ಲೇಖಕ: admin

ಮಡಿಕೇರಿ ಏ.3 NEWS DESK : ಗೋಣಿಕೊಪ್ಪ ಕಾವೇರಿ ಪೊಮ್ಮಕ್ಕಡ ಕೂಟದ ವತಿಯಿಂದ ಮೀನ್ಯಾರ್ ನಮ್ಮೆ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಮೊಮ್ಮಕ್ಕಡ ಕೂಟ ಮೇಳವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪತ್ನಿ ಕಾಂಚನ್ ಪೊನ್ನಣ್ಣ ಉದ್ಘಾಟಿಸಿ ಶುಭಕೋರಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಾವೇರಿ ಪೊಮ್ಮಕ್ಕಡ ಕೂಟವು ಹಲವಾರು ವರ್ಷಗಳಿಂದ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಇದು ಮಹಿಳಾ ಸಬಲೀಕರಣಕ್ಕೆ ಒಂದು ಉತ್ತಮ ನಿದರ್ಶನವಾಗಿದೆ. ಸಮಾಜ ಏಳಿಗೆ ಕಾಣಬೇಕೆಂದರೆ ಮಹಿಳೆಯರು ಇದರಲ್ಲಿ ಭಾಗಿಯಾಗಬೇಕು. ಉತ್ತಮ ಹಾಗೂ ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಬಹುದೊಡ್ಡದಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ನಾಡಿಗೆ ಶ್ರೇಯಸ್ಸು ತನ್ನಿ ಎಂದು ಕರೆ ನೀಡಿದರು. ಈ ಸಂದರ್ಭ ಗೋಣಿಕೊಪ್ಪ ಕಾವೇರಿ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕೊಟ್ಟಂಗಡ ವಿಜು ದೇವಯ್ಯ, ಸನ್ಮಾನಿತರು ಬಿದ್ದಂಡ ನಾಣಿ ನಾಣಯ್ಯ,…

Read More

ವಿರಾಜಪೇಟೆ ಏ.3 NEWS DESK : ಪ್ರಭು ಶ್ರೀ ರಾಮನಿಗೆ ವಿಧೇಯನಾಗಿ, ಕಣ ಕಣದಲ್ಲಿ ರಾಮ ರಾಮ ಎಂದು ಭಕ್ತಿಯ ಸಾರವನ್ನು ಎತ್ತಿಹಿಡಿದ ಹನುಮನಂತೆ, ಕಣ ಕಣದಲ್ಲೂ ರಾಷ್ಟ್ರಭಕ್ತಿಯನ್ನು ಹೊಂದಿ, ಭಾರತ ಮಾತೆಗೆ ಚಿರ ಋಣಿಯಾಗಿ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ಹಾಸನ ಜಿಲ್ಲೆಯ ಬಸವ ಪಟ್ಟಣ ಮಠದ ಮಠಾಧೀಶರಾದ ಶ್ರೀ ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿಗಳು ತಿಳಿಸಿದರು. ವಿರಾಜಪೇಟೆ ತಾಲ್ಲೂಕು ಮೈದಾನದ ಅಂಜನಿ ಪುತ್ರ ವೇದಿಕೆಯಲ್ಲಿ ನಗರದ ಹÀನುಮ ಜಯಂತಿ ಆಯೋಜನಾ ಸಮಿತಿ ವತಿಯಿಂದ ಆಯೋಜಿತ ಹನುಮ ಜಯಂತಿ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಆಶೀರ್ವಚನವನ್ನಿತ್ತರು. ನಮ್ಮ ನಡುವೆ ಇರುವ ಜಾತೀಯತೆ, ಲಿಂಗ ಅಸಮಾನತೆಯನ್ನು ತೊಲಗಿಸಿ, ಎಲ್ಲರೂ ಸರಿಸಮಾನರು ಎಂಬುದು ಬಿಂಬಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ಸಾಗಬೇಕಾಗಿದೆ. ಜಾತಿ ಜಾತಿಗಳ ಮಧ್ಯೆ ಕಂದಕ, ಒಡೆದು ಆಳುವ ನೀತಿಯನ್ನು ಪ್ರತಿಪಾದಿಸುವ ಬಾಹ್ಯ ಶಕ್ತಿಗಳ ವಿರುದ್ಧ ಸಂಘಟಿತ ಹೋರಾಟಕ್ಕೆ ಸಿದ್ದರಾಗಬೇಕು. ಸನಾತನ ಹಿಂದೂ ಧರ್ಮ ಅವಿನಾಶಿ ಧರ್ಮ. ಇದಕ್ಕೆ ಆರಂಭ…

