ಶನಿವಾರಸಂತೆ ಏ.10 : ಶನಿವಾರಸಂತೆ ಹೊಬಳಿ ವ್ಯಾಪ್ತಿಯ 30, 40,46,45,50 ಮತಗಟ್ಟೆಗಳಿಗೆ ಸೆಟ್ಟರ್ ಆಫೀಸರ್ ಯಾದವ್ ಬಾಬು ಹಾಗೂ ಉಪ ತಹಶೀಲ್ದಾರ್ ನಾಗರಾಜ್, ಗ್ರಾಮ ಲೆಕ್ಕಾಧಿಕಾರಿ ವಾಣಿ ಹಾಗೂ ಇತರ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತಗಟ್ಟೆಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ, ಅಲ್ಲಿನ ಸಣ್ಣ ಪುಟ್ಟ ಸಮಸ್ಯೆಗಳ ಬಗ್ಗೆ ಪಂಚಾಯಿತಿ ಪಿಡಿಓ ಗಳಿಗೆ ಗಮನಹರಿಸಿ ಸರಿಪಡಿಸುವಂತೆ ಸೂಚಿಸಿದರು.
ಲೇಖಕ: admin
ಸುಂಟಿಕೊಪ್ಪ,ಏ.10: ಹರದೂರು ಗ್ರಾಮದ ಶ್ರೀ ಆದಿನಾಗಬಹ್ಮ ಮೊಗೇರ್ಕಳ ಸೇವಾ ಸಮಿತಿ ವತಿಯಿಂದ ಶ್ರೀ ಆದಿನಾಗಬಹ್ಮ ಮೊಗೇರ್ಕರ ದೈವಗಳ ಕೊರಗ ತನಿಯ ದೈವದ 83ನೇ ನೇಮೋತ್ಸವವು ಏ.15 ಮತ್ತು 16ರಂದು ನಡೆಯಲಿದೆ. ಏ.15 ರಂದು ಮದ್ಯಾಹ್ನ 12 ಗಂಟೆಗೆ ಆಯುಧಾ ಪೂಜೆ, ಸಂಜೆ 6 ಗಂಟೆಗೆ ಮಂತ್ರವಾದಿ ಗುಳಿಗನ ನೇಮ, ರಾತ್ರಿ 8.30 ಗಂಟೆಗೆ ಶ್ರೀ ಆದಿನಾಗಬಹ್ಮ ಮೊಗೇರ ದೈವಗಳ ಗರಡಿ ಇಳಿಯುವುದು, ರಾತ್ರಿ 12.30 ಗಂಟೆಗೆ ಆದಿ ಮಾಯೆ ತನ್ನಿ ಮಾನಿಗ ಗರಡಿ ಇಳಿಯುವುದು. ಏ.16 ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ಕೊರಗ ದೈವದ ನೇಮ ನಡೆಯಲಿದೆ ಎಂದು ಶ್ರೀ ಆದಿನಾಗಬಹ್ಮ ಮೊಗೇರ್ಕಳ ಸೇವಾ ಸಮಿತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಸಿದ್ದಾಪುರ ಏ.10 : ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಶ್ರೀಸಾಮಾನ್ಯರಿಗೆ ಧೈರ್ಯ ತುಂಬಿ, ಸಮಾಜ ಘಾತುಕ ಶಕ್ತಿಗಳಿಗೆ ಎಚ್ಚರಿಕೆ ನಿಡುವ ಹಿನ್ನೆಲೆಯಲ್ಲಿ ಇಂದು ಪಟ್ಟಣದಲ್ಲಿ ಅರೆ ಸೇನಾ ಪಡೆ ಮತ್ತು ಜಿಲ್ಲಾ ಪೊಲೀಸರಿಂದ ಪಥ ಸಂಚಲನ ನಡೆಯಿತು. ಚುನಾವಣೆ ಸಮದರ್ಭ ಸಮಾಜ ಘಾತುಕ ಶಕ್ತಿಗಳು ಶಾಂತಿ ಕದಡಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲವೆನ್ನುವ ಸ್ಪಷ್ಟ ಸಂದೇಶ ಸಾರುವ ನಿಟ್ಟಿನಲ್ಲಿ ನೆಲ್ಲಿಹುದಿಕೇರಿಯಿಂದ ಸಿದ್ದಾಪುರದವರೆಗೆ ನಡೆದ ಪಥ ಸಂಚಲನದಲ್ಲಿ ನೂರಕ್ಕೂ ಹೆಚ್ಚಿನ ಪೊಲೀಸ್ ಮತ್ತು ಅರೆ ಸೇನಾ ಪಡೆದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಸುಂಟಿಕೊಪ್ಪ ಏ.10 : ಮಳ್ಳೂರು ಗ್ರಾಮದ ಕೊರಗಜ್ಜ ದೈವ ಸ್ಥಾನದಲ್ಲಿ ಪ್ರಥಮ ವರ್ಷದ ನೇಮೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ನಾಕೂರು ಶಿರಂಗಾಲ ವ್ಯಾಪ್ತಿಯ ಮಳ್ಳೂರು ಗ್ರಾಮದಲ್ಲಿ ಕೊರಗ, ತನಿಯ, ಕೊರಗಜ್ಜ ಮೂರು ದೈವಗಳ ಕೋಲ ನೆರವೇರಿತು. ಭಾನುವಾರ ರಾತ್ರಿ 10 ಗಂಟೆಗೆ ಪ್ರಾರಂಭವಾದ ಕೋಲವು ಇಂದು ಮುಂಜಾನೆಯವರೆಗೆ ನಡೆಯಿತು. ಮಳೂರು, ನಾಕೂರು ಶಿರಂಗಾಲ, 7ನೇ ಹೊಸಕೋಟೆ, ಸುಂಟಿಕೊಪ್ಪ ಸೇರಿದಂತೆ ವಿವಿಧ ಗ್ರಾಮದ ಭಕ್ತಾಧಿಗಳು ಆಗಮಿಸಿ ಕೊರಗಜ್ಜನಿಗೆ ಹರಕೆ ಸಲ್ಲಿಸಿದರು. ನೆರೆದಿದ್ದ ನೂರಾರು ಭಕ್ತರಿಗೆ ಗಂಧ ಪ್ರಸಾದ ವಿತರಿಸಲಾಯಿತು.
ಸೋಮವಾರಪೇಟೆ ಏ.10 : ಪಟ್ಟಣದ ಮುಖ್ಯ ರಸ್ತೆಯಿಂದ ಸೋಮೇಶ್ವರ ದೇವಾಲಯದವರೆಗೆ ನಗರೋತ್ಥಾನ ಯೋಜನೆಯಡಿ ಕಾಂಕ್ರೀಟ್ ರಸ್ತೆಯ ಮೇಲೆ ಡಾಂಬರೀಕರಣ ಮಾಡುತ್ತಿದ್ದು, ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಗುಂಡಿಬಿದ್ದ ರಸ್ತೆಯಲ್ಲೇ ರೈತರು ಎರಡು ದಶಕಗಳಿಂದ ಹೆಣಗಾಡುತ್ತಿದ್ದು, ಇಲ್ಲಿಯವರೆಗೆ ರಸ್ತೆಗೆ ಅನುದಾನ ನೀಡಿಲ್ಲ ಎಂದು ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ ಮಾಡುತ್ತಿರುವ ಸಂದರ್ಭ ಪಟ್ಟಣ ವ್ಯಾಪ್ತಿಯಲ್ಲಿ ಕಾಂಕ್ರೀಟ್ ರಸ್ತೆ ಮೇಲೆ ಡಾಂಬರೀಕರಣ ಮಾಡುತ್ತಿರುವುದು ಹಸ್ಯಸ್ಪದ ಎಂದರು. ನರರೋತ್ಥಾನ ಯೋಜನೆಯಲ್ಲಿ ಪಟ್ಟಣ ಪಂಚಾಯಿತಿಗೆ 2.26ಕೋಟಿ ರೂ. ಹಣ ಬಿಡುಗಡೆಯಾಗಿ 4 ತಿಂಗಳು ಕಳೆದಿದ್ದು, ಚುನಾವಣೆ ಸಂದರ್ಭದಲ್ಲಿ ಕಾಮಗಾರಿ ನಡೆಯುತ್ತಿರುವುದು ಚುನಾವಣಾ ಗಿಮಿಕ್ ಎಂದು ಟೀಕಿಸಿದ್ದಾರೆ. ಕಳೆದ 10 ವರ್ಷಗಳ ಹಿಂದೆ 5ಕೋಟಿ ರೂ.