ಮಡಿಕೇರಿ ಏ.2 NEWS DESK : ಹಿಂದೂ ಸುರಕ್ಷಾ ಸಮಿತಿ ವತಿಯಿಂದ ನಾಪೋಕ್ಲುವಿನಲ್ಲಿ ಹಿಂದೂ ಸಮಾಜದ ಸಂಘಟನೆಯ ಧ್ಯೇಯದೊಂದಿಗೆ ಬೃಹತ್ ಜನಜಾಗೃತಿ ಜಾಥ ನಡೆಯಿತು. ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಯೋಜಿತ ಸಮಾವೇಶದಲ್ಲಿ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ್ಯ ಕಾರ್ಯಕಾರಿ ಸಮಿತಿಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮಾತನಾಡಿ, ಹಿಂದು ಸಮಾಜಕ್ಕೆ ಸಂಕಷ್ಟ ತಲೆದೋರಿದಾಗ ಅದನ್ನು ದಿಟ್ಟವಾಗಿ ಎದುರಿಸುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕಿದೆ ಎಂದರು. ಹಿಂದೂ ವಿರೋಧಿ ಶಕ್ತಿಗಳು ಸಮಾಜವನ್ನು ಕೆಣಕುವ ಮೊದಲು ಸಾವಿರ ಬಾರಿ ಯೋಚಿಸಬೇಕೆಂದು ತಿಳಿಸಿದ ಅವರು, ಇಂದು ಹಿಂದೂ ಸಮಾಜ ಜಾಗೃತವಾಗಿದೆ. ಒಂದು ಸಣ್ಣ ಘಟನೆಗೆ ಜಾಗೃತವಾಗಿ ಕೊಡಗಿನ ವೀರತ್ವ ಶೂರತ್ವವನ್ನು ಎಲ್ಲರಿಗೂ ಮನದಟ್ಟು ಮಾಡಿದೆ. ಹಿಂದೂ ಸಮಾಜದಲ್ಲಿ ಅನೇಕ ಜಾತಿ ಮತಗಳಿದ್ದು, ಇದನ್ನೆ ಅಸ್ತ್ರವನ್ನಾಗಿ ಹಿಂದೂ ಸಮಾಜದೊಳಗಡೆ ಜಾತಿಯ ವಿಷ ಬೀಜ ಬಿತ್ತುವ ಕೆಲಸ ಆಗುತ್ತಿದೆ, ಸಮಾಜದಲ್ಲಿ ಬೆಂಕಿ ಹುಟ್ಟದ ಹಾಗೆ ಜಾಗೃತೆ ವಹಿಸಬೇಕಿದ್ದು, ಇದಕ್ಕಾಗಿ ಹಿಂದೂ ಸಮಾಜ ಸಂಘಟನೆಯಾಗಬೇಕಾದ ಅನಿವಾರ್ಯತೆ ಇದೆ ಎಂದರು. ನಾಪೋಕ್ಲು ಸುರಕ್ಷಾ…
ಲೇಖಕ: admin
ಮಡಿಕೇರಿ ಏ.2 NEWS DESK : ಚೇರಂಬಾಣೆ ಸಮೀಪದ ಬೇಂಗೂರಿನ ಶ್ರೀ ಸುಬ್ರಹ್ಮಣ್ಯ ದೇವಾಲಯದ ಪಂಚ ಲೋಹದ ಬಿಂಬ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕಲಶಾಭೀಷೆಕ ಏ.8ರಿಂದ 10ರವರೆಗೆ ನಡೆಯಲಿದೆಯೆಂದು ದೇವಾಲಯ ಸಮಿತಿ ಅಧ್ಯಕ್ಷರಾದ ಪಟ್ಟಮಾಡ ಡಿ.