ಲೇಖಕ: admin

ಮಡಿಕೇರಿ, NEWS DESK ಮಾ.31:-ರಾಷ್ಟ್ರೀಯ ಹೆದ್ದಾರಿ 275 ರಸ್ತೆ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಪ್ರಾರಂಭವಾಗಿದು,್ದ ಈ ಸಂಬಂಧ ಕುಶಾಲನಗರ ಬಸವನಹಳ್ಳಿ ಸರ್ಕಾರಿ ಮತ್ತು ಖಾಸಗಿ ಸ್ಥಳಗಳಲ್ಲಿರುವ ಮರಗಳನ್ನು ತೆರವುಗೊಳಿಸಲು ವಿಶೇಷ ಭೂ ಸ್ವಾಧೀನಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರ, ರಾಷ್ಟ್ರೀಯ ಹೆದ್ದಾರಿ-275 (ಮೈಸೂರು-ಮಡಿಕೇರಿ ವಿಭಾಗ) ಮೈಸೂರು ಇವರು ಕೋರಿದ್ದಾರೆ. ಕುಶಾಲನಗರ ವಲಯ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ಖಾಸಗಿ ಮತ್ತು ಸರ್ಕಾರಿ ಜಾಗದಲ್ಲಿ ಕಾಮಗಾರಿಗೆ ಅಡಚಣೆಯಾದ 199 ಬೀಟೆ ಮತ್ತು ಇತರೆ ಜಾತಿಯ ಮರಗಳನ್ನು ಕಡಿದು ಸರ್ಕಾರಿ ನಾಟಾ ಸಂಗ್ರಹಾಲಯಕ್ಕೆ ಸಾಗಿಸಲು ಹಾಗೂ ಮೆದು ಜಾತಿಯ ಮರಗಳನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ವಲಯ ಅರಣ್ಯಾಧಿಕಾರಿ, ಕುಶಾಲನಗರ ವಲಯ, ಕುಶಾಲನಗರ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಸೋಮವಾರಪೇಟೆ ಉಪ ವಿಭಾಗ, ಸೋಮವಾರಪೇಟೆ ಇವರು ವರದಿ ಸಲ್ಲಿಸಿದ್ದಾರೆ. ಆದ್ದರಿಂದ, ಸಾರ್ವಜನಿಕರು ಈ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ಏಪ್ರಿಲ್ 15 ರ ಒಳಗಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಡಿಕೇರಿ ವಿಭಾಗ, ಮಡಿಕೇರಿ ಇವರಿಗೆ ಲಿಖಿತ…

Read More

ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಇಂದು ನಿವೃತ್ತರಾದ ಎಎಸ್‌ಐ ಪಿ.ಬಿ.ಸುಂದರೇಶ್ ಮತ್ತು ಎಎಸ್‌ಐ ಕೆ.ಸಿ.ನಾಣಯ್ಯ ಇವರುಗಳನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಎನ್.ಬಿಂದುಮಣಿ ಅವರು ಸನ್ಮಾನಿಸಿದರು.

