ಲೇಖಕ: admin

ಮಡಿಕೇರಿ ಮಾ.3 : ಜಾತಿ ರಾಜಕಾರಣಕ್ಕೆ ಭವಿಷ್ಯವಿಲ್ಲ, ನಾವು ಹುಟ್ಟಿದ ಜಾತಿಯ ಬಗ್ಗೆ ಅಭಿಮಾನವಿರಲಿ ದುರಭಿಮಾನ ಬೇಡ. ಜಾತಿಯನ್ನು ಮುಂದೆ ಮಾಡಿ ನಡೆಸುವ ರಾಜಕೀಯವನ್ನು ಸವಾಲಾಗಿ ಸ್ವೀಕರಿಸಬೇಕೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಕರೆ ನೀಡಿದ್ದಾರೆ. ನಗರದ ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಬಿಜೆಪಿ ಮಡಿಕೇರಿ ಗ್ರಾಮಾಂತರ ಮತ್ತು ನಗರ ಮಂಡಳ ‘ಕಾರ್ಯಕರ್ತರ ಮಿಲನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಿಜೆಪಿ ಪಕ್ಷ ಅಭಿವೃದ್ಧಿಯೊಂದಿಗೆ ದೇಶದ ಅಖಂಡತೆಯ ಬಗ್ಗೆ ಚಿಂತನೆಗಳನ್ನು ಹರಿಸುವ ಪಕ್ಷವಾಗಿದ್ದು, ಇಂತಹ ಚಿಂತನೆಗಳಿಲ್ಲದಿದ್ದಲ್ಲಿ ದೇಶ ದೇಶವಾಗಿ ಉಳಿಯಲಾರದು. ಕಾಂಗ್ರೆಸ್‌ನ ಅಪಪ್ರಚಾರಗಳನ್ನು ಮೆಟ್ಟಿ ನಿಲ್ಲುವ ಮೂಲಕ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗಳಿಸಬೇಕು. ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವಂತೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದರು. ಕರ್ನಾಟಕವನ್ನು ಬಿಜೆಪಿ ಮಾರಾಟ ಮಾಡುತ್ತಿದೆ ಎನ್ನುವ ಕಾಂಗ್ರೆಸ್ ಟೀಕೆಗೆ ಇದೇ ಸಂದರ್ಭ ತಿರುಗೇಟು ನೀಡಿದ ಕೆ.ಜಿ.ಬೋಪಯ್ಯ, ಪಾಕಿಸ್ತಾನಕ್ಕೆ ಪಿಒಕೆಯನ್ನು ಬಿಟ್ಟು…

Read More

ಮಡಿಕೇರಿ ಮಾ.3 : ಸುಂಟಿಕೊಪ್ಪದ ಬಿ.ಎಂ ರಸ್ತೆಯ ಹೊಟೇಲ್ ವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಕುಶಾಲನಗರ ಹಾಗೂ ಸುಂಟಿಕೊಪ್ಪ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಂಟಿಕೊಪ್ಪದ ನಿವಾಸಿಗಳಾದ ಅಹಮ್ಮದ್ ಶರೀಫ್ (34) ಹಾಗೂ ಫಯಾಜ್ ಎಂ.ಎಸ್ (34) ಬಂಧಿತ ಆರೋಪಿಗಳು. ಬಂಧಿತರಿoದ 400 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಕುಶಾಲನಗರ ವೃತ್ತದ ಡಿವೈಎಸ್‌ಪಿ ಗಂಗಾಧರಪ್ಪ ಆರ್.ವಿ ಹಾಗೂ ಸಿಪಿಐ ಬಿ.ಜಿ.ಮಹೇಶ್, ಸುಂಟಿಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀಧರ್ ಅವರುಗಳನ್ನೊಳಗೊಂಡ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸಿಬ್ಬಂದಿಗಳ ಕಾರ್ಯ ದಕ್ಷತೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ಮಾ.3 : ಕಾಫಿ ತೋಟದ ರೈಟರ್ ವೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಹೋಬಳಿಯಲ್ಲಿ ನಡೆದಿದೆ. ಸ್ಥಳೀಯ ಕಾಫಿ ತೋಟವೊಂದರಲ್ಲಿ ರೈಟರ್ ಆಗಿದ್ದ ಶಾಮ್ ರೈ(41) ಎಂಬುವವರೇ ಮೃತ ವ್ಯಕ್ತಿಯಾಗಿದ್ದಾರೆ. ತೋಟದ ಲೈನ್ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Read More

