ಚೆಟ್ಟಳ್ಳಿ ಫೆ.16 : ಜರ್ಮನ್‍ನಿಂದ ಮೈಸೂರಿಗೆ ಆಗಮಿಸಿದ ಕಾಯ, ಜೋಹಾನಿ, ಲಿನ್ಯೂಸ್, ಲೂಹಿಸ್, ಜಾಶ್ಮಿನ್ ಎಂಬ ವಿದೇಶಿಯರು ಕೊಡಗಿನ ಕಾಫಿ ಕುಯ್ಲು ಅನುಭವಿಸಲು ಕೊಡಗಿಗೆ ಬಂದಿಳಿದರು. ಚೆಟ್ಟಳ್ಳಿಯ ಮುಳ್ಳಂಡ ಅಂಜನ್ ಮುತ್ತಪ್ಪ ಅವರನ್ನು ಸಂಪರ್ಕಿಸಿ ಚೆಟ್ಟಳ್ಳಿಯ ಕಾಫಿ ತೋಟದಲ್ಲೆಲ್ಲ ಸುತ್ತಾಡಿದ ವಿದೇಶಿಗರು, ಅಂಜನ್‍ನಿಂದ ಕಾಫಿ ವೈಶಿಷ್ಯದ ಬಗ್ಗೆ ಮಾಹಿತಿ ಪಡೆದರು. ಅಲ್ಲದೆ ಬೆಳಗಿನಿಂದ ಮಧ್ಯಾಹ್ನದ ವರೆಗೆ ಕಾಫಿ ಕುಯಿದು ಆನಂದಿಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ವಿದೇಶಿಗರು ಕೊಡಗಿನ ಹಸಿರು ಪರಿಸರದಲ್ಲಿನ ಕಾಫಿಯನ್ನು ಕುಯಿದು ತುಂಬಾನೆ ಆನಂದಿಸಿದ್ದೇವೆ. ಇಂದು ನಮಗೆ ಹೊಸ ಅನುಭವವನ್ನು ನೀಡಿದೆ ಎಂದು ತಿಳಿಸಿದರು. ಕೊಡಗಿನ ಕಾಫಿಯನ್ನು ಸವಿದು, ಕೊಡಗಿನ ಕಾಫಿ ಹಿಂದೆ ಹಲವರ ಪರಿಶ್ರಮವಿದೆ. ಇಲ್ಲಿನ ಪರಿಸರ ಆಕರ್ಷಣೀಯವಾಗಿದ್ದು, ಮತ್ತೆ ಬರುವುದಾಗಿ ಹೇಳಿ ತೆರಳಿದರು. ವರದಿ-ಪುತ್ತರಿರ ಕರುಣ್ ಕಾಳಯ್ಯ
ಲೇಖಕ: admin
ಮಡಿಕೇರಿ ಫೆ.16 : ಮಾದಾಪುರದ ಶ್ರೀಮತಿ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ನಡೆಯಿತು. ಸುಂಟಿಕೊಪ್ಪದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಾನ್ ಪರೀಕ್ಷೆಗೆ ಸೂಕ್ತ ತಯಾರಿ ಹಾಗೂ ಪರೀಕ್ಷೆಯನ್ನು ಆತ್ಮ ವಿಶ್ವಾಸದಿಂದ ಎದುರಿಸುವ ಕುರಿತು ಉಪನ್ಯಾಸ ಮತ್ತು ಬದಲಾದ ಹೊಸ ಮಾದರಿ ಪ್ರಶ್ನೆ ಪತ್ರಿಕೆಯ ಬಗ್ಗೆ ಮಾಹಿತಿ ನೀಡಿದರು. ಚೆನ್ನಮ್ಮ ಸಂಸ್ಥೆಯ ಪ್ರಾಂಶುಪಾಲರಾದ ಸಿ ಜಿ ಮಂದಪ್ಪ ಮಾತನಾಡಿ ಸುಂಟಿಕೊಪ್ಪ ಪದವಿ ಪೂರ್ವ ಕಾಲೇಜನ್ನು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಕೇಂದ್ರವನ್ನಾಗಿ ರೂಪಿಸುವಲ್ಲಿ ಕೊಡಗು ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟರಾಜು , ಜಾನ್ ರವರ ಪಾತ್ರ ಮಹತ್ವ ಪೂರ್ಣವಾದುದು ಎಂದು ಶಾಘಿಸಿದರು. ದೂರದ ಊರಿನಿಂದ ಬರುವ ವಿದ್ಯಾರ್ಥಿ ಗಳಿಗೆ ಇದರಿಂದ ಬಹಳ ಅನುಕೂಲವಾಗಿದೆ ಎಂದರು. ಶ್ರೀಮತಿ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಕರ್ನಲ್ ಬಿಜಿವಿ ಕುಮಾರ್ ಮತ್ತು…
