ಲೇಖಕ: admin

ಮಡಿಕೇರಿ ಫೆ.17 : ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ಅಂತರರಾಜ್ಯ ಗಡಿ ಪ್ರದೇಶದಲ್ಲಿ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮಂಗಳೂರು ಅಬಕಾರಿ ವಿಭಾಗದ ಜಂಟಿ ನಿರ್ದೇಶಕರು ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜೊತೆ ಸಮಾಲೋಚನಾ ಸಭೆಯು ನಡೆಯಿತು. ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದ ಸಂದರ್ಭದಲ್ಲಿ ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯ ಗಡಿಭಾಗದ ಕಾಸರಗೋಡು, ಕಣ್ಣೂರು ಮತ್ತು ವಯನಾಡು ಜಿಲ್ಲಾ ಗಡಿ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಬೇಕಿದೆ. ಆ ನಿಟ್ಟಿನಲ್ಲಿ ಎರಡು ರಾಜ್ಯಗಳ ಅಬಕಾರಿ ಇಲಾಖೆಯ ಅಧಿಕಾರಿಗಳು ಅಗತ್ಯ ಸಹಕಾರ ನೀಡುವಂತೆ ಕೋರಿದರು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಮಾಡದೆ ಸುಗಮ ಹಾಗೂ ಶಾಂತಿಯುತವಾಗಿ ವಿಧಾನಸಭೆ ಚುನಾವಣೆ ನಡೆಸಲು ಅಂತರ ರಾಜ್ಯ ಗಡಿ…

Read More

ಮಡಿಕೇರಿ ಫೆ.17 : ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ  ಕೋಟ ಶ್ರೀನಿವಾಸ ಪೂಜಾರಿ ಅವರು ಫೆಬ್ರವರಿ, 19 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಫೆಬ್ರವರಿ, 19 ರಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಕೊಡಗು ಹೆಗ್ಗಡೆ ಸಮಾಜದ ಸಭಾಂಗಣದಲ್ಲಿ ಕೊಡವ ಭಾಷಿಕ ಸಮುದಾಯಗಳ ವತಿಯಿಂದ ನಡೆಯುವ ‘ಒತ್ತೋರ್ಮೆ ಕೂಟ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಬಿ.ಉದಯಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.17 : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಮತ್ತು ಶ್ರೀ ಸರ್ವಜ್ಞ ಮೂರ್ತಿ ಅವರ ಜಯಂತಿ ಕಾರ್ಯಕ್ರಮವು ಫೆಬ್ರವರಿ, 20 ರಂದು ಬೆಳಗ್ಗೆ 11 ಗಂಟೆಗೆ ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಫೆ.17 : ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಹಿನ್ನಲೆಯಲ್ಲಿ ಮಡಿಕೇರಿ ಉಪ ವಿಭಾಗ ಪೆರಾಜೆ ಗ್ರಾ.ಪಂ.ಸಭಾಂಗಣ, ತಾಳತ್ತ್‌ಮನೆ, ಮೇಕೇರಿ, ಬೋಯಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ, ಗೋಣಿಕೊಪ್ಪಲು ಉಪ ವಿಭಾಗದ ಹಾತ್ತೂರು ಗ್ರಾ.ಪಂ.ಸಭಾಂಗಣ, ವಿರಾಜಪೇಟೆ ಉಪ ವಿಭಾಗದ ಬಿಳುಗುಂದ ಸರ್ಕಾರಿ ಪ್ರೌಢ ಶಾಲಾ ಸಭಾಂಗಣ, ಕುಶಾಲನಗರ ಉಪ ವಿಭಾಗದ ಸಿದ್ದಲಿಂಗಪುರದ ಅರಶಿನಗುಪ್ಪೆ ಮಂಜುನಾಥ ದೇವಸ್ಥಾನ ಸಭಾಂಗಣ ಹಾಗೂ ಸೋಮವಾರಪೇಟೆ ಉಪ ವಿಭಾಗದ ಕಾಟಿಕೊಪ್ಪಲು ಗ್ರಾಮದ ಯಲಕನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಫೆಬ್ರವರಿ, 20 ರಂದು ಬೆಳಗ್ಗೆ 11 ಗಂಟೆಯಿಂದ ವಿದ್ಯುತ್ ಅದಾಲತ್ ನಡೆಯಲಿದೆ. ಆದ್ದರಿಂದ ಈ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಫೆ.17 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿಯಲ್ಲಿ ಮಡಿಕೇರಿ ತಾಲೂಕಿನ ಬೋಯಿಕೇರಿ-ಇಬ್ಬನಿವಳವಾಡಿ ಗ್ರಾಮದಲ್ಲಿ “ಆಯುಷ್ ಸೇವಾ ಗ್ರಾಮ” ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಣ್ಣ, ಗ್ರಾಮ ಪಂಚಾಯತ್ ಸದಸ್ಯರಾದ ನಿರ್ಮಲಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವಿಕಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ ಅವರು ಉದ್ಘಾಟನೆ ನೆರವೇರಿಸಿದರು. ಜಿಲ್ಲಾ ಆಯುಷ್ ಅಧಿಕಾರಿ ಅವರು ಆಯುಷ್ ಸೇವಾ ಗ್ರಾಮದ ಬಗ್ಗೆ ಮಾಹಿತಿ ನೀಡಿದರು. ಆಯುಷ್ ಇಲಾಖೆ ವತಿಯಿಂದ ಕಾರ್ಯಕ್ರಮದಲ್ಲಿ ಔಷಧ ಸಸ್ಯಗಳ ವಿತರಣೆ ಮತ್ತು ಕ್ಯಾಲೆಂಡರ್‍ಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವೈದ್ಯರು ಡಾ.ಸರಸ್ವತಿ, ಆಶಾ ಕಾರ್ಯಕರ್ತೆಯರು, ಅಂಗವಾಡಿ ಶಿಕ್ಷಕರು, ಸಿಎಚ್‍ಒ ಹಾಗೂ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

