ಮಡಿಕೇರಿ.ಏ.15 : ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಏ.16 ರಂದು ಮಡಿಕೇರಿ ಪತ್ರಿಕಾಭವನದಲ್ಲಿ ಪತ್ರಕರ್ತರಿಗಾಗಿ ಬೆಳಿಗ್ಗೆ 9 ಗಂಟೆಯಿಂದ ಒಳಾಂಗಣ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಕ್ರೀಡಾಕೂಟದ ಉದ್ಘಾಟನೆಯನ್ನು ಹಿರಿಯ ವಕೀಲ ಡಾ.ಯಾಲದಾಳು ಮನೋಜ್ ಬೋಪಯ್ಯ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ವಹಿಸಲಿದ್ದು, ಅತಿಥಿಯಾಗಿ ಸಂಘದ ಉಪಾಧ್ಯಕ್ಷ ಹಾಗೂ ಕ್ರೀಡಾಕೂಟದ ಸಂಚಾಲಕರಾದ ಜಿ.ವಿ.ರವಿಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಏ.15 : ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಹಂತಹಂತವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನಾಂಗದ ಪ್ರತಿಯೊಬ್ಬರು ಕೂಡಾ ಸಂಘದ ಜತೆಗೆ ಕೈಜೋಡಿಸುವಂತೆ ಸಂಘದ ಜಿಲ್ಲಾಧ್ಯಕ್ಷ ಬಿ.ಡಿ.ಜಗದೀಶ್ ರೈ ಮನವಿ ಮಾಡಿದರು. ನಗರದ ಗಾಂಧಿ ಮೈದಾನ ಬಳಿಯಿರುವ ಖಾಸಗಿ ಕಟ್ಟಡದಲ್ಲಿ ನಡೆದ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮುದಾಯ ಬಾಂಧವರಿಗಾಗಿ ಸಂಘದ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ತುಳು ಭಾಷಿಕರ ಹೊಸ ವರ್ಷವಾದ ಬಿಸು ಹಬ್ಬವನ್ನು ಮುಂದಿನ ವರ್ಷದಿಂದ ಸಂಘದ ನೇತೃತ್ವದಲ್ಲಿ ಸಂಭ್ರಮದಿಂದ ಆಚರಿಸುವ ಉದ್ದೇಶವಿದೆ. ನಮ್ಮ ಸಂಸ್ಕøತಿ, ಸಂಪ್ರದಾಯವನ್ನು ಬಿಂಬಿಸುವ ಆಚರಣೆಯಾಗಿ ಎಲ್ಲರೂ ಸಂಭ್ರಮಿಸುವ ರೀತಿಯ ಕಾರ್ಯಕ್ರಮ ಮಾಡಲಾಗುವುದೆಂದರು. ಜಿಲ್ಲಾ ಬಂಟರ ಸಂಘದ ಜತೆಗೆ ತಾಲೂಕು ಘಟಕ, ನಗರ ಮಹಿಳಾ ಘಟಕ, ಯುವ ಬಂಟ್ಸ್ ಅಸೋಸಿಯೇಷನ್ ಕಾರ್ಯಚಟುವಟಿಕೆಗಳಿಗೆ ಈ ಕಚೇರಿಯನ್ನು ಬಳಸಿಕೊಳ್ಳಬಹುದು. ಸಂಘದ ಕಾರ್ಯಚಟುವಟಿಕೆಗಳು ಜಿಲ್ಲಾ ಬಂಟರ ಭವನದಲ್ಲಿ ಆಗಬೇಕೆಂಬ ಕನಸು ಜನಾಂಗ ಬಾಂಧವರಲ್ಲಿದೆ. ಅದು ಈಡೇರಬೇಕಾದರೆ ಎಲ್ಲರ ಸಹಕಾರ ಅಗತ್ಯ ಎಂದರು. ಕಾರ್ಯದರ್ಶಿ ರವೀಂದ್ರ ವಿ.…
