ಮಡಿಕೇರಿ ಮಾ.16 : ಮಡಿಕೇರಿಯಲ್ಲಿ ನಡೆಯುವ ಫಲಾನುಭವಿಗಳ ಸಮ್ಮೇಳನಕ್ಕೆ ಒಪ್ಪಂದದ ಮೇರೆಗೆ ಬಸ್ಸುಗಳನ್ನು ನಿಯೋಜಿಸಲಾಗುತ್ತಿದ್ದು, ಈ ಹಿನ್ನೆಲೆ ಮಾರ್ಚ್, 18 ರಂದು ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಸೋಮವಾರಪೇಟೆ, ಪುತ್ತೂರು, ಸುಳ್ಯ, ಕಡಬ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ಕೆಎಸ್‌ಆರ್‌ಟಿಸಿ ನಿಗಮದ ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು/ ಪ್ರಯಾಣಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ ಅವರು ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಮಾ.16 : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್, 20 ರಂದು ಕೈಗಾರಿಕಾ ಸ್ಪಂದನಾ ಸಭೆ ನಡೆಯಲಿದೆ. ಈ ಸಭೆಯಲ್ಲಿ ಉದ್ದಿಮೆದಾರರ ಸಮಸ್ಯೆ ಚರ್ಚಿಸಲಾಗುವುದು. ಆದ್ದರಿಂದ ಕೈಗಾರಿಕೆಗಳ ಬಗ್ಗೆ ಸಮಸ್ಯೆಗಳಿದ್ದಲ್ಲಿ, ಲಿಖಿತ ರೂಪದಲ್ಲಿ ಈ ಕಾರ್ಯಾಲಯಕ್ಕೆ ಮಾರ್ಚ್, 18 ರೊಳಗೆ ಇ-ಮೇಲ್ dicjdkodagu@gmail.com ಮುಖಾಂತರ ಅಥವಾ ಖುದ್ದಾಗಿ ಲಿಖಿತವಾಗಿ ಸಲ್ಲಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಮಾ.16 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್, 18 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಮುಖ್ಯಮಂತ್ರಿ ಅವರು ಮಾರ್ಚ್, 18 ರಂದು ಮಧ್ಯಾಹ್ನ 12 ಗಂಟೆಗೆ ಕೆ.ಬಾಡಗ ಗ್ರಾಮದ ಗಾಲ್ಫ್ ಮೈದಾನ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ನಂತರ ಮಧ್ಯಾಹ್ನ 12.15 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ನಡೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 3.10 ಗಂಟೆಗೆ ನಾಪೋಕ್ಲು ಬೇತು ಗ್ರಾಮದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ (ಚೆರಿಯಪರಂಬು) 23 ನೇ ವರ್ಷದ ಅಪ್ಪಚೆಟ್ಟೋಳಂಡ ಪ್ರಾಯೋಜಕತ್ವದಲ್ಲಿ ನಡೆಯುವ 2022-23 ನೇ ಸಾಲಿನ ‘ಕೊಡವ ಹಾಕಿ ಉತ್ಸವ’ಕ್ಕೆ ಚಾಲನೆ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮಗಳು: ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ನಿರ್ಮಾಣವಾಗಿರುವ ಗಾಂಧಿ ಭವನ ಉದ್ಘಾಟನೆ(287.80 ಲಕ್ಷ ರೂ), ಗ್ರೇಟರ್ ರಾಜಸೀಟು ಉದ್ಯಾನವನ…
ಮಡಿಕೇರಿ ಮಾ.16 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ. 17 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಮಿನಿ ಉದ್ಯೋಗ ಮೇಳ’ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಲಿಥಿಯಂ ಅರ್ಬನ್ ಟೆಕ್ನಾಲಾಜಿಸ್(ಡ್ರೈವರ್ ಜಾಬ್), ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಎಸ್‍ಎಲ್‍ಎನ್ ಕಾಫಿ ಪ್ರೈ.ಲಿ., ಕುಶಾಲನಗರ, ಮಡಿಕೇರಿ ಸ್ಮಾರ್ಟ್ ಬಜಾರ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ಅವರು ತಿಳಿಸಿದ್ದಾರೆ.
ಮಡಿಕೇರಿ ಮಾ.16 : ನಗರದ ಸಾಯಿ ಸಂಸ್ಥೆ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನ ಪ್ರಯುಕ್ತ ಮಾರ್ಚ್, 22 ರಂದು ಬೆಳಗ್ಗೆ 10 ಗಂಟೆಗೆ ಹಾಕಿ ಟರ್ಪ್ ಮೈದಾನದಲ್ಲಿ ಮಹಿಳಾ ಹಾಕಿ ಪಂದ್ಯಾವಳಿ ನಡೆಯಲಿದೆ. ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಚಾಲನೆ ನೀಡಲಿದ್ದಾರೆ. ಮಡಿಕೇರಿ, ಪೊನ್ನಂಪೇಟೆ ಮತ್ತು ಕೂಡಿಗೆ ಕ್ರೀಡಾ ಶಾಲೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಡಿಕೇರಿ ಸಾಯಿ ಕೇಂದ್ರದ ಮಿನಿ ಉನ್ನಿರಾಜ್ ಅವರು ತಿಳಿಸಿದ್ದಾರೆ.
