ಲೇಖಕ: admin

ಮಡಿಕೇರಿ ಮಾ.25 : ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದು ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯವೆoದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮುಸ್ಲಿಮರು ರಾಜ್ಯ ಸರ್ಕಾರಕ್ಕೆ ಏನು ಅನ್ಯಾಯ ಮಾಡಿದ್ದಾರೆ, ಮುಸ್ಲಿಮರ ಮೀಸಲಾತಿಯನ್ನು ಕಸಿದು ನಮಗೆ ನೀಡಿ ಎಂದು ಮತ್ತೊಂದು ಸಮುದಾಯದವರು ಕೇಳಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ನೀತಿಯಂತೆ ರಾಜ್ಯ ಕಟ್ಟುವ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಸಭೆ, ಸಮಾರಂಭಗಳಲ್ಲಿ ಹೇಳಿಕೊಳ್ಳುತ್ತಾರೆ. ಆದರೆ ಇಂದು ಏಕಾಏಕಿ ಮುಸ್ಲಿಮರ ಹಕ್ಕುಗಳನ್ನು ಕಸಿದುಕೊಳ್ಳುವ ಮೂಲಕ ಇದು ತಾರತಮ್ಯದ ಸರ್ಕಾರ ಎನ್ನುವುದನ್ನು ಸಾಬೀತು ಪಡಿಸಿದ್ದಾರೆ. ಸಂವಿಧಾನದ ಆಶಯದಂತೆ ಮುಸ್ಲಿಮರಿಗೂ ಪ್ರಜಾಪ್ರಭುತ್ವ ರಾಷ್ಟçದಲ್ಲಿ ಮೀಸಲಾತಿಯ ಹಕ್ಕು ದೊರೆತ್ತಿದೆ. ಆದರೆ ಇದನ್ನು ಇಲ್ಲದಂತೆ ಮಾಡುವ ಮೂಲಕ ಈ ದೇಶದ ಜಾತ್ಯತೀತ ವ್ಯವಸ್ಥೆಗೆ ಮಸಿ ಬಳಿಯಲಾಗಿದೆ ಎಂದು ಟೀಕಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಸಂವಿಧಾನದ…

Read More

ನಾಪೋಕ್ಲು ಮಾ.25 : ರಾಜಕೀಯ ಜನರನ್ನು ದೂರ ಮಾಡಿದರೆ ಕ್ರೀಡೆ ಜನರನ್ನು ಒಗ್ಗೂಡಿಸುತ್ತದೆ ಎಂದು ಹೈಕೋರ್ಟ್ ವಕೀಲ ಅಜ್ಜಿ ಕುಟ್ಟಿರ ಎಸ್ ಪೊನ್ನಣ್ಣ ಹೇಳಿದರು. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಹಿಂದೂ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಮತ್ತು ಹಗ್ಗ ಜಗ್ಗಾಟ ಕ್ರೀಡಾಕೂಟ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಇತ್ತೀಚೆಗೆ ವಿವಿಧ ಜನಾಂಗದವರ ಕ್ರೀಡಾಕೂಟಗಳು ನಡೆಯುತ್ತಿವೆ. ಹಲವು ಕ್ರೀಡಾಕೂಟಗಳಲ್ಲಿ ನಾನು ಭಾಗವಹಿಸಿದ್ದೇನೆ. ಆರ್ಥಿಕ ನೆರವನ್ನು ನೀಡಿದ್ದೇನೆ. ಯುವಜನತೆ ಸಂಘಟಿಸುವ ಕ್ರೀಡಾಕೂಟಗಳಿಗೆ ಆರ್ಥಿಕ ನೆರವು ನೀಡಿದರೆ ಮಾತ್ರ ಅವರು ಮುಂದೆ ಬರಲು ಮತ್ತು ಕ್ರೀಡಾಕೂಟಗಳು ಜನರನ್ನು ಒಂದುಗೂಡಿಸಲು ಸಾಧ್ಯ ಎಂದರು. ಜಿಲ್ಲೆಯ ಜನರ ಕ್ರೀಡಾಪೇಮ ಮೆಚ್ಚುವಂಥದ್ದು. ಜಿಲ್ಲೆಯಲ್ಲಿ ಕ್ರೀಡಾಕೂಟಗಳಿಗೆ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಜಿಲ್ಲೆಯ ಕ್ರೀಡಾಪಟುಗಳಿಗೆ ಅನುಕೂಲಕರವಾಗುವಂತೆ ಹೋಬಳಿ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಉತ್ತಮ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು…