ಪೊನ್ನಪ್ಪ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಪಟ್ಟಮಾಡ ಕುಟುಂಬಸ್ಥರ ವತಿಯಿಂದ ದೇವಸ್ಥಾನದಲ್ಲಿ ಕಾರ್ಯಕ್ರಮಗಳು ಆಯೋಜಿತವಾಗಿದೆಯೆಂದರು. ಏ.8 ರಂದು ಸಂಜೆ 7 ಗಂಟೆಗೆ ಪ್ರಾರ್ಥನೆ, ಬಿಂಬ ಪರಿಗ್ರಹ, ಪುಣ್ಯಾಹ, ಪ್ರಾಸಾದ ಶುದ್ಧಿ, ವಾಸ್ತು ರಕ್ಷೋಘ್ನ ಹೋಮ ಮತ್ತು ವಾಸ್ತು ಬಲಿ ನಡೆಯಲಿದೆ. ಏ.9 ರಂದು ಬೆಳಗ್ಗೆ 7 ಗಂಟೆಗೆ ಗಣಪತಿ ಹೋಮ, ಬಿಂಬ ಶುದ್ಧಿ, ಕಲಶ ಪೂಜೆ, ಸ್ಕಂದ ಪ್ರಾಯಶ್ಚಿತ್ತ ಹೋಮ, ಶಾಂತಿ ಹೋಮ, ಪ್ರೋಕ್ತ ಹೋಮ, ಅನುಜ್ಞಾ ಕಲಶ ಪೂಜೆ, ಅನುಜ್ಞಾ ಪ್ರಾರ್ಥನೆ, ಸಂಹಾರ ತತ್ವ ಹೋಮ, ಕಲಶಾಭಿಷೇಕ, ಜೀವಕಲಶ ಪೂಜೆ, ಜೀವೋದ್ವಾಸನೆ, ಜೀವಕಲಶ,…
ಮಡಿಕೇರಿ NEWS DESK ಏ.2 : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಭಾಂಗಣದಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸಾ ವಿಭಾಗ ಮತ್ತು ತುರ್ತು ಚಿಕಿತ್ಸಾ ವಿಭಾಗದ ಸಹಯೋಗದಲ್ಲಿ “ಸುಟ್ಟ ಗಾಯಗಳ ಸಮಗ್ರ ಆರೈಕೆ ಮತ್ತು ಮುಖದ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆ ಬಗ್ಗೆ ” ಕಾರ್ಯಕ್ರಮವು ಗುರುವಾರ ನಡೆಯಿತು. ಉಪ ವಿಭಾಗಧಿಕಾರಿಯಾದ ನಿತಿನ್ ಚಕ್ಕಿ, ಅವರು ಮಾತನಾಡಿ ಸುಟ್ಟ ಗಾಯಗಳಿಗೆ ಪ್ರಾಥಮಿಕ ಹಂತದಲ್ಲಿಯೇ ಉತ್ತಮ ಚಿಕಿತ್ಸೆ ನೀಡುವುದು, ಸೋಂಕು ನಿಯಂತ್ರಣದ ಮಹತ್ವವನ್ನು ಒತ್ತಿ ಹೇಳಿದರು. ಆರಂಭಿಕ ಚಿಕಿತ್ಸೆಯಿಂದ ಪುನರ್ವಸತಿ ವರೆಗೆ ವ್ಯವಸ್ಥಿತ ರೀತಿಯ ನಿರ್ವಹಣೆ ಬಗ್ಗೆ ಚರ್ಚೆ ಪ್ರಾಯೋಗಿಕವಾಗಿ ಉಪಯುಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು. ಮಿಸ್ ಟೀನ್ ಯೂನಿವರ್ಸ್ ಇಂಡಿಯಾ 2024 ಕರಿಸ್ಸಾ ಬೋಪಣ್ಣ ಅವರು ತಮ್ಮ ಫ್ಯಾಷನ್ ಡಿಸೈನಿಂಗ್ ವಿದ್ಯಾಭ್ಯಾಸದ ಅನುಭವ ಹಂಚಿಕೊoಡು, ವೈದ್ಯಕೀಯ ವಿದ್ಯಾರ್ಥಿಗಳ ಪರಿಶ್ರಮವನ್ನು ಶ್ಲಾಘಿಸಿದರು. ಜೀವನದಲ್ಲಿ ಮನಸ್ಸು ಕುಗ್ಗಿದಾಗ ವೈದ್ಯಕೀಯ ಕ್ಷೇತ್ರವನ್ನು ಆಯ್ಕೆ ಮಾಡಿದ ಉದ್ದೇಶವನ್ನು ನೆನಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಟ್ರಸ್ಟ್ವೆಲ್ ಆಸ್ಪತ್ರೆಯ ಓರೋ-ಫೇಷಿಯಲ್ ಮತ್ತು ಪ್ಲಾಸ್ಟಿಕ್ ಸರ್ಜರಿ ಸಲಹೆಗಾರರಾದ…
