ಬೆಂಗಳೂರು ಮಾ.10 : ಕಾಫಿ ಪುಡಿಯೊಂದಿಗೆ ಚಿಕೋರಿ ಬೆರೆಸುವ ಪ್ರಕ್ರಿಯೆ ಒಂದು ಕಲಬೆರಕೆಯಾಗಿದೆ. ಆದ್ದರಿಂದ ಕಾಫಿ ಮಂಡಳಿಯ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡು ಚಿಕೋರಿಯನ್ನು ನಿಷೇಧಿಸಬೇಕೆಂದು ಚಿಹಾಕೊ ಕಾಫಿ ಸಹಕಾರ ಸಂಗಮ ಸಂಘಟನೆಯ ಸಂಸ್ಥಾಪಕ ಎಸಳೂರು ಉದಯಕುಮಾರ್ ಆಗ್ರಹಿಸಿದ್ದಾರೆ. ಈ ಕುರಿತು ಕೇಂದ್ರ ಕಾಫಿ ಮಂಡಳಿಯ ಕಾರ್ಯದರ್ಶಿ ಜಗದೀಶ್ ಅವರಿಗೆ ಇಂದು ಮನವಿ ಸಲ್ಲಿಸಿದರು. ಹಿಂದೆ ಕಾಫಿ ಮಂಡಳಿಯಲ್ಲಿದ್ದ ಭ್ರಷ್ಟರಿಂದ ಚಿಕೋರಿಯನ್ನು ಕಾಫಿ ಪುಡಿಯೊಂದಿಗೆ ಬೆರೆಸುವ ವಂಚನೆಗೆ ಅವಕಾಶ ಮಾಡಿಕೊಡಲಾಗಿತ್ತು. ಇದು ಬೆಳೆಗಾರರು ಮತ್ತು ಕಾಫಿ ಗ್ರಾಹಕರಿಬ್ಬರಿಗೂ ಅಪಾರ ಕಷ್ಟ ನಷ್ಟಗಳನ್ನು ತಂದಿದೆ. ಆದ್ದರಿಂದ ಈಗಲಾದರೂ ಕಾಫಿ ಮಂಡಳಿ ಮತ್ತು ಸದಸ್ಯರು ಎಚ್ಚೆತ್ತುಕೊಂಡು ಚಿಕೋರಿಯನ್ನು ನಿಷೇಧಿಸಬೇಕು. ಇದರಿಂದ ಕಾಫಿಯ ಆಂತರಿಕ ಮಾರುಕಟ್ಟೆ ಅಭಿವೃದ್ಧಿಗೆ ಹೆಬ್ಬಾಗಿಲು ತೆರೆದಂತಾಗುತ್ತದೆ. ಅಲ್ಲದೆ ಕಾಫಿ ಪ್ರಿಯ ಗ್ರಾಹಕರಿಗೂ ಪರಿಶುದ್ಧವಾದ ಕಾಫಿ ಪುಡಿ ಲಭ್ಯವಾಗಲು ದಾರಿಮಾಡಿಕೊಟ್ಟಂತಾಗುತ್ತದೆ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಆರೋಗ್ಯದ ದೃಷ್ಟಿಯಿಂದಲೂ ಕಾಫಿ ಪುಡಿಯೊಂದಿಗೆ ಚಿಕೋರಿ ಬೆರೆಸುವುದರಿಂದ ಅನೇಕ ದುಷ್ಪರಿಣಾಮಗಳು ಉಂಟಾಗುತ್ತವೆ. ಚಿಕೋರಿ ಬೆರೆಸಿದ ಕಾಫಿ…
ಲೇಖಕ: admin
ಮಡಿಕೇರಿ ಮಾ.10 : ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗುಹ್ಯ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪವೇ ನಿರ್ಮಾಣವಾಗಿರುವ ನೂತನ ಬಡಾವಣೆಗೆ ನೇತಾಜಿ ಬಡಾವಣೆ ಎಂದು ನಾಮಕರಣ ಮಾಡಲಾಗಿದ್ದು, ನಾಮಫಲಕವನ್ನು ಸಿದ್ದಾಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ತುಳಸಿ ಗಣಪತಿ ಅನಾವರಣಗೊಳಿಸಿದರು. ಈ ಸಂದರ್ಭ ಪಿಡಿಓ ಮನ್ ಮೋಹನ್, ಗ್ರಾ.ಪಂ ಸದಸ್ಯರುಗಳಾದ ಆನಂದ್, ಲೋಕೇಶ್,ಹಸ್ಸನ್, ಪ್ರೇಮಾ ಗೋಪಾಲ್, ಪೂರ್ಣಿಮಾ ಸೇರಿದಂತೆ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.
