ಕಣಿವೆ ಏ.1 NEWS DESK : ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ 119ನೇ ಜಯಂತಿ ಕಾರ್ಯಕ್ರಮವನ್ನು ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಡಾ.ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಗುಡ್ಡೆಹೊಸೂರು ಹಾಗೂ ಬಳ್ಳೂರು ವೀರಶೈವ ಸಮಾಜದ ವತಿಯಿಂದ ಆಚರಿಸಲಾಯಿತು. ಶ್ರೀಗಳ ಭಾವಚಿತ್ರವನ್ನು ಪೂಜಿಸಿ, ಮಹಾಮಂಗಳಾರತಿ ನೆರವೇರಿಸಲಾಯಿತು. ಬಳಿಕ ನೆರೆದ ಭಕ್ತರಿಗೆ ಸಿಹಿ ವಿತರಿಸಲಾಯಿತು. ಈ ಸಂದರ್ಭ ಗುಡ್ಡೆಹೊಸೂರು ವೀರಶೈವ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ, ಕಾರ್ಯದರ್ಶಿ ದಾಕ್ಷಾಯಿಣಿ, ಸಿದ್ದಗಂಗಾ ಭಕ್ತ ಮಂಡಳಿ ಅಧ್ಯಕ್ಷ ಕೆ.ಎಸ್.ಮೂರ್ತಿ, ಪ್ರಮುಖರಾದ ಶುಭಶೇಖರ, ಉದ್ಯಮಿ ಮೌರ್ಯ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಾಗರ್, ಸಹಕಾರ ಸಂಘದ ಉಪಾಧ್ಯಕ್ಷ ಕಾಶಿ, ಹುಲುಸೆ ವೀರಶೈವ ಸಮಾಜದ ಅಧ್ಯಕ್ಷ ಶಿವನಂಜಪ್ಪ, ಕವಿತಾ, ವೈಶಾಲಿ, ಚಿದಾನಂದ, ಗಣೇಶ, ಚಿಮ್ಮಣ್ಣ, ಶಿಕ್ಷಕ ಪುಟ್ಟರಾಜು, ಸಂಪತ್, ಮೊದಲಾದವರು ಇದ್ದರು. ಕಾರ್ಯಕ್ರಮದ ಪ್ರಯುಕ್ತ ವೃತ್ತವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.
ಲೇಖಕ: admin
ಮಡಿಕೇರಿ ಏ.1 NEWS DESK : ಬ್ಯಾರಿ ಅಕಾಡಮಿ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಒಂದು ಸಂಸ್ಥೆಗೆ ಸೀಮಿತ ಅಲ್ಲ ಬದಲಾಗಿ ಬ್ಯಾರಿ ಭಾಷೆ, ಕಲೆ ಸಂಸ್ಕ್ರತಿಯನ್ನು ಬಿಂಬಿಸುವ ವೇದಿಕೆಯಾಗಿದೆ. ಸಾಹಿತ್ಯ , ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿ ಕೊಂಡವರನ್ನು ಸಮ್ಮೇಳನದಲ್ಲಿ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ, ಸಮ್ಮೇಳನದ ಭಾಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಬ್ಯಾರಿ ಸಮುದಾಯದ ಅಭಿವೃದ್ಧಿಗಾಗಿ ಎಲ್ಲರೂ ಸಹಕರಿಸಬೇಕೆಂದು ಹಿರಿಯ ಸಾಹಿತಿ ಬಿ.ಎ.ಶಂಷುದ್ದೀನ್ ಕರೆ ನೀಡಿದರು. ಏ.28 ರಂದು ಮಡಿಕೇರಿಯಲ್ಲಿ ಕರ್ನಾಟಕ ಬ್ಯಾರಿ ಅಕಾಡಮಿ ಹಾಗೂ ಕೊಡಗು ವೆಲ್ಫೇರ್ ಟ್ರಸ್ಟ್ ವತಿಯಿಂದ ನಡೆಸಲಾಗುವ ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನದ ಭಾಗವಾಗಿ ಮಡಿಕೇರಿಯ ಕಮ್ಯುನಿಟಿ ಸಭಾಂಗಣದಲ್ಲಿ ನಡೆದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಾಮಾಜಿಕ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಮಹಿಳೆಯರು, ಮಕ್ಕಳು ಹಾಗೂ ಯುವಕರಿಗೆ ವಿವಿಧ ಸ್ಪರ್ದೆಗಳು, ಸಮ್ಮೇಳನದಂದು ಕವಿಗೋಷ್ಟಿ, ವಿಚಾರ ಸಂಕೀರಣ, ವಿಚಾರ ಗೋಷ್ಠಿ ಕಾರ್ಯಕ್ರಮಗಳು ನಡೆಯಲಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು.…
