ಮಡಿಕೇರಿ ಮಾ.18 : ಈ ಬಾರಿಯ ಕೊಡವ ಕೌಟುಂಬಿಕ ಹಾಕಿ ಉತ್ಸವ ಆಯೋಜಿಸುತ್ತಿರುವ ಹಿನ್ನೆಲೆಯಲ್ಲಿ ಅಪ್ಪಚೆಟ್ಟೋಳಂಡ ಕುಟುಂಬಸ್ಥರು ಕುಟುಂಬದ ಹಿರಿಯರನ್ನು ಸ್ಮರಿಸಿ ದೇವಾಟ್ ಪರಂಬುವಿನಲ್ಲಿ ಮೀದಿ ಸಮರ್ಪಿಸಿದರು. ಈ ಹಿಂದಿನ ಇತಿಹಾಸದಂತೆ ಅಪ್ಪಚೆಟ್ಟೋಳಂಡ ಕುಟುಂಬಸ್ಥರು ಅಯ್ಯಂಗೇರಿ ಮೂಲದವರಾಗಿದ್ದಾರೆ. ಈ ಸಂದರ್ಭ ಕುಟುಂಬದ ಹಿರಿಯರು ನರಮೇದಕ್ಕೆ ಬಲಿಯಾಗಿರುವ ಐತಿಹತ್ಯವಿದೆ. ನಂತರದಲ್ಲಿ ಬಲ್ಲಮಾವಟಿಯಲ್ಲಿ ನೆಲೆಕಂಡು ಸಂತತಿ ವೃದ್ಧಿಯಾದ ಈ ಕುಟುಂಬ ಪ್ರಸ್ತುತ ಬಲ್ಲಮಾವಟಿ ಸೇರಿದಂತೆ ವಿವಿಧೆಡೆ ನೆಲೆಸಿದ್ದು, ಇದೀಗ 23ನೇ ವರ್ಷದ ಕೌಟುಂಬಿಕ ಹಾಕಿಯನ್ನು ಆಯೋಜಿಸುತ್ತಿದ್ದಾರೆ. ಕುಟುಂಬದ ಪ್ರಮುಖರಾದ ಮನು ಮುತ್ತಪ್ಪ ಸೇರಿದಂತೆ ಹಲವರು ಮೀದಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಲೇಖಕ: admin
ನಾಪೋಕ್ಲು ಮಾ.18 : ನಾಪೋಕ್ಲು ಪಟ್ಟಣದಿಂದ ಕೊಡವ ಸಮಾಜ ಹೋಗುವ ರಸ್ತೆಯ ಬದಿಯಲ್ಲಿರುವ ವಿದ್ಯುತ್ ಕಂಬ ಹಾನಿಯಾಗಿ ಮುರಿದು ಬೀಳುವ ಹಂತಕ್ಕೆ ತಲುಪಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಪಟ್ಟಣದ ಹೃದಯ ಭಾಗದಲ್ಲಿರುವ ಈ ರಸ್ತೆಯಲ್ಲಿ ಹಲವಾರು ವಾಹನಗಳು, ಸಾರ್ವಜನಿಕರು,ಶಾಲಾ ಮಕ್ಕಳು, ಇದರ ಬದಿಯಲ್ಲೇ ನಡೆದುಕೊಂಡು ಹೋಗುತ್ತಿದ್ದು, ವಿದ್ಯುತ್ ಕಂಬ ತುಂಡಾಗಿ ಬಿದ್ದರೆ ಭಾರಿ ಅನಾಹುತ ಸಂಭವಿಸುವ ಪರಿಸ್ಥಿತಿ ಎದುರಾಗಲಿದೆ. ಇದೇ ರಸ್ತೆಯಲ್ಲಿ ಸೆಸ್ಕ್ ಲೈನ್ ಮ್ಯಾನ್ ಗಳು ಪ್ರತಿನಿತ್ಯ ಓಡಾಡುತ್ತಿದ್ದರು ಇಲ್ಲಿರುವ ವಿದ್ಯುತ್ ಕಂಬ ಹಾನಿಯಾಗಿ ಬೀಳುವ ಹಂತದಲ್ಲಿದ್ದರು