ಮಡಿಕೇರಿ ಮಾ.3 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಗರದ ರಾಜಸೀಟು ಉದ್ಯಾನವನದಲ್ಲಿ ನಿರ್ಮಾಣವಾದ ಸಾಹಸ ಕ್ರೀಡೆಯನ್ನು ಶಾಸಕ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚು ರಂಜನ್ ವೀಕ್ಷಿಸಿದರು. ನಂತರ ಮಾತನಾಡಿದ ಶಾಸಕರಾದ ಕೆ.ಜಿ.ಬೋಪಯ್ಯ ಅವರು ರಾಜಸೀಟು ಆಕರ್ಷಣೀಯ ಸ್ಥಳವಾಗಿದೆ. ತೋಟಗಾರಿಕೆ ಮತ್ತು ಜಿಲ್ಲಾಡಳಿತದಿಂದ ಬೇರೆ ಬೇರೆ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದೊಂದು ವಿನೂತನ ಕಾರ್ಯಕ್ರಮವಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಸಾಹಸ ಕ್ರೀಡೆಗೆ ಚಾಲನೆ ನೀಡಲಾಗಿದೆ ಎಂದರು. ಮಾ.18 ರಂದು ಮಾನ್ಯ ಮುಖ್ಯಮಂತ್ರಿ ಅವರು ಗ್ರೇಟರ್ ರಾಜಸೀಟು ಉದ್ಯಾನವನ ಉದ್ಘಾಟಿಸಲಿದ್ದಾರೆ. ರಾಜಸೀಟು ಒಳ್ಳೆಯ ಪ್ರೇಕ್ಷಣೀಯ ಸ್ಥಳವಾಗಿದೆ ಎಂದರು. ಮುಂದಿನ ದಿನಗಳಲ್ಲಿ ಈ ರೀತಿಯ ಸಾಹಸ ಕ್ರೀಡೆಗೆ ಸಂಬಂಧಿಸಿದಂತೆ ಕೊಡಗಿನ ಅನೇಕ ಭಾಗಗಳಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು. ಈಗಾಗಲೇ ಕೊಡಗಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಿದ್ದು, ಪ್ರವಾಸಿಗರು ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾಹಸ ಕ್ರೀಡೆಗಳಂತಹ ಅಭಿವೃದ್ಧಿ ಯೋಜನೆಗಳು ಪ್ರವಾಸಿಗರನ್ನು ಆಕರ್ಷಿಸಲಿವೆ ಎಂದು ಅವರು ಹೇಳಿದರು. ಬಳಿಕ ನಗರದ ರಾಜಸೀಟು ಉದ್ಯಾನವನದಲ್ಲಿ ಖಾಸಗಿ…
ಲೇಖಕ: admin
ಮಡಿಕೇರಿ ಮಾ.3 : ಕೊಡವ ಕುಲಶಾಸ್ತ್ರ ಅಧ್ಯಯನಕ್ಕೆ ಸಂಬಂಧಿಸಿದಂತೆ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕೊಡವ ಭಾಷಿಕ ಜನಾಂಗದವರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿರುವ ಕೊಡವ ತಕ್ಕ್ ಜನಾಂಗಕಾರಡ ಒಕ್ಕೂಟದ ಅಧ್ಯಕ್ಷ ಕೆ.ಎಂ.ಸರ ಚಂಗಪ್ಪ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪುಟ್ಟ ಜಿಲ್ಲೆ ಕೊಡಗಿನಲ್ಲಿ ಎಲ್ಲಾ ಜಾತಿ ಜನಾಂಗದವರು ಪ್ರೀತಿ, ವಿಶ್ವಾಸದಿಂದ ಜೀವನ ಸಾಗಿಸುತ್ತಿದ್ದಾರೆ. ಪ್ರತಿಯೊಂದು ಜನಾಂಗಕ್ಕೂ ತಮ್ಮ ಹಕ್ಕನ್ನು ಪಡೆಯುವ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಕೊಡವ ಭಾಷಿಕ ಜನಾಂಗ ತನ್ನ ಹಕ್ಕನ್ನು ಪಡೆಯಲು ನಾಚಪ್ಪ ಅವರ ಅಪ್ಪಣೆ ಪಡೆಯಬೇಕಾಗಿಲ್ಲ ಎಂದರು. ಕೊಡವ ಭಾಷಿಕರ ಕುಲಶಾಸ್ತ್ರ ಅಧ್ಯಯನಕ್ಕಾಗಿ 2020 ರಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದ ಪರಿಣಾಮ ಇದೀಗ ಸ್ಪಂದನೆ ದೊರೆತ್ತಿದೆ. ಇತ್ತೀಚೆಗೆ ಸಮಾಜ ಕಲ್ಯಾಣ ಸಚಿವರು ಕುಲಶಾಸ್ತ್ರ ಅಧ್ಯಯನಕ್ಕಾಗಿ 25 ಲಕ್ಷ ರೂ.ಗಳನ್ನು ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ. ಈ ಬಗ್ಗೆ ತಪ್ಪು ಕಲ್ಪನೆ ಮಾಡಿಕೊಂಡಿರುವ ನಾಚಪ್ಪ ಅವರು ಕೊಡವ ಭಾಷಿಕರ ವಿರುದ್ಧ ಅವಹೇಳನ…
ಮಡಿಕೇರಿ ಮಾ.3 : ಮದೆನಾಡಿನ ಬಿ.ಜಿ.ಎಸ್. ವಿದ್ಯಾಸಂಸ್ಥೆಯ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಬಿ.ಜಿ.ಎಸ್. ಸಂಸ್ಥಾನದ ಮೈಸೂರು – ಕೊಡಗು ಶಾಖಾ ಮಠದ ಕಾರ್ಯದರ್ಶಿಗಳಾದ ಶ್ರೀ ಸೋಮನಾಥೇಶ್ವರ ಸ್ವಾಮೀಜಿಗಳು ಉದ್ಘಾಟಿಸಿ ಆಶೀರ್ವಚನ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಶಿಕ್ಷಣ ಕ್ಷೇತ್ರದಲ್ಲಿ ಬಿಜಿಎಸ್ ವಿದ್ಯಾ ಸಂಸ್ಥೆಯ ಕೊಡುಗೆಯನ್ನು ಸ್ಮರಿಸಿದರು. ಜಿಲ್ಲಾಧಿಕಾರಿಗಳಾದ ಡಾ. ಬಿ.ಸಿ.ಸತೀಶ್, ತಮ್ಮ ಕುಟುಂಬಕ್ಕೂ ಮತ್ತು ಬಿಜಿಎಸ್ ವಿದ್ಯಾ ಸಂಸ್ಥೆಗೂ ಇರುವ ಅವಿನಾಭಾವ ಸಂಬಂಧವನ್ನು ನೆನಪಿಸಿಕೊಂಡರು. ಮದೆ ಮಹೇಶ್ವರ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಪ್ರಮುಖರಾದ ಹುದೇರಿ ರಾಜೇಂದ್ರ ಅವರು ಮಾತನಾಡುತ್ತಾ, ವಿದ್ಯಾಸಂಸ್ಥೆಯನ್ನು ಗ್ರಾಮಸ್ಥರು ಸೇರಿ ಕಟ್ಟಿ ಬೆಳೆಸಿದ ದಿನಗಳನ್ನು ಮೆಲುಕು ಹಾಕಿದರು. ನಿವೃತ್ತ ಪ್ರಾಂಶುಪಾಲ ಬಿ.ಅರ್ ಜೋಯಪ್ಪ, ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಮದೆ ಮಹೇಶ್ವರ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಮದೆ ಮಹೇಶ್ವರ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪ್ರಮುಖರಾದ ಪಟ್ಟಡ ಲೋಭಯ್ಯ, ಬಿ.ಸಿ.ಚೆನ್ನಪ್ಪ, ಹುಲಿಮನೆ ರಾಮಯ್ಯ, ವಿದ್ಯಾಸಂಸ್ಥೆಯ ಸ್ಥಳ ದಾನಿಗಳ…