ಗಳ ವೆಚ್ಚದಲ್ಲಿ ಮುಖ್ಯ ರಸ್ತೆ ಸೇರಿದಂತೆ ಕೆಲ ರಸ್ತೆಗಳನ್ನು ಕಾಂಕ್ರೀಟಿಕರಣಗೊಳಿಸಲಾಗಿದ್ದು, ಇನ್ನು 10 ವರ್ಷಗಳ ಕಾಲ ಕಾಂಕ್ರೀಟ್ ರಸ್ತೆ ಬಾಳಿಕೆ ಬರುತ್ತಿತ್ತು. ಪ್ರಶ್ನೆ ಮಾಡಬೇಕಾದ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಮೌನಕ್ಕೆ ಶರಣಾಗಿರುವುದು ಸರಿಯಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿಪ್ರಾಯ: ಕಾಂಕ್ರೀಟ್…
ಮಡಿಕೇರಿ ಏ.10 : ವಿರಾಜಪೇಟೆ ತಾಲ್ಲೂಕಿನ ಹಾಲುಗುಂದ ಶ್ರೂ ಬೇಟೆಗಾರ ದೇವಾಲಯದ ಹಬ್ಬವು ಏ.13 ಮತ್ತು 14 ರಂದು ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಏ.13 ರಂದು ಪಟ್ಟಣಿ ಹಬ್ಬ, ರಾತ್ರಿ 10 ಗಂಟೆಗೆ ಬೊಳ್ಳಾಟ ಜರುಗಲಿದೆ. ಏ.14 ರಂದು ಬೆಳಗಿನ ಜಾವ 5 ಗಂಟೆಗೆ ದೇವರ ಕೋಲ ಹಾಗೂ ಅಪಾಹ್ನ 3 ಗಂಟೆಗೆ ಎತ್ತು ಪೋರಾಟ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಮಡಿಕೇರಿ ಏ.10 : ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಸಿ-ವಿಜಿಲ್ ಸಿಟಿಜನ್ ವಿಜಿಲೆನ್ಸ್ ಆ್ಯಪ್‍ನಲ್ಲಿ ಸಾರ್ವಜನಿಕರು, ರಾಜಕೀಯ ಪಕ್ಷಗಳು, ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಂಡುಬರುವ ಚುನಾವಣಾ ಅಕ್ರಮಗಳ ಬಗ್ಗೆ ಅಥವಾ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ಬಗ್ಗೆ ರಾಜಕೀಯ ಜಾಹಿರಾತು ಪ್ರಕಟ/ ಪ್ರಸಾರ ಸಂಬಂಧ ಅನುಮತಿ/ ದೂರು ಬಗ್ಗೆ ಸಿ-ವಿಜಿಲ್ ಆ್ಯಪ್ ಮೂಲಕ ಮಾಹಿತಿ ನೀಡಬಹುದಾಗಿದೆ ಎಂದು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಶಬನಾ ಎಂ.ಶೇಖ್ ಅವರು ತಿಳಿಸಿದ್ದಾರೆ.
ಮಡಿಕೇರಿ ಏ.10 : ಹಿರಿಯ ನಾಗರಿಕರ ವೇದಿಕೆಯ 2022-23 ನೇ ಸಾಲಿನ ಸಾಮಾನ್ಯ ಸಭೆಯು ಏ.15 ರಂದು ಬೆಳಗ್ಗೆ 10 ಗಂಟೆಗೆ ಕಡಗದಾಳು ರಸ್ತೆಯ ‘ಕ್ಯಾಪಿಟಲ್ ವಿಲೇಜ್’ ನಲ್ಲಿ ಸಂಸ್ಥೆಯ ಅಧ್ಯಕ್ಷರಾದ ಕೊಂಗಾಂಡ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರು ಮತ್ತು ಕಾರ್ಯದರ್ಶಿ ತಿಳಿಸಿದ್ದಾರೆ.
