ವಿರಾಜಪೇಟೆ ಮಾ.27 : ನೆಲ್ಲಿಹುದಿಕೇರಿಯ ನಲ್ವತ್ತೆಕ್ರೆ ಗ್ರಾಮದ ಶ್ರೀ ಮಾರಿಯಮ್ಮ ದೇವಸ್ಥಾನದ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯದಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆಯಿತು. ಅರ್ಚಕರು ಶ್ರೀ ದೇವಿಗೆ ವಿಶೇಷ ಅಲಂಕಾರವನ್ನು ಮಾಡಿ, ಕುಂಕುಮಾರ್ಚನೆ, ಪುಷ್ಪರ್ಚನೆ, ಅಭಿಷೇಕವನ್ನು ನೆರವೇರಿಸಿ ಮಹಾ ಮಂಗಳಾರತಿ ಪೂಜೆ ನೆರವೇರಿಸಿದರು. ನಂತರ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯವರು ಹಾಜರಿದ್ದರು.
ಲೇಖಕ: admin
ಮಡಿಕೇರಿ ಮಾ.27 : ರಾಜ್ಯದ ಬಿಜೆಪಿ ಸರ್ಕಾರ ಬಡವರ, ಶೋಷಿತರ ಪರವಾಗಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡುವಲ್ಲಿ ಸತತವಾಗಿ ವಿಫಲವಾಗಿದೆ ಎಂದು ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಹೈಕೋರ್ಟ್ ವಕೀಲ ಎ.ಎಸ್.ಪೊನ್ನಣ್ಣ ಆರೋಪ ಮಾಡಿದರು. ನಗರದ ಕಿತ್ತಳೆ ಬೆಳೆಗಾರರ ಸಂಘದ ಸಭಾಂಗಣದಲ್ಲಿ ನಡೆದ ಅಸಂಘಟಿತ ಕಾರ್ಮಿಕ ಹಿತರಕ್ಷಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸರಕಾರ ಕಾರ್ಮಿಕರು, ಶೋಷಿತರ, ಬಡವರ ಪರ ಯಾವುದೇ ಕಾರ್ಯಕ್ರಮ ರೂಪಿಸಿಲ್ಲ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ದುರ್ಬಲವರ್ಗ, ಅಲ್ಪಸಂಖ್ಯಾತರ ಜೀವನದ ಜೊತೆಯಲ್ಲಿ ಚೆಲ್ಲಾಟವಾಡುತ್ತಿದೆ ಎಂದರು. ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಜಾತಿ, ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಕಂದಕ ಸೃಷ್ಟಿಸುತ್ತಿದೆ. ಸಮಾಜದಲ್ಲಿ ಶ್ರೀಮಂತ, ಬಡವ ಎಂಬ ವರ್ಗವಿದ್ದು, ಬೇರೆ ಯಾವುದೇ ಜಾತಿ, ಧರ್ಮವಿಲ್ಲ. ಶ್ರೀಮಂತರು, ಬಡವರ ನಡುವಿನ ಅಂತರ ಹೆಚ್ಚುತ್ತಿದೆ ಇದನ್ನು ಸರಿದೂಗಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ತಾವೆಲ್ಲರು ಜೊತೆಯಾಗಿ ನಿಲ್ಲಬೇಕು ಎಂದರು. ವಿಧಾನ…
