ಲೇಖಕ: admin

ವಿರಾಜಪೇಟೆ ಫೆ.11 : ಮಕ್ಕಳ ಬಗ್ಗೆ ಪೋಷಕರಿಗೆ ಇರುವಷ್ಟೇ ಕಾಳಜಿ ಶಿಕ್ಷಕರಿಗೂ ಇರುತ್ತದೆ ಎಂದು ಟಿ.ಪಿ.ರಮೇಶ್ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಪುರಭವನದಲ್ಲಿ ನಡೆದ ನಗರದ ದಖ್ಖನಿ ಮೊಹಲ್ಲಾದಲ್ಲಿರುವ ಮೌಂಟೇನ್ ವ್ಯೂ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಹೆಚ್ಚಿನ ಸಮಯ ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರುವುದರಿಂದ ಮಕ್ಕಳ ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಹೇಳಿದರು. ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳ ಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ದೇಹದಾಡ್ರ್ಯ ಹಾಗೂ ಆರೋಗ್ಯ ಹೊಂದುವಂತೆ ತಿಳಿಸಿದರು. ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಜೇಶ್ ಪದ್ಮನಾಭ ಮಾತನಾಡಿ, ಶಾಲೆಯ ಎಲ್ಲ ಮಕ್ಕಳು ಒಳ್ಳೆಯ ರೀತಿ ಓದಿ ಹೆಚ್ಚಿನ ಫಲಿತಾಂಶವನ್ನು ಪಡೆದು ಶಾಲೆಗೆ ಒಳ್ಳೆ ಕೀರ್ತಿ ತರಬೇಕು. ಮಕ್ಕಳು…

Read More

ಮಡಿಕೇರಿ ಫೆ.11 :  ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿ ಕೂಟಿಯಾಲ ಸಂಪರ್ಕ ರಸ್ತೆಗೆ ರೂ.2 ಕೋಟಿ 60 ಲಕ್ಷ ಅನುದಾನ ಸರಕಾರದಿಂದ ಮಂಜೂರಾಗಿದ್ದು, ರಸ್ತೆ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.

Read More

ಮಡಿಕೇರಿ ಫೆ.11 :  ಸಣ್ಣ ನೀರಾವರಿ ಇಲಾಖಾ ಅನುದಾನದಲ್ಲಿ ಪೊನ್ನಂಪೇಟೆ ತಾಲ್ಲೂಕು, ಬಿರುನಾಣಿ ಗ್ರಾ.ಪಂ ವ್ಯಾಪ್ತಿಯ ಮತ್ಯಾನಿಯಲ್ಲಿ ರೂ.1 ಕೋಟಿ 65 ಲಕ್ಷ ಅನುದಾನದಲ್ಲಿ ನಿರ್ಮಿಸಲಾದ ಚೆಕ್ ಡ್ಯಾಮ್ ಮತ್ತು ರೂ.3 ಕೋಟಿ ಅನುದಾನದಲ್ಲಿ ನೀಟ್ ಕುಂದ್ ನಲ್ಲಿ ನಿರ್ಮಿಸಲಾದ ಸೇತುವೆ ಸಹಿತ ಕಿಂಡಿ ಅಣೆಕಟ್ಟನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.

Read More

ಮಡಿಕೇರಿ ಫೆ.11 :  ಪೊನ್ನಂಪೇಟೆ ತಾಲ್ಲೂಕು, ಬಿ.ಶೆಟ್ಟಗೇರಿ ಗ್ರಾ.ಪಂ ವ್ಯಾಪ್ತಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಕೊಂಗಣ ವೇಡಿಬೆಲು ಪರಿಶಿಷ್ಟ ಪಂಗಡ ಕಾಲೋನಿ ಸಂಪರ್ಕ ರಸ್ತೆಗೆ ರೂ.60 ಲಕ್ಷ ಮತ್ತು ಪಾಂಡಂಡ ಕೆಂದರೆಕಾಡು ಪರಿಶಿಷ್ಟ ಪಂಗಡ ಕಾಲೋನಿ ಸಂಪರ್ಕ ರಸ್ತೆಗೆ 55 ಲಕ್ಷ ಅನುದಾನ ಕಾವೇರಿ ನೀರಾವರಿ ನಿಗಮದಿಂದ ಒದಗಿಸಲಾಗಿದ್ದು, ಭೂಮಿ ಪೂಜೆ ನೆರವೇರಿಸಲಾಯಿತು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

