ಸೋಮವಾರಪೇಟೆ ಏ.4 NEWS DESK : ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯ ಗೋಪಾಲಪುರ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶದ್ಧಾಭಕ್ತಿಯಿಂದ ಆಚರಿಸಲಾಯಿತು. ಸಂತ ಅಂತೋಣಿ ಚರ್ಚ್ ನ ಫಾದರ್ ಕ್ರಿಸ್ಟೋಫರ್ ಸಗಾಯರಾಜ್ ಅವರು ಶಿಲುಬೆ ಬೆಟ್ಟದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಯೇಸು ಕ್ರಿಸ್ತನು ವಿಶ್ವದ ಒಳಿತಿಗಾಗಿ ಶಿಲುಬೆಯಲ್ಲಿ ಮರಣ ಹೊಂದಿದ ಕುರಿತು ವಿವರಿಸಿದರು. ಹೆಚ್ಚಿನ ಸಂಖ್ಯೆಯ ಕ್ರೈಸ್ತ ಬಾಂಧವರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.
ಲೇಖಕ: admin
ಕುಶಾಲನಗರ ಏ.4 NEWS DESK : ಜನಗಣತಿ ಕಾರ್ಯವು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಕಾನೂನು ಬದ್ಧ ಕೆಲಸವಾಗಿದೆ. ಶಿಕ್ಷಕರು ಉತ್ತಮ ಕರ್ತವ್ಯದೊಂದಿಗೆ ಜನಗಣತಿ ಕಾರ್ಯವನ್ನು ಯಶಸ್ವಿಯಾಗಿಸಿ ಎಂದು ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ ಶನಿವಾರ ಮನವಿ ಮಾಡಿದರು. ಕುಶಾಲನಗರ ಪಟ್ಟಣದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಂದಾಯ ಇಲಾಖೆಯ ವತಿಯಿಂದ ಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿರುವ ಮೇಲ್ವಿಚಾರಕರು ಹಾಗೂ ಗಣತಿದಾರರಿಗೆ ಮೂರು ದಿನಗಳ ಕಾಲ ಮನೆಪಟ್ಟಿ ಹಾಗೂ ಜನಗಣತಿ ಕಾರ್ಯದ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನಗಣತಿ ಕಾರ್ಯವನ್ನು ಶಿಕ್ಷಕರು ಜವಬ್ದಾರಿಯಿಂದ ಕರ್ತವ್ಯ ನಿರ್ವಹಿಸುತ್ತೀರಿ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು. ಕುಶಾಲನಗರ ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 164 ಬ್ಲಾಕ್ ಗಳನ್ನು ಗುರುತಿಸಿದ್ದು, 30 ಮಂದಿ ಮೇಲ್ವಿಚಾರಕರು ಹಾಗೂ 174 ಗಣತಿದಾರರು ಗಣತಿ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು. ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ನೇಮಕಗೊಂಡಿರುವ ಗಣತಿದಾರರು ಮೊದಲ ಹಂತದ ಮನೆ ಪಟ್ಟಿ ಕಾರ್ಯದಲ್ಲಿ ನಿಗದಿ ಪಡಿಸುವ…
ಮಡಿಕೇರಿ, NEWS DESK ಏ.4 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.5ರಂದು ನಡೆಯುವ ಪಂದ್ಯಗಳ ವಿವರ. *ಮೈದಾನ 1* ಬೆಳಿಗ್ಗೆ 9ಗಂಟೆಗೆ ಮಾಚೆಟ್ಟಿರ ಮತ್ತು ಐಚೋಡಿಯಂಡ, 10ಕ್ಕೆ ನಾಳಿಯಂಡ ಮತ್ತು ಚೆಟ್ರಂಡ, 11ಕ್ಕೆ ಮಾಚೆಟ್ಟಿರ (ಬಾಳುಗೋಡು) ಮತ್ತು ಮಾಚಂಗಡ, ಮಧ್ಯಾಹ್ನ 12ಕ್ಕೆ ಕಾಯಪಂಡ ಮತ್ತು ಕಳ್ಳಂಗಡ, 1ಕ್ಕೆ ಚೆಟ್ಟಿಯಾರಂಡ ಮತ್ತು ಬಲ್ಯಮಾಡ, 2ಕ್ಕೆ ಕಾಂಚೇರಿರ ಮತ್ತು ಕಲಿಯಂಡ ಹಾಗೂ 3ಗಂಟೆಗೆ ಕಡೆಮಡ ಮತ್ತು ಪುದಿಯೊಕ್ಕಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಕುಂಞÂÃರ ಮತ್ತು ಪರದಂಡ, 10ಕ್ಕೆ ಸೋಮೆಯಂಡ ಮತ್ತು ಮುಕ್ಕಾಟಿರ (ಪುಲಿಕೋಟು), 11ಕ್ಕೆ ಕುಂದೀರ ಮತ್ತು ಕೋದಂಡ, ಮಧ್ಯಾಹ್ನ 12ಕ್ಕೆ ಮುದಿಯಡ ಮತ್ತು ಆದೇಂಗಡ, 1ಕ್ಕೆ ಕೊಡಂದೇರ ಮತ್ತು ಪುಲ್ಲಂಗಡ, 2ಕ್ಕೆ ಕಟ್ಟೇರ (ಅರಮೇರಿ) ಮತ್ತು ಚಿಂದಮಾಡ ಹಾಗೂ 3 ಗಂಟೆಗೆ ಮೇಕೇರಿರ ಮತ್ತು ನಂದೀರ
