ಮಡಿಕೇರಿ ಮಾ.26 : ಶನಿವಾರಸಂತೆ ಸಮಿಪದ ಮಾಲಂಬಿ ಗ್ರಾಮದ ಶ್ರೀಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಪೂಜಾ ಮಹೋತ್ಸವ ಮತ್ತು ಶ್ರೀ ಲಕ್ಮಿ ವೆಂಕಟೇಶ್ವರ ದೇವರ ಹರಿಸೇವೆ ಶ್ರದ್ದಾಭಕ್ತಿಯಿಂದ ನೆರವೇರಿತು. ಮಾಲಂಬಿ ಗ್ರಾಮದ ಶ್ರೀಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿಯು ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಅಕ್ಕಪಕ್ಕದ ತಾಲ್ಲೂಕು ಮತ್ತು ಜಿಲ್ಲೆಗಳಿಂದ ನೂರಾರು ಭಕ್ತರು ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಶ್ರೀಲಕ್ಷ್ಮೀ ವೆಂಟೇಶ್ವರ ದೇವಸ್ಥಾನದ ತಕ್ಕ ಮುಖ್ಯಸ್ಥ ಎಂ.ಡಿ.ಶಿವಪ್ಪ ಅವರ ನೇತೃತ್ವದಲ್ಲಿ ವಾದ್ಯಗೋಷ್ಠಿ ಮೆರವಣಿಗೆ ಮೂಲಕ ಗ್ರಾಮದ ದೇವಸ್ಥಾನದ ಪಕ್ಕದ ಕೆರೆಯಲ್ಲಿ ಗಂಗಾಸ್ನಾನಕ್ಕೆ ತೆರಳಿದರು. ಗಂಗಾಸ್ಥಾನ ಪೂಜೆಸಲ್ಲಿಸಿದ ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಗ್ರಾಮದ ಶ್ರೀ ಕನ್ನಂಬಾಡಿ ಅಮ್ಮನವರ ದೇವಸ್ಥಾನದಲ್ಲಿ ಶ್ರದ್ದಾಭಕ್ತಿಯಿಂದ ಪ್ರದಕ್ಷಣೆ ಮಾಡಿದ ನಂತರ ಶ್ರೀ ಲಕ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ನಡೆಯಿತು. ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. (ವರದಿ : ದಿನೇಶ್ ಮಾಲಂಬಿ , ಶನಿವಾರಸಂತೆ)
ಲೇಖಕ: admin
ಮಡಿಕೇರಿ ಮಾ.26 : ಕೊಡವ ಜನಾಂಗವನ್ನು ಹೈಬ್ರಿಡ್ ಜನಾಂಗವೆಂದು ಹೇಳುವ ಮೂಲಕ ಕೊಡವ ಜನಾಂಗದ ಕೆಂಗಣ್ಣಿಗೆ ಗುರಿಯಾಗಿದ್ದ ಮಂಡ್ಯ ಜಿಲ್ಲೆಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್ ಗೌಡ ಅವರು “ಅಖಿಲ ಕೊಡವ ಸಮಾಜ”ಕ್ಕೆ ಪತ್ರ ಬರೆದು ಕೊಡವರ ಕ್ಷಮೆಯಾಚಿಸಿದ್ದಾರೆ. ನಾನು ಯಾವುದೇ ದುರುದ್ದೇಶದಿಂದ ಹೇಳಿಕೆಯನ್ನು ನೀಡಲಿಲ್ಲ, ಆದಿ ಚುಂಚನಗಿರಿ ಶ್ರೀಮಠದ ಪೀಠಾಧ್ಯಕ್ಷರ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿದ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರಿಗೆ ಉತ್ತರ ನೀಡುವ ಭರದಲ್ಲಿ ಪ್ರಮಾದವಾಗಿದೆ ಹೊರತು ಕೊಡವ ಜನಾಂಗದ ಮೇಲೆ ನನಗೆ ಅಪಾರವಾದ ಗೌರವವಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರಂತಹ ವೀರರು ಸೇರಿದಂತೆ ಲಕ್ಷಾಂತರ ವೀರ ಯೋಧರನ್ನು ನೀಡಿದ ಕೊಡವ ಜನಾಂಗದ ಮೇಲೆ ಇಡೀ ಭರತಖಂಡವೇ ಹೆಮ್ಮೆ ಪಡುತ್ತದೆ. ನನ್ನ ಮಾತಿನಿಂದ ನೋವಾಗಿದ್ದರೆ ನಾನು ಕೊಡವ ಜನಾಂಗವನ್ನು ಕ್ಷಮೆ ಕೇಳುತ್ತೇನೆ. ಇದನ್ನು ಮುಂದುವರೆಸಿಕೊAಡು ಹೋಗದಂತೆ ಕೇಳಿಕೋಳ್ಳುತ್ತೇನೆ. ಅಡ್ಡಂಡ ಕಾರ್ಯಪ್ಪನಂತಹ ವಿಚಾರಹೀನರು ಎಲ್ಲಾ ಜನಾಂಗದಲ್ಲೂ ಇದ್ದಾರೆ, ಇದು ಅವರಿಗೆ ಆಡಿದ…
