ಮಡಿಕೇರಿ ಫೆ.19 : ವ್ಯಕ್ತಿಯೊಬ್ಬರು ಗುಂಡೇಟಿನಿoದ ಮೃತಪಟ್ಟ ಘಟನೆ ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದಲ್ಲಿ ನಡೆದಿದೆ. ತಂದೆಯಿoದಲೇ ಪುತ್ರನ ಹತ್ಯೆಯಾಗಿದೆ ಎಂದು ಆರೋಪಿಸಲಾಗಿದ್ದು, ಪ್ರಕರಣಕ್ಕೆ ಸಂಬoಧಿಸಿದoತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನoದೇಟಿರ ನಿರನ್(28) ಎಂಬುವವರೇ ಮೃತ ವ್ಯಕ್ತಿಯಾಗಿದ್ದು, ಆರೋಪಿ ತಂದೆ ನಂದೇಟಿರ ಚಿಟ್ಟಿಯಪ್ಪ ಸಾಬು(58) ಅವರನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಳಿಯಿಂದ ಕೋವಿಯನ್ನು ವಶಕ್ಕೆ ಪಡೆಯಲಾಗಿದೆ. ಕೌಟುಂಬಿಕ ಕಲಹವೇ ಘಟನೆಗೆ ಕಾರಣವೆಂದು ಹೇಳಲಾಗಿದ್ದು, ನಿರನ್ ಟಿವಿ ನೋಡುತ್ತಿದ್ದ ಸಂದರ್ಭ ತಂದೆ ಸಾಬು ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಲೇಖಕ: admin
ಮಡಿಕೇರಿ ಫೆ.19 : ಎಲ್ಲಾ ಪೊಲೀಸ್ ಠಾಣೆ ಗಳ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಜರುಗಬಹುದಾದ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಹಾಗೂ ಅಪರಾಧಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ನೂತನ MCCTNS ( Mobile Crime and Criminal Tracking Network System) ಪೋರ್ಟಬಲ್ ಸ್ಕ್ಯಾನರ್ ಬಳಕೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ. ಇದರ ಮೂಲಕ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ಅಧಿಕಾರಿ/ಸಿಬ್ಬಂದಿಗಳು ರಾತ್ರಿ ಗಸ್ತು ಕರ್ತವ್ಯದ ವೇಳೆಯಲ್ಲಿ ಕಾಣಸಿಗುವ ಅಪರಿಚಿತ ಹಾಗೂ ಸಂಶಯಾಸ್ಪದ ವ್ಯಕ್ತಿಗಳ ಅಪರಾಧ ಹಿನ್ನೆಲೆಗಳ ಬಗ್ಗೆ ಈ ಹಿಂದೆ ನಡೆಸುತ್ತಿದ್ದ ಮೌಖಿಕ ವಿಚಾರಣೆಯ ಜೊತೆಜೊತೆಗೆ , ಈ ನೂತನ ತಂತ್ರಜ್ಞಾನದಲ್ಲಿ ಯಾವುದೇ ವ್ಯಕ್ತಿಯು ಈ ಹಿಂದೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರೆ,ಆತನ ಬೆರಳಚ್ಚುಗಳನ್ನು ಸದರಿ ತಂತ್ರಾಂಶದ ಮೂಲಕ ಪರಿಶೀಲಿಸಿದಾಗ ಆತನ ಅಪರಾಧ ಹಿನ್ನೆಲೆಗಳ ಮಾಹಿತಿ ಕ್ಷಣಮಾತ್ರದಲ್ಲಿ ಅದೇ ಸ್ಥಳದಲ್ಲಿ ಪಡೆಯಬಹುದಾಗಿದೆ. ಇಂತಹ ನೂತನ ತಂತ್ರಜ್ಞಾನ ವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಬಳಸುತ್ತಿರುವುದರಿಂದ ಅಪರಾಧ ಹಿನ್ನೆಲೆಯ ವ್ಯಕ್ತಿಗಳನ್ನು…
ಮಡಿಕೇರಿ ಫೆ.19 : ಗೋಣಿಕೊಪ್ಪಲು ಠಾಣಾಧಿಕಾರಿಯಾಗಿ ಮಂಡ್ಯ ಜಿಲ್ಲೆಯ ಟಿ.ಸಿದ್ದರಾಜು ನೇಮಕಗೊಂಡಿದ್ದಾರೆ. ಈ ಹಿಂದೆ ಇದ್ದ ಠಾಣಾಧಿಕಾರಿ ದೀಕ್ಷಿತ್ ಅವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.