Read More

ವಿರಾಜಪೇಟೆ, NEWS DESK ಮಾ.31: ವಿರಾಜಪೇಟೆ ಕೊಡವ ಸಮಾಜದ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕೊಡವ ಸಮಾಜದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಲಾವಿದರು ಹಾಗೂ ಬರಹಗಾರರಾದ ಮೊನ್ನಂಡ ಶೋಭಾ ಸುಬ್ಬಯ್ಯ ರವರು ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ ಹೃದಯದ ಒಳಗೆ ಪ್ರೀತಿಯನ್ನು ಇಟ್ಟು ಮುನ್ನಡೆಸುವವಳು ಹೆಣ್ಣು. ಯಾವ ಲಾಭಕ್ಕೂ ಆಕೆ ಆಸೆ ಪಡದೇ ತನ್ನ ಜೀವನವನ್ನು ಸಂಸಾರಕ್ಕಾಗಿ ಮುಡಿಪಾಗಿಡುತ್ತಾಳೆ. ಗಂಡು ಹೆಣ್ಣು ಎಂಬ ಬೇಧವನ್ನು ಮಾಡದೇ ಎಲ್ಲರೂ ಒಂದೇ ಎನ್ನುವ ಮನೋಭಾವನೆಯನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ಹೆಣ್ಣು ಅಬಲೆಯಲ್ಲ ಆಕೆ ಸಬಲೆಯಾಗಿದ್ದಾಳೆ ಎಂದು ಹೇಳಿದರು. ಹೆಣ್ಣಿನ ಬಗೆಗಿನ ಕವನವನ್ನು ಅರ್ಥಪೂರ್ಣವಾಗಿ ರಚಿಸಿ ವಾಚಿಸಿದರು. ಕಾಣತಂಡ ಶೀಲ ರವರು ದಿನದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದ ಅಧ್ಯಕ್ಷೆ ತಾತಂಡ ಜ್ಯೋತಿ ಪ್ರಕಾಶ್ ಮಾತನಾಡಿ ಮಹಿಳೆಯರು ಬುದ್ಧಿವಂತರು ಹಾಗೂ ಜ್ಞಾನವಂತರಾಗಿರುತ್ತಾರೆ. ಮಹಿಳೆಯರು ಮನೆಯಿಂದ ಹೊರಗೆ ಬಂದು ತಮ್ಮ ಜ್ಞಾನವನ್ನು ಪ್ರದರ್ಶಿಸಬೇಕು. ಜೊತೆಗೆ ಯಾವುದೇ ಸನ್ನಿವೇಶದಲ್ಲಿಯೂ…

Read More

ಮಡಿಕೇರಿ, NEWS DESK  ಮಾ.31:-ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಾರ್ಯಾಲಯ ಇವರ ಪರವಾಗಿ, ಜನಗಣತಿ ಕಾಯ್ದೆ-1948 ರ ಪ್ರಕಾರ ಕೊಡಗು ಜಿಲ್ಲೆಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಿ ಗಣತಿ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆಯು ಚಾಲ್ತಿಯಲ್ಲಿ ಇದೆ. ಈ ಪೈಕಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಯಂ ಮನೆಗಣತಿ ಕಾರ್ಯವನ್ನು ಮಾಡಲು ಅವಕಾಶಗಳನ್ನು ನೀಡಲಾಗಿದೆ. ಅದರಂತೆ, ಕಾಯ್ದೆಯ ಪ್ರಕಾರ ತಮ್ಮ ಮಾಹಿತಿ, ಹೆಸರು ಮತ್ತು ಗುರುತುಗಳ ಗೌಪ್ಯವಾಗಿ ಇರಿಸಲಾಗುತ್ತದೆ ಹಾಗೂ ಯಾವುದೇ ತೆರಿಗೆ ಅಥವಾ ಪರಿಶೋಧನಾ ಉದ್ದೇಶಕ್ಕೆ ಸದರಿ ದತ್ತಾಂಶವನ್ನು ಬಳಿಸಿಕೊಳ್ಳುವುದಿಲ್ಲ. ಇದು ಸುರಕ್ಷಿತವಾಗಿ ಇರಿಸಲಾಗುತ್ತದೆ ಎಂದು ಜಿಲ್ಲಾಡಳಿತ ಪ್ರಕಣೆ ತಿಳಿಸಿದೆ. ಈ ನಿಟ್ಟಿನಲ್ಲಿ ಏಪ್ರಿಲ್, 01 ರಿಂದ 15 ರವರೆಗೆ ನಿರ್ದೇಶನಾಲಯದಿಂದ ನೀಡಿರುವ ಸರಳವಾದ ಹಂತಗಳನ್ನು ಅನುಸರಿಸುವುದರ ಮೂಲಕ 15-20 ನಿಮಿಷಗಳಲ್ಲಿ ತಮ್ಮ ಮನೆಯ ಸ್ವಯಂ ಗಣತಿಯನ್ನು ಮಾಡಿಕೊಂಡು ಏಕೀಕೃತ ಸ್ವಯಂ ಗಣತಿ ಗುರುತಿನ ಸಂಖ್ಯೆಯನ್ನು (SELF ENUMERATION ID) ಪಡೆಯಬಹುದಾಗಿರುತ್ತದೆ. ಹಾಗೆಯೇ ಪರಿಶೀಲನೆಗೆ ಬರುವ…

