ಮಡಿಕೇರಿ ಮಾ.27 : ಸಮಾಜದ ಕೆಳ ಸ್ತರದಲ್ಲಿರುವ ಶೋಷಿತ ಬಡ ಸಮೂಹವನ್ನು ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆ ಮಾಡುವಲ್ಲಿ, ಈ ರಾಷ್ಟ್ರವನ್ನು ಆರೇಳು ದಶಕಗಳ ಆಳಿದವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಆರೋಸಿದ್ದಾರೆ. ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಬಿಜೆಪಿ ವತಿಯಿಂದ ನಡೆದ ‘ಎಸ್‍ಸಿ ಸಮಾವೇಶ’ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಲೆತಲಾಂತರದಿಂದ ಮುಖ್ಯವಾಹಿನಿಗೆ ಬಾರದ ಜನರನ್ನು ಮುಖ್ಯವಾಹಿನಿಗೆ ತರುವುದೇ ನಮ್ಮ ಗುರಿಯಾಗಿದ್ದು, ಸಂವಿಧಾನದ ಆಶಯಗಳಿಗೆ ಪೂರಕವಾಗಿ ಬಿಜೆಪಿ ಕಾರ್ಯನಿರ್ವಹಿಸುತ್ತಿದೆ. ಸುದೀರ್ಘ ಕಾಲ ಆಡಳಿತದ ಚುಕ್ಕಾಣಿ ಹಿಡಿದ ಪಕ್ಷ ಹಿಂದುಳಿದವರ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು. ರಾಜ್ಯದ ಬಿಜೆಪಿ ಸರಕಾರದಿಂದ ಹಿಂದುಳಿದ ಸಮುದಾಯದ ಕಲ್ಯಾಣಕ್ಕಾಗಿ ಏಕಲವ್ಯ ವಸತಿ ಶಾಲೆ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳನ್ನು ನಿರ್ಮಿಸಲಾಗಿದೆ. ನಾಪೋಕ್ಲು ಮತ್ತು ಸೋಮವಾರಪೇಟೆ ಬಳಿಯ ತೋಳೂರುಶೆಟ್ಟಳ್ಳಿಯಲ್ಲಿ ವಸತಿ ಶಾಲೆಗಳನ್ನು ನಿರ್ಮಾಣಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಸ್ವಯಂ ಉದ್ಯೋಗಕ್ಕಾಗಿ 40 ಮಂದಿಗೆ ದ್ವಿಚಕ್ರ ವಾಹನಗಳ ವಿತರಣೆ ಸೇರಿದಂತೆ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹತ್ತು ಹಲವು ಯೋಜನೆಗಳನ್ನು…
ಲೇಖಕ: admin
ಮಡಿಕೇರಿ ಮಾ.27 : ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾಮದ ಶ್ರೀ ನಂಜುಂಡೇಶ್ವರ, ಶ್ರೀ ಬಸವೇಶ್ವರ, ಶ್ರೀ ಕನ್ನಂಬಾಡಿ ಅಮ್ಮ ಮತ್ತು ಆದಿಶಕ್ತಿ ದೇವಿರಮ್ಮ ಹಾಗೂ ಶ್ರೀ ವೀರಭದ್ರ ಸ್ವಾಮಿಯ ವಾರ್ಷಿಕೋತ್ಸವವು ಏ.3 ಮತ್ತು 4 ರಂದು ಜರುಗಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮದರ್ಶಿ ಡಾ.ಶ್ರೀ ವೀರೇಂದ್ರ ಹೆಗ್ಗಡೆ ಅವರ ಕೃಪಾರ್ಶಿವಾದದೊಂದಿಗೆ, ಅರಸಿಕೆರೆ ಹಾರ್ನಹಳ್ಳಿ ಸುಕ್ಷೇತ್ರ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ, ವಿರಾಜಪೇಟೆಯ ಅರಮೇರಿ ಕಳಂಚೇರಿ ಮಠದ ಪೀಠಾಧ್ಯಕ್ಷ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ, ಪಿರಿಯಾಪಟ್ಟಣದ ದಿಂಡುಗಾಡು ಬಸವಜ್ಯೋತಿ ಮಠದ ಪೀಠಾಧ್ಯಕ್ಷ ಶ್ರೀ ಅಪ್ಪಾಜಿ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಎರಡು ದಿನಗಳ ಕಾಲ ವಿವಿಧ ಪೂಜಾ ವಿಧಿವಿಧಾನಗಳು ನೆರವೇರಲಿದೆ ಎಂದು ದೇವಾಲಯ ಸಮಿತಿ ಕಾರ್ಯದರ್ಶಿ ಕೆ.