ಲೇಖಕ: admin

ವಿರಾಜಪೇಟೆ: ಏ.6 : ರಾಮಭಕ್ತ ಹನುಮನ ಜಯಂತಿಯನ್ನು ವಿರಾಜಪೇಟೆ ಪಟ್ಟಣದ ಶ್ರೀವೀರಾಂಜನೇಯ ದೇವಾಲಯ ಹಾಗೂ ಚಿಕ್ಕಪೇಟೆಯ ಚತ್ರಕೆರೆಯ ಶ್ರೀಗಣಪತಿ ಆಂಜನೇಯ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಭಕ್ತರಿಂದ ಶ್ರೀರಾಮ ಭಜನೆ, ಹನುಮನ ಸಂಕೀರ್ತನೆಗಳು ನಡೆಯಿತು. ವಿಶೇಷ ಅಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಅಲಂಕಾರ ಪೂಜೆ ನಡೆಯಿತು. ಮಹಾಪೂಜೆಯ ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಿತು. ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಅರ್ಚಕರು ಸೇರಿದಂತೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More

ನಾಪೋಕ್ಲು ಏ.6 : ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವ ಬೆನ್ನಲ್ಲೇ ಕೊಡಗು ಜಿಲ್ಲೆಯ ಹಲವೆಡೆ ಮೋಡ ಮುಸುಕಿದ ವಾತಾವರಣ ಕಂಡು ಬಂದಿದೆ. ಕಳೆದ ಮೂರು ದಿನಗಳಿಂದ ಇದೇ ರೀತಿಯ ಹವಾಗುಣವಿದ್ದು, ಜನ ಮಳೆಗಾಗಿ ಎದುರು ನೋಡುತ್ತಿದ್ದಾರೆ.  ನಾಪೋಕ್ಲು ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗಿದೆ. ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಮಳೆ ಸುರಿದು ತಂಪಾಗಿದೆ.  ಬಲ್ಲಮಾವಟಿ, ನೆಲಜಿ, ಎಮ್ಮೆಮಾಡು , ಕಕ್ಕಬ್ಬೆ, ಕೋಟೇರಿ ವ್ಯಾಪ್ತಿಯಲ್ಲಿ ಆಲಿಕಲ್ಲು ಸಹಿತ 96 ಸೆಂಟ್ ಮಳೆಯಾಗಿದೆ. ಗಾಳಿ ಮಳೆಗೆ ನಾಪೋಕ್ಲು – ಕಕ್ಕಬೆ ಮುಖ್ಯ ಸಂಪರ್ಕ ರಸ್ತೆಯ ಕೋಟೇರಿಯಲ್ಲಿ ಮರವೊಂದು ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.  ಮತ್ತೆ ಉತ್ತಮ ಮಳೆಯಾಗುವ ನಿರೀಕ್ಷೆ ಮೂಡಿದೆ. ವರದಿ : ದುಗ್ಗಳ ಸದಾನಂದ

Read More

ಮಡಿಕೇರಿ ಏ.6 :  ಮೂರ್ನಾಡು ಸಮೀಪದ ಕಿಗ್ಗಾಲು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವರ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವರಿಗೆ ಕೋಟ್ಟಿ ಹಾಡುವುದು,  ದೇವ ತಕ್ಕರ ಮನೆಯಿಂದ ಭಂಡಾರವನ್ನು ಬನಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆದು ಕಟ್ಟು ಸಡಿಲಿಸಿ ನಂತರ ದೈವ ಸನ್ನಿಧಿಯಲ್ಲಿ ಕುಟ್ಟಿಚಾತ ತೆರೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು. ನಂತರ ಭಂಡಾರವನ್ನು ಅಂಬಲಕ್ಕೆ ತಂದು ರಾತ್ರಿ ಮೆಲೇರಿಗೆ ಅಗ್ನಿ ಸ್ಪರ್ಶ ನಡೆದ ನಂತರ ಬೆಳಗ್ಗಿನವರೆಗೆ ಹಲವು ದೈವಗಳ ತೆರೆ ನಡೆಯಿತು. ಮುಂಜಾನೆ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ ನಡೆಯಿತು. ನಂತರ ಶ್ರೀ ಚಾಮುಂಡೇಶ್ವರಿ ದೈವದ ದೊಡ್ಡಮುಡಿ ತೆರೆಯೊಂದಿಗೆ ಉತ್ಸವವು ಸಂಪನ್ನಗೋಂಡಿತು.

