ಲೇಖಕ: admin

ಮಡಿಕೇರಿ ಏ.2 : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಚೆಕ್ ಪೋಸ್ಟ್ ಗಳಲ್ಲಿ ಪೊಲೀಸ್ ಇಲಾಖೆಯಿಂದ ತಪಾಸಣಾ ಕಾರ್ಯ ಚುರುಕುಗೊಳಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 14 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಜಿಲ್ಲೆಯಿಂದ ಹೊರ ಹೋಗುವ ಮತ್ತು ಒಳ ಬರುವ ಎಲ್ಲಾ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಕೊಡಗು ಜಿಲ್ಲೆ ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ಹಿನ್ನೆಲೆಯಲ್ಲಿ 3 ಅಂತರ್ ರಾಜ್ಯ ಚೆಕ್‌ಪೋಸ್ಟ್ ತೆರೆಯಲಾಗಿದೆ. ಕೇರಳ ಗಡಿಯ ಕರಿಕೆ, ಮಾಕುಟ್ಟ ಹಾಗೂ ಪೆರುಂಬಾಡಿ ಅಂತರ್ ರಾಜ್ಯ ಚೆಕ್‌ಪೋಸ್ಟ್ ಗಳಾಗಿದ್ದು, 11 ಅಂತರ್ ಜಿಲ್ಲಾ ಚೆಕ್‌ಪೋಸ್ಟ್ ಗಳು ಕಾರ್ಯಾಚರಿಸುತ್ತಿವೆ. ಮೈಸೂರು, ಹಾಸನ, ಸುಳ್ಯ ಸಂಪರ್ಕಿಸುವ ಪ್ರದೇಶಗಳಲ್ಲಿ 100 ಮೀಟರ್ ಅಂತರದಲ್ಲಿ ತಲಾ 2 ಚೆಕ್‌ಪೋಸ್ಟ್ ತೆರೆಯಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಕೊಡಗಿನಿಂದ ಹೊರ ಹೋಗುವ ವಾಹನಗಳನ್ನು ಕೊಡಗು ಗಡಿಯಲ್ಲಿ ತಪಾಸಣೆ…

Read More

ಸೋಮವಾರಪೇಟೆ ಏ.2 : ಸೋಮವಾರಪೇಟೆ ಸಮೀಪದ ಕೂತಿನಾಡು ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಎಂದೇ ಖ್ಯಾತಿಯಾಗಿರುವ ಸುಗ್ಗಿ ಉತ್ಸವಕ್ಕೆ ಪೂರ್ವಭಾವಿಯಾಗಿ ದೇವಿಯ ತವರೂರೆಂದು ಕರೆಯಲ್ಪಡುವ ಕೂತಿ ಗ್ರಾಮದ ಚಾವಡಿ ಕಟ್ಟೆಯಲ್ಲಿ ಭಾನುವಾರ ವಿಶೇಷ ಪೂಜೆ ನಡೆಯಿತು. ಸುಗ್ಗಿ ಉತ್ಸವ ಇದೇ ಏ.10 ರಂದು ನಗರಳ್ಳಿಯಲ್ಲಿ ನಡೆಯಲಿದೆ. ಅನಾದಿಕಾಲದಿಂದಲೂ ನಡೆದು ಕೊಂಡು ಬಂದAತೆ ಕೂತಿ ಗ್ರಾಮದ ಚಾವಡಿ ಕಟ್ಟೆಯಲ್ಲಿ ಗ್ರಾಮದ ಮನೆಗಳಲ್ಲಿರುವ ಬಂದುಕುಗಳನ್ನು ತಂದಿಟ್ಟು ನಂತರ ಸಾಮೂಹಿಕವಾಗಿ ಪೂಜೆ ಮಾಡಲಾಯಿತು. ನಂತರ ದೇವರ ಕಟ್ಟೆಗೆ ಗ್ರಾಮಸ್ಥರು ಬಂದೂಕು ಹಿಡಿದು ಪ್ರದಕ್ಷಿಣೆ ಬಂದು ಬಂದುಕಿನಿAದ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ಸುಗ್ಗಿ ಪದ್ಧತಿಯನ್ನು ಆಚರಿಸುವುದರೊಂದಿಗೆ ಸುಗ್ಗಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಪ್ರಮುಖ ಸುಗ್ಗಿ ಆಚರಣೆಯು ಏಪ್ರಿಲ್ ಮೇ ತಿಂಗಳಲ್ಲಿ ನಗರಳ್ಳಿ ಗ್ರಾಮದ ಸುಗ್ಗಿ ಕಟ್ಟೆ ಹಾಗೂ 12 ದೇವರ ಬನದಲ್ಲಿ ವಿವಿಧ ಆಚರಣೆಗಳೊಂದಿಗೆ ನಡೆಯುತದೆ. ಈ ಆಚರಣೆಯಲ್ಲಿ ಕೂತಿನಾಡು ವ್ಯಾಪ್ತಿಗೆ ಒಳಪಡುವ ಕೂತಿ ಗ್ರಾಮ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೇಕನಳ್ಳಿ,…

