ಮಡಿಕೇರಿ ಫೆ.20 : ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಗಾಳಿಬೀಡು ಸರ್ಕಾರಿ ಪ್ರೌಢಶಾಲೆಯಲ್ಲಿ 2022- 23 ನೇ ಸಾಲಿನಲ್ಲಿ ಶೇ.100 ಫಲಿತಾಂಶ ಬರಲು ಕಾರಣಕರ್ತರಾದ ಶಾಲೆಯ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಾಜ ಸೇವಕ ವಾಸುದೇವ್, ಸಮಾಜದಲ್ಲಿ ಉತ್ತಮ ನಾಗರೀಕರಾಗುವುದನ್ನು ಗುರಿಯನ್ನಾಗಿಸಿಕೊಳ್ಳಬೇಕು. ನಾವು ಯಾವರೀತಿ ಸಮಾಜದಲ್ಲಿ ಇರುತ್ತೇವೆ. ಯಾವ ರೀತಿ ವ್ಯವಹರಿಸುತ್ತೇವೆ ಎನ್ನುವುದು ಮುಖ್ಯವಾಗುತ್ತದೆ. ಮಾನಸಿಕ, ದೈಹಿಕ ಹಾಗೂ ವ್ಯಕ್ತಿತ್ವದಿಂದ ಉತ್ತಮ ಮಾನವನಾಗಿ ಬದುಕುವುದನ್ನು ಕಲಿಯಬೇಕು ಎಂದು ಹಿತನುಡಿದರು. ಡಿ.ಎಸ್.ಎಸ್ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಮಾತನಾಡಿ, ದಲಿತ ಸಂಘರ್ಷ ಕಳೆದ ಒಂದು ದಶಕದಿಂದ ನಡೆಸಿದ ಸೇವೆ ಹಾಗೂ ವಿದ್ಯಾರ್ಥಿಗಳಿಗೆ, ಪೋಷಕರಿಗೆ ನೀಡಿದ ಸನ್ಮಾನದ ಉದ್ದೇಶವನ್ನು ವಿವರಿಸಿದರು. ಸನ್ಮಾನದಿಂದ ಸ್ಪೂರ್ತಿ ಪಡೆಯುವ ವಿದ್ಯಾರ್ಥಿಗಳು ತಾವೂ ಹೆಚ್ಚಿನ ಸಾಧನೆ ತೋರಲು ಪ್ರಯತ್ನ ಪಡುತ್ತಾರೆ. ವಿದ್ಯಾರ್ಥಿಗಳು ದೇಶದ ಶಕ್ತಿ. ಅವರನ್ನು ಚಿಕ್ಕಂದಿನಿಂದಲೇ ಜಾಗೃತಗೊಳಿಸಬೇಕಿದೆ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಂಸ ಅವರು ಮಾತನಾಡಿ, ವಿದ್ಯಾರ್ಥಿಗಳನ್ನು ಮುನ್ನಲೆಗೆ ತರುವಂತಹ ಶಿಕ್ಷಕರಿಗೆ ಹಾಗೂ ಮಕ್ಕಳಿಗೆ…
ಲೇಖಕ: admin
ಮಡಿಕೇರಿ ಫೆ.20 : ಕೊಡಗು ಜಿಲ್ಲಾ ಮೊಗೇರಾ ಸೇವಾ ಸಮಾಜ ಹಾಗೂ ಮೊಗೇರ ಗ್ರಾಮ ವಿಕಾಸ ಯೋಜನೆಯ ಜಿಲ್ಲಾ ಕಚೇರಿಯನ್ನು ಸುಂಟಿಕೊಪ್ಪದಲ್ಲಿ ಉದ್ಘಾಟಿಸಲಾಯಿತು. ದೇವಯ್ಯ ಕಾಂಪ್ಲೆಕ್ಸ್ ನಲ್ಲಿ ನೂತನ ಕಚೇರಿಯನ್ನು ಮೊಗೇರ ಸಂಘದ ಸ್ಥಾಪಕ ಸದಸ್ಯರಾದ ಅಕ್ಕಮ್ಮ ಮೂರ್ತಿ ಉದ್ಘಾಟಿಸಿದರು. ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉಪ ತಹಶೀಲ್ದಾರ್ ತುಕ್ರಪ್ಪ ಹಾಗೂ ಮೊಗೇರ ಸೇವಾ ಸಮಾಜದ ರಾಜ್ಯ ಉಪಾಧ್ಯಕ್ಷ ಬಿ.ಶಿವಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ತುಕ್ರಪ್ಪ ಅವರು, ಮೊಗೇರ ಸೇವಾ ಸಮಾಜವು ಗ್ರಾಮ ವಿಕಾಸ ಯೋಜನೆಯ ಮೂಲಕ ಸ್ವಸಹಾಯ ಸಂಘವನ್ನು ಆರಂಭಿಸಿ ಆರ್ಥಿಕವಾಗಿ ದುರ್ಬಲರಾದವರಿಗೆ ಹಣಕಾಸಿನ ಬಲ ತುಂಬುತ್ತಿರುವುದು ಶ್ಲಾಘನೀಯವೆಂದರು. ಮೊಗೇರ ಸಮಾಜದ ಮಂದಿ ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸಬಲರಾಗಬೇಕು. ಸಮಾಜಕ್ಕೆ ಸೇರಿದ ನೌಕರ ಬಾಂಧವರು ಬಡ ಕುಟುಂಬಗಳಿಗೆ ಆರ್ಥಿಕ ಸಹಕಾರವನ್ನು ನೀಡಬೇಕೆಂದು ಕರೆ ನೀಡಿದರು. ಸಮಾಜದ ರಾಜ್ಯ ಉಪಾಧ್ಯಕ್ಷ ಬಿ.ಶಿವಪ್ಪ ಮಾತನಾಡಿ, ಕೊಡಗಿನ ಮೊಗೇರ ಬಾಂಧವರು ಸಂಘದ ಸದಸ್ಯತ್ವ ಪಡೆಯುವ ಮೂಲಕ ಮೊಗೇರ ಜನಸಂಖ್ಯೆ ಗುರುತಿಸಲು ಸಹಕರಿಸುವಂತೆ…
ಮಡಿಕೇರಿ ಫೆ.20 : ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಅಳುವಾರದ ಚಿಕ್ಕಅಳುವಾರಮ್ಮ ದೇವಾಲಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ‘ಗ್ರಾಮ ವಾಸ್ತವ್ಯ’ ಕಾರ್ಯಕ್ರಮದಲ್ಲಿ ತೊರೆನೂರು ಗ್ರಾ.ಪಂ.ವ್ಯಾಪ್ತಿಯ ಹಲವು ಸಮಸ್ಯೆಗಳ ಬಗ್ಗೆ ಸ್ಥಳೀಯರು ಬೆಳಕು ಚೆಲ್ಲಿದರು. ಈಗಾಗಲೇ ಊರುಡುವೆ ಪೈಸಾರಿ ಜಾಗದಲ್ಲಿ ವಾಸಿಸುತ್ತಿರುವವರಿಗೆ ಹಕ್ಕುಪತ್ರ ವಿತರಿಸುವುದು, ಆಶ್ರಯ ಮನೆ ಯೋಜನೆಯಡಿ ಮನೆ ನಿರ್ಮಾಣಕ್ಕೆ ನಿವೇಶನ ಇಲ್ಲದವರಿಗೆ ನಿವೇಶನ ಒದಗಿಸುವುದು, ಗ್ರಾಮದಿಂದ ಗ್ರಾಮಕ್ಕೆ ರಸ್ತೆ ಸಂಪರ್ಕಕ್ಕೆ ಹಂತ ಹಂತವಾಗಿ ಪರಿಹರಿಸುವುದು, ಕಾಡಾನೆ ಹಾವಳಿ ನಿಯಂತ್ರಣ ಸಂಬಂದ ಟ್ರಂಚ್ ನಿರ್ಮಾಣ ಹೀಗೆ ಹಲವು ಸಮಸ್ಯೆಗಳ ಬಗ್ಗೆ ಸ್ಥಳೀಯರು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಈಗಾಗಲೇ ಪೈಸಾರಿ ಜಾಗದಲ್ಲಿ ಹಲವು ದಶಕಗಳಿಂದ ವಾಸುತ್ತಿರುವವರಿಗೆ 94ಸಿ ರಡಿ ಹಕ್ಕುಪತ್ರ ವಿತರಿಸಲಾಗುವುದು, ತೊರೆನೂರು ಗ್ರಾ.ಪಂ.ವ್ಯಾಪ್ತಿಯ 204 ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಕಲ್ಪಿಸುವುದು, ಗ್ರಾಮ ಗ್ರಾಮಗಳ ಸಂಪರ್ಕ ಸಂಬಂಧ ರಸ್ತೆ ನಿರ್ಮಾಣಕ್ಕೆ ಹಂತ ಹಂತವಾಗಿ…