ಮಡಿಕೇರಿ ಏ.1 NEWS DESK : ದಾವಣಗೆರೆ ಉಪ ಚುನಾವಣೆ ಹಿನ್ನೆಲೆ ದಾವಣಗೆರೆ ಕಾಂಗ್ರೆಸ್ ಚುನಾವಣಾ ಪ್ರಚಾರದ ಕಚೇರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ನೀಡಿದರು. ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಚುನಾವಣಾ ಪ್ರಚಾರ ನಡೆಸಲು ದಾವಣಗೆರೆ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿಗೆ ನೀಡಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭೇಟಿಯಾಗಿ ಮಾತುಕತೆ ನಡೆಸಿದರು. ನಂತರ ಸಭೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಏ.1 : ಪ್ರಕೃತಿ ಪ್ರಿಯರ ಸ್ವರ್ಗ, ಕಾವೇರಿ ನದಿಯ ತವರು ಜಿಲ್ಲೆ ಕೊಡಗಿನ ದೈತ್ಯ ಬೆಟ್ಟ ತಡಿಯಂಡಮೋಳ್ ನ್ನು 100 ಬಾರಿ ಏರಿದ ಸಾಧನೆಯನ್ನು ನಾಪೋಕ್ಲುವಿನ ಯವಕಪಾಡಿ ಗ್ರಾಮದ ಅರೆಯಡ ಗಿರೀಶ್ ತಿಮ್ಮಯ್ಯ ಅವರು ಮಾಡಿದ್ದಾರೆ. ಸಮುದ್ರ ಮಟ್ಟದಿಂದ 1748 ಮೀಟರ್ ಎತ್ತರದಲ್ಲಿರುವ ತಡಿಯಂಡಮೋಳ್ ನ್ನು ಏರುವುದು ಸುಲಭದ ಮಾತಲ್ಲ, ಅದರಲ್ಲೂ 100 ಬಾರಿ ಬೆಟ್ಟವನ್ನೇರುವುದೆಂದರೆ ಅದು ಮಹಾ ಸಾಧನೆಯೇ ಸರಿ. 1994ರ ಅವಧಿಯಲ್ಲಿ ತಡಿಯಂಡಮೋಳ್ ಬೆಟ್ಟವನ್ನು ಏರಲೆಂದೇ ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದರು. ಆ ಸಂದರ್ಭ ಯವಕಪಾಡಿ ಗ್ರಾಮದ ಅಪ್ಪಾರಂಡ ಅಪ್ಪಣ್ಣ ಎಂಬುವವರ ಮನೆಯಲ್ಲಿ ತಂಗಿದ್ದ ವಿದೇಶಿ ಪ್ರವಾಸಿಗರೊಬ್ಬರು ಹಣ ಪಡೆದು ಆಶ್ರಯ ಮತ್ತು ಆತಿಥ್ಯ ನೀಡುವಂತೆ “ಹೋಂಸ್ಟೇ” ಪರಿಕಲ್ಪನೆಯನ್ನು ಪರಿಚಯಿಸಿದರು. ಅಂದಿನಿoದ ಅಪ್ಪಾರಂಡ ಅಪ್ಪಣ್ಣ ಅವರು “ಪ್ಯಾಲೇಸ್ ಎಸ್ಟೇಟ್” ಹೆಸರಿನ ಹೋಂಸ್ಟೇ ಮೂಲಕ ಚಿರಪರಿಚಿತರಾದರು. ಹೋಂಸ್ಟೇಗೆ ದಿನದಿಂದ ದಿನಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾದಂತೆ ತಡಿಯಂಡಮೋಳ್ ಗೆ ಸಾಗುವ ಪ್ರವಾಸಿಗರಿಗೆ ಗೈಡ್ ವೊಬ್ಬರ…
ಮಡಿಕೇರಿ ಏ.1 NEWS DESK : ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆಯುವ ಹನುಮ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಏ.2 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ವಿರಾಜಪೇಟೆ ನಗರ ಮತ್ತು ಸುತ್ತಮುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.