ಮಡಿಕೇರಿ, NEWS DESK ಏ.04:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಸಿರುಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 119 ನೇ ಜನ್ಮ ದಿನಾಚರಣೆಯು ಏಪ್ರಿಲ್, 05 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ…
ಮಡಿಕೇರಿ, NEWS DESK ಏ.4:-ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ವತಿಯಿಂದ ಏಪ್ರಿಲ್, 8 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ “ಉದ್ಯೋಗಮೇಳ” ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಜಾಯ್ ಆಲುಕಾಸ್ ಜ್ಯುವೆಲ್ಲರಿ, ಮೈಸೂರು, ಕಲ್ಯಾಣಿ ಮೋಟಾರ್ಸ್ ಕಾರ್ ಶೋ ರೂಂ, ಮಡಿಕೇರಿ, ಕೂರ್ಗ್ ಕ್ಲಿಪ್ಟ್ಸ್ ರೆಸಾರ್ಟ್, ಮಡಿಕೇರಿ, ಹ್ಯೂಂಡಾಯಿ ಕಾರ್ ಶೋ ರೂಮ್, ಮಡಿಕೇರಿ, ಇವೊಲೋಬ್ಯಾಕ್ ರೆಸಾರ್ಟ್, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ., ಪಿಯುಸಿ, ಐಟಿಐ, ಡಿಪೆÇ್ಲೀಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ…
ಮಡಿಕೇರಿ, NEWS DESK ಏ.04:-33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು ಹಾಗೂ ಎಫ್3 ಮೂರ್ನಾಡು ಫೀಡರ್‍ನಲ್ಲಿ ಏಪ್ರಿಲ್, 05 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ನಾಪೋಕ್ಲು ಮಾರ್ಕೆಟ್, ನಾಪೋಕ್ಲು ಟೌನ್, ಬೇತು, ಗಾಂಧಿ ನಗರ, ಹಳೆತಾಲ್ಲೂಕು, ಭಗವತಿ ದೇವಸ್ಥಾನ ಹಾಗೂ ಮೂರ್ನಾಡು ಫೀಡರ್‍ಗೆ ಒಳಪಡುವ ಮೂರ್ನಾಡು ಟೌನ್, ಮುತ್ತಾರ್‍ಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ, NEWS DESK ಏ.4:-2026-27ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಟಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್, 15 ಪ್ರಾರಂಭದ ದಿನವಾಗಿದೆ. ಅರ್ಜಿ ಸಲ್ಲಿಸಲು ಮೇ, 04 ಕೊನೆಯ ದಿನವಾಗಿದೆ. ಮೇ, 06 ರಂದು ಅರ್ಜಿಗಳ ಪರಿಶೀಲನೆ, ಮೇ, 12 ರಂದು ಪ್ರವೇಶ ಪರೀಕ್ಷೆ, ಮೇ, 15 ರಂದು ಪ್ರವೇಶ ಪರೀಕ್ಷೆ ಫಲಿತಾಂಶ ಘೋಷಣೆ, ಮೇ, 19 ರಂದು ಅರ್ಹ ವಿದ್ಯಾರ್ಥಿಗಳನ್ನು ಕೌನ್ಸೆಲಿಂಗ್ ಮೂಲಕ ಆಯ್ಕೆ ಮಾಡುವುದು, ಆಯ್ಕೆಯಾದ ಶಾಲೆಗೆ ದಾಖಲಾಗಲು ಮೇ, 30 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ವಿಧಾನ:- ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ https://swd.karnataka.gov.in/ ಅನ್ನು ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು 5 ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಟಿತ ಶಾಲೆಯಲ್ಲಿ 6ನೇ…