ಮಡಿಕೇರಿ ಮಾ.10 : ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಬೂತ್ ಮಟ್ಟದಲ್ಲಿ ಮನೆ ಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು. ಕಾಂಗ್ರೆಸ್ ನಗರಾಧ್ಯಕ್ಷ ಬಿ.ವೈ.ರಾಜೇಶ್ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಬೂತ್ ಸಂಖ್ಯೆ 203 ಹಾಗೂ 204ರಲ್ಲಿ ಬೂತ್ ಅಧ್ಯಕ್ಷ ಹಸೈನ್ ಹಾಗೂ ಎಂ.ಎಂ.ಯಾಕುಬ್ ಮುಂದಾಳತ್ವದಲ್ಲಿ ತ್ಯಾಗರಾಜ ನಗರದ ಮನೆಗಳಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಲಾಯಿತು. ಕಾಂಗ್ರೆಸ್ ನ ಮೊದಲ ಗ್ಯಾರಂಟಿ ಕಾರ್ಡ್ “ಗೃಹಜ್ಯೋತಿ” ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ಪೂರೈಕೆ, 2ನೇ ಗ್ಯಾರಂಟಿ ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು “ಗೃಹಲಕ್ಷ್ಮಿ” ಯೋಜನೆ ಜಾರಿ ಮತ್ತು 3ನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್‍ದಾರರಿಗೆ 10 ಕೆ.ಜಿ.ಅಕ್ಕಿ ಉಚಿತವಾಗಿ ನೀಡುವ ಭರವಸೆಯ ಕಾರ್ಡ್‍ನ್ನು ಮನೆ ಮನೆಗೆ ವಿತರಿಸಿದರು. ಈ ಸಂದರ್ಭ ಕೆಪಿಸಿಸಿ ಮಾದ್ಯಮ ಸಂವಹನ ವಕ್ತಾರರು ಹಾಗೂ ಪ್ರಚಾರ ಸಮಿತಿ ಜಿಲ್ಲಾ ಉಸ್ತುವಾರಿ ಟಿ.ಪಿ.ರಮೇಶ್, ಜಿಲ್ಲಾ ಕಾಂಗ್ರೆಸ್…
ಮಡಿಕೇರಿ ಮಾ.10 : ಕೊಡಗು ಜಿಲ್ಲೆಯಲ್ಲಿ ಮಾ.12 ರಂದು ನಡೆಯುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಗಳ 6 ನೇ ತರಗತಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸೋಮವಾರಪೇಟೆ ಸಂತ ಜೋಸೆಫರ ಸಂಯುಕ್ತ ಪಿಯು ಕಾಲೇಜು ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು…
ಮಡಿಕೇರಿ ಮಾ.10 : ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಬೆಂಗಳೂರು ಮತ್ತು ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ದೊಡ್ಡೇಗೌಡ ಜಗದ್ವಿಖ್ಯಾತ ವಿಜ್ಞಾನಿ ಸರ್. ಸಿ.ವಿ.ರಾಮನ್ ಅವರು ವಿಜ್ಞಾನಕ್ಕೆ ನೀಡಿರುವ ಕೊಡುಗೆಯನ್ನು ವಿದ್ಯಾರ್ಥಿಗಳು ದೈನಂದಿನ ಬದುಕಿನಲ್ಲಿ ವೈಜ್ಞಾನಿಕ ಪ್ರಜ್ಞೆ ಮೂಡಿಸಿಕೊಳ್ಳುವುದು ತುಂಬಾ ಅವಶ್ಯಕ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಇಂತಹ ವ್ಯಕ್ತಿತ್ವ ಹಾಗೂ ಆದರ್ಶವನ್ನಾಗಿಸಿ ಅವರ ಹೆಜ್ಜೆಯಲ್ಲಿ ಸಾಗಬೇಕು ಎಂದರು. ಶಾಲೆಯ ಉಪ ಪ್ರಾಂಶುಪಾಲರಾದ ನಳಿನಿ ಮಾತನಾಡಿ ಸರ್.ಸಿ.ವಿ.ರಾಮನ್ ಅವರ ಜೀವನ ಮತ್ತು ಸಾಧನೆಯನ್ನು ವಿದ್ಯಾರ್ಥಿಗಳಿಗೆ ವಿವರಿಸುತ್ತಾ ವೈಜ್ಞಾನಿಕ ಮನೋಭಾವದ ಜೊತೆಗೆ ಸಾಮಾಜಿಕ ಕಳಕಳಿಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದರು. ಕೊಡಗು ಜಿಲ್ಲಾ ಪಂಚಾಯತ್ ಎನ್.ಆರ್.ಡಿ.ಎಂ.ಎಸ್. ಅಧಿಕಾರಿ ಸೂರಜ್, ‘ರಾಷ್ಟ್ರೀಯ ವಿಜ್ಞಾನ ದಿನʼದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಇತರೆ…