ಮಡಿಕೇರಿ ಫೆ.16 – ಚೆಂಬು ಗ್ರಾಮ ಪಂಚಾಯಿತಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆಯ ಸ್ಥಳೀಯ ಸಂಸ್ಥೆಗಳ ಆಶ್ರಯದಲ್ಲಿ ಭಗವಾನ್ ಯುವಕ ಸಂಘ ಚೆಂಬು ,ಮಿತ್ರಕೂಟ ಕ್ರೀಡಾ ಸಂಘ ಚೆಂಬು ಇವರ ಸಹಯೋಗದೊಂದಿಗೆ ಮಡಿಕೇರಿಯ ರಕ್ತ ನಿಧಿ ಕೇಂದ್ರದವರು *’ರಕ್ತದಾನ ಶಿಬಿರ’* ಆಯೋಜಿಸಿದ್ದರು. ಕಾರ್ಯಕ್ರಮವನ್ನು ಚೆಂಬು ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಕುಸುಮ ಯೋಗೇಶ್ವರ್ ಸಸಿಗೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಇಂತಹ ಕಾರ್ಯಕ್ರಮ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿರುವುದು ಶ್ಲಾಘನೀಯ.ಇಂದಿನ ಕಾಲಮಾನದಲ್ಲಿ ಯುವಕರು ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವುದು ಬಹಳ ಒಳ್ಳೆಯ ವಿಚಾರ . ಗ್ರಾಮೀಣ ಭಾಗದ ಜನತೆ ಇಂತಹ ಶಿಬಿರದ ಬಗ್ಗೆ ಅರಿವು ಮೂಡಿಸಿ ಕೊಳ್ಳುವುದು ಅತೀ ಅವಶ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮಾತನಾಡಿದ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ।। ಕರುಂಬಯ್ಯ ಕೆ. ಪಿ. , ರಕ್ತದಾನದ ಮಹತ್ವ , ಪ್ರಯೋಜನ ಮತ್ತು ಸಾರ್ಥಕ ಮನೋಭಾವದ ಬಗ್ಗೆ ಅರಿವು ನೀಡಿದರು. ವಿದ್ಯಾರ್ಥಿಗಳು ಬಾಲ್ಯದಲ್ಲೇ ರಕ್ತದಾನದ ಬಗ್ಗೆ ಅರಿತುಕೊಳ್ಳಬೇಕು. ಜೀವನದಲ್ಲಿ…
ಮಡಿಕೇರಿ ಫೆ.16 : ಪೊನ್ನಂಪೇಟೆಯ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಹೊಸ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ ಸಲುವಾಗಿ ಮತ್ತು ಶೈಕ್ಷಣಿಕ ವಾತಾವರಣದಲ್ಲಿ ಯಶಸ್ಸನ್ನು ಸಾಧಿಸಲು ಸಹಾಯ ಮಾಡಲು “ಅಡ್ವಾನ್ಸ್ಡ್ ಲ್ಯಾಬ್‌ವೀವ್” ಕುರಿತು ಮೂರು ದಿನಗಳ ಹ್ಯಾಂಡ್ಸ್-ಆನ್ ಕಾರ್ಯಾಗಾರ ನಡೆಯಿತು. ಕೊಡವ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಡಾ. ಎಂ.ಸಿ.ಕಾರ್ಯಪ್ಪ ಮೂರು ದಿನಗಳ ಕಾರ್ಯಾಗಾರವನ್ನುಉದ್ಘಾಟಿಸಿದರು. ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಕೆನಡಾದ ಮಾಂಟ್ರಿಯಲ್ ಸಿ.ಎಸ್. ಗ್ರೂಪ್ ನ ಎಂಬೆಡೆಡ್ ಸಾಫ್ಟ್ವೇರ್ ಸ್ಪೆಷಲಿಸ್ಟ್ ವಿ.ಆರ್.ಮಂಜುನಾಥ್ ವಿಷಯದ ಬಗ್ಗೆ ವಿಧ್ಯಾರ್ಥಿಗಳಿಗೆ ಸರಳವಾಗಿ ಮನದಟ್ಟು ಮಾಡಿದರು. ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಎಂ. ಬಸವರಾಜು, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ದಿವಾಕರ ಹಾಗೂ ವಿಭಾಗದ ಭೋದಕ ಹಾಗೂ ಭೋದಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು. ಸಮರೋಪ ಸಮಾರಂಭದಲ್ಲಿ ಕೊಡವ ಎಜುಕೇಶನ್ ಸೊಸೈಟಿಯ ಗೌರವಾನ್ವಿತ ಕಾರ್ಯದರ್ಶಿ ಸಿ.ಪಿ.ರಾಕೇಶ್ ಪೂವಯ್ಯ ಸಂಪನ್ಮೂಲ ವ್ಯಕ್ತಿಯನ್ನು ಸನ್ಮಾನಿಸಿದರು ಹಾಗೂ ವಿಧ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದರು.
