ಮಡಿಕೇರಿ ಫೆ.14 : ಹೆಬ್ಬೆಟ್ಟಗೇರಿ-ದೇವಸ್ತೂರು ಗ್ರಾಮದ ರಸ್ತೆ ಅಬ್ಬಿಪಾಲ್ಸ್ ಜಂಕ್ಷನ್ ನಿಂದ ದೇವಸ್ತೂರು ಗ್ರಾಮದವರೆಗೆ ಸಂಪೂರ್ಣ ಹದಗೆಟ್ಟಿದ್ದು, ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಆಗ್ರಹಿಸಿ ಫೆ.17 ರಂದು ರಸ್ತೆ ತಡೆ ಪ್ರತಿಭಟನೆ ನಡೆಸುವುದಾಗಿ ಹೆಬ್ಬೆಟ್ಟಗೇರಿ ಗ್ರಾಮಸ್ಥರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮಸ್ಥ ಪಿ.ಸಿ.ರಮೇಶ್, ಹೆಬ್ಬೆಟ್ಟಗೇರಿ-ದೇವಸ್ತೂರು ಗ್ರಾಮದ ರಸ್ತೆ ಅಬ್ಬಿಪಾಲ್ಸ್ ಜಂಕ್ಷನ್‍ನಿಂದ ದೇವಸ್ತೂರು ಗ್ರಾಮದವರೆಗೆ ಸುಮಾರು 8 ಕಿ.ಮೀ ನಷ್ಟು ದೂರ ಸಂಪೂರ್ಣ ಹದಗೆಟ್ಟಿದ್ದು, ಪಾದಾಚಾರಿಗಳು ಹಾಗೂ ವಾಹನ ಸವಾರರಿಗೆ ಓಡಾಡಲು ಅನಾನುಕೂಲವಾಗಿದೆ ಎಂದರು. ಗುಂಡಿಮಯ ರಸ್ತೆಗಳಿಂದಾಗಿ ಗ್ರಾಮಸ್ಥರು ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ತೆರಳಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಗ್ರಾಮಕ್ಕೆ ಬರುತ್ತಿದ್ದ ಶಾಲಾ ವಾಹನ ಬಾರದೆ ಇರುವುದರಿಂದ ವಿದ್ಯಾರ್ಥಿಗಳು ಆಟೋದಲ್ಲೇ ತೆರಳಬೇಕಾಗಿದೆ. ಆಟೋ ಚಾಲಕರು ಕೂಡ ಗ್ರಾಮಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೆ ದುಬಾರಿ ಹಣ ಕೇಳುತ್ತಿದ್ದಾರೆ, ಇದರಿಂದಾಗಿ ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಚಿಂತಿತರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಂಜಿನಿಯರ್‍ಗಳಿಗೆ ರಸ್ತೆ…
ಲೇಖಕ: admin
ಮಡಿಕೇರಿ ಫೆ.14 : ಕೊಡಗಿನ ವಿಶಿಷ್ಟ ಭೂ ಹಿಡುವಳಿ ‘ಜಮ್ಮಾ’ ಖಾಸಗಿ ಆಸ್ತಿಯಾಗಿದ್ದು, ಈ ವಿಷಯದ ಗೊಂದಲಗಳು ರಾಜ್ಯ ಉಚ್ಚ ನ್ಯಾಯಾಲಯದ ತೀರ್ಪಿನೊಂದಿಗೆ ಈಗಾಗಲೆ ಇತ್ಯರ್ಥವಾಗಿದೆ. ಹೀಗಿದ್ದೂ ಜಮ್ಮಾ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ನೀಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಅವರು ನೀಡಿರುವ ಹೇಳಿಕೆ ರಾಜಕೀಯ ಪ್ರೇರಿತ ಮತ್ತು ಜನರನ್ನು ಮಾನಸಿಕವಾಗಿ ದುರ್ಬಲರನ್ನಾಗಿ ಮಾಡುವ ದುರುದ್ದೇಶವಾಗಿದೆ ಎಂದು ಕೆಪಿಸಿಸಿ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಎಸ್. ಪೊನ್ನಣ್ಣ ಆರೋಪಿಸಿದ್ದಾರೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಸಚಿವರ ಹೇಳಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಮತ್ತು ಜಿಲ್ಲೆಯ ಜನರ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು. ನ್ಯಾಯಾಲಯದ ತೀರ್ಪಿನ ವಿರುದ್ಧವಾಗಿ ಕಂದಾಯ ಸಚಿವರು ಹೇಳಿಕೆ ನೀಡಿ, ಜಿಲ್ಲೆಯ ಜಮ್ಮಾಜಾಗ ಹೊಂದಿರುವ ಹಿಡುವಳಿದಾರರನ್ನು ಗೊಂದಲ ಮತ್ತು ಆತಂಕಕ್ಕೆ ತಳ್ಳಿದ್ದಾರೆ. ಜಿಲ್ಲೆಯ ಜನರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿ ಚುನಾವಣಾ ಹಂತದಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ನಡೆದಿದೆ ಎಂದು ಟೀಕಿಸಿದರು. ‘ಜಮ್ಮಾ’ ಜಾಗದ ವಿಷಯಕ್ಕೆ ಸಂಬಂಧಿಸಿದಂತೆ ‘ಚಕ್ಕೇರ ಪೂವಯ್ಯ ಮತ್ತು ಕರ್ನಾಟಕ…
ಮಡಿಕೇರಿ ಫೆ.14 : ಪೊನ್ನಂಪೇಟೆ ವ್ಯಾಪ್ತಿಯ ಕೆ.ಬಾಡಗ ಗ್ರಾಮದಲ್ಲಿ ಎರಡು ಅಮಾಯಕ ಜೀವಗಳು ಹುಲಿ ದಾಳಿಗೆ ಬಲಿಯಾಗಲು ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣವೆಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿ ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು. ಭಾನುವಾರ ಚೇತನ್ ಎಂಬಾತನನ್ನು ಹುಲಿ ಕೊಂದು ಹಾಕಿದೆ, ಮರುದಿನ ಬೆಳಗ್ಗೆ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಅರಣ್ಯ ಅಧಿಕಾರಿಗಳು ಚೇತನ್ ಮೃತಪಟ್ಟಾಗಲೇ ಎಚ್ಚೆತ್ತುಕೊಂಡಿದ್ದರೆ ವೃದ್ಧನ ಜೀವ ಉಳಿಯುತ್ತಿತ್ತು ಎಂದು ಅಭಿಪ್ರಾಯಪಟ್ಟರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರತಿನಿಧಿಗಳು ಅಧಿಕಾರಿಗಳಿಗೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಆದೇಶ ಮಾಡದೆ ಭಾವನಾತ್ಮಕ ಭಾಷಣಗಳನ್ನು ಮಾಡುತ್ತಿದ್ದಾರೆ. ಹುಲಿಗಳನ್ನು ಗುಂಡು ಹೊಡೆದು ಕೊಲ್ಲುವ ಮಾತುಗಳನ್ನಾಡುತ್ತಾರೆ. ಹುಲಿಯನ್ನು ಕೊಂದು ಜನರು ಜೈಲಿಗೆ ಹೋಗಬೇಕೆ, ಈ ತಮಾಷೆಯನ್ನು ಇವರು ನೋಡಬೇಕೆ ಎಂದು ಪ್ರಶ್ನಿಸಿದರು. ಜನಪ್ರತಿನಿಧಿಗಳು ಎನಿಸಿಕೊಂಡವರು ನಾಟಕ ಮಾಡುವುದನ್ನು ಬಿಡಬೇಕು, ಜನರ ಜೀವನದೊಂದಿಗೆ ಚೆಲ್ಲಾಟ ಬೇಡ. ಒಂದು ಹುಲಿಯನ್ನು ಕೊಂದಾಕ್ಷಣ ಸಮಸ್ಯೆ ಬಗೆಹರಿದು ಬಿಡಲು ಸಾಧ್ಯವಿಲ್ಲ.…
ಮಡಿಕೇರಿ ಫೆ.14 : ಮೈಸೂರಿನ ಮಹಾರಾಜ ಇಂಡೋರ್ ಹಾಲ್‍ನಲ್ಲಿ ನಡೆದ ವಿ.ಎಸ್.ಕೆ. ಓಪನ್ ನ್ಯಾಷನಲ್ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ವಿ.ಆರ್.ವರ್ಷ ಕಟ್ಟಾ ವಿಭಾಗದಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನ ಪಡೆದಿದ್ದಾಳೆ. ವರ್ಷ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ತರಬೇತುದಾರ ಬಿ.ಎಂ. ಮುಖೇಶ್ ಅವರ ಬಳಿ ತರಬೇತಿ ಪಡೆದಿದ್ದಾಳೆ. ಇವಳು ಬೋಯಿಕೇರಿಯ ರವಿ ಮತ್ತು ಶೈಲಜ ದಂಪತಿಗಳ ಪುತ್ರಿ.
