ಮಡಿಕೇರಿ ಏ.14 : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಜೀವನದ ಉದ್ದಕ್ಕೂ ಹೋರಾಟವನ್ನೆ ಕಂಡಿರುವ ಮಹಾ ಚೇತನ. ಅವರನ್ನು ಒಂದು ವರ್ಗಕ್ಕೆ ಸಿಮೀತಗೊಳಿಸದೇ ಅವರ ಆದರ್ಶ ಗುಣಗಳನ್ನು ಬೆಳೆಸಿಕೊಳ್ಳುವಂತಾಗಬೇಕು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 132ನೇ ಜನ್ಮ ಜಯಂತಿ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮೂರು ಮಂತ್ರಗಳನ್ನು ದೇಶಕ್ಕೆ ನೀಡಿದ್ದಾರೆ. ತುಳಿತಕ್ಕೆ ಒಳಗಾದವರಿಗೆ, ಅಸ್ಪøಷ್ಯರಿಗೆ, ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯವನ್ನು ನೀಡುವ ಕೆಲಸ ಮಾಡಿದ್ದಾರೆ. ಮಹಿಳಾ ಸಬಲೀಕರಣಕ್ಕೆ ಹೋರಾಟ ನಡೆಸಿದ್ದಾರೆ. ರಾಷ್ಟ್ರೀಯವಾದಿಯಾಗಿ, ಕಾನೂನು ತಜ್ಞರಾಗಿ, ರಾಜಕೀಯ ನೇತರರಾಗಿ, ಕ್ರೀಯಾಶಿಲ ಸಮಾಜಿಕ ಕಾರ್ಯಕರ್ತನಾಗಿ, ಚಿಂತಕರಾಗಿ, ಇತಿಹಾಸಕಾರರಾಗಿ, ಮಹಾನ್ ದಾರ್ಶನಿಕರಾಗಿ, ಸಮೃದ್ದ ಬರಹಗಾರರಾಗಿ, ಬೌಧ ಧರ್ಮದ ಪುನರುಜೀವನಕ್ಕಾಗಿ, ಮಾನವ ಶಾಸ್ತ್ರಜ್ಞಾರಾಗಿ, ವಾಕ್‍ಪಟುವಾಗಿ, ಅರ್ಥಶಾಸ್ತ್ರಜ್ಞರಾಗಿ, ಸಂವಿಧಾನದ ಪ್ರಮುಖ ಶಕ್ತಿಯಾಗಿ ಮಹತ್ತರ…
ಲೇಖಕ: admin
ಮಡಿಕೇರಿ ಏ.14 : ಇಂದಿನ ಯುವ ಸಮೂಹ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ನಾಯಕತ್ವ ಗುಣವನ್ನು ರೂಢಿಸಿಕೊಂಡರೆ, ಸಂವಿಧಾನದ ಹಿತಾಸಕ್ತಿಯಂತೆ ಸಮಾನ, ಸಹೋದರತ್ವ, ಸಾಮರಸ್ಯದಿಂದ ಕೂಡಿದ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಮಹದೇವಯ್ಯ ಅಭಿಪ್ರಾಯಪಟ್ಟರು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 132 ನೇ ಜನ್ಮ ಜಯಂತಿಯಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ಅವರು, ಭಾರತೀಯ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರ ಮಹಾನ್ ಕೊಡುಗೆಯನ್ನು ವಿವರಿಸಿದರು. ಅಂಬೇಡ್ಕರ್ ಅವರಿಗೆ ಅಷ್ಟೊಂದು ಅರ್ಹತೆಯಿದ್ದರೂ ಅವರಿಗೆ ಉನ್ನತ ಜವಾಬ್ದಾರಿಯನ್ನು ಒದಗಿಸಲು ಸತಾಹಿಸಿದ ಮನಸ್ಥಿತಿಗಳ ನಡುವೆಯೂ ಅವರು ಜನಸಾಮ್ಯರ ಒಳಿತಿಗಾಗಿ ಕಠಿಣ ಪರಿಶ್ರಮದಿಂದ ಈ ದೇಶದ ಉಜ್ವಲ ಭವಿಶ್ಯಕ್ಕಾಗಿ ಅಡಿಪಾಯ ಹಾಕಿಕೊಟ್ಟಿದ್ದಾರೆ ಎಂದರು. ಅಂಬೇಡ್ಕರ್ ಅವರ ಜೀವನ, ಸಾಧನೆಯ ಕುರಿತು ವಿಶ್ವದಾದ್ಯಂತ ಹಲವಾರು ವಿಶ್ವವಿದ್ಯಾನಿಲಯಗಳಲ್ಲಿ ಸಂಶೋಧನೆಗಳು ನಡೆಯುತ್ತಿದ್ದು, ಭಾರತೀಯರಿಗಿಂತ ವಿದೇಶಿಯರು…
ಮಡಿಕೇರಿ ಏ.14 : ಕಾರು ಹಾಗೂ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಪಾಜೆಯಲ್ಲಿ ನಡೆದಿದೆ. ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಮಡಿಕೇರಿಗೆ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಮಂಡ್ಯ ಜಿಲ್ಲೆಯ 8 ಮಂದಿ ಪ್ರಯಾಣಿಕರಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಡಿಕೇರಿ ಏ.14 : ಅಪರಾಧ ಪ್ರಕರಣದಲ್ಲಿ ಆರೋಪಿಗಳಾಗಿರುವ ಜಿಲ್ಲೆಯ ಇಬ್ಬರನ್ನು ಪೊಲೀಸ್ ಇಲಾಖೆ ಗಡಿಪಾರು ಮಾಡಿದೆ. ಚುನಾವಣೆ ಹಿನ್ನೆಲೆಯಲ್ಲಿ ರೌಡಿ ಲಿಸ್ಟ್‍ನಲ್ಲಿರುವ ಆರೋಪಿಗಳನ್ನು ಬೇರೆಡೆಗೆ ಗಡಿಪಾರು ಮಾಡಲಾಗುತ್ತಿದ್ದು, ಮಡಿಕೇರಿ ನಿವಾಸಿಗಳಾದ ಲೋಕೇಶ್ ಹಾಗೂ ಸುಜಿತ್ ಎಂಬಿಬ್ಬರನ್ನು ಗಡಿಪಾರು ಮಾಡಲಾಗಿದೆ. ಈ ಹಿಂದೆ ಗುಂಡು ಹಾರಿಸಿ ವ್ಯಕ್ತಿಗಳನ್ನು ಹತ್ಯೆ ಮಾಡಲು ಯತ್ನಿಸಿದ್ದ ಪ್ರಕರಣ ಸೇರಿದಂತೆ ಲೋಕೇಶ್ ಮೇಲೆ ಆರು ಪ್ರಕರಣ ಹಾಗೂ ಸುಜಿತ್ ಮೇಲೆ ಐದು ಪ್ರಕರಣಗಳಿದ್ದು, ಈ ಹಿನ್ನೆಲೆಯಲ್ಲಿ ಲೋಕೇಶ್‍ನನ್ನು ಉಡುಪಿ ಜಿಲ್ಲೆಗೆ ಹಾಗೂ ಸುಜಿತ್‍ನನ್ನು ಚಾಮರಾಜನಗರಕ್ಕೆ ಮೂರು ತಿಂಗಳವರೆಗೆ ಗಡಿಪಾರು ಮಾಡಲಾಗಿದೆ ಎಂದು ಮಡಿಕೇರಿ ನಗರ ಪೊಲೀಸ್ ಠಾಣಾಧಿಕಾರಿ ಶ್ರೀನಿವಾಸ್ ತಿಳಿಸಿದ್ದಾರೆ.
