ಲೇಖಕ: admin

ಮಡಿಕೇರಿ ಮಾ.29 :  ವಿರಾಜಪೇಟೆ – ಚೆoಬೆಬೆಳ್ಳೂರು – ಒಂಟಿಯಾoಗಡಿ ಲೋಕೋಪಯೋಗಿ ರಸ್ತೆಯ ಅಗಲೀಕರಣ ಮತ್ತು ಡಾಂಬರಿಕಾರಣಕ್ಕೆ ರೂ.2 ಕೋಟಿ ಮಂಜೂರಾಗಿದ್ದು,  ಶಾಸಕ ಕೆ.ಜಿ.ಬೋಪಯ್ಯ ಕಾಮಗಾರಿಗೆ  ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ವಿಧಾನಪರಿಷತ್ ಸದಸ್ಯ  ಸುಜಾ ಕುಶಾಲಪ್ಪ, ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

Read More

ಮಡಿಕೇರಿ ಮಾ.29 : ಗೋಣಿಕೊಪ್ಪದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಸರಕಾರದಿಂದ ರೂ.5 ಕೋಟಿ ಅನುದಾನ  ಮಂಜೂರಾಗಿದ್ದು.  ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಈ ಸಂದರ್ಭ  ಗ್ರಾ.ಪಂ ಸದಸ್ಯರು ಮತ್ತು ಸ್ಥಳೀಯರು  ಹಾಜರಿದ್ದರು.

Read More

ಮಡಿಕೇರಿ ಮಾ.29 :  ಪೊನ್ನಂಪೇಟೆ ಕೃಷ್ಣ ಕಾಲೋನಿಯಲ್ಲಿ ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಇದೇ ಸಂದರ್ಭ ಕನ್ನಂಬಾಡಿ ಅಮ್ಮ ದೇವಸ್ಥಾನದ ತಡೆಗೋಡೆ ಕಾಮಗಾರಿಗೆ  ಶಂಕುಸ್ಥಾಪನೆ ನೆರವೇರಿಸಲಾಯಿತು. 

Read More

ಮಡಿಕೇರಿ ಮಾ.29 :  ಅಯ್ಯಂಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ರೂ 5.50 ಕೋಟಿ ಅನುದಾನದಲ್ಲಿ ರಸ್ತೆ, ಸೇತುವೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭ ಪೂರ್ಣಗೊಂಡ ಕಾಮಗಾರಿಗಳನ್ನು ಉದ್ಘಾಟಿಸಿದರು. ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

Read More

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ, ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ಮತ್ತು ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ನಮ್ಮ ಪ್ರಯತ್ನ. ಕರ್ನಾಟಕದಲ್ಲಿ ಪುರುಷ ಮತದಾರರು 2,62,42,561 ಇದ್ದು, 2,59,26,319 ಮಹಿಳಾ ಮತದಾರರು ಇದ್ದಾರೆ. ಇನ್ನು ಕರ್ನಾಟಕದಲ್ಲಿ 4,699 ತೃತೀಯ ಲಿಂಗಿಗಳು ಮತದಾರರು ಇದ್ದು, 12.15 ಲಕ್ಷ ಯುವ ಮತದಾರರು ಇದ್ದಾರೆ. ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಮಾಹಿತಿ ನೀಡಿದರು. ಇದೇ…