Read More

ಕುಶಾಲನಗರ, NEWS DESK ಏ.03: ಕಾವೇರಿ ಮಹಾ ಆರತಿ ಅಂಗವಾಗಿ ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಶಾಲನಗರ ವಲಯದ ನೂರಾರು ಸಂಖ್ಯೆಯ ಕಾರ್ಯಕರ್ತರು ಕಾವೇರಿ ನದಿಯಲ್ಲಿ ಸಾರ್ವಜನಿಕರು ಎಸೆದಿದ್ದ ರಾಶಿಗಟ್ಟಲೆ  ಬಟ್ಟೆ ಬರೆ ವಿವಿಧ ತ್ಯಾಜ್ಯಗಳನ್ನು ತೆರವುಗೊಳಿಸಿ ಪುರಸಭೆ ವಾಹನದಲ್ಲಿ ತುಂಬಿಸಿ ಸ್ಥಳಾಂತರಿಸಿದರು. ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಉಪಸ್ಥಿತಿಯಲ್ಲಿ  ಕುಶಾಲನಗರ ವಲಯ ಮೇಲ್ವಿಚಾರಕರಾದ ನಾಗರಾಜ್, ಒಕ್ಕೂಟದ ಅಧ್ಯಕ್ಷರಾದ ಪಾರ್ವತಿ ಉಪಾಧ್ಯಕ್ಷರಾದ ದಾಕ್ಷಾಯಿಣಿ ನೇತೃತ್ವದಲ್ಲಿ ಸೇವಾ ಪ್ರತಿನಿಧಿಗಳು ಶೌರ್ಯ ತಂಡದ ಸದಸ್ಯರು, ಯೋಜನೆಯ ಕಾರ್ಯಕರ್ತರು ಸುಮಾರು 2 ಗಂಟೆಗಳ ಕಾಲ ನದಿಯನ್ನು ತ್ಯಾಜ್ಯ ತೆರವುಗೊಳಿಸುವ ಮೂಲಕ  ಸ್ವಚ್ಛಗೊಳಿಸಿದರು. ಈ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ ಎನ್ ಚಂದ್ರಮೋಹನ್, ಕಾವೇರಿ ಆರತಿ ಬಳಗದ ವನಿತಾ ಚಂದ್ರಮೋಹನ್, ಮಂಡೆಪಂಡ ಬೋಸ್ ಮೊಣ್ಣಪ್ಪ, ಧರಣಿ ಸೋಮಯ್ಯ, ಸೇವಾ ಪ್ರತಿನಿಧಿಗಳಾದ ಸ್ವಾತಿ, ಜಯಲಕ್ಷ್ಮಿ, ಡಾಟಿ, ಪುರಸಭೆ…