Read More

ಸೋಮವಾರಪೇಟೆ ಏ.2 : ಮಗಳನ್ನು, ಮತವನ್ನು ನೀಡುವಾಗ ಯೋಗ್ಯರಿಗೆ ನೀಡಬೇಕು. ಅಳಿಯ ಒಳ್ಳೆಯವನಾದರೆ ಮಗಳು ಚೆನ್ನಾಗಿ ಇರುತ್ತಾಳೆ, ಯೋಗ್ಯ ಜನಪ್ರತಿನಿಧಿಯಿಂದ ರಾಜ್ಯ, ದೇಶ ಚೆನ್ನಾಗಿರುತ್ತದೆ, ಪ್ರಜೆಗಳು ನೆಮ್ಮದಿಯಿಂದ ಇರುತ್ತಾರೆ ಎಂದು ಬಸವಾ ಪಟ್ಟಣ ತೋಂಟದಾರ್ಯ ಸಂಸ್ಥಾನ ಮಠದ ಶ್ರೀಸ್ವತಂತ್ರ ಬಸವಲಿಂಗ ಸ್ವಾಮೀಜಿ ಹೇಳಿದ್ದಾರೆ. ಸೋಮವಾರಪೇಟೆಯ ಯಡೂರು ಬಿ.ಟಿ.ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ, ಸಂಯುಕ್ತಾಶ್ರಯದಲ್ಲಿ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದ್ದ ಶಿವಕುಮಾರ ಸ್ವಾಮೀಜಿ ಅವರ 116 ನೇ ಜನ್ಮ ಜಯಂತಿ, ಸರಸ್ವತಿ ಪೂಜೆ ಹಾಗೂ ಕಾಲೇಜು ಸಂಸ್ಥಾಪಕರಿಗೆ ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಪ್ರತಿಯೊಬ್ಬರು ಮತದಾನ ಮಾಡಬೇಕು. ಜನಸಾಮಾನ್ಯರಿಗೆ ದೀಪಾವಳಿ, ಯುಗಾದಿ ಹೇಗೆ ಹಬ್ಬವಾಗುತ್ತದೆಯೋ ಅದೇ ರೀತಿ ಚುನಾವಣೆಯೂ ಪ್ರಜಾಪ್ರಭುತ್ವದ ಹಬ್ಬವಾಗಬೇಕು ಎಂದು ಬಣ್ಣಿಸಿದರು. ಇಂದಿನ ವಿದ್ಯಾರ್ಥಿಗಳು ರಾಷ್ಟ್ರದ ಭವ್ಯ ಪ್ರಜೆಗಳು ಆದ್ದರಿಂದ ಯಾರೂ ತಪ್ಪಿಸಿಕೊಳ್ಳದೆ ಮತದಾನ ಮಾಡಬೇಕೆಂದರು. ನನ್ನ ಒಂದು ಮತದಾನದಿಂದ ಏನಾಗುತ್ತದೆ ಎಂಬ ಭಾವನೆ…

