ಮಡಿಕೇರಿ, NEWS DESK ಏ.1 – ಕೊಡಗೂ ಸೇರಿದಂತೆ ವಿವಿಧೆಡೆ ಪೊಮ್ಮಕ್ಕಡ ಕೂಟಗಳ ನಡುವೆ ಭಾಂದವ್ಯ ವೃದ್ಧಿ ಹಾಗೂ ಕ್ರೀಡಾಮನೋಭಾವ ಮೂಡಿಸುವ ಉದ್ದೇಶದೊಂದಿಗೆ ಚೆಟ್ಟಳ್ಳಿ ಕೊಡವ ಸಮಾಜದ ಅಧೀನದಲ್ಲಿರುವ ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟ ಅಂತರ ಕೊಡವ ಪೊಮ್ಮಕ್ಕಡ ಥ್ರೋಬಾಲ್ ಪಂದ್ಯಾವಳಿಯನ್ನು ಏರ್ಪಡಿಸಿರುವುದು ಶ್ಲಾಘನೀಯ ಎಂರು ವಿಧಾನಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಹೇಳಿದ್ದಾರೆ. ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ಚೆಟ್ಟಳ್ಳಿ ಕೊಡವ ಸಮಾಜದ ಅಧೀನದಲ್ಲಿರುವ ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟದ ವತಿಯಿಂದ ಆಯೋಜಿಸಲಾಗಿದ್ದ ಪ್ರಥಮ ವಷ೯ದ ಅಂತರ ಕೊಡವ ಪೊಮ್ಮಕ್ಕಡ ಥ್ರೋಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜೋಮಾಲೆ ಪೊಮ್ಮಕ್ಕಡ ಕೂಟದ ವತಿಯಿಂದ ಥ್ರೋಬಾಲ್ ಪಂದ್ಯಾವಳಿಯ ಮೂಲಕ , ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮೀಣ ಕ್ರೀಡಾಪ್ರತಿಭೆಗಳು ಬೆಳಕಿಗೆ ಬರಲು ಅವಕಾಶವಾಗುತ್ತದೆ ಎಂದರು. ಎಲ್ಲಾ ಊರುಗಳಲ್ಲಿ ಪೊಮ್ಮಕ್ಕಡ ಕೂಟದ ವತಿಯಿಂದ ಹಲವಾರು ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಂಡು ಬರಲಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಇದರಿಂದ ಸಮಾಜಕ್ಕೆ ಉತ್ತಮ ಸಂದೇಶ ಸಾರಿದಂತಾಗುವುದು…
ಲೇಖಕ: admin
ಬೆಂಗಳೂರು, NEWS DESK ಮಾ.31: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ವಾರ್ತಾಭಾರತಿ ವಿಶೇಷ ವರದಿಗಾರ ಹಾಗೂ ಶಕ್ತಿ ದಿನ ಪತ್ರಿಕೆಯ ವರದಿಗಾರ ಕೆ.ಎಂ ಇಸ್ಮಾಯಿಲ್ ಕಂಡಕರೆ ಅವರು ಭಾಜನರಾಗಿದ್ದಾರೆ. ಜಿ.ನಾರಾಯಣಸ್ವಾಮಿ (ಅತ್ಯುತ್ತಮ ಗ್ರಾಮಾಂತರ ವರದಿಗೆ ಪ್ರಶಸ್ತಿ) ಲಭಿಸಿದೆ. ಬೀದರ್ ನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ, NEWS DESK ಮಾ.31 : ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ ಅಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ತಿತಿಮತಿಯ ತೋಟದಲ್ಲಿ ಬೀಡುಬಿಟ್ಟಿದ್ದ ಮರಿಯಾನೆ ಸೇರಿದಂತೆ ಸುಮಾರು ಐದು ಕಾಡಾನೆಗಳನ್ನು ಕಾರ್ಯಾಚರಣೆ ನಡೆಸಿ ಮತ್ತಿಗೋಡು ಅರಣ್ಯಕ್ಕೆ ಮರಳಿ ಅಟ್ಟಲಾಗಿದೆ. ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಯವರ ಆದೇಶದಂತೆ ತಿತಿಮತಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಅವರ ನಿರ್ದೇಶನದ ಮೇರೆಗೆ ವಲಯ ಅರಣ್ಯ ಅಧಿಕಾರಿ ಪ್ರಶಾಂತ್, ಡಿಎಫ್‌ಓ ದೇವರಾಜ್ ಮಾರ್ಗದರ್ಶನದಲ್ಲಿ ಪ್ರಾದೇಶಿಕ ವಲಯ ಸಿಬ್ಬದಿಗಳು ಹಾಗೂ ಇಟಿಎಫ್ ತಂಡದವರು ಕಾರ್ಯಾಚರಣೆ ನಡೆಸಿ ಆನೆಗಳನ್ನು ಅರಣ್ಯಕ್ಕೆ ಅಟ್ಟಿದರು.
