ಮಡಿಕೇರಿ ಏ.1 : ವಿಧಾನಸಭಾ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಜಾರಿ ಆಗಿರುವ ಹಿನ್ನೆಲೆ ರಾಜಕೀಯ ಪಕ್ಷಗಳು/ ಸ್ವತಂತ್ರ ಅಭ್ಯರ್ಥಿಗಳು ಸಾಮೂಹಿಕ ಕಾರ್ಯಕ್ರಮ ನಡೆಸುವ ಮೊದಲು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಉಪ ವಿಭಾಗಾಧಿಕಾರಿ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯತೀಶ್ ಉಲ್ಲಾಳ್ ಅವರು ತಿಳಿಸಿದ್ದಾರೆ. ಮುನ್ನೆಚ್ಚರಿಕೆಯಾಗಿ ದಾಖಲಾತಿಗಳನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರಿಗೆ ಸಲ್ಲಿಸಿ ಅವರಿಂದ ಪೂರ್ವಾನುಮತಿ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ. ಯಾವುದಕ್ಕೆ ಅನುಮತಿ: ವಿಧಾನಸಭಾ ಚುನಾವಣಾ ಸಂಬಂಧ ಮೆರವಣಿಗೆ, ರ‍್ಯಾಲಿ, ಬೀದಿಯಲ್ಲಿ ಧ್ವನಿ ವರ್ಧಕದೊಂದಿಗೆ ಚುನಾವಣೆ ಸಂಬಂಧ ಸಭೆ ನಡೆಸಲು, ತಾತ್ಕಾಲಿಕ ಕಚೇರಿ ತೆರೆಯಲು, ಚುನಾವಣಾ ಪ್ರಚಾರಕ್ಕೆ ವಾಹನಗಳನ್ನು ಬಳಸಲು, ವೀಡಿಯೋ ವ್ಯಾನ್ ವಾಹನಕ್ಕೆ ಅನುಮತಿ, ಹೆಲಿಕಾಪ್ಟರ್ ಮತ್ತು ಹೆಲಿಪ್ಯಾಡ್‍ಗೆ, ಗಾಳಿ ಬಲೂನುಗೆ ಪೂರ್ವಾನುಮತಿ ಪಡೆದುಕೊಳ್ಳಬೇಕು ಎಂದು ಯತೀಶ್ ಉಲ್ಲಾಳ್ ಅವರು ಹೇಳಿದ್ದಾರೆ. ಅನುಮತಿ ಪತ್ರದೊಂದಿಗೆ, ಆಧಾರ್ ಕಾರ್ಡ್, ತಾತ್ಕಾಲಿಕ ಖರ್ಚು, ಸ್ಥಳದ ಮಾಲೀಕರ ಅನುಮತಿ, ಬಳಸಲಾಗುವ ವಾಹನಗಳ ವಿವರ, ಸ್ಥಳೀಯ ಪ್ರಾಧಿಕಾರ, ಪೊಲೀಸ್ ಇಲಾಖೆ, ಅಗ್ನಿ…
ಲೇಖಕ: admin
ಕುಶಾಲನಗರ, ಏ.1: ಕುಶಾಲನಗರ ಟೈಕೂನ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಏ.3 ರಿಂದ 15 ದಿನಗಳ ಕಾಲ ಹಾಕಿ, ಅಥ್ಲೆಟಿಕ್ಸ್ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಹೆಚ್.ಈ ರಮೇಶ್ ತಿಳಿಸಿದ್ದಾರೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬೆಳಗ್ಗೆ 6 ರಿಂದ 8 ಗಂಟೆ ತನಕ ಹಾಕಿ ಮತ್ತು ಅಥ್ಲೆಟಿಕ್ಸ್ ಬಗ್ಗೆ ತರಬೇತಿ ನೀಡಲಾಗುವುದು ರಾಷ್ಟ್ರೀಯ ಮಟ್ಟದ ಹಾಕಿ ತರಬೇತುದಾರರಾದ ಬಿ.ವಿ. ಕಿಶನ್, ಜಿ.ಎಸ್ ಚಂದ್ರಶೇಖರ್, ಕೆ ಟಿ ಸೌಮ್ಯ ಅಥ್ಲೆಟಿಕ್ಸ್ ತರಬೇತುದರಾದ ಬಿ.