ಲೇಖಕ: admin

ಸುಂಟಿಕೊಪ್ಪ ಫೆ.19 : ಕೆದಕಲ್ 7ನೇ ಮೈಲು ಗ್ರಾಮದ ಮಹಾದೇವ ಈಶ್ವರ ದೇವಾಲಯದಲ್ಲಿ ಶಿವರಾತ್ರಿಯ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ಶೃದ್ಧಾಭಕ್ತಿಯಿಂದ ನಡೆಯಿತು. ಪ್ರಧಾನ ಅರ್ಚಕ ಅವಿನಾಶ್ ಆರಾಧ್ಯ ಅವರ ನೇತೃತ್ವದಲ್ಲಿ ಬೆಳಗ್ಗಿನಂದಲೇ ವಿಶೇಷ ಪೂಜೆ, ಹೋಮ ಹವನಗಳು ಜರುಗಿತು. ಮಹಾಮಂಗಳಾರತಿ ನಂತರ ಪ್ರಸಾದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು. ಸಂಜೆ ಶಿವನ ಸ್ಮರಣೆ, ಭಜನೆಯೊಂದಿಗೆ ಭಕ್ತರು ಜಾಗರಣೆ ಮಾಡಿದರು. ದೇವಸ್ಥಾನ ಸಮಿತಿ ಅಧ್ಯಕ್ಷ ಸಿ.ಎ.ಕರುಂಬಯ್ಯ ಸೇರಿದಂತೆ ಪದಾಧಿಕಾರಿಗಳು ಇದ್ದರು.

Read More

ಸುಂಟಿಕೊಪ್ಪ ಫೆ.19 : ಸುಂಟಿಕೊಪ್ಪ ಬಿಜೆಪಿಯ 2 ಶಕ್ತಿ ಕೇಂದ್ರದ ವತಿಯಿಂದ ವಿಜಯ ಸಂಕಲ್ಪ ಅಭಿಯಾನವನ್ನು ಕನ್ನಡ ವೃತ್ತದಲ್ಲಿ ಭಾನುವಾರ ನಡೆಸಲಾಯಿತು. ಬಿಜೆಪಿ ಕಾರ್ಯಕರ್ತರು ಧ್ವಜ ಹಿಡಿದು ರಾಷ್ಟ್ರ ಹಾಗೂ ರಾಜ್ಯ ನಾಯಕರುಗಳಿಗೆ ಜೈಕಾರ ಹಾಕಿದರು. ಅಂಗಡಿ, ಮನೆಗಳಿಗೆ ಬಿಜೆಪಿ ಕಾರ್ಯಕರ್ತರು ತೆರಳಿ ಸರಕಾರದ ಅಭಿವೃದ್ದಿ ಯೋಜನೆಗಳ ಕರಪತ್ರಗಳನ್ನು ವಿತರಿಸಿದರು. ಮತ್ತೋಮ್ಮೆ ಬಿಜೆಪಿಗೆ ಮತ ಚಲಾಯಿಸುವ ಮೂಲಕ ಅಧಿಕಾರಕ್ಕೇರಿಸುವಂತೆ ಮನವಿ ಮಾಡಿದರು. ಈ ಸಂದರ್ಭ ಗ್ರಾ.ಪಂ ಬಿಜೆಪಿ ಬೆಂಬಲಿತ ಸದಸ್ಯರುಗಳಾದ ಪಿ.ಆರ್.ಸುನಿಲ್ ಕುಮಾರ್, ವಸಂತಿ, ಗೀತಾ, ಬಿಜೆಪಿ ಯುವಮೋರ್ಚಾ ಅದ್ಯಕ್ಷ ವಿಘ್ನೇಶ್ ಹಾಗೂ ಕಾರ್ಯಕರ್ತರು ಇದ್ದರು.