Read More

ಮಡಿಕೇರಿ ಫೆ.11 :  ವಿರಾಜಪೇಟೆ ಪುರಸಭೆ ಅನುದಾನದಲ್ಲಿ ಪುರಸಭಾ ವ್ಯಾಪ್ತಿಯ 9 ಅನಿಲ ರಹಿತ ಕುಟುಂಬಗಳಿಗೆ ಅಡುಗೆ ಅನಿಲ ಸಂಪರ್ಕ ಮಂಜೂರಾಗಿದ್ದು, ಶಾಸಕ ಕೆ.ಜಿ.ಬೋಪಯ್ಯ ಅವರು  ಪಲಾನುಭವಿಗಳಿಗೆ  ವಿತರಿಸಿದರು.

Read More

ಮಡಿಕೇರಿ ಫೆ.11 :  ಕಾರ್ಮಿಕ ಇಲಾಖೆ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಕಟ್ಟಡ ಕಾರ್ಮಿಕರ 180 ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿಗಳ ಕಿಟ್ ಮತ್ತು 77 ಮಕ್ಕಳಿಗೆ ಟ್ಯಾಬ್ ಗಳು ಮಂಜೂರಾಗಿದ್ದು, ಶಾಸಕ ಕೆ.ಜಿ.ಬೋಪಯ್ಯ ಅವರು ವಿರಾಜಪೇಟೆ ಕಛೇರಿಯಲ್ಲಿ ಪಲಾನುಭವಿಗಳಿಗೆ  ವಿತರಿಸಿದರು.

Read More

ಮಡಿಕೇರಿ ಫೆ.11 :   ಪೊನ್ನಂಪೇಟೆ ತಾಲ್ಲೂಕು, ಹಾತೂರು ಗ್ರಾ.ಪಂ ವ್ಯಾಪ್ತಿಯ ಕುಂದ ಬಸವೇಶ್ವರ ಪರಿಶಿಷ್ಟ ಪಂಗಡ ಕಾಲೋನಿ ಸಂಪರ್ಕ ರಸ್ತೆಗೆ ರೂ.80 ಲಕ್ಷ ಅನುದಾನ ಕಾವೇರಿ ನೀರಾವರಿ ನಿಗಮದಿಂದ ಒದಗಿಸಲಾಗಿದ್ದು, ರಸ್ತೆ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಈ  ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.

Read More

ಮಡಿಕೇರಿ ಫೆ.11 :  ಕುಂಜಿಲ ಕಕ್ಕಬ್ಬೆ ಸಮೀಪದ ವಯಕೋಲಿನಲ್ಲಿ ಪುಳಿಙೋಂ ಔಲಿಯಾಕಳ ಹೆಸರಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುವ ಉರೂಸ್  ಸಮಾರಂಭವು ಈ ಬಾರಿ  ಏ.29 ಮತ್ತು 30 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ವಯಕೋಲ್ ಆಡಳಿತ ಮಂಡಳಿ ತಿಳಿಸಿದೆ.