ನಾಪೋಕ್ಲು ಜ.14 : ರೈತರ ಬೆಳವಣಿಗೆಯಲ್ಲಿ ದವಸ ಭಡಾರಗಳ ಪಾತ್ರ ಮಹತ್ವವಾಗಿದ್ದು, ಅವುಗಳ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಸಹಕಾರಿ ಸಂಘಗಳನ್ನು ಬೆಳೆಸುವಲ್ಲಿ ಅನೇಕ ಹಿರಿಯ ಚೇತನಗಳು ತಮ್ಮದೇ ಆದ ಪಾತ್ರವನ್ನು ವಹಿಸಿದ್ದಾರೆ ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ನಂ. 94ನೇ ನೆಲಜಿ ಸಹಕಾರ ದವಸ ಭಂಡಾರ ನಿಯಮಿತದ ನವೀಕೃತಗೊಂಡ ಕಟ್ಟಡ ಸಂಕೀರ್ಣಗಳ ಹಾಗೂ ಶತಮಾನೋತ್ಸವ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಬೋಪಯ್ಯ, ಜಿಲ್ಲೆಯಲ್ಲಿ 53 ದವಸ ಭಂಡಾರಗಳು ಅಸ್ತಿತ್ವದಲ್ಲಿದೆ. ಸಹಕಾರಿ ಸಂಸ್ಥೆಗಳು ಸ್ವಾಯತ್ತಿಕ ಸಂಸ್ಥೆಗಳಾಗಬೇಕು. ಯಾವುದೇ ರಾಜಕೀಯ ಹಸ್ತಕ್ಷೇಪ ಇರಬಾರದು ಎಂದರು. ಸುಲಭದಲ್ಲಿ ರೈತರಿಗೆ ಸಹಕಾರಿ ಸಂಘಗಳ ಮೂಲಕ ಸಾಲ ಸೌಲಭ್ಯ ಸಿಗುತ್ತಿದ್ದು, ರೈತರ ಬೆಳವಣಿಗೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ತರವಾದುದಾಗಿದೆ. ಇಂತಹ ಸಹಕಾರಿ ಸಂಘಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದು ಎಂದರು. ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಹೊರ ಸಭಾಂಗಣ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ರೈತರ ಅಭಿವೃದ್ಧಿ ಆಗಬೇಕಾದರೆ ಸಹಕಾರಿ ಸಂಘಗಳ ಅಗತ್ಯವಿದೆ. ಗ್ರಾಮೀಣ ರೈತರ…
ವಿರಾಜಪೇಟೆ ಫೆ.14 : ಗ್ರಾಮೀಣ ಪ್ರದೇಶದ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯದ 30 ಸಾವಿರ ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ರೂ,600 ಕೋಟಿ ಸಾಲ ನೀಡಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲಿಯಾನ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ಮಹಿಳಾ ಜ್ಞಾನ ವಿಕಾಸ ಕೇಂದ್ರಗಳು ಮತ್ತು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿರುವ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ‘ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದರು. ಈಗಾಗಲೇ ತಂತ್ರಜ್ಞಾನ ಬಹಳಷ್ಟು ಮುಂದುವರಿದಿದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿಯೂ ಮುಂದೆ ಇದ್ದಾರೆ. ಅಗತ್ಯತೆಗಳ ಬಗ್ಗೆ ತಿಳಿದುಕೊಂಡು ಬಹಳಷ್ಟು ಯಶಸ್ವಿಯಾಗಿದ್ದಾರೆ. ಗ್ರಾಮೀಣ ಭಾಗದ ಅಸಕ್ತ ಮಹಿಳೆಯರನ್ನು ಗುರುತಿಸಿ ತರಬೇತಿ ನೀಡಲಾಗುತ್ತಿದೆ. ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಲ ನೀಡುತ್ತಿಲ್ಲ ಬ್ಯಾಂಕ್ ಸಾಲ ನೀಡುತ್ತಿದೆ ಎಂದ ವಸಂತ ಸಾಲಿಯಾನ್ ಅವರು ಯೋಜನೆಯ ಸೌಲಭ್ಯಗಳನ್ನು ಸದಸ್ಯರು ಸರಿಯಾಗಿ…
