ಮಡಿಕೇರಿ ಮಾ.24 : ಮುಸಲ್ಮಾನರ ಧಾರ್ಮಿಕ ಭಾವನೆಗೆ ದಕ್ಕೆ ತಂದಿರುವ ಶಾಸಕ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿಯ ಬದ್ರಿಯಾ ಜಮಾಅತ್ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಜಮಾಅತ್ ಕಾರ್ಯದರ್ಶಿ ಎಂ.ಉಮ್ಮರ್, ಕೊಡಗಿನ ಗೋಣಿಕೊಪ್ಪಲು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಶಾಸಕ ಈಶ್ವರಪ್ಪ ಅವರು ಮಸೀದಿಯಲ್ಲಿ ಕರೆಕೊಡುವ “ಅಝಾನ್” ಮತ್ತು ಅಲ್ಲಾಹುವಿನ ಬಗ್ಗೆ ಅಸಂವಿಧಾನಿಕವಾಗಿ ನೀಡಿರುವ ಹೇಳಿಕೆ ಖಂಡನೀಯ ಎಂದು ತಿಳಿಸಿದ್ದಾರೆ. ಮಸೀದಿಯಿಂದ ನಮಾಜಿಗೆ ಕರೆಕೊಡುವ “ಅಝಾನ್” ಮತ್ತು ಅಲ್ಲಾಹುವಿನ ಬಗ್ಗೆ ಮಾತನಾಡಿ ಇಸ್ಲಾಂ ಧರ್ಮವನ್ನು ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇತ್ತೀಚೆಗೆ ನಡೆದ ಬದ್ರಿಯಾ ಜಮಾಅತ್ ನ ವಾರ್ಷಿಕ ಮಹಾಸಭೆಯಲ್ಲಿ ಈಶ್ವರಪ್ಪ ಅವರ ಹೇಳಿಕೆಯನ್ನು ಖಂಡಿಸಲಾಗಿದೆ. ಈ ರೀತಿಯ ಸಂವಿಧಾನ ವಿರೋಧಿ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿ ಮೂಡುವುದರಿಂದ ಸರ್ಕಾರ ತಕ್ಷಣ ಈಶ್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಉಮ್ಮರ್ ಒತ್ತಾಯಿಸಿದ್ದಾರೆ.
ಲೇಖಕ: admin
ಮಡಿಕೇರಿ ಮಾ.24 : ಇದೇ ಮಾರ್ಚ್, 31 ರಿಂದ ಆರಂಭವಾಗುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ. ನಗರದ ಸಂತ ಮೈಕಲರ ಶಾಲೆಯ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಸಿದ್ಧತೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಒಂದು ಪ್ರಮುಖ ಘಟ್ಟವಾಗಿದ್ದು, ಈ ಹಿನ್ನೆಲೆ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಕರ್ತವ್ಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಗಾಬರಿ ಉಂಟು ಮಾಡಬಾರದು. ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮಂಡಳಿ ನೀಡಿರುವ ಮಾರ್ಗದರ್ಶಿ ಸೂತ್ರಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚಿಸಿದರು. ಪ್ರಶ್ನೆ ಪತ್ರಿಕೆ ಪೂರೈಕೆ ಸಂಬಂಧಿಸಿದಂತೆ ಸರ್ಕಾರಿ ವಾಹನವನ್ನೇ ಬಳಸಬೇಕು. ಯಾವುದೇ ಲೋಪ ಉಂಟಾಗದಂತೆ ಪರೀಕ್ಷೆಯನ್ನು ಎಚ್ಚರಿಕೆಯಿಂದ ನಡೆಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ವಿವಿಧ ಹಂತದ…
ಮಡಿಕೇರಿ ಮಾ.24 : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ.ಜಾತಿ/ ಪ.ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಡಾ.ಬಾಬು ಜಗಜೀವನ್‍ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ನೀಡಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್, 27 ಕೊನೆಯ ದಿನವಾಗಿದೆ. ಪ್ರಶಸ್ತಿ ಪಡೆಯಲು ಯಾವುದೇ ಜನಾಂಗ, ಲಿಂಗ, ಜಾತಿ ಅಥವಾ ಸಮುದಾಯದ ವ್ಯತ್ಯಾಸವಿಲ್ಲದೆ ಅಥವಾ ತಾರತಮ್ಯವಿಲ್ಲದೆ ಈ ಪ್ರಶಸ್ತಿಗೆ ಯಾವುದೇ ಭಾರತೀಯರು ಮತ್ತು