ಸೋಮವಾರಪೇಟೆ ಏ.22 : ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2023-24 ನೇ ಸಾಲಿಗೆ ಪ್ರಥಮ ಬಿ.ಎ. ಮತ್ತು ಬಿ.ಕಾಂ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ಏಪ್ರಿಲ್ 24 ರಿಂದ ಕಾಲೇಜಿನ ಕಚೇರಿ ವೇಳೆಯಲ್ಲಿ ಅರ್ಜಿ ಪಡೆದು ಪ್ರವೇಶ ಪಡೆಯಬಹುದು. ಕಾಲೇಜಿನಲ್ಲಿ ಎಲ್ಲಾ ವಿಷಯಗಳಿಗೂ ಪೂರ್ಣಕಾಲಿಕ ಪ್ರಾಧ್ಯಾಪಕರು, ಗ್ರಂಥಪಾಲಕರು, ದೈಹಿಕ ಶಿಕ್ಷಣ ನಿರ್ದೇಶಕರನ್ನು ಒಳಗೊಂಡಿದ್ದು, ಕಾಲೇಜಿನಲ್ಲಿ ಸರ್ಕಾರದ ಸೌಲಭ್ಯಗಳಾದ ಶುಲ್ಕ ವಿನಾಯಿತಿ, ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಕಂಪ್ಯೂಟರ್ ಲ್ಯಾಬ್ ಶಿಕ್ಷಣ ತರಬೇತಿ ಲಭ್ಯವಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.95911 63808, 9590433420, 962060276,9480007249 ಅನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಧನಲಕ್ಷ್ಮಿ ಅವರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಏ.22 : ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಜಮಾ ಅತ್ ಸರ್ವರೂ ಪಾಲ್ಗೊಂಡು ಪರಸ್ಪರ ಸ್ನೇಹ ಮಿಲನ ಮಾಡಿಕೊಂಡರು. ಸ್ಥಳೀಯ ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ಹಾಖ್ ಬಾಖವಿ ಈದ್ ಖುತುಬ ನಿರ್ವಹಿಸಿ ನಾಡಿನ ಸಮಸ್ತ ಜನರಿಗೆ ಈದ್ ಸಂದೇಶ ನೀಡಿ ಮೃತಪಟ್ಟವರಿಗೆ ವಿಶೇಷ ಪ್ರಾರ್ಥನೆ ಮಾಡಿದರು. ಜಮಾ ಅತ್ ನ ಸರ್ವ ಸದಸ್ಯರು ಪಾಲ್ಗೊಂಡಿದರು.
ಮಡಿಕೇರಿ ಏ.21 : ಮಾರ್ಚ್/ಏಪ್ರಿಲ್ ನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವು ಏಪ್ರಿಲ್, 24 ರಿಂದ ಮೇ, 02 ರವರೆಗೆ ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ನಡೆಯಲಿದೆ. ಮೌಲ್ಯಮಾಪನ ಕಾರ್ಯವನ್ನು ಯಾವುದೇ ಅಡಚಣೆ ಮತ್ತು ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಮೌಲ್ಯಮಾಪನ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶಿಸಿದ್ದಾರೆ. ಈ ಅವಧಿಯಲ್ಲಿ ನಿರ್ಬಂಧಿತ ಪ್ರದೇಶದ ಒಳಗೆ ಮೌಲ್ಯಮಾಪನ ಕಾರ್ಯದ ಅಧಿಕಾರಿ/ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದಂತೆ ಯಾರೇ ವ್ಯಕ್ತಿಗಳಿಗೆ ಪ್ರವೇಶ ಇರುವುದಿಲ್ಲ. ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ಏ.22 : ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ 2023-24 ನೇ ಸಾಲಿಗೆ ಪ್ರಥಮ ಬಿ.ಎ. ಮತ್ತು ಬಿ.ಕಾಂ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ಏ.24 ರಿಂದ ಕಾಲೇಜಿನ ಕಚೇರಿ ವೇಳೆಯಲ್ಲಿ ಅರ್ಜಿ ಪಡೆದು ಪ್ರವೇಶ ಪಡೆಯಬಹುದು. ಕಾಲೇಜಿನಲ್ಲಿ ಎಲ್ಲಾ ವಿಷಯಗಳಿಗೂ ಪೂರ್ಣಕಾಲಿಕ ಪ್ರಾಧ್ಯಾಪಕರು, ಗ್ರಂಥಪಾಲಕರು, ದೈಹಿಕ ಶಿಕ್ಷಣ ನಿರ್ದೇಶಕರನ್ನು ಒಳಗೊಂಡಿದ್ದು, ಕಾಲೇಜಿನಲ್ಲಿ ಸರ್ಕಾರದ ಸೌಲಭ್ಯಗಳಾದ ಶುಲ್ಕ ವಿನಾಯಿತಿ, ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಸ್ಟೆಲ್ ವ್ಯವಸ್ಥೆ ಲಭ್ಯವಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.9945185783, 9845907344, 9008180049, 9538506370 ನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಜವರಪ್ಪ ಅವರು ತಿಳಿಸಿದ್ದಾರೆ.