Read More

ಮಡಿಕೇರಿ, NEWS DESK ಮಾ.31 : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೌಂಡೇಶನ್ ವತಿಯಿಂದ ಮಂಗಳವಾರ ತನಲ್ ಕೂರ್ಗ್ ಆಶ್ರಮ, ವಿಕಾಸ ಆಶ್ರಮ ಮತ್ತು ಶಕ್ತಿ ವೃದ್ಧಾಶ್ರಮದಲ್ಲಿ ಜನರಲ್ ತಿಮ್ಮಯ್ಯ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ವೃದ್ಧಾಶ್ರಮದಲ್ಲಿನ ಆಶ್ರಯದಾತರಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ತನಲ್ ಕೂರ್ಗ್ ವೃದ್ಧಾಶ್ರಮಕ್ಕೆ ಶಾಸಕರು ಹಾಗೂ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೌಂಡೇಶನ್‌ನ ಗೌರವ ಅಧ್ಯಕ್ಷರಾದ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ಭೇಟಿ ನೀಡಿ ಹೂ ಗುಚ್ಛ ನೀಡಿ ಗೌರವಿಸಿದರು. ಬಳಿಕ ಮಾತನಾಡಿದ ಶಾಸಕರು ಎಫ್‌ಎಂಸಿ ಮತ್ತು ಜಿಟಿ ಫೌಂಡೇಶನ್ ವತಿಯಿಂದ ಅಸಹಾಯಕರು, ವೃದ್ಧರು, ಶೋಷಿತರು, ನಿರ್ಗತಿಕರಿಗೆ ಕೈಲಾದಷ್ಟು ಸಹಾಯ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು. ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ ಪ್ರಯುಕ್ತ ನಗರದ ವೃದ್ಧಾಶ್ರಮಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇಂದಿನ ಸಮಾಜ ಹಿರಿಯರನ್ನು ಗೌರವಿಸಬೇಕು. ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಇದರಿಂದ ಮಕ್ಕಳಿಗೂ…

Read More

ಮಡಿಕೇರಿ, NEWS DESK ಮಾ.31 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆಯನ್ನು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ದೀಪ ಬೆಳಗಿ, ಜನರಲ್ ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕರು ಜನರಲ್ ಕೋಡಂದೇರ ಸುಬ್ಬಯ್ಯ ತಿಮ್ಮಯ್ಯ ಅವರು ಭಾರತೀಯ ಸೇನಾ ಕ್ಷೇತ್ರದಲ್ಲಿ ಅತ್ಯಂತ ಧೈರ್ಯಶಾಲಿ, ತಂತ್ರಗಾರಿಕೆ ಹಾಗೂ ಚತುರತೆಯ ನಾಯಕರಾಗಿದ್ದರು ಎಂದು ಹೇಳಿದರು. 1957 ರಿಂದ 1961 ರವರೆಗೆ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ಕೆ.ಎಸ್.ತಿಮ್ಮಯ್ಯ ಅವರು ಎರಡನೇ ಮಹಾಯುದ್ಧ ಮತ್ತು 1948 ರ ಕಾಶ್ಮೀರ ಯುದ್ಧದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ತಿಳಿಸಿದರು. ಮಡಿಕೇರಿಯ ಸನ್ನಿಸೈಡ್‌ನಲ್ಲಿ ಜನಿಸಿದ ಇವರು ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯಲ್ಲೂ…