Read More

ಮಡಿಕೇರಿ ಮಾ.25 : ಕೊಡವ ಕುಟುಂಬಗಳ ನಡುವಿನ 23ನೇ ವರ್ಷದ ಕೌಟುಂಬಿಕ ಹಾಕಿ ಉತ್ಸವ ಅಪ್ಪಚೆಟ್ಟೋಳಂಡ ಹಾಕಿ ನಮ್ಮೆಯ ಪಂದ್ಯದಲ್ಲಿ 72 ವರ್ಷದ ಕುಕ್ಕೇರ ಜಯ ಚಿಣ್ಣಪ್ಪ ಕುಕ್ಕೇರ ತಂಡದ ಪರವಾಗಿ ಆಟವಾಡುವುರ ಮೂಲಕ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಭಾಜನರಾದರು. ಕೊಡವ ಹಾಕಿ ಅಕಾಡೆಮಿ ಉಪಾಧ್ಯಕ್ಷರಾಗಿರುವ ಜಯ ಚಿಣ್ಣಪ್ಪ ಮೈದಾನದಲ್ಲಿ ಚುರುಕಿನ ಆಟವಾಡುವುದರ ಮೂಲಕ ಗಮನ ಸೆಳೆದರು. ಕಿರಿಯ ಆಟಗಾರ ತನು : ಮೂರು ವರ್ಷ ಚಿಲ್ಲವಂಡ ತನು ತಮ್ಮಯ್ಯ ಹಾಕಿ ಸ್ಟಿಕ್ ಸಹಿತ ಮೈದಾನಕ್ಕೆ ಇಳಿಯುವುದರ ಮೂಲಕ ಅತ್ಯಂತ ಕಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದಿದ್ದಾರೆ. ಇದೇ ಪಂದ್ಯದಲ್ಲಿ ಪೊನ್ನಚ್ಚಂಡ ತಂಡದ ಪರವಾಗಿ ಪತಿ, ಪತ್ನಿ, ಪುತ್ರ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದರು.

Read More

ಮಡಿಕೇರಿ ಮಾ.25 : ಭಾಗಮಂಡಲ ವಲಯ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ಮಾ.27 ರಂದು ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕಾಂಗ್ರೆಸ್ ವಲಯಾಧ್ಯಕ್ಷ ದೇವಂಗೋಡಿ ಎಸ್.ಹರ್ಷ, ಭಾಗಮಂಡಲದ ಕ್ಯಾಂಪ್ ನಿಶಾನಿ ರೆಸಾರ್ಟ್ನಲ್ಲಿ ಸಂಜೆ 6 ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ. ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ರಾಜಕೀಯ, ಸಾಮಾಜಿಕ ಕಾರ್ಯಕರ್ತ ಕೋಳಿಬೈಲು ವೆಂಕಟೇಶ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಕೆಪಿಸಿಸಿ ಸದಸ್ಯ ಬಿ.ಎಸ್.ರಮಾನಾಥ್, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಸುನಿಲ್ ಜೆ.ಪತ್ರಾವೋ ಮತ್ತಿತರರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

