ಲೇಖಕ: admin

ಮಡಿಕೇರಿ ಮಾ.23 : ಮಡಿಕೇರಿ ತಾಲ್ಲೂಕಿನ ಚೆಯ್ಯಂಡಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂಗ ಶ್ರೀ ಭಗವತಿ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ಈಶ್ವರ ದೇವಸ್ಥಾನದ ಕಾಂಕ್ರಿಟ್ ರಸ್ತೆಯನ್ನು ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಿದರು. ಶಾಸಕ ಕೆ.ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯ  ಸುಜಾ ಕುಶಾಲಪ್ಪ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ನಾಪೋಕ್ಲು  ಮಾ.23 :  ಕರ್ನಾಟಕ ಪಬ್ಲಿಕ್ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಗಳಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮೂರು ತಿಂಗಳ ಕಾಲ ನಡೆದ  ಟ್ಯೂಷನ್ ಕ್ಲಾಸ್ ನ ಸಮಾರೋಪ ಸಮಾರಂಭ ನಡೆಯಿತು. ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ದಿನೇಶ್ ಜ್ಯೋತಿ ಬೆಳಗಿಸುವುದರ ಮೂಲಕ  ಕಾರ್ಯಕ್ರಮ ಉದ್ಘಾಟಿಸಿದರು. ನಾಪೋಕ್ಲು ಗ್ರಾ.ಪಂ  ಸದಸ್ಯ  ಕುಲ್ಲೇಟಿರ ಅರುಣ್ ಬೇಬ ಮಾತನಾಡಿ,  ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳ ಓದಿನ ಮತ್ತು ಪರೀಕ್ಷೆಯ ವಿಷಯದ ಬಗ್ಗೆ ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಸಾರ್ವಜನಿಕರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದೆ ಎಂದರು. ಕಾರ್ಯಕ್ರಮದಲ್ಲಿ ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷ ಕೆ.ಎ.ಹ್ಯಾರಿಸ್, ಉಪ ಪ್ರಾಂಶುಪಾಲ ಶಿವಣ್ಣ , ಗ್ರಾಮಾಭಿವೃದ್ಧಿ ಸಂಘದ ಮೇಲ್ವಿಚಾರಕ ಸಂತೋಷ್, ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೇಯ, ಎಸ್‌ಡಿಎಂಸಿ ಸದಸ್ಯರಾದ ರಾಜೇಶ್ ಗ್ರೇಸಿ,  ಶಿಕ್ಷಕಿ ಉಷಾ ರಾಣಿ , ಶಾಲೆಯ ಸಿಬ್ಬಂದಿ ವರ್ಗ ,…

Read More

ಮಡಿಕೇರಿ ಮಾ.23 : ಚೆನ್ನಯ್ಯನಕೋಟೆ ಗ್ರಾ.ಪಂ  ವ್ಯಾಪ್ತಿಯ ಚೆನ್ನಯ್ಯನಕೋಟೆಯಲ್ಲಿ ರೂ.42.50 ಲಕ್ಷ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಈ ಸಂದರ್ಭ  ಗ್ರಾ.ಪಂ  ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.   

Read More

ಮಡಿಕೇರಿ ಮಾ.23 : ಅಗ್ನಿ ಆಕಸ್ಮಿಕದಿಂದ ಲಾರಿಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ.  ಗುಜುರಿ ತುಂಬಿದ ಲಾರಿ ಕೊಯಮತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ತಾಂತ್ರಿಕ‌ ದೋಷದಿಂದ ನಿಲುಗಡೆಗೊಳಿಗೊಳಿಸಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತ್ತಾದರೂ ಅಷ್ಟೊತ್ತಿಗಾಗಲೇ ಲಾರಿ ಸಂಪೂರ್ಣವಾಗಿ ಬೆಂಕಿಗೆ ಆಗುತಿಯಾಗಿತ್ತು.