ದುರಸ್ಥಿಪಡಿಸದೇ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿರುವುದು ದುರದೃಷ್ಟಕರ ಎಂದು ಸಾರ್ವಜನಿಕರು ದೂರಿದ್ದಾರೆ. ಇದೇ ರೀತಿ ನಾಪೋಕ್ಲು ಸುತ್ತಮುತ್ತಲಿನಲ್ಲಿ ಹಲವಾರು ಹಳೆಯ ವಿದ್ಯುತ್ ಕಂಬಗಳು ಹಾನಿಯಾಗಿದ್ದು, ಹೆಚ್ಚಿನ ಅಪಾಯ ಎದುರಾಗುವ ಮುನ್ನ ಎಚ್ಚೆತ್ತುಕೊಂಡು ಸೆಸ್ಕ್ ಇಲಾಖೆ ಅಧಿಕಾರಿಗಳು ಕೂಡಲೇ ಇದನ್ನು ದುರಸ್ತಿಪಡಿಸಬೇಕು. ಇಲ್ಲದಿದ್ದರೆ ಮುಂದಾಗುವ ಅನಾಹುತಕ್ಕೆ ಇಲಾಖೆಯೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ. ವರದಿ :ಝಕರಿಯ ನಾಪೋಕ್ಲು
ಕುಶಾಲನಗರ, ಮಾ.18 : ಕುಶಾಲನಗರ ಪುರಸಭೆ ವ್ಯಾಪ್ತಿಯ ಮುಳ್ಳುಸೋಗೆ ಗ್ರಾಮ ದೇವತೆ ದೊಡ್ಡಮ್ಮತಾಯಿ ದೇವಾಲಯದಲ್ಲಿ 10ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವ ಅಂಗವಾಗಿ ದೇವಾಲಯದಲ್ಲಿ ಗಣಪತಿ ಹೋಮ, ನವಗ್ರಹ ಶಾಂತಿ ಹೋಮ ನಂತರ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಅರ್ಚಕರಾದ ರಾಘವೇಂದ್ರ ಆಚಾರ್, ಪದ್ಮನಾಭ ಭಟ್ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲದೊಂದಿಗೆ ಆಗಮಿಸಿ ಸಾಮೂಹಿಕ ಪೂಜೆ ಸಲ್ಲಿಸಿದರು. ದೇವಾಲಯ ಆಡಳಿತ ಮಂಡಳಿಯ ಅಧ್ಯಕ್ಷ ಕುಮಾರಸ್ವಾಮಿ, ಉಪಾಧ್ಯಕ್ಷ ಧನರಾಜ್, ಕಾರ್ಯದರ್ಶಿ ಅಣ್ಣೇಗೌಡ, ಸಹ ಕಾರ್ಯದರ್ಶಿ ಎಂ. ಮಂಜುನಾಥ್, ಖಜಾಂಚಿ ಎಂ.ಕೆ.ಗಣೇಶ್ , ಪ್ರಮುಖರಾದ ಎಂ.ಸಿ.ಮಂಜುನಾಥ್, ಎಂ.ಆರ್. ಸೋಮಶೇಖರ್, ಡಿ.ಅಪ್ಪಣ್ಣ ಮತ್ತಿತರರು ಇದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು. ದೇವಾಲಯ ಆಡಳಿತ ಸಮಿತಿ ವತಿಯಿಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು.