Read More

ಮಡಿಕೇರಿ ಮಾ.25 : ಸಮಾಜದ ಸ್ವಾಸ್ಥ್ಯ ಕಾಪಾಡಲು ಉರಿಗೌಡ ಹಾಗೂ ನಂಜೇಗೌಡ ಪಾತ್ರಗಳ ಕುರಿತು ನೈಜ ವಿಚಾರವನ್ನು ತಿಳಿಸಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ನಿರ್ಮಲಾನಂದ ಸ್ವಾಮಿಗಳ ವಿರುದ್ಧ ಹಗುರವಾಗಿ ಮಾತನಾಡಿರುವ ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರ ನಡೆಯನ್ನು ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗೌರವಯುತ ಸ್ಥಾನದಲ್ಲಿರುವ ಶ್ರೀ ನಿರ್ಮಲಾನಂದ ಸ್ವಾಮಿಗಳು ತಮ್ಮ ಸ್ಥಾನಕ್ಕೆ ತಕ್ಕಂತೆ ನಡೆದುಕೊಂಡು ಘನತೆಯನ್ನು ಎತ್ತಿ ಹಿಡಿದಿದ್ದಾರೆ. ಆದರೆ ಒಬ್ಬ ಕಲಾವಿದನ ಸ್ಥಾನದಲ್ಲಿರುವ ಕಾರ್ಯಪ್ಪ ಅವರು ತಮ್ಮ ಮೂಗಿನ ನೇರಕ್ಕೆ ಎಲ್ಲರೂ ಮಾತನಾಡಬೇಕು ಎಂದು ಒತ್ತಡ ಹೇರುವ ಧಾಟಿಯಲ್ಲಿ ಹೇಳಿಕೆಗಳನ್ನು ನೀಡಿರುವುದು ಅವರ ಅಸಹನೆಯ ಮನೋಸ್ಥಿತಿಗೆ ಸಾಕ್ಷಿಯಾಗಿದೆ. ಸ್ವಾಮೀಜಿಯವರ ಬಗ್ಗೆ ಇವರು ನೀಡಿರುವ ಹೇಳಿಕೆ ಇಡೀ ಒಕ್ಕಲಿಗ ಸಮುದಾಯಕ್ಕೆ ನೋವುಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿಗಳು ಎರಡು ಪಾತ್ರಗಳ ಬಗ್ಗೆ ದಾಖಲೆ ಇಲ್ಲದೆ ಮಾತನಾಡಬೇಡಿ, ದಾಖಲೆ ತಂದರೆ…

Read More

ಸೋಮವಾರಪೇಟೆ ಮಾ.25 : ಗೌಡಳ್ಳಿ ಹಿಂದೂ ಗೆಳೆಯರ ಬಳಗದ ವತಿಯಿಂದ ಗೌಡಳ್ಳಿ ಬಿಜಿಎಸ್ ಮೈದಾನದಲ್ಲಿ ಆಯೋಜನೆಗೊಂಡಿದ್ದ 5ನೇ ವರ್ಷದ ಮುಕ್ತ ಫುಟ್ಬಾಲ್ ಪಂದ್ಯಾವಳಿಯ ಪ್ರತಿಷ್ಠೆಯ ‘ಹಿಂದೂಕಪ್’ ಟ್ರೋಫಿಯನ್ನು ಗೌಡಳ್ಳಿ ಗೋಲ್ಡನ್ ಗೈಸ್ ತಂಡ ಮುಡಿಗೇರಿಸಿಕೊಂಡಿತು. ಟೂರ್ನಿಯ ಬಲಿಷ್ಠ ತಂಡ ಎನಿಸಿಕೊಂಡಿದ್ದ ಕೂಗೂರು ಗೆಳೆಯರ ಬಳಗ ತಂಡ ಫೈನಲ್‍ನಲ್ಲಿ ಎಡವಿದ ಪರಿಣಾಮ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ವಿದೇಶಿ ಹಾಗೂ ವಿವಿಧ ರಾಜ್ಯಗಳ ಆಟಗಾರರನ್ನು ಹೊಂದಿದ್ದ ಎರಡು ತಂಡಗಳ ಫೈನಲ್ ಹೈಲೋಲ್ಟೇಜ್ ಪಂದ್ಯವಾಗಿತ್ತು. ಎರಡೂ ತಂಡಗಳು ಸಮಬಲದ ಹೋರಾಟ ನಡೆಸಿದವಾದರೂ ಯಾವೊಂದು ತಂಡವೂ ಫೀಲ್ಡ್ ಗೋಲ್ ಬಾರಿಸಲು ಸಾಧ್ಯವಾಗಲಿಲ್ಲ. ನಂತರ ನಡೆದ ಪೆನಾಲ್ಟಿ ಶೂಟೌಟ್‍ನಲ್ಲಿ ಗೋಲ್ಡನ್‍ಗೈಸ್ ತಂಡವು 3 ಗೋಲು ಗಳಿಸಿದರೆ, ಕೂಗೂರು ತಂಡವು 2 ಗೋಲು ಗಳಿಸಲಷ್ಟೇ ಸಾಧ್ಯವಾಗಿ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಇದಕ್ಕೂ ಮೊದಲು ನಡೆದ ರೋಚಕ ಮೊದಲ ಸೇಮಿಸ್‍ನಲ್ಲಿ ಗೆಳೆಯರ ಬಳಗವು ಟೀಮ್ ಶುಂಠಿ ಬಿ ತಂಡವನ್ನು ಪೆನಾಲ್ಟಿ ಶೂಟೌಟ್‍ನಲ್ಲಿ 2-0 ಗೋಲುಗಳಿಂದ ಸೋಲಿಸಿತು. ಎರಡನೇ ಸೆಮಿಫೈನಲ್‍ನಲ್ಲಿ ಗೋಲ್ಡನ್‍ಗೈಸ್…