ಮಡಿಕೇರಿ ಏ.10 : ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಸಂಬಂಧ 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಅಥವಾ ದೂರಿನ ಬಗ್ಗೆ ಕ್ರಮವಹಿಸಲು ಚುನಾವಣಾಧಿಕಾರಿಗಳ ಕಚೇರಿಯಲ್ಲಿ 24*7 ನಿಯಂತ್ರಣಾ ಕೊಠಡಿ(ದೂರವಾಣಿ ಸಂಖ್ಯೆ 08274-256328) ತೆರೆಯಲಾಗಿದ್ದು, ಚುನಾವಣಾ ಸಂಬಂಧ ಯಾವುದೇ ದೂರುಗಳು, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಮಾಹಿತಿ ನೀಡಬಹುದಾಗಿದೆ ಎಂದು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.
ಸೋಮವಾರಪೇಟೆ ಏ.10 : ಶಾಂತಳ್ಳಿ ಹೋಬಳಿಯ ನಗರಳ್ಳಿ ಗ್ರಾಮದಲ್ಲಿ ಐತಿಹಾಸಿಕ ಕೂತಿನಾಡು ಸುಗ್ಗಿ ಉತ್ಸವವು ಸಾವಿರಾರು ಭಕ್ತಾಧಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು. ಕೂತಿನಾಡಿಗೆ ಸೇರಿದ 18 ಗ್ರಾಮಗಳ ನಿವಾಸಿಗಳು ನಗರಳ್ಳಿ ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಗ್ರಾಮದೇವತೆ ಸಬ್ಬಮ್ಮ ದೇವಿಗೆ 18 ಗ್ರಾಮಗಳಲ್ಲಿ 15ದಿನಗಳ ಕಾಲ ವಿಶೇಷ ಪೂಜೆಗಳನ್ನು ಸಲ್ಲಿಸಿದ ಗ್ರಾಮಸ್ಥರು, ನಗರಳ್ಳಿ ಸುಗ್ಗಿಕಟ್ಟೆಯಲ್ಲಿ ಪ್ರದಕ್ಷಿಣೆ ಹಾಕಿ ಗ್ರಾಮಗಳ ಸುಭೀಕ್ಷೆ ಮಳೆ, ಬೆಳೆ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸುಮಾರು 800ವರ್ಷಗಳ ಇತಿಹಾಸವಿರುವ ಸುಗ್ಗಿ ಉತ್ಸವದಲ್ಲಿ ಗ್ರಾಮದ ನಿವಾಸಿಗಳು, ಮಹಿಳೆಯರು, ಮಕ್ಕಳು, ಹಿರಿಯರು ಭಾಗವಹಿಸಿ ಇಷ್ಟಾರ್ಥಗಳ ನೆರವೇರಿಕೆಗೆ ಗ್ರಾಮ ದೇವತೆಯನ್ನು ಪ್ರಾರ್ಥಿಸಿದರು. ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್ ಕಲ್ಲಿನ ಕಂಬದಲ್ಲಿ 4 ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ಯಾಲೆಯಲ್ಲಿ ತೂಗಲಾಯಿತು. ಬಿಲ್ಲ ರಂಗದಲ್ಲಿ ಪೂರ್ವಜರ ಜೀವನ ಪದ್ದತಿಯನ್ನು ಬಿಂಬಿಸುವ ನೃತ್ಯ ಪ್ರಾಕಾರ, ಕಡವೆ ಬೇಟೆಯಾಡುವ ಪ್ರಸಂಗ ಅಕರ್ಷಿಸಿತು. ಕೊನೆಯಲ್ಲಿ ಕಡವೆ ಕಾಡು…