Read More

ಮಡಿಕೇರಿ ಮಾ.31 : ಮಡಿಕೇರಿ ಕೊಡವ ಸಮಾಜದ ವತಿಯಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಶ್ರೀಧರ್, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಎಂ.ಪಿ.ಮುತ್ತಪ್ಪ, ಉಪಾಧ್ಯಕ್ಷರಾದ ದೇವಯ್ಯ, ಮಾಜಿ ಸೈನಿಕರು, ಹಲವು ಗಣ್ಯರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಬ್ಯಾಂಡ್‌ನೊAದಿಗೆ ಗೌರವ ಸಲ್ಲಿಸಲಾಯಿತು. ಕೊಡವ ಸಮಾಜದ ನಿರ್ದೇಶಕರು, ಎನ್.ಸಿ.ಸಿ.ವಿದ್ಯಾರ್ಥಿಗಳು, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಇತರರು…

Read More

ಮಡಿಕೇರಿ, NEWS DESK ಮಾ.31: ನಗರದ ಬಾಲಗೋಕುಲದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹ ಶಾಲಾ ವಿದ್ಯಾರ್ಥಿಗಳಿಗಾಗಿ ಸಂಸ್ಕಾರಯುತ “ಬಾಲ ಗೋಕುಲ ಬೇಸಿಗೆ ಶಿಬಿರ” ವನ್ನು ಹಮ್ಮಿಕೊಳ್ಳಲಾಗಿದೆ. ಈ ಶಿಬಿರವು ಏಪ್ರಿಲ್ 4 ರಿಂದ ಏಪ್ರಿಲ್ 12 ರವರೆಗೆ ನಗರದ ಓಂಕಾರೇಶ್ವರ ದೇವಾಲಯದ ಬಳಿ ಇರುವ ‘ಮಧುಕೃಪ’ ದಲ್ಲಿ ನಡೆಯಲಿದೆ. 5ನೇ ತರಗತಿಯಿಂದ 10ನೇ ತರಗತಿಯವರೆಗಿನ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಈ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದ್ದು, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾದ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಶಿಬಿರದ ಮುಖ್ಯಾಂಶಗಳು: ಶಿಬಿರದಲ್ಲಿ ಮಕ್ಕಳಿಗೆ ಜೀವನ ಶಿಕ್ಷಣ, ನಿತ್ಯ ಶ್ಲೋಕಗಳು ಮತ್ತು ಭಜನೆ, ದೇಶಭಕ್ತಿ ಗೀತೆಗಳು, ಸ್ವಾತಂತ್ರ್ಯ ಹೋರಾಟಗಾರರ ಸ್ಫೂರ್ತಿದಾಯಕ ಕಥೆಗಳು ಹಾಗೂ ಭಗವದ್ಗೀತೆಯ ಶ್ಲೋಕ ಪಠಣವನ್ನು ಕಲಿಸಿಕೊಡಲಾಗುವುದು. ಇದರೊಂದಿಗೆ ಮಕ್ಕಳ ಬೌದ್ಧಿಕ ವಿಕಸನಕ್ಕೆ ಪೂರಕವಾದ ರಾಷ್ಟ್ರೀಯ ಆಟಗಳನ್ನು ಆಡಿಸಲಾಗುವುದು. ಶಿಬಿರದಲ್ಲಿ ಪಾಲ್ಗೊಳ್ಳುವ ಎಲ್ಲಾ ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಗುವುದು. ವಿವರಗಳು: * ಸ್ಥಳ: ಮಧುಕೃಪ, ಓಂಕಾರೇಶ್ವರ ದೇವಾಲಯದ ಬಳಿ, ಮಡಿಕೇರಿ. *…