ಮಡಿಕೇರಿ ಫೆ.20 : ಮಡಿಕೇರಿ ವಿದ್ಯುತ್ ಉಪ-ಕೇಂದ್ರ 66/11 ಕೆವಿ ಹೊರಹೋಗುವ ಎಫ್ 12 ರಾಜಾಸೀಟ್ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಫೆಬ್ರವರಿ, 22 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಮಂಗಳೂರು ರಸ್ತೆ, ಡಿ.ಸಿ ಆಫೀಸ್, ಇಂದಿರಾನಗರ, ಹೊಸಬಡಾವಣೆ, ಹಾಕಿಮೈದಾನ, ಡೇರಿಫಾರಂ, ಎಫ್‍ಎಂಸಿ ಕಾಲೇಜು, ವಿದ್ಯಾನಗರ, ಮುಳಿಯ ಲೇಔಟ್, ಕನ್ನಿಕಾ ಬಡಾವಣೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಫೆ.20 : ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಯುಷ್ ಬಿಎಎಂಎಸ್/ಬಿಎಚ್‍ಎಂಎಸ್, ಬಿಯುಎಂಎಸ್, ಬಿಎನ್‍ವೈಎಸ್ ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೋಮಾ ಇನ್ ಹಾಸ್ಪಿಟಲ್ ಎಂಡ್ ಹೆಲ್ತ್ ಕೇರ್ ಮ್ಯಾನೇಜ್‍ಮೆಂಟ್(2 ವರ್ಷ)ನಿಂದ ಎಐಸಿಟಿಇ. ಸಾ.ಅಂ. 45 ವರ್ಷದೊಳಗಿರಬೇಕು. ತಮ್ಮ ಸಂಪೂರ್ಣ ವಿವರಗಳುಳ್ಳ ಅರ್ಜಿಗಳನ್ನು ನಿಗಧಿಪಡಿಸಿದ ಕನಿಷ್ಠ ವಿದ್ಯಾರ್ಹತೆ, ವಯೋಮಿತಿ ಹಾಗೂ ಇತರೆ ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ, 24 ಕೊನೆಯ ದಿನವಾಗಿದೆ. ಹಾಗೂ ನೇರ ಸಂದರ್ಶನಕ್ಕೆ ದಿನಾಂಕವನ್ನು ನಂತರ ತಿಳಿಸಲಾಗುವುದು. ಅರ್ಜಿಯನ್ನು ಜಿಲ್ಲಾ ಆಯುಷ್ ಅಧಿಕಾರಿಗಳು, ಜಿಲ್ಲಾ ಆಯುಷ್ ಕಚೇರಿ, ಮಹದೇವಪೇಟೆ, ಮಡಿಕೇರಿ-571201, ಕೊಡಗು ಜಿಲ್ಲೆ ಇಲ್ಲಿಗೆ ಸಲ್ಲಿಸಬೇಕು ಎಂದು ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಆಯುಷ್ ಅಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ಫೆ.20 : ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯಲ್ಲಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫಿಸರ್(ಸಿಎಚ್‍ಒ) 2 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಎಎಂಎಸ್, ಬಿಯುಎಂಎಸ್, ಎಎಚ್‍ಎಂಎಸ್ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಯ ಮೀಸಲಾತಿ (ಪ್ರವರ್ಗ) ಪ.