ಮಡಿಕೇರಿ ಮಾ.23 : ಅನುಪಯುಕ್ತ ರಾಸಾಯನಿಕದ ಸರಕುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಅಗ್ನಿ ಆಕಸ್ಮಿಕದಿಂದ ಸುಟ್ಟು ಕರಕಲಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕೊಯಮತ್ತೂರಿನಿಂದ ಮಂಗಳೂರಿನ ಬೈಕಂಪಾಡಿಗೆ ತೆರಳುತ್ತಿದ್ದ ಲಾರಿ ಬುಧವಾರ ತಡರಾತ್ರಿ ಬೆಂಕಿಗೆ ಆಹುತಿಯಾಗಿದೆ. ಲಾರಿಯ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಚಾಲಕ ತಕ್ಷಣ ಕುಶಾಲನಗರದ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಲಾರಿಯಲ್ಲಿದ್ದ ದಾಖಲೆಗಳನ್ನು ತನ್ನೊಂದಿಗೆ ತೆಗೆದುಕೊಂಡು ಹೊರಬಂದು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ತಕ್ಷಣ ಪೊಲೀಸ್ ಠಾಣೆ ಮತ್ತು ಅಗ್ನಿಶಾಮಕ ತಂಡಕ್ಕೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ತಂಡ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಬೆಂಕಿ ರಾಸಾಯನಿಕ ವಸ್ತುಗಳಿಗೆ ತಗುಲಿ ಅಪಾಯಕಾರಿ ಪರಿಸ್ಥಿತಿ ಸೃಷ್ಟಿಯಾಯಿತು. ಸ್ಥಳೀಯ ಅಧಿಕಾರಿಗಳ ಕೋರಿಕೆ ಮೇರೆಗೆ ಪಿರಿಯಾಪಟ್ಟಣ ಭಾಗದಿಂದ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳ ತಂಡ ಬೆಂಕಿ ಶಮನಗೊಳಿಸಲು ಪ್ರಯತ್ನಿಸಿದರು. ಮುಂಜಾನೆ 5 ಗಂಟೆಯವರೆಗೆ ಎರಡು ಅಗ್ನಿಶಾಮಕ ವಾಹನಗಳ ಸಹಕಾರದಿಂದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಪೊಲೀಸರು ಸ್ಥಳದಲ್ಲಿದ್ದು ಹೆದ್ದಾರಿ ವಾಹನ ಸಂಚಾರ…
ಲೇಖಕ: admin
ಮಡಿಕೇರಿ ಮಾ.23 : ಕುಶಾಲನಗರ, ಶನಿವಾರಸಂತೆ ಹೋಬಳಿ ಮುಳ್ಳೂರು ಗ್ರಾಮದ ಎಸ್.ದರ್ಶನ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಲಭಿಸಿದೆ. ಪ್ರೊ. ಎಂ ಜಯಶಂಕರ್ ಅವರ ಮಾರ್ಗದರ್ಶನದಲ್ಲಿ ದರ್ಶನ್ ಅವರು ಮಂಡಿಸಿದ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿ ಎಚ್ ಡಿ ಪದವಿ ನೀಡಲಾಗಿದೆ. ಮಾರ್ಚ್ 15 ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯದ 41ನೇ ಘಟಿಕೋತ್ಸವದಲ್ಲಿ ಪದವಿ ಪ್ರಧಾನ ಮಾಡಲಾಯಿತು. ದರ್ಶನ್ ಅವರು ಮುಳ್ಳೂರು ಗ್ರಾಮದ ಕೆ.ವಿ ಜಾತು ಮತ್ತು ದಿ.ತಂಗಮ್ಮ ಅವರ ಸೊಸೆಯಾಗಿದ್ದು ಕುಶಾಲನಗರ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ಎಂ ಸಿ ಉದಯಕುಮಾರ್ ಅವರ ಪತ್ನಿಯಾಗಿದ್ದಾರೆ.