ಮಡಿಕೇರಿ, ಏ. 14: ನಗರದ ಅಶೋಕಪುರದ ಅನ್ನಪೂರ್ಣೇಶ್ವರಿ ದೇವಾಲಯ ಸಮಿತಿ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ದೇವಾಲಯ ಆವರಣದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಲಾಯಿತು. ಪ್ರಮುಖರಾದ ಹೆಚ್. ಆರ್.ಮುತ್ತಪ್ಪ ಮಾತನಾಡಿ, ತಾರತಮ್ಯದ ನಡುವೆ ಶಿಕ್ಷಣವನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಅಂಬೇಡ್ಕರ್ ಶೋಷಿತರ ಧನಿಯಾಗಿ ಕೆಲಸ ಮಾಡಿದರು. ಪ್ರಜಾಪ್ರಭುತ್ವದ ಬುನಾದಿಯಾದ ಸಂವಿಧಾನ ರಚಿಸುವ ಮೂಲಕ ಸಮಸಮಾಜ ನಿರ್ಮಾಣದಲ್ಲಿ ಅಂಬೇಡ್ಕರ್ ಪಾತ್ರ ಮಹತ್ತರವಾಗಿದೆ. ಅವರ ತತ್ವ, ಆದರ್ಶ ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಎಂ. ಜಯರಾಮ್, ಪ್ರಧಾನ ಕಾರ್ಯದರ್ಶಿ ಹೆಚ್.ಟಿ. ವೆಂಕಪ್ಪ, ಉಪಾಧ್ಯಕ್ಷ ಎಂ.ಡಿ. ಧರ್ಮೇಂದ್ರ, ಸಹಕಾರ್ಯದರ್ಶಿ ಎಂ.ಪಿ. ಜಯಪ್ರಕಾಶ್, ಪ್ರಮುಖರಾದ ಹೆಚ್.ಟಿ. ಶಾಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕುಶಾಲನಗರ ಏ.13 : ಭಾರತದಲ್ಲಿ ಸಾಮಾಜಿಕವಾಗಿ ಸ್ವಾಭಿಮಾನದ ಕೂಗು ಬದಲಾವಣೆ ತರುವಲ್ಲಿ ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ಅವರ ಚಿಂತನೆ ಅತ್ಯಂತ ಮಹತ್ವದ್ದಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಬೌದ್ಧಿಕ ಪ್ರಮುಖ ಡಾ ಶ್ರೀಧರ ಸ್ವಾಮಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ಜ್ಞಾನಭಾರತಿ ಶಾಲಾ ಸಭಾಂಗಣದಲ್ಲಿ ಸಾಮರಸ್ಯ ವೇದಿಕೆ ಆಶ್ರಯದಲ್ಲಿ ನಡೆದ ಡಾ.ಅಂಬೇಡ್ಕರ್ ಜನ್ಮದಿನದ ಅಂಗವಾಗಿ ಸ್ಮರಣೆ ಪ್ರೇರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನಸು ನನಸು ಮಾಡಿದ ಅಂಬೇಡ್ಕರ್ ಅವರ ಜೀವನ ಸಂದೇಶ ಜೀವನದ ಅವಲೋಕನ ಸಂವಿಧಾನ ರಚನೆ ಇದೀಗ ನಮ್ಮ ನಡುವೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು. ಅಂಬೇಡ್ಕರ್ ಅವರ ಯಾವುದೇ ಕಾರ್ಯಕ್ರಮಗಳು ದಲಿತ ಸಮುದಾಯಕ್ಕೆ ಸೀಮಿತವಾಗಿರದೆ ಇಡೀ ದೇಶದ ಸರ್ವ ಜನತೆಯ ನಿತ್ಯ ಕಾರ್ಯಕ್ರಮಗಳಾಗಬೇಕಾಗಿದೆ ಎಂದರು. ಹೊಸ ಬದಲಾವಣೆ ನವ ಚಿಂತನೆಗಳ ಮೂಡಿಸಿದಂತಹ ಸಮಾಜ ಸುಧಾರಕರು ಆಗಿರುವ ಡಾ ಅಂಬೇಡ್ಕರ್ ಅವರ ಚಿಂತನೆ ತಿಳಿಯುವಂತಾಗಬೇಕು ಸ್ಪೃಶ್ಯ -ಅಸ್ಪೃಶ್ಯ ಅನ್ನುವ ಪದಗಳು ಯಾವುದೇ ಶಾಸ್ತ್ರಗಳಲ್ಲಿ…
ಮಡಿಕೇರಿ ಏ.13 : ಸುಮಾರು 980 ವರ್ಷಗಳ ಇತಿಹಾಸವಿರುವ ಹಾಗೂ ದೇವಸ್ಥಾನದ ಎದುರು ದೇವಸ್ಥಾನಕ್ಕೆ ಮುಖಮಾಡಿ ನಿಂತಿರುವ ಐರಾವತ (ಕಲ್ಲಿನ ಆನೆ) ಹೊಂದಿರುವ ಜಿಲ್ಲೆಯ ಏಕೈಕ ದೇವಸ್ಥಾನವೆಂಬ ಹೆಗ್ಗಳಿಕೆ ಹೊಂದಿರುವ ಪೊನ್ನಂಪೇಟೆ ತಾಲ್ಲೂಕಿನ ಹಳ್ಳಿಗಟ್ಟು ಗ್ರಾಮಕ್ಕೆ ಸೇರಿದ ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ಬಿಸು ಚಂಗ್ರಾಂದಿ ಹಾಗೂ ಎಡಮ್ಯಾರ್ ಒಂದ್ ನೂತನ ವರ್ಷಾಚರಣೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಭದ್ರಕಾಳಿ, ಗುಂಡಿಯತ್ ಅಯ್ಯಪ್ಪ ಹಾಗೂ ಮಾರಮ್ಮ ದೇವರ ಅಭಿವೃದ್ಧಿ ಸಮಿತಿ ಹಾಗೂ ತಕ್ಕಮುಖ್ಯಸ್ಥರು ತಿಳಿಸಿದ್ದಾರೆ. ಈ ಕುರಿತು ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ತಕ್ಕಮುಖ್ಯಸ್ಥರಾದ ಚಮ್ಮಟೀರ ಸುಗುಣ ಮುತ್ತಣ್ಣ ಮಾಹಿತಿ ನೀಡಿ ಬಿಸು ಸಂಕ್ರಮಣದ ಎಡಮ್ಯಾರ್ ಒಂದ್ ಪ್ರಯುಕ್ತ ಇದೇ ಏಪ್ರಿಲ್ 14ನೇ ಶುಕ್ರವಾರ ಬೆಳಿಗ್ಗೆ 8.00 ಗಂಟೆಗೆ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದ ಆವರಣದಲ್ಲಿ ಗಣಪತಿ ಹೋಮವನ್ನು ಹಮ್ಮಿಕೊಳ್ಳಲಾಗಿದ್ದು, ಬಳಿಕ 11.00 ಗಂಟೆಗೆ ಶ್ರೀ ಭದ್ರಕಾಳಿ ದೇವಿಯ ವಿಗ್ರಹಕ್ಕೆ ದೇವಸ್ಥಾನದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಬೆಳ್ಳಿಯ ಕವಚ…
