ಮಡಿಕೇರಿ ಜ.18 : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿತು. ಮುಂಜಾನೆ ಕಾಶಿಲಿಂಗಕ್ಕೆ ಕ್ಷೀರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ ಜರುಗಿದವು. ಮಧ್ಯಾಹ್ನ ಮಹಾಮಂಗಳಾರತಿ ನಂತರ ಭಕ್ತಾಧಿಗಳು ಪಂಚಲಿಂಗಕ್ಕೆ ಪವಿತ್ರ ಗಂಗಾಜಲ ಅಭಿಷೇಕ ಮತ್ತು ಶಿವನ ಮೂರ್ತಿಗೆ ಪುಷ್ಪಾರ್ಚನೆ ಸೇವೆ ಸಲ್ಲಿಸಿದರು. ಸಂಜೆ ಭಕ್ತಾಧಿಗಳಿಂದ ದೀಪಲಂಕಾರ ಹಾಗೂ ತಾಯಿಯ ದರ್ಶನ ನೆರವೇರಲಿದೆ. ಜಗರಣೆ ಪ್ರಯುಕ್ತ ರಾತ್ರಿಯಿಂದ ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಲೇಖಕ: admin
ಮಡಿಕೇರಿ ಫೆ.18 : ಮಡಿಕೇರಿ ನಗರದ ದಾಸವಾಳ ಬಡಾವಣೆಯಲ್ಲಿರುವ ಶ್ರೀವೀರಭದ್ರ ಮುನೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಮಹಾಶಿವರಾತ್ರಿ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆ ಮಡಿವಾಳರ ಅಭಿವೃದ್ಧಿ ಸಂಘದ ಸಹಭಾಗಿತ್ವದಲ್ಲಿ ಮಹಾಗಣಪತಿ ಹೋಮ ನೆರವೇರಿತು. ನಂತರ ನಗರದ ಗಣಪತಿ ಬೀದಿಯಿಂದ ಬನ್ನಿಮಂಟಪ, ಮಹದೇವಪೇಟೆ, ಖಾಸಗಿ ಬಸ್ ನಿಲ್ದಾಣ ವೃತ್ತದಿಂದ ಜೂನಿಯರ್ ಕಾಲೇಜು ರಸ್ತೆ ಮಾರ್ಗವಾಗಿ ದೇವಾಲಯದ ವರೆಗೆ ವೀರಭದ್ರ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಮಧ್ಯಾಹ್ನ ಮಹಾಪೂಜೆ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ::: ದ್ವಾರ ಉದ್ಘಾಟನೆ ::: ಶ್ರೀ ಮಡಿವಾಳ ಮಾಚಿದೇವ ಮಹಾದ್ವಾರವನ್ನು ಉದ್ಘಾಟಿಸಲಾಯಿತು. ಸಂಜೆ ಜಾಮ ಪೂಜೆ ಮತ್ತು ರಂಗಪೂಜೆ ನೆರವೇರಲಿದ್ದು, ಜಾಗರಣೆ ಪ್ರಯುಕ್ತ ಮಹಾಮೃತ್ಯುಂಜಯ ಹೋಮ ಸಭಾ ಕಾರ್ಯಕ್ರಮ ಮತ್ತು ನೃತ್ಯ ಸ್ಪರ್ಧೆ ನಡೆಯಲಿದೆ.