ಮಡಿಕೇರಿ ಮಾ.16 : ವಿಜಯ ಸಂಕಲ್ಪ ಯಾತ್ರೆಯ ಪ್ರಚಾರದ ಸಂದರ್ಭ ಗೋಣಿಕೊಪ್ಪಲಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರ್ರವನ್ನು ‘ಡಾ.ಅಂಬೇಡ್ಕರ್’ ಅವರ ಭಾವಚಿತ್ರದ ಮೇಲೆ ಅಂಟಿಸಿ ಅವಮಾನ ಮಾಡಲಾಗಿದೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ, ಈ ಬಗ್ಗೆ ಬಿಜೆಪಿ ಪ್ರಮುಖರು ಬಹಿರಂಗ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ದಸಂಸ ಮಡಿಕೇರಿ ತಾಲ್ಲೂಕು ಸಂಚಾಲಕ ದೀಪಕ್ ಮಾತನಾಡಿ, ರಾಷ್ಟ್ರಕ್ಕೆ ಸಂವಿಧಾನವನ್ನು ಕೊಟ್ಟ ಮಹಾಪುರುಷ ಅಂಬೇಡ್ಕರ್ ಅವರ ಭಾವಚಿತ್ರದ ಮೇಲೆ ಬೊಮ್ಮಾಯಿ ಅವರ ಭಾವಚಿತ್ರವನ್ನು ದುರುದ್ದೇಶಪೂರ್ವಕವಾಗಿಯೇ ಅಳವಡಿಸಲಾಗಿದೆ ಎಂದು ಆರೋಪಿಸಿದರು. ನಡೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಇಲ್ಲವೆ ಜಿಲ್ಲೆಯ ಜನಪ್ರತಿನಿಧಿಗಳು ಬಹಿರಂಗ ಕ್ಷಮೆಯಾಚನೆ ಮಾಡಬೇಕು. ಇಲ್ಲವಾದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರಚಾರ ನಡೆಸುವ ಮೂಲಕ, ಆ ಪಕ್ಷವನ್ನು ಸೋಲಿಸುವ ಕೆಲಸ ಮಾಡುತ್ತದೆ ಎಂದು ಹೇಳಿದರು. ಕರ್ನಾಟಕ ದಸಂಸ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ ಮಾತನಾಡಿ, ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುವ ಕಾರ್ಯಕ್ರಮದಲ್ಲಿ ವಿರಾಜಪೇಟೆ ಅಂಬೇಡ್ಕರ್…
ಮಡಿಕೇರಿ ಮಾ.16 : ಕೊಡವ ಕುಟುಂಬಗಳ ನಡುವಿನ 23ನೇ ವರ್ಷದ ‘ಅಪ್ಪಚೆಟ್ಟೋಳಂಡ ಕಪ್ ಹಾಕಿ ಉತ್ಸವ-2023’ ಕ್ಕೆ ಮಾ.18 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. ಯಶಸ್ವಿ ಪಂದ್ಯಾವಳಿಗಾಗಿ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಹಾಕಿ ಉತ್ಸವ ಸಮಿತಿಯ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಕಿ ಉತ್ಸವದ ಉದ್ಘಾಟನಾ ಸಮಾರಂಭ ಮಧ್ಯಾಹ್ನ 2.20 ಗಂಟೆಗೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್, ಕ್ರೀಡಾ ಸಚಿವ ಡಾ.ಕೆ.ಸಿ. ನಾರಾಯಣ ಗೌಡ, ಸಂಸದ ಪ್ರತಾಪಸಿಂಹ, ಜಿಲ್ಲೆಯ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್ ಸೇರಿದಂತೆ ಹಲ ಗಣ್ಯರು ಪಾಲ್ಗೊಳ್ಳ್ಳಲಿದ್ದಾರೆ. ಅಪ್ಪಚೆಟ್ಟೋಳಂಡ ಕುಟುಂಬದ ಪಟ್ಟೆದಾರರಾದ ಅಪ್ಪಚೆಟ್ಟೋಳಂಡ ಈರಪ್ಪ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದರು. ಉದ್ಘಾಟನಾ ದಿನದಂದು ಬೆಳಗ್ಗೆ ನಾಪೋಕ್ಲುವಿನಲ್ಲಿ ಆಕರ್ಷಕ ಬೃಹತ್ ಮೆರವಣಿಗೆ ನಡೆಯಲಿದೆ. ಹಾಕಿ ಉತ್ಸವವನ್ನು ಮೊಟ್ಟ ಮೊದಲು ಆಯೋಜಿಸಿದ ಪಾಂಡಂಡ ಕುಟುಂಬ ಸೇರಿದಂತೆ ಇಲ್ಲಿಯವರೆಗೆ ಪಂದ್ಯಾವಳಿ ಆಯೋಜಿಸಿದ ಕೊಡವ ಕುಟುಂಬಗಳ 23 ಮಂದಿ ಪ್ರತಿನಿಧಿಗಳು ಆಕಾಶಕ್ಕೆ…