Read More

ನಾಪೋಕ್ಲು ಮಾ.29 : ಸಾವಿರಾರು ವರ್ಷಗಳ ದಾಳಿಯ ನಂತರವೂ ಹಿಂದೂ ಧರ್ಮ ಉಳಿದಿರುವುದು ಒಬ್ಬೊಬ್ಬ ಮಹಾಪುರುಷನ ಆದರ್ಶದಿಂದಾಗಿ. ಆ ಆದರ್ಶ ಸಾಮಾನ್ಯ ಹಿಂದುವಿನ ಹೃದಯದಲ್ಲಿ ಹುಟ್ಟಿ ಬರುತ್ತಿರುವುದರಿಂದ ಸಮಾಜ ಗಟ್ಟಿಯಾಗಿದೆ ಎಂದು ವಾಗ್ಮಿ ಚೈತ್ರ ಕುಂದಾಪುರ ಹೇಳಿದರು. ಯುಗಾದಿ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಆಯೋಜಿಸಲಾಗಿದ್ದ ಹಿಂದೂ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಮತ್ತು ಹಗ್ಗ ಜಗ್ಗಾಟ ಕ್ರೀಡಾಕೂಟದ ಸಮಾರೋಪ ಸಮಾರಂಭ ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡಿದ ಅವರು ಬಜರಂಗದಳದ ಸಂಘಟನೆ ಎಂದರೆ ಬದುಕಿನ ಉಸಿರು. ಬಜರಂಗದಳದ ಕಾರ್ಯಕರ್ತರು ಧರ್ಮ ರಕ್ಷಣೆಗಾಗಿ ಪ್ರಾಣ ಕೊಡುವ ಬದ್ದತೆಯನ್ನು ಹೊಂದಿರುತ್ತಾರೆ ತೋರಿಕೆಗಾಗಿ, ನಾಯಕ ಎನಿಸಿಕೊಳ್ಳುವುದಕ್ಕಾಗಿ, ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿ ಅವರು ಕಾರ್ಯಕರ್ತರಾಗುವುದಿಲ್ಲ ಬಜರಂಗದಳಕ್ಕೆ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ದೇಶ ಪ್ರೇಮಿಯನಾಗಿಸುವ ಬದ್ಧತೆ ಇರುತ್ತದೆ ಎಂದರು. ಈ ಸಂದರ್ಭ ವೇದಿಕೆಯಲ್ಲಿ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಕೃಷ್ಣಮೂರ್ತಿ, ಕಾರ್ಯದರ್ಶಿ ಪುದಿಯೊಕ್ಕಡ ರಮೇಶ್, ಮುಖಂಡ ಕಲಿಯಂಡ ವಿಠಲ, ಜಗದೀಶ್ ರೈ, ಸಂಪರ್ಕ ಪ್ರಮುಖ್…

Read More

ಮಡಿಕೇರಿ ಮಾ.28 : ಹಿಂದುಳಿದ ವರ್ಗಗಳ ಪ್ರವರ್ಗ 3ಎ ಗೆ ಸೀಮಿತವಾಗಿ ರಚಿಸಲಾಗಿರುವ ‘ಕೊಡವ ಅಭಿವೃದ್ಧಿ ನಿಗಮ’ಕ್ಕೆ ಕನಿಷ್ಠ 250 ಕೋಟಿ ರೂ.ಗಳನ್ನು ಒದಗಿಸುವ ಮೂಲಕ ಕರ್ನಾಟಕ ರಾಜ್ಯ ಸರ್ಕಾರ ಕೊಡವ ಸಮುದಾಯದ ಸರ್ವಾಂಗೀಣ ಪ್ರಗತಿಗೆ ಇಂಬು ನೀಡಬೇಕೆಂದು ಯುನೈಟೆಡ್ ಕೊಡವ ಆರ್ಗನೈಸೇಷನ್ ಟ್ರಸ್ಟ್ ಅಧ್ಯಕ್ಷರಾದ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಡಗು’ ಕರ್ನಾಟಕದೊಂದಿಗೆ ವಿಲೀನವಾದ ಬಳಿಕ ಕರ್ನಾಟಕ ರಾಜ್ಯ ಸರ್ಕಾರ ಜಿಲ್ಲೆಯ ವಿಶಿಷ್ಟ ಸಂಸ್ಕೃತಿಯ ಕೊಡವ ಸಮುದಾಯಯಕ್ಕೆ ನೀಡಿದ ಮಹತ್ವದ ಕೊಡುಗೆ ಕೊಡವ ಅಭಿವ್ರೃದ್ಧಿ ನಿಗಮವೆಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ನಿಗಮ ಕೊಡವ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಲು ಹೆಚ್ಚಿನ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಎಲ್ಲಾ ಗೌರವವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲುತ್ತದೆ. ಇದೀಗ ಚುನಾವಣೆ ಸಮೀಪಿಸುತ್ತಿದ್ದು, ಮುಂದಿನ ಸರ್ಕಾರವನ್ನು ಯಾರು ಬೇಕಾದರು ರಚಿಸಬಹುದು. ಆದರೆ, ಆಡಳಿತಕ್ಕೆ ಬರುವ ಸರ್ಕಾರ ಕೊಡವ…