ಮಡಿಕೇರಿ ಏ.1 NEWS DESK : ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಸಹಕಾರದೊಂದಿಗೆ ಮಡಿಕೇರಿ ಯೂತ್ ಕ್ರಿಕೆಟ್ ಕ್ಲಬ್(ಎಂವೈಸಿಸಿ) ವತಿಯಿಂದ ವಿವಿಧ ವಯೋಮಿತಿಯ ಮಂಗಳೂರು ವಿಭಾಗದ ಕೊಡಗು ಕ್ರಿಕೆಟ್ ತಂಡಗಳ ರಚನೆಗೆ ಪ್ರತಿಭಾವಂತ ಆಟಗಾರರ ಆಯ್ಕೆ ಪ್ರಕ್ರಿಯೆ ಏ.6 ಮತ್ತು 7 ರಂದು ಮರಗೋಡು ಶಾಲಾ ಮೈದಾನದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಎಂವೈಸಿಸಿ ಅಧ್ಯಕ್ಷ ಪೊನ್ನಚ್ಚನ ಮಧು ಸೋಮಣ್ಣ ಆಯ್ಕೆ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿ, ಬಾಲಕರ 14, 16 ಮತ್ತು 19 ವರ್ಷದೊಳಗಿನ ತಂಡಗಳಿಗೆ ಆಟಗಾರರ ಆಯ್ಕೆ ಪ್ರಕ್ರಿಯೆ ಏ.6 ರಂದು ನಡೆಯಲಿದ್ದು, ಬಾಲಕಿಯರ 15 ಮತ್ತು 19 ವರ್ಷದೊಳಗಿನ ತಂಡಗಳ ಆಯ್ಕೆ ಪ್ರಕ್ರಿಯೆ ಏ.7 ರಂದು ನಡೆಯಲಿದೆ. ಆಯ್ಕೆ ಪ್ರಕ್ರಿಯೆ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿದೆಯೆಂದು ತಿಳಿಸಿದರು. ಶಾಲಾ ಪರೀಕ್ಷೆಗಳ ಹಿನ್ನೆಲೆ ಪ್ರತಿಭಾವಂತರು ಆಯ್ಕೆಯಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ ಬಾಲಕರ 14 ವರ್ಷದೊಳಗಿನ ಆಯ್ಕೆಯಲ್ಲಿ ಆರಂಭಿಕ ದಿನದಂದು ಪಾಲ್ಗೊಳ್ಳಲು ಸಾಧ್ಯವಾಗದವರಿಗೆ ಏ.17 ರಂದು ಅವಕಾಶವನ್ನ…
ಮಡಿಕೇರಿ, NEWS DESK ಏ.1 : ಓಂಕಾರೇಶ್ವರ ವ್ಯವಸ್ಥಾಪನಾ ಸಮಿತಿಯ ಉಸ್ತುವಾರಿಯಲ್ಲಿರುವ ಶ್ರೀ ಓಂಕಾರೇಶ್ವರ, ಶ್ರೀ ಆಂಜನೇಯ ಹಾಗೂ ಶ್ರೀ ಕೋಟೆ ಮಹಾಗಣಪತಿ ದೇವಾಲಯಗಳ ಅಭಿವೃದ್ಧಿಗೆ ಹಾಗೂ ಇತರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ಒಟ್ಟು ರೂ 1 ಕೋಟಿ ಅನುದಾನವನ್ನು ಸರಕಾರದಿಂದ ಒದಗಿಸುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದ್ದಾರೆ. ಮಡಿಕೇರಿಯಲ್ಲಿ ಭೇಟಿ ಮಾಡಿದ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ಹಾಗೂ ಸದಸ್ಯರುಗಳಾದ ಅಂಬೆಕಲ್ ಕುಶಾಲಪ್ಪ, ಪ್ರಕಾಶ್ ಆಚಾರ್ಯ ಮತ್ತು ಜಿ.ರಾಜೇಂದ್ರ ಇವರುಗಳು ಮಾಡಿದ ಮನವಿಗೆ ಸ್ಪಂದಿಸಿ ಶಾಸಕರು ಈ ಭರವಸೆ ನೀಡಿದರು. ಸರಕಾರದಿಂದ ತನಗೆ ಶಾಸಕರ ಅನುದಾನ ದೊರಕುವ ಮೂಲದಿಂದ ರೂ. 