Read More

ಮಡಿಕೇರಿ ಮಾ.25 :  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ಕ್ರಮವನ್ನು ಖಂಡಿಸಿ ಹಾಗೂ ಬಿಜೆಪಿ ಸರಕಾರಿ ಯಂತ್ರವನ್ನು ದುರುಪಯೋಗ ಪಡಿಸುತ್ತಿದೆ ಎಂದು ಆರೋಪಿ ಕೊಡಗು ಜಿಲ್ಲಾ ಕಾಂಗ್ರೆಸ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ದೇಶದಲ್ಲಿ ಕಳೆದ 8 ವರ್ಷಗಳಿಂದ ಅರಾಜಕತೆ ಸೃಷ್ಟಿಯಾಗಿದೆ. ಅಧಿಕಾರದ ದರ್ಪ ಕಂಡುಬರುತ್ತಿದ್ದು, ಯಾರಿಗೂ ಗಟ್ಟಿ ಧ್ವನಿ ಎತ್ತಲಾಗುತ್ತಿಲ್ಲ. ಪತ್ರಿಕಾ ರಂಗವೂ ಸ್ವತಂತ್ರವಾಗಿ ಕಾರ್ಯನಿರ್ವಹಿಸಲಾಗುತ್ತಿಲ್ಲ ಎಂದು ಆರೋಪಿಸಿದರು. ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ, ಪ್ರತಿಯೊಂದನ್ನು ಪ್ರಶ್ನಿಸುವ ಹಕ್ಕು ಇದೆ. ರಾಹುಲ್ ಗಾಂಧಿ ಅವರು ತಮ್ಮ ಭಾಷಣದಲ್ಲಿ ವಿಚಾರಕ್ಕೆ ಅನುಗುಣವಾಗಿ ಮಾತನಾಡಿದ್ದಾರೇ ಹೊರತು ವೈಯಕ್ತಿಕ ದ್ವೇಶದಿಂದಲ್ಲ. ಇಂತಹ ವಿಚಾರವನ್ನು ನ್ಯಾಯಾಲಯಕ್ಕೆ ತೆಗುಕೊಂಡು…