ಮಡಿಕೇರಿ ಮಾ.23 : ಫಲಾನುಭವಿಗಳ ಸಮಾವೇಶದ ಹೆಸರಿನಲ್ಲಿ ಮುಖ್ಯಮಂತ್ರಿಗಳ ಕೊಡಗು ಜಿಲ್ಲಾ ಭೇಟಿ ನಿರಾಶಾದಾಯಕವಾಗಿತ್ತು ಮತ್ತು ಜನಸಾಮಾನ್ಯರ ಹಲವು ನಿರೀಕ್ಷೆಗಳನ್ನು ಹುಸಿ ಮಾಡಿದ ಭೇಟಿ ಇದಾಗಿತ್ತು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಹಾಗೂ ತಾ.ಪಂ ಮಾಜಿ ಸದಸ್ಯ ಕೆ.ಐ.ಮಹಮ್ಮದ್ ರಫೀಕ್ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಚುನಾವಣೆ ಘೋಷಣೆಗೆ ಒಂದೆರಡು ವಾರ ಇರುವಾಗ ಸಾವಿರಾರು ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಗಳಿಗೆ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ಮಾಡಿದ್ದಾರೆ. ನೀತಿ ಸಂಹಿತೆಯ ನಂತರ ಯಾವುದೇ ಕಾಮಗಾರಿ ನಡೆಯುವುದಿಲ್ಲವೆಂದು ತಿಳಿದಿದ್ದರೂ ಜನರ ಕಣ್ಣಿಗೆ ಮಣ್ಣೆರಚುವ ತಂತ್ರಗಾರಿಕೆಯನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ರೀತಿಯ ಭೇಟಿ, ಶಂಕುಸ್ಥಾಪನೆಗಳಿoದ ಕೊಡಗು ಜಿಲ್ಲೆಗೆ ಯಾವುದೇ ಲಾಭವಿಲ್ಲ. ಬಜೆಟ್ ನಲ್ಲಿ ಕೊಡಗಿನ ರಸ್ತೆಗಳ ಅಭಿವೃದ್ಧಿಗೆಂದು 100 ಕೋಟಿ ಮೀಸಲಿಟ್ಟಿರುವುದಾಗಿ ಮುಖ್ಯಮಂತ್ರಿಗಳು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಆದರೆ ಇನ್ನೆರಡು ತಿಂಗಳುಗಳಲ್ಲಿ ಮತ್ತೆ ಮಳೆಗಾಲ ಆರಂಭವಾಗುತ್ತದೆ. ಈ ಬಾರಿಯ ಮಳೆಗೆ ಇನ್ನೆಷ್ಟು ನಷ್ಟ ಸಂಭವಿಸುತ್ತದೋ ತಿಳಿದಿಲ್ಲ. ಕೇವಲ 100…
ಮಡಿಕೇರಿ ಮಾ.23 : ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ ವಿರಾಜಪೇಟೆ ತಾಲ್ಲೂಕಿನ 21 ಸಾವಿರ ಮನೆಗಳಿಗೆ ಏಕ ಕಾಲದಲ್ಲಿ ಕುಡಿಯುವ ನೀರಿನ ಸಂಪರ್ಕವನ್ನು ಕಲ್ಪಿಸಲಾಗಿದೆ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಬಿಟ್ಟಂಗಾಲ ಗ್ರಾ.ಪಂ ವ್ಯಾಪ್ತಿಯ ಬಾಳುಗೋಡುವಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಲಾಗಿರುವ ಕುಡಿಯುವ ನೀರು ಸರಬರಾಜು ಟ್ಯಾಂಕ್ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದೆ ಕೇಂದ್ರದಲ್ಲಿದ್ದ ಸರ್ಕಾರ ಐದು ವರ್ಷಕೊಮ್ಮೆ ಒಂದು ವಿಧಾನಸಭಾ ಕ್ಷೇತ್ರದ 3 ಅಥವಾ 4 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ನೀಡುತ್ತಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಒಂದು ತಾಲ್ಲೂಕಿಗೆ ಒಳಪಡುವ ಎಲ್ಲಾ ಗ್ರಾಮಗಳಿಗೆ ಏಕಕಾಲಕ್ಕೆ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಸಂಪರ್ಕವನ್ನು ನೀಡುತ್ತಿದೆ ಎಂದರು. ಈಗಾಗಲೇ ಒಂದೇ ಬಾರಿಗೆ 303 ಗ್ರಾಮಗಳಲ್ಲಿ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗ ಮತ್ತಷ್ಟು ಅಭಿವೃದ್ಧಿ ಹೊಂದಲಿದ್ದು, ಜನರ ಆಶೀರ್ವಾದ…
ಸುಂಟಿಕೊಪ್ಪ, ಮಾ.23 : ಮನೆಯ ಹಿಂಭಾಗದಲ್ಲಿ ಸೇರಿಕೊಂಡಿದ್ದ ನಾಗರ ಹಾವನ್ನು ಉರಗ ತಜ್ಞ ಪ್ರವೀಣ್ ರಕ್ಷಿಸಿದ್ದಾರೆ. ನಾಕೂರು ಶಿರಂಗಾಲ ಗ್ರಾಮದ ಪೂವಯ್ಯ ಕಾಲೋನಿಯ ನಿವಾಸಿ ಲೀಲಾಶಶಿ ಎಂಬವರ ಮನೆಯ ಹಿಂಭಾಗದಲ್ಲಿ ಹಾವನ್ನು ಕಂಡು ಉರಗ ತಜ್ಞ ಪ್ರವೀಣ್ ಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪ್ರವೀಣ್ 5 ಅಡಿ ಉದ್ದದ ನಾಗರ ಹಾವು ಹಾಗೂ 26 ಮೊಟ್ಟೆಯನ್ನು ಸಂರಕ್ಷಸಿದ್ದಾರೆ.