ಮಡಿಕೇರಿ ಮಾ.18 : ನಿಟ್ಟೂರು ಕಾರ್ಮಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ವಿಜಯ ಗ್ರಾಮೀಣ ಯುವಕ ಸಂಘದ ವತಿಯಿಂದ ನಡೆಯುತ್ತಿರುವ 4ನೇ ವರ್ಷದ ಫುಟ್ಬಾಲ್ ಪಂದ್ಯಾವಳಿಗೆ ರಾಷ್ಟ್ರೀಯ ರಗ್ಬಿ ಆಟಗಾರ ಕಾಂಡೇರ ತರುಣ್ ತಿಮ್ಮಯ್ಯ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕ್ರೀಡಾ ಸಂಸ್ಥೆಗಳು ಅಥವಾ ವಿವಿಧ ಸಂಘ ಸಂಸ್ಥೆಗಳು ಗ್ರಾಮೀಣ ಭಾಗದಲ್ಲಿ ಹೆಚ್ಚು ಹೆಚ್ಚು ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ಕ್ರೀಡೆ ಬಗ್ಗೆ ಆಸಕ್ತಿ ಮೂಡಿಸುವುದು ಶ್ಲಾಘನೀಯ ಎಂದರು. ನಿಟ್ಟೂರು ಗ್ರಾ.ಪಂ ಅಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ ಮಾತನಾಡಿ, ಸಣ್ಣ ಗ್ರಾಮದಲ್ಲಿ ದೊಡ್ಡ ಮಟ್ಟದ ಕ್ರೀಡೋತ್ಸವವನ್ನು ಆಯೋಜಿಸಿ ನಿರಂತರವಾಗಿ ನಡೆಸಿಕೊಂಡು ಬರುವುದು ಅಭಿನಂದನಾರ್ಹ ಎಂದು ತಿಳಿಸಿದರು. ಫುಟ್ಬಾಲ್ ಪಂದ್ಯಾವಳಿಗೆ 31 ತಂಡಗಳು ನೊಂದಾಯಿಸಿಗೊಂಡಿದ್ದು, ವಿಜೇತರಿಗೆ 50 ಸಾವಿರ ನಗದು, ರನ್ನರ್-ಅಪ್ ತಂಡಕ್ಕೆ 30 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುತ್ತಿದ್ದು, ಮಾ.20 ರಂದು ಸೋಮವಾರ ಸಂಜೆ ಫೈನಲ್ ಪಂದ್ಯ ನಡೆಯಲಿದೆ. ವಿಜಯ ಗ್ರಾಮೀಣ ಯುವಕ ಸಂಘದ…
ನಾಪೋಕ್ಲು ಮಾ.18 : ತೋಟಗಾರಿಕಾ ಇಲಾಖೆಯಿಂದ 4.50 ಲಕ್ಷ ರೂ.ವೆಚ್ಚದ ಬೇತು ಸಂಪರ್ಕ ರಸ್ತೆ ಕಾಮಗಾರಿಗೆ ನಾಪೋಕ್ಲು ಬಿಜೆಪಿ ಶಕ್ತಿಕೇಂದ್ರದಿಂದ ಭೂಮಿಪೂಜೆ ನೆರವೇರಿಸಲಾಯಿತು. ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಮಡಿಕೇರಿ ಬಿಜೆಪಿ ತಾಲೂಕು ಕಾರ್ಯದರ್ಶಿ ಪಾಡಿಯಮ್ಮಂಡ ಎ.