ಲೇಖಕ: admin

ಮಡಿಕೇರಿ ಫೆ.16 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಫೆಬ್ರವರಿ, 21 ರಂದು ನಗರದ ಸುದರ್ಶನ ಅತಿಥಿ ಗೃಹದಲ್ಲಿ ಮತ್ತು ಫೆಬ್ರವರಿ, 22 ರಂದು ಕುಶಾಲನಗರದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.16 : ಜಿಲ್ಲೆಯಲ್ಲಿ ಫಲಾನುಭವಿಗಳ ಆಧಾರಿತ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲೆಯ ಶಾಸಕರ ಉಪಸ್ಥಿತಿಯಲ್ಲಿ ‘ಫಲಾನುಭವಿಗಳ ಸಮ್ಮೇಳನ’ ಆಯೋಜಿಸಲು ಸರ್ಕಾರ ಉದ್ದೇಶಿಸಿದ್ದು, ಆ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಸಮಾಜ ಕಲ್ಯಾಣ, ಐಟಿಡಿಪಿ, ಹಿಂದುಳಿದ ವರ್ಗ, ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಕಂದಾಯ, ಜಿಲ್ಲಾ ಪಂಚಾಯತ್, ಸಹಕಾರ, ಬೃಹತ್ ಮತ್ತು ಸಣ್ಣ ನೀರಾವರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವಿವಿಧ ನಿಗಮಗಳು ಹೀಗೆ ಹಲವು ಇಲಾಖೆಗಳು ತಮ್ಮ ಇಲಾಖೆ ವ್ಯಾಪ್ತಿಯಲ್ಲಿನ ಫಲಾನುಭವಿಗಳನ್ನು ಸಮ್ಮೇಳನಕ್ಕೆ ಆಹ್ವಾನಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಬಜೆಟ್ ಅಧಿವೇಶನ ನಂತರ ಮುಖ್ಯಮಂತ್ರಿ ಅವರು ಕೊಡಗು ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ‘ಫಲಾನುಭವಿಗಳ ಸಮ್ಮೇಳನ’ ಮತ್ತು ವಿವಿಧ ಇಲಾಖೆಗಳ ಕಾಮಗಾರಿಗಳಿಗೆ…

Read More

ವಿರಾಜಪೇಟೆ ಫೆ.16 : ಮೈಸೂರಿನ ನಾರಾಯಣ ಆಸ್ಪತ್ರೆ ಮತ್ತು ವಿರಾಜಪೇಟೆಯ ದಂತ ವೈದ್ಯಕೀಯ ಕಾಲೇಜು ಸಹ ಭಾಗಿತ್ವದಲ್ಲಿ ವಿರಾಜಪೇಟೆಯ ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಜಾಥಾ ನಡೆಯಿತು. ನಗರದ ಮಾರಿಯಮ್ಮ ದೇವಾಲಯದಿಂದ ತೆಲುಗರಬೀದಿ, ದೊಡ್ಡಟ್ಟಿ ಚೌಕಿ, ಎಪ್.ಎಂ.ಸಿ ರಸ್ತೆ, ಮುಖ್ಯ ರಸ್ತೆಯ ಮೂಲಕ ಮೆರವಣಿಗೆ ಖಾಸಾಗಿ ಬಸ್ ನಿಲ್ದಾಣ, ಸರ್ಕಾರಿ ಬಸ್ ನಿಲ್ದಾಣದ ರಸ್ತೆಯ ಮೂಲಕ ಸಾಗಿ ಸಂದೇಶ ನೀಡಿದರು. ಜಾತಕ್ಕೆ ಡಾ. ಕಾರ್ಯಪ್ಪ ಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು. ಡಾ.ಸುನೀಲ್ ಮುದ್ದಯ್ಯ ಹಸಿರು ನಿಶಾನೆ ತೋರಿದರು. ಮೈಸೂರಿನ ನಾರಾಯಣ ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ. ನವೀನ್ ಅಣ್ವೇಕರ್ ಮಾತನಾಡಿ, ಜನರು ಕ್ಯಾನ್ಸರ್ ಕಾಯಿಲೆಗೆ ಭಯಪಡುವ ಅವಶ್ಯಕತೆ ಇಲ್ಲ. ಈಗ ವಿಜ್ಞಾನ ತಂತ್ರಜ್ಞಾನ ತುಂಬಾ ಮುಂದುವರಿದಿದೆ. ತಕ್ಷಣಕ್ಕೆ ರೋಗಿಗಳಿಗೆ ಚಿಕಿತ್ಸೆ ನೀಡಲು ಎಲ್ಲಾ ರೀತಿಯ ವ್ಯವಸ್ಥೆ ಇದೆ ಮತ್ತು ಜನರು ದುಶ್ಚಟಗಳಿಂದ ದೂರವಾಗಬೇಕು ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ನಾರಾಯಣ ಆಸ್ಪತ್ರೆಯ ವೈದ್ಯರಾದ…

