ಲೇಖಕ: admin

ಮಡಿಕೇರಿ ಏ.11 : ಅಯ್ಯಪ್ಪ ಸ್ವಾಮಿ ಮಾಲಾಧಾರಿ ತಂದೆ ಹಾಗೂ ಮಗ ನದಿ ಪಾಲಾದ ಘಟನೆ ಗುಡ್ಡೆಹೊಸೂರು ಗ್ರಾ.ಪಂ ವ್ಯಾಪ್ತಿಯ ಚಿಕ್ಕ ಬೆಟ್ಟಗೇರಿಯಲ್ಲಿ ನಡೆದಿದೆ. ಸೋಮವಾರಪೇಟೆ ಮೂಲದ ಮಣಿಕಂಠ (47) ಹಾಗೂ ಅವರ ಮಗ ಪ್ರೀತಂ (15) ಮೃತ ದುರ್ದೈವಿಗಳು. ಗುಡ್ಡೆಹೊಸೂರು ಚಿಕ್ಕ ಬೆಟ್ಟಗೇರಿಯಲ್ಲಿರುವ ಸಂಬoಧಿಕರಾದ ಅಂಬಾಡಿ ರವಿ ಎಂಬುವವರ ಮನೆಗೆ ಬಂದಿದ್ದ ಇಬ್ಬರು ಮಂಗಳವಾರ ಮಧ್ಯಾಹ್ನ ಕಾವೇರಿ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ದುರಂತ ಸಂಭವಿಸಿದೆ. ಸ್ನಾನಕ್ಕೆಂದು ನಾಲ್ವರು ನದಿಗೆ ಇಳಿದಿದ್ದರು ಎಂದು ತಿಳಿದು ಬಂದಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳ ಸಹಕಾರದಿಂದ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಕುಶಾಲನಗರ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಡಿಕೇರಿ ಏ.11 : ಪೀಪಲ್ಸ್ ಮೂಮೆಂಟ್ ಫಾರ್ ಹ್ಯೂಮನ್ ರೈಟ್ಸ್ ಮತ್ತು ವೀರನಾಡು ರಕ್ಷಣಾ ವೇದಿಕೆಯ ಅಧ್ಯಕ್ಷರಾಗಿರುವ ಶ್ರೀ ಕೃಷ್ಣ ಗೋಶಾಲೆಯ ಸಂಸ್ಥಾಪಕ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಏ.13 ರಂದು ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿರುವ ಅವರು, ಕೊಡಗಿನ ಜನ ಬದಲಾವಣೆಯನ್ನು ಬಯಸುತ್ತಿದ್ದು, ನಮ್ಮಂತಹ ಸಾಮಾನ್ಯ ವ್ಯಕ್ತಿಗಳು ಚುನಾವಣೆಯಲ್ಲಿ ಸ್ಪರ್ಧಿಸಲು ಕಾಲ ಪಕ್ವವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಹಿಂದೆ ಶಿವಸೇನೆ ಮತ್ತು ಹಿಂದೂಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ರಾಜಕೀಯವಾಗಿ ತೊಡಗಿಸಿಕೊಂಡಿದ್ದೆ. ನಂತರದ ದಿನಗಳಲ್ಲಿ ಪೀಪಲ್ಸ್ ಮೂಮೆಂಟ್ ಫಾರ್ ಹ್ಯೂಮನ್ ರೈಟ್ಸ್ ಮತ್ತು ವೀರನಾಡು ರಕ್ಷಣಾ ವೇದಿಕೆಯ ಅಧ್ಯಕ್ಷನಾಗಿ ಅನೇಕ ಜನಪರ ಹೋರಾಟಗಳನ್ನು ಮಾಡಿದ್ದೇನೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಮೂಲಭೂತ ಸೌಲಭ್ಯಗಳ ಕೊರತೆಯ ಕುರಿತು ಆಡಳಿತ ವ್ಯವಸ್ಥೆಯ ಗಮನ ಸೆಳೆದಿದ್ದೇನೆ. 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಸಿಲುಕಿ ಅನಾಥವಾಗಿ ಅಲೆದಾಡುತ್ತಿದ್ದ ಗೋವುಗಳಿಗೆ ಆಶ್ರಯ ನೀಡುವ ಸಲುವಾಗಿ ಶ್ರೀಕೃಷ್ಣ ಗೋಶಾಲೆಯನ್ನು ಸ್ಥಾಪಿಸಿದ್ದೇನೆ.…

Read More

ಮಡಿಕೇರಿ ಏ.11 :  ಪದ್ಮಶ್ರೀ ಪ್ರಶಸ್ತಿ ಪಡೆದು ಕುಶಾಲನಗರಕ್ಕೆ ಆಗಮಿಸಿದ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಜಿಲ್ಲೆ ಗಡಿಭಾಗ ಕುಶಾಲನಗರದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಲಾಯಿತು. ಕುಶಾಲನಗರ ಕೊಪ್ಪ ಗಡಿ ಭಾಗದ ಕಾವೇರಿ ಪ್ರತಿಮೆ ಬಳಿ ಕುಶಾಲನಗರ ಜಾನಪದ ಪರಿಷತ್ತು ಮತ್ತು ಕುಶಾಲನಗರ ಕೊಡವ ಸಮಾಜ ಪ್ರಮುಖರು ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದ ನಂತರ ಪ್ರಶಸ್ತಿ ಪುರಸ್ಕೃತ ರನ್ನು  ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ರಾಣಿ ಮಾಚಯ್ಯ , ತನಗೆ ಸಂದ ಪ್ರಶಸ್ತಿ ಕೊಡಗು ಜಿಲ್ಲೆಗೆ ಹಾಗೂ ಕಲಾ ಕ್ಷೇತ್ರಕ್ಕೆ ಲಭಿಸಿದ ಗೌರವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರ ಕೊಡವ ಸಮಾಜದ ಅಧ್ಯಕ್ಷ ಮಂಡೆಪಂಡ ಬೋಸ್ ಮೊಣ್ಣಪ್ಪ, ಉಪಾಧ್ಯಕ್ಷ  ಪುಲಿಯಂಡ ಚಂಗಪ್ಪ, ಸಮಾಜದ ನಿರ್ದೇಶಕರುಗಳಾದ ಚೌರಿರ ತಿಮ್ಮಯ್ಯ, ಕೊಕ್ಕಲೆರ ಧರಣಿ, ಮುಕ್ಕಾಟಿ ಪೊನ್ನಣ್ಣ, ಬೊಪ್ಪಂಡ ನಂದ, ನಲ್ಲಪಟ್ಟಿರ ಸೂರಪ್ಪ, ಗೌಡ ಯುವಕ ಸಂಘದ ಅಧ್ಯಕ್ಷ  ಕೊಡಗನ ಹರ್ಷ, ಕರ್ನಾಟಕ ಜಾನಪದ ಪರಿಷತ್ ಕುಶಾಲನಗರ ತಾಲೂಕು ಅಧ್ಯಕ್ಷ ಚಂದ್ರಮೋಹನ್, ಗೌರವಾಧ್ಯಕ್ಷ  ಫ್ಯಾನ್ಸಿ…