Read More

ಮಡಿಕೇರಿ ಏ.1 : ಮಹಿಳಾ ಮತದಾರರಿಗೆ ಮತದಾನದ ಕುರಿತು ಪ್ರೇರಣೆ ನೀಡಲು ಚುನಾವಣಾ ಸಂದರ್ಭ ಮಹಿಳೆಯರೇ ನಿರ್ವಹಿಸುವ ‘ಸಖಿ ಬೂತ್’ಗಳನ್ನು ತೆರೆಯಲಾಗುತ್ತದೆ ಕೊಡಗು ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.

Read More

ಮಡಿಕೇರಿ ಏ.1 : ವಿವಾಹ ಸಮಾರಂಭ ಮೊದಲಾದ ಖಾಸಗಿ ಕಾರ್ಯಕಗಳ ಆಯೋಜನೆಗೆ ಯಾವುದೇ ನಿರ್ಬಂಧಗಳಿಲ್ಲ. ಸಾರ್ವಜನಿಕವಾಗಿ ಆಚರಿಸುವ ದೇವರ ಉತ್ಸವಗಳಲ್ಲಿ ನಡೆಸುವ ಮೆರವಣಿಗೆ ಮೊದಲಾದವುಗಳಿಗೆ ಅನುಮತಿಯನ್ನು ಪಡೆದುಕೊಳ್ಳಬೇಕು. ಪ್ರಸಾದ ವಿತರಣೆ ಬಿಟ್ಟರೆ ಯಾವುದೇ ಕಾರಣಕ್ಕು ಅನ್ನದಾನಕ್ಕೆ ಅವಕಾಶ ಇರುವುದಿಲ್ಲ ಎಂದು ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸ್ಪಷ್ಟಪಡಿಸಿದ್ದಾರೆ. ::: ಕಟ್ಟು ನಿಟ್ಟಿನ ತಪಾಸಣೆ ::: ಜಿಲ್ಲೆಯ ಅಂತರರಾಜ್ಯ ಮತ್ತು ಅಂತರ ಜಿಲ್ಲಾ ಗಡಿಗಳಲ್ಲಿ ಕಟ್ಟುನಿಟ್ಟಿನ ತಪಾಸಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೆರುಂಬಾಡಿಯಲ್ಲಿದ್ದ ಚೆಕ್ ಪೋಸ್ಟ್ನ್ನು ಮಾಕುಟ್ಟಕ್ಕೆ ಸ್ಥಳಾಂತರಿಸಲಾಗಿದೆ. ಚೆಕ್ ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ::: ಮಾಧ್ಯಮಗಳಿಗೆ ನಿರ್ಬಂಧವಿಲ್ಲ ::: ಮುದ್ರಣ ಮತ್ತು ದೃಶ್ಯ ವಾಹಿನಿಗಳಲ್ಲಿ ಚುನಾವಣೆ ಸಂಬoಧವಾದ ಸುದ್ದಿಗಳನ್ನು ಪ್ರಕಟಿಸುವುದಕ್ಕೆ ಯಾವುದೇ ನಿರ್ಬಂಧವಿಲ್ಲ. ಅಭ್ಯರ್ಥಿಗಳ ಸಂದರ್ಶನವನ್ನು ಪ್ರಕಟಿಸುವ ಅಥವಾ ದೃಶ್ಯ ವಾಹಿನಿಗಳಲ್ಲಿ ಬಿತ್ತರ ಮಾಡುವ ಸಂದರ್ಭ ಎಲ್ಲಾ ಪಕ್ಷಗಳಿಗೂ ಸಮಾನ ಅವಕಾಶವನ್ನು ನೀಡುವುದು ಅವಶ್ಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು. ::: ಬಂದೂಕುಗಳ ಠೇವಣಿ :::…