ಮಡಿಕೇರಿ ಫೆ.18 : ಕೊಡಗು ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮಾ. 4 ಮತ್ತು 5 ರಂದು ಗೋಣಿಕೊಪ್ಪಲಿನ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. ಈ ಸಮ್ಮೇಳನದ ಲಾಂಛನವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಕೆ.ಜಿ. ಬೋಪಯ್ಯ ಅನಾವರಣಗೊಳಿಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್, ಗೌರವ ಕಾರ್ಯದರ್ಶಿಗಳಾದ ಎಸ್.ಐ. ಮುನೀರ್ ಅಹ್ಮದ್, ರೇವತಿ ರಮೇಶ್, ಸಮ್ಮೇಳನದ ಹಣಕಾಸು ಸಮಿತಿ ಸಂಚಾಲಕ ಬಿ.ಎನ್. ಪ್ರಕಾಶ್ ಹಾಜರಿದ್ದರು. ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಬೋಪಯ್ಯ ಅವರು ನೂತನ ಪೊನ್ನಂಪೇಟೆ ತಾಲೂಕಿನಲ್ಲಿ ಮೊದಲ ಬಾರಿ ಜಿಲ್ಲಾ ಸಮ್ಮೇಳನ ನಡೆಯುತ್ತಿದ್ದು, ಇದು ಕನ್ನಡಿಗರ ಹಬ್ಬವಾಗಿದೆ. ಎಲ್ಲಾ ಸಂಘ ಸಂಸ್ಥೆಗಳ, ಸಮುದಾಯಗಳ, ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧ್ಯಾಪಕರು, ಕನ್ನಡ ಅಭಿಮಾನಿಗಳು, ಸರ್ಕಾರಿ ಅಧಿಕಾರಿಗಳು ಸೇರಿ ಉತ್ತಮವಾದಂತಹ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂದೇಶ ನೀಡುವಂತಹ ಸಮ್ಮೇಳನ ಇದಾಗಬೇಕು ಎಂದರು. ಈ ಲಾಂಛನವನ್ನು ಜಿಲ್ಲೆಯ…
ಮಡಿಕೇರಿ ಫೆ.18 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ‘ಶ್ರೀ ರುದ್ರ ಹೋಮ’ ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿಂದಲೇ ವಿವಿಧ ಪೂಜಾ ವಿಧಿವಿಧಾನಗಳು ಜರುಗಿದವು. ಮಧ್ಯಾಹ್ನ ಮಹಾಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು.
ಗ್ವಾಲಿಯರ್: ಭಾರತೀಯ ವಾಯುಪಡೆಯ ಸಿ-17 ಗ್ಲೋಬ್ ಮಾಸ್ಟರ್ ಕಾರ್ಗೋ ವಿಮಾನವು ಇಂದು ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಭಾರತಕ್ಕೆ ತಂದಿದೆ. ಚೀತಾಗಳು ಭಾರತಕ್ಕೆ ಮರು ಪರಿಚಯಿಸುವ ಅಂತರ್ ಸರ್ಕಾರಿ ಒಪ್ಪಂದದ ಭಾಗವಾಗಿ 12 ದಕ್ಷಿಣ ಆಫ್ರಿಕಾದ ಚಿರತೆಗಳು ಇಂದು ಮಧ್ಯಪ್ರದೇಶದ ಗ್ವಾಲಿಯರ್‌ಗೆ ಆಗಮಿಸಿವೆ.
ಮಡಿಕೇರಿ ಫೆ.18 : ನಗರದ ಬ್ರಹ್ಮಕುಮಾರಿ ಲೈಟ್ ಹೌಸ್‍ನಲ್ಲಿ ಮಹಾಶಿವರಾತ್ರಿಯ ಅಂಗವಾಗಿ ತ್ರಿಮೂರ್ತಿ ಶಿವನ ಧ್ವಜಾರೋಹಣ ನೆರವೇರಿಸಲಾಯಿತು. ನಂತರ ಲೈಟ್ ಹೌಸ್‍ನ ಜಿಲ್ಲಾ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ಗಾಯತ್ರಿ ಜೀ ಅವರು ಈಶ್ವರೀಯ ಸಂದೇಶವನ್ನು ನೀಡಿ ಮಹಾಶಿವರಾತ್ರಿಯ ಆಚರಣೆಯ ಆಧ್ಯಾತ್ಮಿಕ ರಹಸ್ಯವನ್ನು ತಿಳಿಸಿದರು. ಈ ಸಂದರ್ಭ ನಿವೃತ್ತ ಏರ್ ಮಾರ್ಷಲ್ ನಂದಾಕಾರ್ಯಪ್ಪ, ಸ್ತ್ರೀರೋಗ ತಜ್ಞೆ ಡಾ.ಸುಮಂಗಲ, ಇಎನ್‍ಟಿ ಸರ್ಜನ್ ಡಾ.ಮೋಹನ್ ಅಪ್ಪಾಜಿ, ಸಮಾಜ ಸೇವಕ ಬೇಬಿ ಮ್ಯಾಥ್ಯು ಹಾಗೂ ಅನೇಕ ಬ್ರಹ್ಮಕುಮಾರ, ಕುಮಾರಿಯರು ಪಾಲ್ಗೊಂಡು ಪರಮಾತ್ಮನ ಸ್ಮೃತಿಯಿಂದ ಶಾಂತಿಯ ಸಂದೇಶ ಸಾರಿದರು. ವಿಶೇಷ ಪೂಜೆಯ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗವಾಯಿತು.