ಮುಂಬಯಿ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಇಂಟರ್‌ನ್ಯಾಷನಲ್ ಎಕನಾಮಿಕ್ ರಿಸರ್ಚ್ ಜರ್ನಲ್ ಸೆಂಟ್ರಲ್ ಬ್ಯಾಂಕಿಂಗ್ 2023 ರ ‘ವರ್ಷದ ಗವರ್ನರ್’ ಪ್ರಶಸ್ತಿ ನೀಡಿದೆ. ಕಷ್ಟದ ಸಮಯದಲ್ಲಿ ಅವರ ಸ್ಥಿರ ನಾಯಕತ್ವಕ್ಕಾಗಿ ದಾಸ್ ಈ ಪ್ರಶಸ್ತಿಯನ್ನು ಪಡೆದಿದ್ದಾರೆ. ಕೋವಿಡ್ 19 ಮತ್ತು ಉಕ್ರೇನ್- ರಷ್ಯಾ ನಡುವಿನ ಯುದ್ಧದಿಂದಾಗಿ ಸೃಷ್ಟಿಯಾದ ಬಿಕ್ಕಟ್ಟನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಕ್ಕೆ ಅಂತರರಾಷ್ಟ್ರೀಯ ಆರ್ಥಿಕ ಸಂಶೋಧನಾ ಜರ್ನಲ್ ಆಗಿರುವ ಸೆಂಟ್ರಲ್ ಬ್ಯಾಂಕಿಂಗ್ 2023ರ ವರ್ಷದ ಗವರ್ನರ್ ಪ್ರಶಸ್ತಿ ನೀಡಿದೆ.
ಮಂಗಳೂರು ಮಾ.16 : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದರು. ಈ ಸಂದರ್ಭ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರದ ಕೋಟ ಶ್ರೀನಿವಾಸ್ ಪೂಜಾರಿ, ಸಹಕಾರ ಸಚಿವರಾದ ಸೋಮಶೇಖರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ಉಮನಾಥ್ ಕೋಟ್ಯಾನ್,ರಾಜೇಶ್ ನಾಯಕ್, ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಮೇಯರ್ ಜಯಾನಂದ ಅಂಚನ್ ಸೇರಿದಂತೆ ಜನಪ್ರತಿನಿಧಿಗಳು ವೇದಿಕೆಯಲ್ಲಿದ್ದರು.
ಸೋಮವಾರಪೇಟೆ ಮಾ.16 : ಗೋಣಿಕೊಪ್ಪದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವಿರುವ ಪೋಸ್ಟರ್ ಮೇಲೆ ಚಪ್ಪಲಿ ಚಿತ್ರವನ್ನಿಟ್ಟು ಅವಮಾನ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಠ ಜಾತಿ ಜಿಲ್ಲಾ ಘಟಕ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಘಟಕದ ಜಿಲ್ಲಾಧ್ಯಕ್ಷ ಬಿ.ಇ.ಜಯೇಂದ್ರ, ಬಿಜೆಪಿ ವತಿಯಿಂದ ಗೋಣಿಕೊಪ್ಪದಲ್ಲಿ ಆಯೋಜಿಸಿದ್ದ ವಿಜಯಸಂಕಲ್ಪ ದಿನದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ಪೋಸ್ಟರ್ ಮೇಲೆ ಮುಖ್ಯಮಂತ್ರಿಯವರ ಭಾವಚಿತ್ರದ ಪೋಸ್ಟರ್ ಅಳವಡಿಸಿ, ಅವರ ಕಾಲಿನ ಚಪ್ಪಲಿ, ಅಂಬೇಡ್ಕರ್ ಚಿತ್ರದ ತಲೆಯ ಮೇಲೆ ಇರುವಂತೆ ವ್ಯವಸ್ಥಿತವಾಗಿ ಕಟ್ಟಿದ್ದಾರೆ. ಬಿಜೆಪಿ, ಸಂಘಪರಿವಾರದ ಕಿಡಿಕೇಡಿಗಳ ಮನಸ್ಥಿತಿ ಇಂತಹ ಕೃತ್ಯಗಳಿಂದ ತಿಳಿದು ಬರುತ್ತದೆ ಎಂದು ದೂರಿದರು. ವಿಜಯಸಂಕಲ್ಪ ದಿನದ ಕಾರ್ಯಕ್ರಮದ ಆಯೋಜಕರು, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕೃತ್ಯವೆಸಗಿದ ಆರೋಪಿಗಳನ್ನು ಬಂಧಿಸಿ, ಗಡಿಪಾರು ಮಾಡಬೇಕು. ತಪ್ಪಿದಲ್ಲಿ ಮಾ.20 ರಂದು ದಲಿತಪರ ಸಂಘಟನೆಗಳು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರ ಸಹಕಾರದಿಂದ ಪಟ್ಟಣದಲ್ಲಿ…