ಮಡಿಕೇರಿ ಏ.15 : ಸಿರಿಗನ್ನಡ ವೇದಿಕೆ ಕೊಡಗು ಹಾಗೂ ಸಿರಿಗನ್ನಡ ವೇದಿಕೆ ಮಹಿಳಾ ಘಟಕದ ಪದಗ್ರಹಣ ಹಾಗೂ ಕವಿಗೋಷ್ಠಿ ಕಾರ್ಯಕ್ರಮ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ನಡೆಯಿತು. ಸಿರಿಗನ್ನಡ ವೇದಿಕೆ ಮಡಿಕೇರಿ ತಾಲೂಕು ಅಧ್ಯಕ್ಷೆ, ಸಾಹಿತಿ, ನಿರ್ಮಾಪಕಿ, ನಟಿ ಈರಮಂಡ ಹರಿಣಿ ವಿಜಯ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿರಿಗನ್ನಡ ವೇದಿಕೆಯ ರಾಜ್ಯ ಸಮಿತಿ ಕಾರ್ಯಾಧ್ಯಕ್ಷೆ ಡಾ.ಸೌಗಂಧಿಕಾ ವಿ.ಜೋಯಿಸ್ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಮಾತನಾಡಿದ ಅವರು ಸಂಘಟನೆಗಳಲ್ಲಿ ಹುದ್ದೆ ಮುಖ್ಯವಲ್ಲ, ಸಲ್ಲಿಸುವ ಸೇವೆ ಮುಖ್ಯ. ನಾವು ಮಾಡುವ ಜನಸೇವೆ ಶಾಶ್ವತವಾಗಿರುತ್ತದೆ ಎಂದರು. ಹಿರಿಯ ಕವಿಗಳು, ಸಾಹಿತಿಗಳನ್ನು ನೆನಪಿಸಿಕೊಂಡು ಅವರುಗಳ ಬರಹಗಳನ್ನು ಓದಬೇಕು; ಮೌಲ್ಯಯುತ ಬರಹಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕೆಂದು ಹೇಳಿದರು. ಕಾರ್ಯಕ್ರಮ ಉದ್ಘಾಟನೆ ಮಾಡಿದ ಸುಳ್ಯದ ಕೆವಿಜಿ ವೈದ್ಯಕೀಯ ಕಾಲೇಜು ಪ್ರಾಧ್ಯಾಪಕ ಡಾ.ಮೋಹನ್ ಅಪ್ಪಾಜಿ ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ಉತ್ತಮ ಸಾಹಿತಿಗಳಿದ್ದಾರೆ. ಅವರುಗಳ ಮಾರ್ಗದರ್ಶನದೊಂದಿಗೆ ಇನ್ನೂ ಹೆಚ್ಚಿನ ಸಾಹಿತಿಗಳು ಮುಂದೆ ಬರಬೇಕು. ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.…
ಮಡಿಕೇರಿ ಏ.15 : ಕುದುಕುಳಿ ಕ್ರಿಕೆಟ್ ಸಮಿತಿ ಆಯೋಜಿಸಿದ ಗೌಡ ಕುಟುಂಬಗಳ ನಡುವಿನ ಕುದುಕುಳಿ ಐನ್‍ಮನೆ ಕ್ರಿಕೆಟ್ ಕಪ್‍ನಲ್ಲಿ ಪರ್ಲಕೋಟಿ ತಂಡ ಚಾಂಪಿಯನ್ ಪಟ್ಟ ಮಡುಗೇರಿಸಿಕೊಂಡಿದೆ. ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಪರ್ಲಕೋಟಿ ಮತ್ತು ಹೊಸೊಕ್ಲು ತಂಡಗಳ ನಡುವೆ ಸೆಣೆಸಾಟ ನಡೆಯಿತು. ಪರ್ಲಕೋಟಿ ತಂಡವು ಆರಂಭಿಕ ಉತ್ತಮ ಪ್ರದರ್ಶನ ನೀಡಿತು. 10 ಓವರ್ ನಲ್ಲಿ 104 ರನ್ ಗಳಿಸಿ ಎದುರಾಳಿ ತಂಡಕ್ಕೆ ಸವಾಲು ನೀಡಿತು. ನಂತರ ಬೌಲಿಂಗ್ ಮೂಲಕ ಎದುರಾಳಿ ಹೊಸೊಕ್ಲು ತಂಡವನ್ನು ಕೇವಲ 54 ರನ್‍ಗಳಿಗೆ ಕಟ್ಟಿ ಹಾಕಿತು. ಇದರಿಂದ ಹೊಸೊಕ್ಲು ತಂಡ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಎರಡನೇ ಸೆಮಿಫೈನಲ್‍ನಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ಲಕೋಟಿ ತಂಡ 7 ವಿಕೆಟ್ ನಷ್ಟಕ್ಕೆ 85 ರನ್ ಗಳಿಸಿತು. ಪರ್ಲಕೋಟಿ ಮತ್ತು ಪುದಿನೆರವನ ತಂಡಗಳ ನಡುವಿನ ರೋಚಕ ಪಂದ್ಯದಲ್ಲಿ ಪುದಿನೆರವನ ತಂಡ 84 ರನ್ ಗಳಿಸಿ ಒಂದು ರನ್‍ಗಳ ವಿರೋಚಿತ ಸೋಲನ್ನು ಅನುಭವಿಸಿತು. ಮೂರು ಮತ್ತು…