ಮಡಿಕೇರಿ ಮಾ.27 : ರಾಜ್ಯ ಬಿಜೆಪಿ ಸರ್ಕಾರ ಬಡವರ, ಶೋಷಿತರ ಪರವಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಆರೋಸಿದ್ದಾರೆ. ಗೋಣಿಕೊಪ್ಪದ ಕಿತ್ತಳೆ ಬೆಳೆಗಾರರ ಸಂಘದ ಸಭಾಂಗಣದಲ್ಲಿ ನಡೆದ ಅಸಂಘಟಿತ ಕಾರ್ಮಿಕರ ಹಿತರಕ್ಷಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರಕಾರ ಕಾರ್ಮಿಕರು, ಶೋಷಿತರು ಮತ್ತು ಬಡವರ ಪರವಾಗಿ ಯಾವುದೇ ಕಾರ್ಯಕ್ರಮ ರೂಪಿಸಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ದುರ್ಬಲವರ್ಗ, ಅಲ್ಪಸಂಖ್ಯಾತರ ಜೀವನದ ಜೊತೆಯಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಟೀಕಿಸಿದರು. ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಜಾತಿ, ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ಕಂದಕ ಸೃಷ್ಟಿಸುತ್ತಿದೆ. ಸಮಾಜದಲ್ಲಿ ಶ್ರೀಮಂತ, ಬಡವ ಎಂಬ ವರ್ಗವಿದ್ದು, ಬೇರೆ ಯಾವುದೇ ಜಾತಿ, ಧರ್ಮವಿಲ್ಲ. ಶ್ರೀಮಂತರು, ಬಡವರ ನಡುವಿನ ಅಂತರ ಹೆಚ್ಚುತ್ತಿದೆ, ಇದನ್ನು ಸರಿದೂಗಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ತಾವೆಲ್ಲರು ಜೊತೆಯಾಗಿ ನಿಲ್ಲಬೇಕು ಎಂದು…
ಮಡಿಕೇರಿ ಮಾ.27 : ಕರಿಕೆ ಗ್ರಾ.ಪಂ ವ್ಯಾಪ್ತಿಯಲ್ಲಿ ರೂ.4 ಕೋಟಿ ವೆಚ್ಚದಲ್ಲಿ ನಿರ್ಮಾಣಾವಾಗುತ್ತಿರುವ (ಐಟಿಡಿಪಿ ವಸತಿ ನಿಲಯ, ಕಸ ವಿಲೇವಾರಿ ಘಟಕ, ಡಿಜಿಟಲ್ ಲೈಬ್ರರಿ, ನೂತನ ಅಂಗನವಾಡಿ, ರಸ್ತೆಗಳು, ಸೇತುವೆ) ಕಾಮಗಾರಿ ಶಾಸಕ ಕೆ.ಜಿ.ಬೋಪಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭ ಪೂರ್ಣಗೊಂಡ ಕಾಮಗಾರಿಯನ್ನು ಉದ್ಘಾಟಿಸಿದರು. ನಂತರ ಸಭಾ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸಿ, ಗೌರವಿಸಿದರು.
ಮಡಿಕೇರಿ ಮಾ.27 : ಪೊನ್ನಂಪೇಟೆ ತಾಲ್ಲೂಕು, ನಾಲ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಶಾಸಕ ಕೆ.ಜಿ.ಬೋಪಯ್ಯ ಅವರನ್ನು ಸನ್ಮಾನಿಸಲಾಯಿತು. ಸಂಘದ ವತಿಯಿಂದ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಸಂಘದ ಪ್ರಮುಖರು ಸನ್ಮಾನಿಸಿ ಗೌರವಿಸಿದರು.
ಮಡಿಕೇರಿ ಮಾ.27 : ಬಿರುನಾಣಿ – ಬಾಡಗರಕೇರಿ ಲೋಕೋಪಯೋಗಿ ಮುಖ್ಯ ರಸ್ತೆ ಅಗಲೀಕರಣ ಮತ್ತು ಡಾಂಬರಿಕರಣಕ್ಕೆ ರೂ.1 ಕೋಟಿ 25 ಲಕ್ಷ ಮಂಜೂರಾಗಿದ್ದು, ನೂತನ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ನಾಪೋಕ್ಲು ಮಾ.27 : ಕೊಡವ ಕ್ರಿಕೆಟ್ ಅಕಾಡೆಮಿ ಮತ್ತು ಕ್ರಿಕೆಟ್ ನಮ್ಮೆ ವತಿಯಿಂದ ಏ.22 ರಿಂದ ಚೆರಿಯಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆರಂಭಗೊಳ್ಳಲಿರುವ ಕೌಟುಂಬಿಕ ಕ್ರಿಕೆಟ್ ಉತ್ಸವಕ್ಕೆ ಕುಟುಂಬದ ಸದಸ್ಯರೆಲ್ಲರೂ ಉತ್ಸವದ ಯಶಸ್ಸಿಗೆ ಸಹಕರಿಸಬೇಕು ಎಂದು ಕುಟುಂಬದ ಕ್ರಿಕೆಟ್ ಉತ್ಸವ ಅಧ್ಯಕ್ಷ ಕರ್ನಲ್, ಮಾಜಿ ಒಲಂಪಿಯನ್ ಬಾಳೆಯಡ ಕೆ.