Read More

ಸೋಮವಾರಪೇಟೆ ಏ.6 : ಸೋಮವಾರಪೇಟೆ ತಾಲ್ಲೂಕು ಆಡಳಿತದಿಂದ ಡಾ.ಬಾಬು ಜಗಜೀವನ್‍ರಾಂ ಅವರ 116ನೇ ಜನ್ಮದಿನಾಚರಣೆಯನ್ನು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ತಹಶೀಲ್ದಾರ್ ಎಸ್.ಎನ್.ನರಗುಂದ ಅವರು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿ.ಜಯಣ್ಣ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಪ್ಪ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಏ.6 : ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಮಡಿಕೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಮಂಥರ್ ಗೌಡ  ಅವರ ಹೆಸರನ್ನು ಕೆಪಿಸಿಸಿ ಘೋಷಿಸಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

Read More

ಮಡಿಕೇರಿ ಏ.6 :  ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾಸಂಸ್ಥೆಯ ವತಿಯಿಂದ ನೂತನ ಕೊಡಗು ವಿಶ್ವವಿದ್ಯಾಲಯದ ಪ್ರಥಮ ಕುಲಪತಿ  ಪ್ರೊ. ಅಶೋಕ ಸಂಗಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ  ಸಾಯಿ ಶಂಕರ ವಿದ್ಯಾ ಸಂಸ್ಥೆಯ ಮುಖ್ಯಸ್ಥ  ಕೋಳೇರ ಝರು ಗಣಪತಿ, ಟ್ರಸ್ಟಿ ಗಾನ ಕಾರ್ಯಪ್ಪ, ಬಿ.ಇಡಿ ಪದವಿ ಕಾಲೇಜಿನ ಪ್ರಾಂಶುಪಾಲ  ಪಿ.ಎ.ನಾರಾಯಣ್, ಪದವಿ ಕಾಲೇಜು ಪ್ರಾಂಶುಪಾಲ ಟಿ.ಸಿ.ಗೀತಾ ನಾಯ್ಡು ಹಾಗೂ ಸಿಬ್ಬಂದಿ ಮಂದಣ್ಣ  ಹಾಜರಿದ್ದರು.

Read More

ಸಿದ್ದಾಪುರ ಏ.6 :  ವಲಯ ಕಾಂಗ್ರೆಸ್ ಸಮಿತಿ ಸಲಹೆಯಂತೆ ನೆಲ್ಯಹುದಿಕೇರಿ ವಲಯ ಕಾಂಗ್ರೆಸ್ ಸಮಿತಿಗೆ ಹೆಚ್ಚುವರಿಯಾಗಿ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಗ್ರಾ.ಪಂ ಸದಸ್ಯ ಈ. ಎಚ್ ಹನೀಫ ಅವರನ್ನ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಸಾಬು ವರ್ಗೀಸ್ ಮುಂದುವರೆಯಲಿದ್ದಾರೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್ ತಿಳಿಸಿದ್ದಾರೆ.

