ಕುಶಾಲನಗರ ಏ.17 : ಆರೋಗ್ಯಕರ ಬದುಕನ್ನು ಸಾಗಿಸಲು ಉತ್ತಮ ಜೀವನ ಶೈಲಿಯೊಂದಿಗೆ ಸ್ವಚ್ಚ ಹಾಗೂ ಉತ್ತಮ ಪರಿಸರ ಅತ್ಯಗತ್ಯವಾಗಿದೆ, ಸಾರ್ವಜನಿಕ ಪ್ರದೇಶಗಳಲ್ಲಿ ಮರ ಗಿಡಗಳನ್ನು ಹೆಚ್ಚು ಹೆಚ್ಚಾಗಿ ಬೆಳೆಸುವ ಮೂಲಕ ಪ್ರಕೃತಿಯ ಆರಾಧನೆಯೊಂದಿಗೆ ಉತ್ತಮ ಪರಿಸರ ನಿರ್ಮಾಣ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕಾವೇರಿ ನದಿ ಸ್ವಚ್ಚತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರದ ಟೀಂ ಆಟಿಟ್ಯೂಡ್ ಕಲ್ಚರಲ್ ಅಕಾಡೆಮಿಯ ವತಿಯಿಂದ ಸೀಜನ್-7 ರ ಬೇಸಿಗೆ ಶಿಬಿರದ ಅಂಗವಾಗಿ ಸ್ಥಳೀಯ ಕಾವೇರಿ ಉದ್ಯಾನವನದಲ್ಲಿ ನಡೆದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಿನೇ ದಿನೇ ಹೆಚ್ಚುತ್ತಿರುವ ಭೂಮಿಯ ತಾಪಮಾನವನ್ನು ಕಡಿಮೆ ಮಾಡಲು ಹಾಗೂ ಹಸಿರನ್ನು ಹೆಚ್ಚಿಸಿ ಶುದ್ಧ ಗಾಳಿಯನ್ನು ಪಡೆಯಲು ಪ್ರತಿಯೊಬ್ಬ ನಾಗರಿಕರು ಮರಗಿಡಗಳನ್ನು ನೆಟ್ಟು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಹೇಳಿದರು. ಮಕ್ಕಳುತಮ್ಮ ಹುಟ್ಟು ಹಬ್ಬದ ಸಂದರ್ಭ ಒಂದು ಗಿಡವನ್ನು ಕಡ್ಡಾಯವಾಗಿ ನೆಟ್ಟು ಬೆಳೆಸುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದರು. ಟೀಂ ಆಟಿಟ್ಯೂಡ್ ಕಲ್ಚರಲ್ ಅಕಾಡೆಮಿಯ…
ಲೇಖಕ: admin
ಮಡಿಕೇರಿ ಏ.17 : ಭಾರತದ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಪೊನ್ನಂಪೇಟೆಯ ಬೆಳ್ಳೂರು ಗ್ರಾಮದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಬೆಳ್ಳೂರು ಗ್ರಾಮದ ಹಿರಿಯರಾದ ಮುತ್ತಣ್ಣ ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ ಸಮಿತಿಯ ಪ್ರಮುಖರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲರ್ಪಣೆ ಮಾಡಿ ಗೌರವಿಸಿದರು. ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಕೃಷ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಸಂಘಟನಾ ಸಂಚಾಲಕಾರದ ಕರ್ಕು, ಧನು, ಚಂದ್ರ, ಜೌರ, ನಿತೇಶ್ , ಗ್ರಾಮ ಸಂಚಾಲಕ ಸುರೇಶ್ ಹಾಗೂ ಮತ್ತಿತರು ಹಾಜರಿದ್ದರು.