ಜಾ-01, ಸಾ.ಅ.01. ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫಿಸರ್(ಸಿಎಚ್‍ಒ) ಹುದ್ದೆಗಳನ್ನು ಒಂದು ವರ್ಷದವರಗೆ ಅಥವಾ ಸದರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಖಾಯಂ ವೈದ್ಯಾಧಿಕಾರಿಗಳ ಹುದ್ದೆಗಳು ಭರ್ತಿಯಾಗುವವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಚಾಲ್ತಿಯಲ್ಲಿರುತ್ತದೆ. ತಮ್ಮ ಸಂಪೂರ್ಣ ವಿವರಗಳುಳ್ಳ ಅರ್ಜಿಗಳನ್ನು ನಿಗಧಿಪಡಿಸಿದ ಕನಿಷ್ಠ ವಿದ್ಯಾರ್ಹತೆ, ವಯೋಮಿತಿ ಹಾಗೂ ಇತರೆ ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ, 24 ಕೊನೆಯ ದಿನವಾಗಿದೆ. ನೇರ ಸಂದರ್ಶನಕ್ಕೆ ದಿನಾಂಕವನ್ನು ನಂತರ ತಿಳಿಸಲಾಗುವುದು. ಅರ್ಜಿಯನ್ನು ಜಿಲ್ಲಾ ಆಯುಷ್ ಅಧಿಕಾರಿಗಳು, ಜಿಲ್ಲಾ ಆಯುಷ್ ಕಚೇರಿ, ಮಹದೇವಪೇಟೆ, ಮಡಿಕೇರಿ, ಪಿನ್-571201, ಕೊಡಗು ಜಿಲ್ಲೆ ಇಲ್ಲಿ ಸಲ್ಲಿಸಬಹುದು ಎಂದು ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಆಯುಷ್…
ವಿರಾಜಪೇಟೆ ಫೆ.20: ವಿರಾಜಪೇಟೆಯ ತೆಲುಗರ ಬೀದಿಯಲ್ಲಿರುವ ಇತಿಹಾಸ ಪ್ರಸಿದ್ಧ ದಕ್ಷಿಣ ಮಾರಿಯಮ್ಮ ಮತ್ತು ಅಂಗಾಳ ಪರಮೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶಿವರಾತ್ರಿ ಮಹೋತ್ಸವ ಪ್ರಯುಕ್ತ ಪಲ್ಲಕ್ಕಿ ಉತ್ಸವ ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ನಡೆದು ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ ಅತ್ಯಂತ ವಿಜ್ರಂಭಣೆಯಿಂದ ನಡೆಯಿತು. ಸಂಜೆ ನಡೆದ ಪಲ್ಲಕ್ಕಿ ಉತ್ಸವದ ಮೆರವಣಿಗೆಯಲ್ಲಿ ಮಹಿಳೆಯರು ನವದಾನ್ಯಗಳ ಕಳಸ ಹೊತ್ತು ತೆಲುಗರ ಬೀದಿಯಿಂದ ಹೊರಟು ಮಾರಿಯಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಮೆರವಣಿಗೆಯಲ್ಲಿ ವಿವಿಧ ವಾದ್ಯಗೋಷ್ಟಿಗಳೊಂದಿಗೆ, ಚಂಡೆಮೇಳ, ಕಲಾ ತಂಡಗಳು ಮೆರುಗು ನೀಡಿದವು.
