ಲೇಖಕ: admin

ಮಡಿಕೇರಿ ಮಾ.24 : ಪ್ರಧಾನ್ ಮಂತ್ರಿ ಗ್ರಾಮ ಸಡಕ್ ಯೋಜನೆಯ ಅನುದಾನದಲ್ಲಿ ನಿರ್ಮಿಸಲಾದ ಪೊನ್ನಂಪೇಟೆ ತಾಲ್ಲೂಕು ಹುದಿಕೇರಿ ಗ್ರಾ.ಪಂ  ವ್ಯಾಪ್ತಿಯ ಬೇಗೂರು – ಬಳಪನಕೆರೆ – ಹಳ್ಳಿಗಟ್ಟು ಸಂಪರ್ಕ ಮತ್ತು ಕೋಣಂಗೇರಿ – ಹುದಿಕೇರಿ ಸಂಪರ್ಕ ರಸ್ತೆಯನ್ನು  ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

Read More

ಮಡಿಕೇರಿ ಮಾ.24 :  ಪೊನ್ನಂಪೇಟೆ ತಾಲ್ಲೂಕಿನ ಹಾತೂರು ಗ್ರಾ.ಪಂ  ವ್ಯಾಪ್ತಿಯ ಕುಂದ ಬಸವೇಶ್ವರ ಕಾಲೋನಿ ಮತ್ತು ಅತ್ತೂರು, ಕಿರುಗೂರು ಗ್ರಾ.ಪಂ ವ್ಯಾಪ್ತಿಯ ಕಿರುಗೂರು, ಪೊನ್ನಪ್ಪಸಂತೆ ಗ್ರಾ.ಪಂ ವ್ಯಾಪ್ತಿಯ ನಲ್ಲೂರು ಮತ್ತು ಬಿಳೂರುನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಲಾಗಿರುವ ಕುಡಿಯುವ ನೀರು ಸರಬರಾಜು ಟ್ಯಾಂಕ್ ಮತ್ತು ಮನೆಗಳ ನಲ್ಲಿ ಸಂಪರ್ಕ ವನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ  ಸುಜಾ ಕುಶಾಲಪ್ಪ,  ಗ್ರಾ.ಪಂ ಸದಸ್ಯರ  ಹಾಜರಿದ್ದರು.

Read More

ಮಡಿಕೇರಿ ಮಾ.24 : ಇಹಲೋಕ ತ್ಯಜಿಸಿದ ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳ  ನಿಧನಕ್ಕೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂತಾಪ ವ್ಯಕ್ತಪಡಿಸಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಅಧ್ಯಕ್ಷತೆಯಲ್ಲಿ ಪರಿಷತ್ತಿನ ಜಿಲ್ಲಾ ಕಛೇರಿಯಲ್ಲಿ  ನಡೆದ ಸಂತಾಪ ಸಭೆಯಲ್ಲಿ ಚಾರುಕೀರ್ತಿ ಭಟ್ಟಾರಕ ಶ್ರೀಗಳ ಕುರಿತು ಕಸಾಪ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ,  ಶ್ರವಣಬೆಳಗೊಳದಲ್ಲಿ ಕಳೆದ ಹಲವು ವರ್ಷಗಳ ಹಿಂದೆ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ರಾಜ್ಯ ಪತ್ರಕರ್ತರ ಸಮ್ಮೇಳನಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದ ಕೀರ್ತಿ ಚಾರುಕೀರ್ತಿ ಭಟ್ಟಾರಕ ಶ್ರೀಗಳಿಗೆ ಸಲ್ಲುತ್ತದೆ. ಅತ್ಯಂತ ಸೌಮ್ಯ ಸ್ವಭಾವದ ಸರಳತೆಯ ಪ್ರತಿರೂಪವಾಗಿದ್ದ ಶ್ರೀಗಳ ಅಗಲಿಕೆ ನಾಡಿನ ಸಾಮಾಜಿಕ, ಧಾರ್ಮಿಕ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ ಎಂದು ರಮೇಶ್ ಹೇಳಿದರು. ಈ ಸಂದರ್ಭ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿಗಳಾದ ಎಸ್.ಐ.ಮುನೀರ್ ಅಹಮದ್, ರೇವತಿ ರಮೇಶ್, ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ಸಹನಾ ಕಾಂತಬೈಲು, ಮಂಜುನಾಥ್, ಮೂರ್ನಾಡು ರಮ್ಯ, ಕುಶಾಲನಗರ ತಾಲ್ಲೂಕು ಅಧ್ಯಕ್ಷ ಕೆ.ಎಸ್.ಮೂರ್ತಿ ಹಾಜರಿದ್ದರು.

