ಲೇಖಕ: admin

ಸೋಮವಾರಪೇಟೆ, NEWS DESK ಸೆ.20: “ಸದಾ ಸಿದ್ಧರಾಗಿರಿ” ಎಂಬ ಧ್ಯೇಯದೊಂದಿಗೆ ಯಾವುದೇ ಪರಿಸ್ಥಿತಿಯನ್ನು ಎದುರಿಸುವ ಹಾಗೂ ಇತರರಿಗೆ ಸಹಾಯ ಮಾಡುವ ಮನೋಭಾವವನ್ನು ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ಕಮಿಷನರ್ ಜಿಮ್ಮಿ ಸಿಕ್ವೆರ ಕರೆ ನೀಡಿದರು. ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ತಾಲೂಕು ಸ್ಕೌಟ್ ಮತ್ತು ಗೈಡ್ಸ್ ವಾರ್ಷಿಕ ಮಹಾಸಭೆ ಹಾಗೂ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ತಾಲೂಕು ಮಟ್ಟದ ಗೀತಾ ಗಾಯನ ಮತ್ತು ದೇಶಭಕ್ತಿ ಗೀತೆಗಳ ಸ್ಪರ್ಧಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸ್ಕೌಟ್ ಮತ್ತು ಗೈಡ್ಸ್ ಮೂಲಕ ಪ್ರಾಮಾಣಿಕತೆ, ಉತ್ತಮ ನಡವಳಿಕೆ, ಪ್ರಕೃತಿ ಪ್ರೀತಿ ಹಾಗೂ ಸಾರ್ವಜನಿಕ ಆಸ್ತಿಯನ್ನು ರಕ್ಷಿಸುವ ಗುಣಗಳನ್ನು ಬೆಳೆಸಿಕೊಳ್ಳಬಹುದು. ಇದು ಕೇವಲ ಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಜೀವನದ ಮೌಲ್ಯಗಳನ್ನು ಕಲಿಸುವ ವೇದಿಕೆಯಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಕೌಟ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ…

Read More

ಮಡಿಕೇರಿ, NEWS DESK ಸೆ.20: ನವತಂತ್ರಜ್ಞಾನದ ಮೂಲಕ ಅಪಾರ ಜ್ಞಾನ ಗಳಿಸುತ್ತಿರುವ ವಿದ್ಯಾರ್ಥಿಗಳಿಗೆ ಯಾವ ರೀತಿಯ ಶಿಕ್ಷಣ ನೀಡಬೇಕೆಂಬುದೇ ಶಿಕ್ಷಕ ವರ್ಗದ ನೈಜ ಸವಾಲಾಗಿ ಪರಿಣಮಿಸಿದೆ. ಶಿಕ್ಷಕರು ಪ್ರತಿನಿತ್ಯವೂ ತಮ್ಮ ಜ್ಞಾನ ಮತ್ತು ಕೌಶಲ್ಯವನ್ನು ಪರಿಷ್ಕರಿಸಿಕೊಂಡು ಪಾಠ ಮಾಡುವ ಅನಿವಾರ್ಯತೆ ಇದೆ ಎಂದು ಮಡಿಕೇರಿ ಆಕಾಶವಾಣಿ ಕೇಂದ್ರದ ಮುಖ್ಯಸ್ಥೆ ಸುಜಾತ ಎಫ್. ತಳವಾರ್ ಹೇಳಿದರು. ನಗರದ ಪತ್ರಿಕಾಭವನದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿಸಿದ್ದ ನಾಲ್ವರು ಸಾಧಕ ಶಿಕ್ಷಕರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ದಿನಕಳೆದಂತೆ ವಿದ್ಯಾರ್ಥಿಗಳಿಗೆ ಲಭ್ಯವಾಗುತ್ತಿರುವ ನವತಾಂತ್ರಿಕತೆಯ ಮಾಧ್ಯಮಗಳಿಂದಾಗಿ ಮೊದಲಿನಂತೆ ಪಾಠ ಹೇಳುವುದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಶಿಕ್ಷಕರ ವೃತ್ತಿ ಮತ್ತಷ್ಟು ಸವಾಲಿನದ್ದಾಗುತ್ತಿದೆ ಎಂದರು. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳ ಬಗ್ಗೆ ತಿಳಿಹೇಳುವುದರ ಜೊತೆಗೆ ಪಠ್ಯ ಮತ್ತು ಪಠ್ಯೇತರ ವಿಚಾರಗಳನ್ನು ಕಲಿಸುವ ದೊಡ್ಡ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ಮಕ್ಕಳು ಕೂಡ ಹಲವು ಸಂದರ್ಭಗಳಲ್ಲಿ ಪೋಷಕರಿಗೆ ಗುರುಗಳಾಗಿ ಪರಿಣಮಿಸುತ್ತಾರೆ. ಮಕ್ಕಳಿಂದಲೂ ಕಲಿಯುವುದು ಸಾಕಷ್ಟಿದೆ ಎಂದು ಹೇಳಿದರು. ಹಿಂದಿನ ಕಾಲದಿಂದ…