Read More

ಸೋಮವಾರಪೇಟೆ, NEWS DESK ಏ.03: ಮಹಿಳೆಯರು ಇಂದು ಸಮಾಜದ ಎಲ್ಲಾ ಕ್ಷೇತ್ರದಲ್ಲಿಯೂ ಮುಂದಿದ್ದು, ಸಂಸಾರದAತಹ ದೊಡ್ಡ ಜವಾಬ್ದಾರಿಯ ಹಿಂದೆ ಹೆಣ್ಣಿದ್ದಾಳೆ ಎಂದರೆ ಅತಿಶಯೋಕ್ತಿಯಲ್ಲ ಎಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಹೇಳಿದರು. ಜಿಲ್ಲೆಯ ಕನ್ನಡ ಸಿರಿ ಬಳಗದ ಆಶ್ರಯದಲ್ಲಿ ಶುಕ್ರವಾರ ಪಟ್ಟಣದ ಮಾನಸ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಸಿರಿ- ಕಲಾವೈಭವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರು ಬುದ್ದಿವಂತರು ಹಾಗೂ ಜ್ಞಾನವಂತರಾಗಿರುತ್ತಾರೆ. ಯಾವುದೇ ಸನ್ನಿವೇಶದಲ್ಲಿಯೂ ಸಮತೋಲನವನ್ನು ಸಾಧಿಸಿ ಸದೃಡ ಮನಸ್ಸಿನಿಂದ ಕೆಲಸ ಮಾಡುವ ಹೆಣ್ಣು ಸಂಸಾರದ ಹೊಣೆಯನ್ನು ಸಮರ್ಥವಾಗಿ ನಿಭಾಯಿಸುತ್ತಾಳೆ ಎಂದರು. ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಪಟ್ಟಣದ ಸಂತ ಜೋಸೆಫರ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಛಾಯಾ ಅವರು ಮಾತನಾಡಿ, ಹೆಣ್ಣು ಸಂಸಾರಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಡುತ್ತಾಳೆ. ಹೆಣ್ಣು ಅಬಲೆಯಲ್ಲ ಸಬಲೆ, ತಾಳ್ಮೆ ಮತ್ತು ಸಹನೆಯ ಪ್ರತೀಕವಾದ ಹೆಣ್ಣಿಗೆ ಸಮಾಜ ಇನ್ನೂ ಗೌರವ ನೀಡಬೇಕಿದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ ಕ್ಷೇತ್ರಗಳಲ್ಲಿ ಸಮಾನ ಅವಕಾಶ ಸಿಕ್ಕಿದ ಹಿನ್ನೆಲೆಯಲ್ಲಿ ಮಹಿಳೆಯರು ಇಂದು…

Read More

ಕುಶಾಲನಗರ, NEWS DESK ಏ.3: ರೈತರು ಕೃಷಿಯೊಂದಿಗೆ ಅರಣ್ಯ ಕೃಷಿಯನ್ನು ವೈಜ್ಞಾನಿಕವಾಗಿ ಮಾಡಿದರೆ ಕೃಷಿ ಕ್ಷೇತ್ರದಲ್ಲಿ ಆರ್ಥಿಕವಾಗಿ ಹೆಚ್ಚಿನ ಲಾಭ ಗಳಿಸುವ ಮೂಲಕ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರೂ ಆದ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಪರಿಸರ ಕಾರ್ಯಕ್ರಮಗಳ ಸಂಘಟಕ ಪರಿಸರ ಪ್ರೇಮಿ ಟಿ.ಜಿ.ಪ್ರೇಮಕುಮಾರ್ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿ, ಸಾಮಾಜಿಕ ಅರಣ್ಯ ವಿಭಾಗ, ಮಡಿಕೇರಿ ಹಾಗೂ ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದ ವತಿಯಿಂದ ಕೂಡಿಗೆ ಬಳಿಯ ಹುದುಗೂರು ಅರಣ್ಯ ಸಸ್ಯಕ್ಷೇತ್ರದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರೈತರಿಗೆ ಏರ್ಪಡಿಸಿದ್ದ ಕೌಶಲ್ಯ ತರಬೇತಿ ಮತ್ತು ಅರಿವು ಹಾಗೂ ಪ್ರಚಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೃಷಿ ಅರಣ್ಯದಿಂದ ಕೃಷಿ ಭೂಮಿಯ ಅಂತರ್ಜಲ ವೃದ್ಧಿ ಸಾಧ್ಯ. ಇಂದಿನ ಹವಾಮಾನ ವೈಪರೀತ್ಯ, ಅತಿವೃಷ್ಠಿ ಹಾಗೂ ಅಕಾಲಿಕ ಮಳೆಯಿಂದ ಒಂದು ಬೆಳೆ ಕೈಕೊಟ್ಟರೂ, ಅರಣ್ಯ ಕೃಷಿಯಿಂದ ಬರುವ ಮರಗಳ ಆದಾಯವು ರೈತರಿಗೆ ಆರ್ಥಿಕ ನೆರವು ನೀಡುತ್ತದೆ.ಇದು ರೈತರ ಆದಾಯದ ವೈವಿಧ್ಯೀಕರಣಕ್ಕೆ ಹೆಚ್ಚಿನ…

