ಮಡಿಕೇರಿ ಏ.15 : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಕೊಡವ ಹೊಸ ವರ್ಷಾಚರಣೆ ಎಡ್ಮ್ಯಾರ್ ಒಂದ್ ರ ಪ್ರಯುಕ್ತ ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮಾತನಾಡಿ ಹೊಸ ವರ್ಷವನ್ನು ಕಳೆದ 28 ವರ್ಷಗಳಿಂದ ಸಿಎನ್‌ಸಿ ಸಂಘಟನೆ ಸಾರ್ವಜನಿಕ ಕಾರ್ಯಕ್ರಮವಾಗಿ ನಡೆಸಿಕೊಂಡು ಬರುತ್ತಿದೆ. ಇದು 29 ನೇ ಆಚರಣೆಯಾಗಿದ್ದು, ಕೊಡವ ಬುಡಕಟ್ಟು ಜನಾಂಗದ ಪರವಾದ ಹಕ್ಕೊತ್ತಾಯಗಳನ್ನು ಮಂಡಿಸಲಾಗಿದೆ ಎಂದರು. ಅತ್ಯಂತ ಸೂಕ್ಷ್ಮ ಜನಾಂಗವಾಗಿರುವ ಕೊಡವರಿಗೆ ತಮ್ಮದೇ ಆದ ಪ್ರಾಚೀನ ಆಚಾರ, ವಿಚಾರ, ಸಂಸ್ಕೃತಿಯ ಆಚರಣೆಗಳಿದ್ದು, ಇದನ್ನು ಆಡಳಿತ ವ್ಯವಸ್ಥೆಗಳು ಗೌರವಿಸಬೇಕು. ಆ ಮೂಲಕ ಸಣ್ಣ ಸಮುದಾಯದ ಸಂಪ್ರದಾಯವನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು. ಇಂದು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಜಯಂತಿಯಾಗಿರುವ ಹಿನ್ನೆಲೆ ಅವರನ್ನು ಕೂಡ ಸ್ಮರಿಸಿಕೊಳ್ಳಬೇಕಾಗಿದೆ. ಅಂಬೇಡ್ಕರ್ ಅವರು ಜಾತಿ, ಮತ, ಧರ್ಮ, ಜನಾಂಗ ಭೇದವನ್ನು ಲೆಕ್ಕಿಸದೆ ಎಲ್ಲಾ ಜನರ ಯೋಗಕ್ಷೇಮಕ್ಕಾಗಿ ಶ್ರೇಷ್ಠ ಸಂವಿಧಾನವನ್ನು ರಚಿಸಿದರು. ಇದು ನಮಗೆ ಧರ್ಮಗ್ರ‍್ರಂಥವಿದ್ದಂತೆ. ಮಹಾತ್ಮ ಗಾಂಧಿ ಅವರು…
ಲೇಖಕ: admin
ಮಡಿಕೇರಿ ಏ.15 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿ ಹೆಚ್.ಎಂ.ಸೋಮಪ್ಪ ಅವರು ಏ.17 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಮಧ್ಯಾಹ್ನ 2 ಗಂಟೆಗೆ ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿರುವ ಅವರು ಕಡು ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಎಲ್ಲಾ ಸಮುದಾಯದ ಮಂದಿ ಜನಸಾಮಾನ್ಯ ಅಭ್ಯರ್ಥಿಯಾಗಿರುವ ನನಗೆ ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಮತ್ತು ಕೇಂದ್ರದ ಶಾಸನ ಸಭೆಗಳಿಗೆ ಆಯ್ಕೆಯಾಗುತ್ತಿರುವವರು ರೈತರ, ಕಾರ್ಮಿಕರ ಹಾಗೂ ಜನಸಾಮಾನ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇಂತಹ ಸಂದಿಗ್ಧ ಕಾಲಘಟ್ಟದಲ್ಲಿ ಜನಪರ ಹೋರಾಟದ ಭಾಗವಾಗಿ ಈ ಬಾರಿ ಸಿಪಿಐ ಸ್ಪರ್ಧೆಗಿಳಿದಿದೆ ಎಂದರು. ಪಕ್ಷದಿಂದ ಶೋಷಿತ ಸಮುದಾಯಗಳ ಪರವಾಗಿ ನಿರಂತರವಾದ ಹೋರಾಟಗಳನ್ನು ನಡೆಸಿಕೊಂಡು ಬರಲಾಗಿದೆ. ಸೂರಿಲ್ಲದವರಿಗಾಗಿ ಸೂರು ಒದಗಿಸುವ ನಿಟ್ಟಿನಲ್ಲಿ ‘ಸೂರಿಗಾಗಿ ಸಮರ’ ಎನ್ನುವ ಆಂದೋಲವನ್ನು ಪಕ್ಷ ರೂಪಿಸಿತ್ತು. ಜಿಲ್ಲೆಯಲ್ಲಿನ ವನ್ಯಜೀವಿ- ಮಾನವ ಸಂಘರ್ಷ, ದುಡಿಯುವ ವರ್ಗದ ಶೋಷಣೆ, ರೈತ ಸಮೂಹಕ್ಕೆ ನಡೆಯುತ್ತಿರುವ ಅನ್ಯಾಯ, ಕಾರ್ಮಿಕ ಸಮೂಹದ ಮೂಲಭೂತ ಬೇಡಿಕೆಗಳಿಗೆ ಸೂಕ್ತ ಸ್ಪಂದನ ದೊರಕಬೇಕಾಗಿದೆ.…