ಮಡಿಕೇರಿ ಏ.22 : ಕೊಡಗು ಜಿಲ್ಲಾ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಣಾ ವೇದಿಕೆಗೆ ಸದಸ್ಯರು ಬೇಕಾಗಿದ್ದಾರೆ. ಆದ್ದರಿಂದ ಈ ಸದಸ್ಯತ್ವ ಹೊಂದಲು ಬಯಸುವವರು ವಿದ್ಯುತ್ ಕ್ಷೇತ್ರದ ಬಗ್ಗೆ ಅನುಭವವುಳ್ಳವರು ಅಥವಾ ಸೂಕ್ತ ಜ್ಞಾನ ಹೊಂದಿರುವ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮಾಹಿತಿಯೊಂದಿಗೆ ಅರ್ಜಿಯನ್ನು ಏಪ್ರಿಲ್, 27 ರೊಳಗೆ ಕಾರ್ಯನಿರ್ವಾಹಕ ಎಂಜಿನಿಯರ್(ವಿ)ರವರ ಕಚೇರಿ, ಕಾರ್ಯ ಮತ್ತು ಪಾಲನೆ ವಿಭಾಗ ಮಡಿಕೇರಿ, ಇಮೇಲ್ eeemdk@cescmysore.org, cesceemdk @gmail.com ಕಚೇರಿಗೆ/ ವಿಳಾಸಕ್ಕೆ ವಿವರವನ್ನು ಸಲ್ಲಿಸುವಂತೆ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.
ಮಡಿಕೇರಿ ಏ.21 : ವಿರಾಜಪೇಟೆ ಪಟ್ಟಣದ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು ಈ ಸಾಲಿನ ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದುಕೊಂಡಿದೆ. ಈ ಸಾಲಿನಲ್ಲಿ ಕಾಲೇಜಿನ 194 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 76 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 102 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕೃತಿಕ ಬಿ.ಕೆ 585 ಅಂಕ ಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸುಮೆರ ಎಂ.ಎಸ್ 580 ಅಂಕ ಗಳಿಸಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. 577 ಅಂಕ ಗಳಿಸಿದ ಜಾಸ್ಮಿನ್ ವೇಗಸ್ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ 572 ಅಂಕ ಗಳಿಸಿ ಜಾಸ್ಮಿನ್ ಪಿ.ಎ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಶೇ 91 ಫಲಿತಾಂಶ ಪಡೆಯುವ ಮೂಲಕ ಉತ್ತಮ ಸಾಧನೆ ತೋರಿದೆ. ಪರೀಕ್ಷೆ ಎದುರಿಸಿದ 134…
ಮಡಿಕೇರಿ ಏ.21 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಮಂಥರ್ ಗೌಡ ಪರ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯಿಂದ ಬಿರುಸಿನ ಚುನಾವಣಾ ಪ್ರಚಾರ ನಡೆಯಿತು. ನಗರದ ಅಶೋಕಪುರ, ಗುಂಡೂರಾವ್ ಕಾಂಪೌಂಡ್ ಮತ್ತು ಆಕಾಶವಾಣಿ ಬಳಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪಕ್ಷದ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಿ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡಿದರು. ಈ ಸಂದರ್ಭ ಕೊಡಗು ಚುನಾವಣಾ ಉಸ್ತುವಾರಿ ಹೆಚ್.ಎಂ.ನಂದಕುಮಾರ್, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್, ಡಿಸಿಸಿ ಸದಸ್ಯರುಗಳಾದ ಕೆ.ಯು.ಅಬ್ದುಲ್ ರಜಾಕ್, ಚುಮ್ಮಿದೇವಯ್ಯ, ಎಂ.ಎ.ಜಫ್ರುಲ್ಲ, ಟಿ.ಹೆಚ್.ಉದಯ ಕುಮಾರ್, ಪ್ರಕಾಶ್ ಆಚಾರ್ಯ, ಮಡಿಕೇರಿ ನಗರ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ದೊಳ್‌ಪಾಡಿ, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ಬೂತ್ ಅಧ್ಯಕ್ಷರುಗಳಾದ ನವೀನ್, ಗೀತಾ, ಕುಮಾರ್, ಕವನ್ ಕೆಟೋಳಿ, ಕಾಂಗ್ರೆಸ್ ನಾಯಕರಾದ ಶಮ (ಶಮ್), ಜಯರಾಮ್, ದೇವರಾಜ್, ಜಯಣ್ಣ, ಪ್ರೇಮ ಲಿಂಗಪ್ಪ, ನಗರಸಭಾ ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸೇವಾದಳದ…
