ನಾಪೋಕ್ಲು ಏ.5 : ಇತಿಹಾಸ ಪ್ರಸಿದ್ಧ ನಾಪೋಕ್ಲುವಿನ ಶ್ರೀ ಪೊನ್ನು ಮುತ್ತಪ್ಪ ದೇವರ ವಾರ್ಷಿಕ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದ ಮೊದಲದಿನವಾದ ಏ.3ರ ಬೆಳಗ್ಗೆ ಗಣಪತಿ ಹೋಮ, ರಾತ್ರಿ ಗುರು ಪೂಜೆ, ದೇವಿ ಪೂಜೆ ನಡೆಯಿತು. ಏ.4 ರಂದು ಅಪರಾಹ್ನ ಪೈಂಗುತ್ತಿ ನಡೆದ ಬಳಿಕ ಶ್ರೀ ಪೊನ್ನು ಮುತ್ತಪ್ಪ ದೇವರ ಕಳಸವನ್ನು ಹೊತ್ತು ಪವಿತ್ರ ಕಾವೇರಿ ನದಿಯಲ್ಲಿ ಸ್ನಾನದ ನಂತರ ಪ್ರಖ್ಯಾತ ಕೇರಳದ ಚಂಡೆಯೊಂದಿಗೆ ನಾಪೋಕ್ಲು ಪಟ್ಟಣದ ಮುಖ್ಯಬೀದಿಯಲ್ಲಿ ನಡೆದ ಮೆರವಣಿಗೆ, ಬಳಿಕ ದೇವಾಲಯದಲ್ಲಿ ನಡೆದ ಮುತ್ತಪ್ಪ ದೇವರ ವೆಳ್ಳಾಟಂ, ಕುಟ್ಟಿಚ್ಚಾತ, ಗುಳಿಗ ದೇವರ ಕೋಲಗಳು ನೋಡುಗರ ಗಮನ ಸೆಳೆಯಿತು. ಬಳಿಕ ಪ್ರಸಾದ ವಿತರಣೆ ನಡೆಯಿತು. ಇಂದು ಪ್ರಾತಕಾಲ ದೇವರ ಚರಿತ್ರೆ ಹಾಡಿನ ನೃತ್ಯ, ಗುಳಿಗ ದೇವರ ಕೋಲ ನಡೆಯಿತು. ಮುಂಜಾನೆ ಕುಟ್ಟಿಚಾತ ದೇವರ ಕೋಲ, ತಿರುವಪ್ಪ ಮತ್ತು ಮುತ್ತಪ್ಪ ದೇವರ ಕೋಲ ನಡೆದು ಉತ್ಸವ ಸಂಪನ್ನಗೊಂಡಿತು. ಉತ್ಸವದಲ್ಲಿ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಊರಿನ…
ಲೇಖಕ: admin
ಮಡಿಕೇರಿ ಏ.5 : ಶಿಕ್ಷಣ ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹರಿದು ಹಂಚಿ ಹೋಗಿರುವ ಜನಾಂಗ ಬಾಂಧವರು ಒಗ್ಗೂಡಲು ಕ್ರೀಡಾಕೂಟಗಳು ಸಹಕಾರಿ ಆಗಿವೆ ಎಂದು ಮಕ್ಕಳ ತಜ್ಞ ಮೇಜರ್ ಡಾ.ಕುಶ್ವಂತ್ ಕೋಳಿಬೈಲು ಹೇಳಿದರು. ಭಾಗಮಂಡಲದ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ಕುದುಕುಳಿ ಕ್ರಿಕೆಟ್ ಸಮಿತಿ ಆಯೋಜಿಸಿದ ಗೌಡ ಕುಟುಂಬಗಳ ನಡುವಿನ ಕ್ರಿಕೆಟ್ ಪಂದ್ಯಾವಳಿ “ಕುದುಕುಳಿ ಐನ್‍ಮನೆ ಕ್ರಿಕೆಟ್ ಕಪ್-2023” ಅನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದೆ. ಅರೆಭಾಷೆ ಗೌಡರ ಸಂಖ್ಯೆ ಕೊಡಗಿನಲ್ಲಿ ಅಧಿಕ ಇದ್ದು, ಜನಾಂಗದವರು ತಮ್ಮ ಶಕ್ತಿಯನ್ನು ಅರಿತುಕೊಂಡಾಗ ಉತ್ತಮ ಕ್ರೀಡಾಕೂಟವನ್ನು ದೊಡ್ಡ ಮಟ್ಟದಲ್ಲಿ ಸಂಘಟಿಸಲು ಸಾಧ್ಯ ಎಂದರು. ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಕುಶಾಲಪ್ಪ ಟ್ರೋಫಿ ಅನಾವರಣಗೊಳಿಸಿ, ಕೌಟುಂಬಿಕ ಪಂದ್ಯಾವಳಿಯು ಜನಾಂಗವನ್ನು ಒಗ್ಗೂಡಿಸಲು ಒಂದು ಉತ್ತಮ ವೇದಿಕೆ ಎಂದರು. ಕಾವೇರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಆನೆರ ಜಾನಕಿ ಮೋಹನ್ ಮಾತನಾಡಿ, ಸಾಮರಸ್ಯ ಸಹಕಾರ ಮನೋಭಾವನೆ ಬೆಳೆಯಲು…