ಮಡಿಕೇರಿ ಮಾ.26 : ನಿರಂತರವಾಗಿ ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಲೇ ಬರುತ್ತಿರುವ ರಾಜ್ಯ ಬಿಜೆಪಿ ಸರ್ಕಾರ ಇದೀಗ ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದು ಮಾಡುವ ಮೂಲಕ ದೊಡ್ಡ ಅನ್ಯಾಯವನ್ನು ಮಾಡಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಕಲೀಲ್ ಬಾಷ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಎಲ್ಲಾ ಸಮುದಾಯದವರಿಗೂ ಮೀಸಲಾತಿಯನ್ನು ನೀಡಲಿ, ನಮ್ಮ ಆಕ್ಷೇಪಣೆ ಇಲ್ಲ. ಆದರೆ ಸಂವಿಧಾನಾತ್ಮಕವಾಗಿ ಮುಸಲ್ಮಾನರಿಗಾಗಿ ಮೀಸಲಿಟ್ಟ ಮೀಸಲಾತಿಯನ್ನು ಕಸಿದುಕೊಳ್ಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರನ್ನೇ ಗುರಿ ಮಾಡಿಕೊಂಡು ನಿಯಮಗಳನ್ನು ಜಾರಿಗೆ ತರಲಾಗಿದೆ. ಅಲ್ಲದೆ ವಿನಾಕಾರಣ ವಿವಾದಗಳನ್ನು ಸೃಷ್ಟಿಸಿ ಜನರ ಹಾದಿ ತಪ್ಪಿಸುವ ಯತ್ನ ಮಾಡಲಾಗಿದೆ. ಇದೀಗ ಮುಸಲ್ಮಾನರ ಮೀಸಲಾತಿಯನ್ನೇ ಕಸಿದುಕೊಳ್ಳುವ ಮೂಲಕ ದ್ವೇಷ ರಾಜಕಾರಣವನ್ನು ಬಹಿರಂಗ ಪಡಿಸಿದೆ. ಅಭಿವೃದ್ಧಿ ಪರ ಚಿಂತನೆಯಿಂದ ಜನರ ಹೃದಯ ಗೆಲ್ಲಲಾಗದ ಸರ್ಕಾರ ಭಾವನಾತ್ಮಕವಾಗಿ ಹಿಡಿದಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದೆ. ಸಮಾಜದಲ್ಲಿ ಒಡಕು ಮೂಡಿಸಿ ವಿಧಾನಸಭಾ…
ಮಡಿಕೇರಿ ಮಾ.26 : ಇನ್ನರ್ ವೀಲ್ ಸಂಸ್ಥೆ ವತಿಯಿಂದ ನಗರದ ಅಂಗನವಾಡಿಯ ಮಕ್ಕಳಿಗೆ ಕುಳಿತುಕೊಳ್ಳಲು ಜಮಖಾನ ಕೊಡುಗೆಯಾಗಿ ನೀಡಲಾಯಿತು. ನಗರದ ರೈಫಲ್ ರೇಂಜ್ ನಲ್ಲಿರುವ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕುಳಿತುಕೊಳ್ಳಲು ಮತ್ತು ವಿಶ್ರಾಂತಿ ಪಡೆಯಲು ಉಪಯೋಗವಾಗುವಂಥ ಜಮಖಾನವನ್ನು ಮಡಿಕೇರಿ ಇನ್ನರ್ ವೀಲ್ ಸಂಸ್ಥೆ ವತಿಯಿಂದ ನೀಡಲಾಯಿತು. ಈ ಸಂದರ್ಭ ಇನ್ನರ್ ವೀಲ್ ಅಧ್ಯಕ್ಷೆ ಡಾ.ರೇಣುಕಾ ಸುಧಾಕರ್, ಕಾರ್ಯದರ್ಶಿ ಲಲಿತಾ ರಾಘವನ್, ನಿರ್ದೇಶಕಿಯರಾದ ಉಮಾಗೌರಿ, ಮಲ್ಲಿಗೆ ಪೈ, ಗುಲಾಬಿ ಜನಾರ್ಧನ್ ಹಾಜರಿದ್ದರು.