Read More

ಮಡಿಕೇರಿ ಮಾ.25 : ವಿಧಾನಸಭಾ ಚುನಾವಣೆಯಲ್ಲಿ ಧರ್ಮಾಧರಿತ ರಾಜಕಾರಣದ ಮೂಲಕ ಲಾಭ ಮಾಡಿಕೊಳ್ಳುವ ದುರುದ್ದೇಶದಿಂದ ರಾಜ್ಯ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಂಡು ಅನ್ಯಾಯ ಮಾಡುತ್ತಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮುಖ್ಯಮಂತ್ರಿಗಳು ಒಕ್ಕಲಿಗ ಮತ್ತು ವೀರಶೈವ ಲಿಂಗಾಯತರಿಗೆ ಶೇ.2ರಷ್ಟು ಮಿಸಲಾತಿ ಹೆಚ್ಚಳ ಮಾಡಿದ್ದು, ಇದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ಅಲ್ಪಸಂಖ್ಯಾತರಿಗೆ 2ಬಿ ಯಲ್ಲಿರುವ ಶೇ.4 ರಷ್ಟ ಮೀಸಲಾತಿಯನ್ನು ರದ್ದು ಪಡಿಸಿ ವಂಚನೆ ಮಾಡಿದ್ದಾರೆ ಎಂದು ಟೀಕಿಸಿದರು. ಸರ್ಕಾರ ತಕ್ಷಣ ಈ ನಿರ್ಣಯವನ್ನು ಹಿಂಪಡೆಯದಿದ್ದಲ್ಲಿ ಕಾನೂನಾತ್ಮಕ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಶ್ರೀನಿರ್ಮಲಾನಂದನಾಥ ಸ್ವಾಮಿಜಿ ಅವರ ಕುರಿತು ಮಾತನಾಡುವ ನೈತಿಕತೆ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗಿಲ್ಲ. ಕಲಾವಿದ ಎಂದು ಹೇಳಿಕೊಳ್ಳುವ ಅವರು ಒಂದು ಪಕ್ಷದ ವಕ್ತಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಗಣೇಶ್ ಟೀಕಿಸಿದರು. ಜೆಡಿಎಸ್‍ನ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಿಲ್ಲೆಯಿಂದ ಸುಮಾರು 20 ಬಸ್‍ಗಳಲ್ಲಿ ಕಾರ್ಯಕರ್ತರು ತೆರಳಲಿದ್ದಾರೆ…

Read More

ಮಡಿಕೇರಿ ಮಾ.25 : ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಮೀಸಲಿದ್ದ ಶೇ.4ರ ಮೀಸಲಾತಿಯನ್ನು ರದ್ದು ಪಡಿಸಿರುವ ಸರ್ಕಾರದ ಕ್ರಮ ಖಂಡನೀಯವೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಅಲ್ಪಸಂಖ್ಯಾತರು ಬೆಳವಣಿಗೆ ಕಾಣುತ್ತಿರುವ ಸಂದರ್ಭದಲ್ಲಿ ಮೀಸಲಾತಿಯ ಹಕ್ಕು ಕಸಿದುಕೊಳ್ಳುತ್ತಿರುವುದು ಬಹುದೊಡ್ಡ ಅನ್ಯಾಯವಾಗಿದೆ. ಸರ್ಕಾರ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕೆಂದು ಆಗ್ರಹಿಸಿದರು. ಬಿಜೆಪಿ ಪಕ್ಷದ ಚುನಾವಣಾ ಪ್ರಚಾರದ ಸಂದರ್ಭ ಗೋಣಿಕೊಪ್ಪಲು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಸಕ ಈಶ್ವರಪ್ಪ ಅವರು ಮುಸಲ್ಮಾನರ ಧರ್ಮವನ್ನು ನಿಂದಿಸುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಧರ್ಮ ಆಧಾರಿತವಾಗಿ ಮತ ಕೇಳುವ ಬದಲು ಅಭಿವೃದ್ಧಿಪರ, ಸ್ನೇಹಪರ ಮತ್ತು ತನ್ನ ತತ್ವ ಸಿದ್ಧಾಂತಗಳಡಿ ಮತ ಯಾಚಿಸಲಿ ಎಂದರು. ಸಮಾಜದಲ್ಲಿ ದ್ವೇಷ ಭಾವನೆ ಮೂಡಿಸಿ ರಾಜಕೀಯ ಲಾಭ ಪಡೆದುಕೊಳ್ಳುವುದು ಸರಿಯಲ್ಲವೆಂದರು. ::: ಕಾಂಗ್ರೆಸ್ ಗೆ ಸೇರ್ಪಡೆ ::: ಆಮ್ ಆದ್ಮಿ ಪಾರ್ಟಿಯಲ್ಲಿ…

