ಲೇಖಕ: admin

ಮಡಿಕೇರಿ ಮಾ.28 : ಕುಂಬಾರ ವೃತ್ತಿಯನ್ನೇ ನಂಬಿ ಜೀವನ ಸಾಗಿಸುತ್ತಿರುವ ಕುಂಬಾರ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕುಂಬಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದ ಅಧ್ಯಕ್ಷ ಎಂ.ಡಿ.ನಾಣಯ್ಯ ತಿಳಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕುಂಬಾರ ಅಭಿವೃದ್ಧಿ ನಿಗಮಕ್ಕಾಗಿ ಕುಂಬಾರ ಸಮುದಾಯದ ಮುಖಂಡರು ಹೋರಾಟವನ್ನು ತೀವ್ರಗೊಳಿಸಿದ್ದರು. ಇದಕ್ಕೆ ಮಣಿದ ರಾಜ್ಯ ಸರ್ಕಾರ ನಿಗಮ ಸ್ಥಾಪಿಸುವ ಮೂಲಕ ಕುಂಬಾರರ ಅಭ್ಯುದಯಕ್ಕೆ ಸಹಕಾರ ನೀಡಿದೆ. ಜಿಲ್ಲೆಯಲ್ಲಿರುವ ಸಮುದಾಯದ ಪರವಾಗಿ ಹೋರಾಟಗಾರರು ಹಾಗೂ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ. ನಿಗಮವು ಕುಂಬಾರ, ಚಕ್ರಸಾಲಿ, ಕುಲಾಲ ಸೇರಿದಂತೆ ಇನ್ನಿತರ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಲಿದೆ. ರಾಜ್ಯದಲ್ಲಿ ಕುಂಬಾರ ಸಮುದಾಯ ಸುಮಾರು 28 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಇದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಹಿಂದುಳಿದ ಹಾಗೂ ಶೋಷಿತ ಸಮುದಾಯವಾಗಿದೆ. ಕುಂಬಾರ ವೃತ್ತಿಯನ್ನೇ ನಂಬಿಕೊoಡಿರುವ ಈ ಸಮುದಾಯದ ಮಂದಿ ಹೊಟ್ಟೆಪಾಡಿಗಾಗಿ…

Read More

ಮಡಿಕೇರಿ ಮಾ.28 : ನಾನು ಶಾಸಕನಾಗಿ ಗೆದ್ದು ಬಂದರೆ ಕೊಡಗು ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸ್ಥಾಪನೆಗೆ ಅವಿರತ ಶ್ರಮ ಪಡುವುದಾಗಿ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಭರವಸೆ ನೀಡಿದ್ದಾರೆ. ಕ್ಯಾಂಪ್ ನಿಶಾನಿ ಸಭಾಂಗಣದಲ್ಲಿ ನಡೆದ ಭಾಗಮಂಡಲ ವಲಯ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಭ್ರಷ್ಟಾಚಾರ ಮುಕ್ತ ಆಡಳಿತ ತಮ್ಮ ಮೊದಲ ಆದ್ಯತೆ ಎಂದರು. ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತರುವುದು ನನ್ನ ಗುರಿಯಾಗಿದೆ. ಎಲ್ಲಾ ರಸ್ತೆಗಳ ಅಭಿವೃದ್ಧಿ, ಪ್ರತಿಯೊಂದು ಕುಟುಂಬಕ್ಕೂ ಕುಡಿಯುವ ನೀರು, ಬಡ ಕುಟುಂಬಗಳಿಗೆ ನಿವೇಶನ, ಊರಿನ ಆಟದ ಮೈದಾನಗಳು ಮತ್ತು ಕ್ರೀಡಾಂಗಣಗಳ ಅಭಿವೃದ್ಧಿ, ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ, ಭ್ರಷ್ಟಾಚಾರದ ನಿರ್ಮೂಲನೆಗೆ ಕ್ರಮ, ವನ್ಯಜೀವಿ- ಮಾನವ ಸಂಘರ್ಷ ತಡೆಗೆ ಪರಿಹಾರ ಸೇರಿದಂತೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ದೇವಂಗೋಡಿ ಹರ್ಷ ಅವರ ಅಧ್ಯಕ್ಷತೆಯಲ್ಲಿ ನಡೆದ…