ಶನಿವಾರಸಂತೆ ಮಾ.3 : ಆಕಸ್ಮಿಕವಾಗಿ ಕಾಫಿ ತೋಟಕ್ಕೆ ಬೆಂಕಿ ಬಿದ್ದು ಫಸಲು ನಾಶವಾಗಿರುವ ಘಟನೆ ನಿಡ್ತ ಗ್ರಾ.ಪಂ ವ್ಯಾಪ್ತಿಯ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಎಚ್.ವಿ.ದಿವಾಕರ್ ಎಂಬುವರಿಗೆ ಸೇರಿದ ಕಾಫಿ ತೋಟಕ್ಕೆ ಪಕ್ಕದ ಸಾರ್ವಜನಿಕ ಸ್ಮಶಾನದಿಂದ ಆಕಸ್ಮಿಕವಾಗಿ ಬೆಂಕಿ ಹರಡಿದ್ದು, ಸುಮಾರು 2 ಎಕರೆ ಕಾಫಿ ತೋಟ ಬೆಂಕಿಗೆ ಆಹುತಿಯಾಗಿ ಕಾಫಿ ಗಿಡಗಳು, ಕಾಳು ಮೇಣಸು ಬಳ್ಳಿಗಳು ನಾಶವಾಗಿ ಲಕ್ಷಂತರ ರೂ. ಮೌಲ್ಯ ಫಸಲು ನಾಶವಾಗಿದೆ. ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಬೆಂಕಿನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು. ವರದಿ : ದಿನೇಶ್ ಮಾಲಂಬಿ (ಶನಿವಾರಸಂತೆ)
ಮಡಿಕೇರಿ ಮಾ.3 : ಕೊಡವರ ಹೆಸರಿನಲ್ಲಿ ಕೊಡವರಲ್ಲದವರ ಅಧ್ಯಯನ ನಡೆಯುತ್ತಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕೊಡವ ಭಾಷಿಕ 18 ಮೂಲನಿವಾಸಿ ಸಮುದಾಯಗಳ ವಿರುದ್ಧ ತೀರಾ ಅಪ್ರಬುದ್ಧ ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆಯನ್ನು ಹಿಂಪಡೆಯದಿದ್ದಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ಭಾಷೆ, ಸಂಸ್ಕೃತಿಯ ಉಳಿವಿಗಾಗಿ ಬದುಕನ್ನೇ ಮುಡುಪಾಗಿಟ್ಟುಕೊಂಡು ಮುನ್ನಡೆಯುತ್ತಿರುವ 18 ಕೊಡವ ಭಾಷಿಕ ಮೂಲ ನಿವಾಸಿ ಜನಾಂಗದವರ ಬಗ್ಗೆ ತುಚ್ಚವಾಗಿ ಅಸವಿಂಧಾನಿಕ ಹೇಳಿಕೆ ನೀಡಿರುವುದನ್ನು ಖಂಡಿಸುವುದಾಗಿ ತಿಳಿಸಿದ್ದಾರೆ. ಫೆ.19ರಂದು ಬಿಟ್ಟಂಗಾಲ ಹೆಗ್ಗಡೆ ಸಮಾಜದಲ್ಲಿ ನಡೆದ ಕೊಡವ ಭಾಷಿಕ 18 ಮೂಲನಿವಾಸಿ ಸಮುದಾಯಗಳ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರು 18 ಸಮುದಾಯ ಮೂಲ ನಿವಾಸಿಗಳ ಕುಲಶಾಸ್ತ್ರ ಅಧ್ಯಯನ ಮಾಡಿಸಲಾಗುವುದು. ಜನಾಂಗ ಬಾಂಧವರ ಹಿಂದಿನ ಕಾಲಘಟ್ಟದ ಐನ್‍ಮನೆ, ಮುಂದುಮನೆ, ಕೈಮಡ ನವೀಕರಣಕ್ಕೆ ರೂ. 5 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗುವುದೆಂದು ಘೋಷಿಸಿದ್ದರು.…
ಮಡಿಕೇರಿ ಮಾ.2 : ಕುಶಾಲನಗರದ ಪಾಲಿಟೆಕ್ನಿಕಲ್ ಕಾಲೇಜಿನ ವಿದ್ಯಾರ್ಥಿಗಳು ಕಲಿಕೆಯ ಭಾಗವಾಗಿ ಗುಡ್ಡೆ ಹೊಸೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಘನ ದ್ರವ ತ್ಯಾಜ್ಯ ನಿರ್ವಹಣೆಯ ಕುರಿತು ಜಾಗೃತಿ ಮೂಡಿಸಿದರು. ಗ್ರಾ.ಪಂ. ವ್ಯಾಪ್ತಿಯ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು.