ಎಸ್.ರತೀಶ್ ತಿಳಿಸಿದ್ದಾರೆ. ಏ.3 ರಂದು ಸಂಜೆ 5 ಗಂಟೆಗೆ ಉತ್ಸವ ಆರಂಭಗೊಳ್ಳಲಿದ್ದು, ಪಿರಿಯಾಪಟ್ಟಣದ ದಿಂಡುಗಾಡು ಬಸವಜ್ಯೋತಿ ಮಠದ ಪೀಠಾಧ್ಯಕ್ಷ ಶ್ರೀ ಅಪ್ಪಾಜಿ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಶ್ರೀ ಕನ್ನಂಬಾಡಿ ಅಮ್ಮದೇವಿಯ ಮುಖಸಿರಿಯನ್ನು ವಾದ್ಯಗೋಷ್ಠಿಯೊಂದಿಗೆ ಸಮಿತಿ ಅಧ್ಯಕ್ಷ…
ಮಡಿಕೇರಿ ಮಾ.27 : ಅಭ್ಯತ್‍ಮಂಗಲದ ಶ್ರೀ ವೈದ್ಯನಾಥೇಶ್ವರ ದೇವಾಲಯದ ವಾರ್ಷಿಕೋತ್ಸವ ಹಾಗೂ ವಾರ್ಷಿಕ ನೇಮೋತ್ಸವವು ಏ.8, 9 ಮತ್ತು 10 ರಂದು ನಡೆಯಲಿದೆ. ಏ.8 ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ವೈದ್ಯನಾಥ ಸ್ವಾಮಿಯ ಭಂಡಾರ ಹೇರಿಕೆ, ರಾತ್ರಿ 10ಗಂಟೆಗೆ ಕೋಟೆದ ಬಬ್ಬುಸ್ವಾಮಿ ಮತ್ತು ತಂಗಡಿ ತನ್ನಿಮಾನಿಗ ದೈವಗಳ ನೇಮೋತ್ಸವ ಜರುಗಲಿದೆ. ಏ.9 ರಂದು ರಾತ್ರಿ ಶ್ರೀ ಚಾಮುಂಡೇಶ್ವರಿ ಕತ್ತಲಕಾನದ ಗುಳಿಗ ಮತ್ತು ಜಾಗದ ಗುಳಿಗ ಹಾಗೂ ಪಂಜುರ್ಲಿ ಗುಳಿಗ ನೇಮೋತ್ಸವ ನಡೆಯಲಿದ್ದು, ಏ.10 ರಂದು ಬೆಳಿಗ್ಗೆ ರಾಹುಗುಳಿಗ ನೇಮೋತ್ಸವ ನಡೆಯಲಿದೆ. ಏ.8 ಮತ್ತು 9 ರಂದು ರಾತ್ರಿ 9 ಗಂಟೆಗೆ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.
ಮಡಿಕೇರಿ ಮಾ.27 : ಜೋಡುಪಾಲ ಗೆಳೆಯರ ಬಳಗ ಹಾಗೂ ಕೊಡಗು ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ನ ಸಂಯುಕ್ತಾಶ್ರಯದಲ್ಲಿ ಮಾ.30 ರಂದು ಹೊನಲು ಬೆಳಕಿನ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾವಳಿ “ಜೆಎಫ್‍ಸಿ ಟ್ರೋಫಿ ಸಿಜಾನ್-2” ನಡೆಯಲಿದೆ. ಅಂದು ಸಂಜೆ 7 ಗಂಟೆಗೆ ಮದೆ ಗ್ರಾ.ಪಂ ವ್ಯಾಪ್ತಿಯ ಜೋಡುಪಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಭಾರತ ಕಬಡ್ಡಿ ತಂಡದ ಮಾಜಿ ನಾಯಕ ಹಾಗೂ ಅರ್ಜುನ ಪ್ರಶಸ್ತಿ ಪುರಸ್ಕೃತ ಬಿ.ಸಿ.