ವಿರಾಜಪೇಟೆ ಫೆ.14 : ಕೋಟೆಕೊಪ್ಪ ಗ್ರಾಮದ ಶ್ರೀ ಬೈತೂರೇಶ್ವರ ದೇವಸ್ಥಾನದ ವಾರ್ಷಿಕ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ವಾರ್ಷಿಕೋತ್ಸವದ ಪ್ರಯುಕ್ತ ದೇವರಿಗೆ ವಿವಿಧ ಪೂಜೆ ವಿಧಿ ವಿಧಾನಗಳು ಹಾಗೂ ಮಹಾಪೂಜೆ ನಡೆದು ಭಕ್ತರಿಗೆ ಪ್ರಸಾದ ವಿನಿಯೋಗದ ಬಳಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವಿ.ಜಿ.ಮಂಜು, ಕಾರ್ಯದರ್ಶಿ ವಿ.ಆರ್ ಸಂದೀಪ, ನೂತನ ಅಧ್ಯಕ್ಷ ವಿ.ಎಂ. ಶಿವರಾಜ್, ಆಡಳಿತ ಮಂಡಳಿಯ ಸದಸ್ಯರಾದ ವಿ.ಬಿ. ನಾಗೇಶ್, ವಿ.ಕೆ.ಕಿರಣ್, ವಿ.ಎಸ್. ಪ್ರಸನ್ನ, ವಿ.ಪಿ. ಉಮೇಶ್, ವಿ.ಜೆ. ರವಿ, ವಿ.ಎ. ಭರತ್, ವಿ.ಎನ್. ಗೋಪಿ, ವಿ.ಆರ್. ಸುಧಿ ಹಾಗೂ ಗ್ರಾಮದ ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಕುಶಾಲನಗರ, ಫೆ.14 : ಕುಶಾಲನಗರ ಪುರಸಭೆ ವ್ಯಾಪ್ತಿಯ 16 ವಾರ್ಡ್ ಗಳಲ್ಲಿ ನಗರೋತ್ಹಾನ ಯೋಜನೆಯಡಿ ರೂ.5 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಯಿತು. ಕುಶಾಲನಗರ ಪುರಸಭೆ ಅಧ್ಯಕ್ಷ ಬಿ.ಜೈವರ್ಧನ್, ಮುಖ್ಯಾಧಿಕಾರಿ ಶಿವಪ್ಪನಾಯಕ್, ಸದಸ್ಯರಾದ ಎಂ.ಬಿ.ಸುರೇಶ್, ಕೆ.ಜಿ.ಮನು ಹಾಗೂ ಅಭಿಯಂತರ ರಂಗರಾಮ್ ಅವರುಗಳ ತಂಡ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ವಿವಿಧ ವಾರ್ಡ್ ಗಳಿಗೆ ಭೇಟಿ ನೀಡಿ ಈಗಾಗಲೆ ಮುಕ್ತಾಯಗೊಂಡಿರುವ ಕಾಂಕ್ರಿಟ್ ರಸ್ತೆ, ಚರಂಡಿ ಕಾಮಗಾರಿ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ವೀಕ್ಷಿಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಪುರಸಭೆ ಅಧ್ಯಕ್ಷ ಬಿ.ಜೈವರ್ಧನ್, ಶಾಸಕ ಅಪ್ಪಚ್ಚುರಂಜನ್ ಅವರ ಕಾಳಜಿಯಿಂದ ಕುಶಾಲನಗರ ಪಟ್ಟಣದ ವಿವಿಧ ಬಡಾವಣೆಗಳಿಗೆ ಸರಕಾರದಿಂದ ಅನುದಾನ ದೊರಕಿದ್ದು ಶಾಸಕರು ಕಾಮಗಾರಿಗಳಿಗೆ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದ್ದರು. ಸರಕಾರದ ಮಾರ್ಗಸೂಚಿಯಂತೆ ಪುರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆಯಾ ವಾರ್ಡ್ ವ್ಯಾಪ್ತಿಯಲ್ಲಿನ ಕಾಮಗಾರಿಗಳನ್ನು ಆಯಾ ವಾರ್ಡ್ ಸದಸ್ಯರು ಉತ್ತಮ ಗುಣಮಟ್ಟದಲ್ಲಿ ಕೈಗೊಳ್ಳಲಾಗುತ್ತಿದೆ. ಶಾಸಕ ಅಪ್ಪಚ್ಚುರಂಜನ್ ಅವರ ಸೂಚನೆಯಂತೆ ಅತಿ ಶೀಘ್ರದಲ್ಲಿ ಕಾಮಗಾರಿಗಳನ್ನು…