Read More

ಕುಶಾಲನಗರ ಮಾ.28 :  ಉನ್ನತ ಗುಣಮಟ್ಟದ ಶಿಕ್ಷಣವನ್ನು  ಪ್ರತಿಯೊಬ್ಬರಿಗೆ ನೀಡುವ ಉದ್ದೇಶದೊಂದಿಗೆ ರಾಜ್ಯದಲ್ಲಿ 9 ನೂತನ ವಿಶ್ವವಿದ್ಯಾಲಯಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಬೆಂಗಳೂರಿನ ಜ್ಞಾನ ಜ್ಯೊತಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನೂತನ ವಿಶ್ವವಿದ್ಯಾಯಾಲಯಗಳಿಗೆ ಅಧಿಕೃತ ಚಾಲನೆ ನೀಡಿ ಮಾತನಾಡಿದರು. ಅಭಿವೃದ್ಧಿ ಮತ್ತು ಕೌಶಲ್ಯ ಆಧಾರಿತ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಹೆಚ್ಚುವರಿ ವಿಶ್ವ ವಿದ್ಯಾಲಯಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಮಾತನಾಡಿದ ಉನ್ನತ ಶಿಕ್ಷಣ ಸಚಿವ  ಡಾ. ಸಿಎನ್ ಅಶ್ವಥ್ ನಾರಾಯಣ್ , ಪ್ರತಿ ಜಿಲ್ಲೆಗೊಂದು ವಿಶ್ವ ವಿದ್ಯಾಲಯ ಸ್ಥಾಪನೆ ಸರಕಾರದ ಚಿಂತನೆಯಾಗಿದ್ದು, ಶೈಕ್ಷಣಿಕ ಅಸಮತೋಲನ ನಿರ್ಮೂಲನೆ ಮಾಡುವುದು ಸರಕಾರದ ಉದ್ದೇಶವಾಗಿದೆ ಎಂದರು. ಈ ಮೂಲಕ ಕೊಡಗು ಜಿಲ್ಲೆಯ ಬಹುಕಾಲದ ಕನಸಾದ ಕೊಡಗು ವಿಶ್ವವಿದ್ಯಾಲಯದ ಸರ್ವತೋಮುಖ ಶೈಕ್ಷಣಿಕ ಅಭಿವೃದ್ದಿಗೆ ಶುಭ ಹರಸಿದರು. ಇದೇ ಸಂದರ್ಭ ಅಳುವಾರ ಕೊಡಗು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನೂತನ ಕುಲಪತಿಗಳಾದ ಪ್ರೋ ಅಶೋಕ ಸಂಗಪ್ಪ ಆಲೂರ  ಮಾತನಾಡಿ, ಕೊಡಗು ವಿಶ್ವವಿದ್ಯಾಲಯವನ್ನು ಮಾದರಿ ವಿಶ್ವವಿದ್ಯಾಲಯವನ್ನಾಗಿ…