ಮಡಿಕೇರಿ ಮಾ.3 : ಗಾಂಧಿ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ.ಗಳನ್ನು ಮಂಜೂರು ಮಾಡಿದ್ದು, ಜಿಲ್ಲಾಡಳಿತದ ಮೂಲಕ ನಡೆಯಲಿರುವ ಕಾಮಗಾರಿಗೆ ಕೊಡಗು ಜಿಲ್ಲಾ ಸರ್ವೋದಯ ಸಮಿತಿ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಸರ್ವೋದಯ ಸಮಿತಿಯ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಹಾತ್ಮಗಾಂಧಿ ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ನೀಡುವಂತೆ ಮನವಿ ಮಾಡಿತ್ತು. ಮೊದಲ ಹಂತದಲ್ಲಿ 50 ಲಕ್ಷ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದು, ಇದೀಗ ಅನುದಾನ ಮಂಜೂರು ಮಾಡಲಾಗಿದೆ ಎಂದರು. ಮಡಿಕೇರಿಯ ಖಜಾನೆಯಲ್ಲಿ ಇಡಲಾಗುತ್ತಿರುವ ಗಾಂಧೀಜಿ ಅವರ ಚಿತಾಭಸ್ಮಕ್ಕೆ ಶಾಶ್ವತ ನೆಲೆ ಕಲ್ಪಿಸಬೇಕು ಮತ್ತು ಪ್ರವಾಸಿಗರಿಗೆ ಗಾಂಧಿ ಚರಿತ್ರೆ ಪರಿಚಯಿಸಬೇಕು ಎನ್ನುವ ಉದ್ದೇಶದೊಂದಿಗೆ ದಶಕದ ಹಿಂದೆ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿದ್ದ ಬಲದೇವಕೃಷ್ಣ ಅವರು ಸ್ಮಾರಕ ನಿರ್ಮಾಣದ ಯೋಜನೆಯೊಂದನ್ನು ರೂಪಿಸಿದರು. ಆದರೆ ಅನುದಾನ ದೊರೆಯದೆ ಯೋಜನೆ ನೆನೆಗುದಿಗೆ ಬಿದ್ದಿತ್ತು.…
ಮಡಿಕೇರಿ ಮಾ.3 : ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆ ಜನಾಭಿಪ್ರಾಯ ಪಡೆದು ಪ್ರಣಾಳಿಕೆ ತಯಾರಿಸಲು ಬಿಜೆಪಿ ಮುಂದಾಗಿದ್ದು, ಜಿಲ್ಲೆಯಾದ್ಯಂತ ಒಂದು ತಿಂಗಳ ಕಾಲ ಅಭಿಯಾನ ನಡೆಯಲಿದೆ ಎಂದು ಪ್ರಣಾಳಿಕಾ ಸಲಹಾ ಸಂಗ್ರಹ ಸಮಿತಿಯ ಸಹ ಸಂಚಾಲಕ ಡಾ.ಬಿ.ಸಿ.ನವೀನ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಜನಪರವಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಈ ಬಾರಿಯ ಚುನಾವಣೆಯಲ್ಲಿ ಜನರ ಸಲಹೆ ಪಡೆದು ಪ್ರಣಾಳಿಕೆ ತಯಾರಿಸಲಾಗುವುದು ಎಂದರು. ಶಾಸಕರು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರ ಮಾರ್ಗದರ್ಶನದಲ್ಲಿ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 25 ಸಲಹಾ ಪೆಟ್ಟಿಗೆಗಳನ್ನಿರಿಸಿ, 5 ಸಾವಿರಕ್ಕಿಂತ ಹೆಚ್ಚು ಮಂದಿಯ ಸಲಹೆಗಳನ್ನು ಸಂಗ್ರಹ ಮಾಡಲಾಗುವುದು. ಮತದಾರರ ಆಕಾಂಕ್ಷೆಗಳಿಗೆ ಅನುಗುಣವಾಗಿ ಪ್ರಣಾಳಿಕೆ ತಯಾರಾಗಲಿದೆ ಎಂದು ತಿಳಿಸಿದರು. ಒಂದು ಜಿಲ್ಲೆಯಲ್ಲಿ 11 ತಂಡಗಳಿದ್ದು, ಜಿಲ್ಲೆ ಮತ್ತು ರಾಜ್ಯದ 50 ಸ್ಥಳಗಳಲ್ಲಿ ವಿವಿಧ ಸಮುದಾಯಗಳ ಕೇಂದ್ರೀಕೃತ ಸಭೆ ನಡೆಸಲಾಗುವುದು. ಅಲ್ಲದೆ ಸಾಮಾಜಿಕ ಜಾಲತಾಣ, ಕಾಲೇಜು, ಅಂಗಡಿ, ಮುಂಗಟ್ಟುಗಳು, ಸಂಘ-ಸಂಸ್ಥೆ ಸೇರಿದಂತೆ ಹೆಚ್ಚು ಜನ…