ಜಿ.ಮಂಜುನಾಥ ಸೇರಿದಂತೆ ಕ್ರೀಡಾಶಾಲೆಯ ತರಬೇತಿದಾರರು ಶಿಬಿರಾರ್ಥಿಗಳಿಗೆ ತರಬೇತಿ ನೀಡಲಿದ್ದಾರೆ. ಶಿಬಿರಾರ್ಥಿಗಳಿಗೆ ಈಜು ತರಬೇತಿ ಗುಡ್ಡೆ ಹೊಸೂರು ಬಳಿಯ ಈಡನ್ ಗಾರ್ಡನ್ ಈಜುಕೊಳದಲ್ಲಿ ಬೆಳಗ್ಗೆ 9 ರಿಂದ ಒಂದು ಗಂಟೆ ಕಾಲ ನಡೆಯಲಿದೆ. ತರಬೇತಿದಾರರಾದ ಬಿ.ಟಿ ಪೂರ್ಣೇಶ್, ಶ್ರೇಯಸ್ ಶೆಟ್ಟಿ ಸಾತ್ವಿಕ್ ಶೆಟ್ಟಿ ಹಾಗೂ ಮೈಸೂರಿನ ಚಂದ್ರಶೇಖರ ರೆಡ್ಡಿ ಅವರುಗಳು ತರಬೇತು ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ಮಾತನಾಡಿದ ಕ್ಲಬ್ ಕಾರ್ಯದರ್ಶಿ…
ಮಡಿಕೇರಿ ಏ.1 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2023-24 ನೇ ಸಾಲಿಗೆ ವಿರಾಜಪೇಟೆ ತಾಲ್ಲೂಕು ಆರ್ಜಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ 6 ನೇ ತರಗತಿಗೆ ಉಚಿತ (ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ(ಒಬಿಸಿ) ಶೇ.25 ರಷ್ಟು ಸೀಟು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, 5 ನೇ ತರಗತಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಸತಿ ಶಾಲೆಯಲ್ಲಿ ಪ್ರತಿ ವಿದ್ಯಾರ್ಥಿಗೆ ಉಚಿತ ವಸತಿ, ಊಟದ ಸೌಲಭ್ಯ, ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ವರ್ಷಕ್ಕೆ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ, ಪಠ್ಯ ಪುಸ್ತಕ ಮತ್ತು ಲೇಖನ ಸಾಮಗ್ರಿ, ಉಚಿತವಾಗಿ ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಗ್ರಿ,…
ಮಡಿಕೇರಿ ಏ.1 : ನಿವೇಶನದ ಹಕ್ಕು, ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೊದ್ದೂರು ಗ್ರಾ.ಪಂ ವ್ಯಾಪ್ತಿಯ ಪಾಲೇಮಾಡು ನಿವಾಸಿಗಳು ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಮಡಿಕೇರಿ ತಾಲ್ಲೂಕಿನ ಪಾಲೇಮಾಡು ಗ್ರಾಮದ ಅಂಗನವಾಡಿ ಕೇಂದ್ರದ ಬಳಿ ಹೋರಾಟ ನಡೆಸುತ್ತಿರುವ ನಿವಾಸಿಗಳು ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ಉದ್ಯಮಿಗಳಿಗೆ ನೂರಾರು ಏಕರೆ ಸರಕಾರಿ ಜಾಗವನ್ನು ನೀಡುತ್ತಿದೆ. ಶ್ರೀಮಂತ ಭೂಮಾಲೀಕರಿಗೆ ಅವರ ಪಿತ್ರಾರ್ಜಿತ ಆಸ್ತಿ ಎಷ್ಟೇ ಇದ್ದರೂ, ಒತ್ತುವರಿ ಜಾಗವನ್ನು ಮೂವತ್ತು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಮುಂದಾಗಿದೆ. ಬಡವರು ಕನಿಷ್ಟ ಸೂರಿಗಾಗಿ 94, 94ಸಿ ಯಡಿ ಅರ್ಜಿ ಸಲ್ಲಿಸಿ ವರ್ಷಗಟ್ಟಲೆ ಅಲೆದಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಅಲ್ಲದೇ 53, 57 ನಮೂನೆಯಲ್ಲಿ ಅರ್ಜಿ ಸಲ್ಲಿಸಿದರೂ ಅಕ್ರಮ ಸಕ್ರಮದಡಿ ಅರ್ಜಿ ತಿರಸ್ಕೃತವಾಗುತ್ತಿರುವುದು ಕಂಡುಬಂದಿದೆ. ಸರ್ಕಾರವು ಬಡವರಿಗೊಂದು, ಒತ್ತುವರಿದಾರರಿಗೊಂದು ನ್ಯಾಯ ಎನ್ನುವಂತೆ ವರ್ತಿಸುತ್ತಿದೆ. ಇದು ಸರಕಾರದ ಮಲತಾಯಿ ಧೋರಣೆಯಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು…
ಮಡಿಕೇರಿ ಏ.1 : ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾಮದ ಶ್ರೀ ನಂಜುಂಡೇಶ್ವರ ಸ್ವಾಮಿಯ ವಾರ್ಷಿಕೋತ್ಸವವನ್ನು ಮುಂದೂಡಲಾಗಿದೆ. ಏ.3 ಮತ್ತು 4 ರಂದು ಅದ್ಧೂರಿಯಿಂದ ಆಚರಿಸಬೇಕಾಗಿದ್ದ ಶ್ರೀ ನಂಜುಂಡೇಶ್ವರ ದೇವಾಲಯದ ವಾರ್ಷಿಕೋತ್ಸವವನ್ನು ಚುನಾವಣಾ ನೀತಿ ಸಂಹಿತೆ ಕಾನೂನಿನಡಿಯಲ್ಲಿ ಪ್ರಸಾದ ವಿತರಣೆ, ಅನ್ನಸಂತರ್ಪಣೆಗೆ ಹಾಗೂ ರಾಜಕೀಯ ನಾಯಕರು ಭಾಗವಹಿಸಲು ಅವಕಾಶ ಇಲ್ಲದಿರುವುದರಿಂದ ನೀತಿ ಸಂಹಿತೆ ಮುಗಿದ ನಂತರ ಮುಂದಿನ ದಿನಾಂಕ ನಿಗದಿಗೊಳಿಸಿ ಆಚರಿಸಲಾಗುವುದೆಂದು ದೇವಾಲಯ ಸಮಿತಿ ಕಾರ್ಯದರ್ಶಿ ಕೆ.ಎಸ್.ರತೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಏ.1 : ಕ್ರೀಡೆಯಲ್ಲಿ ನಿರಂತರ ಅಭ್ಯಾಸ ಹಾಗೂ ಪರಿಶ್ರಮವಿದ್ದರೆ ಉತ್ತಮ ಕ್ರಿಡಾಪಟುಗಳಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದು ಅಂತರರಾಷ್ಟ್ರೀಯ ಅಥ್ಲೆಟ್, ಇತ್ತೀಚೆಗೆ ಸಿಡ್ನಿಯಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ಸ್ನಲ್ಲಿ ಬೆಳ್ಳಿ ಪದಕ ವಿಜೇತರಾದ ಮಾರಮಾಡ ಮಾಚಮ್ಮ ಹೇಳಿದರು. ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಶಂಕರ್ ಸ್ವಾಮಿ ಸ್ಮರಣಾರ್ಥ ನಗರದ ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ 29ನೇ ಮಕ್ಕಳ ಉಚಿತ ಬೇಸಿಗೆ ಕ್ರಿಡಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಈಗಿನ ಮಕ್ಕಳು ಪುಣ್ಯವಂತರು, ಈ ಹಿಂದೆ ಈ ರೀತಿಯ ತರಬೇತಿ ಶಿಬಿರಗಳು ಇರುತ್ತಿರಲಿಲ್ಲ, ಇನ್ನೊಬ್ಬರನ್ನು ನೋಡಿ ನಾವು ಕಲಿಯುತ್ತಿದ್ದೆವು. ಇದೀಗ ಅವಕಾಶಗಳಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಶಿಬಿರದಲ್ಲಿ ಹೇಳಿಕೊಡುವುದನ್ನು ಪಾಲನೆ ಮಾಡಿಕೊಂಡು ನಿರಂತರ ಅಭ್ಯಾಸ ಮಾಡಿದಲ್ಲಿ ಉತ್ತಮ ಹಾಕಿ ಪಟುವಾಗಲು ಸಾಧ್ಯವಿದೆ. ಉತ್ತಮ ಆಹಾರ ಸೇವನೆಯೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಕೊಡಗಿನ ಮಣ್ಣಿಗೆ ಹಾಗೂ ಕ್ರೀಡೆಗೆ ಶಕ್ತಿಯಿದ್ದು, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಕೊಡಗಿನ ಕೀರ್ತಿ ಪತಾಕೆ ಹಾರಿಸಬೇಕೆಂದು ಕಿವಿ ಮಾತು ಹೇಳಿದರು. ಕ್ರೀಡೆಯಲ್ಲಿ ಶಿಸ್ತು ಮುಖ್ಯವಾಗಿದ್ದು, ಶಾರೀರಿಕ ದೃಢತೆಯನ್ನು…
ಸೋಮವಾರಪೇಟೆ ಏ.1 : ಶಿವಕುಮಾರ ಸ್ವಾಮೀಜಿಯವರ 116ನೆ ಜಯಂತಿ ಅಂಗವಾಗಿ ಸೋಮವಾರಪೇಟೆ ಬಿ.ಟಿ.ಸಿ.ಜಿ.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಯಿತು. ಶಿವಕುಮಾರ ಜಯಂತೋತ್ಸವ ಸಮಿತಿ, ಕಾಲೇಜು, ಇತಿಹಾಸ ಸಂಘ, ರೆಡ್ಡ್ ಕ್ರಾಸ್ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಕಾಲೇಜು ಆವರಣದಲ್ಲಿ ತಾಲೂಕು ಆಸ್ಪತ್ರೆ ವತಿಯಿಂದ ರಕ್ತದ ಗುಂಪು, ರಕ್ತದಲ್ಲಿ ಸಕ್ಕರೆಯ ಪ್ರಮಾಣ ಸೇರಿದಂತೆ ವಿವಿಧ ಪರೀಕ್ಷೆಗಳು ನಡೆಯಿತು. ವೈದ್ಯಾಧಿಕಾರಿ ಡಾ.ಶಿವಪ್ರಸಾದ್ ವಿದ್ಯಾರ್ಥಿಗಳೊಂದಿಗೆ ಆಪ್ತಸಮಾಲೋಚನೆ ನಡೆಸಿ ವೈದ್ಯಕೀಯ ಸಲಹೆ ನೀಡಿದರು. ಈ ಸಂದರ್ಭ ಶಿವಕುಮಾರ ಸ್ವಾಮೀಜಿ ಜಯಂತೋತ್ಸವ ಸಮಿತಿ ಅಧ್ಯಕ್ಷ ಎಸ್.ಮಹೇಶ್, ಪದಾಧಿಕಾರಿಗಳಾದ ಜಯಣ್ಣ, ಶಿವಣ್ಣ, ಪ್ರಾಂಶುಪಾಲರಾದ ಜಯಲಕ್ಷ್ಮಿ, ರೆಡ್ಕ್ರಾಸ್ ವಿಭಾಗದ ಮುಖ್ಯಸ್ಥರಾದ ಪಾವನಿ, ವೈದ್ಯೆ ಡಾ.ಕೃತಿಕಾ, ಆಸ್ಪತ್ರೆಯ ಸಿಬ್ಬಂದಿಗಳಾದ ವಸಂತಿ, ಸುನಿಲ್ , ಭವ್ಯ ಹಾಗೂ ಮುಂತಾದವರು ಹಾಜರಿದ್ದರು.