Read More

ಮಡಿಕೇರಿ ಮಾ.24 : ಕೊಡಗು ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 04-06-2022 ರಿಂದ 03-03-2023 ರ ವರೆಗೆ ಪತ್ತೆ ಮಾಡಲಾಗಿದ್ದ 22 ಅಕ್ರಮ ಗಾಂಜಾ ಮಾರಾಟ ಪ್ರಕರಣಗಳಲ್ಲಿ 60 ಆರೋಪಿಗಳನ್ನು ದಸ್ತಗಿರಿ ಮಾಡಿ ವಶಪಡಿಸಿಕೊಂಡಿದ್ದ ಒಟ್ಟು 26.750 ಕೆ.ಜಿ. ಗಾಂಜಾ ಹಾಗೂ 1.161 ಕೆ.ಜಿ ಹಶಿಶ್ ಆಯಿಲ್ ನ್ನು ದಿನಾಂಕ: 24-03-2023 ರಂದು ಮೈಸೂರು ಜಿಲ್ಲೆಯ ಗುಜ್ಜೆಗೌಡನಪುರ ಗ್ರಾಮದಲ್ಲಿರುವ M/s. GIPS Bio Tech ಸಂಸ್ಥೆಯ ಕುಲುಮೆಯಲ್ಲಿ (Incinerator) ಡ್ರಗ್ ಡಿಸ್ಪೋಸಲ್ ಸಮಿತಿ ಮೂಲಕ ನಾಶಪಡಿಸಲಾಯಿತು. ಈ ಸಂದರ್ಭ ದಕ್ಷಿಣ ವಲಯ ಐ.ಜಿ.ಪಿ ಯವರಾದ ಪ್ರವೀಣ್ ಮಧುಕರ್ ಪವಾರ್, ಐ.ಪಿ.ಎಸ್,  ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಐ.ಪಿ.ಎಸ್ ಹಾಗೂ ಡ್ರಗ್ ಡಿಸ್ಪೋಸಲ್ ಸಮಿತಿ ಸದಸ್ಯರು ಹಾಜರಿದ್ದರು.

Read More

ಮಡಿಕೇರಿ ಮಾ.24 :  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಆಯೋಜಿಸಿರುವ “ 14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ”ವನ್ನು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿ ಮಾತನಾಡಿದರು.

Read More

ಮಡಿಕೇರಿ ಮಾ.24 :  ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ  ವತಿಯಿಂದ ಕೌಶಲ್ಯ ಅಭಿವೃದ್ಧಿ ಮತ್ತು ಆದಾಯಗಳಿಕೆ ತರಬೇತಿ ಯೋಜನೆಯಡಿ ಚರ್ಮ ಕೈಗಾರಿಕೆಗೆ ಸಂಬಂಧಿಸಿದಂತೆ ವಿರಾಜಪೇಟೆಯ ಶಿವಕೇರಿಯ 30 ಪಲಾನುಭವಿಗಳಿಗೆ ಸಂಸದ ಪ್ರತಾಪ್ ಸಿಂಹ ಪ್ರಮಾಣಪತ್ರ, ರೂ.6000 ವಿದ್ಯಾರ್ಥಿವೇತನ ಮತ್ತು ಹೊಲಿಗೆ ಯಂತ್ರವನ್ನು ವಿತರಿಸಿ ಶುಭಕೋರಿದರು. ಈ ಸಂದರ್ಭ ಶಾಸಕ ಕೆ.ಜಿ.ಬೋಪಯ್ಯ, ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಅಧಿಕಾರಿಗಳು ಹಾಜರಿದ್ದರು.