ಮಡಿಕೇರಿ ಏ.21 : ವಿಧಾನಸಭಾ ಚುನಾವಣೆ ಸಂಬಂಧ ನಾಮಪತ್ರ ಪರಿಶೀಲನಾ ಕಾರ್ಯವು ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕಚೇರಿಯಲ್ಲಿ ನಡೆಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ ಪದ್ಮನಾಭ ಎ.ಎನ್.(ಜನಸಂಘ ಪಾರ್ಟಿ) ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಉಳಿದಂತೆ 21 ಮಂದಿಯ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರು ತಿಳಿಸಿದ್ದಾರೆ. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ ಎಚ್.ಪಿ.ಸರೋಜ(ಪಕ್ಷೇತರ) ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದ್ದು, ಉಳಿದಂತೆ 9 ನಾಮಪತ್ರಗಳು ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿ ಶಬಾನಾ ಎಂ.ಶೇಖ್ ಅವರು ತಿಳಿಸಿದ್ದಾರೆ. ನಾಮಪತ್ರ ವಾಪಸ್ಸು ಪಡೆಯಲು ಏಪ್ರಿಲ್, 24 ಕಡೆಯ ದಿನವಾಗಿದೆ. ಮೇ, 10 ರಂದು ಮತದಾನ ನಡೆಯಲಿದೆ, ಮೇ, 13 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಮಡಿಕೇರಿ ಏ.21 : ಮೂಡುಬಿದರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ, ಕೊಡಗು ಜಿಲ್ಲೆಯ ಕುಶಾಲನಗರದ ಅನನ್ಯ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 600 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮರಾಗಿದ್ದಾರೆ. ಅನನ್ಯ ಅವರು ಅಶೋಕ್ ಕೆ.ಇ ಹಾಗೂ ನಳಿನಿ ದಂಪತಿಯ ಪುತ್ರಿ.
ಮಡಿಕೇರಿ ಏ.21 : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆ ಶೇ.90.55 ಫಲಿತಾಂಶದೊಂದಿಗೆ ರಾಜ್ಯಕ್ಕೆ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ಬಾರಿಯ ಪಿಯುಸಿ ಪರೀಕ್ಷೆಯ ಕಲಾ ವಿಭಾಗದಲ್ಲಿ ಶನಿವಾರಸಂತೆಯ ವಿಘ್ನೇಶ್ವರ ಪದವಿ ಪೂರ್ವ ಕಾಲೇಜಿನ ಅಕ್ಷತಾ ಎಲ್. ಅವರು 578 ಅಂಕ, ವಾಣಿಜ್ಯ ವಿಭಾಗದಲ್ಲಿ ಮಡಿಕೇರಿಯ ಸಂತ ಮೈಕೆಲರ ಪಿಯು ಕಾಲೇಜಿನ ರೊಲೆನ್ಸಿಯಾ ಬಿಯಾನ್ ರಾಯ್ 593 ಹಾಗೂ ವಿಜ್ಞಾನ ವಿಭಾಗದಲ್ಲಿ ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನ ಬ್ರಿಜೇಶ್ ನಿರಂಜನ್ ಕೆ. ಅವರು 591 ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ::: 4185 ಮಂದಿ ತೇರ್ಗಡೆ ::: ಕೊಡಗು ಜಿಲ್ಲೆಯಲ್ಲಿ ಈ ಬಾರಿಯ ಪಿಯುಸಿ ಪರೀಕ್ಷೆಗೆ ಹಾಜರಾದ 4622 ವಿದ್ಯಾರ್ಥಿಗಳಲ್ಲಿ 4185 ಮಂದಿ ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 985 ವಿದ್ಯಾರ್ಥಿಗಳಲ್ಲಿ 779 ಮಂದಿ ಉತ್ತೀರ್ಣರಾಗಿ ಶೇ.79.09 ಫಲಿತಾಂಶ ಬಂದಿದ್ದರೆ, ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ತೆಗೆದುಕೊಂಡ 2347 ವಿದ್ಯಾರ್ಥಿಗಳಲ್ಲಿ 2168 ಮಂದಿ ತೇರ್ಗಡೆಯಾಗುವ ಮೂಲಕ ಶೇ.92.37 ಫಲಿತಾಂಶ,…