ಮಡಿಕೇರಿ ಏ.5 : ಇದೇ ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದಾಗಿ ಹೊದ್ದೂರು ಗ್ರಾ.ಪಂ ಸದಸ್ಯ ಕೊಟ್ಟಮುಡಿ ಕೆ.ಎಂ.ಮೊಯ್ದು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜಕೀಯ ಪಕ್ಷಗಳು ಜನರ ವಿಶ್ವಾಸವನ್ನು ಕಳೆದುಕೊಂಡಿರುವ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದಾಗಿ ಹೇಳಿದ್ದಾರೆ. ಗ್ರಾ.ಪಂ ಸದಸ್ಯನಾಗಿ ಕೊಟ್ಟಮುಡಿ ಮತ್ತು ಹೊದವಾಡ ಭಾಗದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಸರ್ಕಾರದಿಂದ ನೀಡಲಾಗುವ ಅನುದಾನವನ್ನು ಜನಪರವಾಗಿ ಸದ್ಬಳಕೆ ಮಾಡುವಲ್ಲಿ ಯಶಸ್ವಿಯಾಗಿದ್ದೇನೆ. ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕ ಆಡಳಿತ ನೀಡುವುದಕ್ಕಾಗಿ ಅಭಿವೃದ್ಧಿಪರ ಚಿಂತನೆಯೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವುದಾಗಿ ಮೊಯ್ದು ಸ್ಪಷ್ಟಪಡಿಸಿದ್ದಾರೆ.
ಮಡಿಕೇರಿ ಏ.5 : ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ನಡೆದ 42 ನೇ ರಾಷ್ಟ್ರೀಯ ವೆಟರನ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಮಡಿಕೇರಿಯ ಜಿಲ್ಲಾಸ್ಪತ್ರೆಯ ಶುಶ್ರೂಷಕ ಅಧಿಕಾರಿ ಬಿ.ವಸಂತಿ ಅವರು ಎರಡು ಪದಕಗಳನ್ನು ಗೆದ್ದಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ನಡೆದ 400 ಮೀ ಓಟದಲ್ಲಿ ಬೆಳ್ಳಿ ಪದಕ ಮತ್ತು 100 ಮೀ ನಲ್ಲಿ ಕಂಚಿನ ಪದಕ ತಮ್ಮದಾಗಿಸಿಕೊಂಡು ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮೈಸೂರಿನ ಚಾಮುಂಡೇಶ್ವರಿ ಸ್ಟೇಡಿಯಂನಲ್ಲಿ ನಡೆದ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 100 ಮೀ ಓಟದಲ್ಲಿ ಬೆಳ್ಳಿ ಪದಕ ಗೆದ್ದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು. ಬಿ.ವಸಂತಿ ಅವರು ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸರಕಾರಿ ಆಸ್ಪತ್ರೆಯಲ್ಲಿ ಶುಶ್ರೂಷಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ, ಇತ್ತೀಚೆಗೆ ಮೈಸೂರು ಕೆ.ಆರ್.ಆಸ್ಪತ್ರೆಯಲ್ಲಿ ಹಿರಿಯ ಶುಶ್ರೂಕ ಅಧಿಕಾರಿಯಾಗಿ ಬಡ್ತಿ ಹೊಂದಿದ್ದಾರೆ. ಇವರು ಅನೇಕ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕೊಡಗು ಜಿಲ್ಲೆ ಹಾಗೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದಾರೆ.…