ಸುಂಟಿಕೊಪ್ಪ ಫೆ.19 : ಕೆದಕಲ್ 7ನೇ ಮೈಲು ಗ್ರಾಮದ ಮಹಾದೇವ ಈಶ್ವರ ದೇವಾಲಯದಲ್ಲಿ ಶಿವರಾತ್ರಿಯ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ಶೃದ್ಧಾಭಕ್ತಿಯಿಂದ ನಡೆಯಿತು. ಪ್ರಧಾನ ಅರ್ಚಕ ಅವಿನಾಶ್ ಆರಾಧ್ಯ ಅವರ ನೇತೃತ್ವದಲ್ಲಿ ಬೆಳಗ್ಗಿನಂದಲೇ ವಿಶೇಷ ಪೂಜೆ, ಹೋಮ ಹವನಗಳು ಜರುಗಿತು. ಮಹಾಮಂಗಳಾರತಿ ನಂತರ ಪ್ರಸಾದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು. ಸಂಜೆ ಶಿವನ ಸ್ಮರಣೆ, ಭಜನೆಯೊಂದಿಗೆ ಭಕ್ತರು ಜಾಗರಣೆ ಮಾಡಿದರು. ದೇವಸ್ಥಾನ ಸಮಿತಿ ಅಧ್ಯಕ್ಷ ಸಿ.ಎ.ಕರುಂಬಯ್ಯ ಸೇರಿದಂತೆ ಪದಾಧಿಕಾರಿಗಳು ಇದ್ದರು.
ಸುಂಟಿಕೊಪ್ಪ ಫೆ.19 : ಸುಂಟಿಕೊಪ್ಪ ಬಿಜೆಪಿಯ 2 ಶಕ್ತಿ ಕೇಂದ್ರದ ವತಿಯಿಂದ ವಿಜಯ ಸಂಕಲ್ಪ ಅಭಿಯಾನವನ್ನು ಕನ್ನಡ ವೃತ್ತದಲ್ಲಿ ಭಾನುವಾರ ನಡೆಸಲಾಯಿತು. ಬಿಜೆಪಿ ಕಾರ್ಯಕರ್ತರು ಧ್ವಜ ಹಿಡಿದು ರಾಷ್ಟ್ರ ಹಾಗೂ ರಾಜ್ಯ ನಾಯಕರುಗಳಿಗೆ ಜೈಕಾರ ಹಾಕಿದರು. ಅಂಗಡಿ, ಮನೆಗಳಿಗೆ ಬಿಜೆಪಿ ಕಾರ್ಯಕರ್ತರು ತೆರಳಿ ಸರಕಾರದ ಅಭಿವೃದ್ದಿ ಯೋಜನೆಗಳ ಕರಪತ್ರಗಳನ್ನು ವಿತರಿಸಿದರು. ಮತ್ತೋಮ್ಮೆ ಬಿಜೆಪಿಗೆ ಮತ ಚಲಾಯಿಸುವ ಮೂಲಕ ಅಧಿಕಾರಕ್ಕೇರಿಸುವಂತೆ ಮನವಿ ಮಾಡಿದರು. ಈ ಸಂದರ್ಭ ಗ್ರಾ.ಪಂ ಬಿಜೆಪಿ ಬೆಂಬಲಿತ ಸದಸ್ಯರುಗಳಾದ ಪಿ.ಆರ್.ಸುನಿಲ್ ಕುಮಾರ್, ವಸಂತಿ, ಗೀತಾ, ಬಿಜೆಪಿ ಯುವಮೋರ್ಚಾ ಅದ್ಯಕ್ಷ ವಿಘ್ನೇಶ್ ಹಾಗೂ ಕಾರ್ಯಕರ್ತರು ಇದ್ದರು.