ಸಂಸ್ಥೆಯವರು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿಯವರ ಮೇಲೆ ನಡೆಯುತ್ತಿರುವ ಅಸ್ಪೃಶ್ಯತೆ ನಿವಾರಣೆ ಮಾಡಲು ಹಾಗೂ ದೌರ್ಜನ್ಯ ಅಪರಾಧಗಳ ನಿಯಂತ್ರಣದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿ/ ಸರ್ಕಾರೇತರ ಸಂಘ ಸಂಸ್ಥೆಗಳಾಗಿರಬೇಕು. ಪರಿಶಿಷ್ಟ ಜಾತಿ ಜನಾಂಗದವರ ಅಭಿವೃದ್ಧಿಗೆ ಕಳೆದ 5 ವರ್ಷಗಳಿಂದ ಕೆಲಸ ಮಾಡುತ್ತಿರುವ, ನೋಂದಣಿಯಾಗಿರುವ ಸರ್ಕಾರೇತರ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ 08272-225531. ಸಹಾಯಕ ನಿರ್ದೇಶಕರ ಕಚೇರಿ…
ಮಡಿಕೇರಿ ಮಾ.24 : ಮಡಿಕೇರಿ ಕೊಡವ ಸಮಾಜದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪುತ್ಥಳಿಯನ್ನು ಮಾ.31 ರಂದು ಅನಾವರಣಗೊಳಿಸಲಾಗುತ್ತಿದೆ. ವಿಶ್ವ ವಿಖ್ಯಾತರಾಗಿರುವ ಜನರಲ್ ತಿಮ್ಮಯ್ಯ ಅವರ ಹೆಸರಿನಲ್ಲೇ ಶಾಲೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ವಿದ್ಯಾರ್ಥಿಗಳಿಗೆ ಪದ್ಮಭೂಷಣ ತಿಮ್ಮಯ್ಯ ಅವರ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಈಗಾಗಲೇ ಪುತ್ಥಳಿ ಸಿದ್ಧಗೊಂಡಿದ್ದು, ಶಾಲಾ ಆವರಣದಲ್ಲಿ ಅಳವಡಿಸಲಾಗುತ್ತಿದೆ. ಪ್ರಸಿದ್ಧ ಶಿಲ್ಪಿ, ಮೈಸೂರಿನ ಅರುಣ್ ಯೋಗಿರಾಜ್ ಅವರು ಆಕರ್ಷಕ ಪುತ್ಥಳಿಯನ್ನು ಕೆತ್ತನೆ ಮಾಡಿದ್ದಾರೆ. ಸುಮಾರು ರೂ.10 ಲಕ್ಷ ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಮಡಿಕೇರಿ ಕೊಡವ ಸಮಾಜ, ಶಾಲಾ ಆಡಳಿತ ಮಂಡಳಿ, ಶಿಕ್ಷಕವೃಂದ, ಪೋಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರು ದೇಣಿಗೆ ನೀಡಿ ಸಹಕರಿಸಿದ್ದಾರೆ. ::: ಪುತ್ಥಳಿ ಅನಾವರಣ ::: ಮಾರ್ಚ್ 31 ರಂದು ಜನರಲ್ ತಿಮ್ಮಯ್ಯ ಅವರ 117ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಇದೇ ಸಂದರ್ಭ ಶಾಲೆಯಲ್ಲಿ ನಡೆಯುವ…
ಮಡಿಕೇರಿ ಮಾ.24 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾ ವಿಭಾಗ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ‘ವಿಶ್ವ ಕ್ಷಯರೋಗ ದಿನಾಚರಣೆ’ ಕಾರ್ಯಕ್ರಮದ ಜಾಥಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್ ಅವರು ಚಾಲನೆ ನೀಡಿದರು. ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಾಥಗೆ ಚಾಲನೆ ನೀಡಿ ಮಾತನಾಡಿದ ಪ್ರಸಾದ್ ಅವರು ಆರೋಗ್ಯ ಇದ್ದಲ್ಲಿ ಭಾಗ್ಯವಿದ್ದಂತೆ. ಆದ್ದರಿಂದ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವಂತಾಗಬೇಕು ಎಂದರು. ಕ್ಷಯ ರೋಗವು ಹಲವು ದಶಕಗಳಿಂದ ಇದ್ದು, ಕ್ಷಯರೋಗ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಪಣ ತೊಡಬೇಕಿದೆ. ಆ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಕೊಡಗು ವೈದ್ಯಕೀಯ…