ಮನುಮಹೇಶ್, ಮಡಿಕೇರಿ ಬಿಜೆಪಿ ತಾಲೂಕು ರೈತಮೋರ್ಚಾ ಅದ್ಯಕ್ಷ ಶಿವಚಾಳಿಯಂಡ ಜಗದೀಶ್, ಬೇತು ಗ್ರಾಮದ ಬೂತ್ ಅದ್ಯಕ್ಷ ಚೋಕಿರ ಸಜಿತ್, ಚೋಕಿರ ಪ್ರಭು, ಅಜ್ಜೇಟಿರ ಬೋಪಣ್ಣ, ಕೇಲೇಟಿರ ರವಿ, ಕಂಗಾಂಡ ಜಾಲಿ ಹಾಗೂ ಗುತ್ತಿಗೆದಾರ ವಿನಾಯಕ ಇದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಮಾ.18 : ಜಿಲ್ಲೆಯಲ್ಲಿ ಮತ್ತೆ ಹಾಕಿ ಹಬ್ಬದ ಸಂಭ್ರಮ ಮರುಕಳಿಸುತ್ತಿದ್ದು, ಇಂದಿನಿಂದ ಆರಂಭಗೊಳ್ಳುವ 23ನೇ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಇಲ್ಲಿನ ಚೆರಿಯಪರಂಬು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅಂತಿಮ ಹಂತದ ಸಿದ್ದತೆಗಳು ಪೂರ್ಣಗೊಂಡಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾಕಿ ಪಂದ್ಯಾವಳಿಗೆ ಉದ್ಘಾಟನೆಗೆ ಆಗಮಿಸಲಿದ್ದು, ಉತ್ಸವದ ಮೆರುಗು ಮತ್ತಷ್ಟು ಹೆಚ್ಚಲಿದೆ. ಅಪ್ಪಚೆಟ್ಟೋಳಂಡ ಕುಟುಂಬ ಕೌಟುಂಬಿಕ ಹಾಕಿ ಉತ್ಸವದ ಆತಿಥ್ಯ ವಹಿಸಿದ್ದು ಶುಕ್ರವಾರ ಅಂತಿಮ ಹಂತದ ಸಿದ್ಧತೆ ನಡೆಸಿತು. ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗಾಗಿ ಕ್ರೀಡಾಂಗಣದಲ್ಲಿ ತಯಾರಿ ನಡೆದಿದ್ದು, ಕೊಡಗಿನ ಹಾಕಿ ಪ್ರಿಯರು ವೀಕ್ಷಿಸಲು ಎಲ್ಲ ಸೌಲಭ್ಯಗಳನ್ನು ಒಳಗೊಂಡ 32 ಲಕ್ಷ ರೂ.ವೆಚ್ಚದ ಬೃಹತ್ ಗ್ಯಾಲರಿ ನಿರ್ಮಾಣ ಮಾಡಲಾಗಿದೆ. 25000 ಜನರು ಒಟ್ಟಾಗಿ ಪಂದ್ಯ ವೀಕ್ಷಿಸಬಹುದಾಗಿದೆ. ಅಲ್ಲದೇ 600 ಮಂದಿ ಕುಳಿತುಕೊಳ್ಳಲು ವಿಐಪಿ ಗ್ಯಾಲರಿಯನ್ನು ನಿರ್ಮಾಣ ಮಾಡಲಾಗಿದ್ದು ಮೈದಾನ ಹಾಗೂ ಗ್ಯಾಲರಿ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದೆ. ಒಂದೇ ಮೈದಾನದಲ್ಲಿ ಒಟ್ಟು ಮೂರು ಸುಸಜ್ಜಿತ ಹಾಕಿ ಮೈದಾನ ತಯಾರಾಗಿದ್ದು ಒಂದು…