ಮಡಿಕೇರಿ ಫೆ.19 : ಪರಿಶಿಷ್ಟ 101 ಜಾತಿಗೆ ಒಳ ಮೀಸಲಾತಿ ಕಲ್ಪಿಸಬೇಕೆಂದು ಹಲವು ದಶಕಗಳಿಂದ ಹೋರಾಟ ಮಾಡಿಕೊಂಡು ಬಂದಿರುವ ಹಿನ್ನೆಲೆ, ಸದಾಶಿವ ಆಯೋಗದ ವರದಿ ಜಾರಿಗೆ ಸರ್ಕಾರದ ಸಹಮತ ಇದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಕೊಡವ 18 ಭಾಷಿಕ ಜನಾಂಗದ ಸಮುದಾಯಗಳ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಗ್ರಾಮದ ಕೊಡಗು ಹೆಗ್ಗಡೆ ಸಮಾಜದ ಸಭಾಂಗಣದಲ್ಲಿ ಭಾನುವಾರ ನಡೆದ ‘ಒತ್ತೋರ್ಮೆ ಕೂಟ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಸದಾಶಿವ ಆಯೋಗ ವರದಿ ಜಾರಿ ಸಂಬoಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ, ಧ್ವನಿ ಇಲ್ಲದವರಿಗೆ ಧ್ವನಿ ನೀಡಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದು ಸಮಾಜ ಕಲ್ಯಾಣ ಸಚಿವರು ನುಡಿದರು. ಕೊಡಗು ಜಿಲ್ಲೆಯಲ್ಲಿ ಕೊಡವ ಭಾಷೆ ಮಾತನಾಡುವ 18 ಸಣ್ಣ ಸಣ್ಣ ಸಮಾಜಗಳು ಇದ್ದು, ಈ ಸಮಾಜಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕು ಎಂಬ ಬೇಡಿಕೆಗೆ ಸ್ಪಂದಿಸಿ…
ಮಡಿಕೇರಿ ಫೆ.19 : ಬೆಟ್ಟ ಗುಡ್ಡಗಳಲ್ಲಿ ರೆಸಾರ್ಟ್ಗಳನ್ನು ನಿರ್ಮಾಣ ಮಾಡುವ ಮೂಲಕ ಸುಂದರ ಪ್ರಕೃತಿ ಸೌಂದರ್ಯವನ್ನು ಹೊಂದಿರುವ ಕೊಡಗನ್ನು ನಾಶ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಎಂ.ಸಿ.ನಾಣಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ನಗರದ ಪತ್ರಿಕಾಭವನ ಸಭಾಂಗಣದಲ್ಲಿ ನಡೆದ ಕೊಡವ ಮಕ್ಕಡ ಕೂಟ ಮತ್ತು ಕಾವೇರಿಕೇರಿ ಕೊಡವ ಸಂಘದ ಸಂಯುಕ್ತಾಶ್ರಯದಲ್ಲಿ ವಕೀಲ, ಕ್ರೀಡಾಪಟು ಹಾಗೂ ಬರಹಗಾರ ಬಾಳೆಯಡ ಕಿಶನ್ ಪೂವಯ್ಯ ಅವರು ಬರೆದಿರುವ “ವ್ಯಕ್ತಿ ಪರಿಚಯ ಮತ್ತು ಸಾಮಾಜಿಕ ಚಿಂತನೆ” ಹಾಗೂ “ರಾಜಕೀಯ ಮತ್ತು ಪ್ರಕೃತಿ” ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರ ಮಾತನಾಡಿದರು. ಇಂದು ಯಾವುದೇ ವಿಧದಲ್ಲೂ ಪುಟ್ಟ ಜಿಲ್ಲೆ ಕೊಡಗಿನ ಪ್ರಕೃತಿಯನ್ನು ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಬೇರೆ ಜಿಲ್ಲೆಗಳನ್ನು ಹೋಲಿಸಿದರೆ ಕೊಡಗು ಹವಾನಿಯಂತ್ರಿತ ಗುಣವನ್ನು ಹೊಂದಿದೆ. ಅತ್ಯಂತ ಶ್ರೇಷ್ಠತೆಯನ್ನು ಹೊಂದಿರುವ ಇಲ್ಲಿನ ಪರಿಸರ ಮತ್ತು ಬೆಟ್ಟ ಗುಡ್ಡಗಳು ರೆಸಾರ್ಟ್ ಗಳ ನಿರ್ಮಾಣದಿಂದ ನಾಶವಾಗುತ್ತಿದೆ. ಪರಿಸ್ಥಿತಿ ಹೀಗಿದ್ದರೂ ಜನಪ್ರತಿನಿಧಿಗಳು ಮಾತ್ರ ಏನನ್ನೂ ಮಾತನಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಭ್ರಷ್ಟಾಚಾರ ಮಿತಿ ಮೀರಿದೆ,…
ಮಡಿಕೇರಿ ಫೆ.18 : ಮಡಿಕೇರಿ ಸಮೀಪದ ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದಲ್ಲಿ ಮಹಾಶಿವರಾತ್ರಿ ಮಹೋತ್ಸವ ಶನಿವಾರ ಶ್ರದ್ಧಾಭಕ್ತಿಯಿಂದ ನಡೆಯಿತು. ಮಹಾ ಶಿವರಾತ್ರಿ ಆರಾಧನೆ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗಿನಿಂದಲೇ ವಿವಿಧ ಪೂಜಾ ವಿಧಿ ವಿಧಾನಗಳು ಜರುಗಿದವು. ಮೇಕೇರಿಯ ಶಕ್ತಿನಗರ, ಕಾವೇರಿ ಬಡಾವಣೆ, ಸುಭಾಶ್ ನಗರ ಮತ್ತು ಮೇಕೇರಿ ಬಿಳಿಗೇರಿ ಜಂಕ್ಷನ್‌ನಿಂದ ಚಂಡೆ ವಾದ್ಯ ಸಹಿತ ಮೆರವಣಿಗೆಯಲ್ಲಿ ಬಂದ ಭಕ್ತಾದಿಗಳು ಹೊರೆ ಕಾಣಿಕೆ ಸಮರ್ಪಿಸಿದರು. ಮಹಾ ಮೃತ್ಯುಂಜಯ ಹೋಮ, ರುದ್ರಾಭಿಷೇಕ, ಮಹಾಪೂಜೆ ನೆರವೇರಿತು. ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ಶ್ರೀ ಗೌರಿಶಂಕರನ ಕೃಪೆಗೆ ಪಾತ್ರರಾದರು. ನೆರೆದಿದ್ದ ಭಕ್ತಾಧಿಗಳಿಗೆ ಮಧ್ಯಾಹ್ನ ಅನ್ನ ಸಂತರ್ಪಣೆ ನೆರವೇರಿತು. ಸಂಜೆ ವಿವಿಧ ಪೂಜೆಯೊಂದಿಗೆ ರುದ್ರಾಭಿಷೇಕ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ ನಡೆಯಿತು. ಶಿವರಾತ್ರಿ ಜಾಗರಣೆ ಹಿನ್ನೆಲೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ “ಯಕ್ಷಗಾನ ನಾಟ್ಯ ವೈಭವ” ಎಂಬ ವಿನೂತನ ಪ್ರದರ್ಶನ ನೆರೆದಿದ್ದವರ ಗಮನ ಸೆಳೆಯಿತು. ಫೆ.19 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿವಿಧ ದೇವತಾರಾಧನೆಯೊಂದಿಗೆ…