ಮಡಿಕೇರಿ ಮಾ.24 : ಮಡಿಕೇರಿ ನಗರಸಭೆ ಸ್ವಯಂ ಘೋಷಿತ ಆಸ್ತಿ ತೆರಿಗೆ ಮತ್ತು ಎಲ್ಲಾ ರೀತಿಯ ತೆರಿಗೆಗಳನ್ನು ಶೇ.3ರಷ್ಟು ಹೆಚ್ಚಿಸಿರುವುದು ಸರಿಯಾದ ಕ್ರಮವಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್, ಆಡಳಿತ ಮಂಡಳಿ ತಕ್ಷಣ ಈ ನಿರ್ಧಾರವನ್ನು ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಳೆದ ವರ್ಷ ಶೇ.5 ರಷ್ಟು ತೆರಿಗೆ ಏರಿಕೆ ಮಾಡಿದ್ದ ನಗರಸಭೆ ಇದೀಗ ಮತ್ತೆ ಶೇ.3 ರಷ್ಟು ಏರಿಕೆ ಮಾಡಿ ಗಾಯದ ಮೇಲೆ ಬರೆ ಎಳೆದಿದೆ. ನಗರದ ಕಟ್ಟಡಗಳ ಮತ್ತು ಮನೆಗಳ ಮಾಲೀಕರಿಗೆ ತೆರಿಗೆ ಹೊರೆಯಾಗುತ್ತಿದೆ ಎಂದು ಗಮನ ಸೆಳೆದಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದು, ಜೀವನ ಸಾಗಿಸುವುದೇ ಕಷ್ಟವಾಗಿದೆ. ಕಟ್ಟಡ ಮಾಲೀಕರುಗಳು ಬ್ಯಾಂಕ್ ಸಾಲ ತೀರಿಸಲಾಗದ ಪರಿಸ್ಥಿತಿಯಲ್ಲಿದ್ದಾರೆ, ಸಾಲದ ಬಡ್ಡಿ ದರವೂ ಅಧಿಕವಾಗಿದೆ. ಇದರ ನಡುವೆಯೇ ಪ್ರತಿ ವರ್ಷ ತೆರಿಗೆ ಏರಿಕೆ ಮಾಡಿದರೆ ಪಾವತಿ ಮಾಡುವುದಾದರು ಹೇಗೆ ಎಂದು ಪ್ರಶ್ನಿಸಿದ್ದಾರೆ. ಸರ್ಕಾರದ ಆದೇಶವಿದೆ ಎಂದು…
ಸೋಮವಾರಪೇಟೆ ಮಾ.24 : ಯಡೂರು ಬಿ.ಟಿ.ಸಿ.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡಗಳು ಮಾ.27 ರಂದು ಲೋಕಾರ್ಪಣೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ಕಾಲೇಜು ಆವರಣದಲ್ಲಿ ನಡೆಯಲಿರುವ ಕಾರ್ಯ್ರಮದಲ್ಲಿ ರೂ.50ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಭಾಭವನ, 70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ತರಗತಿ ಕಟ್ಟಡ, 40 ರೂ. ವೆಚ್ಚದಲ್ಲಿ ನವೀಕರಣ ಗೊಂಡಿರುವ ಕಾಲೇಜು ಕಟ್ಟಡ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆಧುನೀಕರಣ ಗೊಂಡಿರುವ ಕಂಪ್ಯೂಟರ್ ಲ್ಯಾಬ್ ನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಧನಲಕ್ಷ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಮಾ.24 : ವಾಂಡರರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮಾ.27 ರಿಂದ ಮೇ 1ರ ವರೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ (ಮ್ಯಾನ್ಸ್ ಕಾಂಪೌಂಡ್) ದಲ್ಲಿ 29ನೇ ವರ್ಷದ ಶಂಕರ್ ಸ್ವಾಮಿ ಉಚಿತ ಕ್ರೀಡಾ ಶಿಬಿರ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ವ್ಯಾಂಡರರ‍್ಸ್ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಕೋಟೇರ ಎಂ.ಮುದ್ದಯ್ಯ, ಈ ಬೇಸಿಗೆ ಶಿಬಿರದಲ್ಲಿ 6 ರಿಂದ 16 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದಾಗಿದೆ ಎಂದು ತಿಳಿಸಿದ್ದಾರೆ. ನುರಿತ ತರಬೇತುದಾರರಿಂದ ಪ್ರಾಣಾಯಾಮ, ಹಾಕಿ, ಅಥ್ಲೆಟಿಕ್ಸ್ ತರಬೇತಿ ನೀಡಲಾಗುವುದು. ಪ್ರತಿ ದಿನ ಬೆಳಿಗ್ಗೆ 6.30 ರಿಂದ 8.30 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಲಘು ಉಪಹಾರ ನೀಡಲಾಗುತ್ತದೆ. ಪ್ರಾಣಾಯಾಮ ತರಬೇತಿಯಲ್ಲಿ ಆಸಕ್ತ ಪೋಷಕರು ಹಾಗೂ ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಬಾಬು ಸೋಮಯ್ಯ 9448895950 ಹಾಗೂ ಎಸ್‌ಟಿ.ವೆಂಕಟೇಶ್- 9448873999 ಅವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದ್ದಾರೆ.
ಮಡಿಕೇರಿ ಮಾ.24 : ಪ್ರಾಣವನ್ನು ಉಸಿರು, ಉಸಿರಾಟ, ಪ್ರಾಣ, ಚೈತನ್ಯ, ಶಕ್ತಿ, ಗಾಳಿ, ವಾಯು ಎಂದು ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಈ ಪ್ರಾಣಶಕ್ತಿಯಿಂದ ಎಲ್ಲಾ ಜೀವರಾಶಿಗಳು ಉಸಿರಾಡುತ್ತವೆ. ಉಸಿರು ಮತ್ತು ಮನಸ್ಸು ಕಣ್ಣಿಗೆ ಕಾಣದ ಸೃಷ್ಠಿಯ ಅದ್ಭುತಗಳು. ಇದೇ ಉಸಿರನ್ನು ವ್ಯವಸ್ಥಿತವಾಗಿ, ಕ್ರಮಬದ್ಧವಾಗಿ ತೆಗೆದುಕೊಳ್ಳುವ, ನಿಯಂತ್ರಿಸುವ ಮತ್ತು ಹೊರಬಿಡುವ ಪ್ರಕ್ರಿಯೆಗೆ ಯೋಗ ವಿಧಾನದಲ್ಲಿ ಪ್ರಾಣಾಯಾಮ ಎನ್ನುತ್ತೇವೆ. ಅಂದರೆ ಉಸಿರಾಟದ ಪೂರಕ-ರೇಚಕ ವೇಗವನ್ನು ಕಡಿಮೆ ಮಾಡುವುದೇ ಪ್ರಾಣಾಯಾಮ. ಆರೋಗ್ಯವಂತ ಮನುಷ್ಯ ಒಂದು ದಿನದಲ್ಲಿ ನಿಮಿಷಕ್ಕೆ 15 ಸಲದಂತೆ ಒಂದು ದಿನದಲ್ಲಿ 21,600 ಸಾರಿ ಉಸಿರಾಡುತ್ತಾನೆ. ಮಾನಸಿಕ ಒತ್ತಡ, ಆಹಾರ, ನಿದ್ರಾಹೀನತೆ ಇತ್ಯಾದಿಗಳಿಂದ ಒಂದು ನಿಮಿಷಕ್ಕೆ 5 ಸಲ ಉಸಿರಾಟ ಕಡಿಮೆಯಾಗುತ್ತದೆ. ಇದು ಗಂಟೆಗೆ 300 ಸಾರಿ, ಒಂದು ದಿನಕ್ಕೆ 7,200 ಬಾರಿ ಉಸಿರಾಟ ವ್ಯರ್ಥವಾಗುತ್ತದೆ. ದೇಹಸೇರುವುದು ಕೇವಲ 14,400 ಮಾತ್ರ ಈ ವ್ಯರ್ಥ ಉಸಿರಾಟವನ್ನು ತಡೆಗಟ್ಟಿದರೆ ನಾವು ಆರೋಗ್ಯದ ಜೊತೆಗೆ ದೀರ್ಘಾಯುಷ್ಯ ಪಡೆಯಬಹುದು. ಪ್ರಾಣಾಯಾಮದಲ್ಲಿ ಕ್ರಮಬದ್ದವಾಗಿ ಉಸಿರಾಡುವುದನ್ನು ಕಲಿಸುತ್ತೇವೆ. ಪತಂಜಲಿ ಮಹಾರ್ಷಿ ಕ್ರಿ.ಪೂ…
ಮಡಿಕೇರಿ ಮಾ.24 : ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಂಗೋಡುನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಂಗನವಾಡಿ ಕಟ್ಟಡವನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಜರಿದ್ದರು.






