ಲೇಖಕ: admin

ಮಡಿಕೇರಿ ಮಾ.27 : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಕಟ್ಟಡ ಕಾರ್ಮಿಕರು ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಸರಕಾರ ಹಾಗೂ ಇಲಾಖೆಯ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಸಂಘದ ಜಿಲ್ಲಾಧ್ಯಕ್ಷ ಎ.ಸಿ.ಸಾಬು ಮಾತನಾಡಿ, ಕಟ್ಟಡ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಯಿಂದ ಹಲವು ಬಾರಿ ಕಾರ್ಮಿಕ ಇಲಾಖೆಯ ಗಮನ ಸೆಳೆಯಲಾಗಿದ್ದರೂ ಇಲ್ಲಿಯ ವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ. ಆದರೆ ಅನಾವಶ್ಯಕವಾದ ಹೊಸ ಸಮಸ್ಯೆಗಳನ್ನು ಕಲ್ಯಾಣ ಮಂಡಳಿಗೆ ಹೊರೆಯಾಗುವ ರೀತಿಯಲ್ಲಿ ಘೋಷಣೆ ಮಾಡುತ್ತಿರುವುದು ಬೇಸರದ ಸಂಗತಿ ಎಂದರು. ಕಾರ್ಮಿಕ ಕಲ್ಯಾಣ ಮಂಡಳಿಯ ವತಿಯಿಂದ ಸ್ವೀಕರಗೊಳ್ಳುತ್ತಿರುವ ಶೈಕ್ಷಣಿಕ ಸಹಾಯಧನ ಅರ್ಜಿಯಲ್ಲಿ ಕೆಲವು ಲೋಪದೋಷಗಳಿವೆ. ಇದರಿಂದ ತಂತ್ರಾಂಶದಲ್ಲಿ ಕೆಲ ಬದಲಾವಣೆ ಮಾಡಬೇಕು, ಬಾಕಿ ಇರುವ ಶೈಕ್ಷಣಿಕ ಅರ್ಜಿಗಳಿಗೆ ತ್ವರಿತವಾಗಿ ಹಣ ವರ್ಗಾವಣೆ ಮಾಡಬೇಕು, ಆರೋಗ್ಯ ಸಂಜೀವಿನಿ ಜಾರಿಗೊಳಿಸಬೇಕು, ಕಾರ್ಮಿಕ ಅರ್ಜಿ ಸಲ್ಲಿಕೆಗೆ…

Read More

ಮಡಿಕೇರಿ ಮಾ.27 : ಕೊಡಗು ಜಿಲ್ಲಾ ಕುರುಬ ಎಸ್ಟಿ ಮೀಸಲಾತಿ ಅಧ್ಯಕ್ಷರಾಗಿ ಕೊಡಗು ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ರವಿಗೌಡ ಆಯ್ಕೆಯಾಗಿದ್ದಾರೆ.