Read More

ನಾಪೋಕ್ಲು ಫೆ.11 :  ಇತಿಹಾಸ ಪ್ರಸಿದ್ಧ ನಾಪೋಕ್ಲು ಸಮೀಪದ ಚೆರಿಯಪರಂಬು ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಅಬ್ದುಲ್ ರಾಹ್ಮಾನ್ ವಲಿಯುಲ್ಲಾಹಿ ಹಾಗೂ ಅವುಲಿಯಾಗಳ ಉರೂಸ್ ಸಮಾರಂಭಕ್ಕೆ ಗಣ್ಯರು ಚಾಲನೆ ನೀಡಿದರು. ಜುಮಾ ನಮಾಜಿನ ಬಳಿಕ ದಫ್ ಪ್ರದರ್ಶನ ದೊಂದಿಗೆ ದರ್ಗಾಗೆ ತೆರಳಿದ ಬಾಂಧವರು ಮಸೀದಿಯ ಖತೀಬರಾದ ಹಂಝ ರಹ್ಮಾನಿ ಅವರ ನೇತೃತ್ವದಲ್ಲಿ ಮಖಾಂ ಝಿಯಾರತ್ ಹಾಗೂ ವಿಶೇಷ ಪ್ರಾರ್ಥನೆ ನಡೆಯಿತು. ಬಳಿಕ ಚೆರಿಯಪರಂಬು ಮುಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಮಂಡಳಿ ಅಧ್ಯಕ್ಷ ಕೆ.ಎಚ್.ಅಹಮದ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಫೆ.14ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಉರೂಸ್ ಕಾರ್ಯಕ್ರಮ ನಡೆಯಲಿದೆ. ಫೆ.13 ಸೋಮವಾರ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು. ಈ ಕಾರ್ಯಕ್ರಮದಲ್ಲಿ ಧಾರ್ಮಿಕ ಪಂಡಿತರು, ಜನಪ್ರತಿನಿಧಿಗಳು,ಸಮಾಜಸೇವಕರು,ಗಣ್ಯರು ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ 4 ಗಂಟೆಗೆ ಮೌಲೂದ್ ಪಾರಾಯಣ ಹಾಗೂ ಸರ್ವಧರ್ಮೀಯರಿಗೆ ಅನ್ನದಾನ ಕಾರ್ಯಕ್ರಮ ನೆರವೇರಲಿದ್ದು, ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಉರೂಸ್ ಸಮಾರಂಭ ಯಶಸ್ವಿ ಗೊಳಿಸುವಂತೆ ಮನವಿ ಮಾಡಿದರು. ಈ ಸಂದರ್ಭ ಜಮಾಅತ್ ಉಪಾಧ್ಯಕ್ಷ…

Read More

ಮಡಿಕೇರಿ ಫೆ.10 : ಸಂವಿಧಾನದ 8 ನೇ ಶೆಡ್ಯೂಲ್‌ಗೆ ಕೊಡವ ತಕ್ (ಕೊಡವ ಭಾಷೆ) ನ್ನು ಸೇರಿಸಬೇಕೆಂದು ಒತ್ತಾಯಿಸಿ ಅಂತರರಾಷ್ಟ್ರೀಯ ಮಾತೃಭಾಷಾ ದಿನವಾದ ಫೆ.21 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಯಿoದ 11.30 ರವರೆಗೆ ಸತ್ಯಾಗ್ರಹ ನಡೆಯಲಿದ್ದು, ಅತ್ಯಂತ ಸೂಕ್ಷ್ಮ ಜನಾಂಗವಾಗಿರುವ ಕೊಡವರ ಮಾತೃಭಾಷೆ ಕೊಡವ ತಕ್ ಗೆ ಸಂವಿಧಾನದ ಭದ್ರತೆ ನೀಡಬೇಕೆಂದು ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲಾಗುವುದೆಂದು ತಿಳಿಸಿದ್ದಾರೆ. ಕೊಡವ ಭಾಷೆಯನ್ನು ಅಧಿಕೃತವೆಂದು ಘೋಷಿಸಿ ಕೊಂಕಣಿ ಭಾಷೆಯ ಮಾದರಿಯಲ್ಲಿ ರಾಜ್ಯದ 3ನೇ ಆಡಳಿತ ಭಾಷೆಯನ್ನಾಗಿ ಮಾಡಬೇಕು. ಸಂವಿಧಾನದ 345, 350, 350 ಎ, 350 ಬಿ ವಿಧಿಯಡಿ 1ನೇ ತರಗತಿಯಿಂದಲೇ ಪಠ್ಯಕ್ರಮದಲ್ಲಿ ಕೊಡವ ತಕ್ ನ್ನು ಕಡ್ಡಾಯಗೊಳಿಸಬೇಕು. ವಿಶ್ವಸಂಸ್ಥೆಯ ಅಧಿಕೃತ ಭಾಷೆ ಎಂದು ಘೋಷಿಸಬೇಕು, ಪ್ರಾಚೀನ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯದಲ್ಲಿ ಕೊಡವ ತಕ್ ಅಧ್ಯಯನ ಪೀಠ ಸ್ಥಾಪಿಸಬೇಕು. ರಾಜ್‌ಗೀರ್‌ನ ನಳಂದಾ, ಟೋಕಿಯೊದ…

Read More