Read More

ಮಡಿಕೇರಿ ಫೆ.16 : ಕೊಡಗು ಜಿಲ್ಲಾ ತಮಿಳು ಯುವ ಒಕ್ಕೂಟದ ವತಿಯಿಂದ ಸಮುದಾಯ ಬಾಂಧವರಿಗಾಗಿ 5ನೇ ವರ್ಷದ ಜಿಲ್ಲಾ ಮಟ್ಟದ ಕಾವೇರಿ ಕ್ರೀಡೋತ್ಸವ, ಸಾಂಸ್ಕೃತಿಕ ಸಂಭ್ರಮ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಫೆ.18 ಮತ್ತು 19ರಂದು ಚೆಟ್ಟಳ್ಳಿಯ ಪ್ರೌಢ ಶಾಲಾ ಮೈದಾನದಲ್ಲಿ ನಡೆಯಲಿದೆ. ಕ್ರೀಡಾಕೂಟವನ್ನು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಹಾಗೂ ಹೈಕೋರ್ಟ್ ಹಿರಿಯ ವಕೀಲ ಎ.ಎಸ್ ಪೊನ್ನಣ್ಣ  ಉದ್ಘಾಟಿಸಲಿದ್ದಾರೆ. ಎರಡು ದಿನಗಳ ಕಾಲ ಕ್ರೀಡಾಕೂಟ ನಡೆಯಲಿದ್ದು, ಫೆ.18 ರಂದು ನಡೆಯಲಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ 15 ತಂಡಗಳು ಭಾಗವಹಿಸಲಿದೆ. ಫೆ.19ರಂದು ನಡೆಯಲಿರುವ ಸಮಾರೋಪ ಸಮಾರಂಭವನ್ನು ಸಮಾಜ ಸೇವಕ ನಾಪಂಡ ಮುತ್ತಪ್ಪ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮೋಹನ್ ರಾಜು ಸೇರಿದಂತೆ ತಮಿಳು ಸಂಘಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.  ಅಂದು ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ಹಗ್ಗಜಗ್ಗಾಟ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಮಕ್ಕಳಿಗೆ, ಯುವಕ, ಯುವತಿ, ಮಹಿಳೆಯರಿಗೆ ಹಾಗೂ ವೃದ್ಧರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯುತ್ತದೆ. ಮಧ್ಯಾಹ್ನನದ…