ಮಡಿಕೇರಿ ಏ.13 : ಸಮಾರಂಭಗಳಲ್ಲಿ ಮದ್ಯವನ್ನು ಬಳಸುವುದು ಕೊಡಗಿನ ಸಂಪ್ರದಾಯವಾಗಿದೆ. ಚುನಾವಣೆ ನೀತಿ ಸಂಹಿತೆಯ ನೆಪದಲ್ಲಿ ಇದಕ್ಕೆ ಕಡಿವಾಣ ಹಾಕುವುದು ಸರಿಯಲ್ಲವೆಂದು ಕೊಡಗು ರಕ್ಷಣಾ ವೇದಿಕೆ ಅಸಮಾಧಾನ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊರವೇ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ಸಮಾರಂಭಗಳಲ್ಲಿ ಮದ್ಯವನ್ನು ಬಳಸದಂತೆ ಕಡಿವಾಣ ಹಾಕಿರುವುದರಿಂದ ಕೊಡಗಿನ ಜನರ ಭಾವನೆಗೆ ದಕ್ಕೆಯಾಗಿದೆ. ಮದ್ಯ ಬಳಕೆಗೆ ಅವಕಾಶ ನೀಡದಿದ್ದರೆ ಕೊಡವ ಸಮಾಜ, ಗೌಡ ಸಮಾಜ ಸೇರಿದಂತೆ ವಿವಿಧ ಸಮಾಜಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಚುನಾವಣೆ ಸಂದರ್ಭ ರೂ.11,500 ಸನ್ನದು ಶುಲ್ಕ ಪಾವತಿಸಿ ಸಭೆ, ಸಮಾರಂಭಗಳಲ್ಲಿ ಮದ್ಯವನ್ನು ಬಳಕೆ ಮಾಡಲು ಅನುಮತಿ ಪಡೆಯಬಹುದಾಗಿತ್ತು. ಆದರೆ ಅಬಕಾರಿ ಇಲಾಖೆಯ ಅಧಿಕಾರಿಗಳ ಸೂಚನೆಯ ಹಿನ್ನೆಲೆ ಏ.12 ರಿಂದ ಅನುಮತಿ ನೀಡಲಾಗುತ್ತಿಲ್ಲ. ಇದು ತಪ್ಪು ನಿರ್ಧಾರವಾಗಿದ್ದು, ಅಧಿಕಾರಿಗಳು ಜಿಲ್ಲೆಯ ಜನರ ಭಾವನೆಗಳಿಗೆ ದಕ್ಕೆ ತಾರದೆ ತಮ್ಮ ನಿಲುವನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದ್ದಾರೆ. ಕೊಡಗಿನಲ್ಲಿ ಯಾವುದೇ ಸಮಾರಂಭಗಳಲ್ಲಿ ಮದ್ಯವನ್ನು ನ್ಯಾಯಯುತವಾಗಿ ಖರೀದಿಸಿ ವಿತರಿಸಲಾಗುತ್ತದೆ. ಅಲ್ಲದೆ ಇಲ್ಲಿಯವರೆಗೆ…
ಸೋಮವಾರಪೇಟೆ ಏ.13 : ಬೆಟ್ಟದಳ್ಳಿಯ ಸಿದ್ಧಾರ್ಥ ನಗರದ ಗ್ರಾಮಾಭಿವೃದ್ಧಿ ಸಮಿತಿ ಮತ್ತು ಮಾನವತಾ ಯುವಕ ಸಂಘದ ವತಿಯಿಂದ ಏ.14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆ ಮತ್ತು ಹೋಬಳಿ ಮಟ್ಟದ ಕ್ರೀಡಾಕೂಟ ನಡೆಯಲಿದೆ ಎಂದು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಸಿ.ಜಗದೀಶ್ ತಿಳಿಸಿದ್ದಾರೆ. ಏ.14 ರಂದು ಬೆಳಿಗ್ಗೆ 7ಕ್ಕೆ ಗ್ರಾಮಾಭಿವೃದ್ಧಿ ಸಮಿತಿ ಖಜಾಂಚಿ ಬಿ.ಆರ್. ಅಜಿತ್ ಧ್ವಜಾರೋಹಣ ನಡೆಸಲಿದ್ದಾರೆ. 