ಮಡಿಕೇರಿ ಫೆ.17 : ಕೊಡಗಿನ ಜನರ ಎಲ್ಲಾ ನಿರೀಕ್ಷೆಗಳನ್ನು ಹುಸಿ ಮಾಡಲಾಗಿದೆ, ಇತರ ಜಿಲ್ಲೆಗಳನ್ನು ಹೋಲಿಕೆ ಮಾಡಿದರೆ ಕೊಡಗು ಜಿಲ್ಲೆಗೆ ಭಿಕ್ಷೆ ನೀಡುವಂತೆ ಕೇವಲ 100 ಕೋಟಿ ರೂ. ನೀಡಲಾಗಿದೆ. ಜಿಲ್ಲೆಯ ಎಲ್ಲಾ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ, ಇವುಗಳ ದುರಸ್ತಿಗೆ ಕನಿಷ್ಠ ಸಾವಿರ ಕೋಟಿ ರೂ.ಗಳನ್ನಾದರು ನೀಡಬೇಕಾಗಿತ್ತು. ಪ್ರತಿ ಮಳೆಗಾಲದಲ್ಲಿ ಕೊಡಗು ಅನೇಕ ಕಷ್ಟ, ನಷ್ಟಗಳನ್ನು ಅನುಭವಿಸುತ್ತದೆ. ಇಲ್ಲಿ ಹಲವು ಗಂಭೀರ ಸಮಸ್ಯೆಗಳಿದ್ದರೂ ಪರಿಹಾರೋಪಾಯಗಳನ್ನು ಸರ್ಕಾರ ಘೋಷಿಸಿಲ್ಲ. ವನ್ಯಜೀವಿ ದಾಳಿಯಿಂದ ಸಾಲು ಸಾಲು ಸಾವುಗಳಾಗುತ್ತಿದ್ದರೂ ಇದನ್ನು ನಿಯಂತ್ರಿಸಲು ಯೋಜನೆಯನ್ನು ರೂಪಿಸಿಲ್ಲ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆಯನ್ನು ಕಡೆಗಣಿಸಲಾಗಿದೆ. ಬಜೆಟ್ ರೂಪದಲ್ಲಿ ಚುನಾವಣಾ ಗಿಮಿಕ್ ಮಾಡುವಲ್ಲಿಯೂ ಸರ್ಕಾರ ವಿಫಲವಾಗಿದೆ. ಈ ರೀತಿಯ ನಿರ್ಲಕ್ಷö್ಯವನ್ನು ಗಮನಿಸಿದರೆ ಕೊಡಗು ಕರ್ನಾಟಕದೊಂದಿಗೆ ಇರಬೇಕೆ ಅಥವಾ ಬೇಡವೇ ಎನ್ನುವ ಪ್ರಶ್ನೆಯನ್ನು ಹುಟ್ಟು ಹಾಕಿದೆ. (ಪವನ್ ಪೆಮ್ಮಯ್ಯ, ಅಧ್ಯಕ್ಷರು, ಕೊಡಗು ರಕ್ಷಣಾ ವೇದಿಕೆ)
ಲೇಖಕ: admin
ಮಡಿಕೇರಿ ಫೆ.17 : ಚುನಾವಣೆ ಸಮೀಪಿಸುತ್ತಿರುವಂತೆಯೇ ಜನರ ಕಿವಿಗೆ ಹೂವು ಇಡುವ ರೀತಿಯ ಬಜೆಟ್ ನ್ನು ಮಂಡಿಸಲಾಗಿದೆ. ಇಲ್ಲಿ ಘೋಷಿಸಿರುವ ಅನೇಕ ಭರವಸೆಗಳನ್ನು ಈಡೇರಿಸುವ ವಿಶ್ವಾಸ ಸರ್ಕಾರಕ್ಕೇ ಇದ್ದಂತ್ತಿಲ್ಲ. ಕೊಡಗನ್ನು ಸರ್ಕಾರ ಮರೆತೇ ಬಿಟ್ಟಿದೆ, ವನ್ಯಜೀವಿಗಳ ದಾಳಿ, ರಸ್ತೆಗಳ ಅವ್ಯವಸ್ಥೆ, ಅತಿವೃಷ್ಟಿಯಿಂದಾಗುವ ಅನಾಹುತ, ಬೆಳೆಗಾರರು ಹಾಗೂ ಕಾರ್ಮಿಕರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಅರಿವಿಲ್ಲದಂತೆ ಸರ್ಕಾರ ವರ್ತಿಸಿದೆ. ಯಾವುದೇ ಭರವಸೆಗಳನ್ನು ಮೂಡಿಸದ ಬಜೆಟ್ ನಲ್ಲಿ ಕೊಡಗು ಜಿಲ್ಲೆಗೆ ಕೇವಲ 100 ಕೋಟಿ ರೂ.ಗಳನ್ನು ನೀಡಲಾಗಿದೆ. ಜಿಲ್ಲೆಯ ಶಾಸಕರುಗಳಿಗೆ ಸ್ವಾಭಿಮಾನವಿದ್ದರೆ ಈ ಹಣವನ್ನು ತಿರಸ್ಕರಿಸಿ ಸಾವಿರ ಕೋಟಿಗೆ ಬೇಡಿಕೆ ಇಡಲಿ. (ಸೂರಜ್ ಹೊಸೂರು, ಅಧ್ಯಕ್ಷರು, ಕಾಂಗ್ರೆಸ್ ಸಾಮಾಜಿಕ ಜಾಲತಾಣ, ಕೊಡಗು ಜಿಲ್ಲೆ)