Read More

ಮಡಿಕೇರಿ ಫೆ.16 :  ಅಂತಾರ್ಜಾಲದ ತೊಡಕು ಇರುವ ಕೊಡಗಿನಲ್ಲಿ ರೇಡಿಯೋ ಪರಿಣಾಮಕಾರಿಯಾಗಿ ಸುದ್ದಿಯನ್ನು ಮುಟ್ಟಿಸುತ್ತಿದ್ದು, ಸರ್ಕಾರಿ ಇಲಾಖೆಗಳನ್ನೂ ಸೇರಿಕೊಂಡು ಖಾಸಗಿ ಸಂಸ್ಥೆಗಳಿಗೂ ಪ್ರಯೋಜನವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರಾದ ಶಬನಾ ಎಂ ಶೇಕ್  ನುಡಿದರು. ಮಡಿಕೇರಿ ಆಕಾಶವಾಣಿ ಕೇಂದ್ರವು ಹಮ್ಮಿಕೊಂಡ ರೇಡಿಯೋ ಕಿಸಾನ್ ದಿನದ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು. ಕೃಷಿ ಪ್ರಧಾನವಾದ  ಜಿಲ್ಲೆಯಲ್ಲಿ ಕೃಷಿಕರಿಗೆ ಉಪಯುಕ್ತವಾದ ವಿಚಾರಗಳು ಪ್ರಸಾರವಾಗುತ್ತಿದೆ.   ಕೃಷಿ ಇಲಾಖೆಯ ಯೋಜನೆಗಳ ಮಾಹಿತಿಯನ್ನು ತಿಳಿಸಲು ಅನುಕೂಲವಾಗಿದೆ. ಇತರೇ ಜಿಲ್ಲೆಗಳಿಗಿಂತ ಕೊಡಗಿನ ಪರಿಸರ ಭಿನ್ನವಾಗಿದೆ. ಇಲ್ಲಿಯೂ ಸಾಧಕ ರೈತರು ಇದ್ದಾರೆ. ಕೃಷಿ ಇಲಾಖೆಯು ಹಾಲಿ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನವನ್ನು ನೀಡುತ್ತಿದ್ದು, ಕೇಂದ್ರ ಸರ್ಕಾರದ ಕೃಷಿ ಸಮ್ಮಾನ್ ಯೋಜನೆಗೆ ರೈತರು ನೋಂದಾಯಿಸಿಕೊಂಡು ಪ್ರಯೋಜನ ಮಾಡಿಕೊಳ್ಳಬೇಕೆಂದು ಕರೆ ನೀಡಿದರು. ಕೊಡಗು ಜಿ.ಪಂ ಉಪ ಕಾರ್ಯದರ್ಶಿ ಜಿ. ಧನರಾಜ್  ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆ ಅಡಿ ನೂರಾರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶ ಇದೆ. ರೈತರ ಹತ್ತಾರು ಕೆಲಸಗಳಿಗೆ ಈ ಮೂಲಕ ಸಹಾಯವಾಗಲಿದೆ…

Read More

ನಾಪೋಕ್ಲು ಫೆ.16 : ತೋಟದ ಕೆಲಸಕ್ಕೆಂದು ಕಾರ್ಮಿಕರನ್ನು ಕರೆದೊಯ್ಯುವಾಗ ಪಿಕ್ ಅಪ್  ವಾಹನದ ಜಕ್ರ ಕಳಚಿದ ಪರಿಣಾಮ ಭಾರಿ ಅಪಘಾತದಿಂದ   ಕಾರ್ಮಿಕರು  ಪಾರಾದ ಘಟನೆ ನಾಪೋಕ್ಲು ಪಾರಾಣೆ ಮುಖ್ಯ ರಸ್ತೆಯ ಬೇತು ಗ್ರಾಮದ ತಿರುವಿನಲ್ಲಿ ಬುಧವಾರ  ನಡೆದಿದೆ. ಸಮೀಪದ ಎಮ್ಮೆಮಾಡು ಕೂರುಳಿ ಗ್ರಾಮದಿಂದ ಕೆಲಸಕ್ಕೆಂದು ಕಾರ್ಮಿಕರನ್ನು ಪಿಕ್ ಅಪ್ ವಾಹನದಲ್ಲಿ ಸಾಗಿಸುತ್ತಿದ್ದಾಗ ವಾಹನದ ಆಕ್ಸಲ್ ತುಂಡಾದ ಪರಿಣಾಮ ಚಕ್ರಕಳಚಿಕೊಂಡು ಅವಘಡ ಸಂಭವಿಸಿದೆ. ವಾಹನದಲ್ಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ  ದೃಶ್ಯ ನಾಪೋಕ್ಲುವಿನ ಆಟೋ ಚಾಲಕರೊಬ್ಬರ ಮೊಬೈಲ್ ನಲ್ಲಿ ಸೆರೆಸಿಕ್ಕಿದೆ. ಇದರಲ್ಲಿ ಪಿಕ್ ಅಪ್ ವಾಹನದ ಚಕ್ರ ಕಳೆಚುವ ದೃಶ್ಯ ಸೆರೆಯಾಗಿದ್ದು ಭಯಾನಕವಾಗಿದೆ. ಸುಮಾರು 20.ಮೀ ನಷ್ಟು ದೂರ ಚಲಿಸಿದ ವಾಹನವನ್ನು ಪಲ್ಟಿಯಾಗದಂತೆ ಚಾಲಕ ಸಮಯ ಪ್ರಜ್ಞೆ ಮೆರೆದು ನಿಯಂತ್ರಿಸಿದ್ದಾನೆ.ಇದರಿಂದ ಭಾರಿ ಅನಾಹುತ ತಪ್ಪಿದಂತ್ತಾಗಿದೆ. ವಾಹನದಲ್ಲಿ ಸಣ್ಣಮಕ್ಕಳು ಸೇರಿದಂತೆ 15ಕ್ಕೂ ಅಧಿಕ ಕಾರ್ಮಿಕರಿದ್ದು ಅದೃಷ್ಟವಶಾತ್  ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಪೋಕ್ಲು ವ್ಯಾಪ್ತಿಯಲ್ಲಿ ಕಾಫಿ, ಕಾಳುಮೆಣಸು ಕೊಯ್ಲು ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ…