Read More

ಮಡಿಕೇರಿ ಮಾ.28 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, ಅಂಗವಿಕಲರಿಗೆ(ಪಿಡಬ್ಲ್ಯುಡಿಎಸ್) ಮತ್ತು ಕೋವಿಡ್-19 ಸೋಂಕಿತ ಅಥವಾ ಬಾಧಿತ ವ್ಯಕ್ತಿಗಳಿಗೆ ಹಾಗೂ ಅಗತ್ಯ ಸೇವೆಗಳ ಮೇಲಿರುವ ಅಂದರೆ ಗೈರು ಹಾಜರಿ ಮತದಾರರಿಗೆ ಅಂಚೆ ಮತಪತ್ರ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳು ಮತದಾನ ಕೇಂದ್ರವಿರುವ ಪ್ರದೇಶದಲ್ಲಿ ಚುನಾವಣಾಧಿಕಾರಿಯು ಒದಗಿಸಿದ ವಿವರಗಳ ಅನುಸಾರ ಎವಿಎಸ್‍ಸಿ(ಅಬ್ಸೆಂಟೀ ವೋಟರ್ಸ್ ಆಫ್ ಸೀನಿಯರ್ ಸಿಟಿಜನ್ ಕೆಟಗರಿ) ಎವಿಪಿಡಿ(ಅಬ್ಸೆಂಟೀ ವೋಟರ್ಸ್ ಬಿಲಾಂಗಿಂಗ್ ಟು ಪಿಡಬ್ಲ್ಯುಡಿ ಕೆಟಗರಿ) ಮತ್ತು ಎವಿಸಿಓ(ಅಬ್ಸೆಂಟೀ ವೋಟರ್ಸ್ ಬಿಲಾಂಗಿಂಗ್ ಟು ಕೋವಿಡ್-19 ಕೆಟಗರಿ) ಪ್ರವರ್ಗಗಳಲ್ಲಿನ ಗೈರು ಹಾಜರಿ ಮತದಾರರ ಮನೆಗಳಿಗೆ ಭೇಟಿ ನೀಡಿ ಸಂಬಂಧಪಟ್ಟ ಮತದಾರನಿಗೆ ನಮೂನೆ 12 ಡಿ ಯನ್ನು ವಿತರಿಸಿ, ನಂತರ ಮತದಾರರಿಂದ ಚಲಾಯಿಸಿದ ನಮೂನೆ 12 ಡಿ ಯನ್ನು ಪಡೆಯಲಿದ್ದಾರೆ. ಸೆಕ್ಟರ್ ಅಧಿಕಾರಿಗಳು ನಮೂನೆ 12 ಡಿ ಅರ್ಜಿಗಳನ್ನು ವಿತರಿಸುವ ಹಾಗೂ ಸಂಗ್ರಹಿಸುವ…

Read More

ಮಡಿಕೇರಿ ಮಾ.28 : ರಾಜ್ಯದ ಸ್ಮಾರಕಗಳನ್ನು ಸಂರಕ್ಷಿಸುವುದು ಮತ್ತು ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ‘ಸ್ಮಾರಕ ದತ್ತು ಯೋಜನೆ’ಯನ್ನು ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಆ ನಿಟ್ಟಿನಲ್ಲಿ ಸ್ಮಾರಕ ದತ್ತು ಪಡೆಯಲು ಮುಂದೆ ಬರುವವರು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಆಯುಕ್ತರಾದ ಎ.ದೇವರಾಜ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ದತ್ತು ಯೋಜನೆಯಡಿ ಆಸಕ್ತ ಸಂಘ ಸಂಸ್ಥೆಗಳು, ಕಂಪನಿಗಳು, ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆಯಡಿ(ಸಿಎಸ್‍ಆರ್) ಕಾರ್ಯಕ್ರಮದಲ್ಲಿ ಸ್ಮಾರಕಗಳನ್ನು ದತ್ತು ಪಡೆಯಲು ಸರ್ಕಾರ ಅವಕಾಶ ಕಲ್ಪಿಸಿದ್ದು, ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತಾಗಬೇಕು ಎಂದು ಅವರು ಕೋರಿದರು. ಸ್ಮಾರಕಗಳನ್ನು ದತ್ತು ಪಡೆಯುವ ಸಂಘ ಸಂಸ್ಥೆಯನ್ನು ‘ಸ್ಮಾರಕ ಮಿತ್ರ’ ಎಂದು ಕರೆಯಲಾಗುತ್ತದೆ. ಹಾಗೆಯೇ ಮೂಲಭೂತ ಪ್ರವಾಸಿ ಸೌಕರ್ಯಗಳು, ಸುಧಾರಿತ ಪ್ರವಾಸಿ ಸೌಕರ್ಯಗಳು, ಸಂರಕ್ಷಣಾ ಕಾರ್ಯಗಳನ್ನು ಗುರುತಿಸಿದೆ. ಆ ದಿಸೆಯಲ್ಲಿ ಸ್ಮಾರಕ ಮಿತ್ರವು ನೋಡಲ್ ಇಲಾಖೆಯೊಂದಿಗೆ ಸಮಾಲೋಚಿಸಿ ಸ್ಮಾರಕ ಅಭಿವೃದ್ಧಿಗೆ…