Read More

ಮಡಿಕೇರಿ ಮಾ.28 : ಜನ ಕಲ್ಯಾಣಕ್ಕಾಗಿ ಹತ್ತು ಹಲ ಕಾರ್ಯಕ್ರಮಗಳನ್ನು ರೂಪಿಸುವ ಸರ್ಕಾರ, ಇವುಗಳ ಅನುಷ್ಠಾನಕ್ಕೆ ಪೂರಕವಾಗಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.60 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ-ಎಸ್‌ಟಿ ನೌಕರರ ಸಮನ್ವಯ ಸಮಿತಿಯ ಕೇಂದ್ರ ಸಮಿತಿಯ ರಾಜ್ಯಾಧ್ಯಕ್ಷ ಡಿ.ಶಿವಶಂಕರ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಇಲಾಖೆಗಳಲ್ಲಿ ಮಂಜೂರಾತಿಯ 7.73 ಲಕ್ಷ ಹುದ್ದೆಗಳಿವೆ. ಇದರಲ್ಲಿ 5.20 ಲಕ್ಷ ಹುದ್ದೆಗಳು ಭರ್ತಿಯಾಗಿವೆ. ಸುಮಾರು 80 ಸಾವಿರ ಪರಿಶಿಷ್ಟ ಜಾತಿಗೆ ಸೇರಿದವರು ಮತ್ತು 25 ಸಾವಿರ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಮುಖವಾಗಿ ಸರ್ಕಾರದ ಯೋಜನೆಗಳ ಅನುಷ್ಟಾನ ಕಾರ್ಯಕ್ಕೆ ಇವರುಗಳ ಅಗತ್ಯತೆ ಹೆಚ್ಚಾಗಿದೆ. ಹೀಗಿದ್ದೂ, ಪ್ರಸ್ತುತ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆಯೇ ಹೊರತು, ಅವುಗಳ ಅನುಷ್ಟಾನಕ್ಕೆ ಪೂರಕವಾಗಿ ಖಾಲಿ ಹುದ್ದೆಗಳ ಭರ್ತಿಯಾಗುತ್ತಿಲ್ಲವೆಂದು ಟೀಕಿಸಿದರು. ರಾಜ್ಯದ ವಿವಿಧ ಇಲಾಖೆಗಳಲ್ಲಿ 2001 ರಿಂದಲೇ 20 ಸಾವಿರಕ್ಕೂ ಹೆಚ್ಚಿನ ‘ಬ್ಯಾಕ್ ಲಾಗ್’ ಹುದ್ದೆಗಳು ಭರ್ತಿಯಾಗದೆ ಹಾಗೆಯೇ…