Read More

ಮಡಿಕೇರಿ ಫೆ.17 : ನಂಜರಾಯಪಟ್ಟಣ ಗ್ರಾ.ಪಂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಗ್ರಾಮ ಸಭೆಯು ಫೆ.21 ರಂದು ನಡೆಯಲಿದೆ. ಗ್ರಾ.ಪಂ ಅಧ್ಯಕ್ಷ ಸಿ.ಎಲ್.ವಿಶ್ವ ಅಧ್ಯಕ್ಷತೆಯಲ್ಲಿ ನಂಜರಾಯಪಟ್ಟಣ ಅಂಗನವಾಡಿ ಕೇಂದ್ರದಲ್ಲಿ ನಡೆಯಲಿರುವ ಸಭೆಯಲ್ಲಿ ಗ್ರಾ.ಪಂ ವ್ಯಾಪ್ತಿಯ ನಾಗರೀಕರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಗ್ರಾ.ಪಂ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಮಡಿಕೇರಿ ಫೆ.17 : ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ನ್ನು ಮಂಡಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನವ ಕರ್ನಾಟಕ ನಿರ್ಮಾಣದ ಬಜೆಟ್ ನ್ನು ಮಂಡಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ಕಾರ್ಯಕಾರಿ ಸಮಿತಿಯ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ ತಿಳಿಸಿದ್ದಾರೆ. ಕೊಡಗು ಜಿಲ್ಲೆಗೆ 100 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ನೀಡಿರುವುದು ಸ್ವಾಗತಾರ್ಹ. ಶಿಕ್ಷಣಕ್ಕೆ ಒತ್ತು ನೀಡಿರುವ ಬಜೆಟ್ ರಾಜ್ಯದ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದೆ. “ಹಳ್ಳಿ ಮುತ್ತು” ಯೋಜನೆಯಡಿ ಉನ್ನತ ಶಿಕ್ಷಣವನ್ನು ಸಂಪೂರ್ಣವಾಗಿ ಉಚಿತವಾಗಿ ನೀಡಲು ಮುಂದಾಗಿರುವುದು ಹೆಮ್ಮೆಯ ವಿಚಾರವಾಗಿದೆ. ಆರೋಗ್ಯ ಕೇಂದ್ರಗಳಿಗೆ ವಿನೂತನ ಉಪಕರಣಗಳನ್ನು ನೀಡಲು ನಿರ್ಧರಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ 10 ಸಾವಿರ ಮಂದಿಗೆ ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಿ ನೇಮಕಾತಿ ಹೊಂದಲು ಉಚಿತ ತರಬೇತಿ ನೀಡಲು ಯೋಜನೆ ರೂಪಿಸಲಾಗಿದೆ. ವಸತಿ ಶಾಲೆಗಳಲ್ಲಿನ ಕ್ರೀಡಾ ಪ್ರತಿಭೆಗಳಿಗೆ…

