ಲೇಖಕ: admin

ಮಡಿಕೇರಿ ಮಾ.23 : ವಿರಾಜಪೇಟೆ  ತಾಲ್ಲೂಕಿನ ಅರ್ಜಿ ಗ್ರಾಮದಲ್ಲಿ  ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಲಾಗಿರುವ  ಕುಡಿಯುವ ನೀರು ಸರಬರಾಜು ಟ್ಯಾಂಕ್ ಅನ್ನು ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಿದರು. ಶಾಸಕ ಕೆ.ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ  ಕುಶಾಲಪ್ಪ, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

Read More

ಸೋಮವಾರಪೇಟೆ ಮಾ.23 : ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಟ್ಟಣದ ಜನತಾಕಾಲೋನಿಯಲ್ಲಿ 35 ಲಕ್ಷ ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಶಾಸಕ ರಂಜನ್ ಭೂಮಿಪೂಜೆ ನೆರವೇರಿಸಿದರು ಪಟ್ಟಣದಲ್ಲಿ ಇದೆ ಮೊದಲ ಭಾರಿಗೆ ಜನತಾ ಕಾಲೋನಿಯ ನ್ನು ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಸೇರಿಸಲಾಗಿದ್ದು ಮುಂದೆ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಕೈಗೆತ್ತಿ ಕೊಳ್ಳಲಾಗುವುದು ಎಂದು ಶಾಸಕ ರಂಜನ್ ತಿಳಿದರು. ಈ ಭಾರಿ ಬಿಡುಗಡೆಯಾಗಿರುವ 35 ಲಕ್ಷ ರೂ ಗಳಲ್ಲಿ  ಕಾಂಕ್ರೀಟ್ ರಸ್ತೆ, ಚರಂಡಿ, ರಸ್ತೆ ಡಾಂಬರೀಕರಣ ಮುಂತಾದ ಕಾಮಗಾರಿಗಳು ನಡೆಯಲಿವೆ ಎಂದರು. ಈ ಸಂದರ್ಭ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಚಂದ್ರು, ಸದಸ್ಯರಾದ ಶುಭಕರ,ಎಸ್.ಮಹೇಶ್,ಶರತ್,ಮೋಹಿನಿ,ನಾಗರತ್ನ,ಸೋಮೇಶ್,ಜಯಂತಿ,ಮಹೇಶ್, ಮುಖ್ಯಾಧಿಕಾರಿ ನಾಚಪ್ಪ,ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಾರ್ಯಪಾಲಕ ಅಭಿಯಂತರ ತೇಜಶ್ರೀ,ಅಭಿಯಂತರ ಜವಾಹರ್ ಜೋಗಿ ಹಾಗೂ ಮುಂತಾದವರು ಹಾಜರಿದ್ದರು.

Read More

ಮೂರ್ನಾಡು ಮಾ.23 : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ 2022-23ನೇ ಸಾಲಿನಲ್ಲಿ ನಡೆಸಿದ ಕಿರಿಯ ದರ್ಜೆಯ ಭರತನಾಟ್ಯ ಪರೀಕ್ಷೆಯಲ್ಲಿ ಭಾರತೀಯ ನೃತ್ಯ ಶಾಲೆಯ ಮೂರ್ನಾಡು ಮತ್ತು ಸಿದ್ದಾಪುರದ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಭರತನಾಟ್ಯ ಪರೀಕ್ಷೆಗೆ ತೆಗೆದುಕೊಂಡ ಹತ್ತು ವಿದ್ಯಾರ್ಥಿಗಳು ಉನ್ನತ, ಪ್ರಥಮ ಹಾಗೂ ದ್ವಿತೀಯ ಸ್ಥಾನದ ಅಂಕಗಳನ್ನು ಪಡೆದು ಸಾಧನೆ ಗೈದಿದ್ದಾರೆ ಎಂದು ಶಾಲಾ ನೃತ್ಯ ಶಿಕ್ಷಕಿ ವಿದುಷಿ ಜಲಜ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   