Read More

ಸುಂಟಿಕೊಪ್ಪ ಮಾ.27: ಕಣ್ಣೂರಿನ ಋಷಿದೇವ್ ಪ್ರತಿಷ್ಠಾನದ ಮುಖ್ಯಸ್ಥರಾದ ಪರಮಪೂಜ್ಯನೀಯ ಸದ್ಗುರು ಶ್ರೀ ನರೇಂದ್ರನ್ ಜೀ ಅವರ ಉಪಸ್ಥಿತಿಯಲ್ಲಿ ಯಾಗ ಮತ್ತು ಹೋಮಗಳ ಪ್ರಾಮುಖ್ಯತೆ ಮುಂದಿನ ಜನಾಂಗಕ್ಕೆ ನಮ್ಮ ಜವಬ್ಧಾರಿ ಏನು ಎಂಬುದರ ಕುರಿತು ಆಧ್ಯಾತ್ಮಿಕ ಸಮಾಲೋಚನೆ ಸಿದ್ದಾಪುರದ ಸ್ವರ್ಣಮಾಲಾ ಕಲ್ಯಾಣ ಮಂಟಪದಲ್ಲಿ ಅರ್ಥಪೂರ್ಣವಾಗಿ ನಡೆಯಿತು. “ಯಾಗ ಮತ್ತು ಹೋಮಗಳು” ಹೇಗೆ ಮನುಷ್ಯಜನಾಂಗ ಪರಿಸರದ ಮೇಲೆ ಪ್ರಭಾವ ಬೀರುತ್ತವೆ ಎಂಬುದರ ಕುರಿತು ಆಮೇರಿಕದ ವಿಜ್ಞಾನಿ ಪ್ರಸ್ತುತ ಬೆಂಗಳೂರಿನಲ್ಲಿರುವ ಡಾ.ಕೃಷ್ಣ ಮಾದಪ್ಪ ಉಪನ್ಯಾಸ ನೀಡಿದರು. ಪಂಚಭೂತಗಳಿoದ ಈ ವಿಶ್ವ ಕಾರ್ಯಾಚರಿಸುತ್ತಿದ್ದು, ಸತ್ವ, ರಾಜಸ ತಮೋಗುಣಗಳ ಏರಿಳಿತದಿಂದ ಪ್ರಸ್ತುತ ವಿಶ್ವ ಮತ್ತು ಸಮಾಜ, ಸಂಘರ್ಷವiಯ ವಾತಾವರಣದಿಂದ ಕೂಡಿದೆ ಎಂದು ಅವರು ಹೇಳಿದರು. ಭೂಮಿ ಮತ್ತು ನೀರು ನಮ್ಮ ಮುಂದಿರುವ ಸವಾಲುಗಳಾಗಿದ್ದು, ಶುದ್ಧ ಭೂಮಿ ಮತ್ತು ನೀರಿನ ಅವಶ್ಯಕತೆಯನ್ನು ನಾವು ಅರಿಯಬೇಕಾಗಿದೆ. ವೇದ ಉಪನಿಶತ್ತುಗಳಲ್ಲಿ ಹೇಳಲಾದ ಸಮಚಿತ್ತ ಮತ್ತು ಸಮಭಾವದ ಬದುಕು ನಮ್ಮ ಮುಂದಿನ ಜನಾಂಗಕ್ಕೆ ನಾವು ಕಲಿಸಬೇಕಾಗಿದೆ ಎಂದು ಕೃಷ್ಣ ಮಾದಪ್ಪ ಸೋದಾಹರಣವಾಗಿ ವಿವರಿಸಿದರು. “ಗುರುತ್ವಂ”…

Read More

ಸೋಮವಾರಪೇಟೆ  ಮಾ.27 : ಆರೋಗ್ಯದ ಬಗ್ಗೆ ಕಾಳಜಿ ಇದ್ದರೆ ಮಾತ್ರ ಶೈಕ್ಷಣಿಕ ಸಾಧನೆ ಸಾದ್ಯ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದರು. ಸಮೀಪದ ಬಿ.ಟಿ.ಸಿ.ಜಿ.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣ, ಹೆಚ್ಚುವರಿ ತರಗತಿ ಕಟ್ಟಡ ಮತ್ತು ಕಂಪ್ಯೂಟರ್ ಲ್ಯಾನ್ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಸಾಮಾಜಿಕವಾಗಿ, ದೈಹಿಕವಾಗಿ ಸದೃಢರಾದರೆ ಎಲ್ಲ ಕೆಲಸಗಳನ್ನು ಆಸಕ್ತಿಯಿಂದ ಮಾಡಬಹುದು.ಇಲ್ಲವಾದರೆ ಕೀಳರಿಮೆ ಉಂಟಾಗಲಿದೆ.ವೈಯಕ್ತಿಕ ಅಭಿವೃದ್ಧಿಯತ್ತ ಹೆಚ್ಚಿನ ಆಸಕ್ತಿ ವಹಿಸಿಕೊಳ್ಳಬೇಕಾಗಿದೆ‌ ಆಗ ಮಾತ್ರ ಕಷ್ಟ ಬಂದಾಗ ಎದುರಿಸಲು ಸಾದ್ಯ. ಹಾಗಾಗಿಯೇ ನಗರ ಪ್ರದೇಶದ ವಿದ್ಯಾರ್ಥಿಗಳಿಗಿಂತಚಗ್ರಾಮೀಣ ಪ್ರದೇಶದ ಮಕ್ಕಳು ಹೆಚ್ಚು   ಪ್ರಬಲರಾಗಿರುತ್ತಾರೆ.ಇದು ದೊಡ್ಡಮಟ್ಟದ ಸಾಧನೆ ಮಾಡಲು ಸಾದ್ಯ ಗುರುಗಳು ಕೂಡ ತಾವು ಕಲಿಸಿದ ವಿದ್ಯೆಯನ್ನು ವಿದ್ಯಾರ್ಥಿಗಳಿಗೆ ದಾರೆಯೆರೆದರೆ ಅವರ ಜ್ಞಾನಮಟ್ಟದ ಜೋತೆಯಲ್ಲಿ ಸಾಧಿಸುವ ಛಲ ಸದೃಡವಾಗಲಿದೆ ಎಂದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಹೇಶ್ ಕುಮಾರ್ ಮಾತನಾಡಿ, ಕಾಲೇಜಿನ ಮಕ್ಕಳ ಹಿತದೃಷ್ಟಿಯಿಂದ ಕಂಪ್ಯೂಟರ್ ಕಲಿಕಾ ಜ್ಞಾನದ ದೃಷ್ಟಿಯಿಂದ ಲ್ಯಾಬ್ ಅನ್ನು ಪ್ರಾರಂಭಿಸಲಾಗಿದೆ.ಈ ಕಾಲೇಜಿನ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ ಎಂದರು.…

Read More

ಮಡಿಕೇರಿ ಮಾ.27 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ‘ಆಯುಷ್ಮತಿ ಕ್ಲಿನಿಕ್’ ಆರಂಭಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮತ್ತು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಚಾಲನೆ ನೀಡಿದರು. ನಗರದ ಮಹದೇವ ಪೇಟೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯುಷ್ಮತಿ ಕ್ಲಿನಿಕ್ ಆರಂಭಕ್ಕೆ ಚಾಲನೆ ನೀಡಿ, ಮಾತನಾಡಿದ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಸ್ವಸ್ಥ ಸಮಾಜ ನಿರ್ಮಿಸುವಲ್ಲಿ ‘ಆಯುಷ್ಮತಿ ಕ್ಲಿನಿಕ್’ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಮಹಿಳೆಯರು ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರ ಜೊತೆ ಮುಕ್ತವಾಗಿ ಹಂಚಿಕೊಳ್ಳಲು ‘ಆಯುಷ್ಮತಿ ಕ್ಲಿನಿಕ್’ ಅನುಕೂಲವಾಗಿದೆ ಎಂದು ಹೇಳಿದರು. ಮಹಿಳೆಯರ ಕುಂದುಕೊರತೆಗಳನ್ನು ಸಮಾದಾನದಿಂದ ಕೇಳಿ ಆರೋಗ್ಯ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಆಯುಷ್ಮತಿ ಕ್ಲಿನಿಕ್ ಒಳ್ಳೆಯದು ಎಂದು ಹೇಳಿದರು. ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್ ಅವರು ಮಾತನಾಡಿ ಮಹಿಳೆಯರ ಆರೋಗ್ಯ ಸುಧಾರಣೆಗಾಗಿ ಮಹಿಳಾ ಆರೋಗ್ಯ ಸೇವೆಗಳಿಗಾಗಿ ರಾಜ್ಯಾದ್ಯಂತ 128 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲಾ ವಯಸ್ಸಿನ ಹೆಣ್ಣು ಮಕ್ಕಳಿಗೆ…