Read More

ವಿರಾಜಪೇಟೆ ಫೆ.17 : ಮೈಸೂರಿನಲ್ಲಿ ನಡೆದ 29ನೇ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 3 ಚಿನ್ನ, 3 ಬೆಳ್ಳಿ ಹಾಗೂ 3 ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. 3ನೇ ತರಗತಿಯ ಸನತ್ ಮುತ್ತಣ್ಣ, 7ನೇ ತರಗತಿ ವಿದ್ಯಾರ್ಥಿಗಳಾದ ಎಸ್.ಎಸ್.ರಶ್ಮಿ ಪೂವಮ್ಮ, ಬಿ.ವೃಷಾಂಕ್ ಪೂವಯ್ಯ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. 5ನೇ ತರಗತಿಯ ಶತಕ ಕಾವೇರಮ್ಮ, 8ನೇ ತರಗತಿಯ ಶಿಪ್ರಾ ಕಾಳಪ್ಪ, 9ನೇ ತರಗತಿಯ ಎನ್.ಡಿ.ಬೋಜಮ್ಮ ಬೆಳ್ಳಿ ಪದಕ ಮತ್ತು 6ನೇ ತರಗತಿಯ ಕೃತಿಕ ಅಕ್ಕಮ್ಮ, 7ನೇ ತರಗತಿಯ ಮೊಹಮ್ಮದ್ ಅಫ್ಸರ್, 9ನೇ ತರಗತಿಯ ಸಿ.ಇ.ಮುತ್ತಣ್ಣ ಕಂಚಿನ ಪದಕವನ್ನು ಪಡೆದು ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿ ತಂದಿದ್ದಾರೆ. ಇವರಿಗೆ ತರಬೇತಿ ಮತ್ತು ಮಾರ್ಗದರ್ಶನ ನೀಡಿದ ಶಾಲೆಯ ಕರಾಟೆ ಶಿಕ್ಷಕ ಸೋಮಣ್ಣ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ.ಎಸ್.ಸುದೇಶ್, ಕಾರ್ಯದರ್ಶಿಗಳಾದ ಪಿ.ಎನ್.ವಿನೋದ್ ಮತ್ತು ಮುಖ್ಯೋಪಾಧ್ಯಾಯನಿಯವರಾದ ಎಂ.ಬಿ.ಪ್ರಮೀಳಾ ಮತ್ತು ಸಹ ಮುಖ್ಯೋಪಾಧ್ಯಾಯನಿಯವರಾದ ಅಮೃತ ಅರ್ಜುನ್ ಹಾಗೂ ಶಿಕ್ಷಕ ವೃಂದ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದರು.