ಮಡಿಕೇರಿ, NEWS DESK ಏ.2 : ಕೊಡಗು ಜಿಲ್ಲಾ ಪೊಲೀಸ್ ಘಟಕ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣಾ ಕಾರ್ಯಕ್ರಮವು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ನಡೆಯಿತು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಯ ಕಂಪ್ಯೂಟರ್ ವಿಭಾಗದಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಎನ್.ಎಸ್.ತಿಮ್ಮಯ್ಯ ಅವರಿಗೆ ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿಯನ್ನು ವಿತರಿಸಿದರು. ಪೊಲೀಸ್ ಇಲಾಖೆಯ ಜಿಲ್ಲಾ ಸಶಸ್ತç ಪೊಲೀಸ್ ಪಡೆ ವಿಭಾಗದಲ್ಲಿ ಎಎಚ್‌ಸಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್.ಎಸ್.ಸುಧೀರ್ ಅವರಿಗೆ ಪೊಲೀಸ್ ವಿಶೇಷ ಘಟಕಗಳ ವಿಭಾಗದಲ್ಲಿ ಉತ್ತಮ ಸೇವೆ ಸಲ್ಲಿಸಿರುವುದಕ್ಕೆ ಪೊಲೀಸ್ ಟ್ರೋಫಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ನೀಡಿದರು. ಪೊಲೀಸ್ ಧ್ವಜ ದಿನಾಚರಣೆ ಪ್ರಯುಕ್ತ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಪೊಲೀಸ್ ಉಪ ನಿರೀಕ್ಷಕರಾದ ಕೆ.ಬಿ.ಅಚ್ಚಮ್ಮ ಅವರು ಗೌರವ ವಂದನೆ ಸ್ವೀಕರಿಸಿ ಮಾತನಾಡಿ ಕೊಡಗು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ…
ಮಡಿಕೇರಿ, NEWS DESK ಏ.2 – ಚೆಟ್ಟಳ್ಳಿಯ ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟದ ವತಿಯಿಂದ ಆಯೋಜಿತ ಪ್ರಥಮ ವಷ೯ದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಮೈಸೂರಿನ ಕೊಡವ ಪೊಮ್ಮಕ್ಕಡ ಕೂಟ ತಂಡವು ಚಾಂಪಿಯನ್ ಟ್ರೋಫಿ ತನ್ನದಾಗಿಸಿಕೊಂಡಿದೆ. ಪೊನ್ನಂಪೇಟೆಯ ಕೊಡವ ರೈಡರ್ಸ್ ಕ್ಲಬ್ ತಂಡವು ದ್ವಿತೀಯ ಸ್ಥಾನ ಪಡೆಯಿತು. ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ಚೆಟ್ಟಳ್ಳಿ ಕೊಡವ ಸಮಾಜದ ಅಧೀನದಲ್ಲಿರುವ ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟದ ವತಿಯಿಂದ ಆಯೋಜಿಸಲಾಗಿದ್ದ ಪ್ರಥಮ ವಷ೯ದ ಅಂತರ ಕೊಡವ ಪೊಮ್ಮಕ್ಕಡ ಥ್ರೋಬಾಲ್ ಪಂದ್ಯಾವಳಿಯ ಆಕಷ೯ಕ ಫೈನಲ್ ಪಂದ್ಯಾವಳಿಯಲ್ಲಿ ಮೈಸೂರಿನ ಕೊಡವ ಪೊಮ್ಮಕ್ಕಡ ಕೂಟ ತಂಡವು . ಪೊನ್ನಂಪೇಟೆಯ ಕೊಡವ ರೈಡರ್ಸ್ ಕ್ಲಬ್ ತಂಡದ ವಿರುದ್ದ ಗೆಲವು ಸಾಧಿಸಿತು. ಮೈಸೂರು ಹೂಟಗಳ್ಳಿಯ ಶ್ರೀ ತಲಕಾವೇರಿ ಪೊಮ್ಮಕ್ಕಡ ಕೂಟ ತಂಡವು ತೖತೀಯ ಸ್ಥಾನ ಮತ್ತು ಮಡಿಕೇರಿ ಕೊಡವ ಪೊಮ್ಮಕ್ಕಡ ಕೂಟದ ಬಿ ಟೀಮ್ ನಾಲ್ಕನೇ ಸ್ಥಾನ ತನ್ನದಾಗಿಸಿಕೊಂಡಿತು. ಬೆಂಗಳೂರು ದಾಸರಹಳ್ಳಿಯ ಪೊಮ್ಮಕ್ಕಡ ಕೂಟ ತಂಡವು ಶಿಸ್ತಿನ ತಂಡವಾಗಿ, ಪೊನ್ನಂಪೇಟೆ…
ತಾಲೂಕಿನ ಆಲೂರುಸಿದ್ದಾಪುರ ಸಮೀಪದ ಮನೆಹಳ್ಳಿ ಮಠದ ಆವರಣದಲ್ಲಿ ಇಂದು ಬೆಳಿಗ್ಗೆ ಮಠದ ಶ್ರೀ ಮಹಾಂತಶಿವಲಿಂಗ ಸ್ವಾಮೀಜಿ ಕ್ಷೇತ್ರದ ಆರಾಧ್ಯ ದೇವರುಗಳಾದ ವೀರಭದ್ರೇಶ್ವರ,ಭದ್ರಕಾಳಿ,ಶ್ರೀ ಗುರುಸಿದ್ದವೀರೇಶ್ವರ ಹಾಗೂ ತಪೋವನೇಶ್ವರಿ ದೇವಿಯವರಿಗೆ ರುದ್ರಾಭಿಷೇಕ,ಅಷ್ಟೋತ್ತರ ನಂತರ ಮಹಾಮಂಗಳಾರತಿ ನೆರವೇರಿಸಿದರು. ಆನಂತರ ಕಲ್ಯಾಣಿ ಸಮೀಪ ಶಟಸ್ಥಲ ಧ್ವಜಾರೋಹಣ ನೆರವೇರಿಸುವ ಮೂಲಕ 2026 ರ ಜಾತ್ರಾಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಸ್ವಾಮೀಜಿ ಶ್ರೀ ಮಠದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಜಾತ್ರಾಮಹೋತ್ಸವ ಶ್ರದ್ಧಾ,ಭಕ್ತಿ ಹಾಗೂ ಸಂಭ್ರಮದಿಂದ ನಡೆಯಲಿದೆ. ಮೂರು ದಿನಗಳು ನಡೆಯಲಿರುವ ಜಾತ್ರಾಮಹೋತ್ಸವದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಪಾಲ್ಗೊಳ್ಳಲಿದ್ದಾರೆ,ಏಪ್ರಿಲ್ 4 ರ ಶನಿವಾರ ಮದ್ಯಾಹ್ನ 3 ಗಂಟೆಗೆ ಧಾರ್ಮಿಕ ಸಮಾರಂಭ ನಡೆಯಲಿದೆ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಾಧೀಶರು,ಜನಪ್ರತಿನಿಧಿಗಳು ಹಾಗೂ ಗಣ್ಯರು ಆಗಮಿಸಲಿದ್ದಾರೆ. ಸಂಜೆ 7 ಗಂಟೆಗೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸ್ವಾಮಿಯವರ ಮಹಾರಥೋತ್ಸವ ನಡೆಯಲಿದೆ ಎಂದರು.