Read More

ಮಡಿಕೇರಿ, NEWS DESK ಸೆ.20: ನಗರದ ರೋಟರಿ ವುಡ್ಸ್ ವತಿಯಿಂದ “ಪ್ರಕೃತಿಗೆ ಧಕ್ಕೆ ತರದಿರಿ” ಎಂಬ ಸಂದೇಶದೊಂದಿಗೆ ಬೈಕ್ ಜಾಥಾ ಆಯೋಜಿಸಲಾಗಿತ್ತು. ಮಡಿಕೇರಿಯಿಂದ ಭಾಗಮಂಡಲ–ಕರಿಕೆ–ಪೆರಾಜೆ–ಸಂಪಾಜೆ ಮಾರ್ಗವಾಗಿ ಸುಮಾರು 150 ಕಿ.ಮೀ. ಸಾಗಿದ ರೋಟರಿ ವುಡ್ಸ್ ಬೈಕ್ ಸವಾರರು ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಿದರು. “ರೋಟರಿ ಬೈಕ್ ರ್ಯಾಲಿ–ರೋಬಿ” ಹೆಸರಿನಲ್ಲಿ ನಡೆದ ಜಾಥಾದಲ್ಲಿ ವಿವಿಧ ಗ್ರಾಮಗಳಲ್ಲಿ ಪರಿಸರ ಮಾಲಿನ್ಯ ಮಾಡದಂತೆ ಸಾರ್ವಜನಿಕರಿಗೆ ಸಂದೇಶ ನೀಡಲಾಯಿತು. ಮಡಿಕೇರಿಯಲ್ಲಿ ಬೈಕ್ ಜಾಥಾಕ್ಕೆ ರೋಟರಿ ಜಿಲ್ಲೆ 3181ರ ನಿರ್ದೇಶಕ ಅನಿಲ್ ಹೆಚ್.ಟಿ. ಚಾಲನೆ ನೀಡಿ ಮಾತನಾಡಿ, ರೋಟರಿ ವುಡ್ಸ್‌ನ ಉತ್ಸಾಹಿ ಬೈಕ್ ಸವಾರರು ಸತತ ಎರಡನೇ ವರ್ಷವೂ ಬೈಕ್ ಜಾಥಾ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಕಾರ್ಯ ಕೈಗೊಂಡಿರುವುದು ಶ್ಲಾಘನೀಯ ಎಂದರು. ಮುಂದಿನ ದಿನಗಳಲ್ಲೂ ಇನ್ನಷ್ಟು ಸಾಮಾಜಿಕ ಸಂದೇಶಗಳೊಂದಿಗೆ ಬೈಕ್ ರ್ಯಾಲಿ ಆಯೋಜಿಸುವಂತಾಗಲಿ ಎಂದು ಹಾರೈಸಿದರು. ಬೈಕ್ ಜಾಥಾದಲ್ಲಿ ಹರೀಶ್ ಕಿಗ್ಗಾಲು, ರಂಜಿತ್ ಕಿಗ್ಗಾಲು, ಹಂಚೆಟ್ಟಿರ ಮನುಮುದ್ದಪ್ಪ, ಚೇಂದ್ರಿಮಾಡ ವಿನು ಈರಪ್ಪ, ಚಂದ್ರಶೇಖರ್,…

