ಮಡಿಕೇರಿ ಮಾ.28 : ಪ್ರಕೃತಿ ಪ್ರಿಯರ ಅಚ್ಚುಮೆಚ್ಚಿನ ಪ್ರವಾಸಿತಾಣ ಮಡಿಕೇರಿಯ ಅಬ್ಬಿ ಜಲಪಾತ ವ್ಯಾಪ್ತಿಯಲ್ಲಿ ಪ್ರವಾಸಿಗರ ಹಾಗೂ ವಾಹನ ಚಾಲಕರುಗಳ ಸುರಕ್ಷತೆಯ ದೃಷ್ಟಿಯಿಂದ ಉಪ ಪೊಲೀಸ್ ಠಾಣೆ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಕೊಡಗು ರಕ್ಷಣಾ ವೇದಿಕೆ ಒತ್ತಾಯಿಸಿದೆ. ಕೊರವೇ ಅಧ್ಯಕ್ಷ ಅಚ್ಚಾಂಡೀರ ಪವನ್ ಪೆಮ್ಮಯ್ಯ ಅವರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರನ್ನು ಭೇಟಿಯಾದ ಸಂಘಟನೆಯ ಪದಾಧಿಕಾರಿಗಳು ಹಾಗೂ ಮಡಿಕೇರಿ ನಗರ ಆಟೋ ಚಾಲಕರು ಉಪ ಪೊಲೀಸ್ ಠಾಣೆಯ ಅನಿವಾರ್ಯತೆಯ ಕುರಿತು ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಅಬ್ಬಿಫಾಲ್ಸ್ ವ್ಯಾಪ್ತಿಯಲ್ಲಿ ನಗರ ಆಟೋ ಚಾಲಕರ ಮೇಲೆ ದುಷ್ಕರ್ಮಿಗಳು ವಿನಾಕಾರಣ ಹಲ್ಲೆ ಮಾಡುತ್ತಿರುವ ಮತ್ತು ಕೊಲೆ ಬೆದರಿಕೆಯೊಡ್ಡುತ್ತಿರುವ ಪ್ರಕರಣಗಳು ಹೆಚ್ಚಾಗಿದೆ. ಆಟೋ ಚಾಲಕರು ಅಬ್ಬಿಫಾಲ್ಸ್ ಗೆ ಬಾಡಿಗೆ ತೆರಳಲು ಆತಂಕಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಸಿಗರ ಸುರಕ್ಷತೆಯೂ ಇಲ್ಲಿ ಅಗತ್ಯವಾಗಿದೆ ಎಂದು ಪವನ್ ಪೆಮ್ಮಯ್ಯ ಗಮನ ಸೆಳೆದರು. ಆಟೋ ಚಾಲಕರಿಗೆ ಸೂಕ್ತ ರಕ್ಷಣೆ ನೀಡುವಂತೆ ಮನವಿ ಮಾಡಿದ ಅವರು, ಉಪ ಪೊಲೀಸ್ ಠಾಣೆ ವ್ಯವಸ್ಥೆಯಿಂದ ಅನೇಕ…
ಲೇಖಕ: admin
ಮಡಿಕೇರಿ ಮಾ.28 : ಹಾಕತ್ತೂರು ಗ್ರಾ.ಪಂ ವ್ಯಾಪ್ತಿಯಲ್ಲಿ ರೂ 1.81ಕೋಟಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಇದೇ ಸಂದರ್ಭ ಕಗ್ಗೊಡ್ಲು ಗ್ರಾಮದ ಶಾಲೆಯಿಂದ ಕಡಗದಾಳು ಸಂಪರ್ಕ ರಸ್ತೆ ಗೆ ಶಂಕುಸ್ಥಾಪನೆ ನೆರವೇರಿಸಿದರು.