ಮಡಿಕೇರಿ ಫೆ.18 : ಕೊಡಗು ಹೆಗ್ಗಡೆ ಸಮಾಜದ ಆಡಳಿತ ಮಂಡಳಿಯ ನೂತನ ಕಛೇರಿಯನ್ನು ಹಿರಿಯರಾದ ಡಾ.ತಂಬಂಡ ವಿಜು ಪೂಣಚ್ಚ ಉದ್ಘಾಟಿಸಿದರು. ಹೆಗ್ಗಡೆ ಸಮಾಜದ ಜಿಲ್ಲಾಧ್ಯಕ್ಷ ಪಡಿಞರಂಡ ಅಯ್ಯಪ್ಪ ಮಾತನಾಡಿ ಸಮಾಜದ ಅಭ್ಯುದಯಕ್ಕೆ ಎಲ್ಲರು ಕೈಜೋಡಿಸುವಂತೆ ಕರೆ ನೀಡಿದರು. ಕುಲಬಾಂಧವರು ಜನಾಂಗದ ಮೇಲಿನ ಅಭಿಮಾನ ಬೆಳೆಸಿಕೊಳ್ಳವುದರೊಂದಿಗೆ ದೇಶದ ಐಕ್ಯತೆಗೆ ಪಣ ತೊಡಬೇಕು ಎಂದರು. ಸಮಾಜದ ಉಪಾಧ್ಯಕ್ಷ ಕೊರಕುಟ್ಟಿರ ಸರ ಚಂಗಪ್ಪ, ಕಾರ್ಯದರ್ಶಿ ಚಂಗಚಂಡ ಕಟ್ಟಿಕಾವೇರಪ್ಪ. ಖಜಾಂಚಿ ಪಾನಿಕುಟ್ಟಿರ ಕುಟ್ಟಪ್ಪ, ನಿರ್ದೇಶಕರಾದ ಪಡಿಞರಂಡ ಪ್ರಭುಕುಮಾರ್, ಚರ್ಮಂಡ ಅಪ್ಪುಣು ಪೂವಯ್ಯ, ಮುರೀರ ಕುಶಾಲಪ್ಪ, ಕೊಪ್ಪಡ ಪಳಂಗಪ್ಪ ಕೊಂಗೆಪಂಡ ರವಿ, ಪದಿಕಂಡ ಸುನಾ, ಕೊಕ್ಕೇರ ಜಗನ್ನಾಥ, ಪುದಿಯತಂಡ ಜಾಲಿ, ಮುರೀರ ಶಾಂತಿ, ಪ್ರಮುಖರಾದ ಮಲ್ಲಾಡ ಕಟ್ಟಿ ಪೂಣಚ್ಚ, ಕೊರಕುಟ್ಟಿರ ಮೀನ, ಕವಿತಾ ಮತ್ತಿತರರು ಉಪಸ್ಥಿತರಿದ್ದರು.
ಮಡಿಕೇರಿ ಫೆ.18 : ವಿರೋಧದ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಅಶ್ವಥ ನಾರಾಯಣ ಅವರು ನೀಡಿರುವ ಹೇಳಿಕೆ ಖಂಡನೀಯವೆoದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಉಸ್ಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿದ್ದರಾಮಯ್ಯರ ಕುರಿತು ಸಚಿವರು ನೀಡಿರುವ ಪ್ರಚೋದನಾಕಾರಿ ಹೇಳಿಕೆ ಬಿಜೆಪಿಯ ಹೊಡಿ, ಬಡಿ ಸಂಸ್ಕೃತಿಯನ್ನು ಪ್ರತಿಬಿಂಬಿಸಿದೆ ಎಂದು ಟೀಕಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಇತಿಹಾಸವನ್ನು ಕೆಣಕಿ ಕ್ಷುಲ್ಲಕ ರಾಜಕಾರಣವನ್ನು ಮಾಡಲಾಗುತ್ತಿದೆ. ದೇಶದ ಭವಿಷ್ಯಕ್ಕೆ ಏನು ಬೇಕು ಎಂದು ಚಿಂತನೆ ಮಾಡದೆ ಆಗಿ ಹೋದ ಘಟನಾವಳಿಗಳನ್ನು ತಿರುಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇರುವ ಜನಪ್ರಿಯತೆಯನ್ನು ಸಹಿಸಲಾಗದೆ ಸೋಲಿನ ಹತಾಶೆಯಲ್ಲಿರುವ ಬಿಜೆಪಿ ಮುಖಂಡರು ಬಾಲಿಶ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಚಿವ ಅಶ್ವಥ ನಾರಾಯಣ ಅವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಮುಖ್ಯಮಂತ್ರಿಗಳು ಸಂಪುಟದಿಂದ ಕೈಬಿಡಬೇಕೆಂದು…