ಮಡಿಕೇರಿ ಮಾ.26 : ಕುಶಾಲನಗರ ಮಹಾತ್ಮಾ ಗಾಂಧಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ನಂಜರಾಯಪಟ್ಟಣ ಪ್ರೌಢಶಾಲೆಯ ಆವರಣದಲ್ಲಿ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ದೊರೆಯಿತು. ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಿ ಬಿ ಭಾರತೀಶ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿಬಿರದ ಮೂಲಕ ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ಮತ್ತು ಗ್ರಾಮೀಣ ಜನರ ಬದುಕು ಸಮಸ್ಯೆಗಳ ಬಗ್ಗೆ ಅರಿಯಲು ಅವಕಾಶವಿದೆ ಎಂದು ಅವರು ಹೇಳಿದರು. ಶಾಲಾ ಕಾಲೇಜು ವಿದ್ಯಾರ್ಥಿಗಳು ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು ಸಾಮಾಜಿಕವಾಗಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮ ಪಾತ್ರ ನಿಭಾಯಿಸಬೇಕಾಗಿದೆ ಎಂದು ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಎನ್ ಎನ್ ಶಂಭುಲಿಂಗಪ್ಪ ಅವರು ಮಾತನಾಡಿ ಶೀಘ್ರದಲ್ಲಿ ಪಾಲ್ಗೊಳ್ಳುವ ಹಲವು ಸಂಪನ್ಮೂಲ ವ್ಯಕ್ತಿಗಳು ನೀಡುವ ಉಪನ್ಯಾಸಗಳನ್ನು ವಿದ್ಯಾರ್ಥಿಗಳು ಅರ್ಥೈಸಿಕೊಳ್ಳಬೇಕು. ಈ ಮೂಲಕ ಹೆಚ್ಚಿನ ಜ್ಞಾನ ಸಂಪಾದನೆಯ ಪ್ರಯೋಜನಗಳನ್ನು ಪಡೆಯುವಂತಾಗಬೇಕು ಎಂದರು. ಪದವಿ ಕಾಲೇಜಿನ…
ಮಡಿಕೇರಿ ಮಾ.26 : ಅಂತರರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನೆ ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನಲ್ಲಿ 1785 ರಲ್ಲಿ ಹತ್ಯೆಗೀಡಾದ ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮಾತನಾಡಿ ಕೊಡವ ಜನಾಂಗದ ಮೇಲೆ ಜನಾಂಗೀಯ ತಾರತಮ್ಯ ನಿರಂತರವಾಗುತ್ತಿದೆ. ಸಾಂವಿಧಾನಿಕವಾಗಿ ದೊರೆಯಬೇಕಾದ ಹಕ್ಕುಗಳನ್ನು ನೀಡದೆ ವಂಚಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಟಿಪ್ಪು ಕಾಲದಲ್ಲಿ ದೇವಟ್ ಪರಂಬುವಿನಲ್ಲಿ ವಂಚನೆಯಿಂದ ವೀರ ಬುಡಕಟ್ಟು ಕೊಡವರನ್ನು ಹತ್ಯೆ ಮಾಡಲಾಗಿದೆ. ಧೀರ ಪರಂಪರೆಯ ಅತಿ ಸೂಕ್ಷ್ಮ ಜನಾಂಗದ ಮೇಲೆ ನಡೆದಿರುವ ದಾಳಿಯನ್ನು ಇಡೀ ವಿಶ್ವವೇ ಖಂಡಿಸಬೇಕಾಗಿದೆ. ಸಂಚಿನಿಂದ ಜೀವ ಕಳೆದುಕೊಂಡ ಹಿರಿಯರನ್ನು ಸ್ಮರಿಸಿಕೊಳ್ಳುವುದು ಕೊಡವರ ಕರ್ತವ್ಯವಾಗಿದೆ ಎಂದರು. ಕೊಡವ ಬುಡಕಟ್ಟು ಜನಾಂಗದ ಸಬಲೀಕರಣಕ್ಕಾಗಿ ಸಿಎನ್‌ಸಿ ಸಂಘಟನೆ ನಡೆಸುತ್ತಿರುವ ಹೋರಾಟಕ್ಕೆ ಅಗಲಿದ ಹಿರಿಯರು ಬೆಂಬಲವಾಗಿ ನಿಂತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ನಾಚಪ್ಪ ಕೊಡವಲ್ಯಾಂಡ್ ಜಿಯೋ-ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ-ಸ್ವಯಂ ನಿರ್ಣಯ ಹಕ್ಕುಗಳಿಗಾಗಿ ಶಾಂತಿಯುತ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದರು.…
ಮಡಿಕೇರಿ ಮಾ.26 : ವಿಧಾನಸಭಾ ಚುನಾವಣೆ ಹಿನ್ನೆಲೆ ಆಮ್ ಆದ್ಮಿ ಪಾರ್ಟಿ ಜನರಿಂದ ಜನರಿಗಾಗಿ ಪ್ರಣಾಳಿಕೆ ಸಿದ್ಧ ಪಡಿಸಲಿದ್ದು, ಜನರು ಸಲಹೆ ಸೂಚನೆಗಳನ್ನು ನೀಡಬಹುದೆಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ. ಮಾ.29 ರಂದು ಬೆಳಗ್ಗೆ 10 ಗಂಟೆಗೆ ಪೊನ್ನಂಪೇಟೆ ಐಬಿ ಸಭಾಂಗಣದಲ್ಲಿ ಪ್ರಣಾಳಿಕೆ ಸಭೆ ನಡೆಯಲಿದ್ದು, ಪಕ್ಷದ ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ ಎಂದು ಹೇಳಿದ್ದಾರೆ. ಕೊಡಗಿನ ಜ್ವಲಂತ ಸಮಸ್ಯೆಗಳು ಹಾಗೂ ಜನರ ಬೇಡಿಕೆಗಳಿಗೆ ಪ್ರಣಾಳಿಕೆ ಸ್ಪಂದಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಆಸಕ್ತರು Http://bit.ly/JanaraPranalike ಲಿಂಕನ್ನು ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಮಾ.26 : ಮುಸಲ್ಮಾನರನ್ನೇ ಗುರಿಯಾಗಿಸಿಕೊಂಡು ಮೀಸಲಾತಿಯ ಹಕ್ಕನ್ನು ಕಸಿದುಕೊಂಡಿರುವ ರಾಜ್ಯ ಬಿಜೆಪಿ ಸರ್ಕಾರ ತನ್ನ ಮೂಲ ಉದ್ದೇಶವನ್ನು ಬಹಿರಂಗ ಪಡಿಸಬೇಕೆಂದು ಜಾತ್ಯತೀತ ಜನತಾದಳದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಪೋಕ್ಲುವಿನ ಎಂ.ಎ.ಮನ್ಸೂರ್ ಆಲಿ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದು ಮಾಡಿರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ಟೀಕಿಸಿದ್ದಾರೆ. ಬೇರೆ ಸಮುದಾಯಗಳಿಗೆ ಮೀಸಲಾತಿ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ಮುಸ್ಲಿಮರ ಮೀಸಲಾತಿಯನ್ನು ಕಸಿದುಕೊಂಡಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಅಲ್ಪಸಂಖ್ಯಾತ ನಾಯಕರುಗಳು ಮುಸ್ಲಿಮರಿಗಾದ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕೆಂದು ಒತ್ತಾಯಿಸಿರುವ ಮನ್ಸೂರ್ ಆಲಿ, ಶೇ.4 ರ ಮೀಸಲಾತಿಯನ್ನು ಸರ್ಕಾರ ಯಥಾಸ್ಥಿತಿ ಕಾಯ್ದುಕೊಳ್ಳದಿದ್ದಲ್ಲಿ ಬೃಹತ್ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನವು ಮುಸಲ್ಮಾನರ ಸಬಲೀಕರಣಕ್ಕಾಗಿ ಮೀಸಲಾತಿಯ ಹಕ್ಕನ್ನು ನೀಡಿದೆ. ಈ ಹಕ್ಕಿನ ಮೂಲಕವೇ ತೀರ ಹಿಂದುಳಿದಿರುವ ಮುಸಲ್ಮಾನರು ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಮತ್ತು…
ಮಡಿಕೇರಿ ಮಾ.25 : ಕುಶಾಲನಗರದ ಮಡಿಕೇರಿ ರಸ್ತೆಯ ರೆಸಾರ್ಟ್ ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ವಜ್ರದ ಹರಳುಗಳು ಹಾಗೂ ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಚೋರರನ್ನು ಬಂಧಿಸುವಲ್ಲಿ ಜಿಲ್ಲಾ ಅಪರಾಧ ಪತ್ತೆದಳ ಹಾಗೂ ಸಿಪಿಐ ಕುಶಾಲನಗರ ವೃತ್ತದ ಪೊಲೀಸ್ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಕುಶಾಲನಗರ ಡಿ ವೈ ಎಸ್ ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಆರೋಪಿಗಳ ಬಂಧನದ ಕುರಿತು ಮಾಹಿತಿ ನೀಡಿದರು. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಬಳಿಯ ನಿವಾಸಿ ಗುಜರಿ ವ್ಯಾಪಾರ ಮಾಡುತ್ತಿದ್ದ ಖಾಸಿಂ (32) ಹಾಗೂ ರೆಂಜಲಾ ಗ್ರಾಮದ ಮೊರತ್ತಿಗುಂಡಿ ಬಳಿಯ ಚಾಲಕ ಮೊಹಮ್ಮದ್ ಸಿರಾಜುದ್ದೀನ್ (37) ಬಂಧಿತ ಆರೋಪಿಗಳಾಗಿದ್ದಾರೆ. ಇವರ ಬಳಿಯಿಂದ 160 ಗ್ರಾಂ ತೂಕದ 8 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ, 1 ಲಕ್ಷ ರೂ. ಮೌಲ್ಯದ ವಜ್ರದ ಹರಳುಗಳು, 2ಲಕ್ಷದ 23 ಸಾವಿರ ನಗದು ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ…
ಸೋಮವಾರಪೇಟೆ ಮಾ.25 : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ಆರೋಗ್ಯ ಮತ್ತು ನೈರ್ಮಲ್ಯ ಇಲಾಖೆಯ ಸಹಯೋಗದಲ್ಲಿ ನೀರು, ನೈರ್ಮಲ್ಯ, ಆರೋಗ್ಯ ಸಂರಕ್ಷಣೆ, ನೀರಿನಿಂದ ಹರಡುವ ರೋಗಗಳು, ಶೌಚಗೃಹಗಳ ಬಳಕೆಯ ಜಾಗೃತಿ ಬಗ್ಗೆ ಈಚೆಗೆ ಆಯೋಜಿಸಿದ್ದ ಆನ್‌ಲೈನ್ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 9 ನೇ ತರಗತಿ ವಿದ್ಯಾರ್ಥಿಗಳಾದ ಪಿ.ಬಿ.ಸಂಜನಾ ಕೊಡಗು ಜಿಲ್ಲಾ ಮಟ್ಟದಲ್ಲಿ ಪ್ರಥಮ ಹಾಗು ಕೆ.ಎಚ್.ಸೌಜನ್ಯ ದ್ವಿತೀಯ ಸ್ಥಾನ ಪಡೆದಿದ್ದಾರೆ.