Read More

ಮಡಿಕೇರಿ ಸೆ.19 NEWS DESK : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಕಡಿಮೆ ಮಳೆ ಆಗಿರುವ ಹಿನ್ನೆಲೆ ವಿರಾಜಪೇಟೆ, ಸೋಮವಾರಪೇಟೆ ಮತ್ತು ಪೊನ್ನಂಪೇಟೆಯನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದ್ದು, ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸುವ ಸಂಬಂಧ ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಶನಿವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಎಲ್-ನಿನೋ ಪರಿಣಾಮದಿಂದ ಈ ಬಾರಿ ಮುಂಗಾರು ಕೈಕೊಟ್ಟಿರುವ ಹಿನ್ನೆಲೆ ಶೇ.33 ರಿಂದ 50 ರಷ್ಟು ಕಡಿಮೆ ಮಳೆಯಾಗಿರುವ ತಾಲ್ಲೂಕುನ್ನು ಬರ ಪೀಡಿತವೆಂದು ಸರ್ಕಾರ ಪ್ರಕಟಿಸಿದ್ದು, ಈ ಹಿನ್ನೆಲೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಸಿದರು. ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು, ಜಾನುವಾರುಗಳಿಗೆ ಕುಡಿಯುವ ನೀರು…

Read More

ಮೂರ್ನಾಡು, ಸೆ.19 NEWS DESK : ಮೂರ್ನಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಸರ್ವದೈವತ ಪ್ರೌಢಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ತಂಡದ ನಾಲ್ವರು ವಿದ್ಯಾರ್ಥಿಗಳು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸರ್ವದೈವತ ಪ್ರೌಢಶಾಲೆಯ ಅಕ್ಷಿತ್, ಪವಿತ್ರನ್, ಮೊಹಮ್ಮದ್ ಅರಫತ್ ಹಾಗೂ ಚೇತನ್ ದೇವಸಿ ಅವರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಗೌಡ ಅವರು ತರಬೇತಿ ನೀಡಿದ್ದರು.

Read More

ಕುಟ್ಟ, ಸೆ.19 NEWS DESK : ಓಂ ಶಾಂತಿ ಬ್ರಹ್ಮಕುಮಾರಿ ಮಡಿಕೇರಿ ಹಾಗೂ ಗೋಣಿಕೊಪ್ಪ ಶಾಖೆಯ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್, ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಾಲೆಯ ಮುಖ್ಯ ಶಿಕ್ಷಕಿ ಶಕುಂತಲಾ ದೇವಿ ಹಾಗೂ ಶಿಕ್ಷಕ ಸಿಬ್ಬಂದಿ ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರು. ರಾಜಯೋಗಿನಿ ಬ್ರಹ್ಮಕುಮಾರಿ ಧನಲಕ್ಷ್ಮಿ ಅಕ್ಕನವರು ಶಿಕ್ಷಕರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿ, ಕಲಿಕೆ ಶಾಲೆಗೆ ಮಾತ್ರ ಸೀಮಿತವಾಗಿರದೆ, ಜೀವನದುದ್ದಕ್ಕೂ ಅಗತ್ಯವಾಗಿದೆ. ರಾಜಯೋಗವು ಶಾಂತವಾಗಿ ಹಾಗೂ ಒತ್ತಡಮುಕ್ತವಾಗಿ ಕಾರ್ಯನಿರ್ವಹಿಸಲು ಪ್ರೇರಣೆ ನೀಡುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಹೋದರಿ ಅಲಿಮಾ ಸೇರಿದಂತೆ ಶಾಲೆಯ ಶಿಕ್ಷಕ ವೃಂದವನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ, ಪ್ರಸ್ತುತ ಈಶ್ವರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾಗಿರುವ ಸಂತೋಷ್, ರೇಷ್ಮಾ ಹಾಗೂ ರತೀಶ್ ಅವರನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು. ವಿದ್ಯಾರ್ಥಿಗಳಲ್ಲಿ ಮೌಲ್ಯಗಳ ಅರಿವು ಮೂಡಿಸುವುದು, ಧ್ಯಾನದ ಮಹತ್ವ ಹಾಗೂ ವಿದ್ಯಾರ್ಥಿ ಜೀವನದಲ್ಲಿ ಜ್ಞಾನದ ಅಗತ್ಯತೆಯ…