ಸುಬ್ರಮಣಿ ಹೇಳಿದರು. ನಾಪೋಕ್ಲುವಿನ ಹಳೆತಾಲೂಕು ಸಮುದಾಯ ಭವನದಲ್ಲಿ ನಡೆದ ನಮ್ಮೆಯ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು ಕ್ರಿಕೆಟ್ ನಮ್ಮೆ ಆಯೋಜನೆಯಿಂದ ಜನಾಂಗದ ಎಲ್ಲರೂ ಒಗ್ಗಟ್ಟಾಗಲು ಅವಕಾಶ ದೊರಕುತ್ತದೆ. 21ನೇ ವರ್ಷದ ನಮ್ಮೆಯನ್ನು ಅಚ್ಚುಕಟ್ಟಾಗಿ ನಡೆಸಲು ಸರ್ವರು ಸಹಕರಿಸಬೇಕು ಎಂದರು. ಕೊಡವ ಕೌಟುಂಬಿಕ ಹಾಕಿ ಜನಕ ಪಾಂಡಂಡ ಕುಟ್ಟಣಿ ಅವರ ಚಿಂತನೆಯಿಂದ ಆರಂಭಗೊಂಡ ಕೌಟುಂಬಿಕ ಹಾಕಿ ಕ್ರೀಡಾಕೂಟವನ್ನು ಎಲ್ಲ ಜನಾಂಗದವರು ಅನುಕರಿಸುತ್ತಿರುವುದು ಹೆಮ್ಮೆಯ ವಿಚಾರ ಎಂದು ತಿಳಿಸಿದರು. ಬಾಳೆಯಡ ಕ್ರಿಕೆಟ್ ಉತ್ಸವದಲ್ಲಿ ನೂರಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಹೆಸರು ನೋಂದಾಯಿಸಲು ಏ.10 ತನಕ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ…
ಮಡಿಕೇರಿ ಮಾ.26 : ಚೆಯ್ಯಂಡಾಣೆ ಸಮೀಪದ ನರಿಯಂದಡ ಗ್ರಾ.ಪಂ ವ್ಯಾಪ್ತಿಯ ಚೇಲಾವರ ಗ್ರಾಮಕ್ಕೆ ತೆರಳುವ ರಸ್ತೆ ಅವ್ಯವಸ್ಥೆಯಿಂದ ಕೂಡಿದ್ದು, ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗ್ರಾಮದ ಸಮಸ್ಯೆಯನ್ನು ನಿರ್ಲಕ್ಷಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಸ್ಥಳೀಯರು ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಗ್ರಾಮಸ್ಥ ಪಿ.ಕೆ.ಸೊಮ್ಮಯ್ಯ ಮಾತನಾಡಿ ಹದಗೆಟ್ಟ 6 ಕಿ.ಮೀ ದೂರದ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವಾಹನ ಚಾಲಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಕಬ್ಬೆ ಜಲಪಾತ, ಕರಡ ಕೀಮಲೆ ಕಾಡು ಗಿರಿಜನ ಕಾಲೋನಿ, ತಟ್ಟಮಕ್ಕಿ ಪೈಸಾರಿ ನಿವಾಸಿಗಳು ಪ್ರತಿದಿನ ಸಂಚರಿಸುವ ರಸ್ತೆ ಶೋಚನೀಯ ಸ್ಥಿತಿಯಲ್ಲಿದೆ ಎಂದು ಗಮನ ಸೆಳೆದರು. ಜೈನೀರ ರಾಜ್ ಕುಮಾರ್ ಮಾತನಾಡಿ ಚೆಯ್ಯಂಡಾಣೆಯಿಂದ ಚೇಲಾವರ ಗ್ರಾಮಕ್ಕೆ ತೆರಳುವ ರಸ್ತೆ ಸುಮಾರು 10 ವರ್ಷಗಳಿಂದ ದುರಸ್ತಿ ಕಂಡಿಲ್ಲ. ಗ್ರಾಮ ವಾಸ್ತವ್ಯದ ಸಂದರ್ಭ ಇಲ್ಲಿನ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಖುದ್ದು ಗ್ರಾಮಕ್ಕೆ…