Read More

ಶನಿವಾರಸಂತೆ, NEWS DESK ಏ.03:- ಮಹಿಳಾ ದಿನಾಚರಣೆ ಹಾಗೂ ಶಿವಕುಮಾರ ಸ್ವಾಮೀಜಿ ಜಯಂತಿ ಅಂಗವಾಗಿ ಪಟ್ಟಣದಲ್ಲಿ ವಿಜೃಂಭಣೆಯ ಮೆರವಣಿಗೆ ನಡೆಯಿತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಮಹಿಳಾ ಘಟಕದ ವತಿಯಿಂದ ಅಕ್ಕಮಹಾದೇವಿ ಜಯಂತಿ,ಶಿವಕುಮಾರ ಸ್ವಾಮೀಜಿ ಜಯಂತಿ ಹಾಗೂ ಮಹಿಳಾ ದಿನಾಚರಣೆ ಅಂಗವಾಗಿ ಪಟ್ಟಣದ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗುಡುಗಳಲೆ ದೇವಾಲಯದ ಬಳಿಯಿಂದ ಪೂರ್ಣಕುಂಭ,ವೀರಗಾಸೆ,ಚಂಡೆ ವಾದ್ಯದೊಂದಿಗೆ ಶಿವಕುಮಾರ ಸ್ವಾಮೀಜಿ,ಅಕ್ಕಮಹಾದೇವಿಯವರ ಭಾವಚಿತ್ರ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಮೆರವಣಿಗೆಯಲ್ಲಿ ಉದೂರು ರವಿಯವರ ವೀರಗಾಸೆ ವಿಶೇಷವಾಗಿ ಗಮನ ಸೆಳೆಯಿತು. ನಂತರ ನಡೆದ ಕಾರ್ಯಕ್ರಮದ ಸಾನಿಧ್ಯವನ್ನು ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ , ಕಲ್ಲಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ,ಶಿಡಿಗಳಲೆ ಮಠದ ಇಮ್ಮಡಿಶಿವಲಿಂಗ ಸ್ವಾಮೀಜಿ ವಹಿಸಿದ್ದರು, ಮಹಿಳಾ ಘಟದ ಅಧ್ಯಕ್ಷೆ ದೀಪಿಕಾ ಕರುಣಾಕರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ನಿರ್ದೇಶಕಿ ಅನುಚಂದ್ರಶೇಖರ್,ಜಿಲ್ಲಾ ಉಪಾಧ್ಯಕ್ಷ ಸುರೇಶ್,ಪ್ರಮುಖರುಗಳಾದ ಸುಮಾಸುದೀಪ್, ವೀರೇಂದ್ರ,ರಾಜೇಶ್,ಹಾಗೂ ಮುಂತಾದವರು ಉಪಸ್ತಿತರಿದ್ದರು.

