ನಾಪೋಕ್ಲು ಜ.21 NEWS DESK : ಎಮ್ಮೆಮಾಡು ಗ್ರಾಮದಲ್ಲಿ 35ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಎಮ್ಮೆಮಾಡು ಭಾಗದಲ್ಲಿ ಶಾಸಕರ ರೂ.35ಲಕ್ಷ ವೆಚ್ಚದ ಅನುದಾನದಲ್ಲಿ ಪ್ರಾರಂಭವಾಗಲಿರುವ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿದ ಬಳಿಕ, ಈಗಾಗಲೇ ಈ ಭಾಗದಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಭ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಐಸಮ್ಮ, ಸದಸ್ಯರಾದ ಗಪುರ್, ಯೂಸಫ್, ಜಮಾಯತ್ ಅಧ್ಯಕ್ಷ ಹುಸೇನ್ ಸಖಾಫಿ ಹಾಗೂ ಆಡಳಿತ ಮಂಡಳಿ, ಶಾದುಲಿ ಹಾಜಿ, ಹಂಸ ಪಡಿಯಾನಿ, ಅಶ್ರಫ್ ಬಿ.ಯು, ಕೆ.ಎ.ಇಸ್ಮಾಯಿಲ್, ಡಿಸಿಸಿ ಉಪಾಧ್ಯಕ್ಷ ಎಂ.ಎಚ್.ಅಬ್ದುಲ್ ರೆಹಮಾನ್, ಮಚ್ಚುರ ರವೀಂದ್ರ, ಮಾಚೇಟೀರ ಕುಶಾಲಪ್ಪ, ಮನವಟ್ಟಿರ ದಯಾ ಕುಟ್ಟಪ್ಪ ಅಪ್ಪಚೆಟ್ಟೋಳಂಡ ಮಿಥುನ್, ಐಸ, ಮಾಚಯ್ಯ ಪಡಿಯಾನಿ ಜಮಾತ್ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಲೇಖಕ: admin
ನಾಪೋಕ್ಲು ಜ.21 NEWS DESK : ಸಂಕ್ರಾಂತಿ ಸಂಭ್ರಮ 2026 ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ತಂಡ ದ್ವಿತೀಯ ಸ್ಥಾನ ತನ್ನದಾಗಿಸಿಕೊಂಡಿದೆ. ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳ ಹಾಗೂ ಕಲ್ಲಪಳ್ಳಿ ಗ್ರಾಮ ಒಳಗೊಂಡ ಪುರುಷರ ಗ್ರಾಮವಾರು ಕಬ್ಬಡಿ ಪಂದ್ಯಾವಳಿ ಮತ್ತು ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ ನಡೆದ ಸಂಕ್ರಾಂತಿ ಸಂಭ್ರಮ-2026. ಪೆರಾಜೆ ಕುಂಬಳಚೇರಿ ಸ.ಮಾ.ಪ್ರಾ ಶಾಲಾ ಮೈದಾನದಲ್ಲಿ ಜರುಗಿತ್ತು. ಕ್ರೀಡಾಕೂಟದಲ್ಲಿ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ನಾಗಬ್ರಹ್ಮ ಕೊಡಿಯಾಲ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡರು. ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ನಗದು ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡು ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.21 NEWS DESK : ಜಿಲ್ಲಾ ಡಿಎಸ್‍ಬಿ ಘಟಕದಲ್ಲಿ ವೃತ್ತ ನಿರೀಕ್ಷಕರಾಗಿದ್ದ ಐಚಂಡ ಮೇದಪ್ಪ ಅವರು ಡಿವೈಎಸ್‍ಪಿಯಾಗಿ ಮುಂಬಡ್ತಿ ಪಡೆದಿದ್ದಾರೆ. 2005ರಲ್ಲಿ ಸರ್ಕಲ್ ಇನ್ಸ್‍ಪೆಕ್ಟರ್ ಹುದ್ದೆಗೆ ಬಡ್ತಿ ಪಡೆದು, 2020ರಿಂದ ಬಾಕಿ ಇದ್ದ ಡಿವೈಎಸ್‍ಪಿ ಹುದ್ದೆಯ ಮುಂಬಡ್ತಿ ಇದೀಗ ಅನುಷ್ಠಾಗೊಂಡಿದೆ. ಈ ಸಂಬಂಧ ಸರಕಾರ ಆದೇಶ ಹೊರಡಿಸಿದೆ.