Read More

ಸೋಮವಾರಪೇಟೆ ಏ.6 : ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿದ್ಯಾದಾನಕ್ಕಾಗಿ ಇಂತಹ ಶೈಕ್ಷಣಿಕ ಸಂಸ್ಥೆಗಳನ್ನು ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ ಎಂದು ಬಸವ ಪಟ್ಟಣದ ತೋಟಂದಾರ್ಯ ಸಂಸ್ಥಾನ ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಅಭಿಪ್ರಾಯಿಸಿದರು. ಯಡೂರು ಗ್ರಾಮದ ಬಿ.ಟಿ.ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ಹಾಗೂ ಕಾಲೇಜು ವತಿಯಿಂದ ನಡೆದ ಸರಸ್ವತಿ ಪೂಜೆ ಹಾಗೂ ಕಾಲೇಜು ಸಂಸ್ಥಾಪಕರಿಗೆ ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ಶೈಕ್ಷಣಿಕ ಸಂಸ್ಥೆಗಳನ್ನು ಕಟ್ಟಲು ಅನೇಕ ದಾನಿಗಳು ತನು, ಮನ, ಧನವನ್ನು ವಿನಿಯೋಗಿಸಿದ್ದಾರೆ. ಅಂತಹವರನ್ನು ಗೌರವಿಸುವುದು ಶ್ಲಾಘನೀಯ ಎಂದು ಹೇಳಿದರು. ವಿದ್ಯಾರ್ಥಿಗಳು ರಾಷ್ಟ್ರದ ಭವ್ಯ ಪ್ರಜೆಗಳು. ಚುನಾವಣೆ ಘೋಷಣೆಯಾಗಿದೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಯುವಸಮುದಾಯ ಮತದಾನ ಮಾಢಬೇಕು. ಅದರಲ್ಲೂ ಯೋಗ್ಯ ವ್ಯಕ್ತಿಗೆ ಮತದಾನ ಮಾಡಿ ತಮ್ಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜು ಸಂಸ್ಥಾಪಕ ಸಮಿತಿ ಕಾರ್ಯದರ್ಶಿ ಎ.ಪಿ.ಶಂಕರಪ್ಪ ಹಾಗೂ ಶಾರದಮ್ಮ ದಂಪತಿಗಳು, ಸಂಸ್ಥಾಪಕ ಅಧ್ಯಕ್ಷ…

Read More

ಸೋಮವಾರಪೇಟೆ ಏ.6 : ಸೋಮವಾರಪೇಟೆ ತಾಲ್ಲೂಕು ಆಡಳಿತದಿಂದ ಡಾ.ಬಾಬು ಜಗಜೀವನ್‍ರಾಂ ಅವರ 116ನೇ ಜನ್ಮದಿನಾಚರಣೆಯನ್ನು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ತಹಶೀಲ್ದಾರ್ ಎಸ್.ಎನ್.ನರಗುಂದ ಅವರು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿ.ಜಯಣ್ಣ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಪ್ಪ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಏ.5 : ಕಾಂಗ್ರೆಸ್ ಆಡಳಿತಾವಧಿಯಲ್ಲಿ ಈ ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರಲಾಯಿತು. ಆದರೆ ಇಂದು ಬಿಜೆಪಿ ನೇತೃತ್ವದ ಸರ್ಕಾರ ಇದೆಲ್ಲವನ್ನು ಹಾಳು ಮಾಡುತ್ತಿದೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರು ಆರೋಪಿಸಿದ್ದಾರೆ. ಸಿದ್ದಾಪುರದ ಸ್ವರ್ಣಮಾಲಾ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್‌ನ ‘ಗ್ಯಾರಂಟಿ ಕಾರ್ಡ್’ ವಿಶ್ವಾಸಾರ್ಹವಾಗಿದ್ದು, ಇತರೆ ಪಕ್ಷಗಳ ಗ್ಯಾರಂಟಿಗಳು ನಂಬಿಕೆಗೆ ಅರ್ಹವಾಗಿಲ್ಲ. ಬಿಜೆಪಿ ಸೋಲಿನ ಹತಾಶೆಯಲ್ಲಿದೆ, ಮುಂಬರುವ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ದುಡಿಯುವ ವರ್ಗಗಳ ಕೈಗೆ ಭೂಮಿ ಹಕ್ಕು ನೀಡಿದವರು ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸರು, ರೈತರಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಿದವರು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪನವರೆ ಎಂದು ತಿಳಿಸಿದ ಮಧು ಬಂಗಾರಪ್ಪ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಹಾಯಧನದೊಂದಿಗೆ ಅಡುಗೆ ಸಿಲಿಂಡರ್ ನೀಡಿದರು. ಆದರೆ…

Read More