Read More

ಸೋಮವಾರಪೇಟೆ ಮಾ.23 :  ಯಡುರು ಬಿ.ಟಿ.ಸಿ.ಜಿ ಕಾಲೇಜಿನಲ್ಲಿ ಶೌರ್ಯ  ತಂಡದ ಸದಸ್ಯರಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ಕಾಲೇಜು ಆವರಣದಲ್ಲಿ  ಬೆಳೆದಿದ್ದ ಗಿಡಗಂಟಿಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಶೌರ್ಯ ತಂಡ ರಾಮದಾಸ್ ನೇತೃತ್ವದ ಹದಿನೈದು ಮಂದಿಯ ತಂಡ ಬೆಳಗಿನಿಂದ ಸಂಜೆಯವರೆಗೆ ಶ್ರಮದಾನ  ನಡೆಸಿದರು. ಈ ಸಂದರ್ಭ ತಾಲೂಕು ಯೋಜನಾಧಿಕಾರಿ ರೋಹಿತ್, ಕಾಲೇಜು ಪ್ರಾಂಶಪಾಲರಾದ  ಧನಲಕ್ಷ್ಮಿ, ಸುಪರಿಡೆಂಟ್ ಶಿವನವಿನ್, ಸಿಬ್ಬಂದಿ ಜವರಪ್ಪ ಹಾಗೂ ಮುಂತಾದವರು ಹಾಜರಿದ್ದರು.

Read More

ಮಡಿಕೇರಿ ಮಾ.23 :  ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಫುಟ್ಬಾಲ್ ಕ್ಲಬ್ ಗಳಲ್ಲೊಂದಾದ ಕಿಕ್ಕ್ ಸ್ಟಾರ್ಟ್ ಫುಟ್ಬಾಲ್ ‌ತಂಡಕ್ಕೆ ಮಾ.26 ರಂದು ಅಮ್ಮತ್ತಿ ಪ್ರೌಢ ಶಾಲಾ ಮೈದಾನದಲ್ಲಿ  ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಮ್ಮತ್ತಿ ಪ್ರೌಢ ಶಾಲಾ ಮೈದಾನದಲ್ಲಿ   ಅಂಡರ್ 11 ರಿಂದ 21 ವರ್ಷದ ಯುವ ಫುಟ್ಬಾಲ್ ಆಟಗಾರರು ಹಾಗೂ ಮಹಿಳಾ ಆಟಗಾರ್ತಿಯರಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು‌ ಅವಕಾಶವಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಹಾಗೂ ಸಂಪೂರ್ಣ ಫುಟ್ಬಾಲ್ ಕಿಟ್ ನೊಂದಿಗೆ     ಬೆಳಗ್ಗೆ 8.30 ಗಂಟೆಗೆ ಅಮ್ಮತ್ತಿ ಪ್ರೌಢ ಶಾಲಾ ಮೈದಾನದಲ್ಲಿ ಹಾಜರಿರಬೇಕೆಂದು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ನಾಗೇಶ್ (ಈಶ್ವರ್) ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ 94489 76421 ಹಾಗೂ ಕಾರ್ಯದರ್ಶಿ ನಾಗೇಶ್ (ಈಶ್ವರ್) 94810 58256  ಸಂಪರ್ಕಿಸ ಬಹುದಾಗಿದೆ.