ಮಡಿಕೇರಿ ಏ.15 : ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಚಿತ್ರಸಂತೆಯಂಥ ಕಲಾಪ್ರಕಾರ ಆಯೋಜಿಸಲು ಸೂಕ್ತ ತಾಣವಾಗಿದ್ದು, ಮುಂದಿನ ದಿನಗಳಲ್ಲಿ ವಿನೂತನವಾದ ಚಿತ್ರಸಂತೆಯನ್ನು ಆಯೋಜಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ. ನಗರದ ರಾಜಾಸೀಟು ಉದ್ಯಾನವನದಲ್ಲಿ ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮಡಿಕೇರಿ ತಾಲೂಕು ಜಾನಪದ ಪರಿಷತ್ ಸಹಯೋಗದಲ್ಲಿ ಶನಿವಾರ ಆಯೋಜಿತವಾಗಿದ್ದ ‘ಕೊಡಗು ಮತ್ತು ಮತದಾನ’ ಚಿತ್ರಕಲಾ ಸ್ಪರ್ಧೆ ಮತ್ತು ನಾನು ಮತ ಹಾಕುವೆ ಎಂಬ ಬೃಹತ್ ಕ್ಯಾನ್ವಸ್ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವೀಪ್ ಸಮಿತಿ ವತಿಯಿಂದ ನಾನಾ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದೆ. ಮತದಾನದ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುವಂತೆ ಮಾಡುವ ಹೊಣೆಗಾರಿಕೆ ಸಮಿತಿ ಮೇಲಿದೆ. ಈ ನಿಟ್ಟಿನಲ್ಲಿ ಮತದಾನದ ಮಹತ್ವ ಸಾರುವ ಚಿತ್ರಕಲಾ ಸ್ಪರ್ಧೆಯನ್ನೂ ಮಡಿಕೇರಿ ತಾಲೂಕು ಜಾನಪದ ಪರಿಷತ್ ಸಹಯೋಗದಲ್ಲಿ ಆಯೋಜಿಸಲಾಗಿದೆ. ಇದಕ್ಕೆ ಉತ್ತಮ ಸ್ಪಂದನೆ ದೊರಕಿರುವುದು ಹರ್ಷ ತಂದಿದೆ ಎಂದರು. ಭಾನುವಾರ ಮಡಿಕೇರಿಯಲ್ಲಿ ಮತದಾನ ಮಹತ್ವ ಸಾರುವ ಬೈಕ್…
ಮಡಿಕೇರಿ ಏ.15 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಮೂದಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್ ಮತ್ತು ಸಹ-ಪ್ರಾಧ್ಯಾಪಕರಾದ ಡಾ.ಶರವಣನ್ ಅವರು ಇಂಡಿಯನ್ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್ ವತಿಯಿಂದ ನೀಡಲ್ಪಡುವ ಡಾ.ಬಿ.ಎನ್.ರಾಯ್ ಅತ್ಯುತ್ತಮ ಸಂಶೋಧನ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ. ಉಡುಪಿ ಜಿಲ್ಲೆಯ ಪಡುಬಿದ್ರೆಯ ಉಷ್ಣ ವಿದ್ಯುತ್ ಸ್ಥಾವರದಿಂದ ಜನರ ಆರೋಗ್ಯ ಹಾಗೂ ಪರಿಸರದ ಮೇಲಿನ ಪರಿಣಾಮಗಳ ಕುರಿತ ಸಂಶೋಧನೆಗೆ ಈ ಪ್ರಶಸ್ತಿ ಲಭಿಸಿದೆ. ಕೋಲ್ಕತದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ.ಸಿ.ವಿ.ಆನಂದ್ ಭೋಸ್ ಅವರಿಂದ ಡಾ.ರಾಮಚಂದ್ರ ಕಾಮತ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಇಂಡಿಯನ್ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್ ಅಧ್ಯಕ್ಷ ಡಾ.