Read More

ಮಡಿಕೇರಿ ಫೆ.19 : ಪರಿಶಿಷ್ಟ 101 ಜಾತಿಗೆ ಒಳ ಮೀಸಲಾತಿ ಕಲ್ಪಿಸಬೇಕೆಂದು ಹಲವು ದಶಕಗಳಿಂದ ಹೋರಾಟ ಮಾಡಿಕೊಂಡು ಬಂದಿರುವ ಹಿನ್ನೆಲೆ, ಸದಾಶಿವ ಆಯೋಗದ ವರದಿ ಜಾರಿಗೆ ಸರ್ಕಾರದ ಸಹಮತ ಇದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಕೊಡವ 18 ಭಾಷಿಕ ಜನಾಂಗದ ಸಮುದಾಯಗಳ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಗ್ರಾಮದ ಕೊಡಗು ಹೆಗ್ಗಡೆ ಸಮಾಜದ ಸಭಾಂಗಣದಲ್ಲಿ ಭಾನುವಾರ ನಡೆದ ‘ಒತ್ತೋರ್ಮೆ ಕೂಟ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಸದಾಶಿವ ಆಯೋಗ ವರದಿ ಜಾರಿ ಸಂಬoಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ, ಧ್ವನಿ ಇಲ್ಲದವರಿಗೆ ಧ್ವನಿ ನೀಡಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದು ಸಮಾಜ ಕಲ್ಯಾಣ ಸಚಿವರು ನುಡಿದರು. ಕೊಡಗು ಜಿಲ್ಲೆಯಲ್ಲಿ ಕೊಡವ ಭಾಷೆ ಮಾತನಾಡುವ 18 ಸಣ್ಣ ಸಣ್ಣ ಸಮಾಜಗಳು ಇದ್ದು, ಈ ಸಮಾಜಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕು ಎಂಬ ಬೇಡಿಕೆಗೆ ಸ್ಪಂದಿಸಿ…

Read More

ಮಡಿಕೇರಿ ಫೆ.19 : ಬೆಟ್ಟ ಗುಡ್ಡಗಳಲ್ಲಿ ರೆಸಾರ್ಟ್ಗಳನ್ನು ನಿರ್ಮಾಣ ಮಾಡುವ ಮೂಲಕ ಸುಂದರ ಪ್ರಕೃತಿ ಸೌಂದರ್ಯವನ್ನು ಹೊಂದಿರುವ ಕೊಡಗನ್ನು ನಾಶ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಎಂ.ಸಿ.ನಾಣಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ನಗರದ ಪತ್ರಿಕಾಭವನ ಸಭಾಂಗಣದಲ್ಲಿ ನಡೆದ ಕೊಡವ ಮಕ್ಕಡ ಕೂಟ ಮತ್ತು ಕಾವೇರಿಕೇರಿ ಕೊಡವ ಸಂಘದ ಸಂಯುಕ್ತಾಶ್ರಯದಲ್ಲಿ ವಕೀಲ, ಕ್ರೀಡಾಪಟು ಹಾಗೂ ಬರಹಗಾರ ಬಾಳೆಯಡ ಕಿಶನ್ ಪೂವಯ್ಯ ಅವರು ಬರೆದಿರುವ “ವ್ಯಕ್ತಿ ಪರಿಚಯ ಮತ್ತು ಸಾಮಾಜಿಕ ಚಿಂತನೆ” ಹಾಗೂ “ರಾಜಕೀಯ ಮತ್ತು ಪ್ರಕೃತಿ” ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರ ಮಾತನಾಡಿದರು. ಇಂದು ಯಾವುದೇ ವಿಧದಲ್ಲೂ ಪುಟ್ಟ ಜಿಲ್ಲೆ ಕೊಡಗಿನ ಪ್ರಕೃತಿಯನ್ನು ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಬೇರೆ ಜಿಲ್ಲೆಗಳನ್ನು ಹೋಲಿಸಿದರೆ ಕೊಡಗು ಹವಾನಿಯಂತ್ರಿತ ಗುಣವನ್ನು ಹೊಂದಿದೆ. ಅತ್ಯಂತ ಶ್ರೇಷ್ಠತೆಯನ್ನು ಹೊಂದಿರುವ ಇಲ್ಲಿನ ಪರಿಸರ ಮತ್ತು ಬೆಟ್ಟ ಗುಡ್ಡಗಳು ರೆಸಾರ್ಟ್ ಗಳ ನಿರ್ಮಾಣದಿಂದ ನಾಶವಾಗುತ್ತಿದೆ. ಪರಿಸ್ಥಿತಿ ಹೀಗಿದ್ದರೂ ಜನಪ್ರತಿನಿಧಿಗಳು ಮಾತ್ರ ಏನನ್ನೂ ಮಾತನಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಭ್ರಷ್ಟಾಚಾರ ಮಿತಿ ಮೀರಿದೆ,…