ಮಡಿಕೇರಿ ಮಾ.10 : ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಭೂಮಿ ಪೂಜೆ ನೆರವೇರಿಸಿದರು. ಸುಮಾರು 4.90 ಲಕ್ಷ ರೂ ವೆಚ್ಚದಲ್ಲಿ ನಗರಸಭಾ ನಿಧಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಮಡಿಕೇರಿ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು 40 ಕೋಟಿ ರೂ ಬಿಡುಗಡೆಯಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳು ತ್ವರಿತವಾಗಿ ನಡೆಯುತ್ತಿವೆ ಎಂದು ತಿಳಿಸಿದರು. ನಗರಸಭಾ ನಿಧಿಯಿಂದ 4.90 ಲಕ್ಷ ರೂ ವೆಚ್ಚದಲ್ಲಿ ಮಡಿಕೇರಿ ನಗರದ ಎಲ್ಲಾ ವಾರ್ಡ್‍ಗಳಲ್ಲಿ ‘ನಾಮಫಲಕ’ ಅಳವಡಿಸಲಾಗುತ್ತಿದೆ ಎಂದು ಅಪ್ಪಚ್ಚು ರಂಜನ್ ಅವರು ಮಾಹಿತಿ ನೀಡಿದರು. 2022-23 ನೇ ಸಾಲಿನ 15 ನೇ ಹಣಕಾಸು ಆಯೋಗದ ಅನುದಾನದಡಿ ನಗರಸಭೆಯ ಎಲ್ಲಾ ವಾರ್ಡ್‍ಗಳಲ್ಲಿ ಸುಮಾರು 11.84 ಲಕ್ಷ ರೂ ವೆಚ್ಚದಲ್ಲಿ ಎಲ್‍ಇಡಿ ಬೀದಿ ದೀಪ ಅಳವಡಿಸಲಾಗುತ್ತಿದೆ ಎಂದು ಶಾಸಕರು ತಿಳಿಸಿದರು. ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ವಿಕೇಂದ್ರಿಕೃತ ತ್ಯಾಜ್ಯ ಗೊಬ್ಬರ ಸಂಸ್ಕರಣ ಘಟಕ ನಿರ್ಮಾಣ ಕಾಮಗಾರಿಗೆ…
ಮಡಿಕೇರಿ ಮಾ.10 : ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕೊಡಗು ಜಿಲ್ಲಾ ಜಾತ್ಯಾತೀತ ಜನತಾದಳ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಎ.ವಿ ಶಾಲೆಯಿಂದ ಮೆರವಣಿಗೆ ಮೂಲಕ ಘೋಷಣೆಗಳೊಂದಿಗೆ ಸಾಗಿದ ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಸಿಲಿಂಡರ್‍ಗಳ ಅಣುಕು ಶವಯಾತ್ರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ, ನಗರ ಪ್ರದೇಶ ಮಾತ್ರವಲ್ಲದೇ ಹಳ್ಳಿಗಳಲ್ಲೂ ದಿನನಿತ್ಯ ಅಡುಗೆ ಅನಿಲಕ್ಕೆ ಜನರು ಅವಲಂಬಿತರಾಗಿದ್ದಾರೆ. ರೂ.450 ಇದ್ದ ಅಡುಗೆ ಇದೀಗ ರೂ.1140 ಕ್ಕೆ ಏರಿಕೆ ಮಾಡಲಾಗಿದೆ. ಹೀಗಾದರೆ ಜನಸಾಮಾನ್ಯರು ಬದುಕು ಕಟ್ಟಿಕೊಳ್ಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಗಣೇಶ್, ಮದ್ಯಮ ವರ್ಗದ ಜನ, ಬಡವರು, ಆಟೋ ಚಾಲಕರು, ಕಾರು ಚಾಲಕರು, ಕೂಲಿ ಕಾರ್ಮಿಕರಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ತೊಂದರೆಯಾಗಲಿದ್ದು, ಸರ್ಕಾರ ಬಡವರ ಮೇಲಿನ ಬೆಲೆ ಏರಿಕೆಯನ್ನು ಕಡಿಮೆಗೊಳಿಸಬೇಕು ಎಂದು ಒತ್ತಾಯಿಸಿದರು. ರಾಜ್ಯ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಆಲಿ, ಜಿಲ್ಲಾ ಪ್ರಧಾನ…