Read More

ಮಡಿಕೇರಿ ಮಾ.22 : ಭಾಗಮಂಡಲದ ಕೋಪಟ್ಟಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ  ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ನಡೆಯಿತು. ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಪಂಚಾಯತಿ ಅಧ್ಯಕ್ಷೆ, ಸದಸ್ಯರು, ಗ್ರಾಮದ ನಿವಾಸಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಬಾಗವಹಿಸಿದ್ದರು.

Read More

ಮಡಿಕೇರಿ ಮಾ.22 : ಒಂದು ಕೋಟಿ ರೂ. ವೆಚ್ಚದ ಮೂರ್ನಾಡು ಕೊಂಡಂಗೇರಿ ರಸ್ತೆ,  6 ಕೋಟಿ ರೂ. ವೆಚ್ಚದ ಹೊದ್ದೂರು ಜೆ.ಜೆ.ಎಂ ಕುಡಿಯುವ ನೀರಿನ ಯೋಜನೆಗೆ  ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ ನೀಡಿದರು. 2 ಕೋಟಿ ರೂ. ವೆಚ್ಚದ ಮೂರ್ನಾಡು- ನಾಪೋಕ್ಲು ರಸ್ತೆ, 1 ಕೋಟಿ ರೂ. ವೆಚ್ಚದ ಬೆಟ್ಟಗೇರಿ ಮತ್ತು ಕುಂಬಳಗೇರಿ ರಸ್ತೆ ಅಭಿವೃದ್ಧಿಗೆ ಶಾಸಕರು ಭೂಮಿಪೂಜೆ ನೆರವೇರಿಸಿದರು.

Read More

ಮಡಿಕೇರಿ ಮಾ.22 : ಗೋಣಿಕೊಪ್ಪ ಸರಕಾರಿ ಶಾಲಾ ಮೈದಾನದಲ್ಲಿ “ಗೋಣಿಕೊಪ್ಪ ಪ್ರಿಮಿಯರ್ ಲೀಗ್”  ಕ್ರಿಕೆಟ್ ಅಂತಿಮ ಪಂದ್ಯದ ಉದ್ಘಾಟನೆಯನ್ನು ಶಾಸಕ ಕೆ.ಜಿ.ಬೋಪಯ್ಯ ನೆರವೇರಿಸಿದರು. ನಂತರ ಅವರು ಕ್ರೀಡಾಪಟುಗಳಿಗೆ ಸ್ಫೂರ್ತಿಯ ಮಾತುಗಳನ್ನಾಡಿದರು.

Read More

ಸೋಮವಾರಪೇಟೆ ಮಾ.22 : ಯುವತಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಸಿದ ಆರೋಪದಡಿ ಮೂವರ ವಿರುದ್ಧ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೋಮವಾರಪೇಟೆ ತಾಲ್ಲೂಕು ತಾಕೇರಿ ಸಮೀಪದ ಬಿಳಿಗೇರಿಯಲ್ಲಿ 19 ವರ್ಷದ ದಲಿತ ಯುವತಿಯನ್ನು ರಾತ್ರಿ ವೇಳೆ ಎಳೆದೊಯ್ದ ಮೂವರು ಜಾತಿ ನಿಂದನೆ ಮಾಡಿರುವುದಲ್ಲದೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿ ರಾಜು  ಎಂಬಾತನನ್ನು ಆಟೋ ರಿಕ್ಷಾ ಸಹಿತ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಉಳಿದ ಇಬ್ಬರು ಆರೋಪಿಗಳಾದ ನೌಷದ್ ಹಾಗೂ ಫಾರೂಕ್ ತಲೆ ಮರೆಸಿಕೊಂಡಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಹಿಂದೂ ಜಾಗರಣಾ ವೇದಿಕೆ ಆರೋಪಿಗಳನ್ನು ತಕ್ಷಣ ಬಂಧಿಸದಿದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