ಮಡಿಕೇರಿ ಮಾ.26 : ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ವಿರಾಜಪೇಟೆ ತಾಲ್ಲೂಕಿನ ಕಡಂಗದ ಮರೂರು ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಿವಾಸಿ, ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಎನ್.ಸಿ.ಸಿ ಅಧಿಕಾರಿಯಾಗಿದ್ದ ಡಾ.ಬಲ್ಯಂಡ ಬೀನಾ(52) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಡಾ.ಬಲ್ಯಂಡ ಬೀನಾ ಅವರು ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದಿದ್ದರು. ಪರಿಣಾಮ ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಾವನ್ನಪ್ಪಿದ್ದಾರೆ. ಮೃತರು ಪತಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮಡಿಕೇರಿ ಮಾ.26: ದೆಹಲಿಯಲ್ಲಿ ಕರ್ನಾಟಕ ಕನ್ನಡ ಸಂಘದ ಅಮೃತ ಮಹೋತ್ಸವದ ಅಂಗವಾಗಿ ನಡೆದ “ಬಾರಿಸು ಕನ್ನಡ ಡಿಂಡಿಮ” ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಶಾಲನಗರ ಕುಂದನ ನೃತ್ಯಾಲಯದ ಮಕ್ಕಳು ಪ್ರದರ್ಶಿಸಿದ ನೃತ್ಯ ಪ್ರದರ್ಶನ ಕಲಾ ರಸಿಕರ ಮನ ಸೆಳೆಯಿತು. ನೃತ್ಯ ವಿದುಷಿ ವಿನುತ ಹೇಮಂತ್ ನೇತೃತ್ವದಲ್ಲಿ ಪ್ರದರ್ಶಿಸಿದ ನಂತರ “ಕೊಡಗಿನ ಸಂಭ್ರಮ” ಎಂಬ ನೃತ್ಯ ರೂಪಕವು ದೆಹಲಿ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಯಿತು. ಕೊಡಗಿನ ಇತಿಹಾಸ ಹಾಗೂ ಆಚರಣೆಗಳ ಕುರಿತು 30 ನಿಮಿಷಗಳ ಕಾಲ ಪ್ರದರ್ಶಿಸಿದ ಮಕ್ಕಳ ನೃತ್ಯ ರೂಪಕವು ಕೊಡಗಿನ ಕಲೆ ಮತ್ತು ಸಂಸ್ಕೃತಿಯನ್ನು ಅನಾವರಣಗೊಳಿಸಿತು. ಪ್ರಧಾನಿ ನರೇಂದ್ರ ಮೋದಿ ಅವರು ಆಕರ್ಷಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ದೆಹಲಿ ಕರ್ನಾಟಕ ಸಂಘದ ವತಿಯಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಮಕ್ಕಳ ಕಲಾ ಪ್ರತಿಭೆಗೆ ಉತ್ತಮ ವೇದಿಕೆಯಾಗಿತ್ತು ಎಂದು ನೃತ್ಯ ವಿದೂಷಕಿ ವಿನುತ ಅಭಿಪ್ರಾಯಪಟ್ಟರು. ರಶ್ಮಿ, ಮೋನಿಕ, ಸ್ಪಂದನ, ತನಿಷ, ಡಿ.ಎಚ್.ಖುಷಿ, ಆಲಿಯ, ನಿಷ್ಮಯ್, ತಸ್ಮಿ, ಧನ್ಯಶ್ರೀ, ಪ್ರಗನ್ಯ, ದಿಯಾ, ಸವಿತ, ಲಕ್ಷಿö್ಮ, ಯಶಸ್ವಿನಿ ಸೇರಿದಂತೆ ಇತರ ನೃತ್ಯಪಟುಗಳು…