Read More

ಮಡಿಕೇರಿ ಮಾ.28 : ನಗರೋತ್ಥಾನ ಯೋಜನೆಯಡಿ ನಗರದ ವಿವಿಧ ಕಡೆ ನಿರ್ಮಿಸಲಾಗಿರುವ ಕಾಂಕ್ರಿಟ್ ರಸ್ತೆಯನ್ನು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಉದ್ಘಾಟಿಸಿದರು. ನಗರದ ಹಲವು ಕಡೆಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ಇನ್ನು ಹಲವು ಕಡೆಗಳಲ್ಲಿ ರಸ್ತೆ ನಿರ್ಮಿಸಬೇಕಿದ್ದು, ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಶಾಸಕರು ಹೇಳಿದರು. ಮಡಿಕೇರಿ ನಗರದ ಎಲ್ಲೆಡೆ ಸರ್ವಋತು ರಸ್ತೆ ನಿರ್ಮಿಸಲಾಗುತ್ತದೆ. ಆ ನಿಟ್ಟಿನಲ್ಲಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದು ಎಂ.ಪಿ.ಅಪ್ಪಚ್ಚುರಂಜನ್ ಅವರು ತಿಳಿಸಿದರು. ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮೇಶ್ ಸುಬ್ರಮಣಿ, ಪೌರಾಯುಕ್ತ ವಿಜಯ, ನಗರಸಭಾ ಸದಸ್ಯರು ಇತರರು ಇದ್ದರು.

Read More

ಮಡಿಕೇರಿ ಮಾ.28 : ಕೊಡಗು ಗೌಡ ವಿದ್ಯಾ ಸಂಘದ ನೂತನ ಆಡಳಿತ ಮಂಡಳಿಯ ಪದಗ್ರಹಣ ಕಾರ್ಯಕ್ರಮ ಇಂದು ನಡೆಯಿತು. ಕೊಡಗು ಗೌಡ ವಿದ್ಯಾ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷ ಅಂಬೇಕಲ್ ನವೀನ್ ಕುಶಾಲಪ್ಪ ಅವರಿಗೆ ನಿಕಟಪೂರ್ವ ಅಧ್ಯಕ್ಷ ಹೊಸೂರ್ ರಮೇಶ್ ಜೋಯಪ್ಪ ಎಲ್ಲರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಅಂಬೇಕಲ್ ನವೀನ್ ಕುಶಾಲಪ್ಪ, ಐದು ವರ್ಷದ ಆಡಳಿತಾವಧಿಯಲ್ಲಿ ವಿದ್ಯಾಸಂಘವನ್ನು ಅಭಿವೃದ್ಧಿಪಡಿಸಿ ಮಾದರಿ ಸಂಸ್ಥೆಯನ್ನಾಗಿ ಬೆಳೆಸಲು ಸರ್ವರು ಸಹಕರಿಸಬೇಕೆಂದು ಮನವಿ ಮಾಡಿದರು. ನಿಕಟಪೂರ್ವ ಅಧ್ಯಕ್ಷ ಹೊಸೂರ್ ರಮೇಶ್ ಜೋಯಪ್ಪ ಮಾತನಾಡಿ ಕಳೆದ 23 ವರ್ಷಗಳಿಂದ ಸಂಘದ ಅಭಿವೃದ್ಧಿಗಾಗಿ ಶಕ್ತಿಮೀರಿ ಶ್ರಮ ವಹಿಸಿದ್ದೇನೆ. ಜನಾಂಗ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವಾರು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಸಾಧಕರನ್ನು ಗುರುತಿಸುವ ಕೆಲಸ ಮಾಡಲಾಗಿದೆ ಎಂದರು. ಮುಂದಿನ ದಿನಗಳಲ್ಲಿಯೂ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದರು. ನಿಕಟಪೂರ್ವ ಕಾರ್ಯದರ್ಶಿ ಕೊಟ್ಟಕೇರಿನ ದಯಾನಂದ ಕಳೆದ ಮಹಾಸಭೆಯ ವರದಿ ಹಾಗೂ ಖಜಾಂಚಿ ಕಟ್ಟೆಮನೆ…