ಕುಶಲನಗರ ಮಾ.17 : ಕುಶಾಲನಗರ ಲಯನ್ಸ್ ಕ್ಲಬ್ ಮತ್ತು ಗೌಡ ಸಮಾಜ ಆಶ್ರಯದಲ್ಲಿ ಡಾ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು. ಕುಶಾಲನಗರದ ಗೌಡ ಸಮಾಜ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಪುರಸಭೆ ಅಧ್ಯಕ್ಷ ಜಯ ವರ್ಧನ್ ಉದ್ಘಾಟಿಸಿದರು. ಮೈಸೂರಿನ ಸೈಂಟ್ ಜೋಸೆಫ್ ಆಸ್ಪತ್ರೆಯ ವೈದ್ಯರಾದ ಮಹಮ್ಮದ್ ಇಬ್ರಾಹಿಂ, ಮಡಿಕೇರಿ ರಕ್ತ ನಿಧಿ ಘಟಕದ ಡಾ. ಕರುಬಯ್ಯ, ಡಾ ಶಶಿಧರ್ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ಶಿಬಿರ ನಡೆಯಿತು. 75ಕ್ಕೂ ಅಧಿಕ ರಕ್ತದಾನಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಎಂ.ಎಸ್ ಚಿಣ್ಣಪ್ಪ, ಕಾರ್ಯದರ್ಶಿ ಸುಮನ್ ಬಾಲಚಂದ್ರ, ಹೇಮಂತ್, ನಿಕಟ ಪೂರ್ವ ಅಧ್ಯಕ್ಷರುಗಳಾದ ಪಿ ಎಂ ಮೋಹನ್, ರಾಜಶೇಖರ್, ಸತೀಶ್ ಕುಮಾರ್, ಗೌಡ ಸಮಾಜದ ಅಧ್ಯಕ್ಷರಾದ ಗಣಿ ಪ್ರಸಾದ್ ಕಾರ್ಯದರ್ಶಿ ಕೃಷ್ಣಮೂರ್ತಿ, ಯುವಕ ಸಂಘ ಅಧ್ಯಕ್ಷರಾದ ಕೊಡಗನ ಹರ್ಷ,ಕಾಶಿ ಪೂವಯ್ಯ ಮತ್ತಿತರರು ಇದ್ದರು.
ಮಡಿಕೇರಿ ಮಾ.17 : ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಮಡಿಕೇರಿ ನಗರಸಭಾ ವ್ಯಾಪ್ತಿಯ ಇಂದಿರಾನಗರ ಬಡಾವಣೆಯ ನಿವಾಸಿಗಳು ನಿರ್ಧರಿಸಿದ್ದಾರೆ. ನಗರಸಭೆಯ ನಿರ್ಲಕ್ಷ್ಯದಿಂದ ಬಡಾವಣೆಯ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿವೆ. ರಸ್ತೆಯ ಅಭಿವೃದ್ಧಿಗಾಗಿ ಮಂಜೂರಾಗಿದ್ದ ಅನುದಾನವನ್ನು ರದ್ದುಗೊಳಿಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮಳೆಗಾಲ ಸಮೀಪಿಸುತ್ತಿದ್ದು, ರಸ್ತೆ ಕಾಮಗಾರಿಗೆ ಇನ್ನೂ ಕೂಡ ಚಾಲನೆ ನೀಡಿಲ್ಲ. ಕಾಮಗಾರಿ ನಡೆಯುವ ಬಗ್ಗೆ ಸಂಶಯವಿದ್ದು, ಈ ಬಾರಿ ನಾವು ಮತದಾನ ಮಾಡುವುದಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಡಾವಣೆಯಲ್ಲಿ ಚುನಾವಣೆ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದಾರೆ.