ಮಡಿಕೇರಿ ಏ.17 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಲ್ಕುನಾಡು ಮುಸ್ಲಿಂ ಒಕ್ಕೂಟದ ಪ್ರಮುಖ, ಅಲ್ಪಸಂಖ್ಯಾತ ಮುಖಂಡ ಕುಂಜಿಲದ ನಾಸರ್ ಮಕ್ಕಿ ಸೋಮವಾರ ಚುನಾವಣಾಧಿಕಾರಿ ಶಬಾನಾ ಎಂ. ಷೇಕ್ ಅವರಿಗೆ ನಾಮಪತ್ರ ಸಲ್ಲಿಸಿದರು. ವಿರಾಜಪೇಟೆ ಗಡಿಯಾರ ಕಂಬದ ಬಳಿಯಿಂದ ಬೆಂಬಲಿಗರೊoದಿಗೆ ಮೆರವಣಿಗೆಯಲ್ಲಿ ಬಂದ ನಾಸರ್ ಮಕ್ಕಿ ನಾಮಪತ್ರ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೊಡಗಿನಲ್ಲಿ ಹಿಂದಿನಿoದಲೂ ರಾಜಕೀಯ ಪಕ್ಷಗಳು ಜಿಲ್ಲೆಯ ಅಲ್ಪಸಂಖ್ಯಾತರನ್ನು ಸೂಕ್ತ ರೀತಿಯಲ್ಲಿ ಪರಿಗಣಿಸಿಲ್ಲ ಎಂದು ಟೀಕಿಸಿದರು. ಇದೀಗ ಪರಿಸ್ಥಿತಿ ಬದಲಾಗಿದ್ದು, ಅಲ್ಪಸಂಖ್ಯಾತರು ಆಮಿಷಗಳಿಗೆ ಬಲಿಯಾಗಿ ಮತ ನೀಡುವವರಲ್ಲ ಎಂಬುವುದನ್ನು ತೋರಿಸಿಕೊಡಬೇಕಿದೆ ಎಂದರು.
ಮಡಿಕೇರಿ ಏ.17 : 2023ರ ವಿಧಾನಸಭಾ ಚುನಾವಣೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ನಗರ ಕಾಂಗ್ರೆಸ್ ಸಮಿತಿಯ ಚುನಾವಣಾ ಉಸ್ತುವಾರಿಯಾಗಿ ಎಸ್.ಐ.ಮುನೀರ್ ಅಹಮ್ಮದ್ ಅವರನ್ನು ನೇಮಕ ಮಾಡಲಾಗಿದೆ. ಪ್ರಮುಖರಾದ ಕೆ.ಯು.ಅಬ್ದುಲ್ ರಜಾಕ್, ಚುಮ್ಮಿದೇವಯ್ಯ, ಅಂಬೆಕಲ್ ನವೀನ್, ಕೆ.ಜಿ.ಪೀಟರ್, ಮಹಮ್ಮದ್ ಯಾಕುಬ್, ಹೆಚ್.ಎಸ್.ಬಸವರಾಜ್, ತಾಹಿರಾ ಅಬೂಬಕರ್, ದಿವ್ಯ, ಜಫ್ರುರುಲ್ಲಾ, ಕೆ.ಆರ್.ದಿನೇಶ್, ಟಿ.ಹೆಚ್.ಉದಯಕುಮಾರ್ ಅವರನ್ನು ಸಮಿತಿಯ ಸದಸ್ಯರುಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.