Read More

ಮಡಿಕೇರಿ ಫೆ.18 : ಮಡಿಕೇರಿ ಸಮೀಪದ ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದಲ್ಲಿ ಮಹಾಶಿವರಾತ್ರಿ ಮಹೋತ್ಸವ ಶನಿವಾರ ಶ್ರದ್ಧಾಭಕ್ತಿಯಿಂದ ನಡೆಯಿತು. ಮಹಾ ಶಿವರಾತ್ರಿ ಆರಾಧನೆ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗಿನಿಂದಲೇ ವಿವಿಧ ಪೂಜಾ ವಿಧಿ ವಿಧಾನಗಳು ಜರುಗಿದವು. ಮೇಕೇರಿಯ ಶಕ್ತಿನಗರ, ಕಾವೇರಿ ಬಡಾವಣೆ, ಸುಭಾಶ್ ನಗರ ಮತ್ತು ಮೇಕೇರಿ ಬಿಳಿಗೇರಿ ಜಂಕ್ಷನ್‌ನಿಂದ ಚಂಡೆ ವಾದ್ಯ ಸಹಿತ ಮೆರವಣಿಗೆಯಲ್ಲಿ ಬಂದ ಭಕ್ತಾದಿಗಳು ಹೊರೆ ಕಾಣಿಕೆ ಸಮರ್ಪಿಸಿದರು. ಮಹಾ ಮೃತ್ಯುಂಜಯ ಹೋಮ, ರುದ್ರಾಭಿಷೇಕ, ಮಹಾಪೂಜೆ ನೆರವೇರಿತು. ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ಶ್ರೀ ಗೌರಿಶಂಕರನ ಕೃಪೆಗೆ ಪಾತ್ರರಾದರು. ನೆರೆದಿದ್ದ ಭಕ್ತಾಧಿಗಳಿಗೆ ಮಧ್ಯಾಹ್ನ ಅನ್ನ ಸಂತರ್ಪಣೆ ನೆರವೇರಿತು. ಸಂಜೆ ವಿವಿಧ ಪೂಜೆಯೊಂದಿಗೆ ರುದ್ರಾಭಿಷೇಕ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ ನಡೆಯಿತು. ಶಿವರಾತ್ರಿ ಜಾಗರಣೆ ಹಿನ್ನೆಲೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ “ಯಕ್ಷಗಾನ ನಾಟ್ಯ ವೈಭವ” ಎಂಬ ವಿನೂತನ ಪ್ರದರ್ಶನ ನೆರೆದಿದ್ದವರ ಗಮನ ಸೆಳೆಯಿತು. ಫೆ.19 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿವಿಧ ದೇವತಾರಾಧನೆಯೊಂದಿಗೆ…

