಿಕೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ ಮತ್ತಿತರ ಇಲಾಖೆಗಳು ತಮ್ಮ ಇಲಾಖೆ ವ್ಯಾಪ್ತಿಯ ಕಾರ್ಯಕ್ರಮಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸಿ, ಪ್ರಗತಿ ಸಾಧಿಸಬೇಕು. ಯಾವುದೇ ಕಾರಣಕ್ಕೂ ವಿಳಂಭ ಅನುಸರಿಸಬಾರದು ಎಂದು ಸೂಚಿಸಿದರು. ಶೈಕ್ಷಣಿಕ ಸೌಲಭ್ಯಗಳು, ಮೂಲ ಸೌಕರ್ಯಕ್ಕೆ ಒತ್ತು ನೀಡುವುದು, ವಿದ್ಯಾರ್ಥಿ ವೇತನ, ಸ್ವ ಉದ್ಯೋಗಕ್ಕೆ ಒತ್ತು, ಸಾಲ ಸೌಲಭ್ಯ, ವಸತಿ ಯೋಜನೆ, ಮತ್ತಿತರ ಕಾರ್ಯಕ್ರಮಗಳನ್ನು ತಲುಪಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದರು. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿ ದಿವಾಕರ ಅವರು ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮಗಳ ಉದ್ದೇಶ ಮತ್ತು…

Read More

ಮಡಿಕೇರಿ ಫೆ.22 : ಕೊಡಗು ಜಿಲ್ಲೆಯಾದ್ಯಂತ ವಿದ್ಯುತ್ ವಿತರಣೆಗೆ ನಿರ್ಮಿಸಿರುವ ಮಾರ್ಗಗಳು ಬಹುಭಾಗ ತೋಟಗಳಲ್ಲಿಯ ಮರಗಿಡಗಳ ಮಧ್ಯದಲ್ಲಿ ಹಾದು ಹೋಗಿದ್ದು, ಮರಗಳ ರೆಂಬೆ ಕೊಂಬೆಗಳ ಬೀಳುವಿಕೆಯಿಂದಾಗಿ ಕಂಬಗಳು ಬಾಗಿ, ತಂತಿಗಳು ಕೆಳಮಟ್ಟಕ್ಕಿಳಿದು ಇದರಿಂದಾಗಿ ವಿದ್ಯುದಾಘಾತಗಳಾಗುವ ಸಂಭವವಿರುತ್ತದೆ. ಆದ್ದರಿಂದ ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು, ಶಿಥಿಲಗೊಂಡಿರುವ ವಿದ್ಯುತ್ ಕಂಬಗಳು ಕಂಡುಬಂದರೆ ಸದರಿ ವ್ಯಾಪ್ತಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಾರ್ವಜನಿಕರು ದೂರು ನೀಡಲು ಕೋರಿದೆ. ತೋಟಗಳಲ್ಲಿ ಒಳ್ಳೆ ಮೆಣಸು ಕೀಳಲು ಮತ್ತು ಮರದ ಕೊಂಬೆಗಳನ್ನು ಕಡಿಯಲು ಅಲ್ಯೂಮಿನಿಯಂ ಏಣಿಗಳನ್ನು ಮತ್ತು ನೀರು ಹಾಯಿಸಲು ಅಲ್ಯೂಮಿನಿಯಂ ಸ್ಪ್ರಿಂಕ್ಲರ್ ಪೈಪ್‍ಗಳನ್ನು ಉಪಯೋಗಿಸುತ್ತಿದ್ದು, ಇವುಗಳು ವಿದ್ಯುತ್ ಮಾರ್ಗಕ್ಕೆ ತಾಗಿ ಆಗಿಂದಾಗ್ಗೆ ವಿದ್ಯುತ್ ಅಪಘಾತಗಳು ಸಂಭವಿಸುತ್ತಿದೆ. ಆದ್ದರಿಂದ, ಅಲ್ಯೂಮಿನಿಯಂ, ಕಬ್ಬಿಣದ ಏಣಿ ಬದಲು ಬಿದಿರು, ಫೈಬರ್ ಏಣಿಗಳನ್ನೇ ಉಪಯೋಗಿಸಿ ವಿದ್ಯುತ್ ಅಪಘಾತಗಳನ್ನು ತಡೆಗಟ್ಟಲು ಇಲಾಖೆಯೊಂದಿಗೆ ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಫೆ.22 : 66/11ಕೆವಿ ಮಡಿಕೇರಿ, ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಮೇಕೇರಿ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಫೆಬ್ರವರಿ, 23 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಮೇಕೇರಿ, ಕಡಗದಾಳು, ಅರ್ವತೋಕ್ಲು, ಬಿಳಿಗೇರಿ, ಹಾಕತ್ತೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಫೆ.22 : ಕೊಡಗು ಜಿಲ್ಲಾಡಳಿತ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ(ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ)ಗಳ ಸಹಯೋಗದಲ್ಲಿ ಭಾರತ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ ಅಡಿಯಲ್ಲಿ ಫೆಬ್ರವರಿ, 28 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸೋಮವಾರಪೇಟೆ ತಾಲ್ಲೂಕಿನ ಸಂತ ಜೋಸೆಫರ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯಲಿದೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ ಕ್ಕಿಂತ ಕಡಿಮೆ, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಉದ್ಯೋಗಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು https://forms.gle/hCmXRX8AqFb9oUHn7 ಗೂಗಲ್ ಲಿಂಕ್/ ಕ್ಯೂಆರ್ ಕೋಡ್ ಬಳಸಿಕೊಂಡು ನೋಂದಾಯಿಸಿಕೊಳ್ಳುವುದು. ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಳ್ಳದ ಅಭ್ಯರ್ಥಿಗಳು ಉದ್ಯೋಗಮೇಳ ನಡೆಯುವ ಸ್ಥಳದಲ್ಲೇ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಉದ್ಯೋಗಾಕಾಂಕ್ಷಿಗಳ ನೋಂದಣಿ ಹಾಗೂ ಸಂದರ್ಶನ ಉಚಿತವಾಗಿರುತ್ತದೆ. ಅಭ್ಯರ್ಥಿಗಳು ಕನಿಷ್ಠ…