Read More

ನಾಪೋಕ್ಲು ಏ.11 :  ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ಸಂಭವಿಸಿದಂತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರೀಯ ಕೈಗಾರಿಕಾ ಮೀಸಲು ಪಡೆ ಮತ್ತು ಪೊಲೀಸರು ನಾಪೋಕ್ಲುವಿನಲ್ಲಿ ಪಥಸಂಚಲನ ನಡೆಸಿದರು. ನಾಪೋಕ್ಲು ಮಾರುಕಟ್ಟೆ ಬಳಿ ಇರುವ ಪೊಲೀಸ್ ಠಾಣಾ ಮೈದಾನದಿಂದ ಪಟ್ಟಣದ ಮುಖ್ಯಬೀದಿಯ ಮೂಲಕ ಹಳೇ ತಾಲೂಕುವರೆಗು ಕೇಂದ್ರೀಯ ಕೈಗಾರಿಕಾ ಮೀಸಲುಪಡೆ ಮತ್ತು ನಾಪೋಕ್ಲು ಪೊಲೀಸರು ಪಥ ಸಂಚಲನ ನಡೆಸುವ ಮೂಲಕ ಭಯಮುಕ್ತ ಚುನಾವಣೆ ಬಗ್ಗೆ ನಾಗರಿಕರಿಗೆ ಜಾಗೃತಿ ಮೂಡಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಹಾಗೂ ಹೆಚ್ಚುವರಿ ಪೋಲಿಸ್ ಅಧೀಕ್ಷಕರಾದ ಸುಂದರ್ ರಾಜ್ ಅವರ ಮಾರ್ಗದರ್ಶನದಂತೆ ಡಿವೈಎಸ್ಪಿ ಜಗದೀಶ್ ಮುಂದಾಳತ್ವದಲ್ಲಿ ನಡೆದ ಪಥಸಂಚಲನದಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಶೇಖರ್, ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಮಡಿಕೇರಿ ಮಹಿಳಾ ಠಾಣಾ ಇನ್ಸ್ಪೆಕ್ಟರ್ ಯಶ್ವಂತ್, ಭಾಗಮಂಡಲ ಠಾಣಾಧಿಕಾರಿ ಪ್ರಿಯಾಂಕ ಹಾಗೂ ನಾಪೋಕ್ಲು ಠಾಣಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ವರದಿ :ಝಕರಿಯ ನಾಪೋಕ್ಲು 

Read More

ಮಡಿಕೇರಿ,ಏ.11 : ಹಾಕಿ, ಫುಟ್ಬಾಲ್, ಕ್ರಿಕೆಟ್ ಮುಂತಾದ ಗುಂಪು ಕ್ರಿಡೆಯಿಂದ ನಮ್ಮಲ್ಲಿ ಹೊಂದಾಣಿಕೆ, ಒಗ್ಗಟ್ಟು, ತ್ಯಾಗ ಹಾಗೂ ಮತ್ತೋರ್ವರಿಗೆ ಸಹಾಯ ಮಾಡುವ ಮನೋಭಾವ ಮೂಡುತ್ತದೆ ಎಂದು ವಕೀಲರ ಸಂಘದ ಮಾಜಿ ಅಧ್ಯಕ್ಷ ಹಾಗೂ ಕ್ರೀಡಾಪಟು ಕಾರೇರ ಕವನ್ ಮಾದಪ್ಪ ಹೇಳಿದರು. ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಸ್ಮರಣಾರ್ಥ  ನಗರದ  ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉಚಿತ ಮಕ್ಕಳ ಬೇಸಿಗೆ ಕ್ರೀಡಾ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮನುಷ್ಯ ಕ್ರೀಡೆ ಅಥವಾ ವ್ಯಾಯಾಮಗಳಲ್ಲಿ ತೊಡಗಿಸಿಕೊಳ್ಳದಿದ್ದರೆ ಜೀವನ ಪರಿಪೂರ್ಣವಾಗುವದಿಲ್ಲ. ಗುಂಪು ಕ್ರೀಡೆಗಳಲ್ಲಿ ಹೊಂದಾಣಿಕೆ, ತ್ಯಾಗ, ಸಹಾಯ ಮಾಡುವ ಮನೋಭಾವ ಮೂಡುತ್ತದೆ. ಸೇನೆಯಲ್ಲಿಯೂ ಇದೇ ರೀತಿಯ ಮನೋಭಾವವಿರುತ್ತದೆ. ಈ ರೀತಿಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವದರಿಂದ ಹೊಸ ಮಾನವರಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಹಿಂದೆ ಯೋಗದ ಮಹತ್ವ ಯಾರಿಗೂ ತಿಳಿದಿರಲಿಲ್ಲ, ಯೋಗ ಹೇಳಿಕೊಡುವವರೂ ಇರಲಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಯೋಗದ ಬಗ್ಗೆ ವಿಶ್ವದೆಲ್ಲೆಡೆ ಪರಿಚಯವಾಗಿದೆ. ಮನುಷ್ಯ ಚಟುವಟಿಕೆಯಿಂದ ಇದ್ದರೆ ಮಾನಸಿಕ ಒತ್ತಡದಿಂದ…