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ಜನತೆಗೆ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವೀಟ್ ಮಾಡಿರುವ ಅವರು, ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು. ಮಹಾಶಿವನ ಕೃಪಾಶೀರ್ವಾದ ಸದಾ ಈ ನಾಡಿನ ಜನತೆಯ ಮೇಲಿದ್ದು, ನಾಡಿನಲ್ಲಿ ಸದಾ ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಮಡಿಕೇರಿ ಫೆ.18 : ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸುವ ಸಭೆಯು ಫೆ.20 ರಂದು ಮಧ್ಯಾಹ್ನ 3.30 ಗಂಟೆಯಿಂದ ಸಂಜೆ 4.30 ಗಂಟೆವರೆಗೆ ಮಡಿಕೇರಿ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಡಿಕೇರಿ ಉಪ ವಿಭಾಗ (ಮಡಿಕೇರಿ ತಾಲ್ಲೂಕು) ವ್ಯಾಪ್ತಿಯ ಸಾರ್ವಜನಿಕರು/ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಕೋರಿದ್ದಾರೆ.
ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದು. ಈ ಹಬ್ಬವನ್ನು ಮಾಘ ಮಾಸದ ಬಹುಳ ಚತುರ್ದಶಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಶಿವರಾತ್ರಿ ಹಬ್ಬ ಬರುತ್ತದೆ. ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ,೪ ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ.ಇದರ ಮುಂದಿನ ದಿನ ವಿವಿಧ ರೀತಿಯ ಸಿಹಿ ತಿನಿಸುಗಳನ್ನು ತಯಾರಿಸುವರು.ತಂಬಿಟ್ಟು ಈ ಹಬ್ಬದ ಪ್ರಮುಖ ತಿನಿಸು. ಶಿವರಾತ್ರಿ, ಈ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ ಪೂಜಿಸುತ್ತಾರೆ. ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷ ಬಹುಳ ಚತುರ್ದಶಿ ಯಂದು ಬರುವ ಶಿವರಾತ್ರಿಯ ದಿನ ಭಕ್ತಾದಿಗಳು ಶಂಭೋ ಶಂಕರನನ್ನು ನೆನೆದು, ಪುನೀತರಾಗುತ್ತಾರೆ. ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನಿಗೆ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು. ಈ ಹಬ್ಬದಂದು ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ…
ಮಡಿಕೇರಿ ಫೆ.17 : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜನಸ್ನೇಹಿ ಬಜೆಟ್ ಮಂಡಿಸಿದ್ದಾರೆ. ಕೊಡಗು ಜಿಲ್ಲೆಯ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಕೋರಿ ಮನವಿ ನೀಡಲಾಗಿತ್ತು, ಅದಕ್ಕೆ ಸ್ಪಂದಿಸಿ ಮುಖ್ಯ ರಸ್ತೆಗಳ ಅಭಿವೃದ್ಧಿಗೆ 100 ಕೋಟಿ ರೂ. ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಪಶ್ಚಿಮಘಟ್ಟ ಜಿಲ್ಲೆಗಳಲ್ಲಿ 500 ಕಾಲು ಸೇತುವೆಗಳ ನಿರ್ಮಾಣಕ್ಕೆ 250 ಕೋಟಿ ರೂ.ಗಳನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹ. ರೈತ ಶಕ್ತಿ ಯೋಜನೆ ರೈತರಲ್ಲಿ ಆರ್ಥಿಕ ಚೈತನ್ಯವನ್ನು ತುಂಬಿದೆ. 400 ಕೋಟಿ ರೂ. ಮೀಸಲಿಡುವ ಮೂಲಕ ರೈತರಲ್ಲಿ ನವೋತ್ಸಾಹ ಮೂಡಿಸಿದೆ. (ಕೆ.ಜಿ.ಬೋಪಯ್ಯ, ಶಾಸಕರು, ವಿರಾಜಪೇಟೆ ಕ್ಷೇತ್ರ)