ಮಡಿಕೇರಿ ಫೆ.17 : ಕಾರ್ಮಿಕ ವರ್ಗದ ಅನೇಕ ವರ್ಷಗಳ ಬೇಡಿಕೆಗಳಲ್ಲಿ ಕೆಲವನ್ನಷ್ಟೇ ಈಡೇರಿಸಲಾಗಿದೆ, ಕಾರ್ಮಿಕರ ಅಭ್ಯುದಯಕ್ಕಾಗಿ ಹೊಸ ಯೋಜನೆಗಳನ್ನು ಘೋಷಿಸಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಶ್ರಮಿಕ ವರ್ಗ ತತ್ತರಿಸಿ ಹೋಗಿದೆ. ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಮೇಲಿನ ತೆರಿಗೆ ಇಳಿಕೆ ಮಾಡಿ ಇವುಗಳ ಬೆಲೆಯನ್ನು ಕಡಿಮೆ ಮಾಡುವ ಪ್ರಯತ್ನವನ್ನು ಸರ್ಕಾರ ಮಾಡಿಲ್ಲ. ಕೊಡಗು ಜಿಲ್ಲೆಗೆ ಕೇವಲ ರೂ.100 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಸರ್ಕಾರ ಕೈತೊಳೆದುಕೊಂಡಿದೆ. ಕಾಫಿ ಮತ್ತು ಕರಿಮೆಣಸು ಇಲ್ಲಿನ ಪ್ರಮುಖ ಬೆಳೆಯಾದರೂ ಬೆಳೆಗಾರರ ನೆರವಿಗೆ ಪೂರಕವಾಗುವ ಯಾವುದೇ ವಿಶೇಷ ಅನುದಾನವನ್ನು ನೀಡಿಲ್ಲ, ಕೊಡಗು ಜಿಲ್ಲೆಗೆ ಅನ್ಯಾಯವಾಗಿದೆ. (ಪಿ.ಆರ್.ಭರತ್, ಕಾರ್ಮಿಕ ಸಂಘಟನೆಗಳ ಮುಖಂಡ, ಕೊಡಗು ಜಿಲ್ಲೆ)
ಮಡಿಕೇರಿ ಫೆ.17 : ನಗರದ ಮನೆಯೊಂದರಲ್ಲಿ 500 ಗ್ರಾಂ ಗಾಂಜಾ ಪತ್ತೆಯಾಗಿದ್ದು, ನಾಲ್ವರು ಆರೋಪಿಗಳನ್ನು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಗರದ ರಾಣಿಪೇಟೆಯ ಮನೆಯೊಂದರಲ್ಲಿ ಅಕ್ರಮವಾಗಿ ಗಾಂಜಾ ದಾಸ್ತಾನು ಮಾಡಿರುವ ಕುರಿತು ಮಾಹಿತಿ ಪಡೆದ ಪೊಲೀಸರು ಶ್ವಾನ ದಳ, ಕಂದಾಯ ಇಲಾಖೆ, ನಗರಸಭೆ ಅಧಿಕಾರಿಗಳ ಸಹಿತ ಮನೆಯ ಮೇಲೆ ದಾಳಿ ನಡೆಸಿದರು. ಈ ಸಂದರ್ಭ ಮಾಲು ಸಹಿತ ನಾಲ್ವರು ಆರೋಪಿಗಳನ್ನು ಸ್ಥಳದಲ್ಲೇ ಬಂಧಿಸಲಾಗಿದೆ. ಮಡಿಕೇರಿ ನಿವಾಸಿಗಳಾದ ಅಜ್ಗರ್, ನೌಶಾದ್, ಮಂಜು ಹಾಗೂ ರಫೀಕ್ ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ನಗರ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕುಶಾಲನಗರ ಫೆ.17 : ಕರುವೊಂದು ಕಾಡುಪ್ರಾಣಿಯ ದಾಳಿಗೊಳಗಾಗಿ ಪ್ರಾಣಕಳೆದುಕೊಂಡ ಘಟನೆ ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಕೂಡ್ಲೂರು ಬಸವೇಶ್ವರ ಬಡಾವಣೆಯಲ್ಲಿ ನಡೆದಿದೆ. ಕರುವು ಚಿರತೆ ದಾಳಿಗೊಳಗಾರುವ ಬಗ್ಗೆ ಕರುವಿನ ಮಾಲೀಕರು ಸಂಶಯ ವ್ಯಕ್ತಪಡಿಸುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಬಸವೇಶ್ವರ ಬಡಾವಣೆಯ ಜಿ.ವಿ.