ಕುಶಾಲನಗರ,ಫೆ.15: ಕುಶಾಲನಗರದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ ಸಂದರ್ಭ ತೆರವುಗೊಳಿಸುವ ಮರಗಳಿಗೆ ಪರ್ಯಾಯವಾಗಿ ಒಂದು ಸಾವಿರ ಗಿಡಗಳನ್ನು ನೆಟ್ಟು ಬೆಳೆಸುವ ಪ್ರಸ್ತಾವನೆಯನ್ನು ಸಿದ್ಧಪಡಿಸಿರುವುದಾಗಿ ಕೊಡಗು ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಭ್ರoಗೇಶ್ ತಿಳಿಸಿದ್ದಾರೆ. ಅವರು ಮಡಿಕೇರಿಯಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ತಮ್ಮ ಕೊಠಡಿಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು. ಕುಶಾಲನಗರ ತಾಲೂಕು ಮುಳ್ಳುಸೋಗೆ ಗ್ರಾಮದ ಸರ್ವೆ ನಂಬರ್ 52ರ ಜಾಗದಲ್ಲಿ ನ್ಯಾಯಾಲಯದ ಹೊಸ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಎಲ್ಲಾ ಸಿದ್ಧತೆಗಳು ನಡೆದಿದೆ. ಹೊಸ ಕಟ್ಟಡ ನಿರ್ಮಾಣಕ್ಕೆ ಅಡಚಣೆಯಾಗಿರುವ ತೇಗ ಮತ್ತು ಇತರೆ ಜಾತಿಯ 98 ಮರಗಳನ್ನು ತೆರವುಗೊಳಿಸುವ ಬಗ್ಗೆ ಆಕ್ಷೇಪಣೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಬಿ ಸಿ ಸತೀಶ್ ಸೇರಿದಂತೆ ಜಿಲ್ಲೆಯ ಅಧಿಕಾರಿಗಳ ಸಮ್ಮುಖದಲ್ಲಿ ಮರ ತೆರವುಗೊಳಿಸುವ ಸಂದರ್ಭ ನಿಯಮಗಳನ್ನು ಪಾಲಿಸುವ ಬಗ್ಗೆ ಪ್ರಸ್ತಾಪಿಸಿದ ನ್ಯಾಯಾಧೀಶರು, ನೂತನ ಕಟ್ಟಡ ನಿರ್ಮಾಣ ಸಂದರ್ಭ ಅಗತ್ಯವಿರುವ ಕೆಲವು ಮರಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಪರ್ಯಾಯವಾಗಿ ಒಂದು ಮರಕ್ಕೆ ಹತ್ತು ಗಿಡಗಳಂತೆ…
ಕುಶಾಲನಗರ ಫೆ.15 : ಪುಲ್ವಾಮದಲ್ಲಿ ಉಗ್ರರ ದಾಳಿಯಿಂದ ವೀರ ಮರಣ ಹೊಂದಿದ ಭಾರತೀಯ ವೀರಯೋಧರ ನೆನಪಿಗಾಗಿ ಕರ್ನಾಟಕ ಕಾವಲು ಪಡೆ ವತಿಯಿಂದ ಕುಶಾಲನಗರದಲ್ಲಿ 40 ಕ್ಕೂ ಹೆಚ್ಚು ಹಣ್ಣಿನ ಗಿ ಡಗಳನ್ನು ನೆಟ್ಟು ಶ್ರದ್ಧಾಂಜಲಿ ಅರ್ಪಿಸಲಾಯಿತು, ಕುಶಾಲನಗರ ಫಾತಿಮಾ ಪ್ರೌಢಶಾಲೆ ಆವರಣದಲ್ಲಿ ಕಾವಲು ಪಡೆ ಜಿಲ್ಲಾಧ್ಯಕ್ಷ ಎಂ ಕೃಷ್ಣ ಮತ್ತು ಮುಖ್ಯ ಶಿಕ್ಷಕರಾದ ಜಫ್ರಿ ಡಿಸಿಲ್ವಾ ನೇತೃತ್ವದಲ್ಲಿ ಗಿಡಗಳನ್ನು ನೆಡಲಾಯಿತು. ಈ ಸಂದರ್ಭ ಕಾವಲು ಪಡೆಯ ಗೌರವಾಧ್ಯಕ್ಷ ಅಂತೋನಿ, ಶಾಲಾ ಇಕೋ ಕ್ಲಬ್ ಸಂಚಾಲಕ ಕಮಲ್ನಾಥ್, ಸಹ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ಮಡಿಕೇರಿ ಫೆ.15 : ಇತ್ತೀಚಿನ ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ವನ್ಯಜೀವಿಗಳ ಉಪಟಳ ಮಿತಿ ಮೀರಿದ್ದು, ಮಾನವ ಜೀವಹಾನಿ ನಿರಂತರವಾಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿಗಳು ಕೊಡಗಿನಲ್ಲಿ ವಿಶೇಷ ಸಭೆ ನಡೆಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಬ್ರಿಜೇಶ್ ಕಾಳಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ಇತ್ತೀಚೆಗೆ ಇಬ್ಬರು ಅಮಾಯಕರು ಹುಲಿ ದಾಳಿಗೆ ಬಲಿಯಾಗಿದ್ದಾರೆ. ಕಳೆದ 3- 4 ವರ್ಷಗಳಿಂದ ಕೊಡಗಿನಲ್ಲಿ ವನ್ಯಜೀವಿಗಳ ದಾಳಿ ಮಿತಿ ಮೀರಿದ್ದರೂ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸದೆ ಅಸಡ್ಡೆ ತೋರಿದ ಪರಿಣಾಮ ಜನ ನಿತ್ಯ ಬವಣೆ ಅನುಭವಿಸುವಂತ್ತಾಗಿದೆ ಎಂದು ಆರೋಪಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಅರಣ್ಯ ಸಚಿವರು ಗಂಭೀರ ಸಮಸ್ಯೆಯಾಗಿರುವ ವನ್ಯಜೀವಿಗಳ ದಾಳಿ ಕುರಿತು ಕೊಡಗಿನಲ್ಲಿ ವಿಶೇಷ ಸಭೆ ನಡೆಸಿಲ್ಲ. ಜಿಲ್ಲೆಯ ಕೃಷಿಕ ವರ್ಗವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇಲ್ಲಿನ ಸಮಸ್ಯೆಗಳ ಬಗ್ಗೆ ಗಂಭೀರ ಚಿಂತನೆಯನ್ನು ಮಾಡಿಲ್ಲ್ಲ. ವನ್ಯಜೀವಿ ಉಪಟಳ ತಡೆಗೆ ಶಾಶ್ವತ…
ಮಡಿಕೇರಿ ಫೆ.15 : ನರಿಯಂದಡ ಗ್ರಾ.ಪಂ ಗ್ರಾಮ ಸಭೆಯು ಪಂಚಾಯಿತಿ ಅಧ್ಯಕ್ಷರಾದ ಬಿದ್ದಂಡ ರಾಜೇಶ್ ಅಚ್ಚಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಲಕ್ಷ್ಮಿ ಮಹಿಳಾ ಸಮಾಜದಲ್ಲಿ ನಡೆದ ಸಭೆಯಲ್ಲಿ ಗ್ರಾಮಸ್ಥರ ಪರವಾಗಿ ಚೇನಂಡ ಜೆಪ್ಪು ದೇವಯ್ಯ ಮಾತನಾಡಿ, ಕೊಕೇರಿಯಲ್ಲಿ ಕಳೆದ ಒಂದು ವರ್ಷದಿಂದ ವಿದ್ಯುತ್ ಸಮಸ್ಯೆ, ಲೈನ್ ಮ್ಯಾನ್ ಸಮಸ್ಶೆ ಬಗ್ಗೆ ಗ್ರಾಮ ಸಭೆಯಲ್ಲಿ ಪ್ರಸ್ತಾಪಿಸಿ ಸಮಸ್ಯೆ ಪರಿಹರಿಸುವ ಬಗ್ಗೆ ಭರವಸೆ ಕೊಟ್ಟು ಹೊರಟ ಚೆಸ್ಕಾಂ ಇಲಾಖೆಯವರು ಕೊಕೇರಿ ಭಾಗಕ್ಕೆ ಬರಲಿಲ್ಲ ಎಂದು ತಮ್ಮ ಆಕ್ರೋಶ ಹೊರಹಾಕಿದರು. ಚೆಯ್ಯಂಡಾಣೆ ಸರಕಾರಿ ಆಸ್ಪತ್ರೆಯಲ್ಲಿ ಖಾಯಂ ವೈದ್ಯಾಧಿಕಾರಿ ಇಲ್ಲ ಹಾಗೂ ಕಂದಾಯ ಇಲಾಖೆಯಷ್ಟು ಭ್ರಷ್ಟ ಇಲಾಖೆ ಮತ್ತೊಂದಿಲ್ಲ ಎಂದು ಕಂದಾಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಚೆಸ್ಕಾಂ ಜೂನಿಯರ್ ಇಂಜಿನಿಯರ್ ಪ್ರಕಾಶ್ ಕೂಡಲೇ ಇದರ ಬಗ್ಗೆ ಲಿಖಿತ ಮಾಹಿತಿ ನೀಡಿ ಖುದ್ದು ಕ್ರಮ ಕೈಗೊಂಡು ಸಮಸ್ಯೆಗಳನ್ನು ಪರಿಹರಿಸಲಾಗುವುದೆಂದು ಭರವಸೆ ನೀಡಿದರು. ಕಂದಾಯ ಇಲಾಖೆಯ ಬಗ್ಗೆ ಅಧಿಕಾರಿ ಅಮೃತ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲಾಗುವುದೆಂದು ಭರವಸೆ…