Read More

ಮಡಿಕೇರಿ, ಫೆ.22: ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಹಬ್ಬದ ಅಂಗವಾಗಿ ಮಾ.8 ರಂದು ಕುಶಾಲನಗರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೊಡಗಿನ ಮಹಿಳಾ ಪತ್ರಕರ್ತೆಯರ ಸಾರಥ್ಯದಲ್ಲಿ ನಡೆಯಲಿರುವ ದಿನಾಚರಣೆಯಲ್ಲಿ, ವೈವಿಧ್ಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲದೆ ಸಾಧಕರಿಗೆ ಸನ್ಮಾನ ಮತ್ತಿತರ ಚಟುವಟಿಕೆಗಳು ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಹೇಳಿದರು. ಮಡಿಕೇರಿ ಪತ್ರಿಕಾ ಭವನದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಹಬ್ಬ ಮಹೋತ್ಸವ ಅಂಗವಾಗಿ ಬೆಳ್ಳಿ ಹಬ್ಬ ಸಾಂಸ್ಕೃತಿಕ ಸಮಿತಿ ಆಶ್ರಯದಲ್ಲಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಕುಶಾಲನಗರ ಗೌಡ ಸಮಾಜ ಮತ್ತು ಕೊಡವ ಕೊಡವ ಸಮಾಜ, ಟಿಟಿಡಿ ಮತ್ತು ಕುಶಾಲನಗರದ ಸಮಸ್ತ ಮಹಿಳಾ ಭಜನಾ ಮಂಡಳಿ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಹಿಳಾ ಪತ್ರಕರ್ತರಿಂದ ವಿಭಿನ್ನ ಮನರಂಜನೆ, ಕಾರ್ಯಕ್ರಮಗಳು ನಡೆಯಲಿವೆ ಎಂದರು. ಅಂದು ಬೆಳಿಗ್ಗೆ ಕುಶಾಲನಗರ ಗಣಪತಿ…

Read More

ಮಡಿಕೇರಿ ಫೆ.22 : ನವೀಕರಣಗೊಂಡಿರುವ ಕೊಡಗು ಜಿಲ್ಲಾ ಬಂಟರ ಶಾಂತಿಧಾಮವನ್ನು ‘ಶಾಂತಿಧಾಮ ನಿರ್ವಹಣಾ ಸಮಿತಿ’ಗೆ ಹಸ್ತಾಂತರಿಸಲಾಯಿತು. ನಗರದ ಸ್ಟೋನ್ ಹಿಲ್‍ನಲ್ಲಿರುವ ಶಾಂತಿ ಧಾಮದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯರಾದ ಕೊರಗಪ್ಪ ರೈ, ಜಯಕೃಷ್ಣ ಶೆಟ್ಟಿ, ಸಂಘದ ಗೌರವಾಧ್ಯಕ್ಷ ಐತಪ್ಪರೈ ಅವರುಗಳು ಶಾಂತಿಧಾಮ ನಿರ್ವಹಣಾ ಸಮಿತಿ ಯ.ಎಚ್. ಪ್ರಭಾಕರ್ ರೈ, ಶೇಷಪ್ಪ(ಪುಟ್ಟು) ರೈ, ಅರುಣ್ ಶೆಟ್ಟಿ ಅವರಿಗೆ ದಾಖಲಾತಿ ಪುಸ್ತಕ ಹಾಗೂ ರಶೀದಿ ಪುಸ್ತಕವನ್ನು ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಕೊರಗಪ್ಪರೈ, ಶಾಂತಿಧಾಮವನ್ನು ನವೀಕರಣಗೊಳಿಸಿ ಸ್ವಚ್ಛಂದವಾಗಿಸಬೇಕೆಂಬುದು ಹಲವು ವರ್ಷಗಳ ಕನಸಾಗಿತ್ತು. ಜಗದೀಶ್‍ ರೈಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನದಲ್ಲಿ ಅದು ಈಡೇರಿದೆ. ಮುಂದೆ ಇದರ ನಿರ್ವಹಣೆಗೆ ಸಮಾಜದ ಎಲ್ಲರೂ ಸಹಕಾರ ನೀಡಬೇಕೆಂದರು. ಬಂಟ ಸಮಾಜ ಸಾಮಾಜಿಕವಾಗಿ ಹಿಂದೆ ಇದೆ. ಮುಂದಿನ ದಿನದಲ್ಲಿ ಅತ್ಯುತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದವರನ್ನು ಮುನ್ನೆಲೆಗೆತರಬೇಕು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಂಘಟನಾತ್ಮಕ ವಿಚಾರದಲ್ಲಿ ಆಸಕ್ತಿ ವಹಿಸಬೇಕೆಂದು ಕಿವಿಮಾತು ಹೇಳಿದರು. ಬಿ.ಬಿ.ಐತಪ್ಪರೈ ಮಾತನಾಡಿ, ಬಂಟರ ಶಾಂತಿಧಾಮ ನಿರ್ಮಾಣಕ್ಕೆ ಕಾರಣಕರ್ತರಾದವರ ಶ್ರಮವನ್ನು ಸದಾ ಸ್ಮರಿಸಿಕೊಳ್ಳಬೇಕೆಂದರು.…

Read More