ನಾಪೋಕ್ಲು ಜ.21 NEWS DESK : ಕೋರಂಗಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಸಂತೆ ಹಾಗೂ ಪುಟಾಣಿಗಳ ಛದ್ಮವೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಮಕ್ಕಳ ಸಂತೆಯಲ್ಲಿ ವಿವಿಧ ರೀತಿಯ ತರಕಾರಿಗಳು, ತಿಂಡಿ-ತಿನಿಸುಗಳ ಮಳಿಗೆಗಳು, ವಿವಿಧ ಬಗೆಯ ಹೂವಿನ ಗಿಡಗಳು ಹಾಗೂ ಅಲಂಕಾರಿಕ ಗಿಡಗಳ ಕುಂಡಗಳು ಮಾರಾಟಕ್ಕಿದ್ದವು. ಛದ್ಮವೇಷ ಸ್ಪರ್ಧೆಯಲ್ಲಿ ಅನೇಕ ಪುಟಾಣಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಮನಮೋಹಕ ವೇಷಭೂಷಣಗಳಿಂದ ಎಲ್ಲರ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಶಾಲೆ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಚೀಯಕ ಪೂವಂಡ ಮಿಥುನ್ ಚಂಗಪ್ಪ ಹಾಗೂ ಟ್ರಸ್ಟಿಗಳಾದ ಚೀಯಕಪೂವಂಡ ಸಚಿನ್ ಪೂವಯ್ಯ ಮುಖ್ಯ ಶಿಕ್ಷಕರಾದ ಶ್ವೇತನ್ ಚೆಂಗಪ್ಪ, ಮಕ್ಕಳ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು. ಶಿಕ್ಷಕರಾದ ಶ್ರುತಿ ಬಿ. ಪಿ ಅವರು ಸ್ವಾಗತಿಸಿದ ಕಾರ್ಯಕ್ರಮನ್ನು ಚಿತ್ರಾ ಎಂ.ಎ.ನಿರೂಸಿ, ವಂದಿಸಿದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಜ.21 NEWS DESK : ಶೈಕ್ಷಣಿಕವಾಗಿ ಹಿಂದುಳಿದಿದ್ದ ನಾಪೋಕ್ಲುವಿನಲ್ಲಿ ಇದೀಗ ವಿವಿಧ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, ನಾಪೋಕ್ಲು ಶೈಕ್ಷಣಿಕವಾಗಿ ಮುಂದುವರೆದಿದೆ ಎಂದು ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಪಟ್ಟಡ ಧನು ಉತ್ತಯ್ಯ ಹೇಳಿದರು. ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ವತಿಯಿಂದ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಹಿಂದೆ ವಿದ್ಯಾರ್ಥಿಗಳಿಗೆ ಇಷ್ಟು ಅವಕಾಶ ಇರಲಿಲ್ಲ ಈಗ ವಿಪುಲ ಅವಕಾಶ ಲಭಿಸಿದೆ. ವಿದ್ಯಾರ್ಥಿಗಳು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಜೊತೆ ಕೈಜೋಡಿಸಿ ಶಿಕ್ಷಣದಲ್ಲಿ ಮುಂದುವರಿಯಬೇಕು ಎಂದರು. ವೇದಿಕೆ ಸಿಕ್ಕಾಗ ಬಳಸಿಕೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಯಶಸ್ಸುಗಳಿಸಲು ಸಾಧ್ಯ. ವೇದಿಕೆಗಳನ್ನು ಸೂಕ್ತವಾಗಿ ಬಳಸಿಕೊಳ್ಳುವುದರಿಂದ ಧೈರ್ಯ ಹಾಗೂ ಆತ್ಮವಿಶ್ವಾಸ ಗಳಿಸಿಕೊಳ್ಳಲು ಸಾಧ್ಯ ಎಂದರು. ನೇತಾಜಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿ.ಎಸ್.ಸುರೇಶ್ ಮಾತನಾಡಿ ಎಕ್ಸೆಲ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಉತ್ತಮ ಪ್ರಜೆಗಳಾಗಿ ಮೂಡಿಬರಲು ಸಾಧ್ಯವಾಗುತ್ತಿದೆ…