Read More

ಸುಂಟಿಕೊಪ್ಪ, ಫೆ.17: ಕಂಬಿಬಾಣೆ ರಾಮ ಮತ್ತು ಚಾಮುಂಡೇಶ್ವರಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಶಿವರಾತ್ರಿ ಹಬ್ಬದ ಪ್ರಯುಕ್ತ ಫೆ.18 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ವಿವಿಧ ಪೂಜಾ ಕೈಂಕಾರ್ಯಗಳು ನಡೆಯಲಿದ್ದು, ಮಹಾಮಂಗಳಾರತಿ, ಪ್ರಸಾದ ವಿನಿಯೋಗದ ನಂತರ ಅನ್ನಸಂತರ್ಪಣೆ ನೆರವೇರಲಿದೆ. ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏಳನೇ ಮೈಲು ಗ್ರಾಮದ ಮಹಾದೇವ ಈಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ವಿವಿಧ ವಿಶೇಷ ಪೂಜೆಗಳು ನೆರವೇರಲಿದೆ. ಶನಿವಾರ ಸಂಜೆ 5 ಗಂಟೆಗೆ ಮಹಾಸಂಕಲ್ಪ, ಗಂಗಾಪೂಜೆ, ಗಣಪತಿ ಪೂಜೆ, ಪುಣ್ಯಾಹ, ಪಂಚಕಳಸ, ನವಗ್ರಹ ಪೂಜೆ, ಗಣಪತಿ ಹೋಮ, ನವಗ್ರಹ ಹೋಮ, ಪೂರ್ಣಾಹುತಿ ನಂತರ ಈಶ್ವರ ಸ್ವಾಮಿಗೆ ರುದ್ರಾಭಿಷೇಕ, ಮಹಾಪುಷ್ಪಾಲಂಕಾರ, ಬಿಲ್ವಾರ್ಚನೆ, ಸಹಸ್ರ ದೀಪರಾಧನೆಯ ನಂತರ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗದ ನಂತರ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಧಾನ ಅರ್ಚಕ ಅವಿನಾಶ್ ಆರಾಧ್ಯ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.17 : ಮೂರ್ನಾಡು ಹೋಬಳಿ ಬಂಟರ ಸಂಘದ ವತಿಯಿಂದ ಫೆ.25 ಮತ್ತು 26 ರಂದು ‘ಸ್ವಜಾತಿ ಬಂಧುಲೆನ ಸಮ್ಮಿಲನ-2023’ ಕಾರ್ಯಕ್ರಮ ನಡೆಯಲಿದೆ. ಫೆ.25 ರಂದು ಮೂರ್ನಾಡು ಕಾಲೇಜು ಮೈದಾನದಲ್ಲಿ ಬೆಳಗ್ಗೆ 9 ಗಂಟೆಗೆ ಮೂರ್ನಾಡು ಹೋಬಳಿ ಘಟಕ ಅಧ್ಯಕ್ಷ ಬಿ.ಕೆ.ಚಂದ್ರಶೇಖರ ರೈ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಬಂಟರ ಸಂಘದ ಗೌರವಾಧ್ಯಕ್ಷ ಬಿ.ಬಿ. ಐತಪ್ಪರೈ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಬಂಟರ ಸಂಘದ ಉಪಾಧ್ಯಕ್ಷ ಬಿ.ಕೆ.ರವೀಂದ್ರರೈ, ಮಡಿಕೇರಿ ತಾಲೂಕು ಘಟಕದ ಅಧ್ಯಕ್ಷ ರಮೇಶ್‍ರೈ, ಜಿಲ್ಲಾ ಖಜಾಂಚಿ ಬಿ.ಎನ್.ರತ್ನಾಕರ ರೈ, ಸಹ ಕಾರ್ಯದರ್ಶಿ ಬಿ.ಸಿ. ಹರೀಶ್‍ರೈ, ಬಿ.ಜೆ. ಮನೋಜ್ ಶೆಟ್ಟಿ, ಮಡಿಕೇರಿ ತಾಲೂಕು ಸಂಘದ ಕಾರ್ಯದರ್ಶಿ ವಿಠಲ ರೈ, ಖಜಾಂಚಿ ದಿವೇಶ್‍ರೈ, ಯುವ ಬಂಟ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಚಂದ್ರಶೇಖರ್ ರೈ, ಖಜಾಂಚಿ ಜಗನ್ನಾಥ್ ರೈ, ಜಿಲ್ಲಾ ಸಂಘದ ನಿರ್ದೇಶಕ ಬಿ.ಕೆ.ಬಾಲಕೃಷ್ಣ(ಅಪ್ಪು) ರೈ, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಎಚ್.ರುಕ್ಮಿಣಿ ರೈ, ಉದ್ಯಮಿ ಅಶೋಕ್ ಶೆಟ್ಟಿ, ಬೆಳೆಗಾರ ಲೀಲಾಧರ…

Read More