ಮಡಿಕೇರಿ, NEWS DESK ಏ.04:-ಪ್ರಸವ ಪೂರ್ವ ಲಿಂಗ ಪತ್ತೆ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಸಂಬಂಧ ದೂರುಗಳು ಕೇಳಿ ಬಂದಲ್ಲಿ ನಿಯಮಾನುಸಾರ ನಿರ್ಧಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸತೀಶ್ ಕುಮಾರ್ ಅವರು ಎಚ್ಚರಿಸಿದ್ದಾರೆ. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರ ಕಚೇರಿಯಲ್ಲಿ ಶನಿವಾರ ನಡೆದ ಪಿಸಿ ಮತ್ತು ಪಿಎನ್‍ಡಿಟಿ(ಪ್ರಸವ ಪೂರ್ವ ಲಿಂಗ ಪತ್ತೆ ಮತ್ತು ಹತ್ಯೆ ಕಾಯ್ದೆ) ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಪ್ರಸವ ಪೂರ್ವ ಲಿಂಗ ಪತ್ತೆ ಮಾಡಬಾರದು. ಸಮಾಜದಲ್ಲಿ ಗಂಡು ಮತ್ತು ಹೆಣ್ಣು ಸಮತೋಲನವಾಗಿರಬೇಕು. ಆ ನಿಟ್ಟಿನಲ್ಲಿ ಗರ್ಭಿಣೀಯರು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಇದರಿಂದ ಶಿಶುವಿನ ಬೆಳವಣಿಗೆ ಮತ್ತು ತಾಯಿಯ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಎನ್‍ಪೋರ್ಸ್‍ಮೆಂಟ್ ಅಧಿಕಾರಿ ಡಾ.ಎನ್.ಆನಂದ್ ಅವರು ಜಿಲ್ಲೆಯಲ್ಲಿ 28 ಸ್ಕ್ಯಾನಿಂಗ್ ಕೇಂದ್ರಗಳಿದ್ದು, ಆಗಾಗ ಭೇಟಿ ನೀಡಿ ತಪಾಸಣೆ ನಡೆಸಲಾಗುತ್ತದೆ ಎಂದರು. ಹೊಸದಾಗಿ ಸ್ಕ್ಯಾನಿಂಗ್ ಕೇಂದ್ರ…
ಮಡಿಕೇರಿ, NEWS DESK ಏ.4 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹಾಕತ್ತೂರು- ಮರಗೋಡು ರಸ್ತೆಯಲ್ಲಿ ನಡೆದಿದೆ. ಕಟ್ಟೆಮಾಡು ಗ್ರಾಮದ ಬಿದ್ರುಪಣೆ ಸೋಮಣ್ಣ ಅವರ ಕಿರಿಯ ಪುತ್ರ ಪ್ರವೀಣ್ (35) ಎಂಬುವವರೇ ಮೃತ ದುರ್ದೈವಿ. ಶುಕ್ರವಾರ ರಾತ್ರಿ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ರಸ್ತೆಯಲ್ಲಿ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಪ್ರವೀಣ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಉಳಿದವರಿಗೂ ಗಾಯಗಳಾಗಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕುಶಾಲನಗರ, ಏ.4: ಜನಗಣತಿ ಕಾರ್ಯವು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಕಾನೂನು ಬದ್ಧ ಕೆಲಸವಾಗಿದೆ. ಶಿಕ್ಷಕರು ಉತ್ತಮ ಕರ್ತವ್ಯದೊಂದಿಗೆ ಜನಗಣತಿ ಕಾರ್ಯವನ್ನು ಯಶಸ್ವಿಯಾಗಿಸಿ ಎಂದು ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ ಶನಿವಾರ ಮನವಿ ಮಾಡಿದರು. ಕುಶಾಲನಗರ ಪಟ್ಟಣದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಂದಾಯ ಇಲಾಖೆಯ ವತಿಯಿಂದ ಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿರುವ ಮೇಲ್ವಿಚಾರಕರು ಹಾಗೂ ಗಣತಿದಾರರಿಗೆ ಮೂರು ದಿನಗಳ ಕಾಲ ಮನೆಪಟ್ಟಿ ಹಾಗೂ ಜನಗಣತಿ ಕಾರ್ಯದ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನಗಣತಿ ಕಾರ್ಯವನ್ನು ಶಿಕ್ಷಕರು ಜವಬ್ದಾರಿಯಿಂದ ಕರ್ತವ್ಯ ನಿರ್ವಹಿಸುತ್ತೀರಿ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು. ಕುಶಾಲನಗರ ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 164 ಬ್ಲಾಕ್ ಗಳನ್ನು ಗುರುತಿಸಿದ್ದು, 30 ಮಂದಿ ಮೇಲ್ವಿಚಾರಕರು ಹಾಗೂ 174 ಗಣತಿದಾರರು ಗಣತಿ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು. ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ನೇಮಕಗೊಂಡಿರುವ ಗಣತಿದಾರರು ಮೊದಲ ಹಂತದ ಮನೆ ಪಟ್ಟಿ ಕಾರ್ಯದಲ್ಲಿ ನಿಗದಿ ಪಡಿಸುವ ಪ್ರದೇಶಗಳ ನಕ್ಷೆಯನ್ನು ಸಮರ್ಪಕವಾಗಿ…