Read More

ಕುಶಾಲನಗರ, NEWS DESK ಏ೩: ಹರದೂರು ಗ್ರಾಮ‌ ಪಂಚಾಯಿತಿ ವ್ಯಾಪ್ತಿಯ ಹರದೂರು – ಕಾಜೂರು ಉರೂಸ್ ಗೆ ಮಸ್ಜಿದುನ್ನೂರ್ ಮಸೀದಿಯ ಧರ್ಮಗುರುಗಳಾದ ಅಬ್ದುಲ್ ಹಕೀಂ ಅನ್ವಾರಿಯವರು ಶುಕ್ರವಾರದಂದು ಚಾಲನೆ ನೀಡಲಾಯಿತು. ಕಾಜೂರು ಉರೂಸ್ ಮಕಾಂ ನಲ್ಲಿ ಧ್ವಜಾರೋಹಣ ನೆರವೇರಿಸಿದ ಅವರು, ಉರೂಂ ಯಶಸ್ವಿಯಾಗಿ ನಡೆಯಲು ಪ್ರಾರ್ಥಿಸಿದರು. ಸ್ವಲಾತ್ ಕಮಿಟಿ ಅಧ್ಯಕ್ಷರಾದ ಸುಲೈಮಾನ್ ಸಖಾಫಿ ಮಾತನಾಡಿ, ಉರೂಸ್ ಗೆ ಶುಕ್ರವಾರ ಚಾಲನೆ ನೀಡಲಾಗಿದ್ದು, ಸೋಮವಾರದಂದು ಸಮಾರೋಪ ಸಮಾರಂಭ ನಡೆಯಲಿದೆ. ಎಲ್ಲರೂ ಉರೂಸ್ ನಲ್ಲಿ ಭಾಗವಹಿಸುವ ಮೂಲಕ ಉರೂಸನ್ನು ಯಶಸ್ವಿಗೊಳಿಸಬೇಕು ಎಂದರು. ಹರದೂರು ಗ್ರಾ‌ಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ಎ.ಮುಸ್ತಫಾ ಮಾತನಾಡಿ, ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಕಾಜೂರು ಮಕಾಂ ಉರೂಸ್ ಗೆ ಇಂದು ಚಾಲನೆ ನೀಡಲಾಗಿದೆ. ಉರೂಸ್ ಕೊಡಗಿನ ಎಲ್ಲಾ ಕಡೆಗಳಿಂದಲೂ ಜನರು ಪಾಲ್ಗೊಳ್ಳುತ್ತಾರೆ. ಹೆಚ್ಚಿನ ಸಂಖ್ಯೆಯಲ್ಲಿ‌ ಜನರು ಆಗಮಿಸಿ ಉರೂಸ್ ನ‌ ಯಶಸ್ವಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು. ಈ ಸಂದರ್ಭ ಮಸ್ಜಿದುನ್ನೂರು ಮುಸ್ಲಿಂ ಜಮಾಅತ್ ಕಮಿಟಿ‌ ಅಧ್ಯಕ್ಷರಾದ ಅಬ್ದುಲ್ಲಾ, ಕಾರ್ಯದರ್ಶಿ ಅಜ಼ೀಜ಼್, ಖಜಾಂಜಿ…

Read More

ಮಡಿಕೇರಿ NEWS DESK ಏ.3 : ಕೊಡಗಿನ ಅತ್ಯಂತ ಎತ್ತರದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ ತಂಡದಲ್ಲಿದ್ದ ಕೇರಳ ಮೂಲದ ಮಹಿಳೆೆಯೊಬ್ಬರು ನಾಪತ್ತೆಯಾಗಿದ್ದಾರೆ. ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿಗಳ ಒಟ್ಟು ನಾಲ್ಕು ತಂಡಗಳು ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿವೆ. ತಡಿಯಂಡಮೋಳ್ ಬೆಟ್ಟದ ತಪ್ಪಲಿನ ಯವಕಪಾಡಿ ಗ್ರಾಮದ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿ, ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಶರಣ್ಯ(36) ನಾಪತ್ತೆಯಾಗಿರುವ ಮಹಿಳೆಯಾಗಿದ್ದಾರೆ. ನಾಪೋಕ್ಲು ಸಮೀಪದ ಯವಕಪಾಡಿ ಕಕ್ಕಬ್ಬೆಯಿಂದ ಸುಮಾರು ಐದು ಕಿಲೋ ಮೀಟರ್ ದೂರ ಕಡಿದಾದ ಹಾದಿಯ ಚಾರಣ ನಡೆಸಿದಲ್ಲಿ, ತಡಿಯಂಡಮೋಳ್ ಶಿಖರವನ್ನು ತಲುಪಬಹುದು. ಗುರುವಾರ ಚಾರಣಕ್ಕೆ ಹೊರಟ ಶರಣ್ಯ ಅವರು ಒಬ್ಬಂಟಿಯಾಗಿದ್ದ ಹಿನ್ನೆಲೆಯಲ್ಲಿ, ಇತರೆ ಚಾರಣಿಗರ ಜೊತೆಗೆ ಕಳುಹಿಸಲಾಗಿತ್ತು ಎಂದು ತಿಳಿದು ಬಂದಿದೆ. ಚಾರಣ ತೆರಳಿದವರು ಮರಳಿ ಬಂದಿದ್ದರಾದರು, ಶರಣ್ಯ ಮಾತ್ರ ಹಿಂದಿರುಗಿರಲಿಲ್ಲ. ಈ ಬಗ್ಗೆ ಅಲ್ಲಿನ ಅರಣ್ಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ ಮೇರೆ, ಸ್ಥಳೀಯರು ಪೊಲೀಸರು ಹಾಗೂ ಗ್ರಾಮಸ್ಥರು ತಡಿಯಂಡಮೋಳ್ ಬೆಟ್ಟ ಪ್ರದೇಶದಲ್ಲಿ ಸಾಕಷ್ಟು ಹುಡುಕಾಟ ನಡೆಸಿದರಾದರು ಶರಣ್ಯ ಅವರ…