Read More

ಮಡಿಕೇರಿ ಏ.11 : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಏ.14 ರಂದು ಸೌರಮಾನ ಯುಗಾದಿ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಅಂದು ಪೂರ್ವಹ್ನ 10.30 ಗಂಟೆಗೆ ನಡೆಯಲಿರುವ ಸತ್ಯನಾರಾಯಣ ಪೂಜೆಗೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೀರ್ಥ ಪ್ರಸಾದ ಸ್ವೀಕರಿಸುವಂತೆ ದೇವಾಲಯದ ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಸುಂಟಿಕೊಪ್ಪ ಏ.11: ಹಳೆಯ ವಿದ್ಯಾರ್ಥಿಗಳ ಗೆಳೆಯರ ಬಳಗ ಗುಂಡುಗುಟ್ಟಿ ಹಾಗೂ ಪನ್ಯ ಎಫ್.ಸಿ. ವತಿಯಿಂದ ಗುಂಡುಗುಟ್ಟಿ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಪ್ರಥಮ ವರ್ಷದ ವಾಲಿಬಾಲ್ ಪಂದ್ಯಾವಳಿಯಲ್ಲಿ ಮಹೇಶ್ ಪ್ರೆಂಡ್ಸ್ ತಂಡ ಚಾಂಪಿಯನ್‍ಶಿಪ್ ಪಡೆದುಕೊಂಡರೆ, ದ್ವಿತೀಯ ಮಹೇಶ್ ಪ್ರೆಂಡ್ಸ್ ‘ಬಿ’ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಮುಕ್ತ ವಾಲಿಬಾಲ್ ಪಂದ್ಯಾವಳಿಯಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಒಟ್ಟು 16 ತಂಡಗಳು ಪಾಲ್ಗೊಂಡಿದ್ದವು. ಗುಂಡುಗುಟ್ಟಿ ಶಾಲೆಯ ಹಳೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಹಳೆಯ ನೆನಪುಗಳನ್ನು ಹಂಚಿಕೊಂಡು ಸ್ನೇಹ, ಪ್ರೀತಿ, ಸೌಹಾರ್ದತೆಗೆ ನಾಂದಿ ಹಾಡಿದರು. ಹಳೆಯ ವಿದ್ಯಾರ್ಥಿ ಗೆಳೆಯ ಬಳಗದ ಅಧ್ಯಕ್ಷ ವಿಶ್ವ, ಉಪಾಧ್ಯಕ್ಷರುಗಳಾದ ಮಂಜು, ಶ್ರೀನಿವಾಸ್, ಲಿಖಿತ್, ಕಾರ್ಯದರ್ಶಿ ಕೇಶವ, ಖಜಾಂಚಿ ತೇಜಸ್, ಸಂಘಟನಾ ಕಾರ್ಯದರ್ಶಿಗಳಾದ ಸುಜಿ, ಪೊನ್ನಪ್ಪ, ರಮೇಶ್, ಗಣೇಶ್ ಪದಾಧಿಕಾರಿಗಳಾದ ಅರುಣ, ಅಣ್ಣಪ್ಪ, ಕಾರ್ತಿಕ್, ಕಿರಣ್‍ಕುಮಾರ್, ಕೊರಗಪ್ಪ (ಅರುಣ), ಗಣೇಶ್, ಪ್ರಜ್ವಲ್, ಪ್ರವೀಣ ಹಾಗೂ ಮತ್ತಿತರರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಸುಂಟಿಕೊಪ್ಪ ಏ.11 : ಕೊಡಗರಹಳ್ಳಿಯಲ್ಲಿ ನೆಲೆಸಿರುವ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವವು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಮುಂಜಾನೆ ಶ್ರೀಗಣ ಹೋಮದೊಂದಿಗೆ ವಾಷೀಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ಶ್ರೀ ಬೈತೂರಪ್ಪ ಪೊವ್ವೆದಿ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಮತ್ತು ರುದ್ರಾಭೀಷೇಕವನ್ನು ದೇವಾಲಯದ ಪ್ರಧಾನ ಆರ್ಚಕ ಭಾನು ಪ್ರಕಾಶ್ ಭಟ್, ರಘುಪತಿ ಭಟ್ ಹಾಗೂ ರಮೇಶ್ ವೈದ್ಯ ಅವರ ತಂಡ ನೆರವೇರಿಸಿದರು. ದೇವತಕ್ಕರಾದ ಜಗ್ಗರಂಡ ಹ್ಯಾರಿ ಕಾರ್ಯಪ್ಪ ಅವರ ಮನೆಯಿಂದ ದೇವರ ಭಂಡಾರವನ್ನು ಅರ್ಚಕ ನರಸಿಂಹ ಭಟ್ ಅವರ ನೇತೃತ್ವದಲ್ಲಿ ಪೂಜೆ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನೇರವೇರಿಸಿ ದುಡಿಕೊಟ್ ಪಾಟ್ ಸಾಂಪ್ರಾದಾಯಿಕ ಕೊಡವ ಒಲಗದೊಂದಿಗೆ ದೇವಾಲಯಕ್ಕೆ ತಂದು ಪೂಜೆ ನೆರವೇರಿಸಲಾಯಿತು. ಮಾಹಾಪೂಜೆಯ ಬಳಿಕ ತೀರ್ಥ ಪ್ರಸಾದ ವಿತರಿಸಲಾಯಿತು. ದೇವಾಲಯದ ವಾರ್ಷಿಕ ಹಬ್ಬದ ಸಂದರ್ಭ ದೇವಾಲಯಕ್ಕೆ ಒಳಪಟ್ಟ ಕುಟುಂಬಗಳು ಸಾಂಪ್ರಾದಾಯಿಕ ವೇಷ ಭೂಷಣದೊಂದಿಗೆ ದೇವಾಲಯದ ಆವರಣದಲ್ಲಿ ಸೇರಿ ಸಾಂಪ್ರಾದಾಯಿಕ ಬೊಳಕಾಟ್ ನೃತ್ಯ ಸೇವೆ ಸಲ್ಲಿಸಿದರು. ವಿಶೇಷವೆಂದರೆ ಹಬ್ಬದ…