Read More

ಮಡಿಕೇರಿ ಏ.1 : ಸಾಮಾಜಿಕ ಜಾಲತಾಣಗಳಾದ ವ್ಯಾಟ್ಸ್ ಅಪ್, ಯೂಟ್ಯೂಬ್, ಫೇಸ್, ಬುಕ್, ಟ್ವಿಟ್ಟರ್ ಸೇರಿದಂತೆ ಯಾವುದೇ ಮಾಧ್ಯಮದಲ್ಲಿ ಚುನಾವಣಾ ಘೋಷಿತ ಅಭ್ಯರ್ಥಿಗಳು, ಆಕಾಂಕ್ಷಿಗಳು, ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸುವವರು ಯಾರೇ ಆಗಿರಲಿ ಚುನಾವಣಾ ಪ್ರಚಾರದ ಅಂಶಗಳನ್ನು ಒಳಗೊಂಡ ವಿಚಾರಗಳನ್ನು ಪೋಸ್ಟ್ ಮಾಡುವುದಿದ್ದಲ್ಲಿ ಅನುಮತಿ ಪಡೆಯವುದು ಕಡ್ಡಾಯವೆಂದು ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸ್ಪಷ್ಟಪಡಿಸಿದ್ದಾರೆ. ಚುನಾವಣಾ ನಾಮಪತ್ರ ಸಲ್ಲಿಕೆಯ ಬಳಿಕ ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಿದ ವೆಚ್ಚವೂ ಅಭ್ಯರ್ಥಿಯ ಲೆಕ್ಕಕ್ಕೆ ಒಳಪಡಲಿದೆ ಎಂದರು. ಚುನಾವಣಾ ನೀತಿ ಸಂಹಿತೆಗೆ ಅನುಗುಣವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆಗೆ ಸಂಬAಧಿಸಿದ ಯಾವುದೇ ವಿಚಾರಗಳನ್ನು ಹಾಕುವುದಿದ್ದಲ್ಲಿ ಅದಕ್ಕೆ ಅನುಮತಿಯನ್ನು ಕಡ್ಡಾಯವಾಗಿರುತ್ತದೆ. ಈ ರೀತಿ ಅನುಮತಿ ಪಡೆಯದೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಕೆಲವರಿಗೆ ಈಗಾಗಲೆ ಕಾರಣ ಕೇಳಿ ನೋಟಿಸ್ ನೀಡಿ ಅವರ ಅಭಿಪ್ರಾಯವನ್ನು ಪಡೆಯಲಾಗಿದೆ ಎಂದು ತಿಳಿಸಿದರು. ತಮ್ಮ ಪಕ್ಷದ ಗುರುತು, ಬಾವುಟ, ಬ್ಯಾನರ್‌ಗಳನ್ನು ಅಳವಡಿಸುವುದಿದ್ದಲ್ಲಿ ಆಯಾ ಖಾಸಗಿ ಜಾಗದ ಮಾಲೀಕರ ಒಪ್ಪಿಗೆಯೊಂದಿಗೆ ಡಿಸ್ಟ್ರಿಕ್ಟ್ ಮೀಡಿಯಾ ಸರ್ಟಿಫಿಕೇಶನ್ ಅಂಡ್…