ಕುಮಾರ್ ಎಂಬವರ ಕರು ಪ್ರಾಣಿದಾಳಿಗೊಳಗಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರು, ಕೂಡಲೇ ವಲಯ ಅರಣ್ಯಾಧಿಕಾರಿಗಳ ಗಮನಕ್ಕೆ ತಂದರು. ನಂತರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅರಣ್ಯಾ ಇಲಾಖೆಯ ಅಧಿಕಾರಿಗಳು, ಮುಂದಿನ ಕ್ರಮ ಕೈಗೊಂಡರು. ಈ ಸಂದರ್ಭ ಮಾತನಾಡಿದ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್, ಚಿರತೆ ದಾಳಿ ಶಂಕೆ ಇರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮನವಿ ಮಾಡಲಾಗಿದೆ. ಸ್ಥಳಕ್ಕೆ ಸಿಸಿ ಕ್ಯಾಮರಾ ಅಳವಡಿಸುವ ಬಗ್ಗೆ ಹಾಗೂ ಕಾಡಿಗೆ ಸಿಬ್ಬಂದಿಗಳನ್ನು ಕಳುಹಿಸಿ ಪರಿಶೀಲನೆ ನಡೆಸುವ ಬಗ್ಗೆ ವಲಯ ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕರುವಿಗೆ ಬೇಗನೇ ಪರಿಹಾರ ಒದಗಿಸಿಕೊಡುವ ಬಗ್ಗೆಯೂ…
ಮಡಿಕೇರಿ ಫೆ.17 : ಮೈಸೂರಿನ ಯುವರಾಜ ಇಂಡೋರ್ ಹಾಲ್ ನಲ್ಲಿ ಫೆ.11 ರಂದು ನಡೆದ ವಿ ಎಸ್ ಕೆ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕೊಡಗಿನ 8 ವಿದ್ಯಾರ್ಥಿಗಳು ಪ್ರಥಮ, 9 ವಿದ್ಯಾರ್ಥಿಗಳು ದ್ವಿತೀಯ ಹಾಗೂ ಮೂವರು ತೃತೀಯ ಸ್ಥಾನ ಗಳಿಸಿದ್ದಾರೆ. ಮಾದಾಪುರ ಸಮೀಪದ ಹಟ್ಟಿಹೂಳೆ ನಿರ್ಮಲ ವಿದ್ಯಾ ಭವನ ಶಾಲೆಯ ವಿದ್ಯಾರ್ಥಿಗಳು 11 ವರ್ಷದ ಬಾಲಕರ ವಿಭಾಗದಲ್ಲಿ ಸಜಿನ್ ಎ ಕಟಾ ಹಾಗೂ ಕುಮಿತೆ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾನೆ. 12 ವರ್ಷದ ಬಾಲಕರ ವಿಭಾಗದಲ್ಲಿ ಡೀನ್ ಅಪ್ಪಣ್ಣ ಕಟಾ ಹಾಗೂ ಕುಮಿತೆ ವಿಭಾಗದಲ್ಲಿ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ 12ವರ್ಷದ ವಿಭಾಗದಲ್ಲಿ ಕವನ ಎಂ ಎಸ್ ಕಟಾ ಪ್ರಥಮ ಹಾಗೂ ಕುಮಿತೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. 13ವರ್ಷ ವಿಭಾಗದಲ್ಲಿ ಮರಿಯಾ ಜೋಶ್ನ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ,13 ವರ್ಷದ ವಿಭಾಗದಲ್ಲಿ ಮೌನ ಜಿ ಸಿ ಕಟಾ ವಿಭಾಗದಲ್ಲಿ ದ್ವಿತೀಯ ಹಾಗೂ ತೃತೀಯ ಸ್ಥಾನ ಕುಮಿತೆ ವಿಭಾಗದಲ್ಲಿ 13…
ಮಡಿಕೇರಿ ಫೆ.17 : ಕೊಡಗು ಜಿಲ್ಲಾ ಮೊಗೇರಾ ಸೇವಾ ಸಮಾಜ ಹಾಗೂ ಮೊಗೇರ ಗ್ರಾಮ ವಿಕಾಸ ಯೋಜನೆಯ ಜಿಲ್ಲಾ ಕಚೇರಿಯ ಉದ್ಘಾಟನಾ ಸಮಾರಂಭ ಫೆ.19ರಂದು ನಡೆಯಲಿದೆ. ಬೆಳಿಗ್ಗೆ 10.30 ಗಂಟೆಗೆ ಸುಂಟಿಕೊಪ್ಪದ ದೇವಯ್ಯ ಕಾಂಪ್ಲೆಕ್ಸ್ ನಲ್ಲಿ ನೂತನ ಕಚೇರಿ ಉದ್ಘಾಟನೆಗೊಳ್ಳಲಿದೆ. ನಂತರ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದೇ ಸಂದರ್ಭ ಕುಶಾಲನಗರ ತಾಲ್ಲೂಕು ಸಮಿತಿಗೆ ಪದಾಧಿಕಾರಿಗಳ ಸೇರ್ಪಡೆ ಹಾಗೂ ಸುಂಟಿಕೊಪ್ಪ ಹೋಬಳಿ ಸಮಿತಿ ರಚನೆಯೂ ನಡೆಯಲಿದೆ. ಮೊಗೇರ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ಮನವಿ ಮಾಡಿದ್ದಾರೆ.