Read More

ನಾಪೋಕ್ಲು ಮಾ.24 : ಬೆಟ್ಟಗೇರಿ ಗ್ರಾ.ಪಂ ವ್ಯಾಪ್ತಿಯ ಪಾಲೂರು ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಶ್ವತ ತಡೆಗೋಡೆ ನಿರ್ಮಿಸಿ ಭಕ್ತರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ಪಂಚಲಿಂಗೇಶ್ವರ ದೇವಾಲಯದ ಆವರಣದಲ್ಲಿ ರೂ.55 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ತಡೆಗೋಡೆಯನ್ನು ಉದ್ಘಾಟಿಸಿ ಮಾತನಾಡಿದರು. ದೇವಾಲಯದ ತಡೆಗೋಡೆ ಕುಸಿದಿದ್ದು, ಸಾರ್ವಜನಿಕರಿಂದ ತಡೆಗೋಡೆ ನಿರ್ಮಿಸಬೇಕೆಂದು ಮನವಿ ಬಂದ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಮುಖಾಂತರ 55 ಲಕ್ಷ ರೂ.ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಲಾಗಿದೆ ಎಂದರು. ಬೆಟ್ಟಗೇರಿ ಗ್ರಾ.ಪಂ ಅಧ್ಯಕ್ಷ ನಾಪಂಡ ರ‍್ಯಾಲಿ (ryali) ಮಾದಯ್ಯ ಮಾತನಾಡಿ ಕಾಮಗಾರಿಯ ಮಾಹಿತಿಯನ್ನು ನೀಡಿದರು. ಇದಕ್ಕೂ ಮುನ್ನ ಅರ್ವತ್ತೋಕ್ಲು ಗ್ರಾಮ ವ್ಯಾಪ್ತಿಯಲ್ಲಿ 2.15 ಕೋಟಿ ರೂ.ವೆಚ್ಚದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಈ ಸಂದರ್ಭ ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಎಡಿಕೇರಿ ವಾಸುದೇವ್, ಗ್ರಾ.ಪಂ ಮಾಜಿ ಅಧ್ಯಕ್ಷ ಬಿ.ಎ ರಾಮಣ್ಣ, ಎಡಿಕೇರಿ ಪ್ರವೀಣ, ಕಾಫಿ ಮಂಡಳಿ ಮಾಜಿ ಅಧಿಕಾರಿ ಅಚ್ಚುಡ ಅನಂತ್…

Read More

ಮಡಿಕೇರಿ ಮಾ.24 : ಇಬ್ನಿವಳವಾಡಿ ಗ್ರಾಮದ ಶ್ರೀ ಭದ್ರಕಾಳಿ ದೇವಾಲಯದ ವಾರ್ಷಿಕೋತ್ಸವ ಮಾ.25 ರಂದು ನಡೆಯಲಿದೆ. ಮುಂಜಾನೆಯಿಂದಲೇ ದೇವಿಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ. ಮಧ್ಯಾಹ್ನ 1.30 ಗಂಟೆಗೆ ಕೊಡಿಯಾಟ್, 2 ಗಂಟೆಗೆ ಆಂಗೋಲ ಪೋಂಗೊಲ, ಪೀಲಿ ಆಟ್, ಕೊಂಬಾಟ್ ಮತ್ತು ತೆಂಗಿನಕಾಯಿಗೆ ಗುಂಡು ಹೊಡೆಯುವ ಕಾರ್ಯಕ್ರಮ ನಡೆಯಲಿದೆ.  ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ತಕ್ಕ ಮುಖ್ಯಸ್ಥರು ಮನವಿ ಮಾಡಿದ್ದಾರೆ.

Read More

ನಾಪೋಕ್ಲು  ಮಾ.24 :  ಶಾಲೆಯ ಬೀಗ ಒಡೆದು ಒಳ ನುಗ್ಗಿದ ದುಷ್ಕರ್ಮಿಗಳು ಮೋಜು ಮಸ್ತಿ ಮಾಡಿ  ಪರಾರಿಯಾಗಿರುವ ಘಟನೆ ನಾಪೋಕ್ಲುವಿನಲ್ಲಿ  ನಡೆದಿದೆ. ನಾಪೋಕ್ಲು ಹಳೇ ತಾಲ್ಲೂಕು ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಪ್ರಾಥಮಿಕ ಪಬ್ಲಿಕ್ ಶಾಲೆಯ ಕೊಠಡಿಯ ಬೀಗ ಹೊಡೆದು ಒಳನುಗ್ಗಿದ ಕಿಡಿಗೇಡಿಗಳು ಅನೈತಿಕ ಚಟುವಟಿಕೆ ಅನೈತಿಕ ಚಟುವಟಿಕೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಮಕ್ಕಳು ಶಾಲೆಗೆ ಬಂದಾಗ ಶಾಲೆಯ ಒಳಾಂಗಣದ ಕೊಠಡಿಯ ಬೀಗ ಹೊಡೆದಿರುವುದು ಗೋಚರಿಸಿದೆ. ಈ ಬಗ್ಗೆ ಮಕ್ಕಳು ಶಿಕ್ಷಕರಿಗೆ ಮಾಹಿತಿ ನೀಡಿದ್ದು, ಶಿಕ್ಷಕರು ಪರಿಶೀಲಿಸಿದಾಗ ಶಾಲೆಯ ಮೇಲ್ಚಾವಣಿಯಲ್ಲಿ ಮಹಿಳೆ ಮತ್ತು ಗಂಡಸರ ಬಟ್ಟೆಗಳು ಹಾಗೂ  ಸಿಗರೇಟ್ ತುಂಡುಗಳು ಪತ್ತೆಯಾಗಿದೆ. ಘಟನೆ ಸಂಬಂಧ ಶಾಲೆಯ ಮುಖ್ಯೋಪಾಧ್ಯಾಯರು ನಾಪೋಕ್ಲು ಠಾಣೆಗೆ ನೀಡಿದ ದೂರಿನ ಹಿನ್ನೆಲೆ ಸ್ಥಳಕ್ಕೆ ಧಾವಿಸಿದ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭ ಶಾಲೆಯ ಮುಖ್ಯಶಿಕ್ಷಕಿ ಚಂದ್ರಕಲಾ, ಶಾಲೆಯ ಪ್ರೌಢಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲ ಎನ್. ಎಸ್. ಶಿವಣ್ಣ, ಆಡಳಿತ ಮಂಡಳಿ ಸದಸ್ಯ…