Read More

ಕುಶಾಲನಗರ, NEWS DESK  ಏ.03: ಪ್ರಕೃತಿ ಪರಿಸರಕ್ಕೆ ವಿರೋಧವಾಗಿ ವರ್ತಿಸಿದಲ್ಲಿ ಪ್ರಾಣಿ ಸಂಕುಲದ ಅವನತಿಗೆ ಆಹ್ವಾನ ನೀಡಿದಂತಾಗುತ್ತದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನಮಾಮಿ ಕಾವೇರಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ನಡೆದ 184ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು. ನಾಗಾಲೋಟದ ಅಭಿವೃದ್ಧಿ ನಡುವೆ ಪ್ರಕೃತಿ ಉಳಿಸಿ ನಾಡನ್ನು ಬೆಳೆಸುವ ಕೆಲಸ ಆಗಬೇಕು. ಅಭಿವೃದ್ಧಿ ಜೊತೆಗೆ ಪ್ರಕೃತಿ ಸಂರಕ್ಷಣೆ ಮಾಡುವ ಕಾರ್ಯ ನಿರಂತರವಾಗಿರಬೇಕು. ಪ್ರತಿಯೊಬ್ಬರೂ ಜಲಮೂಲಗಳ ಸಂರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ಸೋಮನಾಥನಂದ ಗಿರಿ ಸ್ವಾಮೀಜಿ ಮಾತನಾಡಿ ಪ್ರಸಕ್ತ ಕಾವೇರಿ ತನ್ನ ಒಡಲಲ್ಲಿ ಕಲುಷಿತವನ್ನು ಹೊತ್ತು ಹರಿಯುವ ದುಸ್ಥಿತಿಗೆ ಬರುವಂತಾಗಿದೆ. ಪ್ರತಿಯೊಬ್ಬರಲ್ಲಿ ನದಿ ಸಂರಕ್ಷಣೆಯ ಪರಿಜ್ಞಾನ ಇರಬೇಕು ಎಂದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಸುತ್ತೂರು ಕ್ಷೇತ್ರಗಳ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ…

Read More

ಮಡಿಕೇರಿ NEWS DESK ಏ.3 : ಕೊಡವ ಕುಟುಂಬಗಳ ನಡುವೆ ಆಯೋಜಿತ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ 2026’ ಕ್ಕೆ ವಿದ್ಯುಕ್ತ ಚಾಲನೆ ದೊರೆತ್ತಿದೆ. ಮೂರ್ನಾಡುವಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಚೆಪ್ಪುಡಿರ ಅರುಣ್ ಮಾಚಯ್ಯ, ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಕ್ರೀಡಾಕೂಟದ ಅಧ್ಯಕ್ಷ ಮುಕ್ಕಾಟಿರ ಸುರೇಶ್ ಪೆಮ್ಮಯ್ಯ ಮತ್ತಿತರ ಗಣ್ಯರು ಕೊಡವ ಕ್ರಿಕೆಟ್ ಅಸೋಷಿಯೇಷನ್ ನ ಧ್ವಜಾರೋಹಣ ನೆರವೇರಿಸಿದರು. ಅಸೋಸಿಯೇಷನ್ ಅಧ್ಯಕ್ಷ ಕೀತಿಯಂಡ ಕಾರ್ಸನ್ ಕಾರ್ಯಪ್ಪ ಅವರು ಬೆಳ್ಳಿಯ ಬ್ಯಾಟ್‌ನಿಂದ ಬಾಲ್ ಅನ್ನು ಹೊಡೆಯುವ ಮೂಲಕ ಪ್ರತಿಷ್ಠಿತ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆಗೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ ಅವರು ಕೇಂದ್ರ ಸರಕಾರ ಗುರುತು ಮಾಡಿರುವ ದೇಶದ 10 ಕ್ರೀಡಾ ಜಿಲ್ಲೆಗಳ ಪೈಕಿ…

Read More