ಮಡಿಕೇರಿ ಏ.17 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿ ಹೆಚ್.ಎಂ.ಸೋಮಪ್ಪ ಅವರು ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಮೆರವಣಿಗೆ ಮೂಲಕ ಆಗಮಿಸಿದ ಹೆಚ್.ಎಂ.ಸೋಮಪ್ಪ ಅವರು ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಮಡಿಕೇರಿ ಏ.17 ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಕೆ.ಜಿ.ಬೋಪಯ್ಯ ಅವರು ಇಂದು ನಾಮಪತ್ರ ಸಲ್ಲಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾಕುಶಾಲಪ್ಪ, ತಾಲ್ಲೂಕು ಬಿಜೆಪಿ ಅಧ್ಯಕ್ಷ ನೆಲ್ಲಿರ ಚಲನ್ ಕುಮಾರ್, ಪಟ್ರಪಂಡ ರಘು ನಾಣಯ್ಯ ಉಪಸ್ಥಿತಿಯಲ್ಲಿ ಕೆ.ಜಿ.ಬೋಪಯ್ಯ ಅವರು ಚುನಾವಣಾಧಿಕಾರಿ ಶಬಾನ ಎಂ.ಶೇಖ್ ಅವರಿಗೆ ನಾಮಪತ್ರ ಸಲ್ಲಿಸಿದರು. ::: ಬಲ ಪ್ರದರ್ಶನ ::: ನಾಮಪತ್ರ ಸಲ್ಲಿಕೆಗೂ ಮೊದಲು ನಗರದ ತೆಲುಗರಬೀದಿಯಲ್ಲಿರುವ ಶ್ರೀ ದಕ್ಷಿಣಾ ಮಾರಿಯಮ್ಮ ಹಾಗೂ ಗಣಪತಿ ದೇಗುಲದಲ್ಲಿ ಕೆ.ಜಿ.ಬೋಪಯ್ಯ, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿದ ಬೋಪಯ್ಯ ಪಕ್ಷದ ಬಲ ಪ್ರದರ್ಶಿಸಿದರು. ::: ಬಿಜೆಪಿ ಅಧಿಕಾರಕ್ಕೆ ::: ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಜಿ.ಬೋಪಯ್ಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ಜನತೆಗೆ ನೀಡಿರುವ ಜನಹಿತ ಕಾರ್ಯಗಳ ಹಿನ್ನೆಲೆ ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲಾಧ್ಯಕ್ಷ…
ಮಡಿಕೇರಿ ಏ.17 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರು ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಮಂತರ್ ಗೌಡ, ಮಡಿಕೇರಿ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ಪ್ರಮುಖರಾದ ಹೆಚ್.ಎಸ್.ಚಂದ್ರಮೌಳಿ, ಲೋಕೇಶ್ ಹಾಗೂ ಡಾ.ಮಂತರ್ ಗೌಡ ಪತ್ನಿ ದಿವ್ಯ ಹಾಜರಿದ್ದರು. ::: ಮೆರವಣಿಗೆ ::: ನಾಮಪತ್ರ ಸಲ್ಲಿಕೆಗೂ ಮೊದಲು ಡಾ.ಮಂತರ್ ಗೌಡ ಅವರು ತಮ್ಮ ನಿವಾಸದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು. ನಂತರ ನಗರದ ಶ್ರೀ ಚೌಡೇಶ್ವರಿ ದೇವಾಲಯದ ಬಳಿಯಿಂದ ಗಾಂಧಿ ಮೈದಾನದವರೆಗೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದರು. ::: ಗೆಲುವು ಖಚಿತ ::: ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಂತರ್ ಗೌಡ ಮಡಿಕೇರಿ ಕ್ಷೇತ್ರದ ಜನ ಈ ಬಾರಿ ವಿದ್ಯಾವಂತರನ್ನು ಬೆಂಬಲಿಸಲಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಮತ ಚಲಾಯಿಸಲಿದ್ದು, ನನ್ನ ಗೆಲುವು ನೂರಕ್ಕೆ ನೂರು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನನ್ನ…
ಮಡಿಕೇರಿ ಏ.17 : ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸೋಮವಾರಪೇಟೆ ಗರಗಂದೂರು ಗ್ರಾಮದ ಜಿ.ಜಿ.ಹೇಮಂತ್ ಕುಮಾರ್ ಇಂದು ನಾಮಪತ್ರ ಸಲ್ಲಿಸಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ ಹೇಮಂತ್ ಕುಮಾರ್ ಮಡಿಕೇರಿ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು. ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿರುವ ಇವರು ಕ್ಷೇತ್ರದ ಮತದಾರರು ಬದಲಾವಣೆಯನ್ನು ಬಯಸಿದ್ದಾರೆ ಎಂದರು. ಕಳೆದ 30 ವರ್ಷಗಳಿಂದ ಬಿಜೆಪಿಯ ಪ್ರಮಾಣಿಕ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸಿದ್ದೇನೆ. ಆದರೆ ಬಿಜೆಪಿಯಲ್ಲಿ ನೈಜ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಪಕ್ಷದ ನಾಯಕರು ಈ ಬಾರಿ ಬದಲಾವಣೆಗೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಯಾವುದೇ ಬದಲಾವಣೆ ಮಾಡದೆ ಇರುವುದರಿಂದ ಮನನೊಂದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಕಾರ್ಯಕರ್ತರ ಶ್ರಮದಿಂದ ನನ್ನ ಗೆಲುವು ಖಚಿತವಾಗಿದ್ದು, ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಮಂತ್ ಕುಮಾರ್ ಸ್ಪಷ್ಟಪಡಿಸಿದರು.