Read More

ಮಡಿಕೇರಿ ಏ.1 : ವಿಧಾನಸಭಾ ಚುನಾವಣೆಯ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಂಬರುವ ಭಾನುವಾರಗಳಂದು ‘ಕೊಡಗು ಮತ್ತು ಚುನಾವಣೆ’ ಎಂಬ ವಿಷಯದಡಿ ದೊಡ್ಡ ಮಟ್ಟದ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಜಿಲ್ಲಾಡಳಿತ ಉದ್ದೇಶಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ‘ಮಾಧ್ಯಮಗಳೊಂದಿಗೆ ಸಂವಾದ’ ದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾಧಿಕಾರಿ, ಮುಂದಿನ ಏ.9 ರ ಭಾನುವಾರ ಜಿಲ್ಲೆಯ ಕಲಾವಿದರಿಂದ ಕೊಡಗಿನ ಚುನಾವಣೆಗೆ ಸಂಬಂಧಿಸಿದಂತೆ ಕಲಾಕೃತಿಗಳನ್ನು ರಚಿಸುವ ಮತ್ತು ಅದನ್ನು ಪ್ರದರ್ಶಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಚಿಂತಿಸಲಾಗಿದೆ. ಕಲಾವಿದರ ಕಲಾಕೃತಿಗಳನ್ನು ಗಮನಿಸಿ ಅವುಗಳನ್ನು ‘ಡಿಜಿಟಲೈಸ್ಟ್’ ಮಾಡುವ ಮೂಲಕ ಚುನಾವಣಾ ಜಾಗೃತಿ ಪ್ರಚಾರಕ್ಕೂ ಬಳಸಿಕೊಳ್ಳುವ ಉದ್ದೇಶವಿದೆ ಎಂದರು. ::: ಅನುಮತಿ ಅಗತ್ಯ ::: ಸಾಮಾಜಿಕ ಜಾಲತಾಣಗಳಾದ ವ್ಯಾಟ್ಸ್ ಅಪ್, ಯೂಟ್ಯೂಬ್, ಫೇಸ್, ಬುಕ್, ಟ್ವಿಟ್ಟರ್ ಸೇರಿದಂತೆ ಯಾವುದೇ ಮಾಧ್ಯಮದಲ್ಲಿ ಚುನಾವಣಾ ಘೋಷಿತ ಅಭ್ಯರ್ಥಿUಳು, ಆಕಾಂಕ್ಷಿಗಳು, ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸುವವರು ಯಾರೇ ಆಗಿರಲಿ ಚುನಾವಣಾ ಪ್ರಚಾರದ ಅಂಶಗಳನ್ನು…

Read More

ಮಡಿಕೇರಿ ಏ.1 : ಫೀಲ್ಡ್ ಮಾಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಸೂಕ್ಷ್ಮಾಣು ಜೀವ ವಿಜ್ಞಾನ ವಿಭಾಗದ ವತಿಯಿಂದ ಪರಿಸರ, ಸಮಾಜ ಮತ್ತು ಆರ್ಥಿಕತೆ: ಸುಸ್ಥಿರ ನಿರ್ವಹಣೆ ಮತ್ತು ಮುಂದಿನ ಪೀಳಿಗೆಗೆ ಕೌಶಾಲ್ಯಾಭಿವೃದ್ಧಿ ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ಅಭಿಶಿಕ್ಷಣ ಮತ್ತು ಕಾರ್ಯಾಗಾರ ನಡೆಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಬೆಂಗಳೂರಿನ ಸುಸ್ಥಿರ ನಿರ್ವಹಣಾ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಡಾ.ಕೆ.ವಿ. ಜಗನ್ ಮೋಹನ್ ರಾವ್ ಸುಸ್ಥಿರಾಭಿವೃದ್ಧಿ ಹಾಗೂ ಉದ್ಯೋಗಾವಕಾಶ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಬೆಂಗಳೂರಿನ ಗಾರ್ಡನ್ ಸಿಟಿ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಕಾಮರ್ಸ್ ಐಂಡ್ ಮ್ಯಾನೇಜ್ಮೆಂಟ್ ನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಪಿ.ಎ. ಶ್ವೇತ ಕೌಶಲ್ಯವರ್ಧನೆ ಇಂದಿನಅಗತ್ಯತೆ ವಿಷಯದ ಕುರಿತು ಮಾಹಿತಿ ನೀಡಿದರು. ವೇಲೆಂಟಾ ಅಕಾಡೆಮಿ ಎಲ್‍ಎಲ್ಪಿ ನಿರ್ದೇಶಕರಾದ ಅನುರಾಧ ಸಂವಹನ ಕೌಶಲ್ಯಾಭಿವೃದ್ಧಿ ವಿಷಯದ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ರಾಘವ.ಬಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ…