Read More

ಮಡಿಕೇರಿ ಸೆ.19 NEWS DESK : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ 2025-26ನೇ ಸಾಲಿನಲ್ಲಿ 22.39 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯ ಸಹಕಾರ ಸಂಘಗಳಿಗೆ ಶೇ.20ರಷ್ಟು ಡಿವಿಡೆಂಡ್ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಪಿ. ಗಣಪತಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.22ರಂದು ಮಡಿಕೇರಿಯ ಬ್ಯಾಂಕಿನ ಕೇಂದ್ರ ಕಚೇರಿ ಉನ್ನತಿ ಭವನದ ದಿ. ಪಂದ್ಯಂಡ ಐ. ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ಬ್ಯಾಂಕಿನ 101ನೇ ವಾರ್ಷಿಕ ಮಹಾಸಭೆ ನಡೆಯಲಿದೆ ಎಂದು ತಿಳಿಸಿದರು. ಬ್ಯಾಂಕಿನಲ್ಲಿ 2026ರ ಮಾರ್ಚ್ 31ಕ್ಕೆ 2,043.11 ಕೋಟಿ ಠೇವಣಿ ಸಂಗ್ರಹವಾಗಿದ್ದು, 2026-27ನೇ ಸಾಲಿನಲ್ಲಿ 2,320 ಕೋಟಿ ಠೇವಣಿ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಬ್ಯಾಂಕಿನ ಒಟ್ಟು ವ್ಯವಹಾರವು ₹3,815.25 ಕೋಟಿಯಾಗಿದೆಯೆಂದು ಮಾಹಿತಿಯನ್ನಿತ್ತರು. ರೈತರಿಗೆ 812.68 ಕೋಟಿ ಕೆಸಿಸಿ ಸಾಲ-ಜಿಲ್ಲೆಯ ಕೃಷಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, 2025-26ನೇ ಸಾಲಿನಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಬ್ಯಾಂಕಿನ ಶಾಖೆಗಳ ಮೂಲಕ ಅರ್ಹ ರೈತರಿಗೆ…

Read More

ಮಡಿಕೇರಿ ಸೆ.19 NEWS DESK : ಪಶ್ಚಿಮ ಘಟ್ಟ ಸಾಲಿನ ಕೊಡಗಿನ ಹಸಿರ ಪರಿಸರದ ಸಂರಕ್ಷಣೆಯಾದಲ್ಲಿ ಜೀವನದಿ “ಕಾವೇರಿ” ಉಳಿಯುತ್ತಾಳೆ, ಕಾವೇರಿ ನದಿ ಉಳಿದರೆ ರಾಜ್ಯ ಹೊರ ರಾಜ್ಯಗಳ 8 ಕೋಟಿ ಮಂದಿ ಅದರ ಪ್ರಯೋಜನವನ್ನು ಪಡೆಯುವ ಮೂಲಕ ನಾಡು ಸುಭಿಕ್ಷವಾಗುತ್ತದೆಂದು ಎನ್ವಿರಾನ್‍ಮೆಂಟ್ ಅಂಡ್ ಹೆಲ್ತ್ ಫೌಂಡೇಷನ್ ಇಂಡಿಯಾದ ಅಧ್ಯಕ್ಷರಾದ ನಿವೃತ್ತ ಕರ್ನಲ್ ಸಿ.ಪಿ.ಮುತ್ತಣ್ಣ ಅಭಿಪ್ರಾಯಿಸಿದರು. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಪರಿಸರ, ವನ್ಯ ಜೀವಿಗಳ ಸಂರಕ್ಷಣೆಯ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು “ಡೋಂಗಿ ಪರಿಸರ”ವಾದಿಗಳೆಂದು ಟೀಕಿಸುವುದು, ಅವರು ವಿದೇಶಿ ಹಣವನ್ನು ಪಡೆಯುತ್ತಿರುವುದಾಗಿ ಆರೋಪಿಸುವ ಕ್ರಮ ಸರಿಯಲ್ಲ. ಪರಿಸರದ ಹೆಸರಿನಲ್ಲಿ ವಿದೇಶ ಹಣ ಪಡೆದು ದುರುಪಯೋಗ ಪಡಿಸಿಕೊಳ್ಳುತ್ತಿರುವವರು ಇದ್ದಲ್ಲಿ ಅದು ಸ್ಪಷ್ಟವಾಗಿ ದೇಶ ದ್ರೋಹದ ಕಾರ್ಯವಾಗುತ್ತದೆ. ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. :: ತಪ್ಪು ಮಾಡಿದ್ದರೆ ತಿಳಿಸಿ-ಸರಿಪಡಿಸಿಕೊಳ್ಳೋಣ- :: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ಸಭೆಯಲ್ಲಿ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಅವರು, ಡೋಂಗಿ ಪರಿಸರವಾದಿಗಳಿಂದ…