ಮಡಿಕೇರಿ ಏ.1 : ಜನರಲ್ ತಿಮ್ಮಯ್ಯ ನವರ 117 ನೇ ಜನ್ಮದಿನಾಚರಣೆ ಅಂಗವಾಗಿ ನಗರದ ಮುಖ್ಯರಸ್ತೆ ಯಲ್ಲಿರುವ 50 ವರ್ಷ ತುಂಬಿರುವ ಜನರಲ್ ತಿಮ್ಮಯ್ಯ ಅವರ ಪ್ರತಿಮೆಗೆ ಮಡಿಕೇರಿ ಕೊಡವ ಸಮಾಜ ಹಾಗೂ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ವತಿಯಿಂದ ಗೌರವ ನಮನ ಸಲ್ಲಿಸಲಾಯಿತು. ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಕಾರ್ಯಾಧ್ಯಕ್ಷ ನಂದಿನೆರವಂಡ ಚೀಯಣ್ಣ, ಸಂಚಾಲಕಿ ಕನ್ನಂಡ ಕವಿತ ಬೊಳ್ಳಪ್ಪ, ಶಾಲಾ ಪ್ರಾಂಶು ಪಾಲೆ ಕಲ್ಲ್ ಮಾಡಂಡ ಸರಸ್ವತಿ,ಮಡಿಕೇರಿ ಕೊಡವ ಸಮಾಜದ ಹಾಗು ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ನಂದಿನೆರವಂಡ ದಿನೇಶ್ ,ಕನ್ನಂಡ ಸಂಪತ್, ಬೊಪ್ಪಂಡ ಸರಳಾ ಕರುಂಬಯ್ಯ, ಕಾಂಡೇರ ಲಲ್ಲುಕುಟ್ಟಪ್ಪ, ಮುಕ್ಕಾಟಿರ ಪೊನ್ನಮ್ಮ, ಮೂವೆರ ಜಯರಾಂ, ಚೊಟ್ಟೆಯಂಡ ಸಂಜು ಕಾವೇರಪ್ಪ, ಕಾಳಚಂಡ ಅಪ್ಪಣ್ಣ,ಮಂಡಿರ ಸದಾಮುದ್ದಪ್ಪ, ಪುತ್ತರಿರ ಕಾಳಯ್ಯ, ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಹಾಗೂ ಶಾಲಾ ಶಿಕ್ಷಕ ವೃಂದ ಪ್ರತಿಮೆಗೆ ಪುಷ್ಪರ್ಚನೆ ಮಾಡಿ ಗೌರವ ಸಲ್ಲಿಸಿದರು. ನಂತರ ಸಾಮೂಹಿಕ ರಾಷ್ಟ್ರಗೀತೆ ಹಾಡಿದರು.
ಮಡಿಕೇರಿ ಏ.1 : ಮಡಿಕೇರಿ ಕ್ಷೇತದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ನೋಟೀಸ್ ನೀಡಿದ್ದಾರೆ. ಯಾವುದೇ ಪೂರ್ವಾನುಮತಿ ಪಡೆಯದೆ ಸಾಮಾಜಿಕ ಜಾಲತಾಣದ ಫೇಸ್ ಬುಕ್ ಮೂಲಕ ರಾಜಕೀಯ ಪಕ್ಷದ ಚಿಹ್ನೆಯನ್ನು ಬಳಸಿ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯoದು ಶತಕೋಟಿ ನಮನ ಮತ್ತು ಡಾ.ಕೇಶವ ಬಲರಾಂ ಹೆಗ್ಡೆವಾರ್ ಗುರೂಜಿ ಅವರ ಜಯಂತಿಯoದು ಗೌರವಪೂರ್ಣ ಪ್ರಣಾಮಗಳು ಎಂದು ಶುಭಾಶಯ ಕೋರಿರುವ ಪೋಸ್ಟ್ ನ್ನು ಹಂಚಿಕೊoಡಿರುವುದರಿoದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ನೋಟೀಸ್ ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಉತ್ತರ ನೀಡುವಂತೆ ತಿಳಿಸಲಾಗಿದೆ.
ಮಡಿಕೇರಿ ಏ.1 : ಮಾದಾಪುರದ ಹಾಡಗೇರಿ ಗ್ರಾಮದ ಶ್ರೀ ಭದ್ರಕಾಳಿ ದೇವಾಲಯದ ವಾರ್ಷಿಕ ಹಬ್ಬವು ಏ.2ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆಯಿಂದ ಬೋಳ್‍ಕಾಟ್, ಚೋಪ್ ಆಟ್ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಊರಿನ ತಕ್ಕ ಮುಖ್ಯಸ್ಥರು ಮನವಿ ಮಾಡಿದ್ದಾರೆ.