ರಮೇಶ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಜಂಟಿ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾಧ್ಯಕ್ಷ ಉತ್ತಪ್ಪ ಹೊಸೊಕ್ಲು ಕಬಡ್ಡಿ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ. ಮದೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಅಗೋಳಿಕಜೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಕೀಲರು ಹಾಗೂ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಪಿಲ್ ಕುಮಾರ್ ದುಗ್ಗಳ, ಕಬಡ್ಡಿ ಪಂದ್ಯಾವಳಿಯ ಅಧ್ಯಕ್ಷ ಕೆ.ಆರ್.ರಾಜು, ಮದೆ ಗ್ರಾ.ಪಂ…
ಮಡಿಕೇರಿ ಮಾ.27 : ಶ್ರೀ ನಿರ್ಮಲಾನಂದ ಸ್ವಾಮಿಗಳ ಬಗ್ಗೆ ತಾನು ಆಡಿದ ಮಾತನ್ನು ತಿರುಚಲಾಗಿದೆ ಎಂದು ತನ್ನ ಪಕ್ಷದವರನ್ನು ತೃಪ್ತಿ ಪಡಿಸಲು ಜೆಡಿಎಸ್ ಪಕ್ಷದವರ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಮಾಡಿದ್ದಾರೆ ಎಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ವಕ್ತಾರ ಸೂದನ್ ಎಸ್.ಈರಪ್ಪ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶ್ರೀನಿರ್ಮಲಾನಂದ ಸ್ವಾಮಿಗಳು ಎಲ್ಲಾ ಪಕ್ಷ, ಜನಾಂಗ, ಸಮುದಾಯದವರ ಗೌರವಕ್ಕೆ ಪಾತ್ರರಾದವರು, ಇವರನ್ನು ಎಲ್ಲರೂ ಗೌರವದಿಂದ ಕಾಣುತ್ತಾರೆ ಎಂದು ಹೇಳಿದ್ದಾರೆ. ವಿದ್ಯಾಪೀಠದಲ್ಲಿ ಜಾತ್ಯತೀತವಾಗಿ ಎಲ್ಲಾ ವರ್ಗದ ಮಂದಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸ್ವಾಮೀಜಿಗಳು ತಮ್ಮ ಸ್ಥಾನಕ್ಕೆ ತಕ್ಕಂತೆ ನಡೆದುಕೊಂಡಿದ್ದಾರೆ. ಆದರೆ ಪ್ರಚಾರಕ್ಕಾಗಿ ಮಾತನಾಡುವ ಕಾರ್ಯಪ್ಪ ಅವರು ತಾನು ಏನು ಹೇಳುತ್ತಿದ್ದೇನೆ ಎನ್ನುವುದರ ಬಗ್ಗೆ ಅರಿವಿಲ್ಲದೆ ಹೇಳಿಕೆ ನೀಡಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಂಗಾಯಣದ ನಿರ್ದೇಶಕರಾಗಿ ಉನ್ನತ ಸ್ಥಾನದಲ್ಲಿರುವವರು ಸರ್ವರಿಗೂ ಗೌರವ ನೀಡುವ ಮತ್ತು ಸಹನೆಯಿಂದ ನಡೆದುಕೊಳ್ಳುವ ದೊಡ್ಡ ಗುಣವನ್ನು ಹೊಂದಿರಬೇಕು. ಹೆಜ್ಜೇನು ಗೂಡಿಗೆ ಕಲ್ಲೆಸೆಯುವ…
ಚೆಯ್ಯಂಡಾಣೆ ಮಾ.27 : ಎಡಪಾಲದ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್.ಎಸ್.ಎಫ್ ಸಂಯುಕ್ತ ಆಶ್ರಯದಲ್ಲಿ 101 ಕುಟುಂಬಕ್ಕೆ ರಂಝಾನ್ ಪ್ರಯುಕ್ತ ಆಹಾರ ದಾನ್ಯಗಳ ಕಿಟ್ ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಮಸೀದಿಯ ಖತೀಬ್ ನಿಝಾರ್ ಪೈಝಿ ಅಂಡತ್ ಮಾನಿ ದರ್ಗಾದಲ್ಲಿ ಪ್ರಾರ್ಥನೆ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಪೊಯಾಪಳ್ಳಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಯು.ಶಾಫಿ, ಎಡಪಾಲ ಕರ್ನಾಟಕ ಮುಸ್ಲಿಂ ಜಮಾಆತ್ ಅಧ್ಯಕ್ಷ ಉಮ್ಮರ್ ಸಿಆರ್ ಪಿ, ಎಸ್ ವೈ ಎಸ್ ಅಧ್ಯಕ್ಷ ಶರೀಫ್ ಝೈನಿ, ಎಸ್ ಎಸ್ ಎಫ್ ಅಧ್ಯಕ್ಷ ಶಂಸುದ್ದಿನ್, ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಸಿ.ಎ.ಅಬೂಬಕ್ಕರ್, ಪದಾಧಿಕಾರಿಗಳಾದ ಬಷೀರ್, ಖಾದರ್ ಸಅದಿ, ಮಹ್ಮೂದ್ ಮತ್ತಿತರರು ಹಾಜರಿದ್ದರು. ವರದಿ : ಅಶ್ರಫ್
ಮಡಿಕೇರಿ ಮಾ.27 : ಚೆಟ್ಟಳ್ಳಿಯ ಲಕ್ಷ್ಮಿ ಫಂಡಿನ ಸಭೆಯು ಫಂಡಿನ ಅಧ್ಯಕ್ಷರಾದ ಪುತ್ತರಿರ ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತು. ನಂತರ ಪ್ರತೀ ವರ್ಷದಂತೆ ಈ ಬಾರಿಯೂ ಅತೀ ಹೆಚ್ಚು ಅಂಕ ಪಡೆದ ಪುತ್ತರಿರ ಇಂದೂ ದೇವಯ್ಯಳಿಗೆ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ರಾಜ್ಯಪ್ರಶಸ್ತಿ ವಿಜೇತರಾದ ಪತ್ರಕರ್ತ ಪುತ್ತರಿರ ಕರುಣ್ ಕಾಳಯ್ಯ ಅವರನ್ನು ಹಿರಿಯರಾದ ನಿವೃತ್ತ ವಾಯುಸೇನಾಧಿಕಾರಿ ಪುತ್ತರಿರ ಗಣೇಶ್ ಭೀಮಯ್ಯ, ಬಟ್ಟೀರ ವೇಣುನಾಚಪ್ಪ ಸನ್ಮಾನಿಸಿ ಗೌರವಿಸಿದರು. ಸಂಘದ ವರದಿಯನ್ನು ಕಾರ್ಯದರ್ಶಿ ಬೊಪ್ಪಟಿರ ನಾಣಯ್ಯ ಓದಿದರು. ಊರಿನ ಪುತ್ತರಿರ,ಬಟ್ಟೀರ, ಮುಳ್ಳಂಡ ಹಾಗೂ ಬೊಪ್ಪಟೀರ ಕುಟುಂಬದ ಸದಸ್ಯರು ಹಾಜರಿದ್ದರು. ಸಂಘದ ಉಪಾಧ್ಯಕ್ಷ ಮುಳ್ಳಂಡ ಕರಣ್ ಸೋಮಣ್ಣ ವಂದಿಸಿದರು.
ಮಡಿಕೇರಿ ಮಾ.27 : ವಿದ್ಯಾರ್ಥಿಗಳು ಪರೀಕ್ಷೆ ಎಂದ ಕೂಡಲೇ ಭಯಪಡದೆ ಆತ್ಮಸ್ಥೈರ್ಯದಿಂದ ಎದುರಿಸಬೇಕೆಂದು ಬೆಂಗಳೂರಿನ ಕೃತಗ್ಯತಾ ಟ್ರಸ್ಟ್ ನ ಅಧ್ಯಕ್ಷೆ ಅರುಣಾ ದಿವಾಕರ್ ಕಿವಿಮಾತು ಹೇಳಿದರು. ವಿರಾಜಪೇಟೆ ತಾಲೂಕಿನ ಚನ್ನಯ್ಯನಕೋಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ತಮ್ಮ ಸ್ವಂತ ಹಣದಲ್ಲಿ ಕೊಂಡ ವಸ್ತುವನ್ನು ಸುರಕ್ಷಿತವಾಗಿ ನೋಡುವಂತೆಯೆ, ಸಾರ್ವಜನಿಕರ ಸರ್ವತ್ತೋಮುಖ ಅಭಿವೃದ್ಧಿಗಾಗಿ ಮೀಸಲಿರುವ ಆಸ್ತಿಯನ್ನು ರಕ್ಷಿಸಿದಾಗ ಮಾತ್ರ ಸಮಾಜ ಅಭಿವೃದ್ಧಿ ಸಾಧ್ಯ ಎಂದರು. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಕಡೆ ಹೆಚ್ಚಿನ ಗಮನಹರಿಸಬೇಕೆಂದು ಟ್ರಸ್ಟಿನ ಸಂಯೋಜಕ ಮುರಳೀಧರ್ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಚನ್ನಯ್ಯನಕೋಟೆ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಒಂದರಿಂದ ಎಂಟನೇ ತರಗತಿ ವರೆಗಿನ ಎಲ್ಲ ಮಕ್ಕಳಿಗೂ ಟೀ ಶರ್ಟ್ ಮತ್ತು ಟ್ರ್ಯಾಕ್ ಪ್ಯಾಂಟನ್ನು ಒಳಗೊಂಡ ಸಮವಸ್ತ್ರವನ್ನು ಟ್ರಸ್ಟ್ ನ ವತಿಯಿಂದ ಕೊಡುಗೆಯಾಗಿ ನೀಡಲಾಯಿತು. ಇದ್ದಲ್ಲದೆ ಮಾಲ್ದಾರೆ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 228 ಮತ್ತು ಘಟ್ಟದಳ ಶಾಲೆಯ 15 ಮಕ್ಕಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು. ಚನ್ನಯ್ಯನಕೋಟೆ ಕ್ಲಸ್ಟರ್…
ವಿರಾಜಪೇಟೆ ಮಾ.27 : ದಂತ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳನ್ನು ಹುಟ್ಟುಹಾಕಬೇಕು. ಜಗತ್ತು ಎದುರು ನೋಡುವಂತೆ ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆಗೆ ವೈದ್ಯಕೀಯ ಸ್ನೇಹಿತರು ಮುಂದಾಗುವಂತೆ ಅಂತರ್‍ರಾಷ್ಟ್ರೀಯ ದಂತ ವೈದ್ಯಕೀಯ ಕಾರ್ಯಾಗಾರದ ಸಹ ಕಾರ್ಯಕಾರಿ ಮಂಡಳಿಯ ಉಪಾಧ್ಯಕ್ಷರು ಮತ್ತು ಯುರೇಷೀಯನ್ ಅಸೋಶಿಯೆಷನ್ ಆಫ್ ಓರ್ತೋಡೋಂಟಿಕ್ಸನ ಅಧ್ಯಕ್ಷ ಪ್ರೊ. ಡಾ.ರಾಲ್ಫ್ ಜೋಹನ್ಸ್ ರೇಡಾಲಸ್ಕಿ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ವಿರಾಜಪೇಟೆ ಇವರ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿರುವ ದೇಶದ ಪ್ರಥಮ ಭಾರತ-ಅಂತರ್ ರಾಷ್ಟ್ರೀಯ ದಂತ ವೈದ್ಯಕೀಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಸಮಾವೇಶದಲ್ಲಿ ದಂತ ವೈದ್ಯಕೀಯ ಕ್ಷೇತ್ರದಲ್ಲಿ ಆತ್ಯಾಧುನಿಕವಾಗಿ ಹೊರಹೊಮ್ಮುತ್ತಿರುವ ಓರ್ತೋಡೋಂಟಿಕ್ಸ್ ತಂತ್ರಜ್ಞಾನಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ. ವೈದ್ಯಕೀಯ ಚಿಕಿತ್ಸಾ ಪದ್ದತಿಯಲ್ಲಿ ನೂತನ ತಂತ್ರಜ್ಞಾನ ಅಳವಡಿಕೆ ಬಗ್ಗೆ ಕಾರ್ಯಾಗಾರಕ್ಕೆ ಆಗಮಿಸಿರುವ ವಿವಿಧ ದೇಶಗಳಿಂದ ಆಗಮಿಸಿರುವ ಪ್ರತಿನಿಧಿಗಳಿಂದ ಚಿಕಿತ್ಸಾ ಪದ್ದತಿಗಳ ಉಪನ್ಯಾಸ ಕಾರ್ಯಕ್ರಮಗಳು ನಡೆಯಲಿದೆ ಎಂದರು. ಇಂದು ಜಗತ್ತು ಏನನ್ನು ಬಯಸುತ್ತದೆ, ಅದರೊಂದಿಗೆ ನಾವುಗಳು ವೈದ್ಯಕೀಯ ಸಂಶೋಧಕರು ವಿವಿಧ ರೀತಿಯ ಸಂಶೋಧನೆಗೆ ಮುಂದಾಗಬೇಕು. ದಂತಗಳ…
ಮಡಿಕೇರಿ ಮಾ.27 : ಬೈಕ್ ಅವಘಡದಲ್ಲಿ ಯುವಕ ಮೃತಪಟ್ಟಿರುವ ಘಟನೆ ಗೋಣಿಕೊಪ್ಪಲಿನ ಹಾತೂರು ಬಳಿ ನಡೆದಿದೆ. ಚೋಕಂಡಳ್ಳಿ ನಿವಾಸಿ ದಿ.ಮಂಡೇಡ ರಘು ಅವರ ಪುತ್ರ ಅಚ್ಚಯ್ಯ (25) ಮೃತ ದುರ್ದೈವಿ.