ಮಡಿಕೇರಿ ಮಾ.3 :  ಮೂಲತ: ಕೊಯನಾಡು ಗ್ರಾಮದ, ಪ್ರಸ್ತುತ ಮಡಿಕೇರಿಯ ಆಝಾದ್ ನಗರದಲ್ಲಿ ವಾಸವಿದ್ದ ಮರ್ಹೂಂ ಎಂ.ಯು.ಮೊಹಿದ್ದೀನ್ ಸಾಹೇಬ್ ಅವರ ಪುತ್ರ ಜನಾಬ್ ಎಂ.ಎ.ಅಹ್ಮದ್ ನೂರ್ ಸಾಹೇಬ್ ಅವರು ಇಂದು(03) ಸಂಜೆ ನಿಧನರಾದರು. 73 ವರ್ಷದ ಎಂ.ಎ.ಅಹ್ಮದ್ ನೂರ್ ಅವರ ದಫನ ಕಾರ್ಯ ಫೆ.4 ಪೂರ್ವಾಹ್ನ 11ಗಂಟೆಗೆ ಮಡಿಕೇರಿಯ ಅಹ್ಮದಿಯಾ ಮುಸ್ಲಿಂ ಕಬರ್ ಸ್ಥಾನದಲ್ಲಿ ನಡೆಯಲಿದೆ.

Read More

ಮಡಿಕೇರಿ ಮಾ.3 : ಕರ್ನಾಟಕ ರಾಜ್ಯ ಅಡಕ್ ವಾಲಿಬಾಲ್ ಅಸೋಸಿಯೇಷನ್ ಹಾಗೂ ಕೊಡಗು ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಮತ್ತು ಎಚ್.ಡಿ.ದೇವೇಗೌಡ ಅಭಿಮಾನಿಗಳ ಬಳಗ ಸಂಯುಕ್ತಾಶ್ರಯದಲ್ಲಿ ಮಾ.18 ಮತ್ತು 19ರಂದು ಮಡಿಕೇರಿಯಲ್ಲಿ ಹೊನಲು ಬೆಳಕಿನ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಬಳಗದ ಸಂಚಾಲಕ ಎನ್.ಸಿ.ಸುನಿಲ್ ತಿಳಿಸಿದರು. ನಗರದಲ್ಲಿ ಸಿದ್ದುಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಮೈದಾನದಲ್ಲಿ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಪಂದ್ಯಾವಳಿ ನಡೆಯಲಿದ್ದು, ಪುರುಷರ ವಿಭಾಗದ ಪಂದ್ಯಾವಳಿಗೆ ಕೇರಳ, ತಮಿಳುನಾಡು, ಆಂದ್ರ ಪ್ರದೇಶ ಸೇರಿದಂತೆ ವಿವಿಧೆಡೆಯಿಂದ 8 ರಿಂದ 10 ತಂಡಗಳು ಆಗಮಿಸಲಿದೆ. ಮಹಿಳೆಯರ ವಿಭಾಗದಲ್ಲಿ 4 ತಂಡಗಳು ಪಾಲ್ಗೊಳ್ಳಲಿದ್ದು, ಪ್ರಶಸ್ತಿಗಾಗಿ ಕರ್ನಾಟಕದಿಂದ 2 ತಂಡಗಳು, ಕೇರಳ ಮತ್ತು ತಮಿಳುನಾಡಿನಿಂದ ತಲಾ 1 ತಂಡಗಳು ಸೆಣಸಾಟ ನಡೆಸಲಿದೆ ಎಂದು ಮಾಹಿತಿ ನೀಡಿದರು. ಪುರುಷರ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ಒಟ್ಟು ರೂ.1,25,000 ನೀಡಲಾಗುವುದು. ಮಹಿಳೆಯರ ವಿಭಾಗದಲ್ಲಿ ಒಟ್ಟು 70,000 ನಗದು ಹಾಗೂ ಆಕರ್ಷಕ ಟ್ರೋಫಿ…