ಕುಶಾಲನಗರ, ಫೆ. 13 : ಕುಶಾಲನಗರ ತಾಲೂಕಿನ ತೊರೆನೂರು ಗ್ರಾ.ಪಂ ವ್ಯಾಪ್ತಿಯ ರೇವೇಗೌಡನ ಕೊಪ್ಪಲು ಗ್ರಾಮದ ಐತಿಹಾಸಿಕ ಶ್ರೀ ಶನೇಶ್ಚರ ಸ್ವಾಮಿ ದೇವಾಲಯದ ಆವರಣದಲ್ಲಿ ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ಸತ್ಯ ನಾರಾಯಣ ಸ್ವಾಮಿ ಪೂಜೆ ಮತ್ತು ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳಿಗೆ, ಹಾಗೂ ಶ್ರೀ ಡಾ, ಬಾಲಗಂಗಾಧರನಾಥ ಸ್ವಾಮಿಜಿ ಅವರಿಗೆ ನುಡಿ ನಮನ ಕಾರ್ಯಕ್ರಮ ಫೆ. 18 ರಂದು ಶ್ರೀ ಶನೇಶ್ಚರ ದೇವಾಲಯ ಅಭಿವೃದ್ಧಿ ಸಮಿತಿಯ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಸಮಿತಿಯ ಕಾರ್ಯದರ್ಶಿ ಕೆ.ಎಸ್. ಕೃಷ್ಣ ಗೌಡ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, 18 ರಂದು ಬೆಳಿಗ್ಗೆ ಮಹಾಶಿವರಾತ್ರಿ ಹಬ್ಬದ ಅಂಗವಾಗಿ 8 ಗಂಟೆಗೆ ಗಣಪತಿ ಹೋಮ, ನವಗ್ರಹ ಪೂಜೆ, ವಿವಿಧ ಅಭಿಷೇಕ ಸೇರಿದಂತೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ನೆರವೇರಿಸಲ್ಲಿದ್ದಾರೆ. ತೊರೆನೂರು ವಿರಕ್ತ ಮಠದ…
ಸೋಮವಾರಪೇಟೆ,ಫೆ.13 : ಆಲೇಕಟ್ಟೆ ರಸ್ತೆಯ ಆರ್‍ಎಂಸಿ ಮಾರುಕಟ್ಟೆ ಎದುರು ನೂತನವಾಗಿ ನಿರ್ಮಾಣಗೊಂಡಿರುವ, ಶ್ರೀ ಲಕ್ಷ್ಮೀವೆಂಕಟರಮಣ ದೇವಾಲಯದ ಲೋಕಾರ್ಪಣೆ ಹಾಗೂ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಜರುಗಿತು. ಗಣಪತಿ ಹೋಮದೊಂದಿಗೆ ಆರಂಭಗೊಂಡ ದೇವಾಲಯ ಲೋಕಾರ್ಪಣೆ ಹಾಗೂ ಶ್ರೀ ದೇವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಪುಣ್ಯಾಹ, ದೇವನಾಂದಿ, ಅಂಕುರಾರ್ಪಣ, ಕಂಕಣ ಬಂಧನ, ಗಣಹೋಮ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಸುದರ್ಶನ ಹೋಮ, ವಾಸ್ತು ಪೂಜೆ, ದಿಗ್ಬಲಿ ಹಾಗೂ ಮಹಾಮಂಗಳಾರತಿ ಸೇರಿದಂತೆ ಇನ್ನಿತರ ಪೂಜಾ ಕೈಂಕರ್ಯಗಳು ನೆರವೇರಿತು. ನಂತರ ಕಲಾನ್ಯಾಸ, ತತ್ವನ್ಯಾಸಾದಿ ಪೂಜೆಗಳು, ಕಲಾತತ್ತ್ವಾದಿವಾಸ ಹೋಮದ ತರುವಾಯ 12 ಗಂಟೆಗೆ ಪೂರ್ಣಾಹುತಿ, ಶ್ರೀ ದೇವರಿಗೆ ಕಳಶಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ಜರುಗಿತು. ಪ್ರತಿಷ್ಠಾಪನಾ ಮಹೋತ್ಸವದಲ್ಲಿ ದೇವಾಲಯ ಸಮಿತಿ ಅಧ್ಯಕ್ಷರಾದ ಹೆಚ್.ಪಿ.ರಾಮು, ಪ್ರಧಾನ ಕಾರ್ಯದರ್ಶಿ ಸಿ.ಕೆ.ಮೋಹನ್, ಕಾರ್ಯದರ್ಶಿ ಎಂ.ಜಿ. ಪ್ರವೀಣ್ ಕುಮಾರ್, ಖಜಾಂಚಿ ಬಿ.ಹೆಚ್. ಯೋಗೇಶ್, ಪದಾಧಿಕಾರಿಗಳಾದ ಎಂ.ಬಿ.ಉಮೇಶ್, ಬಿ.ಡಿ.ಗೋವಿಂದ ಸೇರಿದಂತೆ ಸಾವಿರಾರು ಭಕ್ತಾದಿಗಳು ಭಾಗವಹಿಸಿದ್ದರು.