ಮಡಿಕೇರಿ ಮಾ.31 NEWS DESK : ಚೇನಂಡ ಐನ್ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ಮಡಿಕೇರಿ ತಾಲೂಕಿನ ಕೋಕೇರಿಯಲ್ಲಿರುವ ಚೇನಂಡ ಐನ್ ಮನೆಯವರು ಈ ಬಾರಿಯ ಕೊಡವ ಹಾಕಿ ಉತ್ಸವದ ಆತಿಥೇಯ ತಂಡದವರಾಗಿದ್ದಾರೆ. ಆ ಪ್ರಯುಕ್ತ ಈ ಹಿಂದೆಯೇ ಶಾಸಕರನ್ನು ಭೇಟಿಯಾಗಿ, ಹಾಕಿ ಉತ್ಸವಕ್ಕೆ ಪೂರ್ವ ಸಿದ್ಧತೆ ಸಭೆಗೆ ಆಗಮಿಸುವಂತೆ ಕೋರಿದ್ದರು. ಈ ಹಿನ್ನೆಲೆ ಇಂದು ಶಾಸಕರು ಐನ್ ಮನೆಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮುಂಬರುವ ಹಾಕಿ ಉತ್ಸವಕ್ಕೆ ಶುಭ ಕೋರಿದರಲ್ಲದೆ, ತನ್ನಿಂದ ಸಾಧ್ಯವಾಗುವ ಎಲ್ಲಾ ಪ್ರೋತ್ಸಾಹವನ್ನು ನೀಡುವುದಾಗಿ ಭರವಸೆ ನೀಡಿದರು. ಹಾಕಿ ಪಂದ್ಯಾವಳಿಯು ಅತ್ಯಂತ ಯಶಸ್ಸು ಕಾಣಲಿ ಎಂದು ಹಾರೈಸಿದರು. ಈ ಸಂದರ್ಭ ಚೇನಂಡ ಕುಟುಂಬದ ಅಧ್ಯಕ್ಷರಾದ ಕಂಬನಿ ಕರುಂಬಯ್ಯ ಸಿಪಿ, ದಿನ ಚಂಗಪ್ಪ, ಕಾರ್ಯದರ್ಶಿ ಮಧು ಮಾದಯ್ಯ, ಜಂಟಿ ಕಾರ್ಯದರ್ಶಿ ತಮ್ಮಿ ತಮ್ಮಯ್ಯ, ಸದಸ್ಯರು ಸುರೇಶ್ ನಾಣಯ್ಯ,…
ಮಡಿಕೇರಿ ಮಾ.31 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ ವಿರಾಜಪೇಟೆ ಪಟ್ಟಣದಲ್ಲಿ ವಿರಾಜಪೇಟೆ ಉಪ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಥ ಸಂಚಲನ ನಡೆಸಿದರು.
ಮಡಿಕೇರಿ ಮಾ.31 NEWS DESK : ನಾಪೋಕ್ಲುವಿನಲ್ಲಿ ಏ.1 ರಂದು ನಡೆಯಲಿರುವ ಹಿಂದೂ ಜನ ಜಾಗೃತಿ ಸಭೆಯ ಸಂಬಂಧ ಆಯೋಜಕರ ಮತ್ತು ಇತರೆ ಪ್ರಮುಖರನ್ನೊಳಗೊಂಡ ಶಾಂತಿ ಸಭೆಯನ್ನು ನಾಪೋಕ್ಲು ಠಾಣೆಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆ, ಸಂಚಾರ ಮತ್ತು ರಸ್ತೆ ಸುರಕ್ಷತೆಯನ್ನು ಪಾಲಿಸುವುದು, ಆಯೋಜಕರ ಜವಾಬ್ದಾರಿಗಳು ಮುಂತಾದ ವಿಷಯಗಳ ಬಗ್ಗೆ ಚರ್ಚಿಸಿ ಕಾರ್ಯಕ್ರಮವನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.