ಮಡಿಕೇರಿ ಏ.5 : ಶನಿವಾರಸಂತೆ ಸಮೀಪದ ಗೌಡಳ್ಳಿ ಗ್ರಾ.ಪಂ ವ್ಯಾಪ್ತಿಯ ಹಿರಿಕರ ಗ್ರಾಮದೊಳಗೆ ಲಗ್ಗೆ ಇಡುತ್ತಿದ್ದ ಕಾಡಾನೆಗಳು ಹಾಗೂ ಕಾಟಿಗಳ ನಿಯಂತ್ರಣಕ್ಕಾಗಿ ಅರಣ್ಯ ಇಲಾಖೆ ಸಿಮೆಂಟ್ ಪಿಲ್ಲರ್ ತಡೆಗೋಡೆಯನ್ನು ಪ್ರಾಯೋಗಿಕವಾಗಿ ನಿರ್ಮಾಣ ಮಾಡಿದ್ದು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ. ಅರಣ್ಯ ಇಲಾಖೆ ರೂ.16 ಲಕ್ಷ ವೆಚ್ಚದಲ್ಲಿ 2.25 ಮೀಟರ್ ಎತ್ತರ ಹಾಗೂ 75 ಮೀಟರ್ ಉದ್ದದ ತಡೆಗೋಡೆ ನಿರ್ಮಾಣ ಮಾಡಿ ಒಂದು ತಿಂಗಳಾಗಿದೆ.ಈವರೆಗೂ ಆನೆಗಳು ಗ್ರಾಮದೊಳಗೆ ಕಾಣಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಹಾಗೂ ಗ್ರಾಮಸ್ಥರು ಅಭಿಪ್ರಾಯಪಡುತ್ತಾರೆ. ಸಮೀಪದ ಮಾಲಂಬಿ ಮೀಸಲು ಅರಣ್ಯದಿಂದ ಪಂಚಾಯಿತಿ ವ್ಯಾಪ್ತಿಯ ಹಿರಿಕರ ಗ್ರಾಮದ ಮೂಲಕ ಸಂಚರಿಸುತ್ತಿದ್ದ ಕಾಡಾನೆಗಳು, ಕಾಟಿಗಳು ಕೂಗೂರು, ಚಿಕ್ಕಾರ ಇತರ ಗ್ರಾಮಗಳಲ್ಲಿ ಬೀಡುಬಿಟ್ಟು ತೋಟ-ಗದ್ದೆಗಳಿಗೆ ನುಗ್ಗಿ ದಾಂಧಲೆ ಎಬ್ಬಿಸಿ ಬೆಳೆ ಹಾನಿ ಮಾಡುತ್ತಿದ್ದವು.ಕಾಡಾನೆಗಳು ಹಾಗೂ ಕಾಟಿಗಳು ಹಾವಳಿಯಿಂದ ಗ್ರಾಮಸ್ಥರು ಕಂಗಾಲಾಗಿದ್ದರು. ಈ ಹಿಂದೆ ಹಿರಿಕರ ಗ್ರಾಮದ ರೈತ ಮಹಿಳೆಯೊಬ್ಬರ ಕಾಫಿ ತೋಟದ ಅಂಚಿನಲ್ಲಿ ಆನೆಗಳು ಬರುತ್ತಿದ್ದ ಜಾಗ ಗುರುತಿಸಿ ಕಂದಕ ನಿರ್ಮಾಣ ಮಾಡಲಾಗಿತ್ತು.ಮಣ್ಣು ಕುಸಿದು ಕಂದಕ ಮುಚ್ಚಿಹೋದ…
ವಿರಾಜಪೇಟೆ ಏ.5 : ಬಿಟ್ಟಂಗಾಲ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಪೊನ್ನಿಮನೆ ಅಯ್ಯಪ್ಪ ಮತ್ತು ಬೋಟೆ ಚಾಮುಂಡಿ ದೇವರ ವಾರ್ಷಿಕ ಉತ್ಸವವು ಇದೇ ಏ.8 ಮತ್ತು 9 ರಂದು ಜರುಗಲಿದೆ. ಉತ್ಸವದ ಅಂಗವಾಗಿ ಏ.8ರಂದು ಶನಿವಾರ ರಾತ್ರಿ 8 ಗಂಟೆಗೆ ಭಂಡಾರ ಹೊರಡುವುದು, 8.30 ಗಂಟೆಗೆ ದೇವಸ್ಥಾನದಲ್ಲಿ ಕೊಟ್ಟಿ ಪಾಟ್ ಮತ್ತು 10 ಗಂಟೆಗೆ ವಿವಿಧ ಧಾರ್ಮಿಕ ಕೋಲಗಳು ನಡೆಯಲಿದೆ. ಏ.9 ರಂದು ಬೆಳಿಗ್ಗೆ 9 ಗಂಟೆಗೆ ಬೋಟೆ ಚಾಮುಂಡಿ ಹಾಗೂ ವಿಷ್ಣುಮೂರ್ತಿ ದೇವರ ತೆರೆ ಸೇರಿದಂತೆ ವಿವಿಧ ತೆರೆಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ ಎಂದು ಬಿಟ್ಟಂಗಾಲದ ಪೊನ್ನಿರ ಕುಟುಂಬಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಏ.5 : ರೋಟರಿ ಮಡಿಕೇರಿ ವತಿಯಿಂದ ವಿದ್ಯಾಸಿರಿ ಯೋಜನೆಯಡಿ ಮಾದಾಪುರದ ಡಿ.