ಮಡಿಕೇರಿ ಫೆ.20 : ರಾಜ್ಯ ಸರ್ಕಾರ ತನ್ನ ಬಜೆಟ್‍ನಲ್ಲಿ ‘ನೇರ ವೇತನ ಪಾವತಿ’ಯನ್ನು ಜಾರಿಗೊಳಿಸದೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ವಂಚಿಸಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಈರಪ್ಪ ಶೆಟ್ಟಿ ಆರೋಪಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಫೆ.22 ರಂದು ‘ನಮ್ಮ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ’ ಘೋಷ ವಾಕ್ಯದೊಂದಿಗೆ ಮುಖ್ಯಮಂತ್ರಿಗಳ ಮನೆ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ಮುಷ್ಕರ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವ್ಯಾಪಿ ನಗರಸಭೆ, ಪಟ್ಟಣ ಪಂಚಾಯ್ತಿ, ನಗರಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ 13 ಸಾವಿರಕ್ಕೂ ಹೆಚ್ಚಿನ ಮಂದಿ ನೀರ ಗಂಟಿಗಳಾಗಿ, ಡಾಟಾ ಆಪರೇಟರ್, ಸ್ವಚ್ಛತಾ ನೌಕರರಾಗಿ, ವಾಹನ ಚಾಲಕರಾಗಿ, ಬೀದಿ ದೀಪ ನಿರ್ವಾಹಕರು, ಗಾರ್ಡನರ್‍ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸೇವಾಭದ್ರತೆ ಇಲ್ಲದೆ ಸಂಕಷ್ಟದಲ್ಲಿರುವ ಇವರಿಗೆ ನೇರ ಪಾವತಿಯ ಮೂಲಕ ಸೇವಾ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು. ಈ ಹಿಂದೆ ಪ್ರಮುಖ ಬೇಡಿಕೆಗಳ…
ಮಡಿಕೇರಿ ಫೆ.20 : ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ಫೆ.28ರಂದು ನಗರದ ಪೊಲೀಸ್ ‘ಮೈತ್ರಿ ಭವನ’ದಲ್ಲಿ ನಡೆಯಲಿದೆಯೆಂದು ಸಂಘದ ಉಪಾಧ್ಯಕ್ಷರಾದ ಬಿ.ಆರ್. ಲಿಂಗಪ್ಪ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮಹಾಸಭೆ ಅಂದು ಬೆಳಗ್ಗೆ 10 ಗಂಟೆಗೆ ಸಂಘದ ಅಧ್ಯಕ್ಷ ಎ.ಕೆ.ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ವಿಶೇಷ ಆಹ್ವಾನಿತರಾಗಿ ಬೆಂಗಳೂರಿನ ಕರ್ನಾಟಕ ರಾಜ್ಯ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಬಿ.ಕೆ.ಶಿವರಾಮ್, ರಾಜ್ಯ ಕಾರ್ಯದರ್ಶಿ ಕುಮಾರ್ ಎಸ್. ಕರ್ನಿಂಗ್, ಮೈಸೂರು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಮರಿಸ್ವಾಮಿ, ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಗೌರವಾಧ್ಯಕ್ಷರಾದ ಎಂ.ಎ.ಅಪ್ಪಯ್ಯ ಪಾಲ್ಗೊಳ್ಳಲಿದ್ದಾರೆಂದು ಮಾಹಿತಿಯನ್ನಿತ್ತರು. ಸನ್ಮಾನ-ಪ್ರತಿಭಾ ಪುರಸ್ಕಾರ- ಮಹಾಸಭೆಯಲ್ಲಿ ಸಂಘದ ಹಿರಿಯ 10 ಮಂದಿ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ ಮತ್ತು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅತ್ಯಧಿಕ ಅಂಕ ಗಳಿಸಿದ…
ಮಡಿಕೇರಿ ಫೆ.20 : ವಿಜಯ ಕರ್ನಾಟಕ ಮೈಸೂರು ಬ್ಯುರೋ ಸ್ಥಾನಿಕ ಸಂಪಾದಕ ಐತಿಚೆಂಡ ರಮೇಶ್ ಉತ್ತಪ್ಪ ಅವರ ಸಹೋದರ , ಮಾಜಿ ಯೋಧ ಐತಿಚಂಡ ತಿಮ್ಮಯ್ಯ (55) ಸೋಮವಾರ ನಿಧನರಾದರು. ಶ್ರೀಲಂಕಾದಲ್ಲಿ ಇಂಡಿಯನ್ ಪೀಸ್ ಕೀಪಿಂಗ್ ಫೋರ್ಸ್‌ನಲ್ಲಿ LTTE ವಿರುದ್ಧ ಹಾಗೂ ಅಮೃತಸರ ಆಪರೇಷನ್ ಬ್ಲೂಸ್ಟಾರ್ ನಲ್ಲಿ ತಿಮ್ಮಯ್ಯ ಭಾಗವಹಿಸಿದ್ದರು. ಸಿಯಾಚಿನ್ ಸೇರಿದಂತೆ ವಿವಿಧೆಡೆ ಕರ್ತವ್ಯ ನಿರ್ವಹಿಸಿದ್ದರು. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಸ್ವಗ್ರಾಮ ಕರಡದಲ್ಲಿ ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.