Read More

ಮಡಿಕೇರಿ ಮಾ.27 : ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ದೇವರ ದಾಸಿಮಯ್ಯ ಅವರು 11 ನೇ ಶತಮಾನದಲ್ಲಿ ಸಾಕಷ್ಟು ಬದಲಾವಣೆ ತಂದರು ಎಂದು ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ಅವರು ಹೇಳಿದ್ದಾರೆ. ನಗರದ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟಗಳ ಸಹಯೋಗದಲ್ಲಿ ಸೋಮವಾರ ನಡೆದ ‘ವಿಶ್ವಮಾನ್ಯ ಆದ್ಯ ವಚನಕಾರ ದೇವರ ದಾಸಿಮಯ್ಯ’ ಅವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹತ್ತನೇ ಶತಮಾನದ ಉತ್ತರಾರ್ಧದಲ್ಲಿ ದೇವರ ದಾಸಿಮಯ್ಯ ಅವರಿಂದ ವಚನ ಸಾಹಿತ್ಯವು ಪ್ರಾರಂಭಗೊಂಡು 19 ನೇ ಶತಮಾನದವರೆಗೂ ಬೆಳೆದು ಬಂದಿರುವುದನ್ನು ಕಾಣುತ್ತೇವೆ ಎಂದರು. ಹಲವು ಸಾಧು ಸಂತರು, ಶರಣ, ಶರಣೇಯರ ಕ್ಷೇತ್ರ ಕಲ್ಬುರ್ಗಿ ಜಿಲ್ಲೆ ಸಾಹಿತ್ಯ ಕ್ಷೇತ್ರದಲ್ಲೂ ಹಲವು ಪ್ರಥಮಗಳನ್ನು ಸ್ಥಾಪಿಸಿದ್ದು, ದೇವರ ದಾಸಿಮಯ್ಯ ಅವರು ಈಗಿನ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನಲ್ಲಿ ಜನಿಸಿ, ವಚನ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ…

Read More

ಮಡಿಕೇರಿ ಮಾ.27 : ಲಂಚ ಸ್ವೀಕಾರದ ಆರೋಪದಡಿ ಇತ್ತೀಚೆಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ದಾಳಿ ಮಾಡಿದ್ದ ಲೋಕಾಯುಕ್ತ ಅಧಿಕಾರಿಗಳು ನಾಲ್ವರು ಆರೋಪಿಗಳ ವಿರುದ್ದ ಎಫ್‍ಐಆರ್ ದಾಖಲಿಸಿ ಕೇವಲ ಮೂವರನ್ನು ಬಂಧಿಸಿದ್ದಾರೆ. ಪ್ರಕರಣದ 3ನೇ ಆರೋಪಿಯನ್ನು ಇಲ್ಲಿಯವರೆಗೆ ಬಂಧಿಸಿಲ್ಲವೆಂದು ಆರೋಪಿಸಿ ಮತ್ತು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಮಡಿಕೇರಿ ನಗರಸಭಾ ಸದಸ್ಯರ ಸಹಿತ ಭ್ರಷ್ಟಾಚಾರ ವಿರೋಧಿ ಸಮಿತಿಯ ಪ್ರಮುಖರು ಕೊಡಗು ಲೋಕಾಯುಕ್ತ ಡಿವೈಎಸ್‍ಪಿ ಅವರಿಗೆ ಮನವಿ ಸಲ್ಲಿಸಿದರು. ಮೂರನೇ ಆರೋಪಿಯಾಗಿರುವ ಮಡಿಕೇರಿಯ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮಹಿಳಾ ಅಧಿಕಾರಿಯ ಬಂಧನಕ್ಕೆ ಸಂಬಂಧಿಸಿದಂತೆ ಯಾವುದೇ ಒತ್ತಡಗಳಿಗೆ ಇಲಾಖೆ ಮಣಿಯಬಾರದು ಎಂದು ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಸದಸ್ಯರಾದ ಮಹೇಶ್ ಜೈನಿ, ಕವನ್ ಕಾವೇರಪ್ಪ, ಚಂದ್ರು ಅವರುಗಳು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್, ಲೋಕಾಯುಕ್ತಕ್ಕೆ ಅದರದ್ದೇ ಆದ ಕಾನೂನು, ನೀತಿ, ನಿಯಮಗಳಿವೆ. ಬಂಧನದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಕಾನೂನು ಪ್ರಕ್ರಿಯೆಗಳಿವೆ. ದಾಳಿ ಸಂದರ್ಭ ಕಾಲ್ ಡಿಟೇಲ್‍ಗಳಿದ್ದ ಮೊಬೈಲ್‍ಗಳನ್ನು ವಶಕ್ಕೆ ಪಡೆಯಲಾಗಿದ್ದು,…