ಕಾರ್ಕಳ ಏ.31 NEWS DESK : ಪ್ರಸ್ತುತ ದಿನಮಾನದಲ್ಲಿ ರಜಾ ಸಮಯವನ್ನು ಮಕ್ಕಳು ಕೇವಲ ಮೊಬೈಲ್ ಗೆ ದಾಸರಾಗಿ ದೈಹಿಕ ಮತ್ತು ಮಾನಸಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳದೆ ತಮ್ಮ ಅಮೂಲ್ಯ ಬಾಲ್ಯದ ಕ್ಷಣಗಳನ್ನು ವ್ಯರ್ಥವಾಗಿ ಕಳೆಯುತ್ತಿದ್ದಾರೆ. ಇದು ಪ್ರಸ್ತುತ ಹೆತ್ತ ತಂದೆ ತಾಯಿಯರಿಗೂ ಮಕ್ಕಳ ಈ ವರ್ತನೆ ನುಂಗಲಾರದ, ಅರಗಿಸಿಕೊಳ್ಳಲಾಗದ ನೋವಿನ ಕ್ಷಣಗಳು ಹೌದು. ಈ ನಿಟ್ಟಿನಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆರಂಭಗೊಳ್ಳಲಿರುವ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಮಕ್ಕಳು ತಮ್ಮ ರಜಾ ದಿನಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂಬ ಧ್ಯೇಯವನ್ನು ಇಟ್ಟುಕೊಂಡು ಇದೇ ಬರುವ ಏ.2, 3 ಮತ್ತು 4 ರಂದು ಮಕ್ಕಳ ವಿಶೇಷ ಶಿಬಿರ ಚಿಲಿಪಿಲಿ-2026* ನಡೆಯಲಿದೆ. ಇಂದಿನ ಸ್ಕ್ರೀನ್ ಟೈಮ್ ಯುಗದಲ್ಲಿ ಮಕ್ಕಳು ತಮ್ಮ ಬಾಲ್ಯವನ್ನು ವ್ಯರ್ಥ ಮಾಡಿಕೊಳ್ಳುತ್ತಿರುವಾಗ ಈ ಶಿಬಿರವು ನೆನಪುಗಳನ್ನು ಸೃಷ್ಟಿಸಲು, ಸೃಜನಶೀಲತೆಯನ್ನು ಹೆಚ್ಚಿಸಲು, ಸ್ನೇಹಿತರನ್ನು ಮಾಡಿಕೊಳ್ಳಲು , ಹೊಸ ಆಸಕ್ತಿಗಳನ್ನು ಕಂಡುಕೊಳ್ಳಲು ಒಟ್ಟಾರೆಯಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಈ ಶಿಬಿರವು ಮಕ್ಕಳಿಗೆ ಅತ್ಯಂತ…
ಮಡಿಕೇರಿ, NEWS DESK ಮಾ.31 : ಭಾಗಮಂಡಲ ಪ್ರಾದೇಶಿಕ ಅರಣ್ಯ ವಲಯ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ಭಾಗಮಂಡಲ, ಇವರ ಸಹಯೋಗದಲ್ಲಿ ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ ಅವರು ಶಿಬಿರವನ್ನು ಉದ್ಘಾಟಿಸಿ ಆರೋಗ್ಯ ಸೌಲಭ್ಯದ ಮಾಹಿತಿ ನೀಡಿದರು. ಪ್ರಾದೇಶಿಕ ಅರಣ್ಯ ವಲಯ ಅಧಿಕಾರಿ ಶಂಕರ್ ಅವರು ಮಾತನಾಡಿ ಅರಣ್ಯ ಇಲಾಖೆಯ ವತಿಯಿಂದ ಜನರಿಗೆ ಸಿಗುವ ಸೇವಾ ಸೌಲಭ್ಯ ಮತ್ತು ಆರೋಗ್ಯ ತಪಾಸಣಾ ಶಿಬಿರದ ಕುರಿತು ವಿವರಿಸಿದರು. ಭಾಗಮಂಡಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುನಿಲ್ ಅವರು ಆಸಾoಕ್ರಾಮಿಕ ಮತ್ತು ಸಾಂಕ್ರಾಮಿಕ ಖಾಯಿಲೆಗಳ ಬಗ್ಗೆ ತಿಳಿಸಿದರು. 14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ಅನ್ನು ತಡೆಗಟ್ಟಲು HPV ಲಸಿಕೆಯನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು ಹೆಣ್ಣುಭ್ರೂಣ…
ಮಡಿಕೇರಿ, NEWS DESK ಮಾ.31:-ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಏಪ್ರಿಲ್, 02 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸಬೇಕಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.
ಮಡಿಕೇರಿ, NEWS DESK ಮಾ.31:-ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2026 ರ ಮೇ, 02 ರಿಂದ 2027 ರ ಫೆಬ್ರವರಿ, 28 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಏಪ್ರಿಲ್, 15 ಕೊನೆಯ ದಿನವಾಗಿದೆ. ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯ ವಲಯ, ಮಡಿಕೇರಿ ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ಕಚೇರಿಯನ್ನು ಬೆಳಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು ಅಥವಾ ಅಂತರ್ಜಾಲ https://horticulturedir.karnataka.gov.in ಇಲ್ಲಿ ಅರ್ಜಿಯನ್ನು ಪಡೆಯಬಹುದು. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ತಾಯಿ/ ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ಜಾತಿ ಪ್ರಮಾಣ ಪತ್ರ, ಪೋಟೋ, ತಂದೆ/ತಾಯಿಯವರ ಒಪ್ಪಿಗೆ ಪತ್ರ ಇತ್ಯಾದಿ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ…