ಸುಂಟಿಕೊಪ್ಪ ಮಾ.23: ಸುಂಟಿಕೊಪ್ಪ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಅನೂಫ್ ವಿಜಯನ್ ಆಯ್ಕೆಯಾಗಿದ್ದಾರೆ. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ.ಶಶಿಧರ್ ಅವರು ಸುಂಟಿಕೊಪ್ಪ ಕಾಂಗ್ರೆಸ್ ಹಿರಿಯ ಮುಖಂಡರ ಸೂಚನೆ ಮೇರೆಗೆ ಅನೂಪ್ ವಿಜಯನ್ ಅವರನ್ನು ನೇಮಕಗೊಳಿಸಿದ್ದಾರೆ.
ಮಡಿಕೇರಿ ಮಾ.23 : ತಮ್ಮ ಅಧಿಕಾರದ ಅವಧಿಯಲ್ಲಿ ವಿವಿಧ ಭಾಗ್ಯಗಳನ್ನು ನೀಡಿದ್ದೇನೆ ಎನ್ನುವ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರಿಗೆ, ಚುನಾವಣಾ ಹೊಸ್ತಿಲಲ್ಲಿ ಇರುವಾಗಲು ‘ಕ್ಷೇತ್ರ ಭಾಗ್ಯ’ವೇ ಇಲ್ಲದಂತ್ತಾಗಿದೆ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಲೇವಡಿ ಮಾಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎನ್ನುವ ದಯನೀಯ ಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರಿದ್ದಾರೆ. ಇವರು ನೀಡಿರುವ ವಿವಿಧ ಭಾಗ್ಯಗಳಿಗೆ ಜನತೆ ಬೆಲೆ ನೀಡಿಲ್ಲ ಮತ್ತು ಅವರ ಬಗ್ಗೆ ವಿಶ್ವಾಸವೂ ಜನರಿಗಿಲ್ಲವೆಂದು ಟೀಕಿಸಿದರು. ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ ಅವರು ಕೊನೆಗೆ ‘ವರುಣಾ ಕ್ಷೇತ್ರ’ಕ್ಕೆ ಬರಲಿದ್ದಾರೆ. ಜನತೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‍ನ ಭರವಸೆಗಳನ್ನು ನಂಬಿ ಮಂಗಗಳಾಗಬೇಡಿ, ಉತ್ತರ ಕರ್ನಾಟಕದ ಜನತೆ ಮಂಗ್ಯಗಳಾಗಬೇಡಿ, ಇದು ಟೋಪಿ ಹಾಕುವ ಕಾರ್ಯಕ್ರಮ ಎಂದು ಆರೋಪಿಸಿದರು. ಚುನಾವಣಾ ಹಂತದಲ್ಲಿ ಉಚಿತವಾಗಿ ಏನನ್ನೇ ಕೊಡುತ್ತೇವೆ ಎಂದರೂ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಬಿಜೆಪಿಯನ್ನೂ ನಂಬಬೇಡಿ ಎಂದು ಖಡಕ್ ಆಗಿ ನುಡಿದ ಪ್ರತಾಪ ಸಿಂಹ, ಪಂಜಾಬ್‍ನಲ್ಲಿ ಎಎಪಿ…
ಮಡಿಕೇರಿ ಮಾ.23 : ಕಾಫಿ ಬೆಳೆಗಾರರ 10 ಹೆಚ್.ಪಿ.ವರೆಗಿನ ಪಂಪ್ ಸೆಟ್‍ಗಳಿಗೆ ಉಚಿತ ವಿದ್ಯುತ್ ನೀಡಬೇಕೆಂದು ಮುಖ್ಯಮಂತ್ರಿಗಳು ಆದೇಶ ಮಾಡಿದ್ದರು ಕೂಡ ಬಾಕಿ ಉಳಿಸಿಕೊಂಡಿರುವ ಬೆಳೆಗಾರರ ಪಂಪ್ ಸೆಟ್‍ಗಳ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗುತ್ತಿದೆ ಎಂದು ಆರೋಪಿಸಿ ರೈತ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಚೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಕಚೇರಿವರೆಗೆ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಚೆಸ್ಕಾಂ ಅಧಿಕಾರಿಗಳು ಮುಖ್ಯಮಂತ್ರಿಗಳ ಆದೇಶವನ್ನೇ ಉಲ್ಲಂಘಿಸುತ್ತಿದ್ದಾರೆ. ಅವರುಗಳು ತಮ್ಮನ್ನೇ ಸೂಪರ್ ಸಿ.