Read More

ಮಡಿಕೇರಿ ಏ.11 : ಸಸ್ಯಗಳ ಲೋಕ, ಪ್ರಾಕೃತಿಕ ಸೌಂದರ್ಯ ಒಳಗೊಂಡಿರುವ ರಾಜಸೀಟು ಉದ್ಯಾನವನದಲ್ಲಿ ಜಿಫ್‍ಲೈನ್ ಸಾಹಸ ಕ್ರೀಡೆಯು ಸೇರ್ಪಡೆಯಾಗಿದೆ. ನಗರದ ರಾಜಸೀಟು ಉದ್ಯಾನವನದಲ್ಲಿ ಜಿಫ್‍ಲೈನ್ ಸಾಹಸ ಕ್ರೀಡೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಚಾಲನೆ ನೀಡಿದರು. ಸ್ವತಃ ತಾವೇ ಜಿಫ್‍ಲೈನ್‍ನಲ್ಲಿ ಸಾಹಸ ಕ್ರೀಡೆಯಲ್ಲಿ ಪಾಲ್ಗೊಂಡು ಗಮನಸೆಳೆದರು. ಬಳಿಕ ಜಿಫ್‍ಲೈನ್ ಸಾಹಸ ಕ್ರೀಡೆಯ ಅನುಭವ ಹಂಚಿಕೊಂಡ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಒಟ್ಟು 310 ಮೀಟರ್ ಉದ್ದದ ಜಿಫ್‍ಲೈನ್ ಅಳವಡಿಸಲಾಗಿದೆ ಎಂದರು. ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಜೊತೆಗೆ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯಿಂದ ಸುರಕ್ಷತೆ ಸಂಬಂಧ ಪ್ರಮಾಣ ಪತ್ರ ಪಡೆಯಬೇಕು. ಜೊತೆಗೆ ಸಾಹಸ ಅಕಾಡೆಮಿಯ ಅಗತ್ಯ ಮಾರ್ಗದರ್ಶನ ಪಾಲಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್.ನಾಯಕ್ ಅವರು ಜಿಫ್‍ಲೈನ್ ಸಾಹಸ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಒಬ್ಬರಿಗೆ 300 ರೂ. ನಿಗದಿ ಮಾಡಲಾಗಿದೆ ಎಂದರು. ಇಲಾಖಾ ಖಾಸಗಿ ಸಹಭಾಗಿತ್ವದಲ್ಲಿ ಜಿಪ್‍ಲೈನ್ ಸಾಹಸ ಕ್ರೀಡೆ…