Read More

ಮಡಿಕೇರಿ ಫೆ.18 : ಕೊಡಗು ಹೆಗ್ಗಡೆ ಸಮಾಜದ ಆಡಳಿತ ಮಂಡಳಿಯ ನೂತನ ಕಛೇರಿಯನ್ನು ಹಿರಿಯರಾದ ಡಾ.ತಂಬಂಡ ವಿಜು ಪೂಣಚ್ಚ ಉದ್ಘಾಟಿಸಿದರು. ಹೆಗ್ಗಡೆ ಸಮಾಜದ ಜಿಲ್ಲಾಧ್ಯಕ್ಷ ಪಡಿಞರಂಡ ಅಯ್ಯಪ್ಪ ಮಾತನಾಡಿ ಸಮಾಜದ ಅಭ್ಯುದಯಕ್ಕೆ  ಎಲ್ಲರು ಕೈಜೋಡಿಸುವಂತೆ ಕರೆ ನೀಡಿದರು. ಕುಲಬಾಂಧವರು ಜನಾಂಗದ ಮೇಲಿನ ಅಭಿಮಾನ ಬೆಳೆಸಿಕೊಳ್ಳವುದರೊಂದಿಗೆ ದೇಶದ ಐಕ್ಯತೆಗೆ ಪಣ ತೊಡಬೇಕು ಎಂದರು. ಸಮಾಜದ ಉಪಾಧ್ಯಕ್ಷ ಕೊರಕುಟ್ಟಿರ ಸರ ಚಂಗಪ್ಪ, ಕಾರ್ಯದರ್ಶಿ ಚಂಗಚಂಡ ಕಟ್ಟಿಕಾವೇರಪ್ಪ. ಖಜಾಂಚಿ ಪಾನಿಕುಟ್ಟಿರ ಕುಟ್ಟಪ್ಪ, ನಿರ್ದೇಶಕರಾದ ಪಡಿಞರಂಡ ಪ್ರಭುಕುಮಾರ್, ಚರ್ಮಂಡ ಅಪ್ಪುಣು ಪೂವಯ್ಯ, ಮುರೀರ ಕುಶಾಲಪ್ಪ, ಕೊಪ್ಪಡ ಪಳಂಗಪ್ಪ ಕೊಂಗೆಪಂಡ ರವಿ, ಪದಿಕಂಡ ಸುನಾ, ಕೊಕ್ಕೇರ ಜಗನ್ನಾಥ, ಪುದಿಯತಂಡ ಜಾಲಿ, ಮುರೀರ ಶಾಂತಿ, ಪ್ರಮುಖರಾದ ಮಲ್ಲಾಡ ಕಟ್ಟಿ ಪೂಣಚ್ಚ,  ಕೊರಕುಟ್ಟಿರ ಮೀನ,  ಕವಿತಾ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ ಫೆ.18 : ವಿರೋಧದ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಅಶ್ವಥ ನಾರಾಯಣ ಅವರು ನೀಡಿರುವ ಹೇಳಿಕೆ ಖಂಡನೀಯವೆoದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಉಸ್ಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿದ್ದರಾಮಯ್ಯರ ಕುರಿತು ಸಚಿವರು ನೀಡಿರುವ ಪ್ರಚೋದನಾಕಾರಿ ಹೇಳಿಕೆ ಬಿಜೆಪಿಯ ಹೊಡಿ, ಬಡಿ ಸಂಸ್ಕೃತಿಯನ್ನು ಪ್ರತಿಬಿಂಬಿಸಿದೆ ಎಂದು ಟೀಕಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಇತಿಹಾಸವನ್ನು ಕೆಣಕಿ ಕ್ಷುಲ್ಲಕ ರಾಜಕಾರಣವನ್ನು ಮಾಡಲಾಗುತ್ತಿದೆ. ದೇಶದ ಭವಿಷ್ಯಕ್ಕೆ ಏನು ಬೇಕು ಎಂದು ಚಿಂತನೆ ಮಾಡದೆ ಆಗಿ ಹೋದ ಘಟನಾವಳಿಗಳನ್ನು ತಿರುಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇರುವ ಜನಪ್ರಿಯತೆಯನ್ನು ಸಹಿಸಲಾಗದೆ ಸೋಲಿನ ಹತಾಶೆಯಲ್ಲಿರುವ ಬಿಜೆಪಿ ಮುಖಂಡರು ಬಾಲಿಶ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಚಿವ ಅಶ್ವಥ ನಾರಾಯಣ ಅವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಮುಖ್ಯಮಂತ್ರಿಗಳು ಸಂಪುಟದಿಂದ ಕೈಬಿಡಬೇಕೆಂದು…