Read More

ಮಡಿಕೇರಿ ಮಾ.23 : ವಿರಾಜಪೇಟೆ  ತಾಲ್ಲೂಕಿನ ಚೆಂಬೆಬೆಳ್ಳೂರು ಗ್ರಾಮದಲ್ಲಿ  ಕಾವೇರಿ ನೀರಾವರಿ ನಿಗಮದ ವತಿಯಿಂದ 80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಲಾಯಿತು. ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ, ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಸ್ಥಳಿಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಮಾ.23 : ಅಖಿಲ ಕರ್ನಾಟಕ ಒಕ್ಕಲಿಗರ ಸಂಘ (ರಿ) ಮೈಸೂರು ಜಿಲ್ಲಾ ಘಟಕದ  ವತಿಯಿಂದ ಏರ್ಪಡಿಸಲಾಗಿದ್ದ ಜಿಲ್ಲಾ ಘಟಕ ಉದ್ಘಾಟನಾ ಕಾರ್ಯಕ್ರಮ, ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ, ನೇಮಕಾತಿ ಪತ್ರ ವಿತರಣೆ, ಸಾಧಕರಿಗೆ ಡಾ. ಬಾಲಗಂಗಾಧರನಾಥ ಸ್ವಾಮಿ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಶ್ರೀ ಸ್ಪಟಿಕಪುರಿ ಮಹಾಸಂಸ್ಥಾನ ಮಠದ  ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ನಂಜಾವಧೂತ ಮಹಾ ಸ್ವಾಮೀಜಿರವರು, ಸಂಸದ ಪ್ರತಾಪ್ ಸಿಂಹ ಶಾಸಕ ಎಲ್.ನಾಗೇಂದ್ರ, ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ಹರೀಶ್ ಗೌಡ, ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Read More

ಮಡಿಕೇರಿ ಮಾ.23 : ಉಂಗುರ ನುಂಗಿದ 8 ತಿಂಗಳ ಮಗುವೊಂದು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಮುನೀರ್ ಎಂಬುವವರ ಮಗು ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು ಎಂದು ಹೇಳಲಾಗಿದೆ. ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರೂ ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಹಿನ್ನೆಲೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರ ಚಿಕಿತ್ಸೆಯ ಮೂಲಕ ಉಂಗುರವನ್ನು ಹೊರ ತೆಗೆಯಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಮಗು ಮೃತಪಟ್ಟಿದೆ.

Read More

ಮಡಿಕೇರಿ ಮಾ.23 : ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಗೆ ವಿಧಾನಸಭಾ ಕ್ಷೇತ್ರದ ಸಂಯೋಜಕರುಗಳನ್ನಾಗಿ ಮತ್ತು ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ನ ಸಹ ಸಂಯೋಜಕರುಗಳನ್ನಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ಶಿಫಾರಸ್ಸಿನಂತೆ ಹಾಗೂ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಎಂ.ಬಿ.ಪಾಟೀಲ್ ಅವರ ಅನುಮೋದನೆಯೊಂದಿಗೆ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಸಹ ಸಂಯೋಜಕರಾದ ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅವರು ನೇಮಕಾತಿ ಮಾಡಿ ಆದೇಶ ಪತ್ರ ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕರಾಗಿ ಕೊಲ್ಯದ ಗಿರೀಶ್ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕರಾಗಿ ಜಿ.ಎಂ.ಕಾಂತರಾಜು ಅವರನ್ನು ನೇಮಿಸಲಾಗಿದೆ. ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ನ ಸಹ ಸಂಯೋಜಕರಾಗಿ ಈ ಕೆಳಕಂಡವರನ್ನು ನೇಮಿಸಲಾಗಿದೆ. ಮತ್ರಂಡ ದಿಲ್ಲು (ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್), ಹನೀಫ್ ಪಿ.ಎ…

Read More

ಮಡಿಕೇರಿ ಮಾ.23 : ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್‌ಸಿಂಹ ಅವರು ಸಂಸದರ ನಿಧಿಯಿಂದ ನೀಡಿರುವ (Advance Life Support Ambulance)ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನವನ್ನು ಹಸ್ತಾಂತರ ಮಾಡಲಾಯಿತು. ಸಂಸದ ಪ್ರತಾಪ್‌ಸಿಂಹ, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ  ಸುಜಾ  ಕುಶಾಲಪ್ಪ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Read More