ಸಂಘಮಿತ್ರ ಘೋಷ್ ಅವರು ಉಪಸ್ಥಿತರಿದ್ದರು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಏ.15 : ನಗರದ ಸಂಪಿಗೆಕಟ್ಟೆಯ ನಿವಾಸಿ, ಸಮಾಜ ಸೇವಕ ಎಂ.ಖಲೀಲ್ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಏ.18 ರಂದು ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿರುವ ಅವರು, ತಾನು ನಿರಂತರವಾಗಿ ಸಮಾನ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಜನರದ ನೋವಿಗೆ ಸ್ಪಂದಿಸುತ್ತಿದ್ದೇನೆ. ಈ ಹಿಂದೆಯೂ ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ. ರಾಜಕೀಯ ಪಕ್ಷಗಳಿಂದ ಬೇಸತ್ತಿರುವ ಮಡಿಕೇರಿ ಕ್ಷೇತ್ರದ ಜನ ಈ ಬಾರಿ ಬದಲಾವಣೆಯನ್ನು ಬಯಸುತ್ತಿದ್ದು, ನನ್ನ ಮೇಲೆ ನಂಬಿಕೆ ಇಟ್ಟು ಮತ ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು. ಭ್ರಷ್ಟಾಚಾರ ಮುಕ್ತ ಆಡಳಿತ, ಸರ್ವಋತು ರಸ್ತೆ ನಿರ್ಮಾಣ, ರೈತಾಪಿ ವರ್ಗದ ಸಮಸ್ಯೆಗಳಿಗೆ ಸ್ಪಂದನೆ, ಯುವ ಸಮೂಹಕ್ಕೆ ಉದ್ಯೋಗ ಸೃಷ್ಟಿ, ಉನ್ನತ ಶಿಕ್ಷಣಕ್ಕೆ ಆದ್ಯತೆ, ಕ್ರೀಡಾಂಗಣಗಳ ಅಭಿವೃದ್ಧಿಗೆ ಕ್ರಮ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ, ಪ್ರವಾಸಿತಾಣಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಹೈಟೆಕ್ ಗೊಳಿಸುವುದು, ನಿವೇಶನ ರಹಿತ ಬಡವರು ಹಾಗೂ ಕಾರ್ಮಿಕರಿಗೆ ವಸತಿ ಯೋಜನೆಯಡಿ ಸೂರು ಕಲ್ಪಿಸುವುದು, ಸರ್ಕಾರದ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದು…
ಸುಂಟಿಕೊಪ್ಪ ಏ.15: ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವಕ್ಕೆ ದೇವಾಲಯ ಸಮಿತಿ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಸ್ಥಳೀಯ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯದ 55ನೇ ವರ್ಷದ ತೆರೆ ಮಹೋತ್ಸವದ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ವಿದ್ಯುತ್ ದೀಪ ಹೂ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀಮುತ್ತಪ್ಪ ದೇವಸ್ಥಾನದ ಆರ್ಚಕ ಮಂಜುನಾಥ ಉಡುಪ ಹಾಗೂ ಮುತ್ತಪ್ಪ ದೇವಸ್ಥಾನ ಪೂಜಾರಿ ಶಿವರಾಂ ಗಣಪತಿ ಹವನ, ಶುದ್ಧಿ ಪುಣ್ಯಾಹ, ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಸಂಜೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವಿಕೆ, ಶ್ರೀಮುತ್ತಪ್ಪ ವೆಳ್ಳಾಟಂ, ಚಂಡೆಮೇಳ ನಡೆಯಿತು. ಈ ಸಂದರ್ಭ ದೇವಸ್ಥಾನ ಸಮಿತಿ ಕಾರ್ಯದರ್ಶಿ ಶಶಿಕಾಂತರೈ, ಖಜಾಂಜಿ ಎಸ್.ಜಿ.ಶ್ರೀನಿವಾಸ್, ಕೆ.ಪಿ.ಜಗನ್ನಾಥ್, ಎ.ಶ್ರೀಧರ್ ಕುಮಾರ್, ಸುರೇಶ್ ಗೋಪಿ, ಎ.ಶ್ರೀಧರನ್, ಧನುಕಾವೇರಪ್ಪ, ಫೃಥ್ವಿರಾಜ್, ಸುರೇಶ್ ಚಂದು, ದಿನು ದೇವಯ್ಯ, ರಮೇಶ್ ಪಿಳ್ಳೆ, ವಿ.ಎ.ಸಂತೋಷ್ ಕುಮಾರ್, ವಿನೋದ್, ದೇವಸ್ಥಾನ ಅರ್ಚಕರಾದ…