ಮಡಿಕೇರಿ ಫೆ.15 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಫೆ.18 ರಂದು ‘ಮಹಾ ಶಿವರಾತ್ರಿ’ ಹಬ್ಬದ ಪ್ರಯುಕ್ತ ಬೆಳಗ್ಗೆ 9.30 ಗಂಟೆಯಿಂದ 11.30 ಗಂಟೆವರೆಗೆ ವಿಶೇಷ ಸೇವೆ “ರುದ್ರಹೋಮ“ವನ್ನು ಏರ್ಪಡಿಸಲಾಗಿದೆ. ಭಕ್ತಾಧಿಗಳು ಮುಂಗಡವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೋರಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಡೆಯಲಿದ್ದು, ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಭಾಜನರಾಗುವಂತೆ ಹಾಗೂ ದೇವಾಲಯಕ್ಕೆ ತನು ಮನ ಧನ ಸಹಾಯ ನೀಡುವವರು ಸೇವಾ ಕೌಂಟರ್ ನಲ್ಲಿ ಪಾವತಿಸಿ ಅಧಿಕೃತ ರಶೀದಿಯನ್ನು ಪಡೆದುಕೊಳ್ಳುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.9902290302, 9845821566 ನ್ನು ಸಂಪರ್ಕಿಸಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ಫೆ.15 : ಕೃಷಿ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಹಾಗೂ ಕೃಷಿ ಸಂಸ್ಕರಣೆ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50, ಪ.ಜಾತಿ ಮತ್ತು ಪ.ಪಂಗಡ ರೈತರಿಗೆ ಶೇ.90ರ ಸಹಾಯಧನದಡಿ ವಿತರಿಸುವ ಯಂತ್ರೋಪಕರಣಗಳಾದ ಪವರ್ ಟಿಲ್ಲರ್, ಸ್ವಯಂ ಚಾಲಿತ ಉಪಕರಣಗಳು, ಎಂಜಿನ್ ಮೋಟಾರ್ ಚಾಲಿತ ಉಪಕರಣಗಳು, ಸಣ್ಣ ಯಂತ್ರ ಚಾಲಿತ ಎಣ್ಣೆ ಗಾಣ ಹಾಗೂ ಇತರೆ ಉಪಕರಣಗಳ ಸವಲತ್ತುಗಳನ್ನು ಪಡೆಯಲು ಆಯಾಯ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲಾತಿಗಳಾದ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಗಳು ಹಾಗೂ ಇತರೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಆಯಾಯ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ಅವರು ತಿಳಿಸಿದ್ದಾರೆ. ಮಡಿಕೇರಿ : ಪ್ರಸಕ್ತ(2022-23) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ…