Read More

ಮಡಿಕೇರಿ ಸೆ.19 NEWS DESK : ಪ್ರಾಕೃತಿಕ ವಿಕೋಪ ಮತ್ತು ಮುಂಗಾರಿನ ಅವಧಿಗೆ ಸಂಬಂಧಿಸಿದಂತೆ 2019-20ನೇ ಸಾಲಿನಿಂದ ಇಲ್ಲಿಯವರೆಗೆ ಎನ್‍ಡಿಆರ್‍ಎಫ್‍ನ ಮಳೆಹಾನಿ ದುರಸ್ತಿ ಕಾಮಗಾರಿಗಳಿಗೆ ಬಿಲ್ ಪಾವತಿಯಾಗದಿರುವುದು ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುವ ಕಾಮಗಾರಿಗಳ ಟೆಂಡರ್‍ಗಳಲ್ಲಿ ಸ್ಥಳೀಯ ಗುತ್ತಿಗೆದಾರರಿಗೆ ಆಗುತ್ತಿರುವ ಅನ್ಯಾಯ ಮತ್ತು ಕಿರುಕುಳವನ್ನು ಖಂಡಿಸಿ ಸೆ.22 ರಿಂದ ನಗರದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಕಛೇರಿ ಮುಂಭಾಗ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಮಡಿಕೇರಿ ತಾಲ್ಲೂಕು ಲೋಕೋಪಯೋಗಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ರಾಜೀವ ಲೋಚನ ಬಿ.ಪಿ. ಅವರು ತಿಳಿಸಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಕೃತಿಕ ವಿಕೋಪ, ಮಳೆಹಾನಿಗೆ ಸಂಬಂಧಿಸಿದಂತೆ ಸ್ಥಳೀಯ ಗುತ್ತಿಗೆದಾರರು ನಿರ್ವಹಿಸಿರುವ ಕಾಮಗಾರಿಗಳಿಗೆ ಸಂಬಂಧಿಸಿಂತೆ ಸುಮಾರು 7.50ಕೊಟಿ ಬಿಲ್ ಪಾವತಿಗೆ ಬಾಕಿ ಇದೆ.ಕಳೆದ ಐದಾರು ವರ್ಷಗಳಿಂದ ಸಂಘ ಬಿಲ್ ಪಾವತಿಗೆ ಒತ್ತಾಯಿಸುತ್ತ ಬಂದಿದ್ದರು ಸೂಕ್ತ ಸ್ಪಂದನ ದೊರಕಿಲ್ಲವೆಂದು ತೀವ್ರ ಬೇಸರ ವ್ಯಕ್ತಪಡಿಸಿದರು. :: ಹೊರ ಜಿಲ್ಲೆಯ ಗುತ್ತಿಗೆದಾರರಿಗೆ ಮಣೆ!? :: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ 1 ಕೋಟಿ ರೂ. ಒಳಗಿನ…

Read More

ವಿರಾಜಪೇಟೆ, NEWS DESK ಸೆ.19: ಜಿಲ್ಲಾ ಮಟ್ಟದ ಶಾಲಾ ಕ್ರೀಡಾಕೂಟದಲ್ಲಿ ಗೋಣಿಕೊಪ್ಪಲಿನ ಸೆಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕಾಲ್ಚೆಂಡು ಪಂದ್ಯಾವಳಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಸರ್ಕಾರ, ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ದೈಹಿಕ ಶಿಕ್ಷಣ ವಿಭಾಗ, ಜಿಲ್ಲಾ ವಿದ್ಯಾರ್ಥಿ ಕ್ರೀಡಾನಿಧಿ ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟ ಅನುಷ್ಠಾನ ಸಮಿತಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಶಾಲಾ ಕ್ರೀಡಾ ಸ್ಪರ್ಧೆಗಳು ನಡೆದವು. ಕ್ರೀಡಾಕೂಟದಲ್ಲಿ 14 ಹಾಗೂ 17 ವಯೋಮಿತಿ ವಿಭಾಗದ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಗೋಣಿಕೊಪ್ಪಲಿನ ಸೆಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕ ಸಂತೋಷ್ ಅವರು ತರಬೇತಿ ನೀಡಿದ್ದರು. ಶಾಲೆಯ ಪ್ರಾಂಶುಪಾಲರಾದ ರೆ. ಫಾ. ಜೋಶಿ ಜೋನ್ ಮನಾಲೆಲ್, ವ್ಯವಸ್ಥಾಪಕರಾದ ಥಾಮಸ್ ಆಯಂಗುಡಿ ಹಾಗೂ ಆಡಳಿತಾಧಿಕಾರಿ ಜೋಸೆಫ್ ಅಚ್ಚಂಡಿ ಅವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದ್ದರು.…

Read More