ಮಡಿಕೇರಿ ಏ.15 : ವಿವಾಹವಾದ ಮೂರೇ ದಿನದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಹೆಬ್ಬಾಲೆ ಗ್ರಾಮದ 6ನೇ ಹೊಸಕೋಟೆಯ ದಲಿತ ಯುವತಿಯ ಕುಟುಂಬಕ್ಕೆ ಅಧಿಕಾರಿಗಳು ಸರ್ಕಾರದ ಪರಿಹಾರ ನೀಡದೆ ಸತಾಯಿಸುತ್ತಿದ್ದಾರೆ ಎಂದು ಕರ್ನಾಟಕ ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಎಸ್.ಆರ್.ಮಂಜುನಾಥ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಆದರೆ ಪರಿಶಿಷ್ಟ ಜಾತಿ ಮತ್ತು ವರ್ಗ ದೌರ್ಜನ್ಯ ಕಾಯ್ದೆಯಡಿ ಮೃತ ಯುವತಿಯ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಬೇಕಾಗಿದ್ದ ಪರಿಹಾರ ಇಲ್ಲಿಯವರೆಗೆ ನೀಡಿಲ್ಲವೆಂದು ಆರೋಪಿಸಿದರು. ಈಗಾಗಲೇ ಹಲವು ಬಾರಿ ಸಾಮಾಜ ಕಲ್ಯಾಣ ಇಲಾಖೆಗೆ ಈ ಬಗ್ಗೆ ಮನವಿ ಸಲ್ಲಿಸಲಾಗಿದೆ. ಆದರೆ ಅಧಿಕಾರಿಗಳು ಪರಿಹಾರ ನೀಡದೆ ಮೀನಾಮೇಷ ಎಣಿಸುತ್ತಿದ್ದಾರೆ. ಯಾರದ್ದೋ ಒತ್ತಡಕ್ಕೆ ಮಣಿದಿರುವ ಬಗ್ಗೆ ಸಂಶಯ ವ್ಯಕ್ತವಾಗುತ್ತಿದೆ, ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡುವ ಮೂಲಕ ಅಮಾಯಕ ಯುವತಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು. ::: ಮತ್ತೊಂದು ಪ್ರಕರಣ ::: ಸೋಮವಾರಪೇಟೆ ತಾಲ್ಲೂಕಿನ ಬಾಣವಾರ ಗ್ರಾಮದ ಆಟೋ ಚಾಲಕ…
ಮಡಿಕೇರಿ ಏ.15 : ಕಾಂಗ್ರೆಸ್ ಟಿಕೆಟ್ ವಂಚಿತರಾಗಿ ತೀವ್ರ ಅಸಮಾಧಾನಕ್ಕೆ ಒಳಗಾಗಿ ‘ಪಕ್ಷೇತರ’ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ನಿರ್ಧಾರ ತಳೆದಿದ್ದ ಹರಪ್ಪಳ್ಳಿ ರವೀಂದ್ರ, ಕಾಂಗ್ರೆಸ್ ವರಿಷ್ಠರ ಮನವೊಲಿಕೆಯ ಬಳಿಕ ತಮ್ಮ ನಿಲುವನ್ನು ಬದಲಿಸಿಕೊಂಡು ಸ್ಪರ್ಧೆಯಿಂದ ಹಿಂದಕ್ಕೆ ಸರಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರಪ್ಪಳ್ಳಿ ರವೀಂದ್ರ ಅವರು, ಮಡಿಕೇರಿ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಪಕ್ಷೇತರನಾಗಿ ಸ್ಪರ್ಧಿಸಲು ಮುಂದಾಗಿದ್ದೆ. ಆದರೆ ಇದೀಗ ಕೆಪಿಸಿಸಿ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ತನ್ನೊಂದಿಗೆ ಮಾತುಕತೆ ನಡೆಸಿ ಮುಂದಿನ ದಿನಗಳಲ್ಲಿ ಅಗತ್ಯ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಟಿಕೆಟ್ ಕೈ ತಪ್ಪಿದ ನಿರಾಸೆ ಇದ್ದರೂ, ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರ ಗೆಲುವಿಗೆ ಶ್ರಮಿಸುತ್ತೇನೆ, ಅವರೊಂದಿಗೆ ಚುನಾವಣಾ ಪ್ರಚಾರಕ್ಕೂ ತೆರಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಚಿಂತನೆಗಳಡಿ ತಾನು ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ತನ್ನ ಚಿಂತನೆಯಂತೆ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ತಾಲ್ಲೂಕುವಾರು ಸುಸಜ್ಜಿತ ಆರೋಗ್ಯ ಕೇಂದ್ರ, ಪ್ರವಾಸೋದ್ಯಮದ ಅಭಿವೃದ್ಧಿ, ಜಿಲ್ಲೆಯ…
ಮಡಿಕೇರಿ ಏ.15 : ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಎ.ಎಸ್ ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ಬಿ ಫಾರ್ಮ್ ಅನ್ನು, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಅಭ್ಯರ್ಥಿಗಳ ಪರವಾಗಿ ಇಂದು ಕೆಪಿಸಿಸಿ ಅಧ್ಯಕ್ಷರ ಬಳಿಯಿಂದ ಪಡೆದುಕೊಂಡರು. ಈ ಸಂದರ್ಭ ಜಿಲ್ಲಾಧ್ಯಕ್ಷ ಹಾಗೂ ಪಕ್ಷದ ಪ್ರಮುಖ ಹರಪಳ್ಳಿ ರವೀಂದ್ರ ರಾಜ್ಯಾಧ್ಯಕ್ಷರೊಂದಿಗೆ ಕೊಡಗು ಜಿಲ್ಲೆ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ಬಾನಂಡ ಪ್ರಥ್ಯು ಉಪಸ್ಥಿತರಿದ್ದರು.
ಸೋಮವಾರಪೇಟೆ ಏ.14 : ಬೇಸಿಗೆ ಶಿಬಿರಗಳು ಮಕ್ಕಳ ಮಾನಸಿಕ ಬೆಳವಣಿಗೆಗೆ ಸಹಕಾರಿ ಎಂದು ಡ್ರಾಮಾ ಜ್ಯೂನಿಯರ್ನ ಮಾರ್ಗದರ್ಶಕ ಯೋಗೇಶ್ ಅಭಿಪ್ರಾಯಪಟ್ಟರು. ಬೆಟ್ಟದಳ್ಳಿ ಯಶೋದೆ ರಂಗ ಟ್ರಸ್ಟ್ ಹಾಗೂ ಸಾಂದೀಪನಿ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ , ಸಾಂದೀಪನಿ ಶಾಲೆಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಮಕ್ಕಳ ಕಲಾ ಕಲಿಕೆ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತೆಗೆಯಲು ಇಂತಹ ಶಿಬಿರಗಳು ಸಹಕಾರಿಯಾಗಿದೆ ಎಂದರು. ಶಿಬಿರವನ್ನು ಉದ್ಘಾಟಿಸಿದ ಚೌಡ್ಲು ಗ್ರಾ.ಪಂ ಮಾಜಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಮಾತನಾಡಿ, ವರ್ಷವಿಡೀ ಪಾಠ ಪ್ರವಚಗಳಲ್ಲೆ ತೊಡಗಿರುವ ಮಕ್ಕಳಿಗೆ ಬೇಸಿಗೆ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳ ಮನಸ್ಸು ಹಾಗೂ ದೈಹಿಕವಾಗಿ ಬದಲಾವಣೆ ಸಿಕ್ಕಂತಾಗುತದೆ ಎಂದರು. ಪೋಷಕರು ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಇಂಥ ತರಬೇತಿ ಕೊಡಿಸಿದರೆ ಮುಂದೆ ಸಾಧನೆಗೆ ಸಹಕಾರಿಯಾಗಲಿದೆ ಎಂದರು. ವೇದಿಕೆಯಲ್ಲಿ ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಎಸ್.ಮಹೇಶ್, ಸಹಕಾರಿ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ್ ,ಶಿಕ್ಷಕಿ ವಸಂತಿ, ಶಿಬಿರದ ಸಂಚಾಲಕ ನಿಶಾಂತ್ ಮುತ್ತಣ್ಣ, ನಿರ್ದೇಶಕ ಗಣೇಶ್…