ಎಂ. ಎಂದು ಭಾವಿಸಿಕೊಂಡಿದ್ದಾರೆ. ಬಾಕಿ ಉಳಿಸಿಕೊಂಡಿರುವ ಬೆಳೆಗಾರರ ವಿದ್ಯುತ್ ಸಂಪರ್ಕ ಕಡಿತ ಮಾಡಿರುವುದಕ್ಕೆ ಸಂಬಂಧಿಸಿದ ಅಧಿಕಾರಿಗಳು ರೈತರ ಕ್ಷಮೆ ಕೇಳಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ, ಸುಜೈ ಬೋಪಯ್ಯ, ಲಕ್ಷ್ಮಣ್ ಅವರುಗಳು ಬಾಕಿ ಉಳಿಸಿಕೊಂಡಿರುವ ಬೆಳೆಗಾರರಿಗೂ ಉಚಿತ ವಿದ್ಯುತ್ ನೀಡುವಂತೆ ಮುಖ್ಯಮಂತ್ರಿಗಳು ಮಾ.18ರಂದು…
ಮಡಿಕೇರಿ ಮಾ.23 : ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನಗಳನ್ನು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಹಸ್ತಾಂತರಿಸಿದರು. ನಗರದ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕ ಬಳಿ ಮೂಲಭೂತ ಸೌಲಭ್ಯ ಒಳಗೊಂಡ ತುರ್ತು ಚಿಕಿತ್ಸಾ ವಾಹನ (17 ಲಕ್ಷ ರೂ ವೆಚ್ಚ) ಮತ್ತು ಅಡ್ವಾನ್ಸ್ ಟೆಕ್ನಾಲಜಿ (ಐಸಿಯುನಲ್ಲಿರುವ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ) ಒಳಗೊಂಡಿರುವ 42 ಲಕ್ಷ ರೂ. ಒಟ್ಟು 59 ಲಕ್ಷ ರೂ ವೆಚ್ಚದ ತುರ್ತು ಚಿಕಿತ್ಸಾ ವಾಹನಗಳನ್ನು ವಿರಾಜಪೇಟೆ ಆಸ್ಪತ್ರೆಗೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಹಸ್ತಾಂತರಿಸಿದರು. ಕೋವಿಡ್ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆರೋಗ್ಯ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಪ್ರಾಥಮಿಕ ಆಸ್ಪತ್ರೆಗಳಲ್ಲೂ ಸಹ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯಗಳು ದೊರೆಯುವ ನಿಟ್ಟಿನಲ್ಲಿ ಹಂತ ಹಂತವಾಗಿ ಹಲವು ಆರೋಗ್ಯ ಯೋಜನೆಗಳನ್ನು ಕಲ್ಪಿಸಲಾಗುತ್ತಿದೆ ಎಂದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ (ಜಿಲ್ಲಾಸ್ಪತ್ರೆ) ಮಲ್ಟಿ ಸ್ಪೆಷಾಲಿಟಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ದೊರೆಯುವ ಆರೋಗ್ಯ…
ಮಡಿಕೇರಿ ಮಾ.23 : ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಭದ್ರತಾ ಕೊಠಡಿ ಮತ್ತು ಮತ ಎಣಿಕೆ ಕೇಂದ್ರಗಳ ಸ್ಥಾಪನೆ ಸಂಬಂಧ ನಗರದ ಸಂತ ಜೋಸೆಫರ ಕಾಲೇಜಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಭೇಟಿ ನೀಡಿ ವೀಕ್ಷಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬಾನಾ ಎಂ.ಶೇಕ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ನಾಗರಾಜು, ಅಗ್ನಿಶಾಮಕ ಅಧಿಕಾರಿ ಪಿ.ಚಂದನ್, ಸೆಸ್ಕ್ ಎಂಜಿನಿಯರ್ ಸಂಪತ್, ತಹಶೀಲ್ದಾರ್ ಕಿರಣ್, ಸಂತ ಜೋಸೆಫರ ಶಾಲೆಯ ಪ್ರಾಂಶುಪಾಲರು ಇತರರು ಇದ್ದರು.