Read More

ಶನಿವಾರಸಂತೆ ಫೆ.18 : ಕಾಡಾನೆಯೊಂದು ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿ ವ್ಯಾಪ್ತಿಯ ಎಳನೀರುಗುಂಡಿ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ ನೀರಾವರಿ ಸೌಲಭ್ಯಕ್ಕಾಗಿ ನಿರ್ಮಿಸಿದ್ದ ನೀರಿನ ತೊಟ್ಟಿಗೆ ಸುಮಾರು 20 ವರ್ಷದ ಹೆಣ್ಣಾನೆಯೊಂದು ಬಿದ್ದು ಮೃತಪಟ್ಟಿದೆ. ಪಕ್ಕದ ಮೀಸಲು ಅರಣ್ಯದಿಂದ ಬಂದ 3 ಕಾಡಾನೆಗಳು ಕಾಫಿ ತೋಟದೊಳಗೆ ನುಸುಳಿದೆ. ಈ ಸಂದರ್ಭ ಹೆಣ್ಣಾನೆಯೊಂದು ಆಕಸ್ಮಿಕವಾಗಿ ಸುಮಾರು 10 ಅಡಿಯಷ್ಟು ಆಳದ ನೀರಿನ ತೊಟ್ಟಿಯೊಳಗೆ ಬಿದ್ದಿದೆ. ಹೊರ ಬರಲು ಸಾಧ್ಯವಾಗದ ಆನೆ ಉಸಿರುಗಟ್ಟಿ ಮೃತಪಟ್ಟಿದೆ. ಶನಿವಾರ ಬೆಳಗ್ಗೆ ತೋಟದ ಕಾರ್ಮಿಕರು ನೀರಿನ ತೊಟ್ಟಿಯಲ್ಲಿ ಆನೆ ಸತ್ತು ಬಿದ್ದಿರುವುದನ್ನು ಗಮನಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಶನಿವಾರಸಂತೆ ಅರಣ್ಯ ವಲಯಾಧಿಕಾರಿ ಪ್ರಪುಲ್‌ಕುಮಾರ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಆನೆಯ ಮೃತದೇಹವನ್ನು ಹೊರ ತೆಗೆದರು. ಶನಿವಾರಸಂತೆ ಪಶುವೈದ್ಯಾಧಿಕಾರಿ ಡಾ.ಸತೀಶ್ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಪಕ್ಕದ ಮೀಸಲು ಅರಣ್ಯದಲ್ಲಿ ಅಂತಿಮ ಸಂಸ್ಕಾರ ಮಾಡಲಾಯಿತು. ನೀರಿನ ತೊಟ್ಟಿ…

Read More

ಮಡಿಕೇರಿ ಫೆ.18 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಫೆ.20 ರಂದು ಮಡಿಕೇರಿಯಲ್ಲಿ ನಡೆಯುವ ಸರ್ವಜ್ಞ ಜಯಂತಿಯ ಬಗ್ಗೆ ಕುಲಾಲ ಕುಂಬಾರರ ಸಮಾಜಕ್ಕೆ ಯಾವುದೇ ಮಾಹಿತಿಯನ್ನು ನೀಡದೆ ನಿರ್ಲಕ್ಷಿಸಲಾಗಿದೆ ಎಂದು ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಮಾಜದ ಅಧ್ಯಕ್ಷ ಎಂ.ಡಿ.ನಾಣಯ್ಯ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಶ್ರೀ ಸರ್ವಜ್ಞ ಅವರು ಕುಂಬಾರ ಜನಾಂಗಕ್ಕೆ ಸೇರಿದವರಾಗಿದ್ದು, ಆಹ್ವಾನ ಪತ್ರಿಕೆಯಲ್ಲಿ ಕುಂಬರ ಜನಾಂಗದ ಹೆಸರನ್ನು ಬಳಸದೇ ಇರುವುದು ಖಂಡನೀಯ. ಪ್ರತಿವರ್ಷ ಸರ್ವಜ್ಞ ಜಯಂತಿ ಕಾರ್ಯಕ್ರಮಕ್ಕೆ ಕುಲಾಲ ಕುಂಬಾರರ ಸಮಾಜದ ಪ್ರಮುಖರನ್ನು ಆಹ್ವಾನಿಸಲಾಗುತ್ತಿತ್ತು. ಆದರೆ ಈ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾವುದೇ ಮಾಹಿತಿಯನ್ನು ಸಮಾಜಕ್ಕೆ ನೀಡಲಿಲ್ಲ. ಅಲ್ಲದೆ ಕಾರ್ಯಕ್ರಮದ ಪೂರ್ವಭಾವಿ ಸಭೆಗೆ ಆಹ್ವಾನಿಸದೆ ಮತ್ತು ಆಹ್ವಾನ ಪತ್ರಿಕೆಯಲ್ಲಿ ಸಮಾಜದ ಹೆಸರನ್ನು ಬಳಸದೆ ಕುಂಬಾರ ಜನಾಂಗವನ್ನು ನಿರ್ಲಕ್ಷಿಸಿದ್ದಾರೆ ಎಂದು ದೂರಿದ್ದಾರೆ. ಕುಂಬಾರ ಸಮಾಜವನ್ನು ಕಡೆಗಣಿಸಿರುವುದರಿಂದ ಸೋಮವಾರ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೆ ಇರಲು ನಿರ್ಧರಿಸಿರುವುದಾಗಿ ನಾಣಯ್ಯ ತಿಳಿಸಿದ್ದಾರೆ. ಇಲಾಖೆಯಿಂದ ಈ ರೀತಿಯ ತಪ್ಪುಗಳು…