ಮಡಿಕೇರಿ ಏ.15 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾ ದಳದ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರು ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಮುತ್ತಪ್ಪ ಅವರು, ಮಡಿಕೇರಿ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ಯುವ ಮುಖಂಡ ಸಿ.ಎಲ್.ವಿಶ್ವ ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭ ಹಾಜರಿದ್ದರು. ::: ಸೋಮವಾರ ‘ಬಿ’ ಫಾರಂ ::: ನಾಮಪತ್ರ ಸಲ್ಲಿಕೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಾಪಂಡ ಮುತ್ತಪ್ಪ, ತನ್ನನ್ನು ಮಡಿಕೇರಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರಿಗೆ ಕೃತಜ್ಞತೆ ಸಲ್ಲಿಸಿ, ಪಕ್ಷದಿಂದ ‘ಬಿ’ ಫಾರಂ ಇನ್ನಷ್ಟೆ ದೊರಕಬೇಕಿದ್ದು, ಸೋಮವಾರ ಚುನಾವಣಾಧಿಕಾರಿಗಳಿಗೆ ‘ಬಿ’ ಫಾರಂ ಸಲ್ಲಿಸುವುದಾಗಿ ತಿಳಿಸಿದರು. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕ್ಷೇತ್ರದಲ್ಲಿ ಯಾವುದೇ ಪಕ್ಷ ಪ್ರಬಲ ದುರ್ಬಲ ಎಂಬುದಿಲ್ಲ. ಇದೆಲ್ಲ ನಿರ್ಧಾರವಾಗುವುದು ಮತ ಎಣಿಕೆಯ ಸಂದರ್ಭ…
ಮಡಿಕೇರಿ ಏ.15 : ಭಾರತೀಯ ಭೂ ಸೇನೆಯಲ್ಲಿ ಕರ್ನಲ್ ಹುದ್ದೆಗೆ ಮಂಡೇಪಂಡ ಸ್ಮಿತಾ ಅಯ್ಯಪ್ಪ (ತಾಮನೆ-ಮೇವಡ) ನೇಮಕಗೊಂಡಿದ್ದು, ಜಿಲ್ಲೆಯ ಮೊದಲ ಮಹಿಳೆ ಕರ್ನಲ್ ಹುದ್ದೆ ತಲುಪಿದ್ದಾರೆ. 2005ರಲ್ಲಿ ಚೆನ್ನೈನಲ್ಲಿ ತರಬೇತಿ ಪಡೆದು ಆರ್ಮಿ ಸರ್ವಿಸಸ್ ಕೋರ್‍ಗೆ ಸೇರ್ಪಡೆಗೊಂಡು ತನ್ನ 18 ವರ್ಷದ ಸೇವೆಯಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ ಸ್ಮಿತಾ ಅವರು ವಿಶ್ವಸಂಸ್ಥೆ ಶಾಂತಿಪಾಲನಾ ಸಂಸ್ಥೆಗೆ ನಿಯುಕ್ತಿಗೊಂಡು ಇಸ್ರೇಲ್ ಮತ್ತು ಸಿರಿಯಾದಲ್ಲಿ ಕರ್ತವ್ಯ ನಿರ್ವಹಿಸಿ ತನ್ನ ಅತ್ಯುತ್ತಮ ನಿರ್ಣಯಗಳಿಗೆ ಅಲ್ಲಿನ ಫೋರ್ಸ್ ಕಮಾಂಡ್‍ನಿಂದ ಕಮಾಂಡೇಶನ್ ಕಾರ್ಡ್ ಪಡೆದಿದ್ದಾರೆ. ಇವರು ನಿವೃತ್ತ ಯೋಧ ಮೇವಡ ಅಪ್ಪಣ್ಣ ರಾಧ ದಂಪತಿ ಪುತ್ರಿಯಾಗಿದ್ದು, ಕರ್ನಲ್ ಮಂಡೇಪಂಡ ಅಯ್ಯಪ್ಪ ಅವರ ಪತ್ನಿಯಾಗಿದ್ದಾರೆ.