Read More

ಮಡಿಕೇರಿ ಮಾ.25 : ಸಾಧಿಸುವ ಛಲ ಇದ್ದರೆ ಖಂಡಿತವಾಗಿಯೂ ಉದ್ದೇಶಿತ ಗುರಿಯನ್ನು ಅಂದುಕೊಂಡಂತೆ ತಲುಪಲು ಸಾಧ್ಯವಿದೆ, ಕೂಡಿಗೆ ಕ್ರೀಡಾಶಾಲೆಯ ನೂರಾರು ವಿದ್ಯಾಥಿ೯ಗಳು ಶಿಕ್ಷಣದೊಂದಿಗೆ ಕ್ರೀಡೆಯಲ್ಲಿಯೂ ಸಾಧನೆ ಮಾಡಿ ಮಾದರಿ ವಿದ್ಯಾಥಿ೯ಗಳಾಗಿದ್ದಾರೆ ಎಂದು ಕೂಡಿಗೆ ಕ್ರೀಡಾಶಾಲೆಯ ನಿವೖತ್ತ ಪ್ರಾಂಶುಪಾಲೆ ಕುಂತಿ ಬೋಪಯ್ಯ ಹೇಳಿದ್ದಾರೆ. ಕೂಡಿಗೆ ಕ್ರೀಡಾಶಾಲೆಯಲ್ಲಿ 36 ಸುಧೀಘ೯ ವಷ೯ಗಳ ಕಾಲ ಶಿಕ್ಷಕಿಯಾಗಿ, ಪ್ರಾಂಶುಪಾಲೆಯಾಗಿ ಕಾಯ೯ನಿವ೯ಹಿಸಿದ್ದ ಕುಂತಿ ಬೋಪಯ್ಯ ಅವರ ಶೈಕ್ಷಣಿಕ ಸಾಧನೆ ಕುರಿತಾಗಿ ನಿಮಾ೯ಣಗೊಂಡಿರುವ ಕುಂತಿ ಟೀಚರ್ ಸಾಕ್ಷ್ಯ ಚಿತ್ರ ಪ್ರದಶ೯ನದ ಸಂದಭ೯ ಕ್ರೀಡಾಶಾಲೆ ವಿದ್ಯಾಥಿ೯ಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಪೊಲೀಸ್, ಅಂಚೆ, ರೈಲ್ವೇಸ್, ತೆರಿಗೆ , ಕಂದಾಯ, ಅರಣ್ಯ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳಲ್ಲಿ ಕ್ರೀಡಾಶಾಲೆಯ ವಿದ್ಯಾಥಿ೯ಗಳು ಉನ್ನತ ಹುದ್ದೆಯಲ್ಲಿದ್ದಾರೆ. ಅನೇಕರು ಕ್ರೀಡಾಕ್ಷೇತ್ರದಲ್ಲಿಯೇ ಉನ್ನತ ಸಾಧನೆ ಮಾಡಿದ್ದಾರೆ. ಇವರ ಸಾಧನೆಗೆ ಪ್ರಮುಖ ಕಾರಣವಾಗಿ ಕ್ರೀಡಾಶಾಲೆಯ ಉತ್ತಮ ಶಿಕ್ಷಣ ವ್ಯವಸ್ಥೆಯಿದೆ ಎಂದು ಕುಂತಿಬೋಪಯ್ಯ ಹೆಮ್ಮೆಯಿಂದ ನುಡಿದರು. ಕೂಡಿಗೆ ಕ್ರೀಡಾಶಾಲೆಯಲ್ಲಿ ಶಿಕ್ಷಣ ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡಿದ ಅನೇಕ ವಿದ್ಯಾಥಿ೯ಗಳು ನಾಡಿನ ಇತರ…

Read More