ಮಡಿಕೇರಿ ಮಾ.28 : ಗೋಣಿಕೊಪ್ಪ ಗ್ರಾ.ಪಂ ಬೈಪಾಸ್ ರಸ್ತೆಯಿಂದ ಕೀರೆಹೊಳೆ ಮೂಲಕ ಪಟ್ಟಣಕ್ಕೆ ಸಂಪರ್ಕ ಕಲ್ಪಿಸಲು ತಲಾ ರೂ. 20 ಲಕ್ಷದಂತೆ 2 ಸೇತುವೆ ಮಂಜೂರಾಗಿದ್ದು, ಶಾಸಕ ಕೆ.ಜಿ.ಬೋಪಯ್ಯ ಸೇತುವೆ ಉದ್ಘಾಟನೆ ಮತ್ತು ಭೂಮಿ ಪೂಜೆ ನೆರವೇರಿತು. ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಮಾ.28 : ಮಾಯಮುಡಿ ಗ್ರಾ.ಪಂ ಯ ಚೆನ್ನಂಗೊಲ್ಲಿ ಪೈಸಾರಿಗೆ ಮುಖ್ಯ ರಸ್ತೆಯಿಂದ ಸಂಪರ್ಕ ಕಲ್ಪಿಸುವ ರಸ್ತೆಯನ್ನು ರೂ.12.30ಲಕ್ಷ ವೆಚ್ಚದಲ್ಲಿ ಕಾಂಕ್ರೀಟಿಕರಣಗೊಳಿಸಲಾಗಿದ್ದು, ನೂತನ ರಸ್ತೆಯನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಮಾ.28 : ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಗೋವಾದಲ್ಲಿ ನಡೆದ ಯೋನೆಕ್ಸ್ ಸನ್ ರೈಸ್ 45ನೇ ಇಂಡಿಯನ್ ಶಿಪ್‍ನಲ್ಲಿ ಕೊಡಗಿನ ತಾತಪಂಡ ಜ್ಯೋತಿ ಸೋಮಯ್ಯ ಸಾಧನೆ ಮಾಡಿದ್ದು, ವಿಶ್ವ ಚಾಂಪಿಯನ್ ಶಿಪ್‍ಗೆ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. 55+ ವಿಭಾಗದಲ್ಲಿ ಸಿಂಗಲ್ಸ್‍ನಲ್ಲಿ ಜ್ಯೋತಿ ಸೋಮಯ್ಯ ಅವರು ರನ್ನರ್ ಅಪ್ ಆಗಿ ಬೆಳ್ಳಿ ಪದಕ ಹಾಗೂ ಡಬಲ್ಸ್‍ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಈ ಸಾಧನೆಯೊಂದಿಗೆ ಇವರು ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ ಬಿ.ಡಬ್ಲ್ಯು.ಎಫ್ ವಿಶ್ವ ಚಾಂಪಿಯನ್ ಶಿಪ್ 2023ಕ್ಕೆ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಜ್ಯೋತಿ ಅವರು ಸಿಂಗಲ್ಸ್‍ನಲ್ಲಿ ಫೈನಲ್‍ನಲ್ಲಿ ಪ್ರಬಲ ಪ್ರತಿಸ್ಪರ್ಧಿ ವಿರುದ್ಧ ಆಡಿದ್ದು, ಅಲ್ಪ ಪಾಯಿಂಟ್‍ನಿಂದ ಸೋಲು ಅನುಭವಿಸಿದರೂ, ಈ ಸಾಧನೆ ತೃಪ್ತಿ ತಂದಿದೆ ಎಂದಿದ್ದಾರೆ.
ಮಡಿಕೇರಿ ಮಾ.28 : ಕೊಡಗು ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಸ್ಮಶಾನ ಭೂಮಿ ಅಗತ್ಯ ಇದ್ದಲ್ಲಿ ಕೂಡಲೇ ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರ್ ಕಚೇರಿಗೆ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ತಿಳಿಸಿದ್ದಾರೆ. ಹಾಗೆಯೇ ಸ್ಮಶಾನ ಭೂಮಿ ಒತ್ತುವರಿಯಾಗಿದ್ದಲ್ಲಿ ಸಂಬಂಧಪಟ್ಟ ತಾಲ್ಲೂಕು ಕಚೇರಿಗೆ ಮಾಹಿತಿ ನೀಡಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದ್ದಾರೆ. ಜಿಲ್ಲೆಯ ಹಲವು ಗ್ರಾಮಗಳಿಗೆ ಈಗಾಗಲೇ ಸ್ಮಶಾನ ಭೂಮಿ ಕಾಯ್ದಿರಿಸಲಾಗಿದೆ. ಯಾವುದಾದರೂ ಗ್ರಾಮಕ್ಕೆ ಸ್ಮಶಾನ ಭೂಮಿ ಒದಗಿಸಲು ಬಾಕಿ ಇದ್ದಲ್ಲಿ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸುವಂತಾಗಬೇಕು. ಈಗಾಗಲೇ ಜಾಗ ಕಾಯ್ದಿರಿಸಿದ ಗ್ರಾಮಗಳ ಸ್ಮಶಾನ ಭೂಮಿಯ ಪಹಣಿ ಸೇರಿದಂತೆ ಇತರೆ ದಾಖಲೆಗಳು ಲಭ್ಯವಿದ್ದು, ಜಮೀನು ಲಭ್ಯವಿರುವ ಕಡೆ ಸ್ಮಶಾನಕ್ಕೆ ಜಮೀನು ಕಾಯ್ದ್ದಿರಿಸಲಾಗುತ್ತದೆ ಎಂದರು. ರಾಜ್ಯ ಉಚ್ಛ ನ್ಯಾಯಾಲಯವು ಮಾ.16 ರಂದು ನಡೆದ ವಿಚಾರಣೆಯಲ್ಲಿ ರಾಜ್ಯದಲ್ಲಿನ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿಯ ಅಗತ್ಯತೆ ಬಗ್ಗೆ ರಾಜ್ಯದ ಎಲ್ಲಾ ಗ್ರಾಮದಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ ಸ್ಮಶಾನ ಭೂಮಿಯ ಅವಶ್ಯಕತೆ ಬಗ್ಗೆ…
ಮಡಿಕೇರಿ ಮಾ.28 : ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕ ಪ್ರವೀಣ್ ಮಧುಕರ್ ಪವಾರ್ ಅವರು ಕುಶಾಲನಗರಕ್ಕೆ ಭೇಟಿ ನೀಡಿ ಮುಂಬರುವ ಚುನಾವಣೆ ಸಂದರ್ಭದ ಭದ್ರತಾ ವ್ಯವಸ್ಥೆಗಳ ಬಗ್ಗೆ ಸೋಮವಾರಪೇಟೆ ಉಪವಿಭಾಗದ ಪೊಲೀಸ್ ಅಧಿಕಾರಿಗಳ ಜೊತೆಗೆ ಚರ್ಚಿಸಿದರು. ಕುಶಾಲನಗರ ಡಿವೈಎಸ್‍ಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಆರ್.ವಿ.ಗಂಗಾಧರಪ್ಪ, ಶನಿವಾರಸಂತೆ ಸೋಮವಾರಪೇಟೆ, ಕುಶಾಲನಗರ, ಸುಂಟಿಕೊಪ್ಪ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಕುಶಾಲನಗರಕ್ಕೆ ಆಗಮಿಸಿದ ಐಜಿಪಿ ಅವರಿಗೆ ಇದೇ ಸಂದರ್ಭ ಗೌರವ ರಕ್ಷೆ ನೀಡಲಾಯಿತು.
ಮಡಿಕೇರಿ ಮಾ.27 : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಕಟ್ಟಡ ಕಾರ್ಮಿಕರು ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಸರಕಾರ ಹಾಗೂ ಇಲಾಖೆಯ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಸಂಘದ ಜಿಲ್ಲಾಧ್ಯಕ್ಷ ಎ.ಸಿ.ಸಾಬು ಮಾತನಾಡಿ, ಕಟ್ಟಡ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಯಿಂದ ಹಲವು ಬಾರಿ ಕಾರ್ಮಿಕ ಇಲಾಖೆಯ ಗಮನ ಸೆಳೆಯಲಾಗಿದ್ದರೂ ಇಲ್ಲಿಯ ವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ. ಆದರೆ ಅನಾವಶ್ಯಕವಾದ ಹೊಸ ಸಮಸ್ಯೆಗಳನ್ನು ಕಲ್ಯಾಣ ಮಂಡಳಿಗೆ ಹೊರೆಯಾಗುವ ರೀತಿಯಲ್ಲಿ ಘೋಷಣೆ ಮಾಡುತ್ತಿರುವುದು ಬೇಸರದ ಸಂಗತಿ ಎಂದರು. ಕಾರ್ಮಿಕ ಕಲ್ಯಾಣ ಮಂಡಳಿಯ ವತಿಯಿಂದ ಸ್ವೀಕರಗೊಳ್ಳುತ್ತಿರುವ ಶೈಕ್ಷಣಿಕ ಸಹಾಯಧನ ಅರ್ಜಿಯಲ್ಲಿ ಕೆಲವು ಲೋಪದೋಷಗಳಿವೆ. ಇದರಿಂದ ತಂತ್ರಾಂಶದಲ್ಲಿ ಕೆಲ ಬದಲಾವಣೆ ಮಾಡಬೇಕು, ಬಾಕಿ ಇರುವ ಶೈಕ್ಷಣಿಕ ಅರ್ಜಿಗಳಿಗೆ ತ್ವರಿತವಾಗಿ ಹಣ ವರ್ಗಾವಣೆ ಮಾಡಬೇಕು, ಆರೋಗ್ಯ ಸಂಜೀವಿನಿ ಜಾರಿಗೊಳಿಸಬೇಕು, ಕಾರ್ಮಿಕ ಅರ್ಜಿ ಸಲ್ಲಿಕೆಗೆ…
ಮಡಿಕೇರಿ ಮಾ.27 : ಕೊಡಗು ಜಿಲ್ಲಾ ಕುರುಬ ಎಸ್ಟಿ ಮೀಸಲಾತಿ ಅಧ್ಯಕ್ಷರಾಗಿ ಕೊಡಗು ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ರವಿಗೌಡ ಆಯ್ಕೆಯಾಗಿದ್ದಾರೆ.
ಸುಂಟಿಕೊಪ್ಪ ಮಾ.27: ಕಣ್ಣೂರಿನ ಋಷಿದೇವ್ ಪ್ರತಿಷ್ಠಾನದ ಮುಖ್ಯಸ್ಥರಾದ ಪರಮಪೂಜ್ಯನೀಯ ಸದ್ಗುರು ಶ್ರೀ ನರೇಂದ್ರನ್ ಜೀ ಅವರ ಉಪಸ್ಥಿತಿಯಲ್ಲಿ ಯಾಗ ಮತ್ತು ಹೋಮಗಳ ಪ್ರಾಮುಖ್ಯತೆ ಮುಂದಿನ ಜನಾಂಗಕ್ಕೆ ನಮ್ಮ ಜವಬ್ಧಾರಿ ಏನು ಎಂಬುದರ ಕುರಿತು ಆಧ್ಯಾತ್ಮಿಕ ಸಮಾಲೋಚನೆ ಸಿದ್ದಾಪುರದ ಸ್ವರ್ಣಮಾಲಾ ಕಲ್ಯಾಣ ಮಂಟಪದಲ್ಲಿ ಅರ್ಥಪೂರ್ಣವಾಗಿ ನಡೆಯಿತು. “ಯಾಗ ಮತ್ತು ಹೋಮಗಳು” ಹೇಗೆ ಮನುಷ್ಯಜನಾಂಗ ಪರಿಸರದ ಮೇಲೆ ಪ್ರಭಾವ ಬೀರುತ್ತವೆ ಎಂಬುದರ ಕುರಿತು ಆಮೇರಿಕದ ವಿಜ್ಞಾನಿ ಪ್ರಸ್ತುತ ಬೆಂಗಳೂರಿನಲ್ಲಿರುವ ಡಾ.ಕೃಷ್ಣ ಮಾದಪ್ಪ ಉಪನ್ಯಾಸ ನೀಡಿದರು. ಪಂಚಭೂತಗಳಿoದ ಈ ವಿಶ್ವ ಕಾರ್ಯಾಚರಿಸುತ್ತಿದ್ದು, ಸತ್ವ, ರಾಜಸ ತಮೋಗುಣಗಳ ಏರಿಳಿತದಿಂದ ಪ್ರಸ್ತುತ ವಿಶ್ವ ಮತ್ತು ಸಮಾಜ, ಸಂಘರ್ಷವiಯ ವಾತಾವರಣದಿಂದ ಕೂಡಿದೆ ಎಂದು ಅವರು ಹೇಳಿದರು. ಭೂಮಿ ಮತ್ತು ನೀರು ನಮ್ಮ ಮುಂದಿರುವ ಸವಾಲುಗಳಾಗಿದ್ದು, ಶುದ್ಧ ಭೂಮಿ ಮತ್ತು ನೀರಿನ ಅವಶ್ಯಕತೆಯನ್ನು ನಾವು ಅರಿಯಬೇಕಾಗಿದೆ. ವೇದ ಉಪನಿಶತ್ತುಗಳಲ್ಲಿ ಹೇಳಲಾದ ಸಮಚಿತ್ತ ಮತ್ತು ಸಮಭಾವದ ಬದುಕು ನಮ್ಮ ಮುಂದಿನ ಜನಾಂಗಕ್ಕೆ ನಾವು ಕಲಿಸಬೇಕಾಗಿದೆ ಎಂದು ಕೃಷ್ಣ ಮಾದಪ್ಪ ಸೋದಾಹರಣವಾಗಿ ವಿವರಿಸಿದರು. “ಗುರುತ್ವಂ”…