ನಾಪೋಕ್ಲು ಏ.15 : ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಹೆಚ್ಚು ಪ್ರಯತ್ನ ಮಾಡಿದರೆ ಮುಂದಿನ ಗುರಿಯನ್ನು ಮುಟ್ಟಲು ಸಾಧ್ಯ ಎಂದು ನಬಾರ್ಡ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ ರಮೇಶ್ ಬಾಬು .ವಿ ಹೇಳಿದರು. ಅಂಕುರ್ ಪಬ್ಲಿಕ್ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಗ್ರಾಜುಯೇಷನ್ ಡೇ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ನಿಗದಿತ ಗುರಿಯನ್ನು ಸಾಧಿಸಲು ಪೋಷಕರ ಮತ್ತು ಶಿಕ್ಷಕರ ಪ್ರೋತ್ಸಾಹ ಬಹಳ ಮುಖ್ಯ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ರಾಜಾ ಚರ್ಮಣ ವಹಿಸಿದ್ದರು. ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ರತ್ನ ಚರ್ಮಣ ಪೋಷಕರನ್ನು ಮತ್ತು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಟ್ರಸ್ಟಿ ಯಾದ ಗಾಯನ್ ಗೌರಮ್ಮ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳು ಪೋಷಕರು ಹಾಜರಿದ್ದರು. ಈ ಸಂದರ್ಭ ಉಪಸ್ಥಿತ ಇದ್ದ ಗಣ್ಯರು ವಿದ್ಯಾರ್ಥಿಗಳಿಗೆ ಅರ್ಹತಾ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿ ಶುಭ ಕೋರಿದರು. ವರದಿ : ದುಗ್ಗಳ ಸದಾನಂದ
ಸಿದ್ದಾಪುರ ಏ.15 : ಮಾಲ್ದಾರೆ ಜನಪರ ಕ್ರೀಡಾ ಮತ್ತು ಕಲಾ ಯುವಜನ ಸಂಘದ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಾಮಾಜಿಕ ಹೋರಾಟಗಾರ ಪ್ರಭಾಕರ್ ದೀಪ ಬೆಳಗಿ ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಬಾಬಾ ಸಾಹೇಬ್ ಅವರ ಚಿಂತನೆಗಳು, ಬರಹಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು ಹಾಗೂ ಅವರು ಬರೆದಿರುವ ಸಂವಿಧಾನದ ಆಶಯವನ್ನು ತಿಳಿದುಕೊಳ್ಳುವಂತಾಗಬೇಕು. ಭಾರತದ ಸಂವಿಧಾನದ ಮೂಲಕ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಸಂವಿಧಾನ ನೀಡಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದ್ದಾರೆ ಎಂದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಭಾವ ಮಾಲ್ದಾರೆ, ಉಪಾಧ್ಯಕ್ಷ ರಾಜ, ಕಾರ್ಯದರ್ಶಿ ಆಂಟೋನಿ, ಪುನೀತ್, ಶಾಫಿಕ್, ಜುನೈದ್,ಸಂತೋಷ್, ಮುಂತಾದವರು ಹಾಜರಿದ್ದರು.