Read More

ಮಡಿಕೇರಿ ಮಾ.23 : ರಾಷ್ಟ್ರ ರಕ್ಷಣೆಗಾಗಿ ಶತ್ರುವಿನ ಗುಂಡಿಗೆ ಮೊದಲು ಎದೆಯೊಡ್ಡುವ ಗಡಿಭದ್ರತಾ ಪಡೆ ಸಿಬ್ಬಂದಿಗಳು ನಿವೃತ್ತರಾದ ಬಳಿಕ ಅವರಿಗೆ ಮೂಲಭೂತ ಸೌಲಭ್ಯಗಳು ದೊರಕುತ್ತಿಲ್ಲ. ಈ ಬಗ್ಗೆ ಸರ್ಕಾರಗಳು ಸೂಕ್ತ ಸ್ಪಂದನವನ್ನು ನೀಡುತ್ತಿಲ್ಲವೆನ್ನುವ ಅಸಮಾಧಾನ ಅರೆ ಸೇನಾ ಪಡೆಯ ನಿವೃತ್ತ ಯೋಧರ ಸಮಾವೇಶದಲ್ಲಿ ವ್ಯಕ್ತವಾಯಿತು. ಗೋಣಿಕೊಪ್ಪದ ಪರಿಮಳ ಮಂಗಳ ವಿಹಾರ ಸಭಾಂಗಣದಲ್ಲಿ ನಡೆದ ಸಮಾವೇಶವನ್ನು ಸಮಾಜ ಸೇವಕ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಉದ್ಘಾಟಿಸಿದರು. ಕೊಡಗು ನಿವೃತ್ತ ಅರೆ- ಮಿಲಿಟರಿ ಸಂಘದ ಅಧ್ಯಕ್ಷ ಪುಲಿಯಂಡ ಚಂಗಪ್ಪ ಅವರು, ನಿವೃತ್ತ ಅರೆ ಮಿಲಿಟರಿ ಯೋಧರ ಜ್ವಲಂತ ಸಮಸ್ಯೆಗಳ ಕುರಿತು ಅತಿಥಿಗಳಿಗೆ ಮಾಹಿತಿ ಒದಗಿಸಿದರು. ಅರೆಸೇನಾ ಪಡೆಯ ಮಾಜಿ ಯೋಧ ನೂರೇರ ಭೀಮಯ್ಯ ಮಾತನಾಡಿ, ದೇಶದ ಸೇನಾ ಪಡೆ ಮತ್ತು ಅರೆಸೇನಾ ಪಡೆ ಒಂದೇ ಎಂಬ ಭಾವನೆ ಜನತೆಯಲ್ಲಿದೆ. ಈ ಹಿಂದೆ ಸಂಘದ ದಶಮಾನೋತ್ಸವದ ಸಂದರ್ಭ ನಮ್ಮ ಅಹವಾಲುಗಳನ್ನು ಕೊಡಗಿನ ಹಾಲಿ ಶಾಸಕರಿಗೆ ನೀಡಲಾಗಿದ್ದರು ಸೂಕ್ತ ಸ್ಪಂದನ ದೊರಕಿಲ್ಲವೆಂದು ತಮ್ಮ…

Read More