Read More

ಮಡಿಕೇರಿ ಮಾ.3 : ಮಡಿಕೇರಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ 6 ರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮಗ್ರಿಗಳ ಕಿಟ್ ಗಳನ್ನು, 9 ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶ್ರಮೀಕ್ ಟ್ಯಾಬ್‍ಗಳನ್ನು, ಪೇಂಟರಗೆ ಪೇಂಟಿಂಗ್ ಟೂಲ್ ಕಿಟ್ ಗಳನ್ನು, ಕಾಪೇರ್ಂಟರಗೆ ಕಾಪೇರ್ಂಟರ್ ಟೂಲ್ ಕಿಟ್ ಗಳನ್ನು, ಪ್ಲಂಬರಗೆ ಪ್ಲಂಬಿಂಗ್ ಟೂಲ್ ಕಿಟ್ ಗಳನ್ನು ಜಿಲ್ಲಾ ಆಡಳಿತ ಭವನದ ಮುಂಭಾಗದಲ್ಲಿ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ ಕಾರ್ಮಿಕ ಇಲಾಖೆಯಿಂದ ಇಲ್ಲಿಯವರೆಗೆ ಆಹಾರ ಕಿಟ್, ಸುರಕ್ಷತಾ ಕಿಟ್, ಪ್ರತಿರಕ್ಷಣಾ ಕಿಟ್, ಪೌಷ್ಟಿಕಾಂಶ ಕಿಟ್, ಬಾರ್ ಬೆಂಡಿಂಗ್ ಕಿಟ್, ಕಾಪೇರ್ಂಟರ್ ಕಿಟ್, ಎಲೆಕ್ಟ್ರಿಷಿಯನ್ ಕಿಟ್, ಪೈಂಟರ್ ಕಿಟ್ ಪ್ಲಂಬರ್ ಕಿಟ್, ಮೇಸನ್ ಕಿಟ್, ಸ್ಕೂಲ್ ಕಿಟ್(1-5ನೇ ತರಗತಿ), ಸ್ಕೂಲ್ ಕಿಟ್(6-8ನೆ ತರಗತಿ) ಹಾಗೂ ಶ್ರಮಿಕ್ ಟ್ಯಾಬ್ ಗಳನ್ನು ವಿತರಣೆ ಮಾಡಿದ್ದು ಇವುಗಳ ಸದುಪಯೋಗ ಪಡಿಸಿಕೊಂಡು ಕಾರ್ಮಿಕರು ಮುಂದೆ ಬರುವುದಲ್ಲದೆ ನಿಮ್ಮ…

Read More

ಮಡಿಕೇರಿ ಮಾ.3 : ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮವಹಿಸುವಂತೆ ಜಿಲ್ಲೆಯ ಪ್ರಿಂಟರ್ಸ್ ಮತ್ತು ಪಬ್ಲಿಷರ್ಸ್‍ಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವ್ಯಾಪ್ತಿಯ ಪ್ರಿಂಟರ್ಸ್ ಮತ್ತು ಪಬ್ಲಿಷರ್ಸ್‍ಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದರು. ಚುನಾವಣಾ ಆಯೋಗವು ಪ್ರಿಂಟಿಂಗ್ ಅವರಿಗೆ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಪೋಸ್ಟರ್, ಬ್ಯಾನರ್ಸ್, ಪಾಂಪ್ಲೆಟ್ ಹಾಗೂ ಜಾಹೀರಾತುಗಳನ್ನು ಮುದ್ರಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು ಹಾಗೂ ಟಿವಿ ಮತ್ತು ಕೇಬಲ್ ನೆಟ್ವರ್ಕ್‍ಗಳಲ್ಲಿ ಚುನಾವಣಾ ಜಾಹೀರಾತುಗಳನ್ನು ಪ್ರಸಾರ ಮಾಡುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಮಟ್ಟದ ಮಾಧ್ಯಮ ನಿರ್ವಹಣಾ ಸಮಿತಿಯು(ಎಂಸಿಎಂಸಿ) ಪ್ರಮಾಣೀಕರಿಸಿದ ನಂತರ ಕರಪತ್ರ, ಭಿತ್ತಿಪತ್ರ, ಬ್ಯಾನರ್ ಹಾಗೂ ಜಾಹೀರಾತುಗಳನ್ನು ಪ್ರಕಟಿಸಬೇಕು/ಮುದ್ರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು. ಯಾವುದೇ ರೀತಿಯ ನಿಂದನಾತ್ಮಕ ಜಾಹೀರಾತು, ಕರಪತ್ರ, ಭಿತ್ತಿಪತ್ರ, ಬ್ಯಾನರ್, ಪೋಸ್ಟರ್ ಗಳನ್ನು ಮುದ್ರಿಸದಂತೆ ಕ್ರಮ ಕೈಗೊಳ್ಳಲು ಮುದ್ರಣಾಲಯದ ಮಾಲೀಕರಿಗೆ…