Read More

ನಾಪೋಕ್ಲು ಫೆ.7 : ಕೊಂಡಂಗೇರಿ ದರ್ಗಾ ಶರೀಫ್ ಉರೂಸ್ ಗೆ ಚಾಲನೆ ನೀಡಲಾಯಿತು. ಸೈಯದ್ ಹಸನ್ ಅಟಕೋಯ ಹಾಗೂ ಭಕ್ತರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಉರೂಸ್ ಗೆ ಚಾಲನೆ ದೊರೆಯಿತು. ನಂತರ ಮಾತನಾಡಿದ ಸೈಯದ್ ಹಸನ್ ಅಟಕೋಯ ಪ್ರವಾದಿ ಮಹಮ್ಮದ್ ಪೈಗಂಬರ್ ರವರ ಕುಟುಂಬ ಪರಂಪರೆಯ ಸಂತತಿ ಒಬ್ಬರು ಇಲ್ಲಿ ಸಮಾಧಿಯಾಗಿರುವುದು ನಮ್ಮೆಲ್ಲರ ಸೌಭಾಗ್ಯ. ಮಹಾತ್ಮರು ಬೋಧಿಸಿದ ಮಾನವೀಯ ಮೌಲ್ಯಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಜಮಾಯತ್ ಅಧ್ಯಕ್ಷ ಪಿ.ಈ.ಮೊಹಮ್ಮದ್ ಹಾಜಿ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಸಹಾಯಕ ಖಾಜಿ ಕೆ.ಎಸ್.ಶಾದುಲಿ ಫೈಸಿ, ತಕ್ಕ ಮುಖ್ಯಸ್ಥರಾದ ಆರ್.ಕೆ.ಅಹಮದ್ ಮುಸ್ಲಿ, ಎ.ಹೆಚ್. ಇಕ್ಬಾಲ್, ಇಬ್ರಾಹಿಂ, ಉಪಾಧ್ಯಕ್ಷ ಪಿ.ಎಚ್.ಅಬ್ಬಾಸ್, ಪ್ರಧಾನ ಕಾರ್ಯದರ್ಶಿ ಕೆ.ವೈ.ಮೊಹಮ್ಮದ್ ಹಾಜಿ, ಕೋಶಾಧಿಕಾರಿ ಎ.ಯ0.ಅಬ್ದುಲ್ಲಾ, ಮುದರೀಸ್ ಜುನೈದ್ ಸಖಾಫಿ, ಖತೀಬರಾದ ಯಾಸಿರ್ ಸಖಾಫಿ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ  

Read More