ಮಡಿಕೇರಿ ಫೆ.17 : ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ಅಂತರರಾಜ್ಯ ಗಡಿ ಪ್ರದೇಶದಲ್ಲಿ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮಂಗಳೂರು ಅಬಕಾರಿ ವಿಭಾಗದ ಜಂಟಿ ನಿರ್ದೇಶಕರು ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜೊತೆ ಸಮಾಲೋಚನಾ ಸಭೆಯು ನಡೆಯಿತು. ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದ ಸಂದರ್ಭದಲ್ಲಿ ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯ ಗಡಿಭಾಗದ ಕಾಸರಗೋಡು, ಕಣ್ಣೂರು ಮತ್ತು ವಯನಾಡು ಜಿಲ್ಲಾ ಗಡಿ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಬೇಕಿದೆ. ಆ ನಿಟ್ಟಿನಲ್ಲಿ ಎರಡು ರಾಜ್ಯಗಳ ಅಬಕಾರಿ ಇಲಾಖೆಯ ಅಧಿಕಾರಿಗಳು ಅಗತ್ಯ ಸಹಕಾರ ನೀಡುವಂತೆ ಕೋರಿದರು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಮಾಡದೆ ಸುಗಮ ಹಾಗೂ ಶಾಂತಿಯುತವಾಗಿ ವಿಧಾನಸಭೆ ಚುನಾವಣೆ ನಡೆಸಲು ಅಂತರ ರಾಜ್ಯ ಗಡಿ…
ಮಡಿಕೇರಿ ಫೆ.17 : ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಫೆಬ್ರವರಿ, 19 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಫೆಬ್ರವರಿ, 19 ರಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಕೊಡಗು ಹೆಗ್ಗಡೆ ಸಮಾಜದ ಸಭಾಂಗಣದಲ್ಲಿ ಕೊಡವ ಭಾಷಿಕ ಸಮುದಾಯಗಳ ವತಿಯಿಂದ ನಡೆಯುವ ‘ಒತ್ತೋರ್ಮೆ ಕೂಟ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಬಿ.ಉದಯಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.
ಮಡಿಕೇರಿ ಫೆ.17 : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಮತ್ತು ಶ್ರೀ ಸರ್ವಜ್ಞ ಮೂರ್ತಿ ಅವರ ಜಯಂತಿ ಕಾರ್ಯಕ್ರಮವು ಫೆಬ್ರವರಿ, 20 ರಂದು ಬೆಳಗ್ಗೆ 11 ಗಂಟೆಗೆ ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.