Read More

ನಾಪೋಕ್ಲು ಮಾ.22 : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ  ವಿರಾಜಪೇಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಈಗಾಗಲೇ ಸ್ಪರ್ಧಿಸುವುದಾಗಿ ಘೋಷಣೆ ಮಾಡಿರುವ ಅಲ್ಪಸಂಖ್ಯಾತರ ನಾಯಕ  ಕುಂಜಿಲ ಗ್ರಾಮದ ಮಕ್ಕಿ ನಾಸಿರ್ ಬೆಂಬಲಿಗರೊಂದಿಗೆ ಕ್ಷೇತ್ರದ ವಿವಿಧ ಗ್ರಾಮಗಳಿಗೆ ತೆರಳಿ ಕಾರ್ಯಕರ್ತರ ಸಭೆ ನಡೆಸಿ ಅಬ್ಬರದ ಪ್ರಚಾರ  ಮಾಡುತ್ತಿದ್ದು, ರಾಜಕೀಯ ಪಕ್ಷಗಳಿಗೆ ಟಾಂಗ್ ಕೊಡಲು ಮುಂದಾಗಿದ್ದಾರೆ.  ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ  ನೂರಾರು ವಾಹನದಲ್ಲಿ ಎಮ್ಮೆಮಾಡು ದರ್ಗಾಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು ಎಮ್ಮೆಮಾಡು ಗ್ರಾಮದ ಕೂರುಳಿ ಪಡಿಯಾಣಿ,ಹಾಗೂ ಕಕ್ಕಬ್ಬೆ ಕುಂಜಿಲ, ಕೊಳಕೇರಿ ಸೇರಿದಂತೆ ಕ್ಷೇತ್ರದ ವಿವಿಧ ಗ್ರಾಮಗಳಿಗೆ ತೆರಳಿ ಕಾರ್ಯಕರ್ತರನ್ನು ಒಗ್ಗೂಡಿಸಿ  ಶಕ್ತಿ ಪ್ರದರ್ಶನದೊಂದಿಗೆ ಮುಂಬರುವ ಚುನಾವಣೆಯಲ್ಲಿ ಮತ ಪಡೆದು ಗೆಲುವು ಸಾಧಿಸುವ ಹಾಗೂ ರಾಜಕೀಯ ಪಕ್ಷಗಳಿಗೆ ಟಾಂಗ್ ಕೊಡುವ ಕಾರ್ಯ ಪ್ರಾರಂಭ ಮಾಡುತ್ತಿದ್ದಾರೆ. ಇದರಿಂದ ರಾಜಕೀಯ ಪಕ್ಷಗಳಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇವರು ಕಬ್ಬಿಣದ ಕಡಲೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಹಲವು ದಿನಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ತೆರೆ ಮರೆಯಲ್ಲಿ ಬೆಂಬಲಿಗರೊಂದಿಗೆ ಗೌಪ್ಯ ಸಭೆನಡೆಸುತ್ತಿದ್ದ ನಾಸಿರ್…

Read More

ಕಡಂಗ ಮಾ.22 : ಮುಸ್ಲಿಂಮರ ಪವಿತ್ರ ರಂಜಾನ್ ತಿಂಗಳು ಗುರುವಾರದಿಂದ ಪ್ರಾರಂಭವಾಗಲಿದೆ. ಕೇರಳದಲ್ಲಿ ಚಂದ್ರ ದರ್ಶನ ವಾದ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಗುರುವಾರದಿಂದ ಉಪವಾಸ ಪ್ರಾರಂಭಗೊಳ್ಳಲಿದೆ ಎಂದು ಕೊಡಗು ಜಿಲ್ಲಾ ಖಾಜಿ ಗಳಾದ ಸಯ್ಯದ್ ಜಮಲುಲೈಲಿ ತಂಗಳ್ ಮತ್ತು ಕಾಂತಪುರ ಎ ಪಿ ಅಬೂಬಕರ್ ಮುಸ್ಲಿಯಾರ್ ತಿಳಿಸಿದ್ದಾರೆ. (ವರದಿ ನೌಫಲ್ ಎಂ.ಬಿ)

Read More