Read More

ಮಡಿಕೇರಿ ಫೆ.16 :  ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಕಿರುಗೂರು ಗ್ರಾಮದ ಚೆಪ್ಪುಡಿರ ಸುಜು ಕರುಕಬಯ್ಯನವರ ಗದ್ದೆಯಲ್ಲಿ ಯುಕೊ ಸಂಘಟನೆಯ ನಾಲ್ಕನೇ ವರ್ಷದ ಬೇದ ಚಂಗ್ರಾಂದಿಯ ಆಚರಣೆ ನಡೆಯಿತು. ಸಾಂಪ್ರದಾಯಿಕ ಉಡುಗೆ ತೊಟ್ಟ ಮಹಿಳೆಯರು ಗದ್ದೆಯಲ್ಲಿ ವಿಧಿವಿಧಾನಗಳನ್ನು ನೆರವೇರಿಸಿ, ಸಾಂಪ್ರದಾಯಿಕವಾಗಿ ಕೈಎಣ್ಣೆಯನ್ನು ಭೂಮಿಗೆ ಸುರಿದು, ಮರದ ಬಾಚಣಿಕೆಯನ್ನಿಟ್ಟು, ” ಭೂಮಿತಾಯಿ ನೀಡ ಉಟ್ಟಿಮಂಡೆ ಕಾಂಜದ್ ತಂಪಾಡ್ – ಕುಂಬ್ಯಾತ್ ಮಳೆ ಆಯಿತ್ ಕಂದ್ ಲೂ ಕೂಳಾಡ್ ” ಎಂದು ಹೇಳುವುದರ ಮೂಲಕ ಭೂಮಿತಾಯಿಯನ್ನು ಸ್ಮರಿಸಿದರು. ನಂತರ ಸುಜು ಕರುಂಬಯ್ಯ ನವರ ಮನೆಯಲ್ಲಿ ಜರುಗಿದ ಸಭೆಯನ್ನುದ್ದೇಶಿಸಿ ಮಾತನಾಡಿದ ಯುಕೊ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ಒಂದು ಮಗುವಿನ ಸಮಗ್ರ ಬೆಳವಣಿಗೆಯ ಹಿಂದೆ ಒಬ್ಬ ತಾಯಿಯ ಪ್ರಭಾವ ಮಹತ್ವದ ಪಾತ್ರ ನಿರ್ವಹಿಸುವ ಹಾಗೆ ಒಂದು ಸಮುದಾಯದ ಸಮಗ್ರ ಬೆಳವಣಿಗೆಯಲ್ಲಿ ಭೂಮಿ ತಾಯಿಯ ಪ್ರಭಾವವೂ ಬಹುಮುಖ್ಯ ಪಾತ್ರವನ್ನು ನಿರ್ವಹಿಸುತ್ತದೆ. ಇದರ ಬಾಂಧವ್ಯದ ಸಂಕೇತವಾಗಿ ಕೊಡವರು ಬೇದ ಚಂಗ್ರಾಂದಿಯನ್ನು ಆಚರಣೆ ಮಾಡುತ್ತಾರೆ ಎಂದು  ಹೇಳಿದರು. ಅನಾದಿಕಾಲದಿಂದಲೂ ಕೊಡವರು ತಮ್ಮದೇ ಆದ…