Read More

ಮಡಿಕೇರಿ ಏ.11 : ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ ಮಡಿಕೇರಿ ತಾಲೂಕು ಜಾನಪದ ಪರಿಷತ್ ಸಹಯೋಗದಲ್ಲಿ ಏಪ್ರಿಲ್, 15 ರಂದು ವಿಶ್ವ ಚಿತ್ರಕಲಾ ದಿನಾಚರಣೆ ಸಂದರ್ಭ ಕೊಡಗು ಮತ್ತು ಮತದಾನ ವಿಷಯದ ಸಂಬಂಧಿತ ಚಿತ್ರಕಲಾ ಸ್ಪರ್ಧೆ ಆಯೋಜಿಸಿದೆ. ನಗರದ ರಾಜಾಸೀಟು ಉದ್ಯಾನವನದಲ್ಲಿ ಏಪ್ರಿಲ್ 15 ರಂದು ಬೆಳಗ್ಗೆ 10 ಗಂಟೆಯಿಂದ ಚಿತ್ರಕಲಾ ಸ್ಪರ್ಧೆಯು 14 ವಷ೯ದೊಳಗಿನ ವಿದ್ಯಾರ್ಥಿಗಳ ವಿಭಾಗ, 14 ರಿಂದ 18 ವಷ೯ದೊಳಗಿನ ವಿದ್ಯಾಥಿ೯ ವಿಭಾಗ ಮತ್ತು 18 ವಷ೯ಕ್ಕೆ ಮೇಲ್ಪಟ್ಟವರ ವಿಭಾಗದಲ್ಲಿ ಆಯೋಜಿಸಲ್ಪಟ್ಟಿದೆ. ವಿಶ್ವ ಚಿತ್ರಕಲಾ ದಿನದ ಪ್ರಯುಕ್ತ ಜಿಲ್ಲೆಯ ಚಿತ್ರ ಕಲಾವಿದರು ಕೂಡ ವೈವಿಧ್ಯಮಯ ಚಿತ್ರಕಲೆ ರಚಿಸಲಿದ್ದಾರೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕ ವಿಭಾಗದಲ್ಲಿ ನಡೆಯುವ ಚಿತ್ರಕಲಾ ಸ್ಪರ್ಧೆಯಲ್ಲಿ ಮತದಾನದ ಮಹತ್ವದ ವಿಷಯದಲ್ಲಿ ಕೊಡಗು ಮತ್ತು ಮತದಾನ ವಿಚಾರದ ಬಗ್ಗೆ ಚಿತ್ರಕಲೆ ರಚಿಸಬಹುದಾಗಿದೆ. ಇದೇ ಸಂದರ್ಭ ‘ನಾನು ಮತದಾನ ಮಾಡುತ್ತೇನೆ’ ಎಂಬ ಬೃಹತ್ ಕ್ಯಾನ್ವಸ್ನ್ನು ರಾಜಾಸೀಟು ಉದ್ಯಾನವನದಲ್ಲಿ ಕೊಡಗಿನ…

Read More