Read More

ಮಡಿಕೇರಿ ಮಾ.27 : ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕಾಗಿ ರೂಪಿಸಿರುವ ಕಲ್ಯಾಣ ಕಾರ್ಯಕ್ರಮಗಳ ಮಾಹಿತಿಯನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಮಾ.29 ರಂದು ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಮೂರ್ನಾಡಿನಲ್ಲಿ ‘ರೈತ ಸಮಾವೇಶ’ ಆಯೋಜಿಸಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯರಾದ ಯಮುನಾ ಚಂಗಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ಸಮುದಾಯವನ್ನು ಸಶಕ್ತಗೊಳಿಸುವ ಮೂಲಕ ರಾಷ್ಟ್ರವನ್ನು ಬಿಲಿಷ್ಟವಾಗಿ ಕಟ್ಟುವ ಚಿಂತನೆ ಬಿಜೆಪಿಯದ್ದು. ಈ ಹಿನ್ನೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಪೂರಕವಾದ ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿರುವುದಾಗಿ ಹೇಳಿದರು. ಮಡಿಕೇರಿ ಮಂಡಲದ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಶಿವಚಾಳಿಯಂಡ ಜಗದೀಶ್ ಮಾತನಾಡಿ, ಮಾ.29 ರಂದು ಮೂರ್ನಾಡು ಕೊಡವ ಸಮಾಜದಲ್ಲಿ ರೈತ ಸಮಾವೇಶ ನಡೆಯಲಿದೆ. ಇದಕ್ಕೂ ಮುನ್ನ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆಯನ್ನು ಆಯೋಜಿಸಲಾಗಿದೆಯೆಂದು ಮಾಹಿತಿಯನ್ನಿತ್ತರು. ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ, ತಮಿಳುನಾಡು…