ನಾಪೋಕ್ಲು ಏ.15 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿರುವ ಬೇಸಿಗೆ ಶಿಬಿರದ ಪ್ರಯುಕ್ತ ಶಿಬಿರಾರ್ಥಿಗಳಿಂದ ಮತದಾನ ಜಾಗೃತಿ ಜಾಥಾ ನಡೆಯಿತು. ಪಟ್ಟಣದ ಮುಖ್ಯ ಬೀದಿಯಲ್ಲಿ ನಡೆದ ಜಾಥದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಶ್ರೀರಾಮ ಟ್ರಸ್ಟ್ ಹಾಗೂ ಅಂಕುರ್ ಪಬ್ಲಿಕ್ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅಂಕುರ್ ಶಾಲೆಯ ಆಕರ್ಷಕ ಬ್ಯಾಂಡ್ ಸೆಟ್ ನೊಂದಿಗೆ ಪಟ್ಟಣದಲ್ಲಿ ಪಥ ಸಂಚಲನ ನಡೆಸಿದರು. ಮತದಾನ ನಮ್ಮ ಹಕ್ಕು, ಮತವನ್ನು ಮಾರಿಕೊಳ್ಳಬೇಡಿ, 18ಕ್ಕಿಂತ ಹೆಚ್ಚಿನ ವಯಸ್ಕರು ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳಿ ಎಂಬ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿದರು. ಮಾನವ ಸರಪಳಿ ರಚಿಸಿ ಜನ ಜಾಗೃತಿ ಮೂಡಿಸಲಾಯಿತು. ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ಶಿವಣ್ಣ, ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉಷಾರಾಣಿ, ಖಜಾಂಚಿ ಗಂಗಮ್ಮ , ಕೆಪಿಎಸ್ ಸಂಸ್ಥೆಯ ಉಪಾಧ್ಯಕ್ಷ ಕೆ.ಎ.ಹ್ಯಾರಿಸ್, ಸ್ಕೌಟ್ ಮಾಸ್ಟರ್ ಮಹೇಶ್, ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ಶಿಕ್ಷಕಿ ಲೀಲಾವತಿ ಹಾಗೂ ಕರ್ನಾಟಕ…
ಸಿದ್ದಾಪುರ ಏ.15 : ವಿವಿಧ ಪಕ್ಷಗಳನ್ನು ತೊರೆದು ಹಲವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ನೆಲ್ಯಹುದಿಕೇರಿ ವಿ ಎಸ್ ಎಸ್ ಎನ್ ಸಭಾಂಗಣದಲ್ಲಿ ನಡೆದ ಪಕ್ಷ ಸೇರ್ಪಡೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಮಂತರ್ ಗೌಡ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಎರಡು ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾರರು ಬದಲಾವಣೆ ಬಯಸುವುದರೊಂದಿಗೆ ಕಾಂಗ್ರೆಸ್ನತ್ತ ಒಲವು ತೋರುತ್ತಿದ್ದು ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು ಇದೇ ಸಂದರ್ಭ ಕಾಂಗ್ರೆಸ್ ಸೇರ್ಪಡೆಗೊಂಡ ಹಲವರನ್ನ ಸ್ವಾಗತಿಸಿ ಬರಮಾಡಿಕೊಂಡರು. ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್, ನೆಲ್ಯಹುದಿಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಸಾಬು ವರ್ಗೀಸ್, ಕಾರ್ಯಾಧ್ಯಕ್ಷ ಹನೀಫ, ಗ್ರಾ.ಪಂ ಅಧ್ಯಕ್ಷ ಎ.ಕೆ ಹಕೀಂ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಕೆ. ಎಂ ಬಶೀರ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖರಾದ ಜೋಸೆಫ್ ಶ್ಯಾಮ್ , ಜಿ.ಪಂ ಮಾಜಿ ಸದಸ್ಯೆ ಸುನಿತಾ ಮಂಜುನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿಯಾಬ್ ಸೇರಿದಂತೆ ಮತ್ತಿತರರು ಹಾಜರಿದ್ದರು.