ನಾಪೋಕ್ಲು ಮಾ.10 : ನಾಪೋಕ್ಲು ಸಮೀಪದ ಕೊಟ್ಟಮುಡಿಯ ಕೂರ್ಗ್ ಯೂತ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲಾದ ಮೊದಲನೇ ವರ್ಷದ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ಪೋಸ್ಟಲ್ ತಂಡ ಪ್ರಶಸ್ತಿಯನ್ನು ಮುಡುಗೇರಿಸಿಕೊಂಡಿದೆ. ಸಮೀಪದ ಕೊಟ್ಟಮುಡಿ ಜಂಕ್ಷನ್ ಬಳಿಯ ಎಚ್ ಆಂಡ್ ಎಸ್ ಮೈದಾನದಲ್ಲಿ ನಡೆದ ಆಕರ್ಷಕ ಫೈನಲ್ ಪಂದ್ಯಾಟದಲ್ಲಿ ರಜಾಕ್ ಮಾಲಿಕತ್ವದ ಬೆಂಗಳೂರು ರೈಲ್ವೇಸ್ ತಂಡವನ್ನು ಮಣಿಸಿ ಪರವಂಡ ಸಿರಾಜ್ ಮಾಲಿಕತ್ವದ ಕರ್ನಾಟಕ ಪೋಸ್ಟಲ್ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಬೆಂಗಳೂರು ರೈಲ್ವೇಸ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಗೊಂಡಿತು. ಇದಕ್ಕೂ ಮೊದಲು ನಡೆದ ಉದ್ಘಾಟನಾ ಸಮಾರಂಭದಲ್ಲಿ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಹಾಗೂ ಕಾಂಗ್ರೆಸ್ಸಿನ ಯುವನಾಯಕ ಮಂತರ್ ಗೌಡ ಚೆಂಡಿನ ಪ್ರಯೋಗದೊಂದಿಗೆ ಪಂದ್ಯಾವಳಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ ಕೊಡಗು ಕ್ರೀಡೆಗೆ ಪ್ರಸಿದ್ಧವಾದ ಜಿಲ್ಲೆಯಾಗಿದೆ. ಆದರೂ ಗ್ರಾಮ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳಿಗೆ ಸಮರ್ಪಕ ಕ್ರೀಡಾ ಸೌಲಭ್ಯಗಳ ಕೊರತೆ ಇದೆ. ಇದರಿಂದ ಕ್ರೀಡಾ ಕ್ಷೇತ್ರದಲ್ಲಿ ಮುಂದುವರೆಯಲು…
ಮಡಿಕೇರಿ ಮಾ.10 : ಕರಿಕೆ ಗ್ರಾಮದ ಕುಂಡತ್ತಿಕಾನ ಅರಣ್ಯದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ವ್ಯಾಪಕವಾಗಿ ಹಬ್ಬಿದೆ. ಇಂದು ಮಧ್ಯಾಹ್ನ ಗ್ರಾಮದ ಪಟ್ಟಿ ದೇವಯ್ಯ ಎಂಬವರ ಮನೆ ಸಮೀಪ ಬಿದಿರಿಗೆ ಬೆಂಕಿ ಹತ್ತಿಕೊಂಡಿದ್ದು, ಕಾಡಿಚ್ಚು ವ್ಯಾಪಕವಾಗಿ ಉರಿಯುತ್ತಿದೆ. ಅಗ್ನಿಶಾಮಕ ದಳ ಹಾಗೂ ಸಾರ್ವಜನಿಕರ ನೆರವಿನೊಂದಿಗೆ ವ್ಯಾಪಕವಾಗಿ ಹಬ್ಬಿದ ಬೆಂಕಿಯನ್ನು ನಂದಿಸುವ ಪ್ರಯತ್ನ ನಡೆಯುತ್ತಿದೆ.
ಮಡಿಕೇರಿ ಮಾ.10 : ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣದ ಸುಂಕದಳ್ಳಿ ಗ್ರಾಮ ನಿವಾಸಿ ನಿಶಾಂತ್.ಎಸ್.ಜಿ.(20) ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿ ಇದ್ದ 170 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ಒಂದು ತನಿಖಾ ತಂಡ ರಚಿಸಲಾಗಿತ್ತು. ಮಾ.9ರಂದು ಕುಶಾಲನಗರ ಗೌಡ ಸಮಾಜದ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಈ ತಂಡಕ್ಕೆ ಖಚಿತ ಮಾಹಿತಿ ಲಭಿಸಿತ್ತು. ದಾಳಿ ನಡೆಸಿದ ಆರೋಪಿಗಳು ಆರೋಪಿಯನ್ನು ವಶಕ್ಕೆ ಪಡೆದರು. ಸೋಮವಾರಪೇಟೆ ಡಿವೈಎಸ್‍ಪಿ ಗಂಗಾಧರಪ್ಪ. ಆರ್.ವಿ, ಕುಶಾಲನಗರ ನಗರ ಪೊಲೀಸ್ ಠಾಣೆ ವೃತ್ತನಿರೀಕ್ಷಕ ಶ್ರೀಕಾಂತ್, ಉಪ ನಿರೀಕ್ಷಕ ಲೋಹಿತ್, ಹಾಗೂ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ::: ಮಾಹಿತಿ ನೀಡಿ :::…