50 ಲಕ್ಷ ಹಾಗೂ ಮುಜರಾಯಿ ಇಲಾಖೆಯಿಂದ ಸಚಿವ ರಾಮಲಿಂಗಾ ರೆಡ್ಡಿ ಅವರ ಮೂಲಕ ರೂ. 50 ಲಕ್ಷ, ಹೀಗೆ ಒಟ್ಟು ರೂ. 1 ಕೋಟಿ ಒದಗಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ಈಗಾಗಲೇ ಸಮಿತಿಯಿಂದ ಸುಮಾರು ರೂ. 36…
ಮಡಿಕೇರಿ, NEWS DESK ಏ.1 : ‘ಗುಣಮಟ್ಟದ ಉತ್ಪನ್ನ ಹಾಗೂ ಸೇವೆ ಪ್ರತಿ ಗ್ರಾಹಕರ ಮೂಲಭೂತ ಹಕ್ಕು.. ಗ್ರಾಹಕನೇ ರಾಜ, ಆದರೆ ಹಕ್ಕುಗಳ ಬಗ್ಗೆ ತಿಳುವಳಿಕೆ ಇದ್ದಾಗ ಮಾತ್ರ… ಖರೀದಿಸುವ ಮೊದಲು ಯೋಚಿಸಿ, ಗುಣಮಟ್ಟವನ್ನು ಪರೀಕ್ಷಿಸಿ… ಗ್ರಾಹಕರ ಹಕ್ಕುಗಳ ಅರಿವೇ ಮೋಸದಿಂದ ರಕ್ಷಣೆ… ಈ ಸಂದೇಶವು ಬುಧವಾರ ನಡೆದ ವಿಶ್ವ ಗ್ರಾಹಕರ ದಿನಾಚರಣೆ ಸಂದರ್ಭದಲ್ಲಿ ಕೇಳಿ ಬಂದವು. ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ, ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ಸುರಕ್ಷಿತ ಉತ್ಪನ್ನಗಳು ಆತ್ಮವಿಶ್ವಾಸದ ಗ್ರಾಹಕರು ಎಂಬ ವಿಷಯದಡಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿರುವ ಸರ್ಕಾರಿ ಪದವಿ ಕಾಲೇಜಿನಲ್ಲಿ ಮೊಳಗಿತು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮಾತನಾಡಿ ಸಮಾಜದಲ್ಲಿನ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿ ಗ್ರಾಹಕರಾಗಿದ್ದು, ಗ್ರಾಹಕರ ಸುರಕ್ಷತೆ, ಮಾಹಿತಿ ಮತ್ತು ನ್ಯಾಯಸಮ್ಮತ ಸೇವೆ ದೊರಕುವುದು ಅತ್ಯಂತ ಅವಶ್ಯಕವಾಗಿದೆ ಎಂದರು. ಪ್ರತಿಯೊಬ್ಬರೂ ಗ್ರಾಹಕರ ಹಕ್ಕುಗಳ ಬಗ್ಗೆ…
ಮಡಿಕೇರಿ, NEWS DESK ಏ.1: ಕ್ರೀಡೆ ಜೀವನದಲ್ಲಿ ಶಿಸ್ತು, ಸಂಯಮ, ಸಂಸ್ಕೃತಿಯನ್ನು ಕಲಿಸುತ್ತದೆ ಎಂದು ನಿವೃತ್ತ ಕರ್ನಲ್ ಹಾಗೂ ಮ್ಯಾರಥಾನ್ ಓಟಗಾರ ಕಾವೇರಪ್ಪ ಹೇಳಿದರು. ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇಲ್ಲಿ ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ದಿ.ಸಿ.