Read More

ಮಡಿಕೇರಿ ಫೆ.16 :  (ಬರಹ : ಬೊಳ್ಳಜಿರ ಬಿ.ಅಯ್ಯಪ್ಪ) ಕೊಡವ ಜಾನಪದ ಕಲೆಯ ಪ್ರಸರಣಕ್ಕೆ ಅರ್ಧ ಶತಮಾನದ ತಮ್ಮ ಬದುಕನ್ನು ಮೀಸಲಿಟ್ಟ ಕೊಡಗಿನ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರು ಕೇಂದ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಪದ್ಮಶ್ರೀ’ಗೆ ಭಾಜನರಾಗಿದ್ದಾರೆ. ರಾಣಿ ಮಾಚಯ್ಯ ಅವರು ಜಾನಪದ ಕಲಾವಿದೆಯಾಗಿ 10 ಸಾವಿರಕ್ಕೂ ಹೆಚ್ಚಿನ ಮಕ್ಕಳಿಗೆ ಕೊಡಗಿನ ವಿಶಿಷ್ಟ ಜಾನಪದ ಕಲಾ ಪ್ರಕಾರ ‘ಉಮ್ಮತ್ತಾಟ್’ ನ್ನು ಕಲಿಸಿಕೊಟ್ಟಿದ್ದಾರೆ. ಜಾನಪದ ಮತ್ತು ಸಾಂಸ್ಕøತಿಕ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಯ ಹಿನ್ನೆಲೆ ಪ್ರತಿಷ್ಠಿತ ‘ಪದ್ಮಶ್ರೀ’ ಪುರಸ್ಕಾರ ಇವರನ್ನು ಕೈಬೀಸಿ ಕರೆದಿದೆ. ರಾಣಿ ಮಾಚಯ್ಯ ಅವರು ವಕೀಲ ದಿ.ಐಮುಡಿಯಂಡ ಮಾಚಯ್ಯ ಅವರ ಪತ್ನಿ. 4-4-1943 ರಲ್ಲಿ ಜನಿಸಿದ ಇವರು ಕಲಾವಿದೆಯಾಗಿ ಕೊಡವ ಜಾನಪದ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅಪ್ರತಿಮ ದೇಶಭಕ್ತರು, ಯೋಧರು ಜನಿಸಿದ ಕೊಡಗಿನಲ್ಲಿ ಸಂಸ್ಕೃತಿ ಪೆÇೀಷಕರಿಗೇನೂ ಕೊರತೆಯಿಲ್ಲ, ಆದರೆ ಆ ಸಂಸ್ಕೃತಿಯನ್ನು ಹೊರ ಜಗತ್ತಿಗೆ ಸಮರ್ಥವಾಗಿ ಪರಿಚಯಿಸಿದವರಲ್ಲಿ ಮೊದಲಿಗರು ರಾಣಿ ಮಾಚಯ್ಯನವರೆಂದರೆ ಅತಿಶಯೋಕ್ತಿಯಲ್ಲ. “ಉಮ್ಮತ್ತಾಟ್”…

Read More

ಕಡಂಗ ಫೆ.16 :   ನರಿಯಂದಡ ಗ್ರಾ.ಪಂ  ವ್ಯಾಪ್ತಿಯ ಕಡಂಗ, ಅರಪಟ್ಟು, ಪೊದವಾಡ ಗ್ರಾಮದಲ್ಲಿ ಕಸದ ರಾಶಿ ಹೆಚ್ಚಾಗಿದ್ದು,  ನಗರವಾಸಿಗಳ ನಿದ್ದೆಗೆಡಿಸಿದೆ. ಕಸದ ರಾಶಿಯನ್ನು ಶೇಖರಣೆ  ಮಾಡಲು ಗ್ರಾ.ಪಂ  ವತಿಯಿಂದ ವಾರಕ್ಕೆ ಒಂದು ಸಲ ಆಗಮಿಸುವ ಕಸ ವಿಲೇವಾರಿ ವಾಹನವು ಎರಡು ತಿಂಗಳಿಗಳಿಂದ ಪತ್ತೆ ಇಲ್ಲ. ಕಸದ ರಾಶಿ ಪಕ್ಕದ ರಸ್ತೆ ಹಾಗೂ ಚರಂಡಿಗಳಿಗೆ ವ್ಯಾಪಿಸಿದ್ದು, ವಾಹನಗಳು ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಜತೆಗೆ ಚರಂಡಿಗಳಲ್ಲಿ ಕಸ ಕಟ್ಟಿಕೊಂಡು ಕೊಳಚೆ ನೀರಿನ ಹರಿವಿಗೆ ಅಡ್ಡಿಯಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಸ ವಿಲೇವಾರಿಗೆ ಗ್ರಾ.ಪಂ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ : ನೌಫಲ್ ಕಡಂಗ 