Read More

ನಾಪೋಕ್ಲು ಮಾ.28 : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಮೂವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೈಕಾಡು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಸ್ಸಾಂ ಮೂಲದ ಸೈಫುಲ್ ಇಸ್ಲಾಂ (27)ಅನಾರ್ ಹುಸೈನ್ (37) ಜಹೀರ್ ಅಲಿ (28) ಎಂಬ ಮೂವರು ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ಸುಮಾರು 2.150ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.  ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಾಮರಾಜನ್ ಮತ್ತು ಹೆಚ್ಚುವರಿ ಪೊಲೀಸ್ ಉಪ ಅಧೀಕ್ಷರಾದ ಸುಂದರ್ ರಾಜ್ ನಿರ್ದೇಶನದಂತೆ ಡಿವೈಎಸ್ಪಿ ಜಗದೀಶ್, ವೃತ ನಿರೀಕ್ಷಕ ಶೇಖರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಸಿಬ್ಬಂದಿಗಳಾದ ಕೆ.ಎಂ. ಅಬ್ದುಲ್ ಶಮೀಲ್, ಶಿವಪ್ರಸಾದ್,ಹರ್ಷ, ಪ್ರಸನ್ನ, ಮಧುಸೂದನ್,ಎಚ್. ಸಿ.ಕಾಳೆಯಪ್ಪ, ಪಂಚಲಿಂಗಪ್ಪ ಸತ್ತಿಗೇರಿ, ಮಹದೇವ ನಾಯಕ, ನವೀನ್, ಶರತ್, ಮಹೇಶ್, ರಾಮಕೃಷ್ಣ, ರವಿಕುಮಾರ್, ಗಿರೀಶ್, ವೆಂಕಟೇಶ್, ಲವಕುಮಾರ್,ಚಾಲಕ ಷರೀಫ್ ಪಾಲ್ಗೊಂಡಿದ್ದರು.…

Read More

ಮಡಿಕೇರಿ ಮಾ.28 : ಪಾನ್ ಕಾರ್ಡ್ ಗೆ  ಆಧಾರ್ ಲಿಂಕ್ ಮಾಡುವ ಸರ್ಕಾರದ ಕ್ರಮ ಸ್ವಾಗತಾರ್ಹ. ಆದರೆ ಬಡವರಿಗೆ ಹೊರೆಯಾಗಿರುವ ದುಬಾರಿ ದಂಡ ವಸೂಲಾತಿಯನ್ನು ತಕ್ಷಣ ನಿಲ್ಲಿಸಬೇಕೆಂದು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಹೊಟ್ಟೆಯಂಡ ಫ್ಯಾನ್ಸಿ ಬೆಳ್ಯಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪಾನ್, ಆಧಾರ್ ಲಿಂಕ್ ಕುರಿತು ವ್ಯಾಪಕ ಪ್ರಚಾರ ನೀಡದ ಸರ್ಕಾರ ಇದೀಗ ಬಡವರು, ಕೂಲಿ ಕಾರ್ಮಿಕರು, ಆಟೋಚಾಲಕರು, ಅನಕ್ಷರಸ್ಥರು, ಜನಸಾಮಾನ್ಯರಿಗೆ ಹೊರೆಯಾಗಬಲ್ಲ ರೂ.1 ಸಾವಿರ ದಂಡ ವಿಧಿಸುತ್ತಿರುವುದು ಖಂಡನೀಯವೆoದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಪಾನ್, ಆಧಾರ್ ಲಿಂಕ್ ನೆಪದಲ್ಲಿ ಹಣ ಸಂಗ್ರಹಿಸಲಾಗುತ್ತಿದೆ. ಬಡವರು ದಂಡ ಪಾವತಿಗಾಗಿಯೇ ಸಾಲ ಮಾಡುವ ಪರಿಸ್ಥಿತಿ ಎದುರಾಗಿದೆ. ಒಂದು ಬಡ ಕುಟುಂಬದಲ್ಲಿ 5 ರಿಂದ 10 ಮಂದಿ ಇರುತ್ತಾರೆ. ಒಬ್ಬರು ಅಥವಾ ಇಬ್ಬರು ಮಾತ್ರ ದುಡಿಯುತ್ತಿರುತ್ತಾರೆ. ಇವರೆಲ್ಲರೂ ತಲಾ ಒಂದು ಸಾವಿರ ದಂಡ ಪಾವತಿಸಬೇಕೆಂದರೆ ಹೇಗೆ…

Read More