ಸುಂಟಿಕೊಪ್ಪ ಜ.21 NEWS DESK : ಮಕ್ಕಳು ಯಾವುದೇ ಉನ್ನತ ಶಿಕ್ಷಣಗಳಲ್ಲಿ ಎಷ್ಟೇ ದೊಡ್ಡ ಸಾಧನೆ ಮಾಡಿದರೂ ಪರಿಗಣನೆಗೆ ಬರುವುದಿಲ್ಲ. ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳೇ ನಿಮ್ಮ ಮುಂದಿನ ಭವಿಷ್ಯಕ್ಕೆ ಮುನ್ನುಡಿ ಅದುದ್ದರಿಂದ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಿದಾಗ ಮಾತ್ರ ನಿಮ್ಮ ಗುರಿ ಸಾಧನೆಗೆ ಸಹಕಾರಿಯಾಗಲಿದೆ ಎಂದು ಪೋಷಕರಿಗೆ ಶಿಕ್ಷಕಿ ಹರ್ಷಿತಾ ಮಾಹಿತಿ ನೀಡಿದರು. ಮಂಜಿಕೆರೆ ಸಮುದಾಯ ಭವನದಲ್ಲಿ ಕಾನ್‍ಬೈಲ್ ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಾಕಾವೇರಿ ಜ್ಞಾನ ವಿಕಾಸ ಕೇಂದ್ರದ ಕಾನ್‍ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಆಯೋಜಿಸಲಾಗಿದ್ದ ಮಾಹಿತಿ ಕಾರ್ಯಾಗಾರವನ್ನು ಉದ್ದೇಶಿಸಿ ಶಿಕ್ಷಕಿ ಹರ್ಷಿತ ಮಾತನಾಡಿದರು. ಮಕ್ಕಳು ಮೊಬೈಲ್ ಬಳಕೆಯ ಸಂದರ್ಭ ಪಠ್ಯ ಚಟುವಟಿಕೆಗೆ ಸಂಬಂಧಿಸಿದ ಅಥವಾ ಇತರೆ ವಿಚಾರಗಳ ಬಳಕೆ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ನಿಗಾವಹಿಸಬೇಕು. ಮಕ್ಕಳು ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಅಂಕಗಳೇ ಮಕ್ಕಳ ಮುಂದಿನ ಭವಿಷ್ಯಕ್ಕೆ ಬೇಕಾಗಿರುವ ಅಂಕವಾಗಿದೆ. ಪದವಿ ಶಿಕ್ಷಣದಲ್ಲಿ ಉನ್ನತ ಶ್ರೇಣಿಯಲ್ಲಿ ಪಡೆದರೂ ಯಾವುದೇ ಪ್ರಯೋಜನವಿಲ್ಲ…
ಮಡಿಕೇರಿ ಜ.20 NEWS DESK : ಜಿಲ್ಲಾಡಳಿತ ವತಿಯಿಂದ ಜನವರಿ, 26 ರಂದು ಬೆಳಗ್ಗೆ 09 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್,…
ಮಡಿಕೇರಿ NEWS DESK ಜ.20 : ಕೇಂದ್ರ ಸರಕಾರ ರಾಜ್ಯ ಸರಕಾರಗಳ ಅಭಿಪ್ರಾಯವನ್ನು ಪಡೆಯದೆ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ‘ವಿಬಿ ರಾಮ್ ಜಿ’ ಯೋಜನೆಯನ್ನಾಗಿ ಪರಿವರ್ತಿಸಿ, ಸರ್ವಾಧಿಕಾರಿಯಂತೆ ವರ್ತಿಸುವ ಮೂಲಕ, ಗ್ರಾಮ ಪಂಚಾಯ್ತಿಗಳ ಅಧಿಕಾರವನ್ನು ಕಸಿದುಕೊಂಡಿರುವುದಾಗಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಆರೋಪಿಸಿದ್ದಾರೆ. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರ್ಗದ ಮಂದಿಯ ಕೈಗೆ ಕೆಲಸವನ್ನು ಒದಗಿಸುತ್ತಿದ್ದ ನರೇಗಾ ಯೋಜನೆ ರಾಷ್ಟçವ್ಯಾಪಿ ಕೋಟ್ಯಂತರ ಬಡ ಮಂದಿಯ ಬದುಕಿಗೆ ಆಧಾರವಾಗಿತ್ತು. ಇಂತಹ ಯೋಜನೆಯನ್ನು ಯಾವುದೇ ಸಂಘ-ಸಂಸ್ಥೆ, ಜನಪ್ರತಿನಿಧಿಗಳು, ರಾಜ್ಯ ಸರ್ಕಾರಗಳೊಂದಿಗೆ ಚರ್ಚಿಸದೆ ಕೇವಲ 72 ಗಂಟೆಗಳಲ್ಲಿ ತರಾತುರಿಯಿಂದ ಬದಲಿಸಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವಿಬಿ ರಾಮ್ ಜಿ ಯೋಜನೆಯನ್ನು ಹಿಂಪಡೆಯುವವರೆಗೂ ರಾಷ್ಟ್ರವ್ಯಾಪಿ ಕಾಂಗ್ರೆಸ್ ಜನಜಾಗೃತಿಯನ್ನು ಮೂಡಿಸುವುದರೊಂದಿಗೆ ಹೋರಾಟಗಳನ್ನು ನಡೆಸಲಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಲು ರಾಜ್ಯ ಸರಕಾರ ಏಳು ದಿನಗಳ ವಿಶೇಷ ಅಧಿವೇಶನವನನ್ನು ಕರೆದಿರುವುದಾಗಿ ಹೇಳಿದರು. ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೇಂದ್ರ ಸರ್ಕಾರದ…