ವಿ. ಶಂಕರ್ ಸ್ವಾಮಿ ಅವರ ಹೆಸರಿನಲ್ಲಿ ಏರ್ಪಡಿಸಲಾಗಿರುವ ೩೨ನೇ ವರ್ಷದ ಮಕ್ಕಳ ಬೇಸಿಗೆ ಕ್ರೀಡಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆ ದೈಹಿಕ ಸಾಮರ್ಥ್ಯದೊಂದಿಗೆ ಸಾಧನೆ ಮಾಡುವ ಛಲವನ್ನು ಬಲಪಡಿಸುತ್ತದೆ. ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಉದ್ಯೋಗಾವಕಾಶಗಳೂ ದೊರಕುತ್ತವೆ ಎಂದು ಹೇಳಿದರು. ಮಕ್ಕಳು ಮೊಬೈಲ್‌ಗೆ ದಾಸರಾಗದೆ ಓದುವ ಹಾಗೂ ಬರೆಯುವ ಹವಯಾಸ ಬೆಳೆಸಿಕೊಳ್ಳಬೇಕು. ರಾತ್ರಿ ವೇಳೆಯಲ್ಲಿ ಬರೆಯವದು ಹಾಗೂ ಬೆಳಗ್ಗಿನ ಜಾವ ಬೇಗನೇ ಎದ್ದು ಓದಬೇಕು, ಹಾಗೇ ಮಾಡಿದ್ದಲ್ಲಿ ಸುಲಭವಾಗಿ ಅರ್ಥವಾಗುತ್ತದೆ, ಅಲ್ಲದೆ ಅಂಕ ಗಳಿಸಲು, ವೃತ್ತಿಪರ ಪರೀಕ್ಷೆಗಳನ್ನು ಎದುರಿಸಲು ಸಲಭವಾಗುತ್ತದೆ ಎಂದು ಕಿವಿ ಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಂಡರ‍್ಸ್ ಅಧ್ಯಕ್ಷ ಕೋಟೇರ ಮುದ್ದಯ್ಯ ಮಾತನಾಡಿ ಶಿಬಿರದಲ್ಲಿ ತರಬೇತುದಾರರು ಹೇಳಿಕೊಡುವದನ್ನು ಮನನ ಮಾಡಿಕೊಂಡು ಅಭ್ಯಸಿಸಬೇಕು,…
ಮಡಿಕೇರಿ, NEWS DESK ಏ.1 – ನಗರದ ಕೊಡಗು ವಿದ್ಯಾಲಯದಲ್ಲಿ ‘ಸಮಾಗಮ 2026’ ವಾಷಿ೯ಕ ಬೇಸಿಗೆ ಶಿಬಿರ ಮತ್ತು ಪಿಕಲ್ ಬಾಲ್ ಕ್ರೀಡಾಂಗಣ ಉದ್ಘಾಟನೆಗೊಂಡಿತು. ಶಾಲೆಯ ಹಳೆಯ ವಿದ್ಯಾರ್ಥಿಗಳಾದ ಆದಿತ್ಯ ಕೋಟೆ, ಡಾ. ಜಾಹ್ನವಿ ಕೋಟೆ, . ಕಾರ್ಯದರ್ಶಿ ಪೂಣಚ್ಚ ಬಿ ಎಸ್ ಶಾಲಾ ಆಡಳಿತ ಮಂಡಳಿಯ ಸದಸ್ಯ ಗುರುದತ್ತ್ ಸಿ ಎಸ್, ಪ್ರಾಂಶುಪಾಲರಾದ ಸುಮಿತ್ರಾ ಕೆ.ಎಸ್., ಆಡಳಿತ ವ್ಯವಸ್ಥಾಪಕ ರವಿ ಪಿ , ಕಲಾ ತರಬೇತುದಾರಾದ ಪವನ್ ಗಣಪತಿಯ ಕಲಾ ಚಿತ್ರಕ್ಕೆ ಬಣ್ಣ ಹಚ್ಚುವ ಮೂಲಕ ಮತ್ತು ಸಸಿಗೆ ನೀರೆರೆಯುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿ ಡಾ. ಜಾಹ್ನವಿ ಕೋಟೆ ಕೊಡಗು ವಿದ್ಯಾಲಯದಲ್ಲಿನ ತಮ್ಮ ವಿದ್ಯಾಭ್ಯಾಸದ ದಿನಗಳ ನೆನಪುಗಳನ್ನು ಹಂಚಿಕೊಂಡು, ಕ್ರೀಡಾಮಾಗ೯ದಶಿ೯ಯಾಗಿದ್ದ ಸಿ.ವಿ. ಶಂಕರ್ ಅವರ ಶಿಸ್ತು ಮತ್ತು. ಕ್ರಿಕೆಟ್ ಕ್ರೀಡೆಯಲ್ಲಿ ಅವರು ವಿದ್ಯಾರ್ಥಿಗಳನ್ನು ಸದಾ ಹುರಿದುಂಬಿಸುತ್ತಿದ್ದ ರೀತಿಯನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳು ಹೊಸ ವಿಷಯಗಳನ್ನು…