Read More

ಮಡಿಕೇರಿ ಮಾ.28 : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 57 ಮಂದಿಗೆ ‘ಸಾಗುವಳಿ ಚೀಟಿ’ಯನ್ನು ಶಾಸಕರಾದ ಕೆ.ಜಿ.ಬೋಪಯ್ಯ ಅವರು ವಿತರಿಸಿದರು. ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸಾಗುವಳಿ ಚೀಟಿ ವಿತರಿಸಿ ಮಾತನಾಡಿದ ಶಾಸಕರು ಮಡಿಕೇರಿ ತಾಲ್ಲೂಕಿನ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 705 ಅರ್ಜಿಗಳಲ್ಲಿ 545 ಮಂದಿಗೆ ಸಾಗುವಳಿ ಚೀಟಿ ವಿತರಿಸಲಾಗಿದೆ. ಇನ್ನೂ ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಮೇ, 31 ರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಇದ್ದು, ಈ ಅವಕಾಶವನ್ನು ಅರ್ಹರು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ಮಾಡಿದರು. ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಸಾಗುವಳಿ ಚೀಟಿ ವಿತರಿಸಲಾಗುತ್ತಿದೆ. ಇದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಶಾಸಕರು ಹೇಳಿದರು. ಹಕ್ಕು ಪತ್ರ ಪಡೆದವರು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ಉಲ್ಲಂಘಿಸಿದಂತಾಗುತ್ತದೆ ಎಂದು ಎಚ್ಚರಿಸಿದರು. ಸರ್ಕಾರ ರೈತರ ಪರವಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಬೆಳೆ ಹಾನಿ ಪರಿಹಾರ, ಕೃಷಿಕರ ಖಾತೆಗೆ 10 ಸಾವಿರ…

Read More

ಮಡಿಕೇರಿ ಮಾ.28 :  ಕರ್ನಾಟಕ ಮಹಿಳಾ ಮತ್ತು ಕಲ್ಯಾಣ ಇಲಾಖೆ ಯ ವತಿಯಿಂದ  ಧಾರವಾಡದಲ್ಲಿ ನಡೆದ  ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  ಸಂಗೀತ ಕ್ಷೇತ್ರದ ಸಾಧನೆಗಾಗಿ  ಕೊಡಗಿನ ಬಾಳೆಯ ಸಂಗೀತ ರತ್ನ ಪುರಸ್ಕೃತ ಅನ್ವಿತ್ ಕುಮಾರ್  ಗೆ ಬಾಲ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.

Read More

ಮಡಿಕೇರಿ ಮಾ.28 :  ಕೊಡವ ಸ್ಟುಡೆಂಟ್ಸ್ ಅಸೋಸಿಯೇಷನ್ (ಕೆ.ಎಸ್.ಎ) ಮೈಸೂರು ಜಿಲ್ಲೆಯ ಅಧ್ಯಕ್ಷರಾಗಿ ಐಚೆಟ್ಟಿರ ಭೀಮಯ್ಯ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಮಾಳೇಟಿರ ದೇಚಮ್ಮ, ಗೌರವ ಕಾರ್ಯದರ್ಶಿಯಾಗಿ ಬೇಪಡಿಯಂಡ ಪೊನ್ನಪ್ಪ ಮತ್ತು ಐಚೆಟ್ಟಿರ ಭೂಮಿಕಾ, ಖಜಾಂಚಿಯಾಗಿ ಕಾರೇರ ಕರಣ್, ಸಹ ಖಜಾಂಚಿಯಾಗಿ ಅಪ್ಪನೆರವಂಡ ವಿಹಾರಿಕ, ಸಾಂಸ್ಕೃತಿಕ ನಾಯಕಿಯಾಗಿ ಕೊಕ್ಕಲೆಮಾಡ ಗೌತಮಿ ಆಯ್ಕೆಯಾಗಿದ್ದಾರೆ.

Read More