Read More

ಮಡಿಕೇರಿ ಫೆ.16 : ವಿಶ್ವದಲ್ಲಿಯೇ ಅತಿಹೆಚ್ಚು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾಗಿ ಭಾರತ ಗಮನ ಸೆಳೆಯುತ್ತಿದೆ. ದೇಶದಲ್ಲಿ ಇಂಧನದ ಬೇಡಿಕೆ ಹೆಚ್ಚಾಗುತ್ತಿದೆ. ಅಭಿವೃದ್ಧಿಯ ವೇಗ ಗಮನಿಸಿದರೆ ಬರುವ ವರ್ಷಗಳಲ್ಲಿ ಭಾರತದಲ್ಲಿ ಹಲವು ಹೊಸ ನಗರಗಳು ರೂಪುಗೊಳ್ಳಲಿವೆ. ಅಂತರರಾಷ್ಟ್ರೀಯ ಇಂಧನ ಸಂಸ್ಥೆಯು ಇದೇ ಮಾತು ಹೇಳಿದೆ. ಇದೇ ದಶಕದಲ್ಲಿ ಭಾರತದಲ್ಲಿ ಇಂಧನದ ಬೇಡಿಕೆಯು ವಿಶ್ವದಲ್ಲಿಯೇ ಅತ್ಯಂತ ಹೆಚ್ಚಾಗಲಿದೆ. ಹೀಗಾಗಿಯೇ ಹೂಡಿಕೆದಾರರು ಹಾಗೂ ಸಹವರ್ತಿಗಳಿಗೆ ಹೊಸ ಅವಕಾಶಗಳು ಲಭ್ಯವಾಗಲಿದೆ. ಭಾರತದಲ್ಲಿ ಪ್ರಸ್ತುತ ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ವಿಶ್ವದ ಒಟ್ಟು ಬೇಡಿಕೆಯಲ್ಲಿ ಶೇ 5ರಷ್ಟು ಇದೆ. ಇದು ಮುಂದಿನ ಕೆಲವೇ ವರ್ಷಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಭಾರತದ ಅಭಿವೃದ್ಧಿಗೆ 4 ಮುಖ್ಯ (ದೇಶೀಯ ಉತ್ಪಾದನೆಯ ಹೆಚ್ಚಳ, ಪೂರೈಕೆಯಲ್ಲಿ ವೈವಿಧ್ಯ, ಜೈವಿಕ ಇಂಧನ, ಎಲೆಕ್ಟ್ರಿಕ್ ಮತ್ತು ಹೈಡ್ರೋಜನ್ ವಾಹನಗಳ ಬಳಕೆಗೆ ಒತ್ತು) ಸ್ತಂಭಗಳಿವೆ. ಈ ನಾಲ್ಕೂ ಅಂಶಗಳಲ್ಲಿ ಭಾರತ ವೇಗವಾಗಿ ಕೆಲಸ ಮಾಡುತ್ತಿದೆ. ನಮ್ಮ ಪೆಟ್ರೋಲಿಯಂ ಸಂಸ್ಕರಣಾಗಾರಗಳ ತಂತ್ರಜ್ಞಾನವನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇಲ್ಲಿ ಸ್ಟಾರ್ಟಪ್‍ಗಳಿಗೆ ಹೆಚ್ಚು ಉತ್ತೇಜನವಿದೆ. ನೀವು ಇಲ್ಲಿನ…

Read More