Read More

ಮಡಿಕೇರಿ ಮಾ.3 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಆಯುಷ್ ಮೊಬೈಲ್ ಮೆಡಿಕಲ್ ಯುನಿಟ್‍ಗೆ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಮತ್ತು ಕೆ.ಜಿ.ಬೋಪಯ್ಯ ಅವರು ನಗರದ ರಾಜಸೀಟು ಬಳಿ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ.ಕಾರ್ಯಪ್ಪ, ಪ್ರಾಂಶುಪಾಲರಾದ ಡಾ.ವಿಶಾಲ್, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ ಇತರರು ಇದ್ದರು.

Read More

ಮಡಿಕೇರಿ ಮಾ.3 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ ಹಾಗೂ ಮೈಸೂರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ, ಮಡಿಕೇರಿ ಬಾಹ್ಯ ಸೇವಾ ಕೇಂದ್ರ, ಇವರ ಸಹಯೋಗದಲ್ಲಿ ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದಡಿಯಲ್ಲಿ ‘ವಿಶ್ವ ಶ್ರವಣ ದಿನ/ ರಾಷ್ಟ್ರೀಯ ಶ್ರವಣ ಜಾಗೃತಿ ಅಭಿಯಾನ’ದ ಬಗ್ಗೆ ಬೀದಿ ನಾಟಕ, ಜಾಥಕ್ಕೆ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್  ನಗರದ ರಾಜಸೀಟು ಬಳಿ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ.ಕಾರ್ಯಪ್ಪ, ಪ್ರಾಂಶುಪಾಲರಾದ ಡಾ.ವಿಶಾಲ್, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ, ಡಾ.ಗೋಪಿನಾಥ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಡಾ.ಶ್ವೇತ ಇತರರು ಇದ್ದರು.

Read More

ಮಡಿಕೇರಿ ಮಾ.3 : ಕುಶಾಲನಗರದಲ್ಲಿ ಮರಾಠ ಸಮುದಾಯ ಭವನ ನಿರ್ಮಾಣಕ್ಕೆ ಕನಿಷ್ಠ 25 ಸೆಂಟ್ ಜಾಗವನ್ನು ಒದಗಿಸುವಂತೆ ಮರಾಠ ಸಮಾಜದ ಜಿಲ್ಲಾ ಅಧ್ಯಕ್ಷ ಎಸ್.ಎನ್.ರಾಜಾರಾವ್ ಮನವಿ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ನಡೆದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕುಶಾಲನಗರದಲ್ಲಿ ಮರಾಠ ಸಮಾಜ ಜನಸಂಖ್ಯೆ ಇದ್ದು, ಅಲ್ಲಿ ಮರಾಠ ಸಮುದಾಯ ಭವನ ನಿರ್ಮಾಣ ಮಾಡುವುದರಿಂದ ಸ್ಥಳೀಯರಿಗೆ ಅನುಕೂಲವಾಗಲಿದೆ ಎಂದು ಅವರು ಕೋರಿದರು. ಮರಾಠ ಸಮುದಾಯ ಭವನ ನಿರ್ಮಾಣಕ್ಕೆ ರಾಜ್ಯ ಮರಾಠ ಪರಿಷತ್ತಿನಿಂದಲೂ ಅನುದಾನ ದೊರೆಯಲಿದೆ. ಹಾಗೆಯೇ ಸ್ಥಳೀಯ ಅಭಿವೃದ್ಧಿ ಯೋಜನೆಯಡಿ ಅನುದಾನ ಲಭ್ಯ ಆಗಲಿದ್ದು, ಜಾಗ ನೀಡುವಂತೆ ಕೋರಿದರು. ಕರ್ನಾಟಕ ಜೀವ ವೈವಿದ್ಯ ಮಂಡಳಿ ರಾಜ್ಯ ಅದ್ಯಕ್ಷರಾದ ನಾಪಂಡ ರವಿಕಾಳಪ್ಪ ಅವರು ಮಾತನಾಡಿ ಶಿವಾಜಿ ಮಹಾರಾಜರು ಭಾರತೀಯ ಸಂಸ್ಕೃತಿ ಮತ್ತು ಜೀವನ ಪದ್ಧತಿ ಸಂರಕ್ಷಣೆಗೆ ಮತ್ತು…

Read More