‘ಕೊಡವ ಅಭಿವೃದ್ಧಿ ನಿಗಮ’ ಸ್ಥಾಪನೆಯ ಸಂಕಲ್ಪ ಈಡೇರಿದ ಹಿನ್ನಲೆಯಲ್ಲಿ ಯುನೈಟೆಡ್ ಕೊಡವ ಆರ್ಗನೈಸೇಷನ್ – ಯುಕೊ ಸಂಘಟನೆಯ ಸದಸ್ಯರು ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದಲ್ಲಿ ಇಂದು ಪಾಡಿ ಶ್ರೀ ಇಗ್ಗುತ್ತಪ್ಪ ದೇವಸ್ಥಾನಕ್ಕೆ ಬೇಟಿ ನೀಡಿ ಪೂಜೆ ಸಲ್ಲಿಸಿ, ಅನ್ನದಾನಕ್ಕೆ ಅಕ್ಕಿ ಹಾಗು ದೀಪದ ಎಣ್ಣೆ ದಾನ ನೀಡಿ ಹರಕೆ ಸಲ್ಲಿಸಿದರು. ಕರ್ನಾಟಕ ಸರ್ಕಾರದ 2026-27ನೇ ಸಾಲಿನ ಮುಂಗಡಪತ್ರದಲ್ಲಿ ನೂತನವಾಗಿ “ಕೊಡವ ಅಭಿವೃದ್ದಿ ನಿಗಮ”ವು ಘೋಷಣೆಯಾಗಿದ್ದು, ಈ ಒಂದು ಪರಿಕಲ್ಪನೆಯನ್ನು ಹುಟ್ಟುಹಾಕಿ, ಇದಕ್ಕಾಗಿ ಕಳೆದ ಒಂದು ದಶಕದಿಂದ ನಿರಂತರ ಪರಿಶ್ರಮಪಟ್ಟಿರುವ ಯುನೈಟೆಡ್ ಕೊಡವ ಆರ್ಗನೈಸೇಷನ್ – ಯುಕೊ ಸಂಘಟನೆಯ ಸಂಕಲ್ಪ ಈಡೇರಿದ ಹಿನ್ನಲೆಯಲ್ಲಿ ಸಂಘಟನೆಯ ಸದಸ್ಯರು ಹಾಗು ಹಿತೈಶಿಗಳು ಇಂದು ಪಾಡಿ ಶ್ರೀ ಇಗ್ಗುತ್ತಪ್ಪ ದೇವಳಕ್ಕೆ ಬೇಟಿನೀಡಿ ವಿಶೇಷ ಪೂಜೆ ಸಲ್ಲಿಸಿ, ಕೊಡವ ಅಭಿವೃದ್ಧಿ ನಿಗಮ ಘೋಷಣೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಶಾಸಕ ಹಾಗು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಮತ್ತು ಈ ಒಂದು ಪರಿಕಲ್ಪನೆಯನ್ನು ಯಶಸ್ಸಿನೆಡೆಗೆ ಮುನ್ನಡೆಸಿದ ಯುಕೊ…
ಕಾರ್ಕಳ ಏ.1 NEWS DESK : ಕರ್ನಾಟಕದ ಸುಂದರ ಕರಾವಳಿ ಪ್ರದೇಶವಾದ ಕಾರ್ಕಳವು ಸಾಂಸ್ಕೃತಿಕ ವೈಭವ, ಪ್ರಕೃತಿ ಸೌಂದರ್ಯ ಮತ್ತು ಶಾಂತ ವಾತಾವರಣಕ್ಕೆ ಪ್ರಸಿದ್ಧಿ. ಇದೇ ಊರಲ್ಲಿ ರಹಸ್ಯ ಸಂಚು ಮತ್ತು ಸತ್ಯದ ಹುಡುಕಾಟದಿಂದ ತುಂಬಿರುವ ಒಂದು ವಿಭಿನ್ನ ಕಥೆ ಮೂಡಿಬರುತ್ತದೆ ಅದೇ ‘ಡಿಟೆಕ್ಟಿವ್ ದಿವಾಕರ್’. ಈ ತುಳು ಚಲನಚಿತ್ರದ ಟೀಸರ್ ಲಾಂಚ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಕಾಲೇಜು ಕಾರ್ಕಳದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಡಾಕ್ಟರ್ ರವೀಂದ್ರ ಶೆಟ್ಟಿ ಬಜಗೋಳಿ ಅವರು ಉದ್ಘಾಟಿಸಿ ಮಾತನಾಡಿ, “ನಮ್ಮ ನೆಲದ ಕಥೆಯನ್ನು ಹೇಳುವ ಈ ಚಲನಚಿತ್ರವು ಮುಂದಿನ ತಲೆಮಾರಿಗೆ ಒಂದು ಉತ್ತಮ ಸಂದೇಶವನ್ನು ನೀಡಲಿದೆ “ಎಂದು ತಿಳಿಸುತ್ತಾ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಚಲನಚಿತ್ರದ ಸಹ ನಿರ್ಮಾಪಕರಾದ ವಿಭಾ ಪ್ರೊಡಕ್ಷನ್ ನ ಅಶ್ವತ್ ಎಸ್.