Read More

ಮಡಿಕೇರಿ, NEWS DESK ಮಾ.೩೧ : ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ಪೊನ್ನತ್ ಮೊಟ್ಟೆಯಲ್ಲಿ ಸರಕಾರಿ ಜಾಗದಲ್ಲಿ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಬಡವರಿಗೆ ನಿವೇಶನದ ಹಕ್ಕು ಪತ್ರ ನೀಡಬೇಕೆಂದು ಬಹುಜನ ಕಾರ್ಮಿಕ ಸಂಘ ಮತ್ತು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಕೊಡಗು ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಹುಜನ ಕಾರ್ಮಿಕ ಸಂಘದ ಚೆಟ್ಟಳ್ಳಿ ವಲಯ ಅಧ್ಯಕ್ಷ ಬಿ.ಎ.ಶೌಕತ್ ಆಲಿ ಹಾಗೂ ಮೇಲುಸ್ತುವಾರಿ ವಿ.ಚಂದ್ರಶೇಖರ್ ಪೊನ್ನತ್ ಮೊಟ್ಟೆಯಲ್ಲಿ ಬಡವರಿಗೆ ನಿವೇಶನ ಹಂಚಿಕೆ ಮಾಡಲೆಂದೇ ೨೦೨೧ ರಲ್ಲಿ ತಾ.ಪಂ ಆಡಳಿತ ೧.೮೦ ಎಕರೆ ಸರಕಾರಿ ಜಾಗವನ್ನು ಕಾಯ್ದಿರಿಸಿದೆ. ಇದೇ ಜಾಗದಲ್ಲಿ ಸುಮಾರು ೨೮ಕ್ಕೂ ಅಧಿಕ ಬಡ ಕುಟುಂಬಗಳು ಗುಡಿಸಲುಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿವೆ. ಕಳೆದ ಹಲವು ವರ್ಷಗಳಿಂದ ನಿವೇಶನದ ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸುತ್ತಾ ಬಂದಿದ್ದರೂ ಇಲ್ಲಿಯವರೆಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ದೊರೆತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಬಡವರು ವಾಸಿಸುತ್ತಿರುವ ಪ್ರದೇಶದಲ್ಲೇ ಕಸ ವಿಲೇವಾರಿ ಘಟಕವನ್ನು ಆರಂಭಿಸಲಾಗಿದೆ. ಆದರೆ ವೈಜ್ಞಾನಿಕ…

Read More

ಮಡಿಕೇರಿ, NEWS DESK ಮಾ.31 : ಮಡಿಕೇರಿ ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ 14 ದೇವಾನು ದೇವತೆಗಳ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವವು ಏ.1 ರಿಂದ 4ರ ವರೆಗೆ ಜರುಗಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಕೆ.ಸುಧೀರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.1 ರಂದು ಸಂಜೆ 6.30 ರಿಂದ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕುನ್ನತ್ತಿಲ್ಲತ್ ಮುರಳಿಕೃಷ್ಣ ನಂಬೂದರಿ ಹಾಗೂ ಪರಿಶಿನಿಕಡವು ಶ್ರೀ ಮುತ್ತಪ್ಪ ಕ್ಷೇತ್ರದ ಆಚಾರಪಟ್ಟ ಮಡೆಯಚ್ಚನ್ ಬ್ಲಾತೂರ್ ಚಂದ್ರನ್ ಮಡೆಯಚ್ಚನ್ ಅವರ ನೇತೃತ್ವದಲ್ಲಿ ನಾಲ್ಕು ದಿನಗಳ ಕಾಲ ವಿವಿಧ ಪೂಜಾ ವಿಧಿವಿಧಾನಗಳು ಜರುಗಲಿದೆ ಎಂದರು. ಏ.1 ರಂದು ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವದ ಅಂಗವಾಗಿ ಸಂಜೆ ಆಚಾರ್ಯವರ್ಣ, ಪ್ರಾರ್ಥನೆ, ಕಲಶÀ ಪೂಜೆ, ಶ್ರೀ ಭಗವತಿ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಏ.2 ರಂದು ಬೆಳಿಗ್ಗೆ 7.00 ಗಂಟೆಗೆ ಗಣಪತಿ ಹೋಮ, 9 ಗಂಟೆಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಅಷ್ಠಾಭಿಷೇಕ, 10…

Read More