ಕುಶಾಲನಗರ ಮಾ.17 : ಸ್ವಚ್ಛತಾ ಅಭಿಯಾನದ ಅಡಿಯಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಕುಶಾಲನಗರ ಫೆಡರಲ್ ಬ್ಯಾಂಕ್ ಶಾಖೆ ವತಿಯಿಂದ ಕುಶಾಲನಗರ ಪುರಸಭೆಗೆ ಮಹೇಂದ್ರ ಪಿಕಪ್ ವಾಹನವನ್ನು ಕೊಡುಗೆ ನೀಡಲಾಯಿತು. ಬ್ಯಾಂಕ್ ಶಾಖೆಯ 11ನೇ ವಾರ್ಷಿಕೋತ್ಸವ ಅಂಗವಾಗಿ ಸಂಸ್ಥೆಯ ಸಿಎಸ್ಆರ್ ಯೋಜನೆ ಅಡಿ ಸುಮಾರು 8.75 ಲಕ್ಷ ರೂ ಮೌಲ್ಯದ ವಾಹನವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕರಾದ ಎಂ ಪಿ ಅಪ್ಪಚ್ಚುರಂಜನ್ ಸಮ್ಮುಖದಲ್ಲಿ ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ನಡೆದ ಸರಳ ಸಮಾರಂಭದಲ್ಲಿ ಬ್ಯಾಂಕಿನ ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶಾಸಕ ರಂಜನ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಂಜನ್, ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿರುವ ಫೆಡರಲ್ ಬ್ಯಾಂಕ್ ಅಧಿಕಾರಿಗಳು ಸಿಬ್ಬಂದಿಗಳ ಕೊಡುಗೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬ್ಯಾಂಕಿನ ಲಾಭಾಂಶದಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಇಂತಹ ಸಂಸ್ಥೆಗಳಲ್ಲಿ ಗ್ರಾಹಕರು ಹೆಚ್ಚಿನ ವಹಿವಾಟು ಮಾಡುವುದರೊಂದಿಗೆ ಸಂಸ್ಥೆಯ ಅಭಿವೃದ್ಧಿಗೆ ಸಹಕರಿಸಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪುರಸಭೆ ಅಧ್ಯಕ್ಷರಾದ ಬಿ. ಜಯವರ್ಧನ್ ಮಾತನಾಡಿ, ಬ್ಯಾಂಕ್…
ಮಡಿಕೇರಿ ಮಾ.17 : ಮಹಿಳೆಯನ್ನು ಅತ್ಯಾಚಾರ ಮಾಡಿದ ಆರೋಪದಡಿ ನಾಪತ್ತೆಯಾಗಿದ್ದ ಆರೋಪಿಯನ್ನು ಕೊಡಗು ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊನ್ನಂಪೇಟೆಯಲ್ಲಿ ಆಟೋ ಚಾಲಕನಾಗಿರುವ ಮಣಿಕಂಠ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಪೊನ್ನಂಪೇಟೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರು ಮಾ.12ರಂದು ಸಂಜೆ 5.30 ರ ವೇಳೆಗೆ ಕೆಲಸ ಮುಗಿಸಿ ಮನೆಗೆ ತೆರಳಲು ವಾಹನಕ್ಕಾಗಿ ಕಾಯುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಯೋರ್ವ ಮಾರುತಿ ಓಮಿನಿ ಕಾರ್‌ನಲ್ಲಿ ಬಂದು ನಾನು ಕುಂದ ಕಡೆ ಹೋಗುತ್ತಿದ್ದು, ನೀವು ಬರುತ್ತೀರ ಎಂದು ಮಹಿಳೆಯನ್ನು ಕೇಳಿದ್ದಾನೆ. ಈ ವೇಳೆ ಬಿ.ಶೆಟ್ಟಿಗೇರಿ ಕಡೆ ಬರುತ್ತೇನೆ ಎಂದು ಮಹಿಳೆ ಕಾರಿನಲ್ಲಿ ಕುಳಿತಿದ್ದಾರೆ. ಸ್ವಲ್ಪ ದೂರ ತೆರಳಿದ ನಂತರ ಕಾರ್ ನಿಲ್ಲಿಸಿದ ಆರೋಪಿ ಅತ್ಯಾಚಾರ ಎಸಗಿದ್ದಲ್ಲದೆ, ಯಾರಿಗಾದರೂ ತಿಳಿಸಿದಲ್ಲಿ ಕೊಲೆ ಮಾಡುವುದಾಗಿ ಬೆದರಿಸಿ, ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದ ಎಂದು ಆರೋಪಿಸಿ ಸಂತ್ರಸ್ತ ಮಹಿಳೆ ಮಾ.16ರಂದು ಗೋಣಿಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಪೊನ್ನಂಪೇಟೆಯಲ್ಲಿ ಆಟೋ ಚಾಲಕನಾಗಿರುವ ಮಣಿಕಂಠ ಎಂಬ…