ಎಲ್ . “ಈ ಚಲನಚಿತ್ರವು ಒಂದು ಹೊಸ ಕಥಾಹಂದರವನಿಟ್ಟುಕೊಂಡು ನಿರ್ಮಾಣವಾಗಿದ್ದು ಕಾರ್ಕಳದ ಗತಿಸಿ ಹೋದ ಘಟನೆಗಳನ್ನು ಮತ್ತೆ ನೆನಪಿಸುವ, ರಹಸ್ಯಗಳನ್ನು ಅನಾವರಣಗೊಳಿಸುವ ಈ ಕಥೆ ಪ್ರೇಕ್ಷಕರಿಗೆ…
ಮಡಿಕೇರಿ ಏ.1 NEWS DESK : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ್ ಪರ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರುಗಳೊಂದಿಗೆ ಮನೆ ಮನೆಗೆ ತೆರಳಿ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು. ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಯೋಜನೆಗಳು ಮನೆ ಮನೆಗೆ ತಲುಪಿದ್ದು, ಈ ಬಾರಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿರಲಿದ್ದಾರೆ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದರು.
ಮಡಿಕೇರಿ ಏ.1 NEWS DESK : ಭಾಗಮಂಡಲ ಮೂಲದ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಕೆ.ಬಿ.ರೀಮಾ ಅವರು ಮಂಡಿಸಿದ “ಗ್ರೋಥ್ & ಕ್ಯಾರೆಕ್ಟರೈಷೇಶನ್ ಆಫ್ ಡೈವೆಲೆಂಟ್ ಕ್ಯಾಟ್ಅಯಾನ್ಸ್ ಡೋಪ್ಡ್ ಟಾಟ್ರೇಟ್ ಸಿಂಗಲ್ ಕ್ರಿಸ್ಟಲ್ಸ್ ” ವಿಷಯಕ್ಕೆ ಮಂಗಳೂರು ವಿವಿಯಿಂದ ಪಿಹೆಚ್ ಡಿ ಪದವಿ ಲಭಿಸಿದೆ. ರೀಮಾ ಅವರು ಪ್ರಸ್ತುತ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಮಂಗಳೂರು ವಿವಿ ಕಾಲೇಜು ಭೌತಶಾಸ್ತ್ರ ಪ್ರಾಧ್ಯಾಪಕ ಡಾ. ಜಗನ್ನಾಥ ನೆತ್ತಾರ್ ಮಾರ್ಗದರ್ಶನದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ್ದರು. ನಿವೃತ್ತ ಉಪ ತಹಶೀಲ್ದಾರ್ ಕೆದಂಬಾಡಿ ಎಸ್.ಬಾಲಕೃಷ್ಣ , ನಿವೃತ್ತ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಎಸ್.ಯು.ಸಾವಿತ್ರಿ ಅವರ ಪುತ್ರಿ. ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನಹಿತ್ಲು ದಿ. ಕೆ.ಡಿ.ಜಯಪ್ರಕಾಶ್ ಅವರ ಪತ್ನಿಯಾಗಿದ್ದಾರೆ.