ಮಡಿಕೇರಿ ಏ.17 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಇಂದು ನಾಮಪತ್ರ ಸಲ್ಲಿಸಿದರು. ಮಡಿಕೇರಿಯಲ್ಲಿ ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಎಂ.ಪಿ.ಅಪ್ಪಚ್ಚು ರಂಜನ್, ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ.ಭಾರತೀಶ್, ಉಪಾಧ್ಯಕ್ಷ ಅಭಿಮನ್ಯು ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಹಾಜರಿದ್ದರು. ::: ಮೆರವಣಿಗೆ ::: ನಾಮಪತ್ರ ಸಲ್ಲಿಕೆಗೂ ಮೊದಲು ಅಪ್ಪಚ್ಚು ರಂಜನ್ ಅವರು ನಗರದ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಿಂದ ಗಾಂಧಿ ಮೈದಾನದವರೆಗೆ ಪಕ್ಷದ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು. ::: ಬಿಜೆಪಿ ಸರ್ಕಾರ ::: ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಪ್ಪಚ್ಚುರಂಜನ್ ಈ ಬಾರಿ ಬಿಜೆಪಿ 134 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಮತ್ತೆ ನಮ್ಮದೇ ಸರ್ಕಾರ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದಲ್ಲಿ ಗೆಲುವು…
ಮಡಿಕೇರಿ ಏ.17 : ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ “ಕರ್ನಾಟಕ ದಲಿತ ಸಂಘರ್ಷ ಸಮಿತಿ” ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲೆಯ ಆಯಾಯ ತಾಲೂಕುಗಳಲ್ಲಿ ಸಂಘಟನೆಯ ಪ್ರಮುಖರು ತಮ್ಮ ತಮ್ಮ ನಿವಾಸದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಸಮರ್ಪಿಸಿದರು. ಸಂಘಟನೆಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಂಸಿಹ ಅವರ ವಿರಾಜಪೇಟೆಯ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘಟನೆಯ ಪ್ರಮುಖರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಗಾಯತ್ರಿ ನರಂಸಿಹ ಡಾ.ಅಂಬೇಡ್ಕರ್ ಅವರ ತತ್ವ, ಆದರ್ಶ, ಚಿಂತನೆಗಳು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿ ನಿಂತಿದೆ. ಸಂವಿಧಾನದ ಮೂಲ ಉದ್ದೇಶವನ್ನು ಇಂದಿನ ಯುವಕರು, ವಿದ್ಯಾರ್ಥಿಗಳು ತಮ್ಮ ಜೀವನದುದ್ದಕ್ಕೂ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ವಿರಾಜಪೇಟೆ ತಾಲೂಕಿನ ಸಂಘಟನೆ ಪ್ರಮುಖರಾದ ಜೇಮ್ಸ್, ಮನು, ರಘು, ಮಂಜು, ಮಂಜುಳಾ, ಕುಳಿಯ, ಬೋಜ, ಅಯ್ಯಪ್ಪ, ಸವಿತ ಕೊಡ್ಲಿಪೇಟೆ ಪವಿತ್ರ ಮತ್ತು ಇತರರು, ಸೋಮವಾರಪೇಟೆಯಲ್ಲಿ ಮನೋಜ್, ಶ್ರೀನಿವಾಸ್, ಕೃಷ್ಣ ಇತರರು,…