ಮಡಿಕೇರಿ ಜ.20 NEWS DESK : 2026-27ನೇ ಸಾಲಿನಲ್ಲಿ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ ಸಂಬಂಧ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸುಮಾರು 1,27,191.24 ಲಕ್ಷ ರೂ. ಕ್ರಿಯಾಯೋಜನೆಯನ್ನು ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ, ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಂಡಿಸಲಾಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಥಮ ಸಭೆಯಲ್ಲಿ ಮುಂದಿನ ಆರ್ಥಿಕ ವರ್ಷದ ವಿವಿಧ ಇಲಾಖೆಗಳ ವಾರ್ಷಿಕ ಅಭಿವೃದ್ಧಿ ಕ್ರಿಯಾಯೋಜನೆ ಸಂಬಂಧ ಸುದೀರ್ಘ ಚರ್ಚೆ ನಡೆಸಲಾಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಸಚಿವರಾದ ಎನ್.ಎಸ್.ಭೋಸರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನೇಕ ಬಾರಿ ಚರ್ಚಿಸಿದ ನಂತರ ಜಿಲ್ಲಾ ಯೋಜನಾ ಸಮಿತಿ ಸಭೆಯನ್ನು ನಡೆಸಿ ಸಲಹಾ ಸಮಿತಿಯಿಂದ ಸಲಹೆ ಮತ್ತು ಮಾರ್ಗದರ್ಶನ ಪಡೆಯುವಂತೆ ನಿರ್ದೇಶನ ನೀಡಿದ್ದಾರೆ ಎಂದರು. ಅದರಂತೆ ಕೊಡಗು ಜಿಲ್ಲೆಯಲ್ಲಿ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಶಾಲಾ ಕಾಲೇಜು ಕಟ್ಟಡ,…
ವಿರಾಜಪೇಟೆ ಜ.20 NEWS DESK : ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ.ಎನ್.ಲಾವಣ್ಯ ಬೋರ್ಕರ್ ಅವರಿಗೆ ಅನರ್ಘ್ಯ ರತ್ನ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆ ಟ್ರಸ್ಟ್ ಹಾಗೂ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಉತ್ಸವದ ಪ್ರಯುಕ್ತ ಜರುಗಿದ ಸಮಾರಂಭದಲ್ಲಿ ಲಾವಣ್ಯ ಬೋರ್ಕರ್ ಅವರ ಕಲಾ ಹಾಗೂ ಭರತನಾಟ್ಯದಲ್ಲಿನ ಸಾಧನೆಯನ್ನು ಪರಿಗಣಿಸಿ ಹಾಸನದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರುಗಿದ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಲಾವಣ್ಯ ಬೋರ್ಕರ್ ಸುಳ್ಯದ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂ ಬಿ ಎ ಕೋರ್ಸ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ನ ಗುರುಗಳಾದ ಪ್ರೇಮಾಂಜಲಿ ಆಚಾರ್ಯ ಅವರ ಶಿಷ್ಯೆ ಹಾಗೂ ವಿರಾಜಪೇಟೆ ಬೇಟೋಳಿ ಗ್ರಾಮದ ನಾಟಿ ವೈದ್ಯರು ಹಾಗೂ ಕೊಡಗು ಬಾಲವಲಿಕರ್ ಉತ್ತಮ ಜೀವನ ಸಹಕಾರ ಸಂಘದ ಅಧ್ಯಕ್ಷ ಬಿ.ಜಿ.ನಟರಾಜ್ ಬೋರ್ಕರ್ ಹಾಗೂ ಸುನಂದ ಬೋರ್ಕರ್ …