10 ಗಂಟೆಗೆ ಸೋಮವಾರಪೇಟೆಯ ಬಾಣಾವಾರ ರಸ್ತೆಯಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಗ್ರಾಮಾಭಿವೃದ್ಧಿ ಸಮಿತಿ ಸದಸ್ಯ ಬಿ.ಆರ್. ಯೋಗೇಶ್ ಮಾಲಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಭಾಷಣಕಾರರಾಗಿ ಕುಂದಳ್ಳಿ ರವಿ, ಪ್ರಗತಿಪರ ಚಿಂತಕರಾದ ರಾ. ಚಿಂತನ್, ಸಕಲೇಶಪುರದ ಡಿಎಸ್‍ಎಸ್ ರಾಜ್ಯ ಸಂಚಾಲಕ ಎಸ್.ಎನ್. ಮಲ್ಲಪ್ಪ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಪ್ರಯುಕ್ತ ಏ.15 ರಂದು ಪುರುಷರಿಗೆ ವಾಲಿಬಾಲ್, ಮಹಿಳೆಯರಿಗೆ ಥ್ರೋಬಾಲ್, ಮಕ್ಕಳಿಗೆ ಮತ್ತು ಹಿರಿಯರಿಗೆ ಇತರೆ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಕುರಿತು…
ಸೋಮವಾರಪೇಟೆ ಏ.13 : ನಗರೋತ್ಥಾನ ಯೋಜನೆಯಡಿ 2.50 ಕೋಟಿ ರೂ.ವೆಚ್ಚದಲ್ಲಿ ಪಟ್ಟಣದಲ್ಲಿ ಶೇ.80 ರಷ್ಟು ಕಾಮಗಾರಿಗಳು ನಡೆದಿದ್ದು, ವಾರ್ಡ್ ಸದಸ್ಯರ ಸಮ್ಮುಖದಲ್ಲಿ ಗುಣಮಟ್ಟದ ಕಾಮಗಾರಿ ನಡೆದಿದೆ ಎಂದು ಪ.ಪಂ ಅಧ್ಯಕ್ಷ ಪಿ.ಕೆ.ಚಂದ್ರು ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯ ರಸ್ತೆಯ ಸೋಮೇಶ್ವರ ಬಳಿ ಕೆಲ ಕಡೆ ಕಾಂಕ್ರೀಟ್ ರಸ್ತೆ ಹಾಳಾಗಿದ್ದ ಹಿನ್ನೆಲೆಯಲ್ಲಿ ವಾರ್ಡ್ ಸದಸ್ಯರ ಮನವಿ ಮೇರೆಗೆ ಇಂಜಿನಿಯರ್ ಸಲಹೆ ಪಡೆದು ಕಾಂಕ್ರೀಟ್ ರಸ್ತೆ ಮೇಲೆ ಡಾಂಬರೀಕರಣ ಮಾಡಲಾಗಿದೆ ಹೇಳಿದರು. ಉಪಾಧ್ಯಕ್ಷ ಬಿ.ಸಂಜೀನ ಮಾತನಾಡಿ, ನಮ್ಮ ವಾರ್ಡ್‍ಗಳಲ್ಲಿ ನಡೆದ ಕಾಮಗಾರಿಗಳನ್ನು ನಿಂತು ಮಾಡಿಸಲಾಗಿದೆ. ಕಳಪೆ ಕಾಮಗಾರಿ ನಡೆದಿದ್ದರೆ ಜಿಲ್ಲಾಡಳಿತವೇ ನೇರ ಹೊಣೆ ಎಂದು ಆರೋಪಿಸಿದ ಅವರು, ಕಳೆದ 10 ತಿಂಗಳಿನಿಂದ ಪಂಚಾಯಿತಿಗೆ ಇಂಜಿನಿಯರ್ ನೇಮಕ ಮಾಡಿಲ್ಲ. ಕಾಮಗಾರಿಯ ಗುಣಮಟ್ಟವನ್ನು ನೋಡಿಕೊಳ್ಳುವುದಕ್ಕೆ ಇಂಜಿನಿಯರ್ ಇಲ್ಲದ ಮೇಲೆ ನಾವೇನೂ ಮಾಡಲು ಸಾಧ್ಯ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಮಾತನಾಡಿ, ಹೊಸ ಬಡವಣೆ ಸೇರಿದಂತೆ ತಮ್ಮ ವಾರ್ಡ್‍ನಲ್ಲಿ…