Read More

ಮಡಿಕೇರಿ ಮಾ.27 : ವಾಂಡರರ್ರ್ಸ್ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏ.1 ರಿಂದ ಮೇ1 ರವರೆಗೆ ಒಂದು ತಿಂಗಳ ಅವಧಿಯ ‘ಶಂಕರ ಸ್ವಾಮಿ ಸ್ಮರಣಾರ್ಥ’ 29ನೇ ಉಚಿತ ಬೇಸಿಗೆ ಶಿಬಿರ ನಡೆಯಲಿದೆ ಎಂದು ಕ್ಲಬ್‍ನ ಸದಸ್ಯರಾದ ಎಸ್.ಟಿ.ವೆಂಕಟೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಈಗಾಗಲೇ ಶಿಬಿರವನ್ನು ಆರಂಭಿಸಲಾಗಿದೆ. ಅಧಿಕೃತವಾಗಿ ಶಂಕರ ಸ್ವಾಮಿ ಅವರ ಜನ್ಮದಿನವಾದ ಏ.1 ರಂದು ಬೆಳಗ್ಗೆ 8 ಗಂಟೆಗೆ ಶಿಬಿರಕ್ಕೆ ವಿದ್ಯುಕ್ತ ಚಾಲನೆ ನೀಡಲಾಗುತ್ತದೆ. ಶಿಬಿರದಲ್ಲಿ ಇನ್ನೂರಕ್ಕೂ ಹೆಚ್ಚಿನ ಮಕ್ಕಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. ಪ್ರಸ್ತುತ ಕೆಲವು ತರಗತಿಗಳ ಪರೀಕ್ಷೆ ನಡೆಯುತ್ತಿದ್ದು, ಶಿಬಿರ ಆರಂಭಗೊಂಡಿದ್ದರೂ ಪರೀಕ್ಷೆಯ ಬಳಿಕ ಆಸಕ್ತ ಮಕ್ಕಳು ಶಿಬಿರಕ್ಕೆ ಸೇರ್ಪಡೆಗೊಳ್ಳಬಹುದೆಂದು ತಿಳಿಸಿದರು. ಶಿಬಿರ ಬೆಳಗ್ಗೆ 6 ಗಂಟೆಗೆ ಪ್ರತಿನಿತ್ಯ ಆರಂಭಗೊಳ್ಳುತ್ತದೆ. ಪ್ರಮುಖವಾಗಿ ಈ ಶಿಬಿರದಲ್ಲೀ ಮಕ್ಕಳಿಗೆ ಪ್ರಾಣಾಯಾಮ, ಯೋಗ, ಹಾಕಿ, ಅಥ್ಲೆಟಿಕ್ಸ್ ಸೇರಿದಂತೆ ವಿವಿಧ ಕ್ರೀಡೆಗಳ ತರಬೇತಿಯನ್ನು ನೀಡಲಾಗುತ್ತದೆ. ತರಬೇತುದಾರರಾಗಿ ಬೊಪ್ಪಂಡ ಶ್ಯಾಂ…

Read More

ಮಡಿಕೇರಿ ಮಾ.27 : ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಮೀಸಲಿದ್ದ 2ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಎಸ್‍ಡಿಪಿಐ ಪ್ರಮುಖರು ಹಾಗೂ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಎಸ್‍ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಮಿನ್ ಮೊಹಿಸಿನ್, ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ.4 ಮೀಸಲಾತಿಯನ್ನು ರದ್ದು ಮಾಡಿ ಮತ್ತೊಂದು ಸಮುದಾಯಕ್ಕೆ ನೀಡಿರುವುದು ಖಂಡನೀಯ ಎಂದರು. ಮೀಸಲಾತಿ ಎನ್ನುವುದು ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಕ್ಕೆ ನೀಡುವಂತದ್ದು, ಮುಸಲ್ಮಾನರು ಧಾರ್ಮಿಕ ಅಲ್ಪಸಂಖ್ಯಾತರು, ಧರ್ಮ ಆಧಾರಿತ ಮೀಸಲಾತಿಯನ್ನು ರದ್ದು ಮಾಡುತ್ತೇವೆ ಎನ್ನುವುದು ಸರಿಯಾದ ಕ್ರಮವಲ್ಲ ಎಂದರು. ಮುಸಲ್ಮಾನರು ಅತ್ಯಂತ ಶೋಚನೀಯ ಪರಿಸ್ಥಿತಿಯಲ್ಲಿದ್ದು, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಅವರಿಗೆ ಮೀಸಲಾತಿ ಕಡ್ಡಾಯವಾಗಿ ನೀಡಬೇಕೆಂದು ಹೇಳಲಾಗಿದೆ. ಆದರೆ ಸರ್ಕಾರ ಯಾವುದೇ ಆಗುಹೋಗುಗಳನ್ನು ಚರ್ಚಿಸದೆ…

Read More