Read More

ಮಡಿಕೇರಿ ಏ.1 : ವಿಧಾನಸಭೆ ಚುನಾವಣೆ ಸಂಬಂಧ ಸಂಭಾವ್ಯ ಅಭ್ಯರ್ಥಿಗಳು, ಅಭ್ಯರ್ಥಿಗಳು ಅಥವಾ ಸ್ವತಂತ್ರ ಸ್ಪರ್ಧಿಗಳು ಮುದ್ರಣ, ವಿದ್ಯುನ್ಮಾನ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ‘ವಿಷಯ ಆಧಾರಿತ’ (ಕಂಟೆಂಟ್) ಜಾಹೀರಾತು ಪ್ರಕಟಿಸುವವರು ಮಾಧ್ಯಮ ದೃಢೀಕರಣ ಮತ್ತು ನಿರ್ವಹಣಾ ಸಮಿತಿ (ಎಂಸಿಎಂಸಿ) ಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸ್ಪಷ್ಟ ಪಡಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರ ಜೊತೆ ನಡೆದ ‘ಸಂವಾದ/ ಚರ್ಚಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮುದ್ರಣ, ವಿದ್ಯುನ್ಮಾನ ಹಾಗೂ ಸಾಮಾಜಿಕ ಮಾಧ್ಯಮಗಳಾದ ಫೇಸ್ ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್, ಟೆಲಿಗ್ರಾಂ, ವಾಟ್ಸ್‍ಆಫ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ವಿಷಯಾಧಾರಿತ(ಕಂಟೆಂಟ್) ಜಾಹೀರಾತು ಪ್ರಸಾರ ಮಾಡುವ ಮೊದಲು ನಗರದ ಜಿಲ್ಲಾಡಳಿತ ಭವನದ ಮೂರನೇ ಮಹಡಿಯಲ್ಲಿರುವ ‘ಎಂಸಿಎಂಸಿ’ ಕಚೇರಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಚುನಾವಣಾ ಆಯೋಗದ ನಿರ್ದೇಶನದಂತೆ ಪಕ್ಷದ ಚಿಹ್ನೆ ಬಳಸಿ ಜಾಹೀರಾತು ಪ್ರಚಾರ ಮಾಡಬೇಕಾದರೆ ಪೂರ್ವ ಅನುಮತಿ ಪಡೆಯಬೇಕಿದೆ. ಇದು ಸಾಮಾಜಿಕ ಮಾಧ್ಯಮಗಳಿಗೂ ಅನ್ವಯವಾಗಲಿದೆ…

Read More

ಮಡಿಕೇರಿ ಏ.1 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2023-24 ನೇ ಸಾಲಿಗೆ ಸೋಮವಾರಪೇಟೆ ತಾಲ್ಲೂಕು ಖ್ಯಾತೆ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ 6 ನೇ ತರಗತಿಗೆ ಉಚಿತ(ಸಿಬಿಎಸ್‍ಇ)(ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯ ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ(ಒಬಿಸಿ) ಶೇ.25 ರಷ್ಟು ಸೀಟು ಲಭ್ಯವಿದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, 5 ನೇ ತರಗತಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಸತಿ ಶಾಲೆಯಲ್ಲಿ ಪ್ರತಿ ವಿದ್ಯಾರ್ಥಿಗೆ ಉಚಿತ ವಸತಿ, ಊಟದ ಸೌಲಭ್ಯ, ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ವರ್ಷಕ್ಕೆ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ, ಪಠ್ಯ ಪುಸ್ತಕ ಮತ್ತು ಲೇಖನ ಸಾಮಗ್ರಿ, ಉಚಿತವಾಗಿ ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಗ್ರಿ, ಗ್ರಂಥಾಲಯಗಳ…

Read More