ಚೆನ್ನಮ್ಮ ಪ್ರೌಢಶಾಲೆಗೆ ರೂ.50 ಸಾವಿರ ಮೌಲ್ಯದ ಇನ್ವರ್ಟರ್ ಮತ್ತು ಪ್ರಿಂಟಿಂಗ್ ಯಂತ್ರವನ್ನು ಕೊಡುಗೆಯಾಗಿ ನೀಡಲಾಯಿತು. ರೋಟರಿ ಮಡಿಕೇರಿ ಅಧ್ಯಕ್ಷ ಕೆ.ಸಿ.ಕಾರ್ಯಪ್ಪ, ರೋಟರಿಯನ್ ಉಪ ರಾಜ್ಯಪಾಲ ರತನ್ ತಮ್ಮಯ್ಯ, ಕಾಲೇಜಿನ ಪ್ರಾಂಶುಪಾಲರಾದ ಮಂದಪ್ಪ, ಶಾಲಾ ಸಮಿತಿ ಅಧ್ಯಕ್ಷ ಕರ್ನಲ್ ಕುಮಾರ್, ಕಾರ್ಯದರ್ಶಿ ಮಧು ಬೋಪಣ್ಣ, ರೋಟರಿಯನ್ ಅನಿಲ್ ಕೃಷ್ಣಾನಿ, ಲಲಿತಾ ರಾಘವನ್, ಮಲ್ಲಿಗೆ ಪೈ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.
ಮಡಿಕೇರಿ ಏ.5 : ಕೊಡಗು ರಕ್ಷಣಾ ವೇದಿಕೆ, ಮಡಿಕೇರಿ ನಗರ ಆಟೋ ಚಾಲಕರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅಧ್ಯಕ್ಷರಾಗಿ ಸುಲೇಮಾನ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವರ್ಗೀಸ್, ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್, ಕಾರ್ಯದರ್ಶಿಯಾಗಿ ಯಕ್ಷಿತ್, ಖಜಾಂಚಿಯಾಗಿ ರಫೀಕ್, ಸಂಘಟನಾ ಕಾರ್ಯದರ್ಶಿ ಫಯಾಜ್ ನೇಮಕಗೊಂಡಿದ್ದಾರೆ. ನಿರ್ದೇಶಕರುಗಳಾದ ಇಮ್ರಾನ್, ಅಕ್ರಂ, ನವೀನ, ಕೆ.ಕೆ.ಶರೀಫ್, ನಿಯಾಜ್ (ಅಣ್ಣ), ಸುಲ್ತಾನ್, ಬಿ.ಎಂ.ಸತೀಶ್, ಮುಕುಂದ, ನೌಶಾದ್, ಅಲ್ಮಾಸ್, ಶರೀಫ್, ಹರ್ಷ, ದಾವುದ್, ಇರ್ಫಾನ್, ಅಶ್ರಫ್, ಜಮೀಲ್ ಆಯ್ಕೆಯಾಗಿದ್ದಾರೆ ಎಂದು ಕೊರವೇ ಅಧ್ಯಕ್ಷ ಅಚ್ಚಂಡಿರ ಪವನ್ ಪೆಮ್ಮಯ್ಯ ತಿಳಿಸಿದ್ದಾರೆ.
ಮಡಿಕೇರಿ ಏ.5 : ಗುಂಡು ಹೊಡೆದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿ ಸಮೀಪದ ಕಾಟಕೇರಿ ಗ್ರಾಮದಲ್ಲಿ ನಡೆದಿದೆ. ಕಾಟಕೇರಿ ನಿವಾಸಿ ಕೆ.ಎ.ಉತ್ತಪ್ಪ (72) ಎಂಬುವವರೆ ಸಾವನ್ನಪ್ಪಿರುವ ವ್ಯಕ್ತಿ. ಬುಧವಾರ ಬೆಳಗ್ಗಿನ ಜಾವ ಉತ್ತಪ್ಪ ಅವರು ಕಾಫಿ ತೋಟದಲ್ಲಿ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಮಡಿಕೇರಿ ಏ.5 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ “ಗೌರಮ್ಮ ದತ್ತಿ ಪ್ರಶಸ್ತಿ”ಗೆ ಜಿಲ್ಲೆಯ ಮಹಿಳಾ ಲೇಖಕಿಯರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. 2022-23 ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಲೇಖಕಿಯರು ತಾವು ರಚಿಸಿದ ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ 94483 46276. ಇಲ್ಲಿಗೆ ದಿನಾಂಕ 20.4.2023 ರ ಒಳಗಾಗಿ ತಲುಪಿಸಬೇಕೆಂದು ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