ಮಡಿಕೇರಿ ಮಾ.3 : ಅಕ್ರಮ ಬಾಂಗ್ಲಾ ವಲಸಿಗ ಕಾರ್ಮಿಕರು ಕೊಡಗು ಜಿಲ್ಲೆಯಲ್ಲಿ ನಡೆಸುತ್ತಿರುವ ಅಪರಾಧ ಪ್ರಕರಣಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ವಲಸಿಗರನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕೊಡಗು ಸುರಕ್ಷಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ವಲಸೆ ಕಾರ್ಮಿಕರ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದರು. ಹಿಂದೂ ಜಾಗರಣ ಯುವ ಘಟಕ, ಹಿಂದು ಯುವ ವಾಹಿನಿಯ ಜಿಲ್ಲಾ ಸಂಚಾಲಕ ವಿನಯ್ ಮಾತನಾಡಿ, ಅಕ್ರಮ ಬಾಂಗ್ಲಾ ಮೂಲದ ವಲಸಿಗರು ಭಾರತದ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಕೆಲಸ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವು ಅಪರಾಧ ಪ್ರಕರಣಗಳಲ್ಲಿ ಇವರುಗಳ ಪಾತ್ರ ಎದ್ದು ಕಾಣುತ್ತಿದ್ದು, ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು. ಅಧಿಕಾರಿಗಳು ಅಕ್ರಮ ವಲಸಿಗರ ಮೇಲೆ ನಿಗಾ ಇಡಬೇಕು ಮತ್ತು ಅವರ ಬಳಿ ಇರುವ ದಾಖಲೆಗಳನ್ನು ಪರಿಶೀಲಿಸಿ ಅಸಲಿಯೇ…
ಚೆಯ್ಯಂಡಾಣೆ ಮಾ.3 : ಕೊಡಗು ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ವತಿಯಿಂದ ನರಿಯಂದಡ ಗ್ರಾ.ಪಂ ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು. ಚೆಯ್ಯಂಡಾಣೆ ಲಕ್ಷ್ಮಿ ಮಹಿಳಾ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಅಧಿಕಾರಿ ನಾರಾಯಣ ರೆಡ್ಡಿ ಎರೆಹುಳು ಗೊಬ್ಬರ ಉತ್ಪಾದನೆ ಮತ್ತು ಬಳಕೆ, ಸಾವಯವ ಗೊಬ್ಬರ ಮತ್ತು ಅವುಗಳ ಮಹತ್ವ, ಹಸಿರಲೆ ಗೊಬ್ಬರಗಳ ಬಳಕೆ, ಕೊಡಗು ಜಿಲ್ಲೆಗೆ ಸೂಕ್ತವಾದ ಭತ್ತದ ತಳಿಗಳು ಮತ್ತು ಭತ್ತದ ಬೀಜೋಪಚಾರಗಳು, ಅಜೋಲದಿಂದ ಸಾವಯವ ಕೃಷಿಕರಿಗೆ ವರದಾನ, ಪೌಷ್ಟಿಕ ಬೆಳೆ ವಿಮೆ ಸಂರಕ್ಷಣೆ, ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಶಿಷ್ಯವೇತನ ಪಡೆಯುವ ಬಗ್ಗೆ ಹಾಗೂ ಇನ್ನಿತರ ಹಲವು ಮಾಹಿತಿಗಳನ್ನು ನೀಡಿದರು. ಈ ಸಂದರ್ಭ ಗ್ರಾ.ಪಂ ಉಪಾಧ್ಯಕ್ಷೆ ಬಿ.ಎಸ್.ಪುಷ್ಪ, ಸದಸ್ಯರಾದ ಮುಂಡಿಯೋಳಂಡ ಈರಪ್ಪ, ಪೆಮ್ಮಂಡ ಕಾವೇರಮ್ಮ, ಸಂಜೀವಿನಿ ಒಕ್ಕೂಟದ ಬಿ.ಕೆ.ವಸಂತಿ, ಕೃಷಿ ಸಖಿ, ಪಶು ಸಖಿ, ಗ್ರಾಮಸ್ಥರು ಹಾಜರಿದ